ಲ್ಯಾಟರನ್ ಮಹಾದೇವಾಲಯದ ಅಭಿಷೇಕೊತ್ಸವ
ಮೊದಲನೇ ವಾಚನ ಯೆಜೆಕಿಯೇಲ 47:1-2,8-9,12
ಕೀರ್ತನೆ: 84: 3-6, 10
ಶುಭಸಂದೇಶ : ಯೊವಾನ್ನ 2:13-22
ಮೊದಲನೇ ವಾಚನ ಯೆಜೆಕಿಯೇಲ 47:1-2,8-9,12
1 : ಆಮೇಲೆ ಆ ಪುರುಷ ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದು ತಂದನು: ಇಗೋ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವದಕಡೆಗೆ ಹರಿಯುತ್ತಿತ್ತು. (ದೇವಸ್ಥಾನ ಪೂರ್ವಾಭಿಮುಖವಾಗಿತ್ತು). ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಬಲಿಪೀಠದ ದಕ್ಷಿಣದಲ್ಲಿ ಹರಿಯುತ್ತಿತ್ತು.
2 : ಆಗ ಅವನು ನನ್ನನ್ನು ಉತ್ತರ ಹೆಬ್ಬಾಗಿಲಿನಿಂದ ದೇವಾಲಯದ ಹೊರಗಿನ ಮಾರ್ಗವಾಗಿ ಸುತ್ತಿಸಿಕೊಂಡು ಪೂರ್ವದ ಹೆಬ್ಬಾಗಿಲಿಗೆ ಕರೆದುತಂದನು. ಅಲ್ಲಿ ನೋಡಲು ಅದರ ಬಲಗಡೆ ಮೆಲ್ಲಮೆಲ್ಲನೆ ಹರಿಯುವ ನೀರು ಕಾಣಿಸಿತು.
8 : ಆಗ ಅವನು ನನಗೆ ಹೀಗೆ ಹೇಳಿದನು: “ಈ ಪ್ರವಾಹ ಪೂರ್ವಪ್ರಾಂತ್ಯಕ್ಕೆ ಹೊರಟು ಅರಬಾ ಎಂಬ ಕಣಿವೆಗೆ ಇಳಿದು ಲವಣ ಸಮುದ್ರದ ಕಡೆಗೆ ಹರಿಯುವುದು; ದೇವಸ್ಥಾನದಿಂದ ಹೊರಟ ಪ್ರವಾಹವು ಲವಣಸಮುದ್ರಕ್ಕೆ ಸೇರಲು ಅದರ ನೀರು ಸಿಹಿಯಾಗುವುದು.
9 : ಈ ತೊರೆ ಎಲ್ಲೆಲ್ಲಿ ಹರಿಯುತ್ತದೋ ಅಲ್ಲಲ್ಲಿ ಗುಂಪು ಗುಂಪಾಗಿ ಚಲಿಸುವ ಸಕಲವಿಧ ಜಲ ಜಂತುಗಳು ಬದುಕಿ ಬಾಳುವುವು; ವಿೂನುಗಳು ತಂಡೋಪ ತಂಡವಾಗಿರುವುವು. ಈ ನೀರು ಸಮುದ್ರಕ್ಕೆ ಬೀಳಲು ಆ ನೀರೂ ಸಿಹಿಯಾಗುವುದು; ಈ ತೊರೆ ಎಲ್ಲೆಲ್ಲಿ ಹರಿದರೂ ಅಲ್ಲಲ್ಲಿ ಜೀವವುಂಟಾಗುವುದು.
12 : ತೊರೆಯ ಎರಡು ದಡಗಳಲ್ಲಿಯೂ ಸಕಲ ಫಲವೃಕ್ಷಗಳು ಬೆಳೆಯುವುವು. ಅವುಗಳ ಎಲೆ ಬಾಡದು, ಹಣ್ಣು ತೀರದು. ತೊರೆಯ ನೀರು ಪವಿತ್ರಾಲಯದೊಳಗಿಂದ ಹೊರಟುಬರುವ ಕಾರಣ ಅವು ತಿಂಗಳು ತಿಂಗಳಲ್ಲಿಯೂ ಹೊಸ ಹೊಸ ಫಲವನ್ನು ಕೊಡುತ್ತಲಿರುವುವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಅನುಕೂಲಿಸುವುವು.”
ಕೀರ್ತನೆ: 84: 3-6, 10
3 : ಸ್ವಾಮಿ ದೇವ, ಎನ್ನರಸ, ಸ್ವರ್ಗಸೇನಾಧೀ ಶ್ವರ / ದೊರಕಿದೆ ಗುಬ್ಬಿಗೆ ಗೂಡು ನಿನ್ನ ವೇದಿಕೆಯ ಹತ್ತಿರ / ಪಾರಿವಾಳಕ್ಕು ಅಲ್ಲೇ ಇದೆ ಮರಿಯಿಡಲು ಆಗರ //
4 : ನಿನ್ನ ಮಂದಿರದಲಿ ವಾಸಿಸುವವರು ಧನ್ಯರು / ನಿರಂತರವು ನಿನ್ನ ಗುಣಗಾನ ಮಾಡುವರವರು //
5 : ನಿನ್ನಿಂದ ಶಕ್ತಿಪಡೆಯುವವರು ಧನ್ಯರು / ಸಿಯೋನ್ ಶಿಖರಕ್ಕವರು ಪ್ರಿಯ ಯಾತ್ರಿಕರು //
6 : ದಾಟುವಾಗ ಬಾಕಾ ಕಣಿವೆಯನು / ಚಿಲುಮೆಗಳನಾಗಿ ಮಾಡುವರದನು // ಮುಂಗಾರು ಮಳೆಯು ಸುರಿಯಲು / ತುಂಬಿ ತುಳುಕುವುದಾ ಸರಸಿಗಳು //
10 : ದುರುಳರ ಬಿಡಾರದಲಿ ನಾ ವಾಸಮಾಡುವುದರ ಬದಲು / ನಿನ್ನಾಲಯದ ದ್ವಾರಪಾಲಕನಾಗಿರುವುದೆ ಮೇಲು //
11 : ದೇವನೆಮಗೆ ಬೆಳಕು ಕೊಡುವ ಸೂರ್ಯನು / ಕಾದಿಟ್ಟು ರಕ್ಷಿಸುವ ಗುರಾಣಿಯು / ಸನ್ಮಾರ್ಗಿಗೆ ಈವನು ಸಕಲ ವರಗಳನು //
12 : ಪ್ರಭುವೇ, ಸ್ವರ್ಗಸೇನಾಧೀಶ್ವರನೇ / ನಿನ್ನಲಿ ನಂಬಿಕೆ ಇಡುವವನೇ ಧನ್ಯನು /
ಶುಭಸಂದೇಶ : ಯೊವಾನ್ನ 2:13-22
13 : ಯೆಹೂದ್ಯರ ಪಾಸ್ಕ ಹಬ್ಬವು ಹತ್ತಿರವಾಗಿದ್ದುದರಿಂದ ಯೇಸುಸ್ವಾಮಿ ಜೆರುಸಲೇಮಿಗೆ ತೆರಳಿದರು.
14 : ಅಲ್ಲಿಯ ಮಹಾದೇವಾಲಯದಲ್ಲಿ ದನ, ಕುರಿ ಮತ್ತು ಪಾರಿವಾಳಗಳನ್ನು ಮಾರುವವರು ಮತ್ತು ನಾಣ್ಯವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿದ್ದರು.
15 : ಅದನ್ನು ಕಂಡ ಯೇಸು, ಹಗ್ಗವನ್ನು ಚಾವಟಿಯಂತೆ ಹೆಣೆದು ಅದರಿಂದ ಅವರನ್ನೆಲ್ಲಾ ದೇವಾಲಯದಿಂದ ಹೊರಗಟ್ಟಿದರು. ದನಕುರಿಗಳನ್ನು ಓಡಿಸಿದರು. ನಾಣ್ಯವಿನಿಮಯ ಮಾಡುವವರ ಮೇಜುಗಳನ್ನು ಕೆಡವಿ, ಚಿಲ್ಲರೆ ಹಣವನ್ನು ಚೆಲ್ಲಿದರು.
16 : ಪಾರಿವಾಳಗಳನ್ನು ಮಾರುತ್ತಿದ್ದವರಿಗೆ, “ಇವನ್ನು ಇಲ್ಲಿಂದ ತೆಗೆದುಕೊಂಡು ಹೊರಡಿ. ನನ್ನ ಪಿತನ ಆಲಯವನ್ನು ಸಂತೆಯನ್ನಾಗಿ ಮಾಡಬೇಡಿ,” ಎಂದು ಹೇಳಿದರು.
17 : ‘ನಿನ್ನ ಆಲಯದ ಮೇಲಿನ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸುತ್ತದೆ,’ ಎಂದು ಪವಿತ್ರಗ್ರಂಥದಲ್ಲೇ ಬರೆದಿರುವ ವಾಕ್ಯವು ಶಿಷ್ಯರಿಗೆ ಆಗ ನೆನಪಾಯಿತು.
18 : ಯೆಹೂದ್ಯರು, “ಇಷ್ಟೆಲ್ಲಾ ಮಾಡಲು ನಿನಗೆ ಅಧಿಕಾರವಿದೆ ಎಂದು ರುಜುವಾತು ಪಡಿಸುವುದಕ್ಕೆ ಯಾವ ಪವಾಡವನ್ನು ಮಾಡಿ ತೋರಿಸಬಲ್ಲೆ?” ಎಂದು ಯೇಸುವನ್ನು ಪ್ರಶ್ನಿಸಿದರು.
19 : ಅದಕ್ಕೆ ಯೇಸು, “ಈ ದೇವಾಲಯವನ್ನು ಕೆಡವಿಬಿಡಿ, ಮೂರು ದಿನದಲ್ಲಿ ಅದನ್ನು ಪುನಃ ಎಬ್ಬಿಸುವೆನು,” ಎಂದು ಉತ್ತರಕೊಟ್ಟರು.
20 : ಚಕಿತರಾದ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟಲು ನಲವತ್ತಾರು ವರ್ಷಗಳು ಹಿಡಿದಿವೆ. ನೀನು ಮೂರು ದಿನಗಳಲ್ಲೇ ಅದನ್ನು ಎಬ್ಬಿಸಬಲ್ಲೆಯಾ?” ಎಂದು ಕೇಳಿದರು.
21 : ಯೇಸು ಹೇಳಿದ್ದು ತಮ್ಮ ದೇಹವೆಂಬ ದೇಗುಲವನ್ನು ಕುರಿತು.
22 : ಅವರು ಸತ್ತು ಪುನರುತ್ಥಾನ ಹೊಂದಿದ ಬಳಿಕ ಶಿಷ್ಯರು ಅವರ ಈ ಮಾತುಗಳನ್ನು ಸ್ಮರಿಸಿಕೊಂಡರು. ಪವಿತ್ರಗ್ರಂಥದಲ್ಲೂ ಯೇಸುವಿನ ಮಾತಿನಲ್ಲೂ ಅವರಿಗೆ ಆಗ ವಿಶ್ವಾಸ ಹುಟ್ಟಿತು.
ಚಿಂತನೆ

ಲ್ಯಾಟರನ್ ದೇವಾಲಯವು ಕ್ರೈಸ್ತ ಇತಿಹಾಸದಲ್ಲೇ ಅತೀ ಪ್ರಾಚೀನ ದೇವಾಲಯ ಹಾಗೂ ಎಲ್ಲಾ ದೇವಾಲಯಗಳಿಗೂ ತಾಯಿ ದೇವಾಲಯವಿದ್ದಂತೆ. ಸಂತ ಪೇತ್ರರ ಬಸಿಲಿಕಾದ ಲ್ಯಾಟರನ್ ಮಹಾದೇವಾಲಯವು ಕ್ರೈಸ್ತರ ಆಡಳಿತ ಕೇಂದ್ರವಾಗಿತ್ತು. ಕ್ರಿ. ಶ. ೩೨೪, ನವೆಂಬರ್ ೯ ರಂದು ಜಗದ್ಗುರು ಸಿಲ್ವೇಸ್ಟರ್‌ರವರು ಈ ದೇವಾಲಯವನ್ನು ಪ್ರತಿಸ್ಥಾಪಿಸುತ್ತಾರೆ. ಪ್ರತೀ ಧರ್ಮಾಧ್ಯಕ್ಷರಿಗೆ ಪ್ರಧಾನ ದೇವಾಲಯವಿರುವಂತೆ ಜಗದ್ಗುರುಗಳ ಪ್ರಧಾನ ದೇವಾಲಯವೇ ಈ ಲ್ಯಾಟರನ್ ಮಹಾದೇವಾಲಯ. ಅರಸ ಕಾನ್‌ಸ್ಟಾಂಟನ್ ಲ್ಯಾಟರಾನಿ ಅರಮನೆಯನ್ನು ಜಗದ್ಗುರುಗಳಿಗೆ ಕೊಡುಗೆಯಾಗಿ ನೀಡುತ್ತಾನೆ. ಈ ದೇವಾಲಯವನ್ನು ಸ್ನಾನಿಕ ಯೊವಾನರಿಗೆ ಹಾಗೂ ಶುಭಸಂದೇಶಕಾರ ಯೋವಾನ್ನನಿಗೆ ಅರ್ಪಿಸಲಾಗಿದೆ. ಹಾಗಾಗಿ ಈ ದೇವಾಲಯವನ್ನು ಸಂತ, ಯೊವಾನ್ನರ / ಜಾನರ ಲ್ಯಾಟರನ್ ದೇವಾಲಯವೆನ್ನುತ್ತಾರೆ.
No comments:
Post a Comment