ಮಾರ್ಚ್ 20, 2020 ಶುಕ್ರವಾರ [ನೇರಳೆ]
ಮೊದಲ ವಾಚನ: ಹೊಶೇಯ 14.1-9
ಕೀರ್ತನೆ 81: 6-7, 8-10, 13,
16. ಶ್ಲೋಕ.10, 8
ಈಜಿಪ್ಟಿನಿಂದ ಕರೆತಂದ ಸ್ವಾಮಿ ದೇವನು ನಾನು,
ನನ್ನ ಜನರೇ, ಕಿವಿಗೊಡಿ ನನ್ನ ಬುದ್ಧಿಮಾತಿಗೆ
ಶುಭಸಂದೇಶ: ಮಾರ್ಕ 12.28-34
------------------
ಮೊದಲನೆಯ ವಾಚನ : ಹೊಶೇಯ 14.1-9
1 : ಇಸ್ರಯೇಲ್, ನಿನ್ನ ಸರ್ವೇಶ್ವರನಾದ ದೇವರ ಬಳಿಗೆ ಹಿಂದಿರುಗು. ನಿನ್ನ ಪಾಪದ್ರೋಹಗಳೇ ನಿನ್ನ ಪತನಕ್ಕೆ ಕಾರಣ.
2 : ಆದುದರಿಂದ ಪಶ್ಚಾತ್ತಾಪದ ಮಾತುಗಳೊಂದಿಗೆ ದೇವರಿಗೆ ಅಭಿಮುಖವಾಗಿ, “ಪ್ರಭುವೇ, ನಮ್ಮ ಅಪರಾಧವನ್ನು ತೊಡೆದುಹಾಕು. ನಮ್ಮಲ್ಲಿ ಒಳಿತಾದುದನ್ನೇ ಅಂಗೀಕರಿಸು. ನಿನಗೆ ಸ್ತುತಿಬಲಿಯನ್ನು ಸಮರ್ಪಿಸುವೆವು.
3 : ಅಸ್ಸೀರಿಯದಿಂದ ನಮಗೆ ರಕ್ಷಣೆ ದೊರಕದು. ನಾವು ಕಾಳಗದ ಕುದುರೆಗಳ ಮೇಲೆ ಇನ್ನೆಂದೂ ಸವಾರಿ ಮಾಡೆವು. ನಮ್ಮ ಕೈಗಳು ನಿರ್ಮಿಸಿರುವ ವಿಗ್ರಹಗಳನ್ನು ವೀಕ್ಷಿಸಿ, ‘ನೀವೇ ನಮ್ಮ ದೇವರು’ ಎಂದು ಜಪಿಸೆವು. ಓ ದೇವಾ, ದಿಕ್ಕಿಲ್ಲದವರಿಗೆ ಕರುಣೆತೋರಿಸುವವನು ನೀನೇ,” ಎಂದು ಹೇಳು.
4 : ಸರ್ವೇಶ್ವರ ಇಂತೆನ್ನುತ್ತಾರೆ: ಪರಿಹರಿಸುವೆನು ಜನರ ಭ್ರಷ್ಟತನವನು ಪ್ರೀತಿಸುವೆನು ಮನಪೂರ್ವಕವಾಗಿ ಅವರನು ತ್ಯಜಿಸಿಬಿಡುವೆನು ಅವರ ಮೇಲಿದ್ದ ಕೋಪವನು.
5 : ಇರುವೆನು ಇಸ್ರಯೇಲಿಗೆ ಇಬ್ಬನಿಯಂತೆ ಅರಳುವುದು ಆ ನಾಡು ತಾವರೆಯಂತೆ ಬೇರೂರುವುದು ಲೆಬನೋನಿನ ದೇವದಾರು ವೃಕ್ಷದಂತೆ.
6 : ಹರಡಿಕೊಳ್ಳುವುದದು ಮರದ ರೆಂಬೆಗಳಂತೆ ಕಂಗೊಳಿಸುವುದು ಚೆಲುವಾದ ಓಲಿವ ಮರದಂತೆ ಅದರ ಪರಿಮಳ ಮನೋಹರ ಲೆಬನೋನಿನ ಲತೆಗಳಂತೆ.
