Sunday, 9 June 2019

11 ಜೂನ್ 2019

 ಕೆಂಪು/  ಮಂಗಳ/ ಸಂತಬಾರ್ನಬ ಪ್ರೇಷಿತ (ಹಬ್ಬ)               
1ವಾಚನ: ಪ್ರೇ.ಕಾ: 11: 21-26, 13: 1-3   
ಕೀರ್ತನೆ  -  981-6              

ಶುಭಸಂದೇಶ - ಮತ್ತಾಯ 1೦: 7-13      
1 : ಪ್ರಭುವಿನ ಶಕ್ತಿ ಅವರೊಡನೆ ಇತ್ತು. ಜನರು ಬಹುಸಂಖ್ಯೆಯಲ್ಲಿ ಪ್ರಭುವಿನಲ್ಲಿ ವಿಶ್ವಾಸವಿಟ್ಟು ಅವರ ಭಕ್ತರಾದರು.
22 : ಈ ಸಮಾಚಾರ ಜೆರುಸಲೇಮಿನ ಧರ್ಮಸಭೆಗೆ ತಲುಪಿತು. ಬಾರ್ನಬನನ್ನು ಅಂತಿಯೋಕ್ಯಕ್ಕೆ ಅವರು ಕಳುಹಿಸಿದರು.
23 : ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.
24 : ಬಾರ್ನಬನು ಸತ್ಪುರುಷನು, ಪವಿತ್ರಾತ್ಮಭರಿತನು ಹಾಗೂ ಅಗಾಧ ವಿಶ್ವಾಸವುಳ್ಳವನು. ಅನೇಕ ಜನರು ಪ್ರಭುವಿನ ಅನುಯಾಯಿಗಳಾದರು.
25 : ಅನಂತರ ಬಾರ್ನಬನು ಸೌಲನನ್ನು ಹುಡುಕಿಕೊಂಡು ತಾರ್ಸಕ್ಕೆ ಹೋದನು.
26 : ಅವನನ್ನು ಅಲ್ಲಿ ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅವರಿಬ್ಬರೂ ಬಂದು ವರ್ಷವಿಡೀ ಧರ್ಮಸಭೆಯೊಂದಿಗೆ ಇದ್ದು ಬಹುಜನರಿಗೆ ಉಪದೇಶ ಮಾಡಿದರು. ಭಕ್ತಾದಿಗಳನ್ನು ಮೊದಲಬಾರಿಗೆ ‘ಕ್ರೈಸ್ತರು’ ಎಂದು ಕರೆದದ್ದು-ಅಂತಿಯೋಕ್ಯದಲ್ಲೇ.

ಕೀರ್ತನೆ  -  98:  1-6       
1 : ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು / ಎಸಗಿಹನಾತನು ಪವಾಡಕಾರ್ಯಗಳನು / ಗಳಿಸಿತಾತನ ಕೈ ಪೂತಭುಜ ಗೆಲುವನು //
2 : ಪ್ರಕಟಿಸಿಹನಾ ಪ್ರಭು ತನ್ನ ಮುಕ್ತಿವಿಧಾನವನು / ರಾಷ್ಟ್ರಗಳಿಗೆ ತೋರಿಸಿಹನು ಜೀವೋದ್ಧಾರಕಾ ಶಕ್ತಿಯನು //
3 : ಕಂಡು ಬಂದಿತು ಜಗದ ಎಲ್ಲೆಎಲ್ಲೆಗೆ / ನಮ್ಮ ದೇವ ಸಾಧಿಸಿದ ಜಯಗಳಿಕೆ // ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು / ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು //
4 : ಭೂನಿವಾಸಿಗಳೇ, ಮಾಡಿರಿ ಜಯಕಾರ ಪ್ರಭುವಿಗೆ / ಮುದದಿ ಹಾಡಿರಿ, ಮಾಡಿರಿ ಸುಮಧುರ ಭಜನೆ //
5 : ಪ್ರಭುವನು ಸ್ತುತಿಸಿರಿ ಕಿನ್ನರಿಯೊಂದಿಗೆ / ಭಜಿಸಿರಿ ಆತನನು ವಾದ್ಯಮೇಳದೊಂದಿಗೆ //
6 : ಊದಿರಿ ಕೊಂಬನು, ತುತೂರಿಯನು / ಉದ್ಘೋಷಿಸಿರಿ ಪ್ರಭು ರಾಜನನು //
ಶುಭಸಂದೇಶ - ಮತ್ತಾಯ 1೦7-13     
7 : ಹೋಗುತ್ತಾ, ‘ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ’ ಎಂದು ಬೋಧನೆ ಮಾಡಿರಿ.
8 : ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ, ಕುಷ್ಠರೋಗಿಗಳನ್ನು ಸ್ವಸ್ಥಮಾಡಿರಿ, ದೆವ್ವಗಳನ್ನು ಬಿಡಿಸಿರಿ. ಉಚಿತವಾಗಿ ಪಡೆದಿರುವಿರಿ, ಉಚಿತವಾಗಿ ಕೊಡಿ.
9 : ಜೇಬಿನಲ್ಲಿ ಚಿನ್ನ, ಬೆಳ್ಳಿ, ತಾಮ್ರವನ್ನಾಗಲಿ,
10 : ಪ್ರಯಾಣಕ್ಕೆಂದು ಜೋಳಿಗೆಯನ್ನಾಗಲಿ, ಎರಡು ಅಂಗಿಗಳನ್ನಾಗಲಿ, ಕಾಲಿಗೆ ಕೆರವನ್ನಾಗಲಿ, ಕೈಗೆ ದಂಡವನ್ನಾಗಲಿ ತೆಗೆದುಕೊಳ್ಳಬೇಡಿ. ಏಕೆಂದರೆ, ದುಡಿಮೆಗಾರನು ಜೀವನಾಧಾರಕ್ಕೆ ಬಾಧ್ಯನು.
11 : "ನೀವು ಒಂದು ಪಟ್ಟಣಕ್ಕಾಗಲಿ, ಹಳ್ಳಿಗಾಗಲಿ ಹೋದಾಗ, ಅಲ್ಲಿ ನಿಮ್ಮನ್ನು ಬರಮಾಡಿಕೊಳ್ಳಲು ಯೋಗ್ಯನು ಯಾರೆಂದು ಕಂಡುಹಿಡಿಯಿರಿ. ಅಲ್ಲಿಂದ ಮುಂದಕ್ಕೆ ಸಾಗುವವರೆಗೂ ಅವನಲ್ಲೇ ತಂಗಿರಿ.
12 : ನೀವು ಒಂದು ಮನೆಗೆ ಹೋದಾಗ, "ಈ ಮನೆಗೆ ಶುಭವಾಗಲಿ!" ಎಂದು ಹರಸಿರಿ.

