ಹಸಿರು/ ಗುರು/ ಸಾಧಾರಣ ಕಾಲದ ಹದಿಮೂರನೇ ವಾರ
1ನೇ ವಾಚನ - ಆದಿ 22: 1-9
ಕೀರ್ತನೆ - 116: 1-2, 3-4, 5-6, 8-9
ಶುಭಸಂದೇಶ - ಮತ್ತಾಯ 9: 1-8
ಐಚ್ಛಿಕ ಸ್ಮರಣೆ - ಪೋರ್ಚುಗಲಿನ ಸಂತ ಎಲಿಜಬೆತ್
1 : ಈ ಘಟನೆಗಳಾದ ಬಳಿಕ ದೇವರು ಅಬ್ರಹಾಮನನ್ನು ಪರೀಕ್ಷಿಸುವುದಕ್ಕೋಸ್ಕರ, “ಅಬ್ರಹಾಮನೇ,” ಎಂದು ಕರೆದರು. ಅವನು “ಇಗೋ, ಸಿದ್ಧನಿದ್ದೇನೆ” ಎಂದನು.
2 : ಆಗ ದೇವರು, “ನಿನಗೆ ಒಬ್ಬನೇ ಒಬ್ಬನೂ ಮುದ್ದು ಮಗನೂ ಆದ ಇಸಾಕನನ್ನು ಕರೆದುಕೊಂಡು ಮೊರೀಯ ಪ್ರಾಂತಕ್ಕೆ ಹೋಗು. ಅಲ್ಲಿ ನಾನು ತೋರಿಸುವ ಬೆಟ್ಟದ ಮೇಲೆ ಅವನನ್ನು ದಹನ ಬಲಿಯಾಗಿ ಅರ್ಪಿಸು” ಎಂದರು.
3 : ಅಬ್ರಹಾಮನು ಮುಂಜಾನೆಯೇ ಎದ್ದು ತನ್ನ ಹೇಸರಗತ್ತೆಗೆ ತಡಿಹಾಕಿಸಿ ಹೋಮಬಲಿಗೆ ಬೇಕಾದ ಕಟ್ಟಿಗೆಯನ್ನು ಸಿಗಿದು ಸಿದ್ಧಮಾಡಿಕೊಂಡು ಸೇವಕರಿಬ್ಬರನ್ನು ಹಾಗೂ ತನ್ನ ಮಗ ಇಸಾಕನನ್ನು ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.
4 : ಮೂರನೆಯ ದಿನ ಅಬ್ರಹಾಮನು ಕಣ್ಣೆತ್ತಿ ನೋಡಿದಾಗ ದೂರದಲ್ಲಿ ಆ ಸ್ಥಳ ಕಾಣಿಸಿತು.
5 : ಅವನು ತನ್ನ ಸೇವಕರಿಗೆ, “ನೀವು ಇಲ್ಲೇ ಕತ್ತೆಯನ್ನು ನೋಡಿಕೊಂಡಿರಿ; ನಾನೂ ನನ್ನ ಮಗನೂ ಅಲ್ಲಿಗೆ ಹೋಗಿ ದೇವಾರಾಧನೆ ಮಾಡಿಕೊಂಡು ಪುನಃ ಇಲ್ಲಿಗೆ ಬರುತ್ತೇವೆ,” ಎಂದು ಹೇಳಿದನು.
6 : ಅಬ್ರಹಾಮನು ದಹನಬಲಿಗೆ ಬೇಕಾದ ಕಟ್ಟಿಗೆಯನ್ನು ತನ್ನ ಮಗ ಇಸಾಕನ ಮೇಲೆ ಹೊರಿಸಿದನು; ಬೆಂಕಿಯನ್ನು ಹಾಗೂ ಕತ್ತಿಯನ್ನು ತನ್ನ ಕೈಯಲ್ಲೇ ತೆಗೆದುಕೊಂಡನು. ಇಬ್ಬರೂ ಅಲ್ಲಿಂದ ಮುಂದಕ್ಕೆ ಹೊರಟರು.
