Saturday, 18 May 2019

23 ಮೇ 2019

ಬಿಳಿ/  ಗುರು / ಪಾಸ್ಖ ಕಾಲದ ಐದನೇ ವಾರ                 
1ನೇ  ವಾಚನ  -  ಪ್ರೇ.ಕಾ157-21   
7 : ಸುದೀರ್ಘ ಚರ್ಚೆಯಾದ ನಂತರ ಪೇತ್ರನು ಎದ್ದು ನಿಂತು ಹೀಗೆಂದನು: “ಸಹೋದರರೇ, ಅನ್ಯಧರ್ಮೀಯರು ಶುಭಸಂದೇಶವನ್ನು ನನ್ನ ಬಾಯಿಯಿಂದ ಕೇಳಿ ವಿಶ್ವಾಸಿಸಲೆಂದು ದೇವರು ನಿಮ್ಮ ಮಧ್ಯೆಯಿಂದ ನನ್ನನ್ನು ಬಹುದಿನಗಳ ಹಿಂದೆಯೇ ಆರಿಸಿಕೊಂಡರು. ಇದು ನಿಮಗೆ ತಿಳಿದ ವಿಷಯ.
8 : ಮಾನವನ ಅಂತರಂಗವನ್ನು ಅರಿತ ದೇವರು ನಿಮಗೆ ಕೊಟ್ಟಂತೆಯೇ ಅವರಿಗೂ ಪವಿತ್ರಾತ್ಮ ಅವರನ್ನು ಕೊಟ್ಟರು. ಅವರೂ ತಮ್ಮವರೇ ಎಂದು ವ್ಯಕ್ತಪಡಿಸಿದರು.
9 : ಅವರಿಗೂ ನಮಗೂ ಯಾವ ಭೇದಭಾವವನ್ನು ತೋರಿಸದೆ ವಿಶ್ವಾಸದ ನಿಮಿತ್ತ ದೇವರು ಅವರ ಪಾಪಗಳನ್ನು ಕ್ಷಮಿಸಿದರು.
10 : ಆದುದರಿಂದ ನಮ್ಮ ಪೂರ್ವಜರಿಂದಾಗಲೀ ನಮ್ಮಿಂದಾಗಲೀ ಹೊರಲಾಗದಂಥ ಹೊರೆಯನ್ನು ಅನುಯಾಯಿಗಳ ಮೇಲೆ ಏಕೆ ಹೊರಿಸುತ್ತೀರಿ? ಹೀಗೆ ದೇವರನ್ನೇಕೆ ಕೆಣಕುತ್ತೀರಿ?
11 : ಇಲ್ಲ, ಇದು ಸರಿಯಲ್ಲ. ನಮಗೇ ಆಗಲಿ, ಅವರಿಗೇ ಆಗಲಿ, ಜೀವೋದ್ಧಾರ ದೊರಕುವುದು ಪ್ರಭು ಯೇಸುವಿನ ಅನುಗ್ರಹದಿಂದಲೇ. ಇದೇ ನಮ್ಮ ವಿಶ್ವಾಸ.”
12 : ಇದನ್ನು ಕೇಳಿದ್ದೇ, ಸಭೆ ಸೇರಿದ್ದವರೆಲ್ಲರೂ ಮೌನರಾದರು. ಪೌಲ ಮತ್ತು ಬಾರ್ನಬರಿಗೆ ಕಿವಿಗೊಟ್ಟರು. ದೇವರು ಅವರ ಮುಖಾಂತರ ಅನ್ಯಧರ್ಮೀಯರ ಮಧ್ಯೆ ಎಸಗಿದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಕುರಿತು ಕೇಳಿದರು.
13 : ಇದಾದ ಮೇಲೆ ಯಕೋಬನು ಎದ್ದು ಹೀಗೆಂದನು: “ಸಹೋದರರೇ ಕೇಳಿ,
14 : ದೇವರು ಮೊದಲೇ ಅನ್ಯಧರ್ಮೀಯರಲ್ಲಿ ಆಸಕ್ತಿಗೊಂಡು ಅವರಿಂದಲೂ ಸ್ವಂತ ಪ್ರಜೆಯನ್ನು ಆರಿಸಿಕೊಂಡಿದ್ದಾರೆ, ಎಂಬ ವಿಷಯವನ್ನು ಸಿಮೋನನು ಈಗ ತಾನೇ ವಿವರಿಸಿದ್ದಾನೆ.
15 : ಇದಕ್ಕೂ ಪ್ರವಾದಿಗಳ ಪ್ರವಚನಗಳಿಗೂ ಪೂರ್ಣಸಾಮರಸ್ಯವಿದೆ.
