ಸಾಧಾರಣ ಕಾಲದ ಇಪ್ಪತ್ನಾಲ್ಕನೇ ವಾರ ಶನಿವಾರ
21/ಕೆಂಪು/ಶನಿ/ಸಂತ ಮತ್ತಾಯ, (ಪ್ರೇಷಿತ ಮತ್ತು ಶು.ಕ)ಹಬ್ಬ
1ನೇ ವಾಚನ - ಎಫೆ: 4: 1-7, 11-13
ಕೀರ್ತನೆ - 19: 1-4
ಶುಭಸಂದೇಶ - ಮತ್ತಾಯ 9: 9-13
21/ಕೆಂಪು/ಶನಿ/ಸಂತ ಮತ್ತಾಯ, (ಪ್ರೇಷಿತ ಮತ್ತು ಶು.ಕ)ಹಬ್ಬ
1ನೇ ವಾಚನ - ಎಫೆ: 4: 1-7, 11-13
ಕೀರ್ತನೆ - 19: 1-4
ಶುಭಸಂದೇಶ - ಮತ್ತಾಯ 9: 9-13
1ನೇ ವಾಚನ - ಎಫೆ: 4: 1-7, 11-13
ಪ್ರಭುವಿನ ಸೇವೆಯ ನಿಮಿತ್ತ ಸೆರೆಯಾಳಾಗಿ ಇರುವ ನಾನು ನಿಮ್ಮಲ್ಲಿ ಬಿನ್ನವಿಸುವುದು ಏನೆಂದರೆ: ದೇವರ ಕರೆಗೆ ಅನುಗುಣವಾಗಿ ಯೋಗ್ಯ ಬಾಳುವೆ ನಡೆಸಿರಿ. ಯಾವಾಗಲೂ ದೀನದಯಾಳತೆ, ವಿನಯಶೀಲತೆ ಹಾಗೂ ಶಾಂತಿಸಮಾಧಾನವುಳ್ಳವರಾಗಿರಿ. ಪರಸ್ಪರ ಪ್ರೀತಿಯಿಂದಲೂ ಸಹನೆಯಿಂದಲೂ ವರ್ತಿಸಿರಿ. ಪವಿತ್ರಾತ್ಮರಿಂದ ಉಂಟಾಗುವ ಐಕ್ಯತೆಯನ್ನು ಕಾಪಾಡಿಕೊಳ್ಳಲು ಆಸಕ್ತರಾಗಿರಿ. ಅದು ನಿಮ್ಮನ್ನು ಸಮಾಧಾನದಲ್ಲಿ ಬಂಧಿಸುವುದು.
4ನೀವೆಲ್ಲರೂ ಒಂದೇ ಶರೀರಕ್ಕೆ ಸೇರಿದವರು; ಒಬ್ಬರೇ ಪವಿತ್ರಾತ್ಮರನ್ನು ಪಡೆದವರು; ಒಂದೇ ನಿರೀಕ್ಷೆಗಾಗಿ ಕರೆಹೊಂದಿದವರು. ನಮ್ಮೆಲ್ಲರಿಗೂ ಪ್ರಭು ಒಬ್ಬರೇ; ವಿಶ್ವಾಸವೂ ಒಂದೇ; ದೀಕ್ಷಾಸ್ನಾನವೂ ಒಂದೇ. 6ದೇವರು ಒಬ್ಬರೇ, ಸರ್ವರ ತಂದೆಯು ಅವರೇ; ಸರ್ವಶ್ರೇಷ್ಠರೂ ಅವರೇ; ಸರ್ವರ ಮೂಲಕ ಕಾರ್ಯ ನಿರ್ವಹಿಸುವವರೂ ಅವರೇ ಮತ್ತು ಸಮಸ್ತರಲ್ಲಿ ವಾಸಿಸುವವರೂ ಅವರೇ. ಆದರೂ ನಮ್ಮಲ್ಲಿ ಪ್ರತಿಯೊಬ್ಬನೂ ಕ್ರಿಸ್ತಯೇಸು ಅನುಗ್ರಹಿಸುವ ಪ್ರಕಾರವೇ ವರಗಳನ್ನು ಪಡೆದಿದ್ದಾನೆ. ಈ ವ್ಯಕ್ತಿ ನರಮಾನವರಿಗೆ ವರದಾನಗಳನ್ನಿತ್ತರು. ಕೆಲವರನ್ನು ಪ್ರೇಷಿತರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಬೋಧಕರನ್ನಾಗಿಯೂ ನೇಮಿಸಿದರು. ದೇವಜನರನ್ನು ಪರಿಣತರನ್ನಾಗಿಸಿ ದೇವರ ಸೇವೆಗೆ ಸಿದ್ದಗೊಳಿಸಲೆಂದು ಮತ್ತು