Saturday, 8 February 2020

ಸಾಧಾರಣ ಕಾಲದ ಆರನೆಯ ಭಾನುವಾರ

16 ಫೆಬ್ರವರಿ  2020
ಭಾನುವಾರ/ಹಸಿರು/ಸಾಧಾರಣ ಕಾಲದ ಅರನೆಯ ಭಾನುವಾರ
1ನೇ  ವಾಚನ  - ಸಿರಾಖನು 15:15-20
ಕೀರ್ತನೆ  -  119:1-2, 4-5, 17-18, 33-34
ಎರಡನೆಯ ವಾಚನ ; 1 ಕೊರಿಂಥಿಯರಿಗೆ 2:6-10  
ಶುಭಸಂದೇಶ  -  ಮತ್ತಾಯ 5:17-37
-------------------------
1ನೇ  ವಾಚನ  - ಸಿರಾಖನು 15:15-20
15 : ನೀನು ಇಚ್ಛಿಸಿದೆಯಾದರೆ ಆತನ ಆಜ್ಞೆಗಳನ್ನು ಅನುಸರಿಸಿ ನಡೆವೆ ಹೀಗೆ ನಂಬಿಗಸ್ಥನಾಗಿ ದೇವರ ಚಿತ್ತಾನುಸಾರ ಬಾಳುವೆ.
16 : ನಿನ್ನ ಮುಂದೆ ಇಟ್ಟಿರುವರು ಬೆಂಕಿಯನ್ನು ಹಾಗು ನೀರನ್ನು ನೀನು ಆಯ್ದುಕೊಳ್ಳಬಹುದು ನಿನಗೆ ಬೇಕಾದುದನ್ನು.
17 : ಜೀವನ್ಮರಣಗಳು ಇರಿಸಲಾಗಿವೆ ಮನುಷ್ಯನ ಎದುರಿನಲ್ಲೆ ಅವನು ಇಷ್ಟಪಟ್ಟದ್ದನ್ನು ಕೊಡಲಾಗುವುದು ಅವನಿಗೆ.
18 : ಏಕೆಂದರೆ ದೇವರ ಜ್ಞಾನ ಅಪರಿಮಿತ ಆತ ಅಪೂರ್ವ ಬಲವಂತ, ಎಲ್ಲವನು ವೀಕ್ಷಿಸುವಂಥವ.
19 : ದೇವರಿಗೆ ಭಯಪಡುವವರ ಮೇಲಿದೆ ಆತನ ಕೃಪಾಕಟಾಕ್ಷ ಮನುಷ್ಯನು ಮಾಡುವ ಪ್ರತಿಯೊಂದೂ ಆತನಿಗೆ ವ್ಯಕ್ತ.
20 : ದುರುಳನಾಗೆಂದು ದೇವರು ಯಾರಿಗೂ ಆಜ್ಞಾಪಿಸಲಿಲ್ಲ, ಪಾಪಮಾಡಲು ಯಾರಿಗೂ ಅನುಮತಿ ಕೊಟ್ಟಿಲ್ಲ.
