ಮಾರ್ಚ್ 13, 2020 ಶುಕ್ರವಾರ [ನೇರಳೆ]
ಮೊದಲ ವಾಚನ: ಆದಿ 37.3-4, 12-13, 17-28
ಕೀರ್ತನೆ 105:16-21. ಶ್ಲೋಕ.6
ನೆನೆಯಿರಿ ಆತನ ಅದ್ಭುತಗಳನು, ಮಹತ್ಕಾರ್ಯಗಳನು
ಶುಭಸಂದೇಶ: ಮತ್ತಾಯ 21.33-43, 45-46
ಮೊದಲ ವಾಚನ: ಆದಿ 37.3-4, 12-13, 17-28
ಕೀರ್ತನೆ 105:16-21. ಶ್ಲೋಕ.6
ನೆನೆಯಿರಿ ಆತನ ಅದ್ಭುತಗಳನು, ಮಹತ್ಕಾರ್ಯಗಳನು
ಶುಭಸಂದೇಶ: ಮತ್ತಾಯ 21.33-43, 45-46
------------------------
ಮೊದಲ ವಾಚನ: ಆದಿ 37.3-4, 12-13, 17-28
3 : ಜೋಸೆಫನು ಯಕೋಬನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗ. ಎಂದೇ ಯಕೋಬನಿಗೆ ಅವನ ಮೇಲೆ ಮಿಕ್ಕ ಮಕ್ಕಳಿಗಿಂತ ಮಿಗಿಲಾದ ಪ್ರೀತಿ. ಅಲಂಕೃತವಾದ ಒಂದು ನಿಲುವಂಗಿಯನ್ನೂ ಅವನಿಗೆ ಮಾಡಿಸಿಕೊಟ್ಟಿದ್ದ.
4 : ತಂದೆ ತನ್ನ ಎಲ್ಲ ಮಕ್ಕಳಿಗಿಂತ ಇವನನ್ನೇ ಹೆಚ್ಚಾಗಿ ಪ್ರೀತಿಸುವುದನ್ನು ಕಂಡು, ಅಣ್ಣಂದಿರು ಆ ಜೋಸೆಫನನ್ನು ಹಗೆ ಮಾಡಿದರು. ಅವನೊಡನೆ ಸ್ನೇಹಭಾವದಿಂದಲೂ ಮಾತಾಡದೆ ಹೋದರು.
12 : ಒಮ್ಮೆ ಜೋಸೆಫನ ಅಣ್ಣಂದಿರು ತಂದೆಯ ಆಡುಕುರಿಗಳನ್ನು ಮೇಯಿಸಲು ಶೆಕೆಮಿಗೆ
13 : ಯಕೋಬನು ಜೋಸೆಫನಿಗೆ, “ನಿನ್ನ ಅಣ್ಣಂದಿರು ಶೆಕೆಮಿನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರೆ, ಅಲ್ಲವೇ? ಅವರ ಬಳಿಗೆ ನಿನ್ನನ್ನು ಕಳಿಸಬೇಕೆಂದಿದ್ದೇನೆ,” ಎನ್ನಲು
17 : ಅದಕ್ಕೆ ಆ ಮನುಷ್ಯ, “ಅವರು ಇಲ್ಲಿಂದ ಹೊರಟುಹೋದರು; ‘ದೋತಾನಿಗೆ ಹೋಗೋಣ’ ಎಂದು ಮಾತಾಡುವುದನ್ನು ಕೇಳಿದೆ,” ಎಂದ. ಜೋಸೆಫನು ಅವರನ್ನು ಹುಡುಕುತ್ತಾ ಹೋಗಿ, ದೋತಾನಿನಲ್ಲಿ ಅವರನ್ನು ಕಂಡ.
18 : ಅಣ್ಣಂದಿರು ಅವನನ್ನು ದೂರದಿಂದಲೇ ನೋಡಿದರು. ಅವನು ತಮ್ಮ ಬಳಿಗೆ ಬರುವಷ್ಟರೊಳಗೆ ಅವನನ್ನು ಕೊಲ್ಲಲು ಒಳಸಂಚು ಮಾಡಿಕೊಂಡರು.

