ಭಾನುವಾರ/ಹಸಿರು/ಸಾಧಾರಣ ಕಾಲದ ಎರಡನೇ ಭಾನುವಾರ
1ನೇ ವಾಚನ - ಯೆಶಾಯ 49: 3, 5 - 6
ಕೀರ್ತನೆ - 40:2, 4, 7-8, 8-9, 10
2ನೇ ವಾಚನ - 1 ಕೊರಿಂಥ 1:1-3
ಶುಭಸಂದೇಶ - ಯೊವಾನ್ನ 1:29-34
------------------------
1ನೇ ವಾಚನ - ಯೆಶಾಯ 49: 3, 5 - 6
3 : ಆತನೆನಗೆ ಇಂತೆಂದ: “ನೀನೆನ್ನ ದಾಸ; ನನ್ನ ಮಹಿಮೆ ಬೆಳಗಿಸುವ ಇಸ್ರಯೇಲ.”
4 : ಇಂತೆಂದುಕೊಂಡೆ ನಾನಾಗ: ವ್ಯರ್ಥವಾಯಿತು ನನ್ನ ಸಾಮಥ್ರ್ಯವೆಲ್ಲ ಶೂನ್ಯವಾಗಿ ಹೋಯಿತು ನನ್ನ ಶಕ್ತಿಯೆಲ್ಲ ನನಗೆ ದೊರಕುವುದು ನ್ಯಾಯ ಸರ್ವೇಶ್ವರನ ಕೈಯಲ್ಲೇ, ನನಗೆ ಬರುವುದು ಬಹುಮಾನ ಆ ದೇವರಿಂದಲೇ.
5 : ಯಕೋಬ್ಯರನ್ನು ತನ್ನ ಬಳಿಗೆ ಕರೆತರಲು ಇಸ್ರಯೇಲರನ್ನು ತನ್ನೊಂದಿಗೆ ಸೇರಿಸಿಕೊಳ್ಳಲು ತನ್ನ ದಾಸನನ್ನಾಗಿ ನನ್ನ ರೂಪಿಸಿದನು, ತಾಯ ಗರ್ಭದಲ್ಲಿದ್ದಾಗಲೇ ಮಾಡಿದನಿದನು. ಸನ್ಮಾನ್ಯನು ನಾನು ಸರ್ವೇಶ್ವರನ ದೃಷ್ಟಿಯಲಿ ನನ್ನ ಶಕ್ತಿಸಾಮಥ್ರ್ಯ ಇರುವುದು ಆ ದೇವರಲಿ.
6 : ಮತ್ತೆ ಆತ ಇಂತೆಂದನು ನನಗೆ: “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”
-----------------
ಕೀರ್ತನೆ - 40:2, 4, 7-8, 8-9, 10
2 : ಮೇಲೆತ್ತಿದನು ವಿನಾಶದ ಕೆಸರಿಂದ, ಕರಾಳ ಕೂಪದಿಂದ | ಗೋರ್ಕಲ್ಲ ಮೇಲಿರಿಸಿ ಹೆಜ್ಜೆಯಿಡಿಸಿದನು ಅತಿ ಧೈರ್ಯದಿಂದ ||
4 : ಪ್ರಭುವಿನಲ್ಲೆ ಭರವಸೆ ಇಟ್ಟು ನಡೆವಾತನು ಧನ್ಯನು | ಗರ್ವಿಗಳನು, ಸುಳ್ಳುದೇವರನು, ಹಿಂಬಾಲಿಸನವನು ||
7 : ನಾನೋಗೊಡುತ ಇಂತೆಂದೆ: “ಇಗೋ ನಾನೇ ಬರುತ್ತಿರುವೆ | ಗ್ರಂಥ ಸುರುಳಿಯಲಿ ನನ್ನ ಕುರಿತು ಲಿಖಿತವಾಗಿದೆಯಲ್ಲವೇ? ||
8 : ನಿನ್ನ ಚಿತ್ತಾನುಸಾರ ನಡೆವುದೇ ನನಗೆ ಪರಮಾವೇಶ | ನನ್ನಂತರಂಗದಲಿದೆ ದೇವಾ, ನಿನ್ನ ಧರ್ಮೋಪದೇಶ”||
