Sunday, 23 June 2019

3೦ ಜೂನ್ 2೦19

ಹಸಿರು/   ಭಾನು/     ಸಾಧಾರಣ ಕಾಲದ ಹದಿಮೂರನೇ ಭಾನುವಾರ
1ನೇ ವಾಚನ - 1 ಅರಸು 19: 16, 19-21
ಕೀರ್ತನೆ - 16: 1 -2 5, 7, -8, 9- 1೦.11.
2ನೇ ವಾಚನ - ಗಲಾತ್ಯ 5: 1, 13-18
ಶುಭಸಂದೇಶ - ಲೂಕ: 9: 51-62
ಐಚ್ಛಿಕ ಸ್ಮರಣೆ - ರೋಮ್ ನಗರದ ಪ್ರಥಮ ರಕ್ತಸಾಕ್ಷಿಗಳು


1ನೇ ವಾಚನ - 1 ಅರಸು 19: 16, 19-21 
16 : ನಿಂಷಿಯ ಮಗ ಯೇಹುವನ್ನು, ಇಸ್ರಯೇಲರ ಅರಸನನ್ನಾಗಿ ಅಭಿಷೇಕಿಸು. ಅಬೇಲ್ ಮಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನ್ನ ಉತ್ತರಾಧಿಕಾರಿಯಾದ ಪ್ರವಾದಿಯನ್ನಾಗಿ ಅಭಿಷೇಕಿಸು.
17 : ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೆ್ಲುವನು; ಇವನ ಕತ್ತಿಗೆ ತಪ್ಪಿಸಿಕೊಂಡವರನ್ನ ಎಲೀಷನು ಕೊಲ್ಲುವನು.
18 : ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಮಂದಿ ಇಸ್ರಯೇಲರನ್ನು ಉಳಿಸುವೆನು,” ಎಂದು ಹೇಳಿದರು.
19 : ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆಯ ಜೋಡಿಯಿಂದ ತಾನಾಗಿ ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.
20 : ಕೂಡಲೆ ಅವನು ಎತ್ತುಗಳನ್ನು ಬಿಟ್ಟು ಓಡುತ್ತಾ ಬಂದು ಎಲೀಯನಿಗೆ, “ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬರುವುದಕ್ಕೆ ಅಪ್ಪಣೆಯಾಗಲಿ; ಅನಂತರ ನಿನ್ನನ್ನು ಹಿಂಬಾಲಿಸುವೆನು,” ಎಂದನು. ಅದಕ್ಕೆ ಎಲೀಯನು, “ಹೋಗಿ ಬಾ; ನಾನು ನಿನಗೆ ಮಾಡಬೇಕಾದ್ದನ್ನು ಮಾಡಿದ್ದೇನೆ,” ಎಂದು ಉತ್ತರಕೊಟ್ಟನು.
21 : ಎಲೀಷನು ಹಿಂದಿರುಗಿ ಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ವಧಿಸಿ ಮಾಂಸವನ್ನು ನೊಗದ ಕಟ್ಟಿಗೆಯಿಂದ ಬೇಯಿಸಿ, ಜನರಿಗೆ ಔತಣಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಶಿಷ್ಯನಾದನು.
ಕೀರ್ತನೆ - 16: 1 -2 5, 7, -8, 9- 1೦.11. 
