ಫೆಬ್ರವರಿ 28, 2020 ಶುಕ್ರವಾರ [ನೇರಳೆ]
ಮೊದಲ ವಾಚನ: ಯೆಶಾಯ 58.1-9
ಕೀರ್ತನೆ 51:1-2, 3-4, 16-17. ಶ್ಲೋಕ.17
ನೊಂದ ಬೆಂದ ಮನವನಾತ ಒಲ್ಲೆಯೆನ್ನನು
ಶುಭಸಂದೇಶ: ಮತ್ತಾಯ 9.14-15
----------------------------
ಮೊದಲ ವಾಚನ: ಯೆಶಾಯ 58.1-9
1 : ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಗಟ್ಟಿಯಾಗಿ ಕೂಗು, ನಿಲ್ಲಿಸಬೇಡ; ಕೊಂಬಿನಂತೆ ಸ್ವರವೆತ್ತಿ ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು; ಯಕೋಬ ವಂಶದವರಿಗೆ ಅವರ ಪಾಪವನ್ನು ತಿಳಿಸು;
2 : ತಮ್ಮ ದೇವರ ವಿಧಿನಿಯಮಗಳನ್ನು ಬಿಡದೆ, ಧರ್ಮವನ್ನು ಆಚರಿಸುವ ಜನಾಂಗವೊ ಎಂಬಂತೆ, ಇವರು ದಿನ ದಿನವೂ ನನ್ನ ದರ್ಶನಕ್ಕಾಗಿ ಬರುತ್ತಾರೆ; ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಸಂತೋಷಿಸುವಂತೆ ನಟಿಸುತ್ತಾರೆ. ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳುತ್ತಾರೆ. ದೇವದರ್ಶನದಲ್ಲಿ ಆನಂದಿಸುವವರಂತೆ ತೋರಿಸಿಕೊಳ್ಳುತ್ತಾರೆ.”
3 : ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ? ನಮ್ಮನ್ನು ನಾವೇ ತಗ್ಗಿಸಿಕೊಂಡಿದ್ದೇವೆ, ನೀನು ಗಮನಿಸದೆ ಇರುವುದೇಕೆ?” ಎಂದುಕೊಳ್ಳುತ್ತಾರೆ.
4 : “ನಿಮ್ಮ ಉಪವಾಸದ ಪರಿಣಾಮಗಳು ಇಷ್ಟೆ: ವ್ಯಾಜ್ಯ, ಕಲಹ, ಗುದ್ದಾಟ. ಇಲ್ಲಿಯವರೆಗೆ ನೀವು ಮಾಡಿದಂತೆ ಉಪವಾಸ ಮಾಡಿದರೆ, ನಿಮ್ಮ ಪ್ರಾರ್ಥನೆ ಪರಲೋಕವನ್ನು ಮುಟ್ಟುವುದಿಲ್ಲ.
5 : ಸ್ವಾರ್ಥ ನಿಗ್ರಹಕ್ಕಾಗಿ ನಾನು ನೇಮಿಸಿದ ಉಪವಾಸದ ದಿನ ಇಂಥದೋ? ಒಬ್ಬನು ಜೊಂಡಿನಂತೆ ತಲೆಯನ್ನು ಬಗ್ಗಿಸಿಕೊಳ್ಳುವುದು, ಗೋಣಿತಟ್ಟನ್ನು ಉಟ್ಟುಕೊಳ್ಳುವುದು, ಬೂದಿಯ ಗುಂಡಿಯಲ್ಲಿ ಕುಳಿತುಕೊಳ್ಳುವುದು, ಇವು ನನಗೆ ಮೆಚ್ಚುಗೆಯಾಗುವ ಉಪವಾಸ ಎನ್ನುತ್ತೀರೊ?
6 : “ನಾನು ಹೇಳುವುದನ್ನು ಕೇಳಿ: ಅನ್ಯಾಯದ ಬಂಧನಗಳನ್ನು ಬಿಚ್ಚುವುದು, ಭಾರವಾದ ನೊಗದ ಕಣಿಗಳನ್ನು ಕಳಚುವುದು, ಜರ್ಜರಿತರಾದವರನ್ನು ಬಿಡುಗಡೆಮಾಡುವುದು,
7 : ಹಸಿದವರಿಗೆ ಅನ್ನ ಹಾಕುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯಾದವರನ್ನು ಕಂಡಾಗ ಅವರಿಗೆ ಬಟ್ಟೆಹೊದಿಸುವುದು, ನಿನ್ನ ರಕ್ತ ಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೆ ನನಗೆ ಇಷ್ಟಕರವಾದ ಉಪವಾಸವ್ರತ?
8 : “ಇದನ್ನು ಆಚರಿಸುವಾಗ ನೀವು ಉದಯ ಕಾಲದ ಸೂರ್ಯನಂತೆ ಪ್ರಜ್ವಲಿಸುವಿರಿ. ಆರೋಗ್ಯಭಾಗ್ಯವು ನಿಮಗೆ ಬೇಗನೆ ದೊರಕುವುದು. ನಿಮ್ಮ ಸದಾಚಾರವೆ ನಿಮಗೆ ಮುಂಬಲವಾಗಿ ನಡೆಸುವುದು; ಸರ್ವೇಶ್ವರಸ್ವಾಮಿಯ ಮಹಿಮೆ ನಿಮಗೆ ಹಿಂಬಲವಾಗಿ ಇರುವುದು.
9 : ಆಗ ನೀವು ಪ್ರಾರ್ಥಿಸಿದರೆ, ಆ ಸ್ವಾಮಿ ನಿಮಗೆ ಉತ್ತರಿಸುವರು; ಮೊರೆಯಿಟ್ಟು ಕರೆದರೆ ‘ಇಗೋ ಆಲಿಸುತ್ತಿದ್ದೇನೆ’ ಎನ್ನುವರು.
--------------------
ಕೀರ್ತನೆ 51:1-2, 3-4, 16-17. ಶ್ಲೋಕ.17
ನೊಂದ ಬೆಂದ ಮನವನಾತ ಒಲ್ಲೆಯೆನ್ನನು
1 : ಕೃಪಾಳು, ದೇವಾ, ಕರುಣಿಸೆನ್ನನು / ಕರುಣಾನಿಧಿ, ಅಳಿಸೆನ್ನ ದೋಷವನು //
2 : ತೊಳೆ ಪೂರ್ತಿಯಾಗಿ ಪಾಪದಿಂದೆನ್ನನು / ದೋಷಪರಿಹರಿಸಿ ಶುದ್ಧಗೊಳಿಸೆನ್ನನು //
3 : ಒಪ್ಪಿಕೊಂಡೆನಿದೋ, ನಾನೇ ಅಪರಾಧಿ / ಕಟ್ಟಿದಂತಿದೆ ಕಣ್ಗೆ ಪಾಪ ದಿನವಿಡಿ //
4 : ಹೌದು ದೇವಾ, ನಿನಗೆ ದ್ರೋಹವೆಸಗಿದೆ / ನಿನ್ನ ಕಣ್ಗೆ ಕೆಟ್ಟದುದನೆ ಮಾಡಿದೆ // ನಿನ್ನ ನಿರ್ಣಯವು ನ್ಯಾಯಯುತ / ನೀ ನೀಡುವ ತೀರ್ಪು ನಿರ್ಲಿಪ್ತ //
5 : ನಾ ಜನಿಸಿದೆ ಪಾಪಪಂಕದಲೆ / ದ್ರೋಹಿ ನಾ ಮಾತೃಗರ್ಭದಿಂದಲೆ //
6 : ಅಂತರಂಗ ಶುದ್ಧಿಯನು ನೀ ಬಯಸುತಿ / ಅಂತರ್ಯ ಜ್ಞಾನವನು ಉದಯಗೊಳಿಸುತಿ //
18 : ಸಿಯೋನಿಗೆ ದೇವಾ, ಶುಭವನು ಕರುಣಿಸು / ಜೆರುಸಲೇಮ್ ಕೋಟೆಯನು ಮರಳಿ ಎಬ್ಬಿಸು //
19 : ಸೂಕ್ತ ಬಲಿಗಳಿಂದಾಗ ನಿನ್ನನೊಲಿಸುವರು / ವೇದಿಕೆ ಮೇಲೆ ಯಜ್ಞಪಶುಗಳನು ಅರ್ಪಿಸುವರು //
----------------------
ಶುಭಸಂದೇಶ: ಮತ್ತಾಯ 9.14-15
14 : ಬಳಿಕ ಯೊವಾನ್ನನ ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದರು. “ನಾವೂ ಫರಿಸಾಯರೂ ಉಪವಾಸ ವ್ರತವನ್ನು ಕೈಗೊಳ್ಳುತ್ತೇವೆ. ಆದರೆ ನಿಮ್ಮ ಶಿಷ್ಯರು ಏಕೆ ಹಾಗೆ ಮಾಡುವುದಿಲ್ಲ?" ಎಂದು ಪ್ರಶ್ನೆ ಹಾಕಿದರು.
