ಸಾಧಾರಣ ಕಾಲದ ಇಪ್ಪತ್ತೈದನೇ ವಾರ ಮಂಗಳವಾರ
24/ಹಸಿರು/ಮಂಗಳ
1ನೇ ವಾಚನ - ಎಜ್ರ 6: 7-8, 14-2೦
ಕೀರ್ತನೆ - 121: 1-5
ಶುಭಸಂದೇಶ - ಲೂಕ 8: 19-21
24/ಹಸಿರು/ಮಂಗಳ
1ನೇ ವಾಚನ - ಎಜ್ರ 6: 7-8, 14-2೦
ಕೀರ್ತನೆ - 121: 1-5
ಶುಭಸಂದೇಶ - ಲೂಕ 8: 19-21
1ನೇ ವಾಚನ - ಎಜ್ರ 6: 7-8, 14-2೦
ಆ ದೇವಾಲಯವನ್ನು ಕಟ್ಟುವ ಕೆಲಸಕ್ಕೆ ಅಡ್ಡಿಮಾಡಬೇಡಿ; ಜುದೇಯದ ರಾಜ್ಯಪಾಲ ಮತ್ತು ಯೆಹೂದ್ಯರ ಹಿರಿಯರೇ ಅದನ್ನು ಅದರ ಸ್ಥಳದಲ್ಲಿ ಕಟ್ಟಲಿ. ಆ ದೇವಾಲಯವನ್ನು ಕಟ್ಟುವುದಕ್ಕಾಗಿ ನೀವು ಯೆಹೂದ್ಯರ ಹಿರಿಯರಿಗೆ ರಾಜರ ಸೊತ್ತಿನಿಂದ ಅಂದರೆ, ನದಿಯಾಚೆಯ ಪ್ರಾಂತ್ಯಗಳ ತೆರಿಗೆಯಿಂದ ತಡಮಾಡದೆ ಎಲ್ಲ ವೆಚ್ಚವನ್ನು ಕೊಡಬೇಕು. ಯೆಹೂದ್ಯರ ಹಿರಿಯರು ಪ್ರವಾದಿ ಹಗ್ಗೈ ಹಾಗು ಇದ್ದೋವಿನ ಮಗ ಜೆಕರೀಯ ಅವರ ಪ್ರಬೋಧನೆಯಿಂದ ಪ್ರೇರಿತರಾಗಿ, ಕಟ್ಟುವ ಕೆಲಸವನ್ನು ಮುಂದುವರಿಸಿದರು. ಇಸ್ರಯೇಲ್ ದೇವರ ಆಜ್ಞಾನುಸಾರ ಪರ್ಷಿಯದ ರಾಜ ಸೈರಸನ, ದಾರ್ಯಾವೆಷ್ ಹಾಗು ಆರ್ತಷಸ್ತ ಅವರ ಅಪ್ಪಣೆಯ ಆಧಾರದಿಂದ ಕಟ್ಟಡವನ್ನು ಮುಗಿಸಿದರು. ಅರಸ ದಾರ್ಯಾವೆಷನ ಆಳ್ವಿಕೆಯ ಆರನೆಯ ವರ್ಷದ ಫಾಲ್ಗುಣ ಮಾಸದ ಮೂರನೆಯ ದಿನದಲ್ಲಿ ಆಲಯವನ್ನು ಪೂರೈಸಿದರು. ಯಾಜಕರು, ಲೇವಿಯರು ಹಾಗು ಸೆರೆಯಿಂದ ಹಿಂದಿರುಗಿ ಬಂದ ಬೇರೆ ಇಸ್ರಯೇಲರು ಸಂತೋಷದಿಂದ ಆ ದೇವಾಲಯದ ಪ್ರತಿಷ್ಠೆಯನ್ನು ಆಚರಿಸಿದರು. ಅವರು ಆ ದೇವಾಲಯದ ಪ್ರತಿಷ್ಠೆಗಾಗಿ ನೂರು ಹೋರಿ, ಇನ್ನೂರು ಟಗರು ಹಾಗು ನಾನೂರು ಕುರಿಮರಿಗಳನ್ನು ಅರ್ಪಿಸಿದರು. ಅಲ್ಲದೆ ಇಸ್ರಯೇಲರ ದೋಷಪರಿಹಾರಾರ್ಥವಾಗಿ, ಅವರ ಕುಲಗಳ ಸಂಖ್ಯಾನುಸಾರ, ಹನ್ನೆರಡು ಹೋತಗಳನ್ನೂ ಸಮರ್ಪಿಸಿದರು. ಆಮೇಲೆ ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳನ್ನು, ಮೋಶೆಯ ಧರ್ಮಶಾಸ್ತ್ರನಿಯಮದ ಪ್ರಕಾರ, ಜೆರುಸಲೇಮಿನ ದೇವರ ಸೇವೆಗೆ ನೇಮಿಸಿದರು. ಸೆರೆಯಿಂದ ಬಂದವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಾಸ್ಕವನ್ನು ಆಚರಿಸಿದರು. ಯಾಜಕರು ಹಾಗು ಲೇವಿಯರು ತಮ್ಮನ್ನು ಶುದ್ಧಿಪಡಿಸಿಕೊಂಡರು. ಎಲ್ಲರೂ ಶುದ್ಧರಾದನಂತರ ಲೇವಿಯರು ಸೆರೆಯಿಂದ ಬಂದವರಿಗಾಗಿ, ತಮ್ಮ ಬಂಧುಗಳಾದ ಯಾಜಕರಿಗಾಗಿ ಹಾಗು ತಮಗಾಗಿ ಪಾಸ್ಕದ ಕುರಿಮರಿಗಳನ್ನು ವಧಿಸಿದರು.
