24 ಕೆಂಪು ಶನಿ ಸಂತಬಾರ್ತೊಲೊಮಿಯೊ, (ಪ್ರೇಷಿತ) ಹಬ್ಬ
1ನೇ ವಾಚನ - ಪ್ರಕಟಣೆ: 21: 9-14
ಕೀರ್ತನೆ - 145: 1೦-11, 12-14, 19
ಶುಭಸಂದೇಶ - ಯೊವಾನ್ನ 1: 45-51
1ನೇ ವಾಚನ - ಪ್ರಕಟಣೆ: 21: 9-14
9 : ಏಳು ಅಂತಿಮ ವಿಪತ್ತುಗಳಿಂದ ತುಂಬಿದ್ದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ದೇವದೂತರುಗಳಲ್ಲಿ ಒಬ್ಬನು ಬಂದು, ನನ್ನೊಡನೆ ಮಾತನಾಡಿ ಇಂತೆಂದನು: “ಇಲ್ಲಿಗೆ ಬಾ, ಯಜ್ಞದ ಕುರಿಮರಿಗೆ ಸತಿಯಾಗಲಿರುವ ಮದುವಣಗಿತ್ತಿಯನ್ನು ನಿನಗೆ ತೋರಿಸುತ್ತೇನೆ,” ಎಂದನು.
10 : ಆಗ ನಾನು ಪವಿತ್ರಾತ್ಮವಶನಾದೆ. ಆ ದೇವದೂತನು ನನ್ನನ್ನು ಎತ್ತರವಾದ ಬೆಟ್ಟದ ಮೇಲೆ ಕೊಂಡೊಯ್ದನು. ಅಲ್ಲಿ ನನಗೆ ಪವಿತ್ರ ನಗರವಾದ ಜೆರುಸಲೇಮನ್ನು ತೋರಿಸಿದನು. ಅದು ಸ್ವರ್ಗದಲ್ಲಿರುವ ದೇವರ ಬಳಿಯಿಂದ ಕೆಳಗಿಳಿದು ಬರುತ್ತಿತ್ತು;
11 : ದೇವರ ತೇಜಸ್ಸಿನಿಂದ ಕೂಡಿತ್ತು; ಅಮೂಲ್ಯ ರತ್ನದಂತೆ ಹೊಳೆಯುತ್ತಿತ್ತು; ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು.
12 : ಆ ನಗರದ ಸುತ್ತಲೂ ಎತ್ತರವಾದ ಕೋಟೆಯಿತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳಿಗೆ ಹನ್ನೆರಡು ಮಂದಿ ದೇವದೂತರುಗಳು ಕಾವಲಿದ್ದರು. ಆ ಬಾಗಿಲುಗಳ ಮೇಲೆ ಇಸ್ರಯೇಲಿನ ಹನ್ನೆರಡು ಕುಲಗಳ ಹೆಸರುಗಳನ್ನು ಬರೆದಿತ್ತು.
13 : ಪೂರ್ವದಿಕ್ಕಿನಲ್ಲಿ ಮೂರು ಬಾಗಿಲುಗಳು, ಉತ್ತರ ದಿಕ್ಕಿನಲ್ಲಿ ಮೂರು ಬಾಗಿಲುಗಳು, ದಕ್ಷಿಣ ದಿಕ್ಕಿನಲ್ಲಿ ಮೂರು ಬಾಗಿಲುಗಳು ಮತ್ತು ಪಶ್ಚಿಮ ದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು.
14 : ಆ ನಗರದ ಕೋಟೆಗೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಹನ್ನೆರಡು ಹೆಸರುಗಳಿದ್ದವು. ಯಜ್ಞದ ಕುರಿಮರಿಯ ಹನ್ನೆರಡು ಪ್ರೇಷಿತರ ಹೆಸರುಗಳು ಅವು.
ಕೀರ್ತನೆ - 145: 1೦-11, 12-14, 19
10 : ಪ್ರಭು, ನಿನ್ನನು ಸ್ತುತಿಪುದು ಸೃಷ್ಟಿಯೆಲ್ಲವು / ಕೊಂಡಾಡುವುದು ನಿನ್ನನು ಭಕ್ತ ಸಮೂಹವು
11 : ಪ್ರಸಿದ್ಧಪಡಿಸುವರು ನಿನ್ನ ರಾಜ್ಯದ ಮಹತ್ವವನು / ವರ್ಣಿಸುವರವರು ನಿನ್ನ ಶಕ್ತಿ ಸಾಮಥ್ರ್ಯವನು
12 : ಅರಿವರಿಂತು ಜನರು ನಿನ್ನ ಶೂರ ಕಾರ್ಯಗಳನು / ಗ್ರಹಿಸುವರು ನಿನ್ನ ರಾಜ್ಯದ ಮಹಿಮೆ ಪ್ರಭಾವವನು
13 : ಶಾಶ್ವತವಾದುದು ನಿನ್ನ ರಾಜ್ಯವು / ಇರುವುದೆಂದಿಗು ನಿನ್ನ ಆಳ್ವಿಕೆಯು
14 : ನುಡಿಯಲಿ ಪ್ರಭು ಸದಾ ಪ್ರಾಮಾಣಿಕನು / ನಡೆಯಲಿ ಆತನು ಸದಾ ಪ್ರೀತಿಮಯನು
15 : ಎತ್ತುವನಾತ ಬಿದ್ದವರನೆಲ್ಲ / ಉದ್ಧರಿಪನು ಕುಗ್ಗಿದವರನೆಲ್ಲ
16 : ಎಲ್ಲ ಜೀವಿಗಳ ಕಣ್ಣು ಪ್ರಭು, ನಾಟಿವೆ ನಿನ್ನ ಕಡೆಗೆ / ಕಾಲಕಾಲಕೆ ಕೊಡುವೆ ಆಹಾರವನು ಅವುಗಳಿಗೆ
17 : ಎಲ್ಲ ಜೀವಿಗಳಿಗೆ ನೀ ಕೈ ನೀಡುವವನು / ಎಲ್ಲರ ಕೋರಿಕೆಗಳನು ಈಡೇರಿಸುವವನು
18 : ಪ್ರಭುವಿನ ಮಾರ್ಗ ಧರ್ಮಸಮ್ಮತ / ಆತನ ಕಾರ್ಯವೆಲ್ಲ ಪುನೀತ
ಶುಭಸಂದೇಶ - ಯೊವಾನ್ನ 1: 45-51
45 : ಫಿಲಿಪ್ಪನು ನತಾನಿಯೇಲನನ್ನು ಕಂಡು, “ಧರ್ಮಶಾಸ್ತ್ರದಲ್ಲಿ ಮೋಶೆ ಉಲ್ಲೇಖಿಸಿದ ಮತ್ತು ಪ್ರವಾದಿಗಳು ಪ್ರವಚನ ಮಾಡಿದ ವ್ಯಕ್ತಿಯು ನಮಗೆ ಸಿಕ್ಕಿದ್ದಾರೆ. ಇವರೇ ಜೋಸೆಫನ ಮಗನಾದ ನಜರೇತ್ ಊರಿನ ಯೇಸು,” ಎಂದು ಹೇಳಿದನು.
46 : ಅದಕ್ಕೆ ನತಾನಿಯೇಲನು, “ಏನು? ನಜರೇತಿನಿಂದ ಒಳ್ಳೆಯದೇನಾದರೂ ಬರುವುದು ಉಂಟೆ?” ಎಂದು ಕೇಳಲು, “ಬಂದು ನೀನೇ ನೋಡು,” ಎಂದು ಫಿಲಿಪ್ಪನು ಉತ್ತರಕೊಟ್ಟನು.
47 : ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು.
48 : ನತಾನಿಯೇಲನು, “ನನ್ನ ಪರಿಚಯ ನಿಮಗೆ ಹೇಗಾಯಿತು?” ಎಂದು ಕೇಳಲು ಯೇಸು, “ಫಿಲಿಪ್ಪನು ನಿನ್ನನ್ನು ಕರೆಯುವ ಮೊದಲೇ ನೀನು ಅಂಜೂರದ ಮರದಡಿ ಇದ್ದಾಗ ನಾನು ನಿನ್ನನ್ನು ಕಂಡೆ,” ಎಂದು ಉತ್ತರ ಕೊಟ್ಟರು.
49 : ಅದಕ್ಕೆ ನತಾನಿಯೇಲನು “ಗುರುದೇವಾ, ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,” ಎಂದನು.
