ಡಿಸೆಂಬರ್ 3 / 2019
ಕೀರ್ತನೆ: 72:1, 7-8, 12-13, 17
ಬೆಳೆಯಲಿ ಆತನ ಪಾಲನೆಯಲಿ ನ್ಯಾಯನೀತಿ / ಬೆಳಗಲಿ ಚಂದ್ರನಂತೆ ಸದಾ ಸಂಪೂರ್ಣ ಶಾಂತಿ //
ಶುಭಸಂದೇಶ : ಮತ್ತಾಯ 10:21-24
21 : ಅದೇ ಗಳಿಗೆಯಲ್ಲಿ ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.
ಆಗಮನ ಕಾಲದ ಮೊದಲನೆಯ ಮಂಗಳವಾರ
ಮಹೋತ್ಸವ ಸಂತ ಫ್ರಾನ್ಸಿಸ್ ಕ್ಸೇವಿಯರ್
ಮೊದಲನೇ ವಾಚನ ಯೆಶಾಯ 11:1-10
ಕೀರ್ತನೆ: 72:1, 7-8, 12-13, 17
ಶುಭಸಂದೇಶ : ಮತ್ತಾಯ 10:21-24
ಮೊದಲನೇ ವಾಚನ ಯೆಶಾಯ 11:1-10
1 : ಜೆಸ್ಸೆಯನ ಬುಡದಿಂದ ಒಡೆಯುವು ದೊಂದು ಚಿಗುರು; ಅದರ ಬೇರಿನಿಂದ ಫಲಿಸುವುದೊಂದು ತಳಿರು.
2 : ನೆಲಸುವುದಾತನ ಮೇಲೆ ಜ್ಞಾನವಿವೇಕ ದಾಯಕ ಆತ್ಮ; ಶಕ್ತಿ ಸಮಾಲೋಚನೆಯನ್ನೀಯುವ ಆತ್ಮ; ಸರ್ವೇಶ್ವರನ ಅರಿವನು, ಭಯವನು ಹುಟ್ಟಿಸುವ ಆತ್ಮ ಅಹುದು, ನೆಲಸುವುದಾತನ ಮೇಲೆ ಸರ್ವೇಶ್ವರನ ಆತ್ಮ
3 : ಸರ್ವೇಶ್ವರನ ಭಯಭಕ್ತಿ ಅವಗೆ ಪರಿಮಳದಂತೆ. ತೀರ್ಪಿಡನಾತ ಕಣ್ಣಿಗೆ ತೋಚಿದಂತೆ ನಿರ್ಣಯಿಸನಾತ ಕಿವಿಗೆ ಬಿದ್ದಂತೆ.
4 : ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ.
5 : ಸದ್ಧರ್ಮವೇ ಆತನಿಗೆ ನಡುಕಟ್ಟು ಪ್ರಾಮಾಣಿಕತೆಯೇ ಸೊಂಟಪಟ್ಟಿ.
6 : ಬಾಳುವುವು ತೋಳಕುರಿಮರಿಗಳು ಒಂದಿಗೆ ಮಲಗುವುವು ಮೇಕೆಚಿರತೆಗಳು ಜೊತೆಗೆ ಮೊಲೆಯುಣ್ಣುವುವು ಕರುಕೇಸರಿಗಳು ಒಟ್ಟಿಗೆ ನಡೆಸುವುದವುಗಳನು ಚಿಕ್ಕಮಗು ಮೇಯಿಸುವುದಕೆ.
7 : ಮೇಯುವುವು ಕರಡಿ, ಆಕಳುಗಳು ಒಟ್ಟಿಗೆ ಮಲಗುವುವು ಅವುಗಳ ಮರಿಗಳು ಜೊತೆಗೆ ಎತ್ತಿನ ಹುಲ್ಲು ಮೇವಾಗುವುದು ಸಿಂಹಕೆ.
8 : ಆಡುವುದು ಮೊಲೆಗೂಸು ನಾಗರ ಹುತ್ತದ ಮೇಲೆ ಕೈ ಹಾಕುವುದು ಮೊಲೆಬಿಟ್ಟ ಮಗು ಹಾವಿನಬಿಲದ ಒಳಗೆ.