19 : “ಅಗೋ ಆ ಕನಸುಗಾರ ಬರುತ್ತಾ ಇದ್ದಾನೆ!
20 : ನಾವು ಅವನನ್ನು ಕೊಂದು ಈ ಬಾವಿಯೊಂದರಲ್ಲಿ ಹಾಕಿಬಿಡೋಣ. ‘ಕಾಡುಮೃಗ ಅವನನ್ನು ತಿಂದುಬಿಟ್ಟಿತು’; ಎಂದು ಹೇಳಿದರೆ ಆಯಿತು, ಬನ್ನಿ. ಆಗ ಅವನ ಕನಸುಗಳು ಏನಾಗುತ್ತವೋ ನೋಡೋಣ,” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.
21 : ರೂಬೇನನು ಈ ಮಾತನ್ನು ಕೇಳಿಸಿಕೊಂಡು, ಅವನನ್ನು ಅವರ ಕೈಯಿಂದ ತಪ್ಪಿಸುವ ಉದ್ದೇಶದಿಂದ, “ನಾವು ಅವನ ಪ್ರಾಣತೆಗೆಯಬೇಕಾಗಿಲ್ಲ,
22 : ರಕ್ತಪಾತ ಕೂಡದು. ಕಾಡಿನಲ್ಲಿರುವ ಈ ಬಾವಿ ಒಂದರಲ್ಲಿ ಹಾಕಿಬಿಡಿ, ಅವನ ಮೇಲೆ ಕೈಹಾಕಬೇಡಿ,” ಎಂದು ಅವರಿಗೆ ಹೇಳಿದ. ಅವನನ್ನು ಅವರಿಂದ ತಪ್ಪಿಸಿ ತಂದೆಗೆ ಮತ್ತೆ ಒಪ್ಪಿಸಬೇಕೆಂಬ ಗುರಿ ರೂಬೇನನದಾಗಿತ್ತು.
23 : ಜೋಸೆಫನು ತನ್ನ ಅಣ್ಣಂದಿರ ಹತ್ತಿರಕ್ಕೆ ಬಂದಾಗ ಅವರು ಅವನ ಮೇಲಿದ್ದ ನಿಲುವಂಗಿಯನ್ನು ತೆಗೆದುಬಿಟ್ಟರು.
24 : ಅವನನ್ನು ಹಿಡಿದು ಬಾವಿಯೊಳಗೆ ಹಾಕಿದರು. ಆ ಬಾವಿ ನೀರಿಲ್ಲದೆ ಬರಿದಾಗಿತ್ತು.
25 : ತರುವಾಯ ಅವರು ಊಟಕ್ಕೆ ಕುಳಿತುಕೊಂಡರು. ಅಷ್ಟರಲ್ಲಿ, ಇಷ್ಮಾಯೇಲರ ಗುಂಪೊಂದು ಗಿಲ್ಯಾದಿನಿಂದ ಬರುವುದು ಅವರ ಕಣ್ಣಿಗೆ ಕಾಣಿಸಿತು. ಇವರು ತಮ್ಮ ಒಂಟೆಗಳ ಮೇಲೆ ಪರಿಮಳ ಪದಾರ್ಥ, ಸುಗಂಧ ತೈಲ, ರಸಗಂಧ ಇವುಗಳನ್ನು ಹೇರಿಕೊಂಡು, ಈಜಿಪ್ಟಿಗೆ ಪ್ರಯಾಣಮಾಡುತ್ತಿದ್ದರು.
26 : ಆಗ ಯೆಹೂದನು ತನ್ನ ಅಣ್ಣತಮ್ಮಂದಿರಿಗೆ, “ನಾವು ನಮ್ಮ ತಮ್ಮನನ್ನು ಕೊಂದು ಆ ಕೊಲೆಯನ್ನು ಮರೆಮಾಡಿದರೆ ಪ್ರಯೋಜನವೇನು?
27 : ಅವನನ್ನು ಆ ಇಷ್ಮಾಯೇಲರಿಗೆ ಮಾರಿಬಿಡೋಣ, ಬನ್ನಿ; ನಾವು ಅವನ ಮೇಲೆ ಕೈ ಹಾಕಬಾರದು, ಅವನು ನಮ್ಮ ತಮ್ಮನಲ್ಲವೆ? ರಕ್ತಸಂಬಂಧಿಯಲ್ಲವೆ?” ಎಂದು ಹೇಳಿದ. ಅವನ ಆ ಮಾತಿಗೆ ಅಣ್ಣತಮ್ಮಂದಿರು ಒಪ್ಪಿದರು.
28 : ಅಷ್ಟರಲ್ಲಿ, ಮಿದ್ಯಾನಿನ ವರ್ತಕರು ಹಾದುಹೋಗುತ್ತಿದ್ದರು. ಅವರು ಜೋಸೆಫನನ್ನು ಬಾವಿಯೊಳಗಿಂದ ಎತ್ತಿ ಈ ಇಷ್ಮಾಯೇಲರಿಗೆ ಇಪ್ಪತ್ತು ಬೆಳ್ಳಿನಾಣ್ಯಗಳಿಗೆ ಮಾರಿಬಿಟ್ಟರು. ಇವರು ಅವನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋದರು.
29 : ರೂಬೇನನು ಮರಳಿ ಆ ಬಾವಿಯ ಬಳಿಗೆ ಬಂದು ನೋಡಿದನು. ಅದರಲ್ಲಿ ಜೋಸೆಫನು ಇರಲಿಲ್ಲ.
30 : ದುಃಖವನ್ನು ತಾಳಲಾರದೆ ತನ್ನ ಬಟ್ಟೆಯನ್ನು ಹರಿದುಕೊಂಡನು; ತಮ್ಮಂದಿರ ಬಳಿಗೆ ಬಂದು, “ಆ ಹುಡುಗ ಇಲ್ಲವಲ್ಲಾ! ಅಯ್ಯೋ, ನಾನೇನು ಮಾಡಲಿ?” ಎಂದು ಗೋಳಾಡಿದ.
31 : ಬಳಿಕ ಅವರು ಒಂದು ಹೋತವನ್ನು ಕೊಯ್ದು, ಅದರ ರಕ್ತದಲ್ಲಿ ಜೋಸೆಫನ ನಿಲುವಂಗಿಯನ್ನು ಅದ್ದಿ
32 : ಆ ಅಂಗಿಯನ್ನು ತಮ್ಮ ತಂದೆಗೆ ಕಳಿಸಿದರು. ಅದನ್ನು ತಂದವರು, “ಇದು ನಮಗೆ ಸಿಕ್ಕಿತು; ಇದು ನಿಮ್ಮ ಮಗನ ಅಂಗಿಯೋ ಅಲ್ಲವೋ ನೋಡಿ,” ಎಂದು ಹೇಳಿದರು.
33 : ಯಕೋಬನು ಅದರ ಗುರುತನ್ನು ಹಿಡಿದು, “ಈ ಅಂಗಿ ನಿಶ್ಚಯವಾಗಿ ನನ್ನ ಮಗನದೇ; ಕಾಡುಮೃಗ ಅವನನ್ನು ಕೊಂದು ತಿಂದಿರಬೇಕು, ಜೋಸೆಫನನ್ನು ಅದು ನಿಸ್ಸಂದೇಹವಾಗಿ ಸೀಳಿ ಹಾಕಿರಬೇಕು,” ಎಂದು ಹೇಳಿ,
34 : ದುಃಖ ತಾಳಲಾಗದೆ ತನ್ನ ಬಟ್ಟೆಯನ್ನು ಹರಿದುಕೊಂಡ; ನಡುವಿಗೆ ಗೋಣಿತಟ್ಟನ್ನು ಸುತ್ತಿಕೊಂಡ; ತನ್ನ ಮಗನಿಗಾಗಿ ಬಹುದಿನಗಳವರೆಗೂ ಅತ್ತು ಪ್ರಲಾಪಿಸಿದ.
