Friday, 27 September 2019

ಸಾಧಾರಣ ಕಾಲದ ಇಪ್ಪತ್ತಾರನೇ ವಾರ ಸೋಮವಾರ

ಸಾಧಾರಣ ಕಾಲದ ಇಪ್ಪತ್ತಾರನೇ ವಾರ ಸೋಮವಾರ

3೦/ಬಿಳಿ/ಸೋಮ/ಸಂತ ಜೆರೋಮ್ (ಯಾ ಮತ್ತು ಧ.ಪಂ) (ಸ್ಮರಣೆ)
1ನೇ  ವಾಚನ  -  ಜೆಕ  8: 1-8
ಕೀರ್ತನೆ - 1೦2: 15-17, 18-2೦,28
ಶುಭಸಂದೇಶ - ಲೂಕ:  9:46-5೦

1ನೇ  ವಾಚನ  -  ಜೆಕ  8: 1-8
ಸೇನಾಧೀಶ್ವರ ಸರ್ವೇಶ್ವರ ಜೆಕರ್ಯನಿಗೆ ಪುನಃಕೊಟ್ಟ ಸಂದೇಶವಿದು: “ಸಿಯೋನಿನ ವಿಷಯದಲ್ಲಿ ನನಗೆ ತುಂಬಾ ಅಭಿಮಾನವಿದೆ. ಅದರ ಶತ್ರುಗಳ ವಿಷಯದಲ್ಲಿ ಅಧಿಕ ರೋಷವಿದೆ.” ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನಿಗೆ ಹಿಂದಿರುಗುವೆನು. ಜೆರುಸಲೇಮಿನ ನಡುವೆ ವಾಸ ಮಾಡುವೆನು. ಆಗ ಜೆರುಸಲೇಮ್ ‘ನಿಷ್ಠಾವಂತ ನಗರ’ ಎನಿಸಿಕೊಳ್ಳುವುದು. ಅದಕ್ಕೆ ಸೇನಾಧೀಶ್ವರ ಸರ್ವೇಶ್ವರನ ಪರ್ವತ, ಪವಿತ್ರ ಪರ್ವತ ಎಂಬ ಹೆಸರು ಬರುವುದು.” ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ಮುದುಕರು, ಮುದುಕಿಯರು ಮತ್ತೆ ಜೆರುಸಲೇಮಿನ ಚೌಕಗಳಲ್ಲಿ ಕುಳಿತುಕೊಳ್ಳುವರು. ವೃದ್ಧಾಪ್ಯದ ಪ್ರಯುಕ್ತ ಒಬ್ಬೊಬ್ಬರ ಕೈಯಲ್ಲಿ ಊರುಗೋಲು ಇರುವುದು. ಪಟ್ಟಣದ ಹಾದಿಬೀದಿಗಳಲ್ಲಿ ಮಕ್ಕಳು ತುಂಬಿಕೊಂಡಿರುವರು.” ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ಅಳಿದುಳಿದಿರುವ ಜನರಿಗೆ ಇಂಥ ಪರಿಸ್ಥಿತಿ ಅತಿಶಯವಾಗಿ ಕಾಣಬಹುದು. ಆದರೆ ನನಗೆ ಅದೇನೂ ಅತಿಶಯವಲ್ಲ.” ಇದು ಸರ್ವೇಶ್ವರನ ನುಡಿ. ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ. “ಇಗೋ, ನಾನು ನನ್ನ ಜನರನ್ನು ಪೂರ್ವ ಪಶ್ಚಿಮ ನಾಡುಗಳಿಂದ ಬಿಡುಗಡೆಮಾಡಿ, ಇಲ್ಲಿಗೆ ಬರಮಾಡುವೆನು. ಅವರು ಜೆರುಸಲೇಮಿನಲ್ಲೇ ವಾಸವಾಗಿರುವರು. ನಾನು ಅವರಿಗೆ ದೇವರಾಗಿರುವೆನು; ಅವರು ನನಗೆ ಸತ್ಸಂಬಂಧವುಳ್ಳ, ಸದ್ಧರ್ಮದ ಪ್ರಜೆಗಳಾಗಿರುವರು.”

