ಫೆಬ್ರವರಿ 27, 2020 ಗುರುವಾರ [ನೇರಳೆ]
ಮೊದಲ ವಾಚನ: ಧರ್ಮೋಪದೇಶ 30.15-20
ಕೀರ್ತನೆ 1:1-4, 6, ಶ್ಲೋಕ.40:4
ಪ್ರಭುವಿನಲ್ಲೇ ಭರವಸೆಯಿಟ್ಟು ನಡೆವಾತನು ಧನ್ಯನು
ಶುಭಸಂದೇಶ: ಲೂಕ 9.22-25
---------------------
ಮೊದಲ ವಾಚನ: ಧರ್ಮೋಪದೇಶ 30.15-20
15 : ಎರಡು ಹಾದಿಗಳು “ಇಗೋ ನೋಡಿ: ನಾನು ಶುಭವನ್ನೂ ಅಶುಭವನ್ನೂ ಜೀವವನ್ನೂ ಸಾವನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ.
16 : ನಾನು ಈಗ ನಿಮಗೆ ಬೋಧಿಸುವಂತೆ ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ, ಅವರು ಹೇಳಿದ ಮಾರ್ಗದಲ್ಲಿ ನಡೆದು, ಅವರ ಆಜ್ಞಾವಿಧಿ ನಿರ್ಣಯಗಳನ್ನು ಅನುಸರಿಸಿದರೆ ನೀವು ಬದುಕಿ ಬಾಳುವಿರಿ, ಅಭಿವೃದ್ಧಿಯಾಗುವಿರಿ, ಮತ್ತು ನೀವು ಸ್ವಾಧೀನ ಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಆಶೀರ್ವದಿಸುವರು.
17 : ಆದರೆ ನೀವು ಅವರನ್ನು ಬಿಟ್ಟು, ಅವರ ಮಾತನ್ನು ಕೇಳಲೊಲ್ಲದೆ, ಮೋಸಹೋಗಿ,
18 : ಇತರ ದೇವರುಗಳನ್ನು ಪೂಜಿಸಿ ಅವಲಂಬಿಸಿದರೆ ನೀವು ಸ್ವಾಧೀನ ಮಾಡಿಕೊಳ್ಳಲು ಜೋರ್ಡನ್ ನದಿಯನ್ನು ದಾಟಿ ಹೋಗುವ ನಾಡಿನಲ್ಲಿ ಬಹುಕಾಲ ಇರದೆ ನಾಶ ಆಗಿ ಹೋಗುವಿರಿ. ಇದನ್ನು ನಾನು ಈಗ ನಿಮಗೆ ಖಂಡಿತವಾಗಿ ತಿಳಿಸುತ್ತೇನೆ.
19 : ನಾನು ಸಾವು ಜೀವಗಳನ್ನೂ ಶಾಪಾಶೀರ್ವಾದಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಆಕಾಶಗಳೇ ಸಾಕ್ಷಿಗಳಾಗಿರಲಿ; ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಬಾಳುವಂತೆ ಜೀವವನ್ನೇ ಆರಿಸಿಕೊಳ್ಳಿ;
20 : ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರ ಮಾತಿಗೆ ವಿಧೇಯರಾಗಿರಿ; ಅವರನ್ನು ಹೊಂದಿಕೊಂಡೇ ಇರಿ. ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಕೊಟ್ಟ ನಾಡಿನಲ್ಲಿ ನೀವು ಬದುಕಿ ಬಾಳುವುದಕ್ಕೂ ಬಹುಕಾಲ ಇರುವುದಕ್ಕೂ ಅವರೇ ಆಧಾರ.”
--------------------------

1 : ದುರ್ಜನರ ಆಲೋಚನೆಯಂತೆ ನಡೆಯದೆ / ಪಾಪಾತ್ಮರ ಪಥದಲಿ ಕಾಲೂರದೆ / ಧರ್ಮನಿಂದಕರ ಕೂಟದಲಿ ಕೂರದೆ //
2 : ಪ್ರಭುವಿನ ಧರ್ಮಶಾಸ್ತ್ರದಲಿ ಹರ್ಷಗೊಳ್ಳುವವನಾರೋ - ಅವನೇ ಧನ್ಯನು/ ಹಗಲಿರುಳೆನ್ನದೆ ಅದನೆ ಧ್ಯಾನಿಸು ತಿರುವವನಾರೋ - ಅವನೇ ಧನ್ಯನು //
3 : ನದಿಯ ಬದಿಯಲೇ ಬೆಳೆದಿಹ ಮರದಂತೆ / ಸಕಾಲಕೆ ಫಲವೀವ ವೃಕ್ಷದಂತೆ / ಎಲೆಬಾಡದೆ ಪಸಿರಿರುವ ತರುವಂತೆ / ಸಿಗುವುದು ಅವನ ಕಾರ್ಯಗಳಿಗೆ ಸಫಲತೆ //
4 : ದುರುಳರಾದರೊ ತೂರಿ ಹೋಗುವರು / ಬಿರುಗಾಳಿಗೆ ತರಗೆಲೆಯಾಗುವರು //
6 : ಸಜ್ಜನರ ಮಾರ್ಗಕ್ಕಿದೆ ಪ್ರಭುವಿನ ಪಾಲನ / ದುರ್ಜನರ ಮಾರ್ಗಕ್ಕಿದೆ ಸಂಪೂರ್ಣ ವಿನಾಶನ //
-----------------------
ಶುಭಸಂದೇಶ: ಲೂಕ 9.22-25
22 : ಇದಲ್ಲದೆ, “ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾ ಪ್ರಮುಖರಿಂದಲೂ ಮುಖ್ಯಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕøತನಾಗಿ ಕೊಲ್ಲಲ್ಪಡುವನು. ಆದರೆ ಮೂರನೇ ದಿನ ಆತನು ಪುನರುತ್ಥಾನ ಹೊಂದುವನು,” ಎಂದು ಅವರಿಗೆ ತಿಳಿಸಿದರು. ‘ನಾನು ಹೋದರೆ ಹೋಗಬಹುದು’
23 : ಯೇಸುಸ್ವಾಮಿ ಎಲ್ಲರನ್ನು ನೋಡಿ ಹೇಳಿದ್ದೇನೆಂದರೆ: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ, ತನ್ನ ಶಿಲುಬೆಯನ್ನು ಅನುದಿನವೂ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
24 : ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ನಿತ್ಯಕ್ಕೂ ಉಳಿಸಿಕೊಳ್ಳುವನು.
25 : ಒಬ್ಬನು ಪ್ರಪಂಚವನ್ನೆಲ್ಲಾ ಗೆದ್ದುಕೊಂಡು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅಥವಾ ತೆತ್ತರೆ ಅವನಿಗೆ ಅದರಿಂದ ಬರುವ ಲಾಭವಾದರೂ ಏನು?
--------------------

ಚಿಂತನೆ
ಯೇಸು ತಮ್ಮ ಶಿಷ್ಯರಿಗೆ ತಮ್ಮ ಸಾವಿನ ಬಗ್ಗೆ ಮುಂತಿಳಿಸುತ್ತಾರೆ. ಯೇಸು ಕ್ರಿಸ್ತ ಒಂದು ವೇಳೆ ಆ ರೀತಿಯಾಗಿ ತಿಳಿಸದೆ ಹೋಗಿದ್ದರೆ ಶಿಷ್ಯರು ಸಾಕ್ಷಿಭರಿತ ಜೀವನವನ್ನು ಜೀವಿಸಲು ಸಾಧ್ಯವಾಗದೆ ಹೋಗುತ್ತಿತ್ತು.
ಸಾಕ್ಷಿಭರಿತ ಜೀವನಕ್ಕೆ ನಮ್ಮ ನಮ್ಮ ಶಿಲುಬೆಗಳನ್ನು ಅನುದಿನವೂ ಹೊತ್ತು ಸಾಗಬೇಕಿದೆ. ಅದು ಕುಟುಂಬದ ಶಿಲುಬೆ ಆಗಿರಬಹುದು. ಕೆಲಸದ ಶಿಲುಬೆ ಆಗಿರಬಹುದು. ಪಾಪಗಳ ಶಿಲುಬೆಯೂ ಆಗಿರಬಹುದು. ಕಷ್ಟಗಳ ನೋವುಗಳ, ತಾರತಮ್ಯದ ಶಿಲುಬೆಗಳೂ ಆಗಿರಬಹುದು. ಪ್ರಭುಯೇಸು ಅವಮಾನಕ್ಕೆ ಬಳಸುತ್ತಿದ್ದ ಶಿಲುಬೆಯನ್ನು ವಿಜಯದ ಸಂಕೇತವಾಗಿ ಮಾರ್ಪಡಿಸಿದರು. ಅಂತೆಯೇ ನಾವು ಸಹ ಈ ಲಾಂಛನವನ್ನು ಕೇವಲ ಕೊರಳಲ್ಲಿ ಧರಿಸದೆ ನಮ್ಮ ನಮ್ಮ ಹೃದಯಗಳಲ್ಲಿ ಧರಿಸಿಕೊಂಡು ಪಾಪದ ವಿರುದ್ಧ ಹೋರಾಡುವ ಅಸ್ತ್ರವನ್ನಾಗಿಸಿಕೊಂಡು ಜೀವಿಸುವ ನಿಜವಾದ ಕ್ರೈಸ್ತೀಯ ಜೀವನವಾಗಬೇಕು.
© 'ದನಿ' ಮಾಧ್ಯಮ ಮನೆ

No comments:
Post a Comment