35 : ದುಃಖಶಮನಮಾಡಲು ಪುತ್ರಪುತ್ರಿಯರೆಲ್ಲರು ಎಷ್ಟು ಪ್ರಯತ್ನಿಸಿದರೂ ಅವನು ಸಾಂತ್ವನಗೊಳ್ಳಲಿಲ್ಲ; “ನಾನು ಹೀಗೆಯೇ ಹಂಬಲಿಸುತ್ತಾ ನನ್ನ ಮಗನಿರುವ ಮೃತ್ಯುಲೋಕವನ್ನು ಸೇರುತ್ತೇನೆ,” ಎಂದು ಮಗನಿಗಾಗಿ ದುಃಖಿಸುತ್ತಲೇ ಇದ್ದ.
36 : ಮಿದ್ಯಾನ್ಯರು ಜೋಸೆಫನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋಗಿ ಫರೋಹನ ಆಸ್ಥಾನದಲ್ಲಿದ್ದ ಪೋಟೀಫರನಿಗೆ ಮಾರಿದರು; ಇವನು, ದೊಡ್ಡ ಉದ್ಯೋಗಸ್ಥನೂ ಮೈಗಾವಲಿನವರ ದಳಪತಿಯೂ ಆಗಿದ್ದನು.
----------------------
ಕೀರ್ತನೆ 105:16-21. ಶ್ಲೋಕ.6
ನೆನೆಯಿರಿ ಆತನ ಅದ್ಭುತಗಳನು, ಮಹತ್ಕಾರ್ಯಗಳನು
16 : ತದನಂತರ ಬರಮಾಡಿದನಾ ನಾಡಿನಲಿ ಕ್ಷಾಮವನು / ಮುರಿದುಬಿಟ್ಟನು ಆಹಾರವೆಂಬಾ ಊರುಗೋಲನು //
17 : ಕಳಿಸಿದ ಅವರಿಗೆ ಮುಂದಾಗಿ ಒಬ್ಬಾತನನು / ದಾಸತ್ವಕೆ ಮಾರಲಾದ ಆ ಜೋಸೆಫನನು //
18 : ಅವನ ಕಾಲು ನೊಂದವು ಸಂಕೋಲೆಗಳಿಂದ / ಕುತ್ತಿಗೆ ಕೊರೆಯಿತು ಕಬ್ಬಿಣದ ಕೋಳಗಳಿಂದ //
19 : ಕ್ರಮೇಣ ಕೈಗೂಡಿತು ಜೋಸೆಫನು ನುಡಿದದ್ದು / ಪ್ರಭುವಿನ ವಾಣಿ ಕಂಡು ಬಂದಿತು ಸತ್ಯವೆಂದು //
20 : ಬಿಡಿಸಲವನನು ಅರಸ ಕಳಿಸಿದ ಆಳನು / ಬಿಡುಗಡೆಮಾಡಿದ ಜನಾಧಿಪತಿ ಅವನನು //
21 : ನೇಮಿಸಿದವನನು ತನ್ನ ಮನೆಗೆ ಯಜಮಾನನ್ನಾಗಿ / ಮಾಡಿದ ತನ್ನಾಸ್ತಿಗೆಲ್ಲಾ ಅಧಿಕಾರಿಯನ್ನಾಗಿ //
----------------------------------
ಶುಭಸಂದೇಶ: ಮತ್ತಾಯ 21.33-43, 45-46
33 : “ಇನ್ನೊಂದು ಸಾಮತಿಗೆ ಕಿವಿಗೊಡಿ: ಒಬ್ಬ ಯಜಮಾನ ಒಂದು ದ್ರಾಕ್ಷಿತೋಟ ಮಾಡಿಸಿದ. ಅದರ ಸುತ್ತ ಬೇಲಿಯನ್ನು ಹಾಕಿಸಿದ. ದ್ರಾಕ್ಷಾರಸವನ್ನು ತೆಗೆಯಲು ಅಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಅನಂತರ ಅದನ್ನು ಗೇಣಿದಾರರಿಗೆ ವಹಿಸಿ ಹೊರನಾಡಿಗೆ ಹೊರಟುಹೋದ.
34 : ಫಲಕೊಡುವ ಕಾಲ ಹತ್ತಿರವಾದಾಗ, ತನಗೆ ಬರಬೇಕಾದ ಪಾಲನ್ನು ತರುವುದಕ್ಕಾಗಿ ಆಳುಗಳನ್ನು ಗೇಣಿದಾರರ ಬಳಿಗೆ ಕಳುಹಿಸಿದ.
35 : ಇವರು ಆ ಆಳುಗಳ ಮೇಲೆ ಬಿದ್ದು ಒಬ್ಬನನ್ನು ಬಡಿದರು, ಇನ್ನೊಬ್ಬನನ್ನು ಕಡಿದರು, ಮತ್ತೊಬ್ಬನ ಮೇಲೆ ಕಲ್ಲು ತೂರಿದರು.
36 : ತೋಟದ ಯಜಮಾನ ಮೊದಲಿಗಿಂತಲೂ ಹೆಚ್ಚು ಆಳುಗಳನ್ನು ಕಳುಹಿಸಿದ. ಅವರಿಗೂ ಅದೇ ಗತಿ ಆಯಿತು.
37 : ಕಟ್ಟಕಡೆಗೆ ಯಜಮಾನ, ‘ನನ್ನ ಮಗನಿಗೆ ಇವರು ಮರ್ಯಾದೆ ಕೊಟ್ಟೇಕೊಡುವರು’ ಎಂದುಕೊಂಡು ತನ್ನ ಮಗನನ್ನೇ ಕಳುಹಿಸಿದ.
38 : ಆದರೆ ಗೇಣಿದಾರರು ಮಗನನ್ನು ಕಂಡೊಡನೇ, ‘ಈ ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ, ಇವನನ್ನು ಮುಗಿಸಿಬಿಡೋಣ. ಇವನಿಗೆ ಬರುವ ಸೊತ್ತನ್ನು ನಮ್ಮದಾಗಿಸಿಕೊಳ್ಳೋಣ,’ ಎಂದು ತಮ್ಮತಮ್ಮಲ್ಲೇ ಒಳಸಂಚು ಮಾಡಿಕೊಂಡರು.
39 : ಅಂತೆಯೇ ಅವನನ್ನು ಹಿಡಿದು, ತೋಟದಿಂದ ಹೊರಕ್ಕೆ ದಬ್ಬಿಕೊಂಡು ಹೋಗಿ, ಕೊಂದುಹಾಕಿದರು.
40 : “ಈಗ ನೀವೇ ಹೇಳಿ: ತೋಟದ ಯಜಮಾನ ಬಂದಾಗ ಆ ಗೇಣಿದಾರರರಿಗೆ ಏನು ಮಾಡುವನು?” ಎಂದು ಯೇಸು ಕೇಳಿದರು.
41 : “ಆ ಕೇಡಿಗರನ್ನು ಕ್ರೂರವಾಗಿ ಸಂಹರಿಸುವನು. ತರುವಾಯ ಕಾಲಕಾಲಕ್ಕೆ ಸರಿಯಾಗಿ ಪಾಲನ್ನು ಸಲ್ಲಿಸುವ ಬೇರೆಯವರಿಗೆ ತೋಟವನ್ನು ಗೇಣಿಗೆ ಕೊಡುವನು,” ಎಂದು ಅಲ್ಲಿದ್ದವರು ಉತ್ತರಕೊಟ್ಟರು.
42 : ಬಳಿಕ ಯೇಸು ಇಂತೆಂದರು: “ ‘ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಆ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು! ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ!’ ಎಂಬ ವಾಕ್ಯವನ್ನು ನೀವು ಪವಿತ್ರ ಗ್ರಂಥದಲ್ಲಿ ಓದಿಲ್ಲವೆ?
43 : ಆದುದರಿಂದ ನಾನು ನಿಮಗೆ ಹೇಳುತ್ತೇನೆ, ‘ದೇವರ ಸಾಮ್ರಾಜ್ಯವನ್ನು ನಿಮ್ಮಿಂದ ಕಿತ್ತುಕೊಂಡು ತಕ್ಕ ಫಲಕೊಡುವ ಜನತೆಗೆ ನೀಡಲಾಗುವುದು.