------------------------
ಕೀರ್ತನೆ  -  119:1-2, 4-5, 17-18, 33-34
1 : “ಆಲೆಫ್” (ಹಿಬ್ರು ಅಕ್ಷರ ಕ್ರಮಾನುಸಾರ ವಿರಚಿತ ಕೀರ್ತನೆ) ದೈವಾಜ್ಞೆಯಲ್ಲಿ ಅಭಿಮಾನ ಪ್ರಭುವಿನ ಶಾಸ್ತ್ರಾನುಸಾರ ನಡೆದವರು ಧನ್ಯರು / ದೋಷರಹಿತ ಮಾರ್ಗದಲಿ ನಡೆವವರು ಧನ್ಯರು //
2 : ಆತನ ಕಟ್ಟಳೆಗಳನ್ನು ಕೈಗೊಳ್ಳುವವರು ಧನ್ಯರು / ಮನಃಪೂರ್ವಕವಾಗಿ ಆತನನು ಅರಸುವವರು ಧನ್ಯರು //
3 : ಅಕ್ರಮಗೈಯರು ಅಂಥವರಾರು / ಆತ ತೋರಿದ ಮಾರ್ಗದಲೆ ನಡೆವರು //
4 : ನಿನ್ನ ನೇಮಗಳನು ಪ್ರಭೂ, ನೀನೆ ವ್ಯಕ್ತಪಡಿಸಿರುವೆಯಯ್ಯಾ / ಜಾಗರೂಕತೆಯಿಂದ ಪಾಲಿಸಬೇಕೆಂದು ನೀ ವಿಧಿಸಿರುವೆಯಯ್ಯಾ //
5 : ನಿನ್ನ ನಿಬಂಧನೆಗಳ ಪಾಲನೆಯಲಿ / ಸ್ಥಿರತೆ ಇದ್ದರೆ ಒಳಿತು ನನ್ನ ಮನದಲಿ //
17 : ನಿನ್ನ ನುಡಿಯ ಕೇಳಿ ಬಾಳುವಂತೆ / ತೋರು ದಾಸನೆನಗೆ ಪ್ರಸನ್ನತೆ //
18 : ನಿನ್ನ ಶಾಸ್ತ್ರದ ಮಹಿಮೆಯನು ಅರಿಯುವಂತೆ / ನನ್ನ ಕಣ್ಗಳಿಂದ ನೀ ತೆಗೆದುಬಿಡು ಅಂಧತೆ //
33 : ನಿನ್ನ ನಿಬಂಧನೆಯನು, ಪ್ರಭು, ಕಲಿಸೆನಗೆ / ಅದರಂತೆಯೇ ನಡೆಯುವೆನು ಕಡೆಯವರೆಗೆ //
34 : ನೀಡೆನಗೆ ನಿನ್ನ ಶಾಸ್ತ್ರದ ಅರಿವನು / ಪೂರ್ಣಮನದಿಂದ ಆಚರಿಸುವೆನದನು //
----------------
ಎರಡನೆಯ ವಾಚನ ; 1 ಕೊರಿಂಥಿಯರಿಗೆ 2:6-10  
6 : ನಾನು ಪರಿಣಿತರೊಂದಿಗೆ ಜ್ಞಾನವನ್ನೇ ಕುರಿತು ಮಾತನಾಡುತ್ತೇನೆ. ಆದರೆ ಇದು ಇಹಲೋಕದ ಜ್ಞಾನವಲ್ಲ, ಅಳಿದು ಹೋಗುವಂಥ ಅಧಿಪತಿಗಳ ಜ್ಞಾನವೂ ಅಲ್ಲ.
7 : ನಾನು ಸಾರುವ ಜ್ಞಾನ ದೇವರ ನಿಗೂಢ ಜ್ಞಾನ. ಮಾನವರಿಗೆ ಮುಚ್ಚಿಟ್ಟ ಜ್ಞಾನ. ನಮ್ಮನ್ನು ಮಹಿಮೆಗೊಳಿಸುವುದಕ್ಕಾಗಿ ಲೋಕದ ಉತ್ಪತ್ತಿಗೆ ಮೊದಲೇ ದೇವರು ನಿಯೋಜಿಸಿದ ಜ್ಞಾನ.
8 : ಲೋಕಾಧಿಪತಿಗಳಾರಿಗೂ ಇದರ ಅರಿವಿರಲಿಲ್ಲ. ಹಾಗೆ ಅರಿತಿದ್ದರೆ ಆ ಮಹಿಮಾನ್ವಿತ ಪ್ರಭುವನ್ನು ಅವರು ಶಿಲುಬೆಗೇರಿಸುತ್ತಿರಲಿಲ್ಲ.
9 : ಪವಿತ್ರಗ್ರಂಥದಲ್ಲಿ ಹೇಳಿರುವಂತೆ: “ಕಣ್ಣಾವುದೂ ಕಂಡಿಲ್ಲ, ಕಿವಿಯಾವುದೂ ಕೇಳಿಲ್ಲ. ಮನುಜಕಲ್ಪನೆಗೂ ಎಟುಕಲಿಲ್ಲ. ಅಂಥ ಅತಿಶಯಗಳನ್ನು ಸಜ್ಜುಗೊಳಿಸಿರುವನು, ತನ್ನನೊಲಿದವರಿಗೆ ಪರಮದೇವನು.”
10 : ನಮಗಾದರೋ ದೇವರು ಪವಿತ್ರಾತ್ಮ ಅವರ ಮುಖಾಂತರ ಇವುಗಳನ್ನು ಪ್ರಕಟಿಸಿದ್ದಾರೆ. ಸಕಲವನ್ನು ಹಾಗೂ ದೇವರ ಅಂತರಾಳವನ್ನು ಅವಲೋಕಿಸುವವರು ಈ ಪವಿತ್ರಾತ್ಮರೇ.
----------------
ಶುಭಸಂದೇಶ  -  ಮತ್ತಾಯ 5:17-37
17 : "ಮೋಶೆಯ ಧರ್ಮಶಾಸ್ತ್ರವನ್ನಾಗಲಿ, ಪ್ರವಾದಿಗಳ ಪ್ರವಚನಗಳನ್ನಾಗಲಿ ರದ್ದು ಮಾಡಲು ನಾನು ಬಂದೆನೆಂದು ತಿಳಿಯಬೇಡಿ. ರದ್ದು ಮಾಡಲು ಅಲ್ಲ, ಅವುಗಳನ್ನು ಸಿದ್ಧಿಗೆ ತರಲು ಬಂದಿದ್ದೇನೆ.
18 : ಭೂಮ್ಯಾಕಾಶಗಳು ಉಳಿದಿರುವ ತನಕ ಧರ್ಮಶಾಸ್ತ್ರವೆಲ್ಲ ನೆರವೇರುವುದೇ ಹೊರತು ಅದರಲ್ಲಿ ಒಂದು ಚಿಕ್ಕ ಅಕ್ಷರವಾಗಲಿ, ಚುಕ್ಕೆಯಾಗಲಿ ನಿರರ್ಥಕವಾಗದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
19 : ಹೀಗಿರುವಲ್ಲಿ, ಅದರ ಆಜ್ಞೆಗಳಲ್ಲಿ ಅತಿ ಚಿಕ್ಕದೊಂದನ್ನು ವಿೂರುವವನು, ವಿೂರುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಅತ್ಯಲ್ಪನೆಂದು ಪರಿಗಣಿತನಾಗುವನು; ಧರ್ಮಶಾಸ್ತ್ರವನ್ನು ಪಾಲಿಸುವವನು, ಪಾಲಿಸುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಮಹಾತ್ಮನೆಂದು ಪರಿಗಣಿತನಾಗುವನು.
20 : ಧರ್ಮಶಾಸ್ತ್ರಿಗಳ ಹಾಗೂ ಫರಿಸಾಯರ ಧರ್ಮನಿಷ್ಠೆಗಿಂತ ನಿಮ್ಮ ಧರ್ಮನಿಷ್ಠೆ ಉತ್ತಮವಾಗದ ಹೊರತು ನೀವು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸಲಾರಿರಿ ಎಂಬುದು ನಿಶ್ಚಯ." ಕೋಪ ಕೊಲೆಗೆ ಮೂಲ
21 : " ‘ನರಹತ್ಯೆ ಮಾಡಬೇಡ; ನರಹತ್ಯೆ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನು’ ಎಂದು ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ.
22 : ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ: ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ‘ಮೂರ್ಖ’ ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು.
23 : ಆದಕಾರಣ, ಬಲಿಪೀಠದ ಮುಂದೆ ದೇವರಿಗೆ ಕಾಣಿಕೆಯನ್ನು ಅರ್ಪಿಸಲಿರುವಾಗ, ನಿನ್ನ ಸೋದರನಿಗೆ ನಿನ್ನ ಮೇಲೆ ಏನೋ ಮನಸ್ತಾಪವಿದೆ ಎಂಬುದು ನಿನ್ನ ನೆನಪಿಗೆ ಬಂದರೆ,
24 : ನಿನ್ನ ಕಾಣಿಕೆಯನ್ನು ಆ ಬಲಿಪೀಠದ ಮುಂದೆಯೇ ಇಟ್ಟುಬಿಡು. ಮೊದಲು ಹೋಗಿ ನಿನ್ನ ಸೋದರನೊಡನೆ ಸಮಾಧಾನಮಾಡಿಕೊ, ಅನಂತರ ಬಂದು ನಿನ್ನ ಕಾಣಿಕೆಯನ್ನು ಒಪ್ಪಿಸು."
