ಸಾಧಾರಣ ಕಾಲದ ಹದಿನೆಂಟನೇ ವಾರ ಶನಿವಾರ
10/ಕೆಂಪು/ಶನಿ/ಸಂತಲಾರೆನ್ಸ್ (ಸೇ.ದ ಮತ್ತು ರ.ಸಾ) ಹಬ್ಬ
1ನೇ ವಾಚನ - 2 ಕೊರಿಂಥ 9: 6-1೦
ಕೀರ್ತನೆ - 112: 1-2, 5-9
ಯೊವಾನ್ನಾ: 12: 24-26
1ನೇ ವಾಚನ - 2 ಕೊರಿಂಥ 9: 6-1೦
10/ಕೆಂಪು/ಶನಿ/ಸಂತಲಾರೆನ್ಸ್ (ಸೇ.ದ ಮತ್ತು ರ.ಸಾ) ಹಬ್ಬ
1ನೇ ವಾಚನ - 2 ಕೊರಿಂಥ 9: 6-1೦
ಕೀರ್ತನೆ - 112: 1-2, 5-9
ಯೊವಾನ್ನಾ: 12: 24-26
1ನೇ ವಾಚನ - 2 ಕೊರಿಂಥ 9: 6-1೦
ವಿರಳವಾಗಿ ಬಿತ್ತುವವನು ವಿರಳವಾಗಿ ಕೊಯ್ಯತ್ತಾನೆ. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ. ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಷ್ಟು ನೀಡಲಿ. ಒಲ್ಲದ ಮನಸ್ಸಿನಿಂದಾಗಲಿ ಬಲಾತ್ಕಾರದಿಂದಾಗಲಿ ಕೊಡುವುದು ಬೇಡ. ನಗುನಗುತ್ತಾ ನೀಡುವಾತನನ್ನು ದೇವರು ಪ್ರೀತಿಸುತ್ತಾರೆ. ಸಕಲ ವಿಧವಾದ ವರದಾನಗಳನ್ನು ನಿಮಗೆ ಯಥೇಚ್ಛವಾಗಿ ನೀಡಬಲ್ಲ ಶಕ್ತಿ ದೇವರಿಗಿದೆ. ನೀವು ಸದಾ ಸಮೃದ್ಧಿಯಿಂದಿರುವಿರಿ. ಹೀಗೆ ಸಕಲ ಸತ್ಕಾರ್ಯಗಳಿಗೆ ಹೃತ್ಪೂರ್ವಕವಾಗಿ ನೆರವಾಗುವಿರಿ. “ದೀನದಲಿತರಿಗೆ ಧಾರಾಳವಾಗಿ ನೀಡುವನು; ಅನವರತ ಇರುವುದು ಅವನ ದಾನಧರ್ಮದ ಫಲವು,” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ಊಟವನ್ನೂ ಒದಗಿಸುವ ದೇವರು, ಬಿತ್ತನೆಗೆ ಬೇಕಾದ ಬೀಜವನ್ನು ನಿಮಗೂ ಕೊಟ್ಟು ಅದನ್ನು ಬೆಳೆಸುವರು. ನಿಮ್ಮ ದಾನಧರ್ಮದ ಫಲಗಳು ಸಮೃದ್ಧಿಗೊಳ್ಳುವಂತೆ ಮಾಡುವರು.
ಕೀರ್ತನೆ - 112: 1-2, 5-9
ದಯೆತೋರಿ ಧನಸಹಾಯ ಮಾಡುವವನು ಭಾಗ್ಯವಂತ
ದಯೆತೋರಿ ಧನಸಹಾಯ ಮಾಡುವವನು ಭಾಗ್ಯವಂತ
1 : ಅಲ್ಲೆಲೂಯ / ಪ್ರಭುವಿನಲಿ ಭಯಭಕ್ತಿ ಉಳ್ಳವನು ಧನ್ಯನು / ಆತನಾಜ್ಞೆಗಳಲಿ ಹಿಗ್ಗುವವನು ಭಾಗ್ಯನು //
2 : ಬಲಿಷ್ಠವಾಗುವುದು ಜಗದೊಳು ಅವನ ಸಂತಾನ / ಸಜ್ಜನರ ಸಂತತಿ ಪಡೆವುದು ಆಶೀರ್ವಚನ //
5 : ದಯೆತೋರಿ ಧನಸಹಾಯ ಮಾಡುವವನು ಭಾಗ್ಯವಂತ /ನ್ಯಾಯದಿಂದ ವ್ಯವಹರಿಸುವಂಥಾ ಮನುಜನು ಭಾಗ್ಯವಂತ //
6 : ಅಚಲನಾಗಿರುವನು ನೀತಿವಂತನು / ಮರೆಯಲಾರರು ಎಂದಿಗೂ ಆತನನು //
7 : ಅಶುಭವಾರ್ತೆಯ ಭಯಭೀತಿ ಯಾವುದೂ ಅವನಿಗಿಲ್ಲ / ಪ್ರಭುವಿನಲಿ ಭರವಸೆಯಿಟ್ಟ ಆ ಮನವು ಅಸ್ಥಿರವಲ್ಲ //
