ಸಾಧಾರಣ ಕಾಲದ ಹದಿನೇಳನೇ ವಾರ ಗುರುವಾರ
1/ಬಿಳಿ/ಗುರು/ಸಂತ ಆಲ್ಪೋನ್ಸಾ ಮರಿಯಾ ಲಿಗೋರಿ(ಸ್ಮರಣೆ)
1ನೇ ವಾಚನ - ವಿಮೋ 4೦: 16-21,34-38
ಕೀರ್ತನೆ - 84: 2-3, 4-5, 9-1೦
ಶುಭಸಂದೇಶ - ಮತ್ತಾಯ 13: 47-53
1ನೇ ವಾಚನ - ವಿಮೋ 4೦: 16-21,34-38
ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಎಲ್ಲವನ್ನು ಮಾಡಿದನು. ಎರಡನೆಯ ವರ್ಷದ ಮೊದಲನೆಯ ತಿಂಗಳಿನ ಪ್ರಥಮ ದಿನದಲ್ಲಿ ಮೋಶೆ ಗುಡಾರವನ್ನು ಎತ್ತಿ ನಿಲ್ಲಿಸಿದನು. ಅವನು ಗುಡಾರವನ್ನು ಎತ್ತಿಸಿ ಅದರ ಗದ್ದಿಗೇಕಲ್ಲುಗಳನ್ನು ಹಾಕಿ ಚೌಕಟ್ಟುಗಳನ್ನು ನಿಲ್ಲಿಸಿ ಅಗುಳಿಗಳನ್ನು ಕೊಟ್ಟು ಕಂಬಗಳನ್ನು ನಿಲ್ಲಿಸಿದನು.ಗುಡಾರದ ಮೇಲೆ ಡೇರೆಯ ಬಟ್ಟೆಯನ್ನು ಹಾಸಿ ಆ ಡೇರೆಗೆ ಮೇಲು ಹೊದಿಕೆಯನ್ನು ಹಾಕಿದನು. ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಅದೆಲ್ಲವನ್ನು ಮಾಡಿದನು.
ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಗದ್ದಿಗೆಗಳನ್ನು ಕೊಟ್ಟು ಅದರ ಮೇಲೆ ಕೃಪಾಸನವನ್ನಿಟ್ಟು
ಮಂಜೂಷವನ್ನು ಗುಡಾರದೊಳಕ್ಕೆ ತಂದು, ಅದರ ಮುಂದೆ ತೆರೆಯನ್ನು ಇರಿಸಿ, ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಆಜ್ಞಾಶಾಸನಗಳ ಮಂಜೂಷವನ್ನು ಮರೆಮಾಡಿದನು.
ಆಗ ಮೇಘವೊಂದು ದೇವದರ್ಶನದ ಗುಡಾರವನ್ನು ಮುಚ್ಚಿತು; ಸರ್ವೇಶ್ವರನ ತೇಜಸ್ಸು ಗುಡಾರವನ್ನು ತುಂಬಿತ್ತು. ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಯಾಗಿ ಇದ್ದುದರಿಂದಲೂ ಸರ್ವೇಶ್ವರನ ತೇಜಸ್ಸು ಗುಡಾರದೊಳಗೆ ತುಂಬಿದ್ದುದರಿಂದಲೂ ಮೋಶೆ ಗುಡಾರದಲ್ಲಿ ಹೋಗಲಾರದೆ ಇದ್ದನು. ಆ ಮೇಘವು ಗುಡಾರವನ್ನು ಬಿಟ್ಟು ಮೇಲಕ್ಕೆ ಹೋದಾಗ ಇಸ್ರಯೇಲರು ಮುಂದಕ್ಕೆ ಪ್ರಯಾಣಮಾಡುತ್ತಿದ್ದರು;ಆ ಮೇಘವು ಬಿಡದೆ ಇರುವಾಗ ಅದು ಬಿಡುವ ತನಕ ಪ್ರಯಾಣ ಮಾಡದೆ ಇರುತ್ತಿದ್ದರು.ಇಸ್ರಯೇಲರ ಎಲ್ಲಾ ಪ್ರಯಾಣಗಳಲ್ಲಿಯೂ ಅವರ ಕಣ್ಣ ಮುಂದೆ ಹಗಲು ಹೊತ್ತಿನಲ್ಲಿ ಸರ್ವೇಶ್ವರನ ಮೇಘವು ಗುಡಾರದ ಮೇಲೆ ಇತ್ತು; ರಾತ್ರಿ ವೇಳೆಯಲ್ಲಿ ಆ ಮೇಘದೊಳಗೆ ಅಗ್ನಿಯು ಪ್ರಕಾಶಿಸುತ್ತಿತ್ತು.