7 : ಹೋಗುತ್ತಾ ಇದ್ದಾಗ ಇಸಾಕನು ತಂದೆ ಅಬ್ರಹಾಮನನ್ನು, “ಅಪ್ಪಾ” ಎಂದು ಕರೆದ; “ಏನು ಮಗನೇ?” ಎಂದ ಅಬ್ರಹಾಮ. ಇಸಾಕನು, “ಬೆಂಕಿ-ಕಟ್ಟಿಗೆಯೇನೋ ಇವೆ; ಆದರೆ ದಹನಬಲಿಗೆ ಬೇಕಾದ ಕುರಿಮರಿ ಎಲ್ಲಿ?” ಎಂದು ಕೇಳಿದ.
8 : ಅದಕ್ಕೆ ಅಬ್ರಹಾಮನು, “ಬಲಿಗೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುತ್ತಾರೆ, ಮಗನೇ,” ಎಂದು ಉತ್ತರಕೊಟ್ಟ. ಅವರಿಬ್ಬರೂ ಹಾಗೇ ಮುಂದಕ್ಕೆ ಸಾಗಿದರು.
9 : ದೇವರು ಹೇಳಿದ ಸ್ಥಳಕ್ಕೆ ಬಂದು ಸೇರಿದಾಗ ಅಬ್ರಹಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿದ. ಕಟ್ಟಿಗೆಯನ್ನು ಅದರ ಮೇಲೆ ಒಟ್ಟಿ, ಮಗ ಇಸಾಕನ ಕೈಕಾಲುಗಳನ್ನು ಬಿಗಿದು, ಕಟ್ಟಿಗೆಗಳ ಮೇಲೆ ಅವನನ್ನು ಕೆಡವಿದ.
10 : ಬಳಿಕ ಮಗನನ್ನು ವಧಿಸಲು ಕೈಚಾಚಿ ಕತ್ತಿಯನ್ನು ಎತ್ತಿದ.
11 : ಆದರೆ ಸರ್ವೇಶ್ವರನ ದೂತನು ಆಕಾಶದಿಂದ, “ಅಬ್ರಹಾಮನೇ, ಹೇ ಅಬ್ರಹಾಮನೇ” ಎಂದು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ ಸಿದ್ಧನಿದ್ದೇನೆ” ಎಂದ.
12 : ದೂತನು ಅವನಿಗೆ, “ಹುಡುಗನ ಮೇಲೆ ಕೈಯೆತ್ತಬೇಡ; ಅವನಿಗೆ ಯಾವ ಹಾನಿಯನ್ನೂ ಮಾಡಬೇಡ; ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಬಲಿಕೊಡಲು ಹಿಂತೆಗೆಯಲಿಲ್ಲ; ಎಂತಲೇ, ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ನನಗೆ ಚೆನ್ನಾಗಿ ಗೊತ್ತಾಯಿತು,” ಎಂದು ಹೇಳಿದನು.
13 : ಅಬ್ರಹಾಮನು ಕಣ್ಣೆತ್ತಿನೋಡಿದ. ತನ್ನ ಹಿಂದುಗಡೆ ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿಕೊಂಡಿತ್ತು. ಅವನು ಹೋಗಿ ಅದನ್ನು ಹಿಡಿದು ತಂದು ತನ್ನ ಮಗನಿಗೆ ಬದಲಾಗಿ ಅದನ್ನು ದಹನಬಲಿಯನ್ನಾಗಿ ಅರ್ಪಿಸಿದ.
14 : ಆ ಸ್ಥಳಕ್ಕೆ “ಯೆಹೋವ ಯಿರೆ” ಎಂದು ಹೆಸರಿಟ್ಟ.