50 : ಆಗ ಯೇಸು, “ಅಂಜೂರದ ಮರದಡಿಯಲ್ಲಿ ನಿನ್ನನ್ನು ಕಂಡೆ ಎಂದು ನಾನು ಹೇಳಿದ ಮಾತ್ರಕ್ಕೆ ಇಷ್ಟೊಂದು ವಿಶ್ವಾಸವೆ? ಇದಕ್ಕೂ ಮಿಗಿಲಾದುವುಗಳನ್ನು ನೀನು ಕಾಣುವೆ,” ಎಂದು ನುಡಿದರು.
51 ತಮ್ಮ ಮಾತನ್ನು ಮುಂದುವರಿಸುತ್ತಾ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಸ್ವರ್ಗವು ತೆರೆದಿರುವುದನ್ನೂ ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ,” ಎಂದು ಹೇಳಿದರು.
ಚಿಂತನೆ
ಚಿಂತನೆ
ಯೇಸುವಿನ
ಹನ್ನೆರಡು ಪ್ರೇಷಿತರಲ್ಲಿ ಬರ್ತಲೋಮೇಯ ಕೂಡ ಒಬ್ಬರು (ಮತ್ತಾಯ 10:3). ಅನೇಕ ಬೈಬಲ್ ವಿದ್ವಾಂಸರು
ಬರ್ತೊಲೋಮೇಯ ಹೆಸರನ್ನು ನತಾನಿಯೇಲನ ಹೆಸರೊಂದಿಗೆ ತಾಳೆಹಾಕಿ ಇಬ್ಬರೂ ಒಬ್ಬ ವ್ಯಕ್ತಿ ಎಂಬ ಅಭಿಪ್ರಾಯ
ವ್ಯಕ್ತಪಡಿಸುತ್ತಾರೆ. ಫಿಲಿಪ್ಪನು ನತಾನಿಯೇಲನನ್ನು ಯೇಸುವಿನ ಬಳಿ ಕರೆತರುತ್ತಾನೆ.(ಯೊವಾನ್ನ
1:46-47) ಬಹುಶಃ ಇವರಿಬ್ಬರೂ ಗೆಳಯರಾಗಿರಬೇಕು. “ಇಗೋ ನೋಡಿ ನಿಜವಾದ ಇಸ್ರಾಯೇಲನು, ಈತನಲ್ಲಿ ಕಪಟವಿಲ್ಲ”
ಎಂದು ಯೇಸು ಹೇಳಿದ್ದು ಈತನನ್ನು ಕುರಿತೇ.
ನಜರೇತಿನಿಂದ
ಏನಾದರೂ ಒಳ್ಳೇ್ಯದು ಬರುವುದುಂಟೇ? ಎಂದು ಫಿಲಿಪ್ಪನನ್ನು ಕೇಳಿದವನು ಈ ನತಾನಿಯೇಲನೇ. ಹಳೆಯ ಒಡಂಬಡಿಕೆಯಲ್ಲಿ
ನಜರೇತಿನಿಂದ ರಕ್ಷಕನು ಬರುತ್ತಾನೆಂದು ಉಲ್ಲೇಖವಿಲ್ಲ; ಆದ್ದರಿಂದ ನತಾನಿಯೇಲನು ಆ ರೀತಿ ನುಡಿದ, ಯೇಸುವನ್ನು
ಭೇಟಿಯಾಗುವ ಮನ್ನ ನತಾನಿಯೇಲ ಅಂಜೂರದ ಮರದಡಿ ಇದ್ದ. ಯೆಹೂದ್ಯರಲ್ಲಿ ಅಂಜೂರದ ಮರವು ಶಾಂತಿಯ ಮತ್ತು
ದ್ಯಾನದ ಸಂಕೇತವಾಗಿತ್ತು. ಯೇಸುವಿನ ಭೇಟಿಯ ಬಳಿಕ ನತಾನಿಯೇಲನು ಯೇಸುವನ್ನು ಕುರಿತು ಹೀಗೆಂದು ನುಡಿಯುತ್ತಾನೆ
“ಗುರುದೇವಾ, ದೇವರ ಪುತ್ರ ನೀವೇ ಇಸ್ರಾಯೇಲರ ಅರಸ ನೀವೇ (ಯೊವಾನ್ನ 1:49).
No comments:
Post a Comment