ಕೀರ್ತನೆ - 84: 2-3, 4-5, 9-1೦
2 : ಹಂಬಲಿಸಿ ಸೊರಗಿಹೋಗಿದೆ ಎನ್ನ ಮನ / ಕಾಣಬೇಕೆಂದು ಪ್ರಭುವಿನ ಪ್ರಾಂಗಣ //
3 : ಸ್ವಾಮಿ ದೇವ, ಎನ್ನರಸ, ಸ್ವರ್ಗಸೇನಾಧೀ ಶ್ವರ / ದೊರಕಿದೆ ಗುಬ್ಬಿಗೆ ಗೂಡು ನಿನ್ನ ವೇದಿಕೆಯ ಹತ್ತಿರ / ಪಾರಿವಾಳಕ್ಕು ಅಲ್ಲೇ ಇದೆ ಮರಿಯಿಡಲು ಆಗರ //
4 : ನಿನ್ನ ಮಂದಿರದಲಿ ವಾಸಿಸುವವರು ಧನ್ಯರು / ನಿರಂತರವು ನಿನ್ನ ಗುಣಗಾನ ಮಾಡುವರವರು //
5 : ನಿನ್ನಿಂದ ಶಕ್ತಿಪಡೆಯುವವರು ಧನ್ಯರು / ಸಿಯೋನ್ ಶಿಖರಕ್ಕವರು ಪ್ರಿಯ ಯಾತ್ರಿಕರು //
9 : ನಿನ್ನ ಮಂದಿರದಲಿ ಕಳೆದ ದಿನವೊಂದು / ತಿಳಿವೆನು ಸಾವಿರ ದಿನಕೂ ಮೇಲೆಂದು //
10 : ದುರುಳರ ಬಿಡಾರದಲಿ ನಾ ವಾಸಮಾಡುವುದರ ಬದಲು / ನಿನ್ನಾಲಯದ ದ್ವಾರಪಾಲಕನಾಗಿರುವುದೆ ಮೇಲು //
ಶುಭಸಂದೇಶ - ಮತ್ತಾಯ 13: 47-53
"ಸ್ವರ್ಗಸಾಮ್ರಾಜ್ಯವನ್ನು ಒಂದು ಮೀನುಬಲೆಗೆ ಹೋಲಿಸಬಹುದು. ಬೆಸ್ತರು ಬಲೆಯನ್ನು ಸಮುದ್ರದಲ್ಲಿ ಬೀಸಿ ಎಲ್ಲಾ ಜಾತಿಯ ಮೀನುಗಳನ್ನು ಹಿಡಿಯುತ್ತಾರೆ.
ಬಲೆ ತುಂಬಿದ ಮೇಲೆ ಅದನ್ನು ದಡಕ್ಕೆ ಎಳೆದು, ಕಳಿತುಕೊಂಡು, ಒಳ್ಳೆಯ ಮೀನುಗಳನ್ನು ಮಾತ್ರ ಆರಿಸಿಕೊಂಡು ಬುಟ್ಟಿಗೆ ಹಾಕಿಕೊಳ್ಳುತ್ತಾರೆ; ಕೆಟ್ಟವನ್ನು ಎಸೆದುಬಿಡುತ್ತಾರೆ.
ಕಾಲಾಂತ್ಯದಲ್ಲಿ ಇದರಂತೆಯೇ ಆಗುವುದು; ದೇವದೂತರು ಹೊರಟುಬಂದು ದುರ್ಜನರನ್ನು ಸಜ್ಜನರಿಂದ ಬೇರ್ಪಡಿಸುವರು. ದುರ್ಜನರನ್ನು ಅಗ್ನಿಕುಂಡದಲ್ಲಿ ಹಾಕುವರು.
ಅಲ್ಲಿ ಅವರು ಕಟಕಟನೆ ಹಲ್ಲು ಕಡಿದುಕೊಂಡು ಗೋಳಾಡುವರು."ಇದೆಲ್ಲ ನಿಮಗೆ ಅರ್ಥವಾಯಿತೇ?" ಎಂದು ಯೇಸುಸ್ವಾಮಿ ಕೇಳಿದರು. ಶಿಷ್ಯರು "ಅರ್ಥವಾಯಿತು" ಎಂದರು. ಆಗ ಯೇಸು, "ಇಂತಿರಲು, ಸ್ವರ್ಗಸಾಮ್ರಾಜ್ಯದಲ್ಲಿ ಶಿಷ್ಯನಾಗಿರುವ ಪ್ರತಿಯೊಬ್ಬ ಶಾಸ್ತ್ರಜ್ಞನು ಮನೆಯ ಯಜಮಾನ ಇದ್ದ ಹಾಗೆ. ಅವನು ತನ್ನ ಉಗ್ರಾಣದಿಂದ ಹೊಸ ಹಾಗೂ ಹಳೆಯ ವಸ್ತುಗಳನ್ನು ಹೊರಗೆ ತರುತ್ತಾ ಇರುತ್ತಾನೆ," ಎಂದರು.