15 : “ಬೆಟ್ಟದ ಮೇಲೆ ಸರ್ವೇಶ್ವರಸ್ವಾಮಿಯೇ ಒದಗಿಸುತ್ತಾರೆ” ಎಂಬ ಹೇಳಿಕೆ ಇಂದಿಗೂ ರೂಢಿಯಲ್ಲಿದೆ. ಸರ್ವೇಶ್ವರಸ್ವಾಮಿಯ ದೂತನು ಆಕಾಶದಿಂದ ಮತ್ತೊಮ್ಮೆ ಅಬ್ರಹಾಮನನ್ನು ಕರೆದು,
16 : “ಸರ್ವೇಶ್ವರನ ವಾಕ್ಯವನ್ನು ಕೇಳು: ನೀನು ನಿನ್ನ ಒಬ್ಬನೇ ಮಗನನ್ನು ಬಲಿಕೊಡಲು ಹಿಂತೆಗೆಯದೆ ಹೋದುದರಿಂದ ನಾನು ನಿನ್ನನ್ನು ತಪ್ಪದೆ ಆಶೀರ್ವದಿಸುತ್ತೇನೆ;
17 : ನಿನ್ನ ಸಂತತಿಯನ್ನು ಹೆಚ್ಚಿಸಿಯೇ ಹೆಚ್ಚಿಸುತ್ತೇನೆ; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದ ಮರಳಿನಂತೆಯೂ ಅಸಂಖ್ಯವಾಗಿ ಮಾಡುತ್ತೇನೆ. ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನ ಪಡಿಸಿಕೊಳ್ಳುವರು.
18 : ನೀನು ನನ್ನ ಮಾತನ್ನು ಕೇಳಿದ್ದರಿಂದ ವಿಶ್ವದ ಎಲ್ಲ ರಾಷ್ಟ್ರಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಸರ್ವೇಶ್ವರನೇ ಆಣೆಯಿಟ್ಟು ಹೇಳಿದ್ದಾರೆ,” ಎಂದನು.
19 : ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಮರಳಿ ಬಂದನು. ಅವರೆಲ್ಲರೂ ಜೊತೆಯಾಗಿ ಬೇರ್ಷೆಬಕ್ಕೆ ಹೋದರು. ಅಲ್ಲೇ ಅಬ್ರಹಾಮನು ವಾಸಮಾಡುತ್ತಿದ್ದನು.

1 : ನಮಗಲ್ಲ ಹೇ ಪ್ರಭು. ನಮಗಲ್ಲ ಮಹಿಮೆ / ನಿನ್ನ ನಾಮಕೇ ಸಲ್ಲಲಿ ಆ ಮಹಿಮೆ / ನಿನ್ನ ನೀತಿ ಸತ್ಯತೆಗಳ ನಿಮಿತ್ತವೆ //
2 : ಅನ್ಯ ಜನರು ನುಡಿಯುವುದೆಂತು: / “ಅವರ ದೇವರೆಲ್ಲಿ?” ಎಂದು //
3 : ಪರದಲ್ಲಿಹನು ನಮ್ಮ ದೇವನು / ಗೈವನು ತನಗಿಷ್ಟ ಬಂದುದನು //
4 : ಅವರ ವಿಗ್ರಹ ಬರೀ ಬೆಳ್ಳಿ ಬಂಗಾರ / ಅವು ಮಾನವನ ಕೈ ಕೆಲಸಗಳು ಮಾತ್ರ //
5 : ಬಾಯಿದ್ದರೂ ಅವು ಮಾತಾಡುವುದಿಲ್ಲ / ಕಣ್ಣುಗಳಿದ್ದರೂ ಅವು ಕಾಣುವುದಿಲ್ಲ //
6 : ಕಿವಿಯಿದ್ದರೂ ಅವು ಕೇಳುವುದಿಲ್ಲ / ಮೂಗಿದ್ದರೂ ಅವು ಮೂಸುವುದಿಲ್ಲ / ಗಂಟಲೊಳು ಅವಕೆ ಶಬ್ದವೇ ಇಲ್ಲ //
7 : ಕೈಯಿದ್ದರೂ ಅವು ಮುಟ್ಟುವುದಿಲ್ಲ / ಕಾಲಿದ್ದರೂ ಅವು ನಡೆಯುವುದಿಲ್ಲ //
8 : ಅವುಗಳಂತಾಗುವರು ಅವುಗಳನು ಮಾಡುವವರು / ಅವುಗಳಂತಾಗುವರು ಅವುಗಳನು ನಂಬುವವರು //
9 : ಪ್ರಭುವಿನಲ್ಲಿದೆ ಭರವಸೆ ಇಸ್ರಯೇಲ್ ಜನರಿಗೆ / ಆತನೇ ಸಹಾಯಕ, ರಕ್ಷಾಕವಚ ಅವರಿಗೆ //
ಶುಭಸಂದೇಶ - ಮತ್ತಾಯ 9: 1-8
1 : ಯೇಸುಸ್ವಾಮಿ ದೋಣಿ ಹತ್ತಿ ಮರಳಿ ಸರೋವರವನ್ನು ದಾಟಿ ತಮ್ಮ ಸ್ವಂತ ಊರಿಗೆ ಬಂದರು.