9 : ಜೀವೋದ್ಧಾರದ ಶುಭಸಂದೇಶವನು ಸಾರಿದೆ ಮಹಾಸಭೆಗೆ || ನಾ ಸಾರಿದೆ ಅದನು ಮೌನವಿರದೆ, ಇದು ಗೊತ್ತಿದೆ ಪ್ರಭು ನಿನಗೆ ||
10 : ಬಚ್ಚಿಟ್ಟುಕೊಳ್ಳಲಿಲ್ಲ ನನ್ನೆದೆಯೊಳು ನಿನ್ನ ಸತ್ಸಂಬಂಧವನು | ಪ್ರಕಟಿಸಿದೆನು ಜೀವೋದ್ಧಾರವನು, ನಿನ್ನ ಪ್ರಾಮಾಣಿಕತೆಯನು | ಮಹಾಸಭೆಗೆ ಮರೆಯಿಸದೆ ಸಾರಿದೆನು ನಿನ್ನ ಪ್ರೀತಿ ಸತ್ಯತೆಯನು ||
------------------------
2ನೇ ವಾಚನ - 1 ಕೊರಿಂಥ 1:1-3
1 : ಕ್ರಿಸ್ತಯೇಸುವಿನಲ್ಲಿ ಪುನೀತರಾಗಿ ದೇವಜನರಾಗಲು ಕರೆಹೊಂದಿರುವ ಕೊರಿಂಥದ ಶ್ರೀಸಭೆಯವರಿಗೂ ಹಾಗೂ ಪ್ರಭು ಯೇಸುಕ್ರಿಸ್ತರನ್ನು ಎಲ್ಲೆಡೆಯೂ ನಾಮಸ್ಮರಣೆ ಮಾಡುವ ಸರ್ವಜನರಿಗೂ - ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾಗಲು ಕರೆಹೊಂದಿದ ಪೌಲನಾದ ನಾನು ಸಹೋದರ ಸೊಸ್ಥೆನನೊಂದಿಗೆ ಸೇರಿ ಬರೆಯುವ ಪತ್ರ.
2 : ಯೇಸುಕ್ರಿಸ್ತರು ನಮಗೂ ಸಮಸ್ತ ದೇವಜನರಿಗೂ ಪ್ರಭುವಾಗಿದ್ದಾರೆ.
-----------------
ಶುಭಸಂದೇಶ - ಯೊವಾನ್ನ 1:29-34
29 : ಮರುದಿನ ಯೊವಾನ್ನನು, ತಾನಿದ್ದಲ್ಲಿಗೇ ಯೇಸು ಬರುತ್ತಿರುವುದನ್ನು ಕಂಡು, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ; ಲೋಕದ ಪಾಪಗಳನ್ನು ಪರಿಹರಿಸುವವರು ಇವರೇ.
30 : ಇವರು ‘ನನ್ನ ಬಳಿಕ ಬಂದವರಾದರೂ ನನಗಿಂತಲೂ ಮೊದಲೇ ಇದ್ದವರು; ಆದುದರಿಂದ ಇವರು ನನಗಿಂತಲೂ ಶ್ರೇಷ್ಠರು,’ ಎಂದು ನಾನು ಹೇಳಿದುದು ಇವರನ್ನು ಕುರಿತೇ.
31 : ಇಸ್ರಯೇಲರಿಗೆ ಇವರನ್ನು ತೋರ್ಪಡಿಸಬೇಕೆಂದೇ ನಾನು ನೀರಿನಿಂದ ಸ್ನಾನದೀಕ್ಷೆ ಕೊಡುತ್ತಾ ಬಂದೆನು; ಬರಬೇಕಾಗಿದ್ದವರು ಇವರೇ ಎಂದು ನನಗೂ ತಿಳಿದಿರಲಿಲ್ಲ,” ಎಂದು ನುಡಿದನು.
32 : ಯೊವಾನ್ನನು ತನ್ನ ಸಾಕ್ಷ್ಯವನ್ನು ಮುಂದುವರಿಸುತ್ತಾ, “ಪಾರಿವಾಳದ ರೂಪದಲ್ಲಿ ಪವಿತ್ರಾತ್ಮ ಸ್ವರ್ಗದಿಂದ ಇಳಿದು ಬಂದು ಅವರ ಮೇಲೆ ನೆಲಸುವುದನ್ನು ನಾನು ನೋಡಿದೆನು.
