03 ಫೆಬ್ರವರಿ 2020
ಸೋಮವಾರ/ಹಸಿರು/ಸಾಧಾರಣ ಕಾಲದ ನಾಲ್ಕನೆಯ ಸೋಮವಾರ
1ನೇ ವಾಚನ - ೨ ಸಮುವೇಲ 15:13-14, 30; 16:5-13
ಕೀರ್ತನೆ - 3:2-3, 4-5, 6-7
ಶುಭಸಂದೇಶ - ಮಾರ್ಕ 5:1-20
-----------------------------
೨ ಸಮುವೇಲ 15:13-14, 30; 16:5-13
13 : ಇಸ್ರಯೇಲರ ಮನಸ್ಸು ಅಬ್ಷಾಲೋಮನ ಕಡೆಗೆ ತಿರುಗಿಕೊಂಡಿತೆಂಬ ವರ್ತಮಾನ ದಾವೀದನಿಗೆ ಮುಟ್ಟಿತು.
14 : ಆಗ ಅವನು ಜೆರುಸಲೇಮಿನಲ್ಲಿದ್ದ ತನ್ನ ಸೇವಕರಿಗೆ, “ಏಳಿ, ಓಡಿ ಹೋಗೋಣ; ಇಲ್ಲೇ ಇದ್ದರೆ ನಾವು ಅಬ್ಷಾಲೋಮನ ಕೈಯಿಂದ ತಪ್ಪಿಸಿಕೊಳ್ಳಲಾರೆವು. ಬೇಗ ಹೊರಡೋಣ; ಅವನು ಅಕಸ್ಮಾತ್ತಾಗಿ ನಮ್ಮ ಮೇಲೆ ಬಿದ್ದು ನಮಗೆ ದುರ್ಗತಿಯನ್ನುಂಟು ಮಾಡಿ ಪಟ್ಟಣದವರನ್ನೆಲ್ಲಾ ಕತ್ತಿಯಿಂದ ಸಂಹರಿಸಾನು,” ಎಂದು ಹೇಳಿದನು.
30 : ದಾವೀದನು, ಮುಖವನ್ನು ಮರೆಮಾಚಿಕೊಂಡು ಅಳುತ್ತಾ, ಬರಿಗಾಲಿನಿಂದ ಎಣ್ಣೇ ಮರಗಳ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಏರಿದರು.
5 : ಅರಸನಾದ ದಾವೀದನು ಬಹುರೀಮಿಗೆ ಬಂದಾಗ ಸೌಲನ ವಂಶದವನೂ ಗೇರನ ಮಗನೂ ಆದ ಶಿಮ್ಮಿ ಎಂಬವನು ದಾವೀದನನ್ನು ಶಪಿಸುತ್ತಾ ಆ ಊರಿನಿಂದ ಹೊರಗೆ ಬಂದನು.
6 : ಅವನು ದಾವೀದನ, ಅವನ ಎಲ್ಲ ಸೇವಕರ, ಎಡಬಲದಲ್ಲಿದ್ದ ಸೈನಿಕರ ಹಾಗು ಶೂರರ ಕಡೆಗೆ ಕಲ್ಲೆಸೆಯತೊಡಗಿದನು.
7 : ಅಲ್ಲದೆ, ಅವನು ದಾವೀದನನ್ನು ಶಪಿಸುತ್ತಾ, “ನಡೆ, ಕೊಲೆಗಾರನೇ, ನೀಚನೇ, ನಡೆ; ಸೌಲನ ರಾಜ್ಯವನ್ನು ಕಬಳಿಸಿಕೊಂಡು, ಅವನ ಮನೆಯವರನ್ನು ಕೊಂದದ್ದಕ್ಕಾಗಿ ಸರ್ವೇಶ್ವರ ನಿನಗೆ ಮುಯ್ಯಿ ತೀರಿಸಿದ್ದಾರೆ.
8 : ಅವರು, ರಾಜ್ಯವನ್ನು ನಿನ್ನ ಮಗ ಅಬ್ಷಾಲೋಮನಿಗೆ ಕೊಟ್ಟುಬಿಟ್ಟರು. ಕೊಲೆಗಾರನೇ, ಇಗೋ, ನಿನಗೆ ಈಗ ತಕ್ಕ ಆಪತ್ತು ಬಂದಿದೆ,” ಎಂದನು.
9 : ಆಗ ಚೆರೂಯಳ ಮಗ ಅಬೀಷೈಯು ಅರಸನಿಗೆ, “ಈ ಸತ್ತನಾಯಿ ಅರಸನಾದ ನನ್ನ ಒಡೆಯರನ್ನು ಶಪಿಸುವುದೇನು? ಅಪ್ಪಣೆಯಾಗಲಿ, ನಾನು ಅವನಿರುವಲ್ಲಿಗೇ ಹೋಗಿ, ಅವನ ತಲೆ ಹಾರಿಸಿಕೊಂಡು ಬರುತ್ತೇನೆ,” ಎಂದನು.
10 : ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ಬಿಡಿ, ಅವನು ಶಪಿಸಲಿ; ದಾವೀದನನ್ನು ಶಪಿಸೆಂದು ಸರ್ವೇಶ್ವರಸ್ವಾಮಿಯೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದೆ’ ಎಂದು ಅವನನ್ನು ಯಾರು ಕೇಳಲಾದೀತು?” ಎಂದು ಉತ್ತರಕೊಟ್ಟನು.
11 : ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ, “ನೋಡಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾವಿೂನ್ಯನು ಹೀಗೆ ಮಾಡುವುದು ಯಾವ ಲೆಕ್ಕ? ಬಿಡಿ, ಅವನು ಶಪಿಸಲಿ; ಹೀಗೆ ಮಾಡಬೇಕೆಂದು ಸರ್ವೇಶ್ವರನೇ ಅವನಿಗೆ ಆಜ್ಞಾಪಿಸಿದ್ದಾರೆ.
12 : ಬಹುಶಃ ಸರ್ವೇಶ್ವರ ನನ್ನ ಕಷ್ಟವನ್ನು ನೋಡಿ ಈ ದಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಿಯಾರು,” ಎಂದು ಹೇಳಿದನು.
13 : ದಾವೀದನೂ ಅವನ ಜನರೂ ದಾರಿಹಿಡಿದು ಹೋಗುವಾಗ ಶಿಮ್ಮಿಯು ಶಪಿಸುತ್ತಾ ಕಲ್ಲುಮಣ್ಣು ತೂರುತ್ತಾ, ಗುಡ್ಡದ ಓರೆಯಲ್ಲಿ ಸಮಾನಾಂತರದಲ್ಲೇ ನಡೆಯುತ್ತಿದ್ದನು.
------------------
ಕೀರ್ತನೆ - 3:2-3, 4-5, 6-7
ಎದ್ದೇಳು ದೇವ, ಕಾಪಾಡ ಬಾ ಪ್ರಭುವೆ /

1 : ಪ್ರಭೂ, ನನಗೆ ವಿರೋಧಿಗಳು ಅನೇಕ / ನನಗೆದುರಾಗಿ ನಿಂತವರು ಅತ್ಯಧಿಕ //
2 : “ಈತನಿಗೆ ದೇವರ ನೆರವೆನಿತು?” / ಇಂತಿದೆ ಹಲವರ ಕೆಣಕು ಮಾತು //
3 : ನೀನಾದರೋ ಪ್ರಭು, ನನಗೆ ರಕ್ಷೆ, ವಿಜಯದಾತ / ನಾನು ತಲೆಯೆತ್ತಿ ನಡೆಯುವಂತೆ ಮಾಡುವಾತ //
4 : ಸ್ವರವೆತ್ತಿ ಎನ್ನ ಪ್ರಭುವಿಗೆ ನಾ ಮೊರೆಯಿಡುವೆನು / ಸಿರಿಶಿಖರದಿಂದಾತನು ಸದುತ್ತರ ನೀಡುವನು //
5 : ಹಾಯಾಗಿ ಮಲಗಿ ನಿದ್ರಿಸುವೆನು / ಸುಖಿಯಾಗಿ ಮರಳಿ ಎದ್ದೇಳುವೆನು / ಕಾಯ್ದು ಕಾಪಾಡುವನು ಪ್ರಭು ನನ್ನನು //
6 : ಶತ್ರುಗಳು ಸಾವಿರಾರಿದ್ದರೂ ನಾನವರಿಗಂಜೆನು // ಸುತ್ತುವರಿದು ಸನ್ನದ್ಧರಾಗಿದ್ದರೂ ಭಯಪಡೆನು //
7 : ಎದ್ದೇಳು ದೇವ, ಕಾಪಾಡ ಬಾ ಪ್ರಭುವೆ / ವೈರಿಗಳ ದವಡೆ ಬಡಿದವನು ನೀನಲ್ಲವೆ? / ದುರುಳರ ಹಲ್ಲುದುರಿಸಿದವನು ನೀನಲ್ಲವೆ? //
8 : ಜಯ ವಿಜಯ ಲಭಿಸುವುದು ಪ್ರಭುವಿನಿಂದಲೆ / ನಿನ್ನಾಶೀರ್ವಾದವಿರಲಿ, ಪ್ರಭು, ಪ್ರಜೆಯ ಮೇಲೆ //
-------------------
ಶುಭಸಂದೇಶ - ಮಾರ್ಕ 5:1-20
1 : ಅವರೆಲ್ಲರು ಗಲಿಲೇಯ ಸರೋವರವನ್ನು ದಾಟಿ ಆಚೆಯ ಕಡೆಯಲ್ಲಿದ್ದ ಗೆರಸೇನರ ಪ್ರಾಂತ್ಯವನ್ನು ಸೇರಿದರು.
2 : ಯೇಸುಸ್ವಾಮಿ ದೋಣಿಯಿಂದ ಇಳಿಯುತ್ತಲೇ, ದೆವ್ವ ಹಿಡಿದಿದ್ದ ಒಬ್ಬನು ಸಮಾಧಿಯ ಗುಹೆಯೊಳಗಿಂದ ಅವರ ಎದುರಿಗೆ ಬಂದನು.
3 : ಸಮಾಧಿಯ ಗುಹೆಗಳೇ ಅವನಿಗೆ ವಾಸಸ್ಥಳವಾಗಿದ್ದವು.
4 : ಅವನನ್ನು ಬಂಧಿಸಲು ಯಾರಿಂದಲೂ ಆಗುತ್ತಿರಲಿಲ್ಲ; ಸಂಕೋಲೆಯಿಂದ ಬಂಧಿಸುವುದೂ ಅಸಾಧ್ಯವಾಗಿತ್ತು. ಸರಪಳಿ ಸಂಕೋಲೆಗಳಿಂದ ಅವನನ್ನು ಕಟ್ಟಿದಾಗ ಅವುಗಳನ್ನು ತುಂಡುತುಂಡು ಮಾಡುತ್ತಿದ್ದನು. ಅವನನ್ನು ಹತೋಟಿಗೆ ತರುವ ಸಾಮಥ್ರ್ಯ ಯಾರಿಗೂ ಇರಲಿಲ್ಲ.
5 : ಹಗಲಿರುಳೆನ್ನದೆ ಸಮಾಧಿಯ ಗುಹೆಗಳಲ್ಲಿಯೂ ಬೆಟ್ಟಗುಡ್ಡಗಳಲ್ಲಿಯೂ ಅವನು ಅಲೆದಾಡುತ್ತಾ ಅರಚಾಡುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಚಚ್ಚಿಕೊಳ್ಳುತ್ತಾ ಇದ್ದನು.
6 : ದೂರದಲ್ಲಿ ಬರುತ್ತಿದ್ದ ಯೇಸುಸ್ವಾಮಿಯನ್ನು ಕಂಡು, ಅವನು ಓಡಿಬಂದು ಅವರಿಗೆ ಸಾಷ್ಟಾಂಗವೆರಗಿ,
7 : “ಸ್ವಾಮಿ ಯೇಸುವೇ, ಪರಮೋನ್ನತ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ? ದೇವರಾಣೆ, ನನ್ನನ್ನು ಪೀಡಿಸಬೇಡಿ, ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದು ಅಬ್ಬರಿಸಿದನು.
8 : ಕಾರಣ - ಅವನನ್ನು ಬಿಟ್ಟು ತೊಲಗಬೇಕೆಂದು ಯೇಸು ದೆವ್ವಕ್ಕೆ ಈ ಮೊದಲೇ ಕಟ್ಟಪ್ಪಣೆ ಮಾಡಿದ್ದರು.
9 : “ನಿನ್ನ ಹೆಸರೇನು?” ಎಂದು ಯೇಸು ಅವನನ್ನು ಕೇಳಲು, “ನನ್ನ ಹೆಸರು ‘ಗಣ’; ಏಕೆಂದರೆ ನಾವು ಬಹುಮಂದಿ ಇದ್ದೇವೆ,” ಎಂದನು.
10 : ಅಲ್ಲದೆ, “ನಮ್ಮನ್ನು ಆ ಪ್ರಾಂತ್ಯದಿಂದ ಹೊರಗಟ್ಟಬೇಡಿ,” ಎಂದು ಯೇಸುವನ್ನು ಬಹಳವಾಗಿ ಬೇಡಿಕೊಂಡನು.
11 : ಸಮೀಪದಲ್ಲೇ ಹಂದಿಗಳ ದೊಡ್ಡ ಹಿಂಡೊಂದು ಬೆಟ್ಟದ ತಪ್ಪಲಲ್ಲಿ ಮೇಯುತ್ತಿತ್ತು.
12 : ಆ ದೆವ್ವಗಳು, “ನಾವು ಆ ಹಂದಿಗಳೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಕಳುಹಿಸಿಕೊಡಿ,” ಎಂದು ಯೇಸುವನ್ನು ಬೇಡಿಕೊಂಡವು.
13 : ಅವರು ಹಾಗೆಯೆ ಅಪ್ಪಣೆ ಮಾಡಿದರು. ಕೂಡಲೇ ದೆವ್ವಗಳು ಆ ವ್ಯಕ್ತಿಯಿಂದ ಹೊರಬಂದು ಹಂದಿಗಳೊಳಗೆ ಹೊಕ್ಕವು. ಇದರ ಪರಿಣಾಮವಾಗಿ ಎರಡು ಸಾವಿರ ಹಂದಿಗಳಿದ್ದ ಆ ಹಿಂಡು, ಬೆಟ್ಟದ ಕಡಿದಾದ ಬದಿಯಿಂದ ಸರೋವರದತ್ತ ಧಾವಿಸಿ, ಅದರಲ್ಲಿ ಬಿದ್ದು ಮುಳುಗಿಹೋಯಿತು.
14 : ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ ಊರುಕೇರಿಗಳಲ್ಲಿ ಈ ವಿಷಯವನ್ನು ತಿಳಿಸಿದರು. ನಡೆದ ಸಂಗತಿ ಏನೆಂಬುದನ್ನು ನೋಡಲು ಜನರು ಹೊರಟು, ಯೇಸುಸ್ವಾಮಿಯ ಬಳಿಗೆ ಬಂದರು.
15 : ದೆವ್ವಗಣದಿಂದ ಪೀಡಿತನಾಗಿದ್ದವನು ಈಗ ಬಟ್ಟೆಯನ್ನು ತೊಟ್ಟುಕೊಂಡು, ಸ್ವಸ್ಥಬುದ್ಧಿಯುಳ್ಳವನಾಗಿ ಕುಳಿತಿರುವುದನ್ನು ಕಂಡು ಅವರೆಲ್ಲರೂ ಗಾಬರಿಗೊಂಡರು.
16 : ನಡೆದುದನ್ನು ಕಣ್ಣಾರೆ ನೋಡಿದವರು ದೆವ್ವ ಹಿಡಿದಿದ್ದವನು ಸ್ವಸ್ಥನಾದ ವಿಧವನ್ನು ಮತ್ತು ಹಂದಿಗಳಿಗಾದ ಗತಿಯನ್ನು ಅವರಿಗೆ ವಿವರಿಸಿದರು.
17 : ಇದನ್ನು ಕೇಳಿದ ಜನರು ಯೇಸುವಿಗೆ, ತಮ್ಮ ಪ್ರಾಂತ್ಯವನ್ನು ಬಿಟ್ಟುಹೋಗಬೇಕೆಂದು ಮನವಿಮಾಡಿಕೊಂಡರು.
18 : ಯೇಸು ದೋಣಿಯನ್ನು ಹತ್ತುತ್ತಿದ್ದಾಗ ದೆವ್ವ ಹಿಡಿದಿದ್ದವನು, “ನನ್ನನ್ನು ನಿಮ್ಮ ಜೊತೆಯಲ್ಲೇ ಕರೆದುಕೊಂಡು ಹೋಗಿ,” ಎಂದು ಬಿನ್ನವಿಸಿಕೊಂಡನು.
19 : ಯೇಸು ಅದಕ್ಕೊಪ್ಪದೆ, “ನೀನು ನಿನ್ನ ಮನೆಗೂ ನಿನ್ನ ಸ್ವಜನರ ಬಳಿಗೂ ಹೋಗು. ಸರ್ವೇಶ್ವರ ನಿನಗೆ ಎಂಥಾ ಉಪಕಾರ ಮಾಡಿದ್ದಾರೆ, ಎಷ್ಟು ಕರುಣೆ ತೋರಿಸಿದ್ದಾರೆ, ಎಂದು ಅವರಿಗೆ ವಿವರಿಸು,” ಎಂದರು.