2 : ಆಗ ಜನರು ಒಬ್ಬ ಪಾಶ್ರ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅವರ ಬಳಿಗೆ ತಂದರು. ಯೇಸು ಅವರ ವಿಶ್ವಾಸವನ್ನು ಮೆಚ್ಚಿ, ಆ ಪಾಶ್ರ್ವವಾಯು ರೋಗಿಗೆ, "ಮಗು ಧೈರ್ಯದಿಂದಿರು. ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ," ಎಂದರು
3 : ಆಗ ಅಲ್ಲಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, "ಇವನು ದೇವದೂಷಣೆ ಮಾಡುತ್ತಿದ್ದಾನೆ," ಎಂದುಕೊಂಡರು.
4 : ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು, "ನೀವು ಮನಸ್ಸಿನಲ್ಲೇಕೆ ದುರಾಲೋಚನೆ ಮಾಡುತ್ತಿದ್ದೀರಿ?
5 : "ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ" ಎನ್ನುವುದು ಸುಲಭವೋ ಅಥವಾ ‘ಎದ್ದು ನಡೆ’ ಎನ್ನುವುದು ಸುಲಭವೋ?
6 : ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರ ಉಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು," ಎಂದು ಹೇಳಿ, ಆ ಪಾಶ್ರ್ವವಾಯು ರೋಗಿಯನ್ನು ನೋಡಿ, "ಎದ್ದೇಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು" ಎಂದರು.
7 : ಅದರಂತೆಯೇ, ಆ ರೋಗಿ ಎದ್ದು ಮನೆಗೆ ಹೊರಟುಹೋದನು.
8 : ಇದನ್ನು ಕಂಡ ಜನರು ತಲ್ಲಣಗೊಂಡರು. ಮಾನವನಿಗೆ ಇಂಥ ಅಧಿಕಾರ ಕೊಟ್ಟ ದೇವರನ್ನು ಕೊಂಡಾಡಿದರು.
ಚಿಂತನೆ
ಚಿಂತನೆ
ಅಬ್ರಹಾಮನ್ನ ವಿಶ್ವಾಸದ ಪರೀಕ್ಷೆಯ ಘಟನೆಯನ್ನು ಇಂದಿನ ಮೊದಲನೇಯ ವಾಚನದಲ್ಲಿ ವಿವರಿಸಲಾಗಿದೆ. ಅಬ್ರಹಾಮನಿಗಿದ್ದ ಒಬ್ಬನೇ ಮಗನನ್ನು 'ಬಲಿಕೊಡು' ಎಂದು ದೇವರು ಕೇಳಿದಾಗ ಅಬ್ರಹಾಮನು ಹಿಂದು ಮುಂದು ಯೋಚಿಸದೆ ತನ್ನ ಸ್ವಂತ ಮಗನನ್ನೇ ಬಲಿಕೊಡಲು ಸಿದ್ಧನಾಗುತ್ತಾನೆ. ವಿಶ್ವಾಸ ಪರೀಕ್ಷೆಯಲ್ಲಿ ಗೆದ್ದು ದೇವರ ಕೃಪಾವರಗಳಿಗೆ ಪಾತ್ರನಾಗುತ್ತಾನೆ. ಜನರ ವಿಶ್ವಾಸದಿಂದ ಪಾಶ್ರ್ವವಾಯು ರೋಗಿಯು ಗುಣಹೊಂದುವುದನ್ನು ಶುಭಸಂದೇಶದ ವಾಚನದಲ್ಲಿ ಕಾಣುತ್ತೇವೆ. ದೇವರಲ್ಲಿ ನಮ್ಮ ವಿಶ್ವಾಸವು ಬಲಗೊಳ್ಳಲ್ಲಿ ಎಂದು ಪ್ರಾರ್ಥಿಸಿಕೊಳೋಣ.
No comments:
Post a Comment