ಈ ಸಾಮತಿಗಳನ್ನು ಹೇಳಿಯಾದ ಮೇಲೆ ಯೇಸುಸ್ವಾಮಿ ಅಲ್ಲಿಂದ ಹೊರಟು ಹೋದರು.
ಚಿಂತನೆ:
1/ಬಿಳಿ/ಗುರು/ಸಂತ ಆಲ್ಪೋನ್ಸಾ ಮರಿಯಾ ಲಿಗೋರಿ(ಸ್ಮರಣೆ)
1ನೇ ವಾಚನ - ವಿಮೋ 4೦: 16-21,34-38
ಕೀರ್ತನೆ - 84: 2-3, 4-5, 9-1೦
ಶುಭಸಂದೇಶ - ಮತ್ತಾಯ 13: 47-53
1ನೇ ವಾಚನ - ವಿಮೋ 4೦: 16-21,34-38
ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಎಲ್ಲವನ್ನು ಮಾಡಿದನು. ಎರಡನೆಯ ವರ್ಷದ ಮೊದಲನೆಯ ತಿಂಗಳಿನ ಪ್ರಥಮ ದಿನದಲ್ಲಿ ಮೋಶೆ ಗುಡಾರವನ್ನು ಎತ್ತಿ ನಿಲ್ಲಿಸಿದನು. ಅವನು ಗುಡಾರವನ್ನು ಎತ್ತಿಸಿ ಅದರ ಗದ್ದಿಗೇಕಲ್ಲುಗಳನ್ನು ಹಾಕಿ ಚೌಕಟ್ಟುಗಳನ್ನು ನಿಲ್ಲಿಸಿ ಅಗುಳಿಗಳನ್ನು ಕೊಟ್ಟು ಕಂಬಗಳನ್ನು ನಿಲ್ಲಿಸಿದನು.ಗುಡಾರದ ಮೇಲೆ ಡೇರೆಯ ಬಟ್ಟೆಯನ್ನು ಹಾಸಿ ಆ ಡೇರೆಗೆ ಮೇಲು ಹೊದಿಕೆಯನ್ನು ಹಾಕಿದನು. ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಅದೆಲ್ಲವನ್ನು ಮಾಡಿದನು.
ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಗದ್ದಿಗೆಗಳನ್ನು ಕೊಟ್ಟು ಅದರ ಮೇಲೆ ಕೃಪಾಸನವನ್ನಿಟ್ಟು
ಮಂಜೂಷವನ್ನು ಗುಡಾರದೊಳಕ್ಕೆ ತಂದು, ಅದರ ಮುಂದೆ ತೆರೆಯನ್ನು ಇರಿಸಿ, ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಆಜ್ಞಾಶಾಸನಗಳ ಮಂಜೂಷವನ್ನು ಮರೆಮಾಡಿದನು.
ಆಗ ಮೇಘವೊಂದು ದೇವದರ್ಶನದ ಗುಡಾರವನ್ನು ಮುಚ್ಚಿತು; ಸರ್ವೇಶ್ವರನ ತೇಜಸ್ಸು ಗುಡಾರವನ್ನು ತುಂಬಿತ್ತು. ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಯಾಗಿ ಇದ್ದುದರಿಂದಲೂ ಸರ್ವೇಶ್ವರನ ತೇಜಸ್ಸು ಗುಡಾರದೊಳಗೆ ತುಂಬಿದ್ದುದರಿಂದಲೂ ಮೋಶೆ ಗುಡಾರದಲ್ಲಿ ಹೋಗಲಾರದೆ ಇದ್ದನು. ಆ ಮೇಘವು ಗುಡಾರವನ್ನು ಬಿಟ್ಟು ಮೇಲಕ್ಕೆ ಹೋದಾಗ ಇಸ್ರಯೇಲರು ಮುಂದಕ್ಕೆ ಪ್ರಯಾಣಮಾಡುತ್ತಿದ್ದರು;ಆ ಮೇಘವು ಬಿಡದೆ ಇರುವಾಗ ಅದು ಬಿಡುವ ತನಕ ಪ್ರಯಾಣ ಮಾಡದೆ ಇರುತ್ತಿದ್ದರು.ಇಸ್ರಯೇಲರ ಎಲ್ಲಾ ಪ್ರಯಾಣಗಳಲ್ಲಿಯೂ ಅವರ ಕಣ್ಣ ಮುಂದೆ ಹಗಲು ಹೊತ್ತಿನಲ್ಲಿ ಸರ್ವೇಶ್ವರನ ಮೇಘವು ಗುಡಾರದ ಮೇಲೆ ಇತ್ತು; ರಾತ್ರಿ ವೇಳೆಯಲ್ಲಿ ಆ ಮೇಘದೊಳಗೆ ಅಗ್ನಿಯು ಪ್ರಕಾಶಿಸುತ್ತಿತ್ತು.
