ಸಾಧಾರಣ ಕಾಲದ ಎರಡನೆಯ ಶುಕ್ರವಾರ
----------------
4 : ಜನರು ದಾವೀದನಿಗೆ, “ ‘ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಆಗ ನೀನು ಅವನನ್ನು ನಿನ್ನ ಇಷ್ಟಾನುಸಾರ ನಡೆಸಬಹುದು,’ ಎಂದು ಸರ್ವೇಶ್ವರ ನಿನಗೆ ಹೇಳಿದ ಮಾತು ನೆರವೇರುವ ಸುದಿನವಿದು,” ಎಂದರು. ಅವನೆದ್ದು ಮೆಲ್ಲಗೆ ಹೋಗಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡನು.
5 : ಅನಂತರದಲ್ಲೇ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿದ್ದಕ್ಕಾಗಿ ಅವನ ಮನಸ್ಸಾಕ್ಷಿ ಅವನನ್ನು ಹಂಗಿಸತೊಡಗಿತು. 6ಅವನು ತನ್ನ ಜನರಿಗೆ, “ಆತ ಸರ್ವೇಶ್ವರನಿಂದ ಅಭಿಷಿಕ್ತನು ಹಾಗು ಆತನು ನನ್ನ ಒಡೆಯನು ಆಗಿದ್ದಾರೆ; ನಾನು ನಿಮ್ಮ ಮಾತು ಕೇಳಿ ಸರ್ವೇಶ್ವರನ ಅಭಿಷಿಕ್ತನ ವಿರೋಧವಾಗಿ ಕೈಯೆತ್ತದಂತೆ ಆ ಸರ್ವೇಶ್ವರನೇ ನನಗೆ ಅಡ್ಡಿಮಾಡಲಿ,” ಎಂದನು.
6 : ಅವನು ತನ್ನ ಜನರಿಗೆ, “ಆತ ಸರ್ವೇಶ್ವರನಿಂದ ಅಭಿಷಿಕ್ತನು ಹಾಗು ಆತನು ನನ್ನ ಒಡೆಯನು ಆಗಿದ್ದಾರೆ; ನಾನು ನಿಮ್ಮ ಮಾತು ಕೇಳಿ ಸರ್ವೇಶ್ವರನ ಅಭಿಷಿಕ್ತನ ವಿರೋಧವಾಗಿ ಕೈಯೆತ್ತದಂತೆ ಆ ಸರ್ವೇಶ್ವರನೇ ನನಗೆ ಅಡ್ಡಿಮಾಡಲಿ,” ಎಂದನು.
7 : ಹೀಗೆ ಸೌಲನಿಗೆ ವಿರುದ್ಧ ತನ್ನ ಜನರು ದಂಗೆಯೇಳದಂತೆ ತಡೆದನು.
8 : ಸೌಲನು ಗವಿಯಿಂದ ಹೊರಗೆ ಬಂದು ಸ್ವಲ್ಪ ಮುಂದೆ ಹೋದಮೇಲೆ ದಾವೀದನೂ ಹೊರಗೆ ಬಂದು, “ಅರಸರೇ, ನನ್ನ ಒಡೆಯರೇ,” ಎಂದು ಅವನನ್ನು ಕೂಗಿದನು. ಸೌಲನು ಹಿಂದಿರುಗಿ ನೋಡಿದನು. ಆಗ ಅವನಿಗೆ ಸಾಷ್ಟಾಂಗ ನಮಸ್ಕಾರಮಾಡಿ,
9 : “ನಿಮಗೆ ನಾನು ಕೇಡುಮಾಡಬೇಕೆಂದಿದ್ದೇನೆಂದು ಹೇಳುವವರ ಮಾತಿಗೆ ನೀವು ಕಿವಿಗೊಡಬೇಡಿ.
10 : ಇಂದು ಈ ಗವಿಯಲ್ಲಿ ಸರ್ವೇಶ್ವರ ನಿಮ್ಮನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೆಂಬುದು ಈಗ ನಿಮಗೆ ಗೊತ್ತಾಗಿರಬೇಕು. ನಿಮ್ಮನ್ನು ಕೊಂದುಬಿಡಬೇಕೆಂದು ಕೆಲವರು ನನಗೆ ಹೇಳಿದರು. ಆದರೆ ನಾನು ಅವರಿಗೆ, ‘ಸರ್ವೇಶ್ವರನಿಂದ ಅಭಿಷಿಕ್ತರಾದ ನನ್ನ ಒಡೆಯರ ಮೇಲೆ ಕೈಯೆತ್ತುವುದಿಲ್ಲ,’ ಎಂದು ಹೇಳಿ ನಿಮ್ಮನ್ನು ಉಳಿಸಿದೆ.