13 : ಆ ಮನೆಯವರು ನಿಮ್ಮನ್ನು ಸ್ವಾಗತಿಸಿದರೆ, ನಿಮ್ಮ ಆಶೀರ್ವಾದ ಅವರ ಮೇಲೆ ನೆಲಸಲಿ. ನಿಮ್ಮನ್ನು ಸ್ವಾಗತಿಸದೆ ಹೋದರೆ, ನಿಮ್ಮ ಆಶೀರ್ವಾದ ನಿಮಗೇ ಹಿಂದಿರುಗಲಿ.
ಚಿಂತನೆ
ಇಂದು ನಾವು ಸಂತ ಬಾರ್ನಬರವರನ್ನು (ಪ್ರೇಷಿತ) ಸ್ಮರಿಸುತ್ತೇವೆ. ಇಂದಿನ ವಾಚನದಲ್ಲಿ ಈತನು ಸತ್ಪುರುಷನು, ಪವಿತ್ತರಾತ್ಮಭರಿತನು ಹಾಗೂ ಅಗಾಧ ವಿಶ್ವಾಸವುಳ್ಳವನು ಎಂದು ಓದುತ್ತೇವೆ. ಈತನು ಪೌಲನೊಡನೆ ಶುಭಸಂದೇಶವನ್ನು ಬೋಧಿಸಲು ಸಹಕರಿಸಿದನು. ಈತನ ಸರಳ ಹಾಗೂ ವಿಶ್ವಾಸಭರಿತ ಜೀವನ ಹಲವರನ್ನು ಕ್ರಿಸ್ತರೆಡೆಗೆ ಸೆಳೆಯಿತು.

ಶುಭಸಂದೇಶವನ್ನು ಸಾರಲು ಸರಳ ಹಾಗೂ ಪಾರದರ್ಶಕ ಜೀವನ ಬಹು ಮುಖ್ಯವೆಂದು ಪ್ರಭು ತಮ್ಮ ಶಿಷ್ಯರಿಗೆ ತಿಳಿಸುತ್ತಾರೆ. ಎಲ್ಲಕ್ಕಿಂತ ಮಿಗಿಲಾಗಿ ಪ್ರಭುಕ್ರಿಸ್ತ ಶುಭಸಂದೇಶ ಬೋಧಕರ ಜೀವನದ ಕೇಂದ್ರಬಿಂದುವಾಗಬೇಕು ಆಗ ಅವರ ಜೀವನ ಕ್ರಿಸ್ತಮಯವಾಗಿ, ಬೋಧನೆ ಫಲದಾಯಕವಾಗುತ್ತದೆ. ಜೀವನದಲ್ಲಿ ಎಷ್ಟೆ ಕಷ್ಟ ನಷ್ಟಗಳು ಬಂದರೂ ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ' ಎಂಬ ಕ್ರಿಸ್ತನ ಬೋಧನೆಯನ್ನು ಸಾರುತ್ತಿರಬೇಕು.    

No comments:

Post a Comment