ಕೀರ್ತನೆ - 84: 2-3, 4-5, 9-1೦
2 : ಹಂಬಲಿಸಿ ಸೊರಗಿಹೋಗಿದೆ ಎನ್ನ ಮನ / ಕಾಣಬೇಕೆಂದು ಪ್ರಭುವಿನ ಪ್ರಾಂಗಣ //
3 : ಸ್ವಾಮಿ ದೇವ, ಎನ್ನರಸ, ಸ್ವರ್ಗಸೇನಾಧೀ ಶ್ವರ / ದೊರಕಿದೆ ಗುಬ್ಬಿಗೆ ಗೂಡು ನಿನ್ನ ವೇದಿಕೆಯ ಹತ್ತಿರ / ಪಾರಿವಾಳಕ್ಕು ಅಲ್ಲೇ ಇದೆ ಮರಿಯಿಡಲು ಆಗರ //
4 : ನಿನ್ನ ಮಂದಿರದಲಿ ವಾಸಿಸುವವರು ಧನ್ಯರು / ನಿರಂತರವು ನಿನ್ನ ಗುಣಗಾನ ಮಾಡುವರವರು //
5 : ನಿನ್ನಿಂದ ಶಕ್ತಿಪಡೆಯುವವರು ಧನ್ಯರು / ಸಿಯೋನ್ ಶಿಖರಕ್ಕವರು ಪ್ರಿಯ ಯಾತ್ರಿಕರು //
9 : ನಿನ್ನ ಮಂದಿರದಲಿ ಕಳೆದ ದಿನವೊಂದು / ತಿಳಿವೆನು ಸಾವಿರ ದಿನಕೂ ಮೇಲೆಂದು //
10 : ದುರುಳರ ಬಿಡಾರದಲಿ ನಾ ವಾಸಮಾಡುವುದರ ಬದಲು / ನಿನ್ನಾಲಯದ ದ್ವಾರಪಾಲಕನಾಗಿರುವುದೆ ಮೇಲು //
ಶುಭಸಂದೇಶ - ಮತ್ತಾಯ 13: 47-53
"ಸ್ವರ್ಗಸಾಮ್ರಾಜ್ಯವನ್ನು ಒಂದು ಮೀನುಬಲೆಗೆ ಹೋಲಿಸಬಹುದು. ಬೆಸ್ತರು ಬಲೆಯನ್ನು ಸಮುದ್ರದಲ್ಲಿ ಬೀಸಿ ಎಲ್ಲಾ ಜಾತಿಯ ಮೀನುಗಳನ್ನು ಹಿಡಿಯುತ್ತಾರೆ.
ಬಲೆ ತುಂಬಿದ ಮೇಲೆ ಅದನ್ನು ದಡಕ್ಕೆ ಎಳೆದು, ಕಳಿತುಕೊಂಡು, ಒಳ್ಳೆಯ ಮೀನುಗಳನ್ನು ಮಾತ್ರ ಆರಿಸಿಕೊಂಡು ಬುಟ್ಟಿಗೆ ಹಾಕಿಕೊಳ್ಳುತ್ತಾರೆ; ಕೆಟ್ಟವನ್ನು ಎಸೆದುಬಿಡುತ್ತಾರೆ.