ಕೀರ್ತನೆ - 121: 1-5
1 : ಪ್ರಭುವಿನಾಲಯಕೆ ಹೋಗೋಣ ಬಾ ಎಂದಾಗ / ಆಯಿತೆನಗೆ ಆನಂದ, ಜನರೆನ್ನ ಕರೆದಾಗ
2 : ನಮ್ಮ ಕಾಲುಗಳು ಓ ಜೆರುಸಲೇಮೇ / ತಲುಪಿವೆ ನಿನ್ನ ಪುರದ್ವಾರಗಳನೇ
3 : ನೋಡು, ಜೆರುಸಲೇಮ್ ಪಟ್ಟಣವಿದು / ಗಟ್ಟಿಯಾಗಿಯೆ ಕಟ್ಟಲ್ಪಟ್ಟಿಹುದು
4 : ಕುಲಗಳು ಯಾತ್ರೆಯಾಗಿ ಬರುವುವು ಇಲ್ಲಿಗೆ / ಮಾಡುವರಿಲ್ಲಿಯೆ ಪ್ರಭುವಿನ ನಾಮ ಕೀರ್ತನೆ / ಪಾಲಿಪರಿಂತು ಇಸ್ರೇಲರಿಗೆ ವಿಧಿಸಿದಾಜ್ಞೆ
5 : ಸ್ಥಾಪಿತವಾಗಿವೆಯಿಲ್ಲಿ ನ್ಯಾಯಪೀಠಗಳು / ದಾವೀದನ ಮನೆತನದವರ ಸಿಂಹಾಸನ ಗಳು
ಶುಭಸಂದೇಶ - ಲೂಕ 8: 19-21
ಯೇಸುಸ್ವಾಮಿಯ ತಾಯಿ ಹಾಗೂ ಸಹೋದರರು ಯೇಸು ಇದ್ದೆಡೆಗೆ ಬಂದರು. ಆದರೆ ಜನಸಂದಣಿಯ ನಿಮಿತ್ತ ಹತ್ತಿರಕ್ಕೆ ಬರಲಾಗಲಿಲ್ಲ. ಯೇಸುವಿಗೆ, “ನಿಮ್ಮ ತಾಯಿಯು ಮತ್ತು ಸಹೋದರರು ನಿಮ್ಮನ್ನು ಕಾಣಬೇಕೆಂದು ಹೊರಗೆ ನಿಂತಿದ್ದಾರೆ,” ಎಂದು ತಿಳಿಸಲಾಯಿತು. ಅದಕ್ಕೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನಗೆ ತಾಯಿ ಮತ್ತು ಅಣ್ಣ ತಮ್ಮಂದಿರು,” ಎಂದರು.
ಚಿಂತನೆ
ಯೇಸು ಮರಿಯ
ಪುತ್ರ ಎಂಬುವುದು ದೈಹಿಕ ಸಂಬಂಧದಿಂದ ಕಾಣಿಸಿದರೆ ಅದು ನಿಜ. ಇಲ್ಲಿ ದೈಹಿಕ ಸಂಬಂಧ ಎಷ್ಟು ಮುಖ್ಯವಾಯಿತೋ ದೈವಿಕ ಸಂಬಂಧವು ಕೂಡ
ಅಷ್ಟೇ ಮುಖ್ಯವಾಗಿದೆ ದೇವರ ವಾಕ್ಯವನ್ನು ಆಲಿಸಿ ಅದರಂತೆ ನಡೆದು ಇತರರಿಗೆ ಮಾದರಿಯಾದವರು ಮಾತೆ ಮರಿಯ.
ಯೇಸುವನ್ನು ಗರ್ಭಧರಿಸುವ ಮುನ್ನ ಆಕೆ ದೇವರ ವಾಕ್ಯವನ್ನು ಕೇಳಿದ್ದರು, ಅದರಂತೆ ನಡೆದು ದೇವರ ವಾಕ್ಯವನ್ನು
ಮೊದಲು ತನ್ನ ಹೃದಯದಲ್ಲಿ ಹೊತ್ತರು. ನಂತರವೇ ಯೇಸುವಿಗೆ ತಾಯಿಯಾದರು. ಆದ್ದರಿಂದ ಯೇಸು ಈ ದಿನದ ಶುಭಸಂದೇಶದಲ್ಲಿ
ತನ್ನ ತಾಯಿಯನ್ನು ಸಹೋದರರನ್ನು ಮಾದರಿಯನ್ನಾಗಿ ನೋಡುತ್ತಾರೆಯೇ ವಿನಃ ಅವರನ್ನು ಎಂದಿಗೂ ತುಚ್ಛಿಕರಿಸುವುದಿಲ್ಲ,
ಅಥವಾ ಖಂಡಿಸುವ ರೀತಿಯಲ್ಲಿ ನೋಡುವುದಿಲ್ಲ.
No comments:
Post a Comment