ಯೇಸುಕ್ರಿಸ್ತರ ದೇಹವಾದ ಧರ್ಮಸಭೆ ಅಭಿವೃದ್ಧಿ ಹೊಂದಲೆಂದು ಈ ವರಗಳನ್ನು ಅವರಿಗೆ ನೀಡಿದರು. ಹೀಗೆ ನಾವೆಲ್ಲರೂ ಒಂದೇ ವಿಶ್ವಾಸದಿಂದಲೂ ದೇವರ ಪುತ್ರನನ್ನು ಕುರಿತ ಜ್ಞಾನದಿಂದಲೂ ಐಕಮತ್ಯವನ್ನು ಮತ್ತು ಪರಿಪಕ್ವತೆಯನ್ನು ಪಡೆಯುತ್ತೇವೆ. ಜ್ಞಾನಾರ್ಜನೆಯನ್ನು ಪಡೆದವರಾಗಿ, ಕ್ರಿಸ್ತಯೇಸುವಿನ ಪರಪೂರ್ಣತೆಯ ಮಟ್ಟವನ್ನು ಮುಟ್ಟುತ್ತೇವೆ.
ಕೀರ್ತನೆ - 19: 1-4
1 : ಆಕಾಶಮಂಡಲ ಸಾರುತಿದೆ ದೇವರ ಮಹಿಮೆಯನು / ತಾರಾಮಂಡಲ ತೋರುತಿದೆ ದೇವರ ಕೈಕೃತಿಗಳನು //
2 : ದಿನವು ಮರುದಿನಕೆ ಮಾಡುತಿದೆ ಈ ಪ್ರಕಟಣೆಯನು | ರಾತ್ರಿ ಮರುರಾತ್ರಿಗೆ ನೀಡುತಿದೆ ಈ ಪ್ರಚಾರವನು ||
3 : ಅವುಗಳಿಗೆ ಮಾತಿಲ್ಲ; ಅವುಗಳಿಗೆ ಶಬ್ದವಿಲ್ಲ / ಅವುಗಳ ಸ್ವರವಂತೂ ಕೇಳಿ ಬರುವುದಿಲ್ಲ //
4 : ಆದರೂ ಅವುಗಳ ಧ್ವನಿರೇಖೆ ಹರಡಿದೆ ಬುವಿಯಾದ್ಯಂತ / ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ //
5 : ನಿರ್ಮಿಸಿಹನಲ್ಲಿ ದೇವನು ಗುಡಾರವೊಂದನು ಸೂರ್ಯನಿಗೆ / ಬರುತಿಹನಾ ರವಿ ವರನಂತೆ ಧಾರಾಗೃಹದಿಂದ ಹೊರಗೆ / ಶೂರನಂತೆ, ಓಟದ ಪಥದಲ್ಲೋಡಲು ಹರುಷದೊಂದಿಗೆ //
6 : ಏರುತಿಹನು ದಿಗಂತದೊಂದು ಕೊನೆಯಿಂದ ಮತ್ತೊಂದು ಕೊನೆಗೆ | ಮುಚ್ಚುಮರೆಯಾದುದೊಂದೂ ಇರದು, ಆತನಾ ಉರಿಗಣ್ಣಿಗೆ ||
ಶುಭಸಂದೇಶ - ಮತ್ತಾಯ 9: 9-13
ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು ಮುಂದಕ್ಕೆ ಹೋಗುತ್ತಿದ್ದಾಗ ಮತ್ತಾಯ ಎಂಬುವನನ್ನು ಕಂಡರು. ಅವನು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿದ್ದನು. "ನನ್ನನ್ನು ಹಿಂಬಾಲಿಸು," ಎಂದು ಹೇಳಿ ಯೇಸು ಅವನನ್ನು ಕರೆದರು. ಮತ್ತಾಯನು ಎದ್ದು ಅವರನ್ನು ಹಿಂಬಾಲಿಸಿದನು. ಇದಾದ ಮೇಲೆ ಯೇಸುಸ್ವಾಮಿ ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತಿದ್ದರು. ಬಹುಮಂದಿ ‘ಸುಂಕದವರೂ’, ‘ಪಾಪಿಷ್ಠರೂ’ ಅಲ್ಲಿಗೆ ಬಂದರು. ಯೇಸು ಮತ್ತು ಅವರ ಶಿಷ್ಯರು ಕುಳಿತಿದ್ದ ಪಂಕ್ತಿಯಲ್ಲೇ ಇವರೂ ಊಟಕ್ಕೆ ಕುಳಿತರು. ಫರಿಸಾಯರು ಇದನ್ನು ಕಂಡದ್ದೇ ಯೇಸುವಿನ ಶಿಷ್ಯರನ್ನು ಉದ್ದೇಶಿಸಿ, "ನಿಮ್ಮ ಗುರು ಇಂತಹ ಬಹಿಷ್ಕøತ ಜನರ ಜೊತೆಯಲ್ಲಿ ಊಟ ಮಾಡುವುದೇ?" ಎಂದು ಆಕ್ಷೇಪಿಸಿದರು. ಇದನ್ನು ಕೇಳಿಸಿಕೊಂಡ ಯೇಸು, "ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ; ಆರೋಗ್ಯವಂತರಿಗಲ್ಲ. ನೀವು ಹೋಗಿ, "ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ" ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು" ಎಂದರು.
ಚಿಂತನೆ
ಸಂತ
ಮತ್ತಾಯ (ಪ್ರೇಷಿತ ಮತ್ತು ಶುಭಸಂದೇಶಕರ್ತ)
ದೇವರ ವಾಕ್ಯ ಪ್ರಭುಯೇಸುವೇ
ಆಗಿದ್ದಾರೆ. ಅವರನ್ನು ಕೇಳುವುದೇ ಒಂದು ಭಾಗ್ಯವಾಗಿದೆ. ಯೇಸು ಪ್ರಭು ಬಿತ್ತುವವನ ಸಾಮತಿಯನ್ನು ಇಂದಿನ
ಶುಭಸಂದೇಶದಲ್ಲಿ ಬೋಧಿಸುತ್ತಾರೆ. ಈ ಸಾಮತಿಯಲ್ಲಿ ನಾಲ್ಕು ಬಗೆಯ ಕೇಳುಗರನ್ನು ಕಾಣುತ್ತೇವೆ.
೧. ಪೂರ್ವಾಗ್ರಹ
ಪೀಡಿತ ಕೇಳುಗರು: ಇಂತವರ ಮನಸ್ಸು ಮುಚ್ಚಿದೆ. ಇವರಿಗೆ ಬೋಧಿಸುವುದು ಕಷ್ಟ.
೨. ಅಳುವಿಲ್ಲದ
ಕೇಳುಗರು: ಕೇಳಿದ ವಿಷಯಗಳ ಬಗ್ಗೆ ವಿಮರ್ಶಿಸಿ, ಧ್ಯಾನಿಸಲು ಆಸಕ್ತರಾಗಿರುತ್ತಾರೆ. ಮತ್ತು ಇವರಲ್ಲಿ
ಆಧ್ಯಾತ್ಮಿಕ ಆಳದ ಅಭಾವ ಇರುತ್ತದೆ.
೩. ಮೂರನೇ ವಿಧವಾದ
ವ್ಯಕ್ತಿಗಳು ಕೇಳುತ್ತಾರೆ. ನೈಜ ಆಧ್ಯಾತಿಕತೆ ಇರುವುದಿಲ್ಲ. ಇವರಿಗೆ ಪ್ರಾರ್ಥನೆ ಮಾಡಲು, ದೇವರ ವಾಕ್ಯವನ್ನು
ಓದಿ ಪಾಲಿಸಲು ಸಮಯವಿಲ್ಲ.
೪. ನಾಲ್ಕನೇ ವಿಧವಾದ
ವ್ಯಕ್ತಿಗಳು: ಮುಕ್ತ ಮನಸ್ಸಿನ ವ್ಯಕ್ತಿಗಳಾಗಿದ್ದಾರೆ. ಉತ್ಸುಕತೆಯಿಂದ ಕೇಳುತ್ತಾರೆ. ಪಾಲಿಸುತ್ತಾರೆ
೩೦%, ೬೦%, ೧೦೦% ಫಲವನ್ನು ನೀಡುತ್ತಾರೆ.
No comments:
Post a Comment