ನನ್ನ ಸ್ವತ್ತೂ ಸ್ವಾಸ್ತ್ಯವೂ ನೀನೇ
1 : ನೀಡು ದೇವಾ ರಕ್ಷಣೆಯನು / ನಾ ನಿನಗೆ ಶರಣಾಗತನು //
2 : “ನೀನೇ ನನ್ನೊಡೆಯ”ನೆಂದು ನಾ ನುಡಿದೆ / ನಿನ್ನ ಹೊರತು ನನಗಿಲ್ಲ ಒಳಿತು” ಎಂದೆ /
5 : ನನ್ನ ಸ್ವತ್ತೂ ಸ್ವಾಸ್ತ್ಯವೂ ನೀನೇ / ನಿನ್ನ ಕೈಯಲ್ಲಿದೆ ಪ್ರಭು, ನನ್ನ ವಿಮೆ //
7 : ಪ್ರಭುವಿಗೆನ್ನ ಧನ್ಯವಾದ - ಆತನೇ ನನಗೆ ಮಾರ್ಗದರ್ಶಕ / ಅಂಧಕಾರದೊಳೂ ನನ್ನ ಮನಸ್ಸಾಕ್ಷಿಯೆ ನನಗೆ ಬೋಧಕ //
8 : ಇರಿಸಿಕೊಳ್ಳುವೆ ಪ್ರಭುವನು ಸತತ ನನ್ನೆದುರಿಗೆ / ಆತನಿರಲು ಬಲಕ್ಕೆ ನನಗೆಲ್ಲಿಯದು ಹೆದರಿಕೆ? //
9 : ಇದು ಕಾರಣ ಹರ್ಷದಿಂದಿದೆ ಎನ್ನಯ ಹೃದಯ / ಆನಂದಗೊಂಡಿದೆ ಮನ, ಸುರಕ್ಷಿತವಿದೆ ಕಾಯ //
10 : ಏಕೆನೆ ದೂಡುವುದಿಲ್ಲ ನೀನು ಎನ್ನನು ಅಧೋಲೋಕಕೆ / ಬಿಟ್ಟುಕೊಡುವುದಿಲ್ಲ ನಿನ್ನ ಈ ಭಕ್ತನನು ಪಾತಾಳಕೆ //
11 : ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು / ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು / ನಿನ್ನ ಬಲಗೈ ನೀಡುವುದು ನಿತ್ಯ ಭಾಗ್ಯವನು //
2ನೇ ವಾಚನ - ಗಲಾತ್ಯ 5: 1, 13-18 
1 : ನಾವು ಮುಕ್ತ ಸ್ವಾತಂತ್ರ್ಯದಿಂದ ಬಾಳಬೇಕೆಂದು ಕ್ರಿಸ್ತಯೇಸು ನಮ್ಮನ್ನು ಬಿಡುಗಡೆ ಮಾಡಿದರು. ಆದ್ದರಿಂದ ದೃಢವಾಗಿರಿ. ಗುಲಾಮಗಿರಿಯ ನೊಗಕ್ಕೆ ಪುನಃ ಕೊರಳನ್ನು ಒಡ್ಡದಿರಿ.
13 : ಸಹೋದರರೇ, ನೀವು ಮುಕ್ತ ಸ್ವತಂತ್ರ ಜೀವನವನ್ನು ನಡೆಸಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾರೆ. ಆದರೆ, ಆ ಸ್ವಾತಂತ್ರ್ಯವನ್ನು ದೈಹಿಕ ಬಯಕೆಗಳಿಗೆ ಸಾಧನವಾಗಿ ಮಾಡಿಕೊಳ್ಳಬೇಡಿ. ಬದಲಾಗಿ, ನೀವು ಒಬ್ಬರಿಗೊಬ್ಬರು ಪ್ರೀತಿಯಿಂದ ಸೇವೆಮಾಡಿರಿ.
14 : “ನೀನು ನಿನ್ನನ್ನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನು ಪ್ರೀತಿಸು,” ಎಂಬ ಒಂದೇ ವಚನದಲ್ಲಿ ಇಡೀ ಧರ್ಮಶಾಸ್ತ್ರವು ಅಡಗಿದೆ.
15 : ಆದರೆ ನೀವು ನಿಮ್ಮ ಕಚ್ಚಾಟ, ಕಿತ್ತಾಟ, ನುಂಗಾಟ - ಇವುಗಳನ್ನು ನಿಲ್ಲಿಸದಿದ್ದರೆ ಒಬ್ಬರಿಂದೊಬ್ಬರು ವಿನಾಶವಾದೀರಿ, ಎಚ್ಚರಿಕೆ!