25 : "ನಿನ್ನ ಎದುರಾಳಿ ನಿನ್ನನ್ನು ನ್ಯಾಯಸ್ಥಾನಕ್ಕೆ ಎಳೆಯುವಾಗ ಮಾರ್ಗಮಧ್ಯದಲ್ಲೇ ಅವನೊಡನೆ ಬೇಗ ಸಂಧಾನಮಾಡಿಕೊ. ಇಲ್ಲದಿದ್ದರೆ, ಅವನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿ ನಿನ್ನನ್ನು ಪೋಲೀಸರ ವಶಕ್ಕೆ ಬಿಡಬಹುದು. ಅನಂತರ ನಿನಗೆ ಸೆರೆವಾಸ ಪ್ರಾಪ್ತವಾದೀತು!
26 : ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಬಿಡಿಕಾಸನ್ನೂ ಬಿಡದೆ ಎಲ್ಲವನ್ನೂ ತೆರಬೇಕಾಗುವುದು. ಇದನ್ನು ನೆನಪಿನಲ್ಲಿಡು."
27 : "ವ್ಯಭಿಚಾರ ಮಾಡಕೂಡದು ಎಂಬ ನಿಯಮವನ್ನು ನೀವು ಕೇಳಿದ್ದೀರಿ;
28 : ಆದರೆ ನಾನು ಹೇಳುತ್ತೇನೆ, ಕೇಳಿ: ಪರಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ತನ್ನ ಹೃದಯದಲ್ಲಿ ಆಕೆಯೊಡನೆ ಆಗಲೇ ವ್ಯಭಿಚಾರ ಮಾಡಿದವನೇ ಆಗುತ್ತಾನೆ.
29 : ನಿನ್ನ ಬಲಗಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತೆಸೆದುಬಿಡು; ನಿನ್ನ ಇಡೀ ದೇಹ ನರಕಕ್ಕೆ ತುತ್ತಾಗುವುದಕ್ಕಿಂತ ನಿನ್ನ ಒಂದು ಅಂಗ ನಾಶವಾಗುವುದೇ ಲೇಸು.
30 : ನಿನ್ನ ಬಲಗೈ ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿ ಬಿಸಾಡಿಬಿಡು; ನಿನ್ನ ಇಡೀ ದೇಹ ನರಕದ ಪಾಲಾಗುವುದಕ್ಕಿಂತ ಒಂದು ಅವಯವ ನಾಶವಾಗುವುದು ಎಷ್ಟೋ ಮೇಲು."
31 : "ಇದಲ್ಲದೆ, ‘ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ವಿವಾಹ ವಿಚ್ಛೇದನ ಪತ್ರವನ್ನು ಅವಳಿಗೆ ಕೊಡಲಿ,’ ಎಂದು ವಿಧಿಸಲಾಗಿದೆ.
32 : ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ: ತನ್ನ ಹೆಂಡತಿಯ ದುರ್ನಡತೆಯ ಕಾರಣದಿಂದಲ್ಲದೆ, ಅವಳನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರಿಣಿಯಾಗುವುದಕ್ಕೆ ಕಾರಣನಾಗುತ್ತಾನೆ; ಅಲ್ಲದೆ ಗಂಡ ಬಿಟ್ಟವಳನ್ನು ಮದುವೆಯಾಗುವವನು ಕೂಡ ವ್ಯಭಿಚಾರಿಯಾಗುತ್ತಾನೆ."
33 : " ‘ಸುಳ್ಳಾಣೆಯಿಡಬೇಡ; ದೇವರಿಗೆ ಆಣೆಯಿಟ್ಟು ವಾಗ್ದಾನಮಾಡಿದಂತೆ ನಡೆದುಕೊಳ್ಳಲೇ ಬೇಕು’ ಎಂದು ಪೂರ್ವಿಕರಿಗೆ ಹೇಳಿದ್ದು ನಿಮಗೆ ತಿಳಿದೇ ಇದೆ.
34 : ಈಗ ನಾನು ಹೇಳುವುದನ್ನು ಕೇಳಿ: ನೀವು ಆಣೆಯಿಡಲೇಬೇಡಿ. ಆಕಾಶದ ಮೇಲೆ ಆಣೆಯಿಡಬೇಡಿ, ಅದು ದೇವರ ಸಿಂಹಾಸನ;
35 : ಭೂಮಿಯ ಮೇಲೆ ಆಣೆಯಿಡಬೇಡಿ, ಅದು ದೇವರ ಪಾದಪೀಠ; ಜೆರುಸಲೇಮಿನ ಮೇಲೆ ಆಣೆಯಿಡಬೇಡಿ, ಅದು ರಾಜಾಧಿರಾಜನ ಪಟ್ಟಣ;
36 : ನಿಮ್ಮ ತಲೆಯ ಮೇಲೂ ಆಣೆಯಿಡಬೇಡಿ; ಹಾಗೆ ಆಣೆಯನ್ನಿಟ್ಟು ಅದರ ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲು ನಿಮ್ಮಿಂದಾಗದು.
37 : ಹೌದಾದರೆ ಹೌದೆನ್ನಿ, ಅಲ್ಲವಾದರೆ ಅಲವೆನ್ನಿ; ಇದಕ್ಕಿಂತ ಮಿಗಿಲಾದುದು ಪಿಶಾಚಿಯಿಂದ ಪ್ರೇರಿತವಾದುದು."
--------------------
ಚಿಂತನೆ
ಪ್ರೀತಿಯ ದೈವ ಜನರೇ ನಾವೆಲ್ಲರೂ ಇಂದು ಆಯ್ಕೆಯ ಯುಗದಲ್ಲಿ ಜೀವಿಸುತ್ತಿದ್ದೇವೆ. ನಾವು ಯಾವಾಗಲೂ ಅತ್ಯುತ್ತಮವಾದುದನ್ನು ಆಯ್ದುಕೊಳ್ಳುತ್ತೇವೆ, ಈ ಪ್ರಪಂಚದಲ್ಲಿ ಅಂದರೆ ಇಹಲೋಕದ ಪಯಣದ ನಂತರದ ಪರಲೋಕದ ಜೀವನಕ್ಕೆ ನಮ್ಮ ಆಯ್ಕೆ ಯಾವುದು ಆಗಬೇಕಾಗಿದೆ ಎನ್ನುವುದು ಅತಿ ಮುಖ್ಯವಾಗಿದೆ. ನಮ್ಮಲ್ಲಿ ಒಳ್ಳೆಯತನ ಇದ್ದಷ್ಟು ಕಾಲ ನಾವು ಪರರನ್ನು ಯಥೇಚ್ಛವಾಗಿ ಪ್ರೀತಿಸಲು ಸಾಧ್ಯ.

ಮೊದಲನೆಯ ವಾಚನ
ನಮ್ಮೆಲ್ಲರ ಬಾಳಿಗೆ ದಾರಿದೀಪ ಇಚ್ಛಾಶಕ್ತಿಯೇ ಆಗಿದೆ. ಏಕೆಂದರೆ ಮನುಷ್ಯನು ಇಚ್ಛಿಸಿದೆ ಆದರೆ ಅವನು ಈ ಸಮಾಜದಲ್ಲಿ ಅತಿ ಪ್ರೀತಿ ಪೂರಕ ವ್ಯಕ್ತಿಯಾಗಿ ಬಾಳುತ್ತಾನೆ.
ಎರಡನೆಯ ವಾಚನ
ದೈವಜ್ಞಾನ ಇದ್ದಲ್ಲಿ ಈ ಲೋಕದ ಜ್ಞಾನಕ್ಕೆ ಹೆಚ್ಚಿನ ಮಹತ್ವ ಇರುವುದಿಲ್ಲ ಏಕೆಂದರೆ ದೈವ ಜ್ಞಾನದ ಮುಂದೆ ಯಾವ ಜ್ಞಾನವೂ ಶ್ರೇಷ್ಠ ಅಲ್ಲ.