7 : ಮರಳಿ ಆಶ್ರಯಿಸುವರು ನನ್ನ ನೆರಳನ್ನು ಆ ಜನತೆ ಅಭಿವೃದ್ಧಿಯಾಗುವರು ಉದ್ಯಾನವನದಂತೆ ಫಲಪ್ರದವಾಗುವರು ಆ ಜನರು ದ್ರಾಕ್ಷಾಲತೆಯಂತೆ ಸುಪ್ರಸಿದ್ಧ ಅವರ ಕೀರ್ತಿ ಲೆಬನೋನಿನ ದ್ರಾಕ್ಷಾರಸದಂತೆ.
8 : ನುಡಿವುದು ಎಫ್ರಯಿಮ್, “ನನಗಿನ್ನು ಬೇಡ ವಿಗ್ರಹಗಳ ಗೊಡವೆ”. ಅದಕ್ಕೆ ಒಲಿದು ಕಟಾಕ್ಷಿಸುವವನು ನಾನೇ ಅದಕ್ಕೆ ಹಚ್ಚಹಸಿರಾದ ತುರಾಯಿಮರದಂತಿರುವೆ ಅದಕ್ಕೆ ಫಲವನ್ನು ನೀಡುವವನು ನಾನೇ.”
9 : ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿ ಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.
------------------------
7 : “ಸಂಕಟದಲಿ ಮೊರೆಯಿಟ್ಟಾಗ ವಿಮೋಚಿಸಿದೆ ನಿನ್ನನು / ಗುಡುಗುವ ಮೇಘದಿಂದ ಕೊಟ್ಟೆ ನಿನಗೆ ಸದುತ್ತರವನು / ಮೆರೀಬಾ ಪ್ರವಾಹಗಳ ಬಳಿ ಪರೀಕ್ಷಿಸಿದೆ ನಿನ್ನನು,//
8 : “ನನ್ನ ಜನರೇ, ಕಿವಿಗೊಡಿ ನನ್ನ ಬುದ್ಧಿಮಾತಿಗೆ / ಹಾಗೆ ಮಾಡಿದರೆ ಇಸ್ರಯೇಲರೆ, ಹಿತ ನಿಮಗೆ, //
9 : “ಇರಬಾರದು ಅನ್ಯದೇವತೆಗಳು ನಿಮ್ಮಲಿ / ಪರದೇವತೆಗಳ ಪೂಜೆ ಕೂಡದು ನಿಮ್ಮಲಿ,//
10 : “ಈಜಿಪ್ಟಿನಿಂದ ನಿಮ್ಮನು ಕರೆತಂದ ಸ್ವಾಮಿ ದೇವನು ನಾನು / ತೆರೆಯಿರಿ ನಿಮ್ಮ ಬಾಯನು, ತುಂಬಿಸಿ ತೃಪ್ತಿಪಡಿಸುವೆ ನಾನದನು //
13 : “ಒಳಿತಾಗಿರುತ್ತಿತ್ತು ನನ್ನ ಜನರು ನನಗೆ ಕಿವಿಗೊಟ್ಟಿದ್ದರೆ / ಮೇಲಾಗಿರುತ್ತಿತ್ತು ಇಸ್ರಯೇಲರು ನನ್ನ ಹಾದಿ ಹಿಡಿದಿದ್ದರೆ, //
16 : “ನಿಮಗಾದರೋ ಬಡಿಸುತ್ತಿದ್ದೆ ಅತ್ಯುತ್ತಮ ಗೋದಿಯನು / ಉಣಿಸುತ್ತಿದ್ದೆ ನಾ ನಿಮಗೆ ಬೆಟ್ಟದ ಜೇನುತುಪ್ಪವನು” //
----------------------------
ಶುಭಸಂದೇಶ: ಮಾರ್ಕ 12.28-34
28 : ಈ ತರ್ಕವನ್ನು ಕೇಳುತ್ತಿದ ಧರ್ಮಶಾಸ್ತ್ರಿ ಒಬ್ಬನು, ಯೇಸುಸ್ವಾಮಿ ಸದ್ದುಕಾಯರಿಗೆ ಸಮರ್ಪಕವಾದ ಉತ್ತರವನ್ನು ಕೊಟ್ಟಿದ್ದನ್ನು ಮೆಚ್ಚಿ, ಅವರ ಬಳಿಗೆ ಬಂದು, “ಆಜ್ಞೆಗಳಲ್ಲೆಲ್ಲಾ ಪ್ರಪ್ರಥಮ ಆಜ್ಞೆ ಯಾವುದು?” ಎಂದು ಕೇಳಿದನು.