16 : ‘ಅಳಿದುಹೋದ ದಾವೀದನ ಮನೆತನವನು ಪುನರ್ಸ್ಥಾಪಿಸಲು ಮರಳಿ ಬರುವೆನು ಪಾಳುಬಿದ್ದುದನು ಜೀರ್ಣೋದ್ಧಾರ ಗೊಳಿಸುವೆನು ಸುಭದ್ರವಾಗಿ ನಿಲ್ಲಿಸುವೆನು ಅದನ್ನು
17 : ನನ್ನವರೆಂದು ನಾನು ಕರೆದ ಎಲ್ಲ ಅನ್ಯಧರ್ಮೀಯರು ಉಳಿದೆಲ್ಲ ಮಾನವರು ನನ್ನತ್ತ ಬರಲಿಹರು
18 : ಎಂಬೀ ಸರ್ವೇಶ್ವರನ ನುಡಿ ಎಂದಿನಿಂದಲೋ ತಿಳಿದಿಹುದು.’
19 : “ಆದುದರಿಂದ ನನ್ನ ತೀರ್ಮಾನವೇನೆಂದರೆ: ದೇವರ ಕಡೆಗೆ ತಿರುಗುತ್ತಿರುವ ಅನ್ಯಧರ್ಮೀಯರನ್ನು ತೊಂದರೆಗೆ ಈಡುಮಾಡಬಾರದು.
20 : ಅದಕ್ಕೆ ಬದಲಾಗಿ ನಾವು ಅವರಿಗೆ ಪತ್ರ ಬರೆದು, ‘ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು; ಅದನ್ನು ಸೇವಿಸಬಾರದು; ಅನೈತಿಕತೆಯಿಂದ ದೂರವಿರಬೇಕು; ರಕ್ತವನ್ನಾಗಲಿ, ಕುತ್ತಿಗೆ ಹಿಸುಕಿದ ಪ್ರಾಣಿಗಳನ್ನಾಗಲಿ ತಿನ್ನಬಾರದು,’ ಎಂದು ತಿಳುವಳಿಕೆ ಕೊಡಬೇಕು.
21 : ಏಕೆಂದರೆ ಪುರಾತನ ಕಾಲಂದಿದಲೂ ಪ್ರತಿಯೊಂದು ಸಬ್ಬತ್ದಿನ ಮೋಶೆಯ ಧರ್ಮಶಾಸ್ತ್ರವನ್ನು ಪ್ರಾರ್ಥನಾ ಮಂದಿರಗಳಲ್ಲಿ ಓದಲಾಗುತ್ತಿದೆ ಮತ್ತು ಆತನ ಬೋಧನೆಯನ್ನು ಪ್ರತಿ ನಗರದಲ್ಲೂ ಸಾರಲಾಗುತ್ತಿದೆ,” ಎಂದನು.  
ಕೀರ್ತನೆ  -  961-31೦
 ಪ್ರಸಿದ್ಧಪಡಿಸಿರಿ ಆತನ ಘನತೆಯನು ರಾಷ್ಟ್ರಗಳಿಗೆ | ಆತನದ್ಭುತ ಕಾರ್ಯಗಳನು ಸಕಲ ಜನಾಂಗಗಳಿಗೆ ||
1 : ಹೊಸಗೀತೆಯನು ಹಾಡಿರಿ ಪ್ರಭುವಿಗೆ / ವಿಶ್ವವೆಲ್ಲವು ಹಾಡಲಿ ಆತನಿಗೆ //
2 : ಪ್ರಭುವಿಗೆ ಹಾಡಿರಿ, ಆತನ ನಾಮವನು ಕೊಂಡಾಡಿರಿ / ಆತನ ಮುಕ್ತಿಮಾರ್ಗವನು ಪ್ರತಿನಿತ್ಯವೂ ಸಾರಿರಿ //
3 : ಪ್ರಸಿದ್ಧಪಡಿಸಿರಿ ಆತನ ಘನತೆಯನು ರಾಷ್ಟ್ರಗಳಿಗೆ | ಆತನದ್ಭುತ ಕಾರ್ಯಗಳನು ಸಕಲ ಜನಾಂಗಗಳಿಗೆ ||
10 : ಪ್ರಭು ರಾಜನೆಂದು ಸಾರಿರಿ ರಾಷ್ಟ್ರಗಳಿಗೆ | ಕದಲದ ಸ್ಥಿರತೆಯನು ಇತ್ತಿಹನು ಧರೆಗೆ | ನ್ಯಾಯವಾದ ತೀರ್ಪು ಕೊಡುವನು ಜನಾಂಗಕೆ ||
                       