11 : ನೀವು ನನ್ನ ತಂದೆ; ಇಗೋ ನೋಡಿ! ನನ್ನ ಕೈಯಲ್ಲಿ ನಿಮ್ಮ ನಿಲುವಂಗಿಯ ತುಂಡು ಇದೆ; ನಾನು ನಿಮ್ಮನ್ನು ಕೊಲ್ಲದೆ ನಿಮ್ಮ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡೆನಷ್ಟೆ. ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವುದಿಲ್ಲ; ನಾನು ನಿಮಗೆ ವಿರೋಧವಾಗಿ ದ್ರೋಹ ಮಾಡಲಿಲ್ಲ ಎಂದು ತಿಳಿದುಕೊಳ್ಳಿ; ಆದರೂ ನೀವು ನನ್ನ ಪ್ರಾಣಕ್ಕೆ ಹೊಂಚು ಹಾಕುತ್ತಿರುವಿರಲ್ಲವೆ?
12 : ಸರ್ವೇಶ್ವರನೇ ನಮ್ಮ ಉಭಯರ ವ್ಯಾಜ್ಯವನ್ನು ತೀರಿಸಲಿ; ಅವರೇ ನನಗಾಗಿ ನಿಮಗೆ ಮುಯ್ಯಿಸಲ್ಲಿಸಲಿ; ನಾನಂತೂ ನಿಮಗೆ ವಿರೋಧವಾಗಿ ಕೈಯೆತ್ತುವುದಿಲ್ಲ.
13 : ಇಸ್ರಯೇಲರಲ್ಲಿ ‘ಕೆಟ್ಟವರಿಂದಲೇ ಕೇಡು’ ಎಂಬುದಾಗಿ ಹಿರಿಯರಿಂದ ಬಂದ ಗಾದೆಯುಂಟು. ನಾನು ನಿಮಗೆ ವಿರೋಧವಾಗಿ ಕೈಯೆತ್ತುವುದಿಲ್ಲ.
14 : ಇಸ್ರಯೇಲರ ಅರಸರೇ, ಯಾರನ್ನು ಹಿಂದಟ್ಟಿ ಹೊರಟಿದ್ದೀರಿ? ಯಾರನ್ನು ಹಿಡಿಯಬೇಕೆಂದಿರುತ್ತೀರಿ? ಸತ್ತ ನಾಯಿಯನ್ನೇ? ಒಂದು ಬಡ ಸೊಳ್ಳೆಯನ್ನೇ?
15 : ಸರ್ವೇಶ್ವರ ನ್ಯಾಯಾಧಿಪತಿಯಾಗಿ ನಮ್ಮಿಬ್ಬರ ವ್ಯಾಜ್ಯವನ್ನು ತೀರಿಸಲಿ; ಅವರೇ ನೋಡಿ ನನ್ನ ಪರವಾಗಿ ವಾದಿಸಿ ನನ್ನನ್ನು ನಿಮ್ಮ ಕೈಯಿಂದ ತಪ್ಪಿಸಲಿ,” ಎಂದು ಹೇಳಿದನು.
16 : ದಾವೀದನ ಮಾತುಗಳು ಮುಗಿದನಂತರ ಸೌಲನು, “ದಾವೀದನೇ, ನನ್ನ ಮಗನೇ, ಇದು ನಿಜವಾಗಿಯೂ ನಿನ್ನ ಸ್ವರವೇ?” ಎಂದು ಗಟ್ಟಿಯಾಗಿ ಅತ್ತನು.
17 : ಇದಲ್ಲದೆ ಅವನು ದಾವೀದನಿಗೆ, “ನೀನು ನನಗಿಂತ ನೀತಿವಂತ; ನಾನು ನಿನಗೆ ಕೇಡುಮಾಡಿದರೂ ನೀನು ನನಗೆ ಒಳ್ಳೆಯದನ್ನೇ ಮಾಡಿದೆ.
18 : ಸರ್ವೇಶ್ವರ ನನ್ನನ್ನು ನಿನ್ನ ಕೈಗೆ ಒಪ್ಪಿಸಿ ಕೊಟ್ಟರೂ ನೀನು ನನ್ನನ್ನು ಕೊಲ್ಲಲಿಲ್ಲ. ಇದರಿಂದ ನೀನು ನನಗೆ ಹಿತವನ್ನೇ ಮಾಡುವಂಥವನೆಂಬುದು ಈ ದಿನ ಖಚಿತವಾಯಿತು.
19 : ಯಾವನಾದರೂ ತನ್ನ ಕೈಗೆ ಸಿಕ್ಕಿದ ವೈರಿಯನ್ನು ಸುಕ್ಷೇಮದಿಂದ ಕಳುಹಿಸಿಬಿಡುತ್ತಾನೆಯೇ? ನೀನು ಈ ದಿನ ನನಗೆ ಮಾಡಿದ ಉಪಕಾರಕ್ಕಾಗಿ ಸರ್ವೇಶ್ವರ ನಿನಗೆ ಪ್ರತ್ಯುಪಕಾರಮಾಡಲಿ.
20 : ಕೇಳು; ನೀನು ಹೇಗೂ ಅರಸನಾಗುವೆಯೆಂದೂ ಇಸ್ರಯೇಲ್ ರಾಜ್ಯ ನಿನ್ನ ಆಳ್ವಿಕೆಯಲ್ಲಿ ಸ್ಥಿರವಾಗುವುದೆಂದೂ ಬಲ್ಲೆ.