44 : ಅಷ್ಟೇ ಅಲ್ಲದೆ, ಆ ಕಲ್ಲಿನ ಮೇಲೆ ಬೀಳುವವನು ಛಿದ್ರಛಿದ್ರನಾಗುವನು. ಯಾವನ ಮೇಲೆ ಆ ಕಲ್ಲು ಬೀಳುವುದೋ ಅವನು ಜಜ್ಜಿ ಹೋಗುವನು’.”
45 : ಮುಖ್ಯ ಯಾಜಕರೂ ಫರಿಸಾಯರೂ ಸ್ವಾಮಿ ಹೇಳಿದ ಸಾಮತಿಗಳನ್ನು ಕೇಳಿ, ‘ಇವನು ನಮ್ಮನ್ನು ಕುರಿತೇ ಹೀಗೆ ಮಾತನಾಡುತ್ತಿದ್ದಾನೆ,’ ಎಂದು ಅರ್ಥ ಮಾಡಿಕೊಂಡರು. ಯೇಸುವನ್ನು ಹಿಡಿದು ಬಂಧಿಸಲು ಯತ್ನಿಸಿದರು.
46 : ಆದರೆ ಜನಸಮೂಹಕ್ಕೆ ಭಯಪಟ್ಟರು. ಏಕೆಂದರೆ, ಜನರು ಯೇಸುವನ್ನು ಪ್ರವಾದಿ ಎಂದು ಸನ್ಮಾನಿಸುತ್ತಿದ್ದರು.
----------------------------
ಚಿಂತನೆ

ಸಾಮತಿಯಲ್ಲಿ ಯಜಮಾನನನ್ನು ದೇವರಿಗೂ, ದ್ರಾಕ್ಷಿತೋಟವನ್ನು ಇಸ್ರಾಯೇಲರಿಗೂ, ಗೇಣಿದಾರರನ್ನು ಇಸ್ರಾಯೇಲಿನ ನಾಯಕರಿಗೆ, ಧರ್ಮಶಾಸ್ತ್ರಿಗಳಿಗೆ, ಯಾಜಕರಿಗೆ ಹೋಲಿಸಲಾಗಿದೆ. ಒಬ್ಬ ತೋಟದ ಯಜಮಾನ ತನ್ನ ತೋಟವನ್ನು ಸುರಕ್ಷಿತವಾಗಿ ನೋಡಿಕೊಳ್ಳವಂತೆ ದೇವರು ಸಹ ಇಸ್ರಾಯೇಲರನ್ನು ಸುರಕ್ಷಿತವಾಗಿರಿಸಿಟ್ಟರು (ಯೆಶಾಯ 5:1-7). ಹಾಗೂ ಅವರಿಂದ ಉತ್ತಮ ಫಲದ ನಿರೀಕ್ಷೆಯಲ್ಲಿದ್ದರು. ಆದರೆ ಇಸ್ರೆಯೇಲರು ದೇವರ ಪ್ರೀತಿಯನ್ನು ಮರೆತರು ದೇವರ ಸೇವಕರನ್ನು ಹಿಂಸಿಸಿದರು. ಹಾಗಾಗಿ ದೇವರು ತಮ್ಮ ಏಕೈಕ ಪುತ್ರನನ್ನೇ ಕಳುಹಿಸಿದರು. ದೇವರು ಕಳುಹಿಸಿದ ಪುತ್ರ ನಾನೇ ಎಂದು ಯೇಸು ಈ ಸಾಮತಿಯ ಮೂಲಕ ಸ್ಪಷ್ಟ ಪಡಿಸುತ್ತಾರೆ ಹಾಗೂ ಧಾರ್ಮಿಕ ನಾಯಕರನ್ನು ಖಂಡಿಸುತ್ತಾರೆ. ದೇವರು ಸಹನೆಯಿಂದ ಕಾಯುತ್ತಿದ್ದಾರೆ, ಆ ಸಹನೆಗೂ ಮಿತಿ ಇದೆ ಎಂದು ತಿಳಿಸುತ್ತಾರೆ. ದೇವರ ಸಾಮ್ರಾಜ್ಯ ಯಹೂದ್ಯರ ಅಥವಾ ಕ್ರೈಸ್ತರ ಆಸ್ತಿಯಲ್ಲ, ಅದು ಸರ್ವರಿಗೂ ಸೇರಿದ್ದು ಎಂಬ ಅಂಶ ಎತ್ತಿ ಹಿಡಿಯುತ್ತಾರೆ.