9 : ಹಾನಿಯನು, ಕೇಡನು ಮಾಡರಾರೂ ನನ್ನ ಪರ್ವತದ ಮೇಲೆ. ಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞಾನ, ಧರೆಯ ಮೇಲೆ.
10 : ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿ ನಿಲಯವು.
ಕೀರ್ತನೆ: 72:1, 7-8, 12-13, 17
ಬೆಳೆಯಲಿ ಆತನ ಪಾಲನೆಯಲಿ ನ್ಯಾಯನೀತಿ / ಬೆಳಗಲಿ ಚಂದ್ರನಂತೆ ಸದಾ ಸಂಪೂರ್ಣ ಶಾಂತಿ //
1 : ತಿಳಿಸು ನಿನ್ನ ನ್ಯಾಯವನು ದೇವಾ, ರಾಜನಿಗೆ / ಕಲಿಸು ನಿನ್ನ ನೀತಿಯನು ರಾಜಕುವರನಿಗೆ //
7 : ಬೆಳೆಯಲಿ ಆತನ ಪಾಲನೆಯಲಿ ನ್ಯಾಯನೀತಿ / ಬೆಳಗಲಿ ಚಂದ್ರನಂತೆ ಸದಾ ಸಂಪೂರ್ಣ ಶಾಂತಿ //
8 : ಸಾಗರದಿಂದ ಸಾಗರದವರೆಗಿರಲಿ ಆತನ ಆಧಿಪತ್ಯ / ಮಹಾ ನದಿಯಿಂದ ಬುವಿ ಎಲ್ಲೆಯವರೆಗಿರಲಿ ಆತನ ಪ್ರಭುತ್ವ //
12 : ಏಕೆನೆ ಕಾಪಾಡುವನಾತ ಮೊರೆಯಿಡುವ ಬಡವರನು / ಉದ್ಧರಿಸುವನಾತ ದಿಕ್ಕಿಲ್ಲದ ದೀನದಲಿತರನು //
13 : ದೀನದರಿದ್ರರಿಗೆ ದಯೆಯ ತೋರುವನು / ದಲಿತರ ಪ್ರಾಣವನು ಕಾಪಾಡುವನು //
17 : ಶಾಶ್ವತವಾಗಲಿ ಶ್ರೀನಾಮ ಆತನಿಗೆ / ಬೆಳಗಲಿ ಆತನ ಕೀರ್ತಿ ಸೂರ್ಯನಿರುವವರೆಗೆ / ಆತನಾಶೀರ್ವಾದ ಕೋರಲಿ ಸರ್ವರು ತಮಗೆ / ಶುಭವೆನ್ನಲಿ ಸಕಲ ರಾಷ್ಟ್ರಗಳು ಆತನಿಗೆ //
21 : ಅದೇ ಗಳಿಗೆಯಲ್ಲಿ ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.
22 : ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ. ಪುತ್ರನು ಯಾರೆಂದು ಪಿತನ ಹೊರತು ಬೇರಾರೂ ಅರಿಯರು. ಪಿತನು ಯಾರೆಂದು ಪುತ್ರನು ಮತ್ತು ಯಾರಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ ಅವರೇ ಹೊರತು ಮತ್ತಾರೂ ಅರಿಯರು,” ಎಂದು ಹೇಳಿದರು.
23 : ಅನಂತರ ಯೇಸು ಶಿಷ್ಯರ ಕಡೆ ತಿರುಗಿ, ಅವರಿಗೆ ಪ್ರತ್ಯೇಕವಾಗಿ, “ನೀವು ಕಾಣುವುದನ್ನು ಕಾಣುವ ಕಣ್ಣುಗಳು ಭಾಗ್ಯವುಳ್ಳವು.