ಇಂದಿನ ವಾಚನಗಳ ಸಾರಾಂಶ
- ಒಳ್ಳೆಯದನ್ನು ಆಯ್ಕೆ ಮಾಡು
- ಒಳ್ಳೆಯದನ್ನು ಪ್ರೀತಿಸು
- ಒಳ್ಳೆಯದನ್ನು ಆಲಂಗಿಸು
- ಒಳ್ಳೆಯದನ್ನು ಪುರಸ್ಕರಿಸು
- - - - - - - ಏಕೆಂದರೆ ಪ್ರಭು ಕ್ರಿಸ್ತರು ಒಳ್ಳೆಯ ಕುರಿಗಾಹಿ ಆಗಿದ್ದಾರೆ.
ದೇವರು ಪ್ರತಿಯೊಂದನ್ನು ಆಯ್ಕೆಮಾಡಿಕೊಳ್ಳಲು ಮಾನವನ ವಿವೇಚನೆಗೆ ಬಿಟ್ಟಿದ್ದಾರೆ. ಅದನ್ನು ಇಂದಿನ ಮೊದಲನೆಯ ವಾಚನದಲ್ಲಿ ಸಿರಾಖನು ತಿಳಿಸುತ್ತಾನೆ. ಅಂದರೆ ದೈವ ಆಜ್ಞಾ ಪ್ರೀತಿಯ ಆಜ್ಞೆಯಾಗಿದೆ. ಅದನ್ನು ಅಪ್ಪಿಕೊಂಡು ಬಾಳುವ ಪ್ರತಿಯೊಬ್ಬ ಮನುಷ್ಯನು ಮನುಷ್ಯತ್ವವನ್ನು ರೂಢಿಸಿಕೊಂಡು ಬಾಳುತ್ತಾನೆ” ದೇವರಿಗೆ ಭಯಪಡುವವರ ಮೇಲಿದೆ ಆತನ ಕೃಪಾಕಟಾಕ್ಷ” ಅಂದಮೇಲೆ ನಾವು ನಾವು ಭಕ್ತಿಯೆಂಬ ಹಣತೆಯನ್ನು ಹಚ್ಚಿಕೊಂಡು ಆ ಬೆಳಕಿನಲ್ಲಿ ಹೆಜ್ಜೆಯನ್ನಿಟ್ಟು ಸಾಗಿದಾಗ ದೇವರು ಸಹ ತಮ್ಮ ಕೃಪಾಶೀರ್ವಾದ ಗಳನ್ನು ನಮ್ಮ ಮೇಲೆ ಹೇರಳವಾಗಿ ಸುರಿಸುತ್ತಾರೆ.
ಶುಭಸಂದೇಶದಲ್ಲಿ ನಾವು ನೋಡುವುದಾದರೆ ಒಳ್ಳೆಯದು ಮತ್ತು ಕೆಟ್ಟದ್ದು ಎರಡು ಈ ಭೂಮಿಯ ಮೇಲೆ ನಿರಂತರವಾಗಿ ಸೆಣಸುತ್ತವೆ . ಈ ಸೆಣಸಾಟದಲ್ಲಿ ಜಯ ಗಳಿಸುವುದು ಒಳ್ಳೆಯತನ ಹೊರತು ಕೆಟ್ಟದ್ದು ಅಲ್ಲ.
ಉದಾಹರಣೆಗೆ - ಸುಳ್ಳು ಯಾವತ್ತು ಸತ್ಯವಾಗುವುದಿಲ್ಲ
- ಕತ್ತಲೆಯು ಎಂದು ಬೆಳಕು ಎಂದೆನಿಸಿ ಕೊಳ್ಳುವುದಿಲ್ಲ
ಅಂತೆಯೇ ಸತ್ಯ ಎಂದಿಗೂ ಜಯವನ್ನು ಹೊಂದಲೇಬೇಕು.
-------------------

No comments:

Post a Comment