20 : ಅಂತೆಯೇ ಅವನು ಹೊರಟು ಹೋಗಿ, ಯೇಸು ತನಗೆ ಮಾಡಿದ ಮಹದುಪಕಾರವನ್ನು ದೆಕಪೊಲಿ ಎಂಬ ನಾಡಿನಲ್ಲಿ ಪ್ರಕಟಿಸಿದನು. ಕೇಳಿದವರೆಲ್ಲರೂ ಆಶ್ಚರ್ಯ ಚಕಿತರಾದರು.
-----------------------------
“ ನಿಂದನೆಗಳನ್ನು ಪ್ರಾರ್ಥನೆಯಾಗಿಸಿ ಸರ್ವೇಶ್ವರನಿಗೆ ಒಪ್ಪಿಸೋಣ ”
ಅಬ್ಷಾಲೋಮನ ಒಳಸಂಚಿನಿಂದ ಜೆರುಸಲೇಮಿನಿಂದ ತನ್ನ ಸೇವಕರ ಸಮೇತ ಪಲಾಯನ ಮಾಡಿ ಬಹುರೀಮಿಗೆ ಬಂದಾಗ ಸೌಲನ ವಂಶದವನೂ ಗೇರನ ಮಗನೂ ಆದ ಶಿಮ್ಮಿ ಎಂಬುವನು ದಾವೀದನನ್ನು ಶಪಿಸುವ ದೃಶ್ಯವನ್ನು ಮೊದಲನೆಯ ವಾಚನದಲ್ಲಿ ಕಾಣುತ್ತೇವೆ. ಶಪಿಸುವ ಶಿಮ್ಮಿಯನ್ನು ಕಂಡು ದಾವೀದನು, ಹೀಗೆ ಮಾಡಬೇಕೆಂದು ಸರ್ವೇಶ್ವರನೇ ಅಜ್ಞಾನಪಿಸಿದ್ದಾರೆ. ಬಹುಶಃ ಸರ್ವೇಶ್ವರ ನನ್ನ ಕಷ್ಟವನ್ನು ನೋಡಿ ಈ ದಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಿಯಾರು? ಎನ್ನುತ್ತಾನೆ. ನಾವು ಕೂಡ ಇಂತಹ ನಿಂದನೆಗಳನ್ನು ತುಂಬ ಸಲ ಕೇಳಿದ್ದೇವೆ. ಅದರಲ್ಲೂ ಒಳ್ಳೆಯದನ್ನು ಮಾಡಲು ಹೊರಟಾಗ, ನಿಂದನೆಗಳು ಕಟ್ಟಿಟ್ಟ ಬುತ್ತಿ. ನಾಯಿ ಬೊಗಳಿದರೆ ದೇವಲೋಕ ಹಾಳಾಗುತ್ತಾ? ಎಂದು ಒಳ್ಳೆಯದನ್ನು ಮುಂದುವರಿಸಬೇಕು. ನಿಂದನೆಗಳಲ್ಲಿರುವ ಕೆಲವೊಂದು ಸತ್ಯಾಂಶವನ್ನು ಸ್ವೀಕರಿಸಿ ಉಳಿದುದನ್ನು ನಿರ್ಲಕ್ಷಿಸಿ ನಡೆದರೆ ನಾವು ವಿನಮ್ರರಾಗಿ ಪ್ರಬುದ್ಧರಾಗಿ ಬಾಳುತ್ತೇವೆ. ದೂರುವವರು, ನಿಂದಿಸುವವರು ದೂಷಿಸುವವರು ಇರುವುದರಿಂದಲೇ ನಾವು ನಮ್ಮ ನಡವಳಿಕೆಯ ಬಗ್ಗೆ ಎಚ್ಚರದಿಂದಿರುತ್ತೇವೆ. ದಾವೀದನಂತೆ ನಿಂದನೆಗಳನ್ನು ಪ್ರಾರ್ಥನೆಯಾಗಿಸಿ ಸರ್ವೇಶ್ವರನಿಗೆ ಒಪ್ಪಿಸುವ ಮನೋಭಾವ ನಮಗೆ ಸಿದ್ಧಿಸಲಿ. ಶುಭಸಂದೇಶದಲ್ಲಿ ಯೇಸು ದೆವ್ವ ಪೀಡಿತನನ್ನು ಬಿಡುಗಡೆಗೊಳಿಸುವುದನ್ನು ಕೇಳುತ್ತೇವೆ. ಯೇಸು ಸರ್ವಕ್ಕೂ ಒಡೆಯ ಎಂದು ಈ ಘಟನೆ ದೃಢಪಡಿಸುತ್ತದೆ. ಅದೇ ವಿಶ್ವಾಸದಿಂದ ನಮ್ಮಲ್ಲಿರುವ ದೆವ್ವಗಳನ್ನು ಬಿಡಿಸಲು ಕ್ರಿಸ್ತನನ್ನು ಕೇಳಿಕೊಳ್ಳೋಣ. ಪುರಂದರದಾಸರ ಒಂದು ಕೀರ್ತನೆಯಲ್ಲಿ ಈ ಸಾಲುಗಳು ಬರುತ್ತವೆ:
ನಿಂದಕರಿರಬೇಕು ಜಗದೊಳು ನಿಂದಕರಿರಬೇಕು
ಹಂದಿಯಿದ್ದರೆ ಕೇರಿ ಹ್ಯಾಂಗೆ ಶುದ್ದಿಯೋ ಹಾಂಗೆ ||ನಿಂದಕರಿರಬೇಕು||
ಇಂದಿನ ಸಂತರು
ಸಂತ ಬ್ಲೇಸ್ (ಕ್ರಿಸ್ತಶಕ ಸು. 316)
ವೃತ್ತಿಯಲ್ಲಿ ವೈದ್ಯರಾಗಿದ್ದ ಸಂತ ಬ್ಲೇಸ್ ‘ಗಂಟಲು ಬೇನೆಗಳಿಂದ ನರಳುವವರ ಪಾಲಕ ಸಂತ’ ಎಂದು ಕರೆಯಲ್ಪಡುತ್ತಾರೆ. ತಮ್ಮ ಹುಟ್ಟೂರು ಟರ್ಕಿ ದೇಶದ ಸೆಬಸ್ಟಿಗೆ ಧರ್ಮಾಧ್ಯಕ್ಷರಾಗಿ ನೇಮಕವಾದ ಇವರು ಅದೇ ಊರಿನಲ್ಲಿ ಕ್ರಿಸ್ತಶಕ 316ರಲ್ಲಿ ಹುತಾತ್ಮರಾದರು. ದಂತಕತೆಗಳ ಪ್ರಕಾರ ಇವರು ವಾನಪ್ರಸ್ಥರಾಗಿ ಏಕಾಂಗಿಯಾಗಿ ಮೊಣಕಾಲೂರಿ ಪ್ರಾರ್ಥಿಸುತ್ತಿದ್ದಾಗ ತೋಳಗಳು, ಸಿಂಹಗಳು ಮತ್ತು ಕರಡಿಗಳು ಇವರ ಸುತ್ತ ಶಾಂತವಾಗಿ ನಿಂತಿರುತ್ತಿದ್ದವು. ಜೀವನದಲ್ಲಿನ ಸರ್ವ ಸುಖವನ್ನು ದೇವರ ಪ್ರೀತಿಗಾಗಿ ತೊರೆದ ಈ ಸಂತರು ಬದುಕಿನ ಪ್ರತೀಕ್ಷಣವೂ ಕ್ರಿಸ್ತರಿಗಾಗಿಯೇ ಬದುಕಿದರು. ಪ್ರಭುಯೇಸು ನಮಗಾಗಿ ಅನುಭವಿಸಿದ ಕ್ರೂರ ಯಾತನೆ ಮತ್ತು ಮರಣವನ್ನು ಧ್ಯಾನಿಸಿದ ಸಂತ ಬ್ಲೇಸ್ ತಮ್ಮ ನಡೆ ನುಡಿಯಲ್ಲಿ ಪ್ರತಿಬಿಂಬಿಸಿದ್ದು ಯೇಸುಪ್ರಭುವನ್ನೇ. ಕ್ರಿಸ್ತರಂತಾಗುವುದೇ ನಮ್ಮೆಲ್ಲರ ಬದುಕಿನ ಧ್ಯೇಯವಲ್ಲವೇ? ಆ ಧ್ಯೆಯಕ್ಕನುಗುಣವಾಗಿ ಬದುಕಿದ ಈ ಸಂತರ ಆದರ್ಶವನ್ನು ಅನುದಿನವೂ ಅನುಸರಿಸೋಣ.
ಚಿತ್ರ: ಗೂಗಲ್ ಕೃಪೆ

No comments:
Post a Comment