ಶುಭಸಂದೇಶ - ಯೊವಾನ್ನ 15: 9-11 
9 : ಪಿತನು ನನ್ನನ್ನು ಪ್ರೀತಿಸಿದಂತೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ನನ್ನ ಪ್ರೀತಿಯಲ್ಲಿ ನೆಲೆಗೊಂಡು ನಿಲ್ಲಿರಿ.
10 : ನನ್ನ ಪಿತನು ಕೊಟ್ಟ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನಾನು ನೆಲೆಗೊಂಡಿರುವ ಹಾಗೆ ನೀವು ಕೂಡ ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.
11 : “ನನ್ನಲ್ಲಿರುವ ಆನಂದವು ನಿಮ್ಮಲ್ಲಿ ಇರಬೇಕೆಂತಲೂ ನಿಮ್ಮ ಆನಂದವು ತುಂಬಿ ತುಳುಕಬೇಕೆಂತಲೂ ಇದನ್ನೆಲ್ಲಾ ನಿಮಗೆ ಹೇಳುತ್ತಿದ್ದೇನೆ.
ಚಿಂತನೆ    
ಒಬ್ಬ ವ್ಯಕ್ತಿ ಇಷ್ಟವಾಗಿ ಬಿಟ್ಟರೆ ಅವರು ಹೇಳಿದ ಎಲ್ಲಾ ಕೆಲಸವನ್ನು £ÁªÀÅ ಚಾಚೂತಪ್ಪದೆ ಮಾಡುತ್ತೇವೆ ಅದು ಎಷ್ಟೇ ಕಷ್ಟವಿರಲಿ. ಇಷ್ಟವಾಗುವ ಬೆಟ್ಟವನ್ನು ಬೇಕಾದರೂ ತಂದು ಇಡುತ್ತೇವೆ. ಯೇಸುಸ್ವಾಮಿ ಇಂದು ಶಿಷ್ಯರಿಗೆ ಇಂಥದ್ದೇ ಒಂದು ಕಾರ್ಯವನ್ನು ಒಪ್ಪಿಸುತ್ತಾರೆ. ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿ ಅದನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ ಎಂದು. ನೆಲೆಗೊಳ್ಳುವುದು ಸುಲಭ ಆದರೆ ಅವರು ಕೊಟ್ಟ ಆಜ್ಞೆ ಪಾಲಿಸುವುದು ಕಷ್ಟಸಾಧ್ಯವೇ ಸರಿ. ಆಜ್ಞೆ - ದೈವ ಪ್ರೀತಿ ಮತ್ತು ಪರ ಪ್ರೀತಿ. ದೈವ ಪ್ರೀತಿ ಏನೋ ಸುಲಭವೆನಿಸಬಹುದು ಆದರೆ ಪರ ಪ್ರೀತಿ? ಪರ ಪ್ರೀತಿ ಕೊಂಚ ಅರಗಿಸಿಕೊಳ್ಳದ ವಿಷಯ. ಆದರೆ ಯೇಸು ಸ್ವಾಮಿಯ ಮೇಲಿರುವ ಪ್ರೀತಿ ಇದೆಲ್ಲವನ್ನು ಮೀರಿಸಬೇಕು ಅವರ ಪ್ರೀತಿ ನಮ್ಮಲ್ಲಿ ಪುಟ್ಟಿದರೆ, ಪರ ಪ್ರೀತಿಯು ಪುಟಿಯುತ್ತದೆ. ನಮ್ಮಜೀವನದಲ್ಲಿ ಪರ ಪ್ರೀತಿ ಮತ್ತು  ದೈವ  ಪ್ರೀತಿ ಎರಡು ಸಮತೋಲನವಾಗಿ ಪುಟ್ಟಿದರೆ ಕ್ರಿಸ್ತನ ಆನಂದವೂ ನಮ್ಮಲ್ಲಿ ತುಂಬಿ ತುಳುಕುತ್ತದೆ.                            
ಆತ್ಮಾವಲೋಕನ-
1. ಯೇಸು ಸ್ವಾಮಿಯನ್ನು ನಾವು ಇಷ್ಟಪಟ್ಟು ಪ್ರೀತಿಸುತ್ತಿದ್ದೇವೆಯೇ?                              
2. ಪರ ಪ್ರೀತಿಯು ದೈವ ಪ್ರೀತಿಯಿಂದ ಹೊರಹೊಮ್ಮಬೇಕು. ಇದು ನಿಜವೇ?       
- ಸಹೋ ವಿನಯ್ ಕುಮಾರ್      

No comments:

Post a Comment