21 : ಹೀಗಿರುವುದರಿಂದ ನೀನು ನನ್ನ ಸಂತಾನವನ್ನು ನಿರ್ಮೂಲಮಾಡುವುದು ಇಲ್ಲವೆಂದೂ ನಮ್ಮ ಕುಲದಿಂದ ನನ್ನ ಹೆಸರನ್ನು ತೆಗೆದುಹಾಕುವುದಿಲ್ಲವೆಂದೂ ಸರ್ವೇಶ್ವರನ ಹೆಸರಿನಲ್ಲಿ ಪ್ರಮಾಣ ಮಾಡು,” ಎಂದು ಬೇಡಿಕೊಂಡನು. ಹಾಗೆಯೇ ದಾವೀದನು ಪ್ರಮಾಣ ಮಾಡಿದನು.
-----------------------
ಕೀರ್ತನೆ : 57:2, 3-4, 6, 11
ಕರುಣಿಸೆನ್ನನು, ಕರುಣಿಸು, ದೇವನೇ
1 : “ಕರುಣಿಸೆನ್ನನು, ಕರುಣಿಸು, ದೇವನೇ / ನನ್ನಾತ್ಮದ ಆಸರೆಯು ನೀನೇ // ನನ್ನ ಗಂಡಾಂತರವು ನೀಗುವ ಪರಿಯಂತ / ನಿನ್ನ ರೆಕ್ಕೆಗಳಡಿ ನಾನಿರುವೆ ಸುರಕ್ಷಿತ //
2 : ನನ್ನ ಕಾರ್ಯವನು ಕೈಗೂಡಿಸುವ ದೇವನಿಗೆ / ನಾ ಮೊರೆಯಿಡುವೆ ಪರಾತ್ಪರನಾದಾ ಕರ್ತನಿಗೆ //
3 : ಆತ ನೆರವಾಗುವನೆನಗೆ ಪರಲೋಕದಿಂದ / ತಪ್ಪಿಸುವನು ನನ್ನನು ಬೆನ್ನಟ್ಟಿ ಬರುವವರಿಂದ // ತೋರ್ಪಡಿಸುವನು ಸತ್ಯತೆಯನು / ತನ್ನ ಅಚಲ ಪ್ರೀತಿಯನಾ ದೇವನು //
4 : ಸಿಕ್ಕಿಕೊಂಡಿರುವೆ ನರಭಕ್ಷಕ ಸಿಂಹಗಳ ನಡುವೆ / ಅವುಗಳ ಹಲ್ಲುಗಳೊ ಭರ್ಜಿ ಬಾಣಗಳಂತಿವೆ / ನಾಲಿಗೆಗಳು ಹದವಾದ ಕತ್ತಿ ಕಠಾರಿಗಳಂತಿವೆ //
5 : ಮೇಲಣ ಲೋಕದಲಿ ಮೆರೆಯಲಿ ದೇವಾ, ನಿನ್ನ ಹಿರಿಮೆ / ಭೂಮಂಡಲದಲಿ ಹಬ್ಬಿ ಹರಡಲಿ ನಿನ್ನಾ ಮಹಿಮೆ //
6 : ಕಂಟಕ ಬಂದಿದೆ ನನ್ನ ಪ್ರಾಣಕೆ / ಹಾಕಿಹರು ಕಾಲಿಗೆ ಜೀರುಗುಣಿಕೆ // ತೋಡಿಹರು ಗುಂಡಿಯನು ನಾ ನಡೆವ ದಾರಿಯಲೆ / ತಾವೆ ತಟಕ್ಕನೆ ಬಿದ್ದು ಹೋದರು ಅದರಲೆ //
11 : ಮೇಲಣ ಲೋಕದಲಿ ಮೆರೆಯಲಿ ದೇವಾ, ನಿನ್ನ ಹಿರಿಮೆ / ಭೂಮಂಡಲದಲಿ ಹಬ್ಬಿ ಹರಡಲಿ ನಿನ್ನಾ ಮಹಿಮೆ //
--------------------
ಶುಭಸಂದೇಶ: ಮಾರ್ಕ 3:13-19
13 : ಅನಂತರ ಯೇಸುಸ್ವಾಮಿ ಬೆಟ್ಟವನ್ನೇರಿ, ತಮಗೆ ಒಪ್ಪಿಗೆಯಾದವರನ್ನು ಕರೆದರು. ಅವರು ಹತ್ತಿರಕ್ಕೆ ಬಂದರು. ಯೇಸು ಹನ್ನೆರಡು ಮಂದಿಯನ್ನು ಆಯ್ದುಕೊಂಡು, ‘ಪ್ರೇಷಿತರು’ ಎಂದು ಅವರಿಗೆ ಹೆಸರಿಟ್ಟರು.
14 : “ನನ್ನ ಜೊತೆಯಲ್ಲಿ ಇರಲು ನಿಮ್ಮನ್ನು ಆರಿಸಿಕೊಂಡಿದ್ದೇನೆ. ಶುಭಸಂದೇಶವನ್ನು ಸಾರಲು ನಿಮ್ಮನ್ನು ಕಳುಹಿಸುತ್ತೇನೆ.
15 : ದೆವ್ವಗಳನ್ನು ಬಿಡಿಸುವ ಅಧಿಕಾರವನ್ನು ನಿಮಗೆ ಕೊಡುತ್ತೇನೆ”, ಎಂದು ಅವರಿಗೆ ಹೇಳಿದರು. ಹೀಗೆ ನೇಮಕಗೊಂಡ ಹನ್ನೆರಡು ಮಂದಿ ಯಾರೆಂದರೆ:
16 : ಸಿಮೋನ (ಯೇಸು ಈತನಿಗೆ ‘ಪೇತ್ರ’ ಎಂದು ಹೆಸರಿಟ್ಟರು).
17 : ಜೆಬೆದಾಯನ ಮಗ ಯಕೋಬ ಮತ್ತು ಅವನ ಸಹೋದರ ಯೊವಾನ್ನ (ಯೇಸು ಇವರಿಬ್ಬರಿಗೆ ‘ಬೊವನೆರ್ಗೆಸ್’ ಎಂದರೆ ‘ಸಿಡಿಲಮರಿಗಳು’ ಎಂಬ ಹೆಸರನ್ನಿಟ್ಟರು).
18 : ಅಂದ್ರೆಯ, ಫಿಲಿಪ್ಪ, ಬಾರ್ತಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗ ಯಕೋಬ, ತದ್ದಾಯ, ದೇಶಾಭಿಮಾನಿ ಆದ ಸಿಮೋನ ಮತ್ತು
19 : ಮುಂದೆ ಗುರುದ್ರೋಹಿಯಾಗಲಿದ್ದ ಯೂದ ಇಸ್ಕರಿಯೋತ.
------------------------
ಪವಿತ್ರಗ್ರಂಥ ವಾಚನ: 1 ಸಮುವೇಲ 24:2-21
ಕೀರ್ತನೆ : 57:2, 3-4, 6, 11
ಶುಭಸಂದೇಶ: ಮಾರ್ಕ 3:13-19
ಸ್ಮರಣೆ : ಪ್ರಾನ್ಸಿಸ್ ದೆ ಸೇಲ್ಸ್ (ಧರ್ಮಾಧ್ಯಕ್ಷ ಮತ್ತು ಧರ್ಮಸಭೆಯ ಪಂಡಿತ)
ಪವಿತ್ರಗ್ರಂಥ ವಾಚನ: 1 ಸಮುವೇಲ 24:2-21
2 : ಆಗ ಅವನು ಇಸ್ರಯೇಲರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ಕಾಡುಗುರಿಬಂಡೆಗಳಲ್ಲಿದ್ದ ದಾವೀದನನ್ನೂ ಅವನ ಜನರನ್ನೂ ಹುಡುಕುವುದಕ್ಕಾಗಿ ಹೊರಟನು.
3 : ಮಾರ್ಗದಲ್ಲಿ ಕುರಿಹಟ್ಟಿಗಳ ಬಳಿಯಲ್ಲಿ ಒಂದು ಗವಿಯನ್ನು ಕಂಡು ಶೌಚಕ್ಕಾಗಿ ಅದರೊಳಗೆ ಪ್ರವೇಶಿಸಿದನು. ದಾವೀದನೂ ಅವನ ಜನರೂ ಅದೇ ಗವಿಯ ಹಿಂಗಡೆಯಲ್ಲಿ ಅಡಗಿಕೊಂಡಿದ್ದರು.4 : ಜನರು ದಾವೀದನಿಗೆ, “ ‘ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಆಗ ನೀನು ಅವನನ್ನು ನಿನ್ನ ಇಷ್ಟಾನುಸಾರ ನಡೆಸಬಹುದು,’ ಎಂದು ಸರ್ವೇಶ್ವರ ನಿನಗೆ ಹೇಳಿದ ಮಾತು ನೆರವೇರುವ ಸುದಿನವಿದು,” ಎಂದರು. ಅವನೆದ್ದು ಮೆಲ್ಲಗೆ ಹೋಗಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡನು.
5 : ಅನಂತರದಲ್ಲೇ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿದ್ದಕ್ಕಾಗಿ ಅವನ ಮನಸ್ಸಾಕ್ಷಿ ಅವನನ್ನು ಹಂಗಿಸತೊಡಗಿತು. 6ಅವನು ತನ್ನ ಜನರಿಗೆ, “ಆತ ಸರ್ವೇಶ್ವರನಿಂದ ಅಭಿಷಿಕ್ತನು ಹಾಗು ಆತನು ನನ್ನ ಒಡೆಯನು ಆಗಿದ್ದಾರೆ; ನಾನು ನಿಮ್ಮ ಮಾತು ಕೇಳಿ ಸರ್ವೇಶ್ವರನ ಅಭಿಷಿಕ್ತನ ವಿರೋಧವಾಗಿ ಕೈಯೆತ್ತದಂತೆ ಆ ಸರ್ವೇಶ್ವರನೇ ನನಗೆ ಅಡ್ಡಿಮಾಡಲಿ,” ಎಂದನು.
6 : ಅವನು ತನ್ನ ಜನರಿಗೆ, “ಆತ ಸರ್ವೇಶ್ವರನಿಂದ ಅಭಿಷಿಕ್ತನು ಹಾಗು ಆತನು ನನ್ನ ಒಡೆಯನು ಆಗಿದ್ದಾರೆ; ನಾನು ನಿಮ್ಮ ಮಾತು ಕೇಳಿ ಸರ್ವೇಶ್ವರನ ಅಭಿಷಿಕ್ತನ ವಿರೋಧವಾಗಿ ಕೈಯೆತ್ತದಂತೆ ಆ ಸರ್ವೇಶ್ವರನೇ ನನಗೆ ಅಡ್ಡಿಮಾಡಲಿ,” ಎಂದನು.
7 : ಹೀಗೆ ಸೌಲನಿಗೆ ವಿರುದ್ಧ ತನ್ನ ಜನರು ದಂಗೆಯೇಳದಂತೆ ತಡೆದನು.
8 : ಸೌಲನು ಗವಿಯಿಂದ ಹೊರಗೆ ಬಂದು ಸ್ವಲ್ಪ ಮುಂದೆ ಹೋದಮೇಲೆ ದಾವೀದನೂ ಹೊರಗೆ ಬಂದು, “ಅರಸರೇ, ನನ್ನ ಒಡೆಯರೇ,” ಎಂದು ಅವನನ್ನು ಕೂಗಿದನು. ಸೌಲನು ಹಿಂದಿರುಗಿ ನೋಡಿದನು. ಆಗ ಅವನಿಗೆ ಸಾಷ್ಟಾಂಗ ನಮಸ್ಕಾರಮಾಡಿ,
9 : “ನಿಮಗೆ ನಾನು ಕೇಡುಮಾಡಬೇಕೆಂದಿದ್ದೇನೆಂದು ಹೇಳುವವರ ಮಾತಿಗೆ ನೀವು ಕಿವಿಗೊಡಬೇಡಿ.
10 : ಇಂದು ಈ ಗವಿಯಲ್ಲಿ ಸರ್ವೇಶ್ವರ ನಿಮ್ಮನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೆಂಬುದು ಈಗ ನಿಮಗೆ ಗೊತ್ತಾಗಿರಬೇಕು. ನಿಮ್ಮನ್ನು ಕೊಂದುಬಿಡಬೇಕೆಂದು ಕೆಲವರು ನನಗೆ ಹೇಳಿದರು. ಆದರೆ ನಾನು ಅವರಿಗೆ, ‘ಸರ್ವೇಶ್ವರನಿಂದ ಅಭಿಷಿಕ್ತರಾದ ನನ್ನ ಒಡೆಯರ ಮೇಲೆ ಕೈಯೆತ್ತುವುದಿಲ್ಲ,’ ಎಂದು ಹೇಳಿ ನಿಮ್ಮನ್ನು ಉಳಿಸಿದೆ.
11 : ನೀವು ನನ್ನ ತಂದೆ; ಇಗೋ ನೋಡಿ! ನನ್ನ ಕೈಯಲ್ಲಿ ನಿಮ್ಮ ನಿಲುವಂಗಿಯ ತುಂಡು ಇದೆ; ನಾನು ನಿಮ್ಮನ್ನು ಕೊಲ್ಲದೆ ನಿಮ್ಮ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡೆನಷ್ಟೆ. ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವುದಿಲ್ಲ; ನಾನು ನಿಮಗೆ ವಿರೋಧವಾಗಿ ದ್ರೋಹ ಮಾಡಲಿಲ್ಲ ಎಂದು ತಿಳಿದುಕೊಳ್ಳಿ; ಆದರೂ ನೀವು ನನ್ನ ಪ್ರಾಣಕ್ಕೆ ಹೊಂಚು ಹಾಕುತ್ತಿರುವಿರಲ್ಲವೆ?
12 : ಸರ್ವೇಶ್ವರನೇ ನಮ್ಮ ಉಭಯರ ವ್ಯಾಜ್ಯವನ್ನು ತೀರಿಸಲಿ; ಅವರೇ ನನಗಾಗಿ ನಿಮಗೆ ಮುಯ್ಯಿಸಲ್ಲಿಸಲಿ; ನಾನಂತೂ ನಿಮಗೆ ವಿರೋಧವಾಗಿ ಕೈಯೆತ್ತುವುದಿಲ್ಲ.
13 : ಇಸ್ರಯೇಲರಲ್ಲಿ ‘ಕೆಟ್ಟವರಿಂದಲೇ ಕೇಡು’ ಎಂಬುದಾಗಿ ಹಿರಿಯರಿಂದ ಬಂದ ಗಾದೆಯುಂಟು. ನಾನು ನಿಮಗೆ ವಿರೋಧವಾಗಿ ಕೈಯೆತ್ತುವುದಿಲ್ಲ.
14 : ಇಸ್ರಯೇಲರ ಅರಸರೇ, ಯಾರನ್ನು ಹಿಂದಟ್ಟಿ ಹೊರಟಿದ್ದೀರಿ? ಯಾರನ್ನು ಹಿಡಿಯಬೇಕೆಂದಿರುತ್ತೀರಿ? ಸತ್ತ ನಾಯಿಯನ್ನೇ? ಒಂದು ಬಡ ಸೊಳ್ಳೆಯನ್ನೇ?
15 : ಸರ್ವೇಶ್ವರ ನ್ಯಾಯಾಧಿಪತಿಯಾಗಿ ನಮ್ಮಿಬ್ಬರ ವ್ಯಾಜ್ಯವನ್ನು ತೀರಿಸಲಿ; ಅವರೇ ನೋಡಿ ನನ್ನ ಪರವಾಗಿ ವಾದಿಸಿ ನನ್ನನ್ನು ನಿಮ್ಮ ಕೈಯಿಂದ ತಪ್ಪಿಸಲಿ,” ಎಂದು ಹೇಳಿದನು.
16 : ದಾವೀದನ ಮಾತುಗಳು ಮುಗಿದನಂತರ ಸೌಲನು, “ದಾವೀದನೇ, ನನ್ನ ಮಗನೇ, ಇದು ನಿಜವಾಗಿಯೂ ನಿನ್ನ ಸ್ವರವೇ?” ಎಂದು ಗಟ್ಟಿಯಾಗಿ ಅತ್ತನು.
17 : ಇದಲ್ಲದೆ ಅವನು ದಾವೀದನಿಗೆ, “ನೀನು ನನಗಿಂತ ನೀತಿವಂತ; ನಾನು ನಿನಗೆ ಕೇಡುಮಾಡಿದರೂ ನೀನು ನನಗೆ ಒಳ್ಳೆಯದನ್ನೇ ಮಾಡಿದೆ.
18 : ಸರ್ವೇಶ್ವರ ನನ್ನನ್ನು ನಿನ್ನ ಕೈಗೆ ಒಪ್ಪಿಸಿ ಕೊಟ್ಟರೂ ನೀನು ನನ್ನನ್ನು ಕೊಲ್ಲಲಿಲ್ಲ. ಇದರಿಂದ ನೀನು ನನಗೆ ಹಿತವನ್ನೇ ಮಾಡುವಂಥವನೆಂಬುದು ಈ ದಿನ ಖಚಿತವಾಯಿತು.
19 : ಯಾವನಾದರೂ ತನ್ನ ಕೈಗೆ ಸಿಕ್ಕಿದ ವೈರಿಯನ್ನು ಸುಕ್ಷೇಮದಿಂದ ಕಳುಹಿಸಿಬಿಡುತ್ತಾನೆಯೇ? ನೀನು ಈ ದಿನ ನನಗೆ ಮಾಡಿದ ಉಪಕಾರಕ್ಕಾಗಿ ಸರ್ವೇಶ್ವರ ನಿನಗೆ ಪ್ರತ್ಯುಪಕಾರಮಾಡಲಿ.
20 : ಕೇಳು; ನೀನು ಹೇಗೂ ಅರಸನಾಗುವೆಯೆಂದೂ ಇಸ್ರಯೇಲ್ ರಾಜ್ಯ ನಿನ್ನ ಆಳ್ವಿಕೆಯಲ್ಲಿ ಸ್ಥಿರವಾಗುವುದೆಂದೂ ಬಲ್ಲೆ.
21 : ಹೀಗಿರುವುದರಿಂದ ನೀನು ನನ್ನ ಸಂತಾನವನ್ನು ನಿರ್ಮೂಲಮಾಡುವುದು ಇಲ್ಲವೆಂದೂ ನಮ್ಮ ಕುಲದಿಂದ ನನ್ನ ಹೆಸರನ್ನು ತೆಗೆದುಹಾಕುವುದಿಲ್ಲವೆಂದೂ ಸರ್ವೇಶ್ವರನ ಹೆಸರಿನಲ್ಲಿ ಪ್ರಮಾಣ ಮಾಡು,” ಎಂದು ಬೇಡಿಕೊಂಡನು. ಹಾಗೆಯೇ ದಾವೀದನು ಪ್ರಮಾಣ ಮಾಡಿದನು.
-----------------------
ಕೀರ್ತನೆ : 57:2, 3-4, 6, 11
ಕರುಣಿಸೆನ್ನನು, ಕರುಣಿಸು, ದೇವನೇ
1 : “ಕರುಣಿಸೆನ್ನನು, ಕರುಣಿಸು, ದೇವನೇ / ನನ್ನಾತ್ಮದ ಆಸರೆಯು ನೀನೇ // ನನ್ನ ಗಂಡಾಂತರವು ನೀಗುವ ಪರಿಯಂತ / ನಿನ್ನ ರೆಕ್ಕೆಗಳಡಿ ನಾನಿರುವೆ ಸುರಕ್ಷಿತ //
2 : ನನ್ನ ಕಾರ್ಯವನು ಕೈಗೂಡಿಸುವ ದೇವನಿಗೆ / ನಾ ಮೊರೆಯಿಡುವೆ ಪರಾತ್ಪರನಾದಾ ಕರ್ತನಿಗೆ //
3 : ಆತ ನೆರವಾಗುವನೆನಗೆ ಪರಲೋಕದಿಂದ / ತಪ್ಪಿಸುವನು ನನ್ನನು ಬೆನ್ನಟ್ಟಿ ಬರುವವರಿಂದ // ತೋರ್ಪಡಿಸುವನು ಸತ್ಯತೆಯನು / ತನ್ನ ಅಚಲ ಪ್ರೀತಿಯನಾ ದೇವನು //
4 : ಸಿಕ್ಕಿಕೊಂಡಿರುವೆ ನರಭಕ್ಷಕ ಸಿಂಹಗಳ ನಡುವೆ / ಅವುಗಳ ಹಲ್ಲುಗಳೊ ಭರ್ಜಿ ಬಾಣಗಳಂತಿವೆ / ನಾಲಿಗೆಗಳು ಹದವಾದ ಕತ್ತಿ ಕಠಾರಿಗಳಂತಿವೆ //
5 : ಮೇಲಣ ಲೋಕದಲಿ ಮೆರೆಯಲಿ ದೇವಾ, ನಿನ್ನ ಹಿರಿಮೆ / ಭೂಮಂಡಲದಲಿ ಹಬ್ಬಿ ಹರಡಲಿ ನಿನ್ನಾ ಮಹಿಮೆ //
6 : ಕಂಟಕ ಬಂದಿದೆ ನನ್ನ ಪ್ರಾಣಕೆ / ಹಾಕಿಹರು ಕಾಲಿಗೆ ಜೀರುಗುಣಿಕೆ // ತೋಡಿಹರು ಗುಂಡಿಯನು ನಾ ನಡೆವ ದಾರಿಯಲೆ / ತಾವೆ ತಟಕ್ಕನೆ ಬಿದ್ದು ಹೋದರು ಅದರಲೆ //
11 : ಮೇಲಣ ಲೋಕದಲಿ ಮೆರೆಯಲಿ ದೇವಾ, ನಿನ್ನ ಹಿರಿಮೆ / ಭೂಮಂಡಲದಲಿ ಹಬ್ಬಿ ಹರಡಲಿ ನಿನ್ನಾ ಮಹಿಮೆ //
--------------------
ಶುಭಸಂದೇಶ: ಮಾರ್ಕ 3:13-19
13 : ಅನಂತರ ಯೇಸುಸ್ವಾಮಿ ಬೆಟ್ಟವನ್ನೇರಿ, ತಮಗೆ ಒಪ್ಪಿಗೆಯಾದವರನ್ನು ಕರೆದರು. ಅವರು ಹತ್ತಿರಕ್ಕೆ ಬಂದರು. ಯೇಸು ಹನ್ನೆರಡು ಮಂದಿಯನ್ನು ಆಯ್ದುಕೊಂಡು, ‘ಪ್ರೇಷಿತರು’ ಎಂದು ಅವರಿಗೆ ಹೆಸರಿಟ್ಟರು.
14 : “ನನ್ನ ಜೊತೆಯಲ್ಲಿ ಇರಲು ನಿಮ್ಮನ್ನು ಆರಿಸಿಕೊಂಡಿದ್ದೇನೆ. ಶುಭಸಂದೇಶವನ್ನು ಸಾರಲು ನಿಮ್ಮನ್ನು ಕಳುಹಿಸುತ್ತೇನೆ.
15 : ದೆವ್ವಗಳನ್ನು ಬಿಡಿಸುವ ಅಧಿಕಾರವನ್ನು ನಿಮಗೆ ಕೊಡುತ್ತೇನೆ”, ಎಂದು ಅವರಿಗೆ ಹೇಳಿದರು. ಹೀಗೆ ನೇಮಕಗೊಂಡ ಹನ್ನೆರಡು ಮಂದಿ ಯಾರೆಂದರೆ:
16 : ಸಿಮೋನ (ಯೇಸು ಈತನಿಗೆ ‘ಪೇತ್ರ’ ಎಂದು ಹೆಸರಿಟ್ಟರು).
17 : ಜೆಬೆದಾಯನ ಮಗ ಯಕೋಬ ಮತ್ತು ಅವನ ಸಹೋದರ ಯೊವಾನ್ನ (ಯೇಸು ಇವರಿಬ್ಬರಿಗೆ ‘ಬೊವನೆರ್ಗೆಸ್’ ಎಂದರೆ ‘ಸಿಡಿಲಮರಿಗಳು’ ಎಂಬ ಹೆಸರನ್ನಿಟ್ಟರು).
18 : ಅಂದ್ರೆಯ, ಫಿಲಿಪ್ಪ, ಬಾರ್ತಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗ ಯಕೋಬ, ತದ್ದಾಯ, ದೇಶಾಭಿಮಾನಿ ಆದ ಸಿಮೋನ ಮತ್ತು
19 : ಮುಂದೆ ಗುರುದ್ರೋಹಿಯಾಗಲಿದ್ದ ಯೂದ ಇಸ್ಕರಿಯೋತ.
------------------------
ಚಿಂತನೆ:
“ ನಾವೆಷ್ಟೇ ದುರ್ಬಲರಾಗಿದ್ದರೂ ಆತನ ಭರವಸೆಯ ಕೈಗಳು ನಮ್ಮನ್ನು ಮುನ್ನಡೆಸುತ್ತವೆ"
ಯೇಸು ತಾನು ಆಯ್ಕೆ ಮಾಡಿಕೊಂಡ ಕೆಲವರನ್ನು ಬೆಟ್ಟದ ಮೇಲಕ್ಕೆ ಕರೆದೊಯ್ದು ಹನ್ನೆರಡು ಮಂದಿಯನ್ನು ಆಪ್ತ ಸಂಗಡಿಗರಾಗಿ ನೇಮಿಸಿಕೊಳ್ಳುತ್ತಾರೆ. ಅತ್ಯಂತ ಸಾಧಾರಣ ವ್ಯಕ್ತಿಗಳಾದ ಅವರು ಮಹತ್ಕಾರ್ಯಗಳನ್ನೆಸಗಲು ಯೇಸುವೆಂಬ ದಿವ್ಯಶಕ್ತಿಯಿಂದ ಪರಿಣತಿ ಹೊಂದುತ್ತಾರೆ.
ಆದರೆ ಮೊದಲ ವಾಚನದಲ್ಲಿ ಸೌಲನೆಂಬ ದುಷ್ಟಶಕ್ತಿಯಿಂದ ಮೂರು ಸಾವಿರ ಭಂಟರು ಆಯ್ಕೆಗೊಂಡು ಬೆಟ್ಟದ ಮೇಲೆ ಬಂಡೆಗಳ ನಡುವೆ ದಾವಿದನನ್ನು ಹುಡುಕಿ ಕೊಲ್ಲಲು ಹವಣಿಸುತ್ತಾರೆ.
ಅಂದರೆ ನಾವು ಮಾನುಷಿಕ ಸಿದ್ಧಾಂತಗಳ ಹಿಂದೆ ಹೋಗದೆ ಯೇಸುವೆಂಬ ಪ್ರೀತಿ ಸೋದರತ್ವಗಳ ತತ್ತ್ವದ ಹರಿಕಾರರಾಗಬೇಕೆಂಬುದನ್ನು ಈ ಎರಡು ವಾಚನಗಳು ಸೂಚಿಸುತ್ತವೆ.
ನಾವೆಷ್ಟೇ ದುರ್ಬಲರಾಗಿದ್ದರೂ ಆತನ ಭರವಸೆಯ ಕೈಗಳು ನಮ್ಮನ್ನು ಮುನ್ನಡೆಸುತ್ತವೆ.
-------------
ಪ್ರಾನ್ಸಿಸ್ ದೆ ಸೇಲ್ಸ್
ಪ್ರಾನ್ಸಿಸ್ ದೆ ಸೇಲ್ಸ್ ಹುಟ್ಟಿದ್ದು 1567ರಲ್ಲಿ, ಪ್ರಾನ್ಸ್ ದೇಶದಲ್ಲಿ. ಚಿಕ್ಕ ವಯಸ್ಸಿನಲ್ಲಿಯೇ ಧರ್ಮಗುರುವಾಗಬೇಕೆಂದು ಬಯಸಿದ್ದರು. ತಮ್ಮ ಬಯಕೆಯಂತೆ 1593ರಲ್ಲಿ ಗುರುದೀಕ್ಷೆ ಸ್ವೀಕರಿಸುತ್ತಾರೆ. ತದನಂತರ ಜಿನೀವಾದ ಧರ್ಮಾಧ್ಯಕ್ಷರಾಗಿ ಆಯ್ಕೆಯಾಗುತ್ತಾರೆ. ಇವರ ನಯ, ವಿನಯ, ಪ್ರೀತಿ ಕರುಣೆ ಜನರನ್ನು ಆಕರ್ಷಿಸಿತು. ಸಾವಿರಾರು ಜನರನ್ನು ಕ್ಯಾಲ್ವಿನಿಸ್ಟ್ ನಿಂದ ಮರಳಿ ಕಥೋಲಿಕ ಧರ್ಮಸಭೆಗೆ ಕರೆತರುತ್ತಾರೆ. ತಮ್ಮ ಕೈ ಬರಹಗಳ ಮೂಲಕ ಜನರೊಂದಿಗೆ ತಮ್ಮ ಸಂಪರ್ಕ ವೃದ್ಧಿಯಾಗಿಸುತ್ತಾರೆ.
ಅವರ ಪ್ರಮುಖ ಗ್ರಂಥಗಳು: ‘Introduction
to Devout Life’, Treatise on the love of God ಮತ್ತು Spiritual
Conferences. ನಿರಂತರ ಧರ್ಮಸಭೆಯ ಏಳಿಗೆಗೆ ದುಡಿದ ಕ್ರಿಸ್ತನ ಸೇವಕ 1622 ಡಿಸೆಂಬರ್ 28ರಂದು ಮೃತರಾಗುತ್ತಾರೆ. 1665 ಏಪ್ರ್ರಿಲ್ 9ರಂದು ಸಂತರ ಪದವಿಗೆ ಏರುತ್ತಾರೆ.
No comments:
Post a Comment