16 : ನಾನು ಹೇಳುವುದೇನೆಂದರೆ: ನೀವು ಪವಿತ್ರಾತ್ಮರ ಪ್ರೇರಣೆಗನುಸಾರವಾಗಿ ನಡೆದುಕೊಳ್ಳಬೇಕು. ಆಗ, ದೈಹಿಕ ವ್ಯಾಮೋಹಕ್ಕೆ ನೀವು ಈಡಾಗಲಾರಿರಿ.
17 : ಏಕೆಂದರೆ, ದೈಹಿಕ ವ್ಯಾಮೋಹವು ಪವಿತ್ರಾತ್ಮರಿಗೆ ವಿರುದ್ಧವಾಗಿದೆ. ಪವಿತ್ರಾತ್ಮ ಆ ವ್ಯಾಮೋಹಕ್ಕೆ ವಿರುದ್ಧವಾಗಿದ್ದಾರೆ. ಇವೆರಡೂ ಒಂದಕ್ಕೊಂದು ಕಾದಾಡುವುದರಿಂದ ನಿಮ್ಮ ಬಯಕೆ ಕೈಗೂಡುವುದಿಲ್ಲ.
18 : ನೀವು ಪವಿತ್ರಾತ್ಮ ನಡೆಸುವ ಮಾರ್ಗದಲ್ಲಿ ನಡೆಯುವವರಾದರೆ, ಧರ್ಮಶಾಸ್ತ್ರದ ವಿಧಿನಿಯಮಗಳಿಗೆ ನೀವು ಅಧೀನರಲ್ಲ.
ಶುಭಸಂದೇಶ - ಲೂಕ: 9: 51-62 
51 : ತಾವು ಸ್ವರ್ಗಾರೋಹಣವಾಗುವ ದಿನಗಳು ಸಮೀಪಿಸಲು ಯೇಸುಸ್ವಾಮಿ ಜೆರುಸಲೇಮಿಗೆ ಅಭಿಮುಖವಾಗಿ ಹೊರಡಲು ನಿರ್ಧರಿಸಿದರು.
52 : ಅಲ್ಲದೆ ತಮಗೆ ಮುಂದಾಗಿ ದೂತರನ್ನು ಕಳುಹಿಸಿದರು. ಇವರು ಹೊರಟು ಯೇಸುವಿಗೆ ಬೇಕಾದುದನ್ನು ಸಿದ್ಧಮಾಡಲು ಸಮಾರಿಯದ ಒಂದು ಹಳ್ಳಿಗೆ ಬಂದರು.
53 : ಯೇಸು ಜೆರುಸಲೇಮಿಗೆ ಹೋಗುತ್ತಿದ್ದ ಕಾರಣ ಅವರನ್ನು ಅಲ್ಲಿಯ ಜನರು ಬರಗೊಳಿಸಲಿಲ್ಲ.
54 : ಇದನ್ನು ಕಂಡು ಶಿಷ್ಯರಾದ ಯಕೋಬ ಮತ್ತು ಯೊವಾನ್ನ, “ಪ್ರಭೂ, ಆಕಾಶದಿಂದ ಅಗ್ನಿಮಳೆ ಸುರಿದು ಇವರನ್ನು ನಾಶ ಮಾಡಲಿ ಎಂದು ನಾವು ಆಜ್ಞೆಮಾಡಬಹುದಲ್ಲವೇ?” ಎಂದರು.
55 : ಯೇಸು ಅವರ ಕಡೆ ತಿರುಗಿ, “ನೀವು ಎಂಥ ಸ್ವಭಾವಿಗಳೆಂದು ನಿಮಗೇ ತಿಳಿಯದು. ನರಪುತ್ರನು ಬಂದಿರುವುದು ಮಾನವ ಜೀವಿಗಳ ವಿನಾಶಕ್ಕೆ ಅಲ್ಲ, ಉದ್ಧಾರಕ್ಕೆ” ಎಂದು ಅವರನ್ನು ಖಂಡಿಸಿದರು.
56 : ಅನಂತರ ಯೇಸು ಮತ್ತು ಶಿಷ್ಯರು ಬೇರೆ ಹಳ್ಳಿಗೆ ಹೋದರು. ಅನುಯಾಯಿಗಳು ತ್ಯಜಿಸಬೇಕಾದ ಅಂಟುನಂಟು (ಮತ್ತಾ. 8.19-22)
57 : ಅವರೆಲ್ಲರೂ ದಾರಿಯಲ್ಲಿ ಹೋಗುತ್ತಿದ್ದಾಗ ಒಬ್ಬನು ಯೇಸುವಿಗೆ, “ನೀವು ಎಲ್ಲಿಗೆ ಹೋದರೂ ನಿಮ್ಮನ್ನು ಹಿಂಬಾಲಿಸುತ್ತೇನೆ,” ಎಂದನು.
58 : ಯೇಸು ಅವನಿಗೆ, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಡುವುದಕ್ಕೂ ಸ್ಥಳವಿಲ್ಲ,” ಎಂದರು.
59 : ಇನ್ನೊಬ್ಬನಿಗೆ ಯೇಸು, “ನನ್ನನ್ನು ಹಿಂಬಾಲಿಸು,” ಎಂದು ಹೇಳಿದಾಗ ಅವನು, “ಸ್ವಾವಿೂ, ಮೊದಲು ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮುಗಿಸುವ ತನಕ ಸಮಯಕೊಡಿ,” ಎಂದನು.
60 : ಅವನಿಗೆ ಯೇಸು, “ಸತ್ತವರೇ ತಮ್ಮ ಸತ್ತವರನ್ನು ಸಮಾಧಿಮಾಡಿಕೊಳ್ಳಲಿ; ನೀನಾದರೋ, ಹೋಗು, ದೇವರ ಸಾಮ್ರಾಜ್ಯವನ್ನು ಪ್ರಚಾರಮಾಡು,” ಎಂದು ಹೇಳಿದರು.
61 : ಮತ್ತೊಬ್ಬನು, “ನಿಮ್ಮನ್ನು ಹಿಂಬಾಲಿಸುತ್ತೇನೆ ಪ್ರಭೂ, ಆದರೆ ಮೊದಲು ಮನೆಯವರನ್ನು ಬೀಳ್ಕೊಟ್ಟು ಬರಲು ಅಪ್ಪಣೆ ಆಗಬೇಕು,” ಎಂದನು.
62 ಯೇಸು ಅವನನ್ನು ನೋಡಿ, “ನೇಗಿಲಿಗೆ ಕೈಹಾಕಿ ಹಿಂದಕ್ಕೆ ನೋಡುವವನು ದೇವರ ಸಾಮ್ರಾಜ್ಯಕ್ಕೆ ತಕ್ಕವನಲ್ಲ,” ಎಂದರು. 
ಚಿಂತನೆ
ಪ್ರಭು ಯೇಸುವನ್ನು---- ನಮ್ಮ ಮನದಲ್ಲಿ
        ,,     ,,              ---- ನಮ್ಮ ನಡೆಯಲ್ಲಿ
                              ------ ನಮ್ಮ ನುಡಿಯಲ್ಲಿ
                              ---- ನಮ್ಮ ಅಂತರಾಳದಲ್ಲಿ
                             ----- ನಮ್ಮ ಪ್ರತಿದಿನದ ಜೀವನದಲ್ಲಿ:::: ಹಿಂಬಾಲಿಸುವ.

ಮೊದಲನೆಯ ವಾಚನ
ಎಲಿಯ ಪ್ರವಾದಿಯು ತನ್ನ ಉತ್ತರಾಧಿಕಾರಿಯನ್ನಾಗಿ ಎಲಿಸ ನನ್ನು ಅಭಿಷೇಕಿ ಸಲು ಸರ್ವೇಶ್ವರ ಸ್ವಾಮಿ ಜ್ಞೆ ಮಾಡುತ್ತಾರೆ. ಅಂತೆಯೇ ಪ್ರವಾದಿ ಎಲಿಯ ಎಲಿಶನಿಗೆ ದೇವರ ಕರೆಗೆ ಹೋಗಲು ಪ್ರೇರಣೆಯನ್ನು ನೀಡುತ್ತಾನೆ. ಹಾಗೆಯೇ ಪ್ರವಾದಿ ಎಲ್ಲಿಯನನ್ನ ಹಿಂಬಾಲಿಸುತ್ತಾನೆ.
ಎರಡನೆಯ ವಾಚನ
ಸನ್ಮಾರ್ಗದಲ್ಲಿ ನಡೆಯಲು, ಪ್ರಭು ಕ್ರಿಸ್ತರನ್ನು ಹಿಂಬಾಲಿಸಲು ನಾವು ಪವಿತ್ರಾತ್ಮರ ಪ್ರೇರಣೆ ಅನುಸಾರವಾಗಿ ನಡೆದುಕೊಳ್ಳಬೇಕಾಗಿದೆ. ಇಂದಿನ ಶುಭ ಸಂದೇಶದಲ್ಲಿ ಯೇಸು ಸ್ವಾಮಿಯು ಸ್ವರ್ಗಾರೋಹಣ ವಾಗುವ ದಿನಗಳು ಸಮೀಪಿಸಿದಾಗ ಜೆರುಸಲೆಮ್ಗೆ ಅಭಿಮುಖವಾಗಿ ಹೊರಡಲು ನಿರ್ಧರಿಸುತ್ತಾರೆ. ಈ ಸಂದರ್ಭದಲ್ಲಿ ಪ್ರಭುವನ್ನು ಹಿಂಬಾಲಿಸಲು ಅನೇಕರು ತಮ್ಮದೇ ಆದ ಕಾರಣಗಳನ್ನು ನೀಡಿ ದೂರ ಸರಿಯುತ್ತಾರೆ. ಹಾಗಾದರೆ ನಾನು ಯಾವ ರೀತಿಯಲ್ಲಿ ಪ್ರಭುವಿನಿಂದ ದೂರ ಸರಿದಿದ್ದೇನೆ ಎಂಬುದನ್ನು ಮನಗಾಣಲು ಇದು ಅತ್ಯಂತ ಸೂಕ್ತ ಸಮಯವಾಗಿದೆ.

ಹೊಸ ಒಡಂಬಡಿಕೆಯಲ್ಲಿ ಅತಿಮುಖ್ಯವಾಗಿ ಮಗದೊಮ್ಮೆ ದೇವರೊಡನೆ ತಂಗಲು ಅಥವಾ ಹಿಂಬಾಲಿಸಲು ಕರೆಯನ್ನು ಪಡೆಯುತ್ತೇವೆ. ಏಕೆಂದರೆ ಪ್ರಭೂ ಕ್ರಿಸ್ತರು ಯಾವಾಗಲೂ ಅವರು ನಮ್ಮ ಸಂಗಡ ಉಳಿಯುತ್ತಾರೆ. ಒಬ್ಬರು ಇನ್ನೊಬ್ಬರನ್ನು ಹಿಂಬಾಲಿಸುವುದು ಅಷ್ಟು ಸುಲಭವಲ್ಲ ಇದಕ್ಕೆ ಸರಿಯಾದ ಸಿದ್ಧತೆ ಇರಲೇಬೇಕು. ಅತಿಮುಖ್ಯವಾಗಿ ನೂರಕ್ಕೆ ನೂರರಷ್ಟು ಮನಸ್ಸಿರಬೇಕು. ಹಾಗೆಯೇ ಅದಕ್ಕೆ ಪೂರಕವಾಗಿ ಜೀವಿಸುವ ಧೃಢನಿರ್ಧಾರ ಬೇಕು. ನಾವೆಲ್ಲರೂ ಪ್ರಭುವನ್ನು ಅರಿಯೋಣ, ಜಪಿಸೋಣ, ಅವರೊಡನೆ ತಂಗಲು ಸಕಲವನ್ನು ತ್ಯಜಿಸೋಣ.


No comments:

Post a Comment