ಕೀರ್ತನೆ - 1೦2: 15-17, 18-2೦,28
ಅನಂತರ ಯೇಸು ಐದು ರೊಟ್ಟಿಗಳನ್ನೂ ಎರಡು ವಿೂನುಗಳನ್ನೂ ತೆಗೆದುಕೊಂಡು ಸ್ವರ್ಗದತ್ತ ಕಣ್ಣೆತ್ತಿ ನೋಡಿ, ದೇವರಿಗೆ ಸ್ತೋತ್ರ ಸಲ್ಲಿಸಿದರು. ತರುವಾಯ ಅವುಗಳನ್ನು ಮುರಿದು ಜನಸಮೂಹಕ್ಕೆ ಬಡಿಸುವಂತೆ ಶಿಷ್ಯರಿಗೆ ಕೊಟ್ಟರು. ಎಲ್ಲರೂ ಹೊಟ್ಟೆತುಂಬ ತಿಂದು ಸಂತೃಪ್ತರಾದರು. ಇನ್ನು ಉಳಿದಿದ್ದ ತುಂಡುಗಳನ್ನು ಒಟ್ಟುಗೂಡಿಸಿದಾಗ ಅವು ಹನ್ನೆರಡು ಬುಟ್ಟಿ ತುಂಬ ಆದುವು. ಒಮ್ಮೆ ಯೇಸುಸ್ವಾಮಿ ಏಕಾಂಗಿಯಾಗಿ ಪ್ರಾರ್ಥನೆಮಾಡುತ್ತಿದ್ದಾಗ ಶಿಷ್ಯರು ಸಮೀಪದಲ್ಲೇ ಇದ್ದರು. “ಜನಸಾಮಾನ್ಯರು ನನ್ನನ್ನು ಯಾರೆನ್ನುತ್ತಾರೆ?” ಎಂದು ಯೇಸು ಅವರನ್ನು ಪ್ರಶ್ನಿಸಿದರು. ಅದಕ್ಕೆ ಅವರು, “ಹಲವರು ತಮ್ಮನ್ನು ‘ಸ್ನಾನಿಕ ಯೊವಾನ್ನ’ ಎನ್ನುತ್ತಾರೆ; ಕೆಲವರು ‘ಎಲೀಯನು’ ಎನ್ನುತ್ತಾರೆ; ಮತ್ತೆ ಕೆಲವರು ‘ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬನು ಮರಳಿ ಜೀವಂತನಾಗಿದ್ದಾನೆ’ ಎನ್ನುತ್ತಾರೆ,” ಎಂದು ಉತ್ತರವಿತ್ತರು. ಆಗ ಯೇಸು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಪುನಃ ಪ್ರಶ್ನಿಸಿದರು. ಅದಕ್ಕೆ ಪೇತ್ರನು, “ದೇವರಿಂದ ಅಭಿಷಿಕ್ತರಾದ ಲೋಕೋದ್ಧಾರಕ ತಾವೇ” ಎಂದು ಉತ್ತರಕೊಟ್ಟನು. ಈ ವಿಷಯವನ್ನು ಯಾರಿಗೂ ತಿಳಿಸಬಾರದೆಂದು ಯೇಸು ಶಿಷ್ಯರನ್ನು ಆಜ್ಞಾಪೂರ್ವಕವಾಗಿ ಎಚ್ಚರಿಸಿದರು. ಇದಲ್ಲದೆ, “ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾ ಪ್ರಮುಖರಿಂದಲೂ ಮುಖ್ಯಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕøತನಾಗಿ ಕೊಲ್ಲಲ್ಪಡುವನು. ಆದರೆ ಮೂರನೇ ದಿನ ಆತನು ಪುನರುತ್ಥಾನ ಹೊಂದುವನು,” ಎಂದು ಅವರಿಗೆ ತಿಳಿಸಿದರು. ‘ನಾನು ಹೋದರೆ ಹೋಗಬಹುದು’ ಯೇಸುಸ್ವಾಮಿ ಎಲ್ಲರನ್ನು ನೋಡಿ ಹೇಳಿದ್ದೇನೆಂದರೆ: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ, ತನ್ನ ಶಿಲುಬೆಯನ್ನು ಅನುದಿನವೂ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.