33 : ಬರಬೇಕಾಗಿದ್ದವರು ಇವರೇ ಎಂದು ನನಗೂ ತಿಳಿದಿರಲಿಲ್ಲ. ಆದರೆ ನೀರಿನಿಂದ ಸ್ನಾನದೀಕ್ಷೆ ಕೊಡುವಂತೆ ನನ್ನನ್ನು ಕಳುಹಿಸಿದ ದೇವರು, ‘ಪವಿತ್ರಾತ್ಮ ಇಳಿದು ಬಂದು ಯಾವ ವ್ಯಕ್ತಿಯ ಮೇಲೆ ನೆಲಸುವುದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವಾತ,’ ಎಂದಿದ್ದರು.
34 : ಅದನ್ನು ನಾನು ಕಣ್ಣಾರೆ ನೋಡಿದ್ದೇನೆ. ಆದುದರಿಂದ ಅವರೇ ದೇವರ ಪುತ್ರನೆಂದು ಸಾಕ್ಷಿ ನೀಡುತ್ತಿದ್ದೇನೆ,” ಎಂದು ಹೇಳಿದನು.
------------------------
ಚಿಂತನೆ

ಇಂದಿನ ಕ್ರೈಸ್ತ ಸಮಾಜದಲ್ಲಿ ವಿಶ್ವಾಸದ ವ್ಯಾಖ್ಯಾನವೇ ಬದಲಾಗಿದೆ. ವೇಲಾಂಗಣ್ಣಿ, ಡೋರ್ನಳ್ಳಿ, ಶಿವಾಜಿನಗರ, ಯೇಸುಬಾಲರ ದೇವಾಲಯಗಳಿಗೆ, ಇತರ ಪುಣ್ಯಕ್ಷೇತ್ರಗಳಿಗೆ ಭೇಟಿ ಕೊಡುವ ಸಾವಿರಾರು ಮಂದಿಯನ್ನು ನೋಡಿ ಕ್ರೈಸ್ತ ವಿಶ್ವಾಸ ಹೆಚ್ಚಾಗಿದೆ ಎನ್ನುತ್ತೇವೆ. ರಾತ್ರಿ ಹೊತ್ತು ಬಾಲ ಯೇಸುವಿನ ದೇವಾಲಯಕ್ಕೆ ಭೇಟಿ ಕೊಡುವ ನಟ ನಟಿಯರು, ರಾಜಕಾರಣಿಗಳನ್ನು ನೋಡಿದವರು ಕ್ರೈಸ್ತ ವಿಶ್ವಾಸ ಹೆಚ್ಚಾಗಿದೆ ಎನ್ನುತ್ತಾರೆ. ಅದೆಲ್ಲಾ ವಿಶ್ವಾಸ ಎಂದು ವ್ಯಾಖ್ಯಾನಿಸುವುದೇ ತಪ್ಪು.
ನಿಜವಾದ ವಿಶ್ವಾಸ ಸಾಕ್ಷಿ ನೀಡುವುದು. ತಾನು ನಂಬಿದ ಮೌಲ್ಯಗಳಿಗಾಗಿ ಬದುಕುವುದು. ಭ್ರಷ್ಟ ಸಮಾಜ, ಅಸತ್ಯ ವಾತಾವರಣದಲ್ಲೂ ಪ್ರಾಮಾಣಿಕಾರಗಿ ಬಾಳುವುದು. ತನ್ನ ವಿಶ್ವಾಸದಿಂದ ಕಿರುಕುಳ ಬಂದರೆ ಬಹಿರಂಗವಾಗಿಯೇ ಅದನ್ನು ಎದುರಿಸಿ ಸಹಿಸಿ ವಿಶ್ವಾಸ ಬಿಡದೆ ನಡೆಯುವುದು. ಇದಾಗಬೇಕು ನಮ್ಮ ವಿಶ್ವಾಸ ಮತ್ತು ಬದುಕು. ನಮ್ಮ ವಿಶ್ವಾಸ ಪುಣ್ಯಕ್ಷೇತ್ರಗಳನ್ನು ಮೀರಿದೆಯೇ?
(ಕೃಪೆ: ಪೂಜಾ ದಿನಚರಿ ಪ್ರತಿದಿನ ಶುಭಸಂದೇಶ ಮತ್ತು ಚಿಂತನೆ)
--------------------
© 'ದನಿ' ಮಾಧ್ಯಮ ಮನೆ
ದನಿ ಮಾಧ್ಯಮ ಮನೆಯ 'ದನಿ' ಇ-ಮಾಸಿಕಕ್ಕೆ ಬೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ
No comments:
Post a Comment