15 : ಅದಕ್ಕೆ ಯೇಸು, "ಮದುವಣಿಗನು ಜೊತೆಯಲ್ಲಿ ಇರುವಷ್ಟು ಕಾಲ ಅವನ ಆಪ್ತರು ದುಃಖಪಡುವುದುಂಟೇ? ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು; ಆಗ ಅವರು ಉಪವಾಸ ಮಾಡುವರು.

ಚಿಂತನೆ
ಇಂದಿನ ಆರಾಧನಾವಿಧಿಯ ವಾಚನಗಳು ಉಪವಾಸದ ಬಗ್ಗೆ ತಿಳಿಯಪಡಿಸುತ್ತವೆ. ಯೆಶಾಯನ ಗ್ರಂಥದಿಂದ ನಾವು ಕೇಳಿದಂತೆ- ವ್ಯಾಜ್ಯ, ಕಲಹ, ಗುದ್ದಾಟ ಮುಂತಾದವುಗಳೇ ಹೃದಯದಲ್ಲಿ ತುಂಬಿಕೊಂಡು ಇತರರಿಗೆ ಕೇಡನ್ನು ಬಯಸಿ ದೇವಾಲಯದಲ್ಲಿ ಒಂದು ಕಪಟಿಗಳಂತೆ ಪ್ರಾರ್ಥಿಸಿದಾಗ ಆಗುವ ಲಾಭವಾದರೂ ಏನು? ದೈಹಿಕ ಉಪವಾಸದ ಜೊತೆಯಲ್ಲಿ ಆಂತರಿಕ ಉಪವಾಸವನ್ನು ಕೈಗೊಳ್ಳುವುದು ಅತಿ ಅವಶ್ಯಕ. ಅದರಲ್ಲೂ ವಿಶೇಷವಾಗಿ ನಾವು ಮಾಡುವ ಕೆಟ್ಟ ಆಲೋಚನೆಗಳಿಂದ ಉಪವಾಸ, ಅನಾಚಾರಗಳಿಂದ ಉಪವಾಸ, ಅನೈತಿಕತೆಯಿಂದ ಉಪವಾಸ, ಪಾಪಗಳಿಂದ ಉಪವಾಸ ಮಾಡಿ ಪ್ರಾರ್ಥಿಸಬೇಕು.
ಈ ತಪಸ್ಸು ಕಾಲವು ಎಲ್ಲರಿಗೂ ಹೊಸಬಾಳಿನ ಸ್ಫೂರ್ತಿಯ ಸೆಲೆಯಾಗಿರುತ್ತದೆ. ಯೇಸು ಈ ಲೋಕದಲ್ಲಿರುವ ಅನೇಕ ಸಂದರ್ಭಗಳಲ್ಲಿ ಉಪವಾಸವಿದ್ದು ಪ್ರಾರ್ಥಿಸಿದರು. ತಂದೆಯೊಡನೆ ಇದ್ದ ಸಂದರ್ಭದಲ್ಲಿ ಪ್ರತಿ ಘಳಿಗೆಯಲ್ಲೂ ಮಹಿಮೆ ಪಡಿಸಿದರು. ಎಲ್ಲರೂ ಯೇಸುವಿನ ಅನುಯಾಯಿಗಳಾಗಿ ಅನುಕ್ಷಣವೂ ಹಿಂಬಾಲಿಸಿ ಮುಕ್ತಿಯನ್ನು ಪಡೆಯಲು ಪರಿಶ್ರಮ ಪಡೋಣ.
ಚಿತ್ರ: ಗೂಗಲ್ ಕೃಪೆ

No comments:
Post a Comment