--------------------
--------------------
ದೇವರ
ಸಾಮ್ರಾಜ್ಯವನ್ನು ನಿಮ್ಮಿಂದ ಕಿತ್ತುಕೊಂಡು ತಕ್ಕ ಫಲ ಕೊಡುವ ಜನತೆಗೆ ನೀಡಲಾಗುವುದು........
ಚಿಂತನೆ
ಇಂದಿನ ಸಾಮತಿ ಮೂರು
ಮುಖ್ಯವಾದ ಅಂಶಗಳನ್ನು ತಿಳಿಸುತ್ತದೆ. ಮೊದಲಿಗೆ, ಇದು ದೇವರ ತಾಳ್ಮೆಯನ್ನು
ಬಹಿರಂಗಪಡಿಸುತ್ತದೆ. ಹಿಂಸೆಯ ಎದುರಿನಲ್ಲಿಯೂ ದೇವರು ಗೇಣಿದಾರರಿಗೆ ಮೂರು ಅವಕಾಶಗಳನ್ನು
ನೀಡುತ್ತಾರೆ.
ಎರಡನೆಯದಾಗಿ, ಇದು
ಯೇಸುವಿನ ವಿಶಿಷ್ಟತೆಯನ್ನು ಬಹಿರಂಗಪಡಿಸುತ್ತದೆ. ಇತರ ಪ್ರವಾದಿಗಳಂತೆ ಯೇಸು ಮತ್ತೊಂದು
ಪ್ರವಾದಿಯಲ್ಲ. ಅವರು ಸಂಪೂರ್ಣವಾಗಿ ಹೊಸದನ್ನು ಪ್ರತಿನಿಧಿಸುತ್ತಾರೆ. ಅವರು ಮಾಲಿಕನ (ದೇವರ) ಸ್ವಂತ ಮಗ.
ಮೂರನೆಯದಾಗಿ, ಇದು
ನಮ್ಮ ಹೊಣೆಗಾರಿಕೆಯನ್ನು ಬಹಿರಂಗಪಡಿಸುತ್ತದೆ. ಗೇಣಿದಾರರು (ಧಾರ್ಮಿಕ ಮುಖಂಡರು) ತಮ್ಮ
ಕಾರ್ಯಗಳಿಗೆ ಜವಾಬ್ದಾರರಾಗಿರುವಂತೆ, ನಮ್ಮ ಕಾರ್ಯಗಳಿಗಾಗಿ ನಾವು ದೇವರಿಗೆ
ಜವಾಬ್ದಾರರಾಗಿರುತ್ತೇವೆ ಎಂದು ತೋರಿಸುತ್ತದೆ.
ಮಂಥನ
ಗೇಣಿದಾರರೊಂದಿಗೆ
ಮಾಡಿದಂತೆ ದೇವರು ನಮ್ಮೊಂದಿಗೆ ಯಾವ ರೀತಿಯ ತಾಳ್ಮೆಯನ್ನು ತೋರ್ಪಡಿಸಿದ್ದಾರೆ?
ತಾಳ್ಮೆಯೊಂದು ಶಕ್ತಿ;
ಸಮಯ ಮತ್ತು ತಾಳ್ಮೆಯಿದ್ದರೇ ಮಲ್ಬರಿ ಎಲೆ ರೇಷ್ಮೆ ಆಗುತ್ತದೆ - ಚೀನಾಗಾದೆ
-----------------------------
No comments:
Post a Comment