ಏಪ್ರಿಲ್ 2,
2020 ಗುರುವಾರ [ನೇರಳೆ]
ಪವೋಲಾದ ಸಂತ ಫ್ರಾನ್ಸಿಸ್ [ವನಪ್ರಸ್ಥ] (ಐಚ್ಛಿಕ ಸ್ಮರಣೆ)
ಮೊದಲ ವಾಚನ: ಆದಿ 17.3-9
ಕೀರ್ತನೆ 105:4, 6, 5, 7, 8-9 ಶ್ಲೋಕ.8
ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನು
ಶುಭಸಂದೇಶ: ಯೊವಾನ್ನ 8.51-59
ಮೊದಲ ವಾಚನ: ಆದಿ
17.3-9
3 : ಅಬ್ರಾಮನು ಅಡ್ಡಬಿದ್ದು ಸಾಷ್ಟಾಂಗ ಪ್ರಣಾಮ ಮಾಡಿದನು.
4 : ದೇವರು ಅವನಿಗೆ, “ನಾನು ನಿನಗೆ ವಾಗ್ದಾನ ಮಾಡಿ ಹೇಳುತ್ತೇನೆ: ನೀನು ಅನೇಕ ರಾಷ್ಟ್ರಗಳಿಗೆ ಮೂಲ ಪುರುಷನಾಗುವೆ.
5 : ಇನ್ನು ಮುಂದೆ ನಿನಗೆ ‘ಅಬ್ರಾಮ’ ಎಂಬ ಹೆಸರಿರುವುದಿಲ್ಲ. ನಿನ್ನನ್ನು ನಾನು ಅನೇಕಾನೇಕ ರಾಷ್ಟ್ರಗಳಿಗೆ ಮೂಲಪುರುಷನನ್ನಾಗಿ ನೇಮಿಸುವುದರಿಂದ ನಿನಗೆ ‘ಅಬ್ರಹಾಮ’ ಎಂಬ ಹೆಸರಿರುವುದು.
6 : ನಿನ್ನನ್ನು ಅತ್ಯಂತ ಫಲದಾಯಕ ಪುರುಷನನ್ನಾಗಿ ಮಾಡುತ್ತೇನೆ. ನಿನ್ನಿಂದ ರಾಷ್ಟ್ರಗಳೂ ರಾಜರುಗಳೂ ಉತ್ಪತ್ತಿಯಾಗುವರು.
7 : ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ತೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ.
8 : ನೀನು ಪ್ರವಾಸವಾಗಿರುವ ಈ ಕಾನಾನ್ ನಾಡೆಲ್ಲವನ್ನು ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾದ ಸೊತ್ತಾಗಿ ಕೊಡುತ್ತೇನೆ. ನಾನು ನಿಮ್ಮ ಕುಲದೇವರಾಗಿರುತ್ತೇನೆ.”
8 : “ಇಷ್ಮಾಯೇಲನು ಇದ್ದಾನಲ್ಲವೆ? ನಿಮ್ಮ ಸಮ್ಮುಖದಲ್ಲಿ ಅವನು ಬಾಳಿದರೆ ಸಾಕಲ್ಲವೆ?” ಎಂದನು.
9 : ಇದಲ್ಲದೆ ದೇವರು ಅಬ್ರಹಾಮನಿಗೆ ಹೀಗೆಂದು ಹೇಳಿದರು: “ನೀನು ಕೂಡ ನನ್ನ ಒಡಂಬಡಿಕೆಯನ್ನು ಕೈಗೊಂಡು ನಡೆಯಬೇಕು. ನೀನು ಮಾತ್ರವಲ್ಲ, ನಿನ್ನ ಸಂತತಿಯವರು ತಲತಲಾಂತರಕ್ಕೂ ಅದನ್ನು ಕೈಗೊಂಡು ನಡೆಯಬೇಕು.
ಕೀರ್ತನೆ 105:4,
6, 5, 7, 8-9 ಶ್ಲೋಕ.8
ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನು
4 : ಅರಸಿರಿ ಪ್ರಭುವನೂ ಆತನ ಶಕ್ತಿಯನೂ / ಅಪೇಕ್ಷಿಸಿ ನಿತ್ಯವೂ ಆತನ ದರ್ಶನವನು //
4 : ಅರಸಿರಿ ಪ್ರಭುವನೂ ಆತನ ಶಕ್ತಿಯನೂ / ಅಪೇಕ್ಷಿಸಿ ನಿತ್ಯವೂ ಆತನ ