ಕೆಂಪು/ ಸೋಮ/ ಸಂತಚಾರ್ಲ್ಸ್ ಲುವಾಂಗಮತ್ತು ಸಂಗಡಿಗರು (ರ.ಸಾ) (ಸ್ಮರಣೆ)
1ನೇ ವಾಚನ - ಪ್ರೇ.ಕಾ: 19: 1-8
ಕೀರ್ತನೆ - 68: 2-6
ಶುಭಸಂದೇಶ - ಯೊವಾನ್ನ 16: 29-33
2 : “ನೀವು ವಿಶ್ವಾಸಿಸಿದಾಗ ಪವಿತ್ರಾತ್ಮ ಅವರನ್ನು ಪಡೆದಿರೋ?” ಎಂದು ಕೇಳಿದನು. ಅದಕ್ಕೆ ಅವರು, “ಪವಿತ್ರಾತ್ಮ ಎಂಬವರು ಇದ್ದಾರೆಂದು ನಾವು ಕೇಳಿಯೇ ಇಲ್ಲ,” ಎಂದು ಉತ್ತರಿಸಿದರು.
3 : “ಹಾಗಾದರೆ ನೀವು ಯಾವ ಸ್ನಾನದೀಕ್ಷೆಯನ್ನು ಪಡೆದಿರಿ?” ಎಂದು ಪೌಲನು ಕೇಳಲು, “ನಾವು ಯೊವಾನ್ನನ ಸ್ನಾನದೀಕ್ಷೆ ಪಡೆದೆವು,” ಎಂದರು.
4 : ಆಗ ಪೌಲನು, “ಯಾರು ತಮ್ಮ ಪಾಪದಿಂದ ವಿಮುಖರಾಗಿ ದೇವರಿಗೆ ಅಭಿಮುಖರಾಗುತ್ತಿದ್ದರೋ, ಅಂಥವರಿಗೆ ಯೊವಾನ್ನನು ಸ್ನಾನದೀಕ್ಷೆ ಕೊಡುತ್ತಿದ್ದನು. ಆದರೆ ಆ ಯೊವಾನ್ನನೇ ‘ತನ್ನ ಬಳಿಕ ಬರುವಾತನಲ್ಲಿ ವಿಶ್ವಾಸವಿಡಿ; ಅವರೇ ಯೇಸು’ ಎಂದು ಇಸ್ರಯೇಲರಿಗೆ ಬೋಧಿಸಿದ್ದನು,” ಎಂದನು.
5 : ಇದನ್ನು ಕೇಳಿದಾಗ ಅವರು ಪ್ರಭು ಯೇಸುವಿನ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆದರು.
6 : ಪೌಲನು ಅವರ ಮೇಲೆ ಹಸ್ತನಿಕ್ಷೇಪ ಮಾಡಲು, ಪವಿತ್ರಾತ್ಮ ಅವರ ಮೇಲೆ ಬಂದರು. ಆಗ ಅವರೆಲ್ಲರೂ ನಾನಾ ಭಾಷೆಗಳನ್ನು ಮಾತನಾಡುತ್ತಾ ಪ್ರವಾದಿಸಿದರು.
7 : ಇವರು ಸುಮಾರು ಹನ್ನೆರಡು ಮಂದಿ ಇದ್ದಿರಬಹುದು.
8 : ಅನಂತರ ಮೂರು ತಿಂಗಳ ಕಾಲ ಪೌಲನು ಪ್ರಾರ್ಥನಾಮಂದಿರಕ್ಕೆ ಹೋಗಿ ಧೈರ್ಯದಿಂದ ಮಾತನಾಡಿದನು. ದೇವರ ಸಾಮ್ರಾಜ್ಯದ ಬಗ್ಗೆ ಅಲ್ಲಿದ್ದವರೊಡನೆ ಚರ್ಚಿಸುತ್ತಾ, ಅವರನ್ನು ವಿಶ್ವಾಸಿಗಳನ್ನಾಗಿಸಲು ಪ್ರಯತ್ನಿಸಿದನು.
ಕೀರ್ತನೆ - 68: 2-6
ಭೂರಾಜ್ಯಗಳೇ, ಸ್ತುತಿಸಿರಿ ದೇವರನು
1 : ಎಚ್ಚರಗೊಳ್ಳಲಿ, ದೇವನೆಚ್ಚರಗೊಳ್ಳಲಿ / ಆತನ ಶತ್ರುಗಳೆಲ್ಲರು ಚದರಿಹೋಗಲಿ / ಆತನ ವಿರೋಧಿಗಳು ಪಲಾಯನ ಗೈಯಲಿ //
2 : ಅವರನು ಊದಿಬಿಡು ದೇವಾ, ತೇಲಿಹೋಗಲಿ ಹೊಗೆಯಂತೆ / ಕರಗಿಹೋಗಲಿ ನಿನ್ನೆದುರಿಗೆ ಅಗ್ನಿಮುಟ್ಟಿದ ಮೇಣದಂತೆ //
3 : ಸಜ್ಜನರಾದರೊ ಸಂತೋಷಿಸಲಿ / ದೇವರ ಮುಂದೆ ಆನಂದಿಸಲಿ / ಅತುಳ ಹರ್ಷಾನಂದಗೊಳ್ಳಲಿ //
4 : ಗಾಯನ ಮಾಡಿರಿ ದೇವನಿಗೆ, ಕೊಂಡಾಡಿರಿ ಆತನ ನಾಮವನು / ಮೇಘಾರೂಢನಾಗಿ ಬರುವವಗೆ ಸಿದ್ಧಮಾಡಿರಿ ರಾಜಮಾರ್ಗವನು / “ಪ್ರಭು” ಆತನ ನಾಮಧೇಯ, ಹರ್ಷದಿ ಸೇರಿರಿ ಆತನ ಸನ್ನಿಧಿಯನು //
5 : ದಿವ್ಯಧಾಮದಲ್ಲಿಹ ಆ ದೇವ / ತಬ್ಬಲಿಗೆ ತಂದೆ, ವಿಧವೆಗಾಶ್ರಯ //
6 : ನೀಡುವನು ಮಡದಿ ಮಕ್ಕಳನು ಒಂಟಿಗನಿಗೆ / ಬಿಡುಗಡೆಯ ಭಾಗ್ಯವನು ನೊಂದ ಬಂಧಿಗಳಿಗೆ / ದ್ರೋಹಿಗಳಿಗಾದರೋ ಮರಳುಗಾಡೇ ಮಾಳಿಗೆ //
7 : ದೇವಾ, ಪ್ರಜೆಗೆ ಮುಂದಾಳಾಗಿ ನೀ ಹೊರಟಾಗ / ಅರಣ್ಯ ಮಾರ್ಗವಾಗಿ ನೀ ಪ್ರಯಾಣಮಾಡಿದಾಗ /
ಶುಭಸಂದೇಶ - ಯೊವಾನ್ನ 16: 29-33
29 : ಅದಕ್ಕೆ ಶಿಷ್ಯರು, “ಈಗ ನೀವು ಸಾಮತಿಗಳನ್ನು ಬಳಸದೆ ಸ್ಪಷ್ಟವಾಗಿಯೇ ಮಾತನಾಡುತ್ತಿದ್ದೀರಿ.
30 : ನೀವು ಎಲ್ಲವನ್ನೂ ಬಲ್ಲವರು. ಪ್ರಶ್ನೆಗಳಿಗಾಗಿ ನೀವು ಕಾಯಬೇಕಿಲ್ಲ ಎಂದು ನಮಗೀಗ ತಿಳಿಯಿತು. ಆದುದರಿಂದ ನೀವು ದೇವರಿಂದ ಬಂದವರೆಂದು ನಾವು ವಿಸ್ವಾಸಿಸುತ್ತೇವೆ,” ಎಂದರು.
31 : ಆಗ ಯೇಸುಸ್ವಾಮಿ, “ಈಗ ನೀವು ವಿಶ್ವಾಸಿಸುತ್ತೀರೋ?
32 : ನೀವೆಲ್ಲರೂ ನನ್ನನ್ನು ಒಬ್ಬಂಟಿಗನಾಗಿ ಬಿಟ್ಟು ನಿಮ್ಮ ನಿಮ್ಮ ಮನೆಗೆ ಚದರಿ ಹೋಗುವ ಕಾಲವು ಬರುತ್ತದೆ. ಈಗಾಗಲೇ ಬಂದಿದೆ. ಆದರೆ ಪಿತನು ನನ್ನೊಡನೆ ಇರುವುದರಿಂದ ನಾನು ಒಬ್ಬಂಟಿಗನಲ್ಲ.
33 : ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಷ್ಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.
ಚಿಂತನೆ
ಕ್ರಿಸ್ತನ ವಿಶ್ವಾಸದ ಬದುಕು ನಮದಾಗಲಿ.
1ನೇ ವಾಚನ - ಪ್ರೇ.ಕಾ: 19: 1-8
ಕೀರ್ತನೆ - 68: 2-6
ಶುಭಸಂದೇಶ - ಯೊವಾನ್ನ 16: 29-33
1ನೇ ವಾಚನ - ಪ್ರೇ.ಕಾ: 19: 1-8
1 : ಅಪೊಲ್ಲೋಸನು ಕೊರಿಂಥದಲ್ಲಿ ಇದ್ದಾಗ, ಪೌಲನು ಮೇಲ್ನಾಡಿನ ಪ್ರಾಂತ್ಯದ ಮಾರ್ಗವಾಗಿ ಎಫೆಸಕ್ಕೆ ಬಂದನು. ಅಲ್ಲಿ ಕೆಲವು ಮಂದಿ ಶಿಷ್ಯರನ್ನು ಕಂಡು,2 : “ನೀವು ವಿಶ್ವಾಸಿಸಿದಾಗ ಪವಿತ್ರಾತ್ಮ ಅವರನ್ನು ಪಡೆದಿರೋ?” ಎಂದು ಕೇಳಿದನು. ಅದಕ್ಕೆ ಅವರು, “ಪವಿತ್ರಾತ್ಮ ಎಂಬವರು ಇದ್ದಾರೆಂದು ನಾವು ಕೇಳಿಯೇ ಇಲ್ಲ,” ಎಂದು ಉತ್ತರಿಸಿದರು.
3 : “ಹಾಗಾದರೆ ನೀವು ಯಾವ ಸ್ನಾನದೀಕ್ಷೆಯನ್ನು ಪಡೆದಿರಿ?” ಎಂದು ಪೌಲನು ಕೇಳಲು, “ನಾವು ಯೊವಾನ್ನನ ಸ್ನಾನದೀಕ್ಷೆ ಪಡೆದೆವು,” ಎಂದರು.
4 : ಆಗ ಪೌಲನು, “ಯಾರು ತಮ್ಮ ಪಾಪದಿಂದ ವಿಮುಖರಾಗಿ ದೇವರಿಗೆ ಅಭಿಮುಖರಾಗುತ್ತಿದ್ದರೋ, ಅಂಥವರಿಗೆ ಯೊವಾನ್ನನು ಸ್ನಾನದೀಕ್ಷೆ ಕೊಡುತ್ತಿದ್ದನು. ಆದರೆ ಆ ಯೊವಾನ್ನನೇ ‘ತನ್ನ ಬಳಿಕ ಬರುವಾತನಲ್ಲಿ ವಿಶ್ವಾಸವಿಡಿ; ಅವರೇ ಯೇಸು’ ಎಂದು ಇಸ್ರಯೇಲರಿಗೆ ಬೋಧಿಸಿದ್ದನು,” ಎಂದನು.
5 : ಇದನ್ನು ಕೇಳಿದಾಗ ಅವರು ಪ್ರಭು ಯೇಸುವಿನ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆದರು.
6 : ಪೌಲನು ಅವರ ಮೇಲೆ ಹಸ್ತನಿಕ್ಷೇಪ ಮಾಡಲು, ಪವಿತ್ರಾತ್ಮ ಅವರ ಮೇಲೆ ಬಂದರು. ಆಗ ಅವರೆಲ್ಲರೂ ನಾನಾ ಭಾಷೆಗಳನ್ನು ಮಾತನಾಡುತ್ತಾ ಪ್ರವಾದಿಸಿದರು.
7 : ಇವರು ಸುಮಾರು ಹನ್ನೆರಡು ಮಂದಿ ಇದ್ದಿರಬಹುದು.
8 : ಅನಂತರ ಮೂರು ತಿಂಗಳ ಕಾಲ ಪೌಲನು ಪ್ರಾರ್ಥನಾಮಂದಿರಕ್ಕೆ ಹೋಗಿ ಧೈರ್ಯದಿಂದ ಮಾತನಾಡಿದನು. ದೇವರ ಸಾಮ್ರಾಜ್ಯದ ಬಗ್ಗೆ ಅಲ್ಲಿದ್ದವರೊಡನೆ ಚರ್ಚಿಸುತ್ತಾ, ಅವರನ್ನು ವಿಶ್ವಾಸಿಗಳನ್ನಾಗಿಸಲು ಪ್ರಯತ್ನಿಸಿದನು.
ಕೀರ್ತನೆ - 68: 2-6
ಭೂರಾಜ್ಯಗಳೇ, ಸ್ತುತಿಸಿರಿ ದೇವರನು
1 : ಎಚ್ಚರಗೊಳ್ಳಲಿ, ದೇವನೆಚ್ಚರಗೊಳ್ಳಲಿ / ಆತನ ಶತ್ರುಗಳೆಲ್ಲರು ಚದರಿಹೋಗಲಿ / ಆತನ ವಿರೋಧಿಗಳು ಪಲಾಯನ ಗೈಯಲಿ //
2 : ಅವರನು ಊದಿಬಿಡು ದೇವಾ, ತೇಲಿಹೋಗಲಿ ಹೊಗೆಯಂತೆ / ಕರಗಿಹೋಗಲಿ ನಿನ್ನೆದುರಿಗೆ ಅಗ್ನಿಮುಟ್ಟಿದ ಮೇಣದಂತೆ //
3 : ಸಜ್ಜನರಾದರೊ ಸಂತೋಷಿಸಲಿ / ದೇವರ ಮುಂದೆ ಆನಂದಿಸಲಿ / ಅತುಳ ಹರ್ಷಾನಂದಗೊಳ್ಳಲಿ //
4 : ಗಾಯನ ಮಾಡಿರಿ ದೇವನಿಗೆ, ಕೊಂಡಾಡಿರಿ ಆತನ ನಾಮವನು / ಮೇಘಾರೂಢನಾಗಿ ಬರುವವಗೆ ಸಿದ್ಧಮಾಡಿರಿ ರಾಜಮಾರ್ಗವನು / “ಪ್ರಭು” ಆತನ ನಾಮಧೇಯ, ಹರ್ಷದಿ ಸೇರಿರಿ ಆತನ ಸನ್ನಿಧಿಯನು //
5 : ದಿವ್ಯಧಾಮದಲ್ಲಿಹ ಆ ದೇವ / ತಬ್ಬಲಿಗೆ ತಂದೆ, ವಿಧವೆಗಾಶ್ರಯ //
6 : ನೀಡುವನು ಮಡದಿ ಮಕ್ಕಳನು ಒಂಟಿಗನಿಗೆ / ಬಿಡುಗಡೆಯ ಭಾಗ್ಯವನು ನೊಂದ ಬಂಧಿಗಳಿಗೆ / ದ್ರೋಹಿಗಳಿಗಾದರೋ ಮರಳುಗಾಡೇ ಮಾಳಿಗೆ //
7 : ದೇವಾ, ಪ್ರಜೆಗೆ ಮುಂದಾಳಾಗಿ ನೀ ಹೊರಟಾಗ / ಅರಣ್ಯ ಮಾರ್ಗವಾಗಿ ನೀ ಪ್ರಯಾಣಮಾಡಿದಾಗ /
ಶುಭಸಂದೇಶ - ಯೊವಾನ್ನ 16: 29-33
29 : ಅದಕ್ಕೆ ಶಿಷ್ಯರು, “ಈಗ ನೀವು ಸಾಮತಿಗಳನ್ನು ಬಳಸದೆ ಸ್ಪಷ್ಟವಾಗಿಯೇ ಮಾತನಾಡುತ್ತಿದ್ದೀರಿ.
