ಸಾಧಾರಣ ಕಾಲದ ಇಪ್ಪತ್ಮೂರನೇ ಭಾನುವಾರ
8/ಬಿಳಿ/ಭಾನು/ಪೂಜ್ಯ ಕನ್ಯಾ ಮರಿಯಮ್ಮನವರ ಜಯಂತಿ
1ನೇ ವಾಚನ - ಸುಜ್ಞಾ 9:13-18
ಕೀರ್ತನೆ - 90: 3-6, 12-13, 14, 17
2ನೇ ವಾಚನ - ಫಿಲೋ 1:10,12-17
ಶುಭಸಂದೇಶ - ಲೂಕ 14: 25-33
1ನೇ ವಾಚನ - ಸುಜ್ಞಾ 9:13-18
ಕೀರ್ತನೆ - 90: 3-6, 12-13, 14, 17
3 : ಇಳೆಯ ಮಾನವರನು ನೀ ಮಣ್ಣುಪಾಲಾಗಿಸುತಿಹೆ / ‘ನರಪುತ್ರರೇ, ಮರಳಿ ಮಣ್ಣಿಗೆ ಸೇರಿರಿ’ ಎನ್ನುತಿಹೆ //
4 : ನಿನ್ನ ದೃಷ್ಟಿಯಲ್ಲಿ ಪ್ರಭೂ, ಸಹಸ್ರ ವರುಷ / ಇರುಳಿನೊಂದು ಜಾವ, ಗತಿಸಿಹೋದ ಒಂದು ದಿವಸ //
5 ಮನುಜರು ನೀ ಹರಿದೋಡಿಸುವ ಹೊಯಿಲು / ಇರುಳಿನ ಕನಸು, ಹಗಲಿನ ಗರಿಹುಲ್ಲು //
6 : ಚಿಗುರಿ ಹೂಬಿಡುವುದದು ಬೆಳಗಿನಲಿ / ಸೊರಗಿ ತರಗಾಗುವುದು ಬೈಗಿನಲಿ //
12 : ಜೀವನಾವಧಿಯನು ಲೆಕ್ಕಿಸುವುದನು ನಮಗೆ ಕಲಿಸು / ಈ ಪರಿಜ್ಞಾನವುಳ್ಳಂಥ ಹೃದಯವನು ನೀ ಕರುಣಿಸು //
13 : ಪ್ರಭು, ತಿರುಗಿ ಬಾ, ಕೋಪವೆಷ್ಟರ ತನಕ?/ ನಿನ್ನೀ ಸೇವಕರ ಮೇಲಿರಲಿ ಮರುಕ //
14 : ಉದಯದಲೆ ತೋಯಿಸೆಮ್ಮನು ನಿನ್ನ ಕೃಪೆಯಿಂದ / ಹರ್ಷಿಸಿ ಆನಂದಿಸುವೆವು ಆಗ ದಿನವಾದ್ಯಂತ //
17 : ಸ್ವಾಮಿದೇವರ ಆಶೀರ್ವಾದ ನಮ್ಮ ಮೇಲಿರಲಿ / ನಾವು ಕೈಗೊಳ್ಳುವ ಕಾರ್ಯಗಳು ಸಫಲವಾಗಲಿ / ಅಹುದು, ನಮ್ಮ ಕಾರ್ಯಗಳೆಲ್ಲಾ ಸಫಲವಾಗಲಿ //
2ನೇ ವಾಚನ - ಫಿಲೋ 1:10,12-17
ಶುಭಸಂದೇಶ - ಲೂಕ 14: 25-33
8/ಬಿಳಿ/ಭಾನು/ಪೂಜ್ಯ ಕನ್ಯಾ ಮರಿಯಮ್ಮನವರ ಜಯಂತಿ
1ನೇ ವಾಚನ - ಸುಜ್ಞಾ 9:13-18
ಕೀರ್ತನೆ - 90: 3-6, 12-13, 14, 17
2ನೇ ವಾಚನ - ಫಿಲೋ 1:10,12-17
ಶುಭಸಂದೇಶ - ಲೂಕ 14: 25-33
1ನೇ ವಾಚನ - ಸುಜ್ಞಾ 9:13-18
ದೇವರ ಸಂಕಲ್ಪವನ್ನು ಅರಿಯಬಲ್ಲವನಾರು? ಸರ್ವೇಶ್ವರನ ಚಿತ್ತವೇನೆಂದು ಗ್ರಹಿಸಬಲ್ಲವನಾರು? ಮತ್ರ್ಯ ಮಾನವರ ವಿವೇಚನೆ ಅಸಮರ್ಪಕವಾದುದೇ ನಮ್ಮ ಯೋಜನೆಗಳೆಲ್ಲ ಕೈಗೂಡದೆ ಹೋಗುವಂಥವೇ. ಈ ನಶ್ವರ ದೇಹ ಅಂತರಾತ್ಮವನ್ನು ಕುಗ್ಗಿಸುತ್ತದೆ ಈ ಮಣ್ಣಿನ ಗುಡಾರ, ಚಿಂತಾಭರಿತ ಮನಕ್ಕೊಂದು ಭಾರವೆ. ಧರೆಯ ಮೇಲಿನ ವಿಷಯಗಳನ್ನು ತಿಳಿಯುವುದೆಷ್ಟೋ ಕಷ್ಟಕರ ಕೈಗೆಟಕುವುಗಳನ್ನೇ ಕಂಡರಿತುಕೊಳ್ಳುವುದು ಎಷ್ಟೋ ಪ್ರಯಾಸಕರ. ಇಂತಿರಲು, ಸ್ವರ್ಗದಲ್ಲಿರುವುದನು ಬಯಲಿಗೆ ತರಲು ಯಾರು ಸಮರ್ಥ? ನೀವು ನಿಮ್ಮ ಸುಜ್ಞಾನವನ್ನು ಅನುಗ್ರಹಿಸದೆ ಹೋಗಿದ್ದರೆ ನಿಮ್ಮ ಪವಿತ್ರಾತ್ಮನನ್ನು ಸ್ವರ್ಗದಿಂದ ಕಳುಹಿಸದೆ ಹೋಗಿದ್ದರೆ ನಿಮ್ಮ ಸಂಕಲ್ಪವನ್ನು ಯಾರಾದರು ಅರಿಯುತ್ತಿದ್ದರೆ? ಹೀಗೆ ಲೋಕದ ಮಾರ್ಗಗಳನ್ನು ತಿದ್ದಲಾಯಿತು, ನಿಮಗೆ ಮೆಚ್ಚುಗೆಯಾದುದನು ಜನರಿಗೆ ಕಲಿಸಲಾಯಿತು, ಸುಜ್ಞಾನದಿಂದಲೇ ಅವರಿಗೆ ರಕ್ಷಣೆ ಲಭಿಸುವಂತಾಯಿತು.
ಕೀರ್ತನೆ - 90: 3-6, 12-13, 14, 17
3 : ಇಳೆಯ ಮಾನವರನು ನೀ ಮಣ್ಣುಪಾಲಾಗಿಸುತಿಹೆ / ‘ನರಪುತ್ರರೇ, ಮರಳಿ ಮಣ್ಣಿಗೆ ಸೇರಿರಿ’ ಎನ್ನುತಿಹೆ //
4 : ನಿನ್ನ ದೃಷ್ಟಿಯಲ್ಲಿ ಪ್ರಭೂ, ಸಹಸ್ರ ವರುಷ / ಇರುಳಿನೊಂದು ಜಾವ, ಗತಿಸಿಹೋದ ಒಂದು ದಿವಸ //
5 ಮನುಜರು ನೀ ಹರಿದೋಡಿಸುವ ಹೊಯಿಲು / ಇರುಳಿನ ಕನಸು, ಹಗಲಿನ ಗರಿಹುಲ್ಲು //
6 : ಚಿಗುರಿ ಹೂಬಿಡುವುದದು ಬೆಳಗಿನಲಿ / ಸೊರಗಿ ತರಗಾಗುವುದು ಬೈಗಿನಲಿ //
12 : ಜೀವನಾವಧಿಯನು ಲೆಕ್ಕಿಸುವುದನು ನಮಗೆ ಕಲಿಸು / ಈ ಪರಿಜ್ಞಾನವುಳ್ಳಂಥ ಹೃದಯವನು ನೀ ಕರುಣಿಸು //
13 : ಪ್ರಭು, ತಿರುಗಿ ಬಾ, ಕೋಪವೆಷ್ಟರ ತನಕ?/ ನಿನ್ನೀ ಸೇವಕರ ಮೇಲಿರಲಿ ಮರುಕ //
14 : ಉದಯದಲೆ ತೋಯಿಸೆಮ್ಮನು ನಿನ್ನ ಕೃಪೆಯಿಂದ / ಹರ್ಷಿಸಿ ಆನಂದಿಸುವೆವು ಆಗ ದಿನವಾದ್ಯಂತ //
17 : ಸ್ವಾಮಿದೇವರ ಆಶೀರ್ವಾದ ನಮ್ಮ ಮೇಲಿರಲಿ / ನಾವು ಕೈಗೊಳ್ಳುವ ಕಾರ್ಯಗಳು ಸಫಲವಾಗಲಿ / ಅಹುದು, ನಮ್ಮ ಕಾರ್ಯಗಳೆಲ್ಲಾ ಸಫಲವಾಗಲಿ //
2ನೇ ವಾಚನ - ಫಿಲೋ 1:10,12-17
ಅತಿ ಪ್ರಿಯನೇ,ನಿನಗೆ ಯುಕ್ತವಾದದನ್ನು ಆಜ್ಞಾಪಿಸುವುದಕ್ಕೆ ನನಗೆ ಕ್ರಿಸ್ತರಲ್ಲಿ ಪೂರ ಅಧಿಕಾರವಿದ್ದರೂ ಹಾಗೆ ಆಜ್ಞಾಪಿಸದೆ, ನನ್ನ ಮೇಲಿರುವ ಪ್ರೀತಿಯ ನಿಮಿತ್ತ ನಾನು ನಿನ್ನಲ್ಲಿ ವಿನಂತಿಸುತ್ತೇನೆ: ವೃದ್ಧಪ್ರಾಯನೂ ಮತ್ತು ಕ್ರಿಸ್ತಯೇಸುವಿಗೋಸ್ಕರ ಈಗ ಸೆರೆಯಾಳೂ ಆಗಿರುವ ಪೌಲನೆಂಬ ನಾನು ಒನೇಸಿಮನ ಪರವಾಗಿ ನಿನ್ನಲ್ಲಿ ವಿಜ್ಞಾಪಿಸುತ್ತೇನೆ. ಇವನು ಯೇಸುವಿನಲ್ಲಿ ನನ್ನ ಸ್ವಂತ ಮಗನಂತಿದ್ದಾನೆ. ಸೆರೆಮನೆಯಲ್ಲೇ ನಾನು ಅವನನ್ನು ಆಧ್ಯಾತ್ಮಿಕವಾಗಿ ಪಡೆದೆನು. ನನಗಂತೂ ಇವನು ಪ್ರಾಣದಂತಿದ್ದರೂ ಈಗ ನಿನ್ನ ಬಳಿಗೆ ಕಳುಹಿಸುತ್ತಿದ್ದೇನೆ. ಶುಭಸಂದೇಶಕ್ಕೋಸ್ಕರ ನಾನು ಸೆರೆಮನೆಯಲ್ಲಿರುವಾಗ ನಿನ್ನ ಬದಲಾಗಿ ನನಗೆ ಸಹಾಯಮಾಡಲು ಇವನನ್ನು ಇಲ್ಲಿಯೇ ಉಳಿಸಿಕೊಳ್ಳಲು ಇಷ್ಟವಿತ್ತು. ಆದರೆ ನನಗೆ ಸಹಾಯವಾಗಲೆಂದು ನಿನ್ನನ್ನು ಖಡ್ಡಾಯಪಡಿಸಲು ನನಗಂತೂ ಇಷ್ಟವಿಲ್ಲ. ನೀನಾಗಿಯೇ ನಿನ್ನ ಸ್ವಂತ ಇಚ್ಛೆಯಿಂದ ಹಾಗೆ ಮಾಡಬೇಕೆಂಬುದು ನನ್ನ ಅಪೇಕ್ಷೆ. ಆದ್ದರಿಂದ ನಿನ್ನ ಒಪ್ಪಿಗೆಯಿಲ್ಲದೆ ನಾನು ಏನನ್ನೂ ಮಾಡುತ್ತಿಲ್ಲ. ಸ್ವಲ್ಪಕಾಲ ಒನೇಸಿಮನು ನಿನ್ನಿಂದ ದೂರವಿದ್ದುದಕ್ಕೆ ಕಾರಣ ಆತನು ಸದಾಕಾಲ ನಿನ್ನವನಾಗುವುದಕ್ಕೋ ಏನೋ. ಈಗ ಅವನು ನಿನ್ನ ಬಳಿಗೆ ಬರುತ್ತಿರುವುದು ಕೇವಲ ಗುಲಾಮನಂತೆ ಅಲ್ಲ, ಅದಕ್ಕಿಂತಲೂ ಬಹಳ ಮೇಲಾದವನಂತೆ, ಕ್ರಿಸ್ತಯೇಸುವಿನಲ್ಲಿ ಪ್ರಿಯ ಸಹೋದರನಂತೆ, ಅವನೆಂದರೆ ನನಗೆಷ್ಟೋ ಪ್ರೀತಿ. ಹಾಗಾದರೆ ನಿನ್ನ ಸೇವಕನೂ ನಮ್ಮ ಪ್ರಭುವಿನಲ್ಲಿ ನಿನ್ನ ಪ್ರಿಯ ಸಹೋದರನೂ ಆಗಿರುವ ಅವನ ಬಗ್ಗೆ ನಿನಗೆ ಮತ್ತಷ್ಟು ಪ್ರೀತಿ ಇರಬೇಕಲ್ಲವೇ? ಆದ್ದರಿಂದ ಕ್ರಿಸ್ತಯೇಸುವಿನಲ್ಲಿ ನಿನಗೂ ನನಗೂ ಅನ್ಯೋನ್ಯತೆ ಇದೆಯೆಂದು ನೀನು ಪರಿಗಣಿಸುವುದಾದರೆ ನನ್ನನ್ನು ಹೇಗೆ ಸ್ವಾಗತಿಸುತ್ತಿದ್ದೆಯೋ ಹಾಗೆಯೇ ಇವನನ್ನೂ ಸ್ವಾಗತಿಸು.
ಜನರು ಗುಂಪುಗುಂಪಾಗಿ ಯೇಸುಸ್ವಾಮಿಯ ಸಂಗಡ ಹೋಗುತ್ತಿದ್ದರು. ಆಗ ಯೇಸು ಅವರ ಕಡೆಗೆ ತಿರುಗಿ ಹೀಗೆಂದರು: “ನನ್ನಲ್ಲಿಗೆ ಬರುವ ಯಾರೊಬ್ಬನೂ ತನ್ನ ತಂದೆ-ತಾಯಿ, ಹೆಂಡತಿ-ಮಕ್ಕಳು, ಸೋದರ-ಸೋದರಿಯರನ್ನು ಮಾತ್ರವಲ್ಲ, ತನ್ನ ಪ್ರಾಣವನ್ನು ಕೂಡ ತ್ಯಜಿಸದ ಹೊರತು, ನನ್ನ ಶಿಷ್ಯನಾಗಲಾರನು. ತನ್ನ ಶಿಲುಬೆಯನ್ನು ಹೊತ್ತು ನನ್ನ ಹಿಂದೆ ಬರದವನು ನನ್ನ ಶಿಷ್ಯನಾಗಲಾರನು. ನಿಮ್ಮಲ್ಲಿ ಒಬ್ಬನು ಒಂದು ಗೋಪುರವನ್ನು ಕಟ್ಟಲು ಇಚ್ಛಿಸಿದರೆ, ಕೆಲಸವನ್ನು ಮುಗಿಸಲು ತನ್ನಿಂದ ಸಾಧ್ಯವೇ ಎಂದು ನೋಡಲು, ಮೊದಲು ಕುಳಿತು, ಬೇಕಾಗುವ ಖರ್ಚು ವೆಚ್ಚವನ್ನು ಲೆಕ್ಕ ಹಾಕುವುದಿಲ್ಲವೇ? ಇಲ್ಲದೆ ಹೋದರೆ, ಇವನು ಅಸ್ತಿವಾರ ಹಾಕಿದ ಮೇಲೆ ಕೆಲಸ ಪೂರೈಸದೆ ಇರುವುದನ್ನು ಕಂಡು, ‘ಕಟ್ಟಲಾರಂಭಿಸಿದ; ಮುಗಿಸಲು ಇವನಿಂದಾಗಲಿಲ್ಲ!’ ಎಂದು ನೋಡುವವರೆಲ್ಲರೂ ಅವನನ್ನು ಪರಿಹಾಸ್ಯಮಾಡುವರು. ಹಾಗೆಯೇ, ಅರಸನೊಬ್ಬನು ಇನ್ನೊಬ್ಬ ಅರಸನ ವಿರುದ್ಧ ಯುದ್ಧಕ್ಕೆ ಹೋಗುವುದಕ್ಕೆ ಮುಂಚೆ ಇಪ್ಪತ್ತು ಸಾವಿರ ಸೈನ್ಯದೊಡನೆ ಬರುವ ಶತ್ರುವನ್ನು ತನ್ನ ಹತ್ತು ಸಾವಿರ ಸೈನ್ಯದಿಂದ ಎದುರಿಸಲು ಸಾಧ್ಯವೇ ಎಂದು ಮೊದಲು ಕುಳಿತು ಆಲೋಚನೆ ಮಾಡುವುದಿಲ್ಲವೇ? ಸಾಧ್ಯವಿಲ್ಲದಿದ್ದರೆ, ಶತ್ರುರಾಜನು ದೂರದಲ್ಲಿರುವಾಗಲೇ ದೂತರನ್ನು ಕಳುಹಿಸಿ, ಸಂಧಾನಕ್ಕೆ ಷರತ್ತುಗಳೇನೆಂದು ವಿಚಾರಿಸುತ್ತಾನೆ. ಅದೇ ಮೇರೆಗೆ, ನಿಮ್ಮಲ್ಲಿ ಯಾವನು ತನಗಿರುವುದನ್ನೆಲ್ಲಾ ಪರಿತ್ಯಾಗ ಮಾಡುವುದಿಲ್ಲವೋ ಅವನು ನನ್ನ ಶಿಷ್ಯನಾಗಲಾರ.
ಪೂಜ್ಯ ಮರಿಯಮ್ಮನವರ ಜಯಂತಿ
ಅಮ್ಮ ಎನ್ನುವ ಕರೆ ಚೆಂದ ಅದು ನೆಮ್ಮದಿ ನೀಡುವ ಮಕರಂದ ಅ
ಎಂದರೆ ಅಮೃತ, ಮ್ಮ ಎಂದರೆ ಮಧುರ ಮಮತೆಯ ಸಮ್ಮಿಲನ. ಅಮ್ಮ ಎಂದರೆ ಏನೋ ಒಂತರಾ ರೋಮಾಂಚನ. ಸವಿದವನೇ ಬಲ್ಲ ಬೆಲ್ಲದ ರುಚಿಯ ಎನ್ನುವಂತೆ ತಾಯಿಯ ಪ್ರೀತಿ ಸವಿದವನಿಗೆ ಗೊತ್ತು ಆ ಪ್ರೀತಿಯ ಮಹತ್ವ. ತಾಯಿ, ಸಹನಮಯಿ, ತ್ಯಾಗಮಯಿ, ಪ್ರೇಮಮಯಿ, ಕ್ರೈಸ್ತರಾದ ನಮಗೆ ಇಬ್ಬರೂ ತಾಯಿಯಂದಿರು, ನಮಗೆ ಜನ್ಮನೀಡಿದ ತಾಯಿ ಒಬ್ಬರಾದರೆ ಮರಿಯ ನಮ್ಮೆಲ್ಲರ ಆಧ್ಯಾತ್ಮಿಕ ತಾಯಿಯಾಗಿದ್ದಾರೆ.
ಇಂದು ಈ ತಾಯಿ ಮರಿಯಮ್ಮನವರು ಹುಟ್ಟಿದ ದಿನ ಸುದಿನ. ಪ್ರತಿಯೊಂದು ಮಗುವಿನ ಜನನ ಕುಟುಂಬದಲ್ಲಿ ಆನಂದವನ್ನು ತರುತ್ತದೆ. ಮಾತೆ ಮರಿಯಳ ಜನನ ಈ ದಿನ ಇಡೀ ಜಗತ್ತಿಗೆ ಸಂತೋಷವನ್ನು ತರುತ್ತದೆ. ಕಥೋಲಿಕರಾದ ನಾವು ಮರಿಯಳನ್ನು ಪೂಜಿಸುವುದಿಲ್ಲ ಬದಲಾಗಿ ಗೌರವಿಸುತ್ತೇವೆ. ಮರಿಯಳು ದೇವತೆಯಾಗಿರಲಿಲ್ಲ ಪ್ರವಾದಿನಿಯಾಗಿರಲಿಲ್ಲ. ಆದರೆ ಸದಾ ಕನ್ನಿಯಾಗಿ ಉಳಿಯಲು ವ್ರತವನ್ನು ಕೈಗೊಂಡ ಮುಗ್ಧ ಯುವತಿಯಾಗಿದ್ದಳು. ದೇವರು ಅವರನ್ನು ತಮ್ಮ ರಕ್ಷಣಾ ಕಾರ್ಯದಲ್ಲಿ ಭಾಗಿಯಾಗಿ ಕ್ರಿಸ್ತನ ತಾಯಿಯಾಗಲು ಅನಾದಿಕಾಲದಿಂದಲೇ ಆರಿಸಿಕೊಂಡಿದ್ದರು.
ಏವಳು ಸೈತಾನನ ಮಾತುಗಳಿಗೆ ಮರುಳಾಗಿ ಪಾಪವನ್ನು ಮಾಡಿ ಮರಣವನ್ನು ತಂದಳು. ಆದರೆ ಮರಿಯ ದೇವರಿಗೆ ವಿಧೇಯರಾಗಿ ನಡೆದು ನಮ್ಮ ರಕ್ಷಣೆಯಲ್ಲಿ ಪಾಲುದಾರರಾದರೂ.
-ಮರಿಯ ಅಮಲೋದ್ಭವ ಮಾತೆ: ಕ್ರಿಸ್ತರು ಪರಿಶುದ್ಧ ದೇವರು ಅವರು ಮರಿಯಮ್ಮನವರಲ್ಲಿ ಹುಟ್ಟಿಬರಬೇಕಾದರೆ ಮರಿಯ ಪರಿಶುದ್ಧರಾಗಿ ಪಾಪವಿಲ್ಲದೇ ಇರಬೇಕಿತ್ತು. ಆದ್ದರಿಂದ ದೇವರು ಮರಿಯಮ್ಮನವರನ್ನು ಜನ್ಮಪಾಪವಿಲ್ಲದೇ ಸೃಷ್ಟಿಸಿದರು.
-ಮರಿಯ ನಿತ್ಯ ಕನ್ನಿಕೆಯಾಗಿಯೇ ಉಳಿದರು. ಈ ಹಬ್ಬದಲ್ಲಿ ನಾವು ಹೂವುಗಳನ್ನು ತರುತ್ತೇವೆ. ಅವರು ಬಯಸುವುದು ಹೂವಿನಂತಿರುವ ಪರಿಶುದ್ಧ ಹೃದಯಗಳನ್ನು. ಕ್ರಿಸ್ತರಲ್ಲಿ ಇರಬೇಕಾದ ವಿಶ್ವಾಸವನ್ನು ದೇವರ ವಾಕ್ಯದ ಪಾಲನೆಯಂತೆ.
-ಇಂದು ಹೆಣ್ಣು ಮಕ್ಕಳ ದಿನ. ಆದುದರಿಂದ ವಿಶೇಷವಾಗಿ ಹೆಣ್ಣುಮಕ್ಕಳಿಗಾಗಿ ಪ್ರಾರ್ಥಿಸೋಣ. ಹೆಣ್ಣು ಮಕ್ಕಳು ಸಮಾಜದಲ್ಲಿ ಎಲ್ಲ ರೀತಿಯ ಹಕ್ಕು ಮತ್ತು ಸಮಾನತೆಯ ರಕ್ಷಣೆಯನ್ನು ಪಡೆಯುವಂತಾಗಲಿ.
No comments:
Post a Comment