24 : ಏಕೆಂದರೆ, ಎಷ್ಟೋ ಪ್ರವಾದಿಗಳು ಹಾಗೂ ಅರಸರು ನೀವು ನೋಡುವುದನ್ನು ನೋಡುವುದಕ್ಕೂ, ನೀವು ಕೇಳುವುದನ್ನು ಕೇಳುವುದಕ್ಕೂ ಆಶಿಸಿದರು. ಆದರೂ ಅದನ್ನು ಅವರು ನೋಡಲೂ ಇಲ್ಲ, ಕೇಳಲೂ ಇಲ್ಲ ಎಂದು ನಿಮಗೆ ಹೇಳುತ್ತೇನೆ,” ಎಂದರು.
ಚಿಂತನೆ
ಸಂತ ಪ್ರಾನ್ಸಿಸ್ ಕ್ಸೇವಿಯರ್
ಸ್ಪೇನ್ ದೇಶದ ದಾನ್ ಜುವಾನ್ ಮತ್ತು ಮರಿಯಾ ದಂಪತಿಗಳಿಗೆ ಎಪ್ರಿಲ್ ೭, ೧೫೦೫ ರಲ್ಲಿ ಹುಟ್ಟಿದ ಫ್ರಾನ್ಸಿಸ್ ವಿದ್ಯಾಭ್ಯಾಸಕ್ಕಾಗಿ ಪ್ಯಾರಿಸ್ಗೆ ಹೊರಡುತ್ತಾರೆ. ತಂದೆ ರಾಜನ ಆಸ್ಥಾನದಲ್ಲಿ ಪ್ರಮುಖ ಹುದ್ದೆಯಲ್ಲಿದ್ದು ಮಗ ತನಗಿಂತ ಎತ್ತರ ಬೆಳೆಯಬೇಕೆಂದು ಆಶಿಸಿದ್ದ.
ಫ್ರ್ರಾನ್ಸಿಸ್ ಪ್ರತಿಭಾವಂತ, ತತ್ವ ಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದುಕೊಂಡ. ಸಂತ ಇಗ್ನೇಷಿಯಸ್ ಲೊಯೊಲಾರವರಿಂದ ಪ್ರೇರಣೆ ಪಡೆದು ಆಗಸ್ಟ್ ೧೫, ೧೫೩೪ ರಲ್ಲಿ ಜಸುಯಿಟ್ ಸಭೆ ಸೇರಿ ಜೂನ್ ೨೪, ೧೫೩೭ ರಲ್ಲಿ ಧರ್ಮಗುರುವಾದರು.
ಮೇ ೬, ೧೫೪೨ ರಂದು ಗೋವಾಕ್ಕೆ ಬಂದ ಫ್ರಾನ್ಸೀಸ್, ಮುಂದಿನ ಹತ್ತು ವರ್ಷಗಳಲ್ಲಿ ಸ್ಥಳೀಯರ ಭಾಷೆ ಕಲಿತು ಬೋಧನೆ ಮಾಡಿದರು. ಗೋವಾ, ಕೇರಳ, ತಮಿಳುನಾಡಿನ ಸಮುದ್ರತೀರದ ಪ್ರವೇಶಗಳು, ಶ್ರೀಲಂಕಾ, ಮಲೇಷಿಯಾ ಹಾಗೂ ಜಪಾನ್ ರಾಷ್ಡ್ರಗಳಲ್ಲಿ ಧರ್ಮಪ್ರಚಾರ ಮಾಡುತ್ತಾರೆ. ಪಾಶ್ಚಾತ್ಯ ಸಂಸ್ಕ್ರತಿ ಮತ್ತು ಜೀವನ ಶೈಲಿ ಬದಿಗೊತ್ತಿ ಸ್ಥಳೀಯರ ಭಾಷೆ, ಸಂಸ್ಕೃತಿಗೆ ಆದ್ಯತೆ ನೀಡಿದರು. ತಮ್ಮ ಬೋಧನೆ, ವ್ಯಕ್ತಿತ್ವ, ಸರಳ ಜೀವನ ಶೈಲಿಯಿಂದ ಜನರನ್ನು ಕ್ರಿಸ್ತಡೆಗೆ ಕರೆತಂದರು.
No comments:
Post a Comment