30 : ನೀವು ಎಲ್ಲವನ್ನೂ ಬಲ್ಲವರು. ಪ್ರಶ್ನೆಗಳಿಗಾಗಿ ನೀವು ಕಾಯಬೇಕಿಲ್ಲ ಎಂದು ನಮಗೀಗ ತಿಳಿಯಿತು. ಆದುದರಿಂದ ನೀವು ದೇವರಿಂದ ಬಂದವರೆಂದು ನಾವು ವಿಸ್ವಾಸಿಸುತ್ತೇವೆ,” ಎಂದರು.
31 : ಆಗ ಯೇಸುಸ್ವಾಮಿ, “ಈಗ ನೀವು ವಿಶ್ವಾಸಿಸುತ್ತೀರೋ?
32 : ನೀವೆಲ್ಲರೂ ನನ್ನನ್ನು ಒಬ್ಬಂಟಿಗನಾಗಿ ಬಿಟ್ಟು ನಿಮ್ಮ ನಿಮ್ಮ ಮನೆಗೆ ಚದರಿ ಹೋಗುವ ಕಾಲವು ಬರುತ್ತದೆ. ಈಗಾಗಲೇ ಬಂದಿದೆ. ಆದರೆ ಪಿತನು ನನ್ನೊಡನೆ ಇರುವುದರಿಂದ ನಾನು ಒಬ್ಬಂಟಿಗನಲ್ಲ.
33 : ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಷ್ಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.
ಚಿಂತನೆ
ಕ್ರಿಸ್ತನ ವಿಶ್ವಾಸದ ಬದುಕು ನಮದಾಗಲಿ.
ಕ್ರೈಸ್ತರಾದ ನಮಗೆ ಕಷ್ಟಸಂಕಷ್ಟಗಳು ತಪ್ಪಿದಲ್ಲ; ಜಗತ್ತು ನಮ್ಮನ್ನು ದ್ವೇಷಿಸುತ್ತದೆ. ಆದರೂ ನಾವು ಕ್ರಿಸ್ತನಲ್ಲಿ ವಿಶ್ವಾಸವನ್ನು ಕಳೆದುಕೊಳ್ಳದೆ, ಧೈರ್ಯದಿಂದ ಕ್ರಿಸ್ತನನ್ನು ಜಗಕ್ಕೆ ಸಾರಬೇಕು. ಕ್ರಿಸ್ತನನ್ನು ಸಾರುವುದೆಂದರೆ ಕ್ರಿಸ್ತನ ಮೌಲ್ಯಗಳನ್ನು ನಮ್ಮ ಬದುಕಿನಲ್ಲಿ ರೂಢಿಸಿಕೊಂಡು ಬಾಳುವುದು. ಕ್ರಿಸ್ತರು ಇಡೀ ಲೋಕವನ್ನೇ ಗೆದ್ದರು. ಅ ಗೆಲ್ಲುವು ಹಿಂಸೆಯಿಂದ ಬಂದುದಲ್ಲ. ಪ್ರೀತಿ ತ್ಯಾಗದಿಂದ ಕ್ರಿಸ್ತರು ಲೋಕವನ್ನು ಜಯಿಸಿದರು .
ಎಂತಹ ಘೋರ ಕಷ್ಟಸಂಕಷ್ಟಗಳು ಬಂದರೂ, ಕ್ರಿಸ್ತರು ತಂದೆಯ ಮೇಲಿಟಿದ್ದ ತಮ್ಮ ವಿಶ್ವಾಸವನ್ನು ಕಳೆದುಕೊಳ್ಳಲಿಲ್ಲ. ತಂದೆಯ ಚಿತ್ತವನ್ನು ಪರಿಪಾಲಿಸಿ ನಡೆದರು. ನಾವು ಕೂಡ ಕಷ್ಟಸಂಕಷ್ಟಗಳು ನಮಗೆ ಬಂದರು ಕ್ರಿಸ್ತನಲ್ಲಿ ವಿಶ್ವಾಸವನ್ನು ಕಳೆದುಕೊಳ್ಳದೆ ಕ್ರಿಸ್ತನಲ್ಲಿ ಬಾಳೋಣ ಮತ್ತು ಪ್ರೀತಿ ಸೇವೆ ತ್ಯಾಗದಿಂದ ಕ್ರಿಸ್ತನನ್ನು ಜಗತ್ತಿಗೆ ಸಾರೋಣ.
No comments:
Post a Comment