ಶುಭಸಂದೇಶ - ಲೂಕ:  9:46-5೦
ಒಮ್ಮೆ ತಮ್ಮಲ್ಲಿ ಅತಿ ಶ್ರೇಷ್ಠನು ಯಾರೆಂಬ ವಾದ ಶಿಷ್ಯರಲ್ಲಿ ಎದ್ದಿತು. ಅವರ ಮನಸ್ಸಿನ ಆಲೋಚನೆಗಳನ್ನು ಅರಿತ ಯೇಸು, ಒಂದು ಚಿಕ್ಕ ಮಗುವನ್ನು ತಂದು ತಮ್ಮ ಪಕ್ಕದಲ್ಲಿ ನಿಲ್ಲಿಸಿಕೊಂಡು, “ಯಾವನು ನನ್ನ ಹೆಸರಿನಲ್ಲಿ ಈ ಮಗುವನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನೇ ಸ್ವೀಕರಿಸುತ್ತಾನೆ; ಯಾವನು ನನ್ನನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ. ನಿಮ್ಮೆಲ್ಲರಲ್ಲಿ ಅತ್ಯಲ್ಪನಾದವನೇ ಅತ್ಯುತ್ತಮನು,” ಎಂದರು. ಆಗ ಯೊವಾನ್ನನು ಯೇಸುವಿಗೆ, “ಗುರುವೇ, ಯಾವನೋ ಒಬ್ಬನು ತಮ್ಮ ಹೆಸರಿನಲ್ಲಿ ದೆವ್ವ ಬಿಡಿಸುವುದನ್ನು ಕಂಡೆವು. ಅವನು ನಮ್ಮವನಲ್ಲದ ಕಾರಣ ಅವನನ್ನು ತಡೆದೆವು,” ಎಂದನು. 50ಅದಕ್ಕೆ ಯೇಸು, “ಅವನನ್ನು ತಡೆಯಬೇಡಿ, ನಿಮ್ಮ ವಿರೋಧಿ ಅಲ್ಲದವನು ನಿಮ್ಮ ಪರವಾದಿ,” ಎಂದು ಉತ್ತರಕೊಟ್ಟರು. ಅದಕ್ಕೆ ಯೇಸು, “ಅವನನ್ನು ತಡೆಯಬೇಡಿ, ನಿಮ್ಮ ವಿರೋಧಿ ಅಲ್ಲದವನು ನಿಮ್ಮ ಪರವಾದಿ,” ಎಂದು ಉತ್ತರಕೊಟ್ಟರು.

ಚಿಂತನೆ
ಸಂತ ಜೆರೋಮ್ (ಯಾಜಕ ಮತ್ತು ಧರ್ಮಸಭೆಯ ಪಂಡಿತ)
ಯಾರು ದೀನರಾಗಿರುತ್ತಾರೋ ಅವರೇ ಶ್ರೇಷ್ಟರು. ಪ್ರಭುಕ್ರಿಸ್ತರು ನುಡಿಯುತ್ತಾರೆ. ಯಾರು ನಿಮ್ಮಲ್ಲಿ  ಅತ್ಯಲ್ಪನಾದವನೋ ಅವನೇ ಅತ್ಯುತ್ತಮನು. ನಾವೆಲ್ಲರೂ ಮಕ್ಕಳಂತೆ ಆಗಬೇಕೆಂಬುದು ಅವರ ಬಯಕೆ. ಮುಗ್ಧತೆಯಿಂದ ಸೇವಾರ್ಥ ಜೀವನ, ಸತ್ಯ ಪರತೆಯಿಂದ ಶುಭ ಸಂದೇಶಕ್ಕೆ ಸಾಕ್ಷಿ, ದೀನತೆಯಿಂದ ಜನಸೇವೆ, ಎಲ್ಲಕ್ಕಿಂತ ಮಿಗಿಲಾಗಿ ಪ್ರೀತಿಯಿಂದ ಸ್ನೇಹದಿಂದ ಪರಸ್ನೇಹ ಕೈಗೊಳ್ಳುವ ಮನೋಭಾವ ಇವೆಲ್ಲವೂ ಮಕ್ಕಳಲ್ಲಿ ಕಾಣುವಂತ ಗುಣಗಳು. ಪ್ರಭುಯೇಸು ಈ ಎಲ್ಲಾ ಗುಣಗಳನ್ನು ತಮ್ಮ ಜೀವನದಲ್ಲಿ ರೂಡಿಸಿಕೊಂಡಿದ್ದರು. ಆದ್ದರಿಂದ ತಮ್ಮ ಶಿಷ್ಯರು ಸಹ ಈ ಆದರ್ಶ ಗುಣಗಳನ್ನು ಬೆಳೆಸಿಕೊಳ್ಳುವಂತೆ ಕರೆ ನೀಡುತ್ತಾರೆ. ಆದ್ದರಿಂದ ನಾವೆಷ್ಟೇ ಎತ್ತರಕ್ಕೆ ಏರಿದರೂ ದೀನತೆಯನ್ನು ಬೆಳೆಸಿಕೊಳ್ಳೋಣ ವಿನಯತೆಯಿಂದ ನಿರ್ಮಲತೆಯಿಂದ ಕ್ರಿಸ್ತರನ್ನು ಪ್ರತಿಬಿಂಬಿಸೋಣ.

No comments:

Post a Comment