29 : ಯೇಸು ಅವನಿಗೆ, “ಇಸ್ರಯೇಲ್ ಸಮಾಜವೇ ಕೇಳು: ನಮ್ಮ ದೇವರಾದ ಸರ್ವೇಶ್ವರ ಏಕೈಕ ಸರ್ವೇಶ್ವರ;
30 : ನಿನ್ನ ದೇವರಾದ ಸರ್ವೇಶ್ವರನನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ಪ್ರೀತಿಸು. ಇದೇ ಪ್ರಪ್ರಥಮ ಆಜ್ಞೆ.
31 : “ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು. ಇದೇ ಎರಡನೆಯ ಆಜ್ಞೆ. ಇವೆರಡು ಆಜ್ಞೆಗಳಿಗಿಂತ ಶ್ರೇಷ್ಠವಾದ ಆಜ್ಞೆ ಬೇರೊಂದೂ ಇಲ್ಲ,” ಎಂದರು.
32 : ಇದನ್ನು ಕೇಳಿದ ಆ ಧರ್ಮಶಾಸ್ತ್ರಿ, “ಬೋಧಕರೇ, ಚೆನ್ನಾಗಿ ಹೇಳಿದಿರಿ. ದೇವರು ಒಬ್ಬರೇ, ಅವರ ಹೊರತು ಬೇರೆ ದೇವರಿಲ್ಲ, ಎಂದು ನೀವು ಹೇಳಿದ್ದು ಸತ್ಯ;
33 : ಅವರನ್ನು ನಾವು ಪೂರ್ಣ ಹೃದಯದಿಂದಲೂ ಪೂರ್ಣ ಜ್ಞಾನದಿಂದಲೂ ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ನಮ್ಮನ್ನು ನಾವು ಪ್ರೀತಿಸಿಕೊಳ್ಳುವಂತೆಯೇ ನಮ್ಮ ನೆರೆಯವರನ್ನೂ ಪ್ರೀತಿಸತಕ್ಕದ್ದು. ಇವು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಯಾಗಾದಿಗಳಿಗಿಂತಲೂ ಎಷ್ಟೋ ಮೇಲಾದುವು,” ಎಂದನು.
34 : ಅವನ ವಿವೇಕಪೂರ್ಣವಾದ ಉತ್ತರವನ್ನು ಮೆಚ್ಚಿ ಯೇಸು, “ನೀನು ದೇವರ ಸಾಮ್ರಾಜ್ಯದಿಂದ ದೂರವಿಲ್ಲ,” ಎಂದರು. ಇದಾದ ಬಳಿಕ ಯೇಸುವನ್ನು ಪ್ರಶ್ನಿಸುವುದಕ್ಕೆ ಯಾರೊಬ್ಬರೂ ಧೈರ್ಯಗೊಳ್ಳಲಿಲ್ಲ.
-------------------------------

ಕೀರ್ತನೆ 81: 6-7, 8-10, 13, 16. ಶ್ಲೋಕ.10, 8
ಈಜಿಪ್ಟಿನಿಂದ ಕರೆತಂದ ಸ್ವಾಮಿ ದೇವನು ನಾನು,
ನನ್ನ ಜನರೇ, ಕಿವಿಗೊಡಿ ನನ್ನ ಬುದ್ಧಿಮಾತಿಗೆ
6 : ಅಪರಿಚಿತ ವಾಣಿಯೊಂದು ನುಡಿಯಿತೀ ಮಾತನು:/ “ತಪ್ಪಿಸಿದೆ ನಾನು ಹೆಗಲಮೇಲೆ ನೀ ಹೊರೆಹೊರುವುದನು ಬಿಡುಗಡೆ ಮಾಡಿದೆ ಗೂಡೆಯೆತ್ತುವ ಕೈಗಳನು //7 : “ಸಂಕಟದಲಿ ಮೊರೆಯಿಟ್ಟಾಗ ವಿಮೋಚಿಸಿದೆ ನಿನ್ನನು / ಗುಡುಗುವ ಮೇಘದಿಂದ ಕೊಟ್ಟೆ ನಿನಗೆ ಸದುತ್ತರವನು / ಮೆರೀಬಾ ಪ್ರವಾಹಗಳ ಬಳಿ ಪರೀಕ್ಷಿಸಿದೆ ನಿನ್ನನು,//
8 : “ನನ್ನ ಜನರೇ, ಕಿವಿಗೊಡಿ ನನ್ನ ಬುದ್ಧಿಮಾತಿಗೆ / ಹಾಗೆ ಮಾಡಿದರೆ ಇಸ್ರಯೇಲರೆ, ಹಿತ ನಿಮಗೆ, //
9 : “ಇರಬಾರದು ಅನ್ಯದೇವತೆಗಳು ನಿಮ್ಮಲಿ / ಪರದೇವತೆಗಳ ಪೂಜೆ ಕೂಡದು ನಿಮ್ಮಲಿ,//
10 : “ಈಜಿಪ್ಟಿನಿಂದ ನಿಮ್ಮನು ಕರೆತಂದ ಸ್ವಾಮಿ ದೇವನು ನಾನು / ತೆರೆಯಿರಿ ನಿಮ್ಮ ಬಾಯನು, ತುಂಬಿಸಿ ತೃಪ್ತಿಪಡಿಸುವೆ ನಾನದನು //
13 : “ಒಳಿತಾಗಿರುತ್ತಿತ್ತು ನನ್ನ ಜನರು ನನಗೆ ಕಿವಿಗೊಟ್ಟಿದ್ದರೆ / ಮೇಲಾಗಿರುತ್ತಿತ್ತು ಇಸ್ರಯೇಲರು ನನ್ನ ಹಾದಿ ಹಿಡಿದಿದ್ದರೆ, //
16 : “ನಿಮಗಾದರೋ ಬಡಿಸುತ್ತಿದ್ದೆ ಅತ್ಯುತ್ತಮ ಗೋದಿಯನು / ಉಣಿಸುತ್ತಿದ್ದೆ ನಾ ನಿಮಗೆ ಬೆಟ್ಟದ ಜೇನುತುಪ್ಪವನು” //
----------------------------
ಶುಭಸಂದೇಶ: ಮಾರ್ಕ 12.28-34
28 : ಈ ತರ್ಕವನ್ನು ಕೇಳುತ್ತಿದ ಧರ್ಮಶಾಸ್ತ್ರಿ ಒಬ್ಬನು, ಯೇಸುಸ್ವಾಮಿ ಸದ್ದುಕಾಯರಿಗೆ ಸಮರ್ಪಕವಾದ ಉತ್ತರವನ್ನು ಕೊಟ್ಟಿದ್ದನ್ನು ಮೆಚ್ಚಿ, ಅವರ ಬಳಿಗೆ ಬಂದು, “ಆಜ್ಞೆಗಳಲ್ಲೆಲ್ಲಾ ಪ್ರಪ್ರಥಮ ಆಜ್ಞೆ ಯಾವುದು?” ಎಂದು ಕೇಳಿದನು.
29 : ಯೇಸು ಅವನಿಗೆ, “ಇಸ್ರಯೇಲ್ ಸಮಾಜವೇ ಕೇಳು: ನಮ್ಮ ದೇವರಾದ ಸರ್ವೇಶ್ವರ ಏಕೈಕ ಸರ್ವೇಶ್ವರ;
30 : ನಿನ್ನ ದೇವರಾದ ಸರ್ವೇಶ್ವರನನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ಪ್ರೀತಿಸು. ಇದೇ ಪ್ರಪ್ರಥಮ ಆಜ್ಞೆ.
31 : “ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು. ಇದೇ ಎರಡನೆಯ ಆಜ್ಞೆ. ಇವೆರಡು ಆಜ್ಞೆಗಳಿಗಿಂತ ಶ್ರೇಷ್ಠವಾದ ಆಜ್ಞೆ ಬೇರೊಂದೂ ಇಲ್ಲ,” ಎಂದರು.
32 : ಇದನ್ನು ಕೇಳಿದ ಆ ಧರ್ಮಶಾಸ್ತ್ರಿ, “ಬೋಧಕರೇ, ಚೆನ್ನಾಗಿ ಹೇಳಿದಿರಿ. ದೇವರು ಒಬ್ಬರೇ, ಅವರ ಹೊರತು ಬೇರೆ ದೇವರಿಲ್ಲ, ಎಂದು ನೀವು ಹೇಳಿದ್ದು ಸತ್ಯ;
33 : ಅವರನ್ನು ನಾವು ಪೂರ್ಣ ಹೃದಯದಿಂದಲೂ ಪೂರ್ಣ ಜ್ಞಾನದಿಂದಲೂ ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ನಮ್ಮನ್ನು ನಾವು ಪ್ರೀತಿಸಿಕೊಳ್ಳುವಂತೆಯೇ ನಮ್ಮ ನೆರೆಯವರನ್ನೂ ಪ್ರೀತಿಸತಕ್ಕದ್ದು. ಇವು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಯಾಗಾದಿಗಳಿಗಿಂತಲೂ ಎಷ್ಟೋ ಮೇಲಾದುವು,” ಎಂದನು.
34 : ಅವನ ವಿವೇಕಪೂರ್ಣವಾದ ಉತ್ತರವನ್ನು ಮೆಚ್ಚಿ ಯೇಸು, “ನೀನು ದೇವರ ಸಾಮ್ರಾಜ್ಯದಿಂದ ದೂರವಿಲ್ಲ,” ಎಂದರು. ಇದಾದ ಬಳಿಕ ಯೇಸುವನ್ನು ಪ್ರಶ್ನಿಸುವುದಕ್ಕೆ ಯಾರೊಬ್ಬರೂ ಧೈರ್ಯಗೊಳ್ಳಲಿಲ್ಲ.
-------------------------------
ಚಿಂತನೆ
ಪ್ರಧಾನ ಆಜ್ಞೆ ಯಾವುದು ? ಎಂಬ ಪ್ರಶ್ನೆಯನ್ನು ಧರ್ಮಶಾಸ್ತ್ರಿಯೊಬ್ಬ ಯೇಸುವಿನ ಮುಂದಿಟ್ಟನು, ಯೇಸು ಸರ್ವೇಶ್ವರ ದೇವರನ್ನು ಪೂರ್ಣ ಹೃದಯದಿಂದಲೂ,ಆತ್ಮದಿಂದಲೂ ಪ್ರೀತಿಸು,ಅಂತೆಯೇ ನಿನ್ನಂತೆಯೇ ಪರರನ್ನೂ ಪ್ರೀತಿಸು ಎಂಬುದಾಗಿ ಹೇಳುತ್ತಾರೆ. ಸಾಮನ್ಯವಾಗಿ ದೇವರಲ್ಲಿ ಭಕ್ತಿ,ಗೌರವಗಳು ಸಮವಾಗಿರುವುದು ಸಹಜ. ಆದರೇ ಅದೆಷ್ಟು ಬಾರಿ ನಾವು ನಮ್ಮಂತೆಯೇ ನಮ್ಮ ಪರರನ್ನೂ ಪ್ರೀತಿಸಿದ್ದೇವೆ? ಅವರೂ ಸೃಷ್ಟಿಕರ್ತನ ಸೃಷ್ಟಿಗಳಲ್ಲವೇ ? ಅದಕ್ಕಾಗಿಯೇ ಕ್ರಿಸ್ತ ಇಂದಿನ ಶುಭಸಂದೇಶದಲ್ಲಿ ನಮ್ಮ ನೆರೆಹೊರೆಯವರನ್ನೂ ಪ್ರೀತಿಸುವ ಆಜ್ಞೆಗೆ ವಿಶೇಷ ಒತ್ತು ನೀಡಿದ್ದಾರೆ. ತಪಸ್ಸು ಕಾಲವು ನಮ್ಮಂತೆಯೇ ಪರರನ್ನು ಪ್ರೀತಿಸುವಂತೆ ಮಾಡುವ ಸಕಾಲವಾಗಲೆಂದು ಪ್ರಾರ್ಥಿಸೋಣ.