8 : ದೃಢವಿದೆ ಅವನ ಮನ, ಎದೆಗುಂದನವನು / ಕಾಣುವನು ದುರುಳರಿಗಾಗುವ ದಂಡನೆಯನು //
9 : ಉದಾರತೆಯಿಂದ ಕೊಡುವನು ಬಡವರಿಗೆ / ಫಲಿಸುವುದು ಅವನಾ ನೀತಿ ಸದಾಕಾಲಕೆ / ಮಹಿಮೆತರುವ ಕೋಡುಮೂಡುವುದು ಅವನಿಗೆ //
ಯೊವಾನ್ನಾ: 12: 24-26
ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಅದು ಒಂಟಿಯಾಗಿ ಉಳಿಯುತ್ತದೆ; ಅದು ಸತ್ತರೆ ಮಾತ್ರ ಸಮೃದ್ಧಿಯಾದ ಫಲವನ್ನು ಕೊಡುತ್ತದೆ. ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುತ್ತಾನೆ. ತನ್ನ ಪ್ರಾಣವನ್ನು ಈ ಲೋಕದಲ್ಲಿ ದ್ವೇಷಿಸುವವನು ಅದನ್ನು ನಿತ್ಯ ಜೀವಕ್ಕಾಗಿ ಕಾಯ್ದಿರಿಸಿಕೊಳ್ಳುತ್ತಾನೆ. ನನ್ನ ಸೇವೆ ಮಾಡಬೇಕೆಂದಿರುವವನು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕನೂ ಇರುತ್ತಾನೆ. ನನ್ನ ಸೇವೆ ಮಾಡುವವನು ನನ್ನ ಪಿತನಿಂದ ಸನ್ಮಾನಹೊಂದುತ್ತಾನೆ,” ಎಂದರು.
ಚಿಂತನೆ: ( ಕೃಪೆ: ಬೈಬಲ್ ಡೈರಿ)
ಸಂತ ಲಾರೆನ್ಸ್ ಒಬ್ಬ ಉಪಯಾಜಕ ಮತ್ತು ರಕ್ತಸಾಕ್ಷಿ. ಲಾರೆನ್ಸ್ ರವರಿಗೆ ಬಡ ಬಗ್ಗರ ಮೇಲೆ ಅಪಾರ ಪ್ರೀತಿ ಮತ್ತು ಕಾಳಜಿ. ರೋಮ್ ಸೈನ್ಯದ ದಂಡನಾಯಕ ಕ್ರೈಸ್ತ ದೇವಾಲಯಗಳಲ್ಲಿ ಬಹಳಷ್ಟು ಚಿನ್ನ, ಬೆಳ್ಳಿ , ಅಪಾರವಾದ ಸಂಪತ್ತು ಇರುವುದೆಂದು ತಿಳಿದು ಸಂತ ಲಾರೆನ್ಸ್ ರವರನ್ನು ಕರೆದು ದೇವಾಲಯದಲ್ಲಿರುವ ಚಿನ್ನದ ಬಟ್ಟಲು, ಮೇಣದ ಬತ್ತಿಯ ಪಾತ್ರೆಗಳನ್ನು ಒಪ್ಪಿಸುವಂತೆ ಆದೇಶಿಸುತ್ತಾನೆ. ಮೂರು ದಿನಗಳ ಕಾಲಾವಕಾಶ ಕೇಳಿದ ಸಂತ ಲಾರೆನ್ಸ್ ತನ್ನ ವಶದಲ್ಲಿದ್ದ ಎಲ್ಲಾ ಹಣವನ್ನು ಬಡಬಗ್ಗರಿಗೆ ಹಂಚುತ್ತಾರೆ. ಚಿನ್ನದ ಪೂಜಾ ಪಾತ್ರೆಯನ್ನು ಮಾರಿ ಬಡವರಿಗೆ ನೀಡುತ್ತಾರೆ. ಮೂರು ದಿನಗಳ ನಂತರ ಕುರುಡರು, ಕುಂಟರು, ಅಂಗವಿಕಲರು, ನಿರ್ಗತಿಕರು ಮತ್ತು ಬಡಬಗ್ಗರನ್ನು ಒಟ್ಟಿಗೆ ನಿಲ್ಲಿಸಿ ದಂಡನಾಯಕನ ಆಗಮನಕ್ಕೆ ಕಾಯುತ್ತಾನೆ. ದಂಡನಾಯಕನು ಬಂದಾಗ ಎದುರಿಗಿದ್ದವರನ್ನು ತೋರಿಸಿ " ಇಗೊ ನಮ್ಮ ದೇವಾಲಯದ ಆಸ್ತಿ" ಎನ್ನುತ್ತಾನೆ. ಕುಪಿತಗೊಂಡ ದಂಡನಾಯಕ ದೊಡ್ಡ ಬಾಣಲೆಯ ಉರಿಯುವ ಕೆಂಡಗಳ ಮೇಲೆ ಲಾರೆನ್ಸ್‍ರನ್ನು ಮಲಗಿಸಿ ಜೀವ ತೆಗೆಯುತ್ತಾರೆ.

No comments:
Post a Comment