ಕಾಲಾಂತ್ಯದಲ್ಲಿ ಇದರಂತೆಯೇ ಆಗುವುದು; ದೇವದೂತರು ಹೊರಟುಬಂದು ದುರ್ಜನರನ್ನು ಸಜ್ಜನರಿಂದ ಬೇರ್ಪಡಿಸುವರು. ದುರ್ಜನರನ್ನು ಅಗ್ನಿಕುಂಡದಲ್ಲಿ ಹಾಕುವರು.ಅಲ್ಲಿ ಅವರು ಕಟಕಟನೆ ಹಲ್ಲು ಕಡಿದುಕೊಂಡು ಗೋಳಾಡುವರು."ಇದೆಲ್ಲ ನಿಮಗೆ ಅರ್ಥವಾಯಿತೇ?" ಎಂದು ಯೇಸುಸ್ವಾಮಿ ಕೇಳಿದರು. ಶಿಷ್ಯರು "ಅರ್ಥವಾಯಿತು" ಎಂದರು. ಆಗ ಯೇಸು, "ಇಂತಿರಲು, ಸ್ವರ್ಗಸಾಮ್ರಾಜ್ಯದಲ್ಲಿ ಶಿಷ್ಯನಾಗಿರುವ ಪ್ರತಿಯೊಬ್ಬ ಶಾಸ್ತ್ರಜ್ಞನು ಮನೆಯ ಯಜಮಾನ ಇದ್ದ ಹಾಗೆ. ಅವನು ತನ್ನ ಉಗ್ರಾಣದಿಂದ ಹೊಸ ಹಾಗೂ ಹಳೆಯ ವಸ್ತುಗಳನ್ನು ಹೊರಗೆ ತರುತ್ತಾ ಇರುತ್ತಾನೆ," ಎಂದರು.
ಈ ಸಾಮತಿಗಳನ್ನು ಹೇಳಿಯಾದ ಮೇಲೆ ಯೇಸುಸ್ವಾಮಿ ಅಲ್ಲಿಂದ ಹೊರಟು ಹೋದರು.
ಚಿಂತನೆ:
ಯೇಸುಸ್ವಾಮಿ ಜನರಿಗೆ ಅರ್ಥವಾಗುವ ರೀತಿ ಸರಳ ಭಾಷೆಯಲ್ಲಿ ಸ್ವರ್ಗ ಸಾಮ್ರಾಜ್ಯದ ಬಗ್ಗೆ ಬೋಧಿಸುತ್ತಿದ್ದರು. ತನ್ನ ಶಿಷ್ಯರಲ್ಲಿ ಬಹು ಮಂದಿ ಮೀನುಗಾರರಿದುದ್ದರಿಂದ ಅವರಿಗೆ ಅರ್ಥವಾಗುವ ರೀತಿ ದೇವರ ಸಾಮ್ರಾಜ್ಯವನ್ನು ಮೀನಿನ ಬಲೆಗೆ ಹೋಲಿಸುತ್ತಾರೆ. ಮೀನು ಹಿಡಿಯಲು ಬಲೆ ಬೀಸಿದಾಗ ಅದರಲ್ಲಿ ಎಲ್ಲ ಜಾತಿಯ ಮೀನುಗಳು ಸಿಕ್ಕಿ ಹಾಕಿಕೊಳ್ಳುತ್ತವೆ. ಅದೇ ರೀತಿ ದೇವರ ಸಾಮ್ರಾಜ್ಯ ಕೇವಲ ಒಂದು ವರ್ಗದವರಿಗೆ ಸೀಮಿತವಲ್ಲ ಅದು ಎಲ್ಲರ ಸ್ವತ್ತು. ಆದರೆ ಆ ಸಾಮ್ರಾಜ್ಯವನ್ನು ಸೇರಬೇಕಾದರೆ ಒಳ್ಳೆಯವರಾಗಿ ಜೀವಿಸಿ ಯೇಸುವಿನ ತತ್ವಗಳನ್ನು ಪಾಲಿಸಿದಾಗ ಮಾತ್ರ. ಹೇಗೆ ಮೀನುಗಾರ ಬಳಸಲು ಯೋಗ್ಯವಾದ ಮೀನುಗಳನ್ನು ಮಾತ್ರ ಆಯ್ದುಕೊಂದು ಕೆಟ್ಟ ಮೀನುಗಳನ್ನು ಬಿಸಾಡುತ್ತಾನೊ ಹಾಗೆಯೇ ದೇವರು ಉತ್ತಮರನ್ನು ಸ್ವರ್ಗಕ್ಕು ಅನೀತಿವಂತರನ್ನು, ಪಾಪಿಗಳನ್ನು ನರಕಕ್ಕು ದಬ್ಬುತ್ತಾರೆಂದು ಈ ಸಾಮತಿಯ ಮೂಲಕ ತಿಳಿಸಲಾಗಿದೆ.
No comments:
Post a Comment