-----------------
``ಆಜ್ಞೆಗಳಲ್ಲಿ ಪ್ರಧಾನ ಆಜ್ಞೆ ಯಾವುದು?’’ ಎಂಬುದು ಧರ್ಮಶಾಸ್ತ್ರೀಯ ಪ್ರಶ್ನೆ. ಯೇಸು ಅವನಿಗೆ ಧರ್ಮೋಪದೇಶ ಕಾಂಡ 6:4-9ರ ವಾಕ್ಯಗಳನ್ನು ನೆನಪಿಸುತ್ತಾರೆ. ಈ ವಾಕ್ಯಗಳು ಪ್ರತಿಯೊಬ್ಬ ಯೆಹೂದ್ಯನ ಹೃದಯದಲ್ಲಿ ಆಳವಾಗಿ ಬೇರೂರಿತ್ತು. ಈ ವಾಕ್ಯಗಳನ್ನು ತಮ್ಮ ಮಕ್ಕಳಿಗೆ ಬೋಧಿಸುತ್ತಿದ್ದರು. ಜ್ಞಾಪಕಾರ್ಥವಾಗಿ ಅವುಗಳನ್ನು ತಮ್ಮ ಕೈಗೂ, ಹಣೆಗೂ ಕಟ್ಟಿಕೊಳ್ಳುತ್ತಿದ್ದರು. ಮನೆಬಾಗಿಲಿನ ನಿಲುವು ಪಟ್ಟಿಗಳಲ್ಲೂ ತಲೆಬಾಗಿಲಿನ ಮೇಲೂ ಬರೆಯುತ್ತಿದ್ದರು. ಪ್ರತಿದಿನ ಎರಡೂ ಬಾರಿ ಈ ಪ್ರಾರ್ಥನೆ ಹೇಳುತ್ತಿದ್ದರು. ಯೇಸು ನೀಡುವ ಎರಡನೆ ಆಜ್ಞೆ, ``ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು’’. ಇಲ್ಲಿ ಯೇಸು ಯಾಜಕಕಾಂಡ 19:18ನ್ನು ಉಲ್ಲೇಖಿಸುತ್ತಾರೆ. ಈ ಎರಡು ಆಜ್ಞೆಗಳ ಮೇಲೆ ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ವಚನಗಳು ನಿಂತಿವೆ ಎಂದು ಯೇಸು ತಿಳಿಸುತ್ತಾರೆ. ದೇವರೊಂದಿಗಿನ ಮತ್ತು ಸಹೋದರ ಸಹೋದರಿಯರೊಡನೆ ನಮ್ಮ ಸಂಬಂಧ ಅನ್ಯೋನ್ಯತೆಯಿಂದ ಕೂಡಿರಬೇಕು.
----------------------
© 'ದನಿ' ಮಾಧ್ಯಮ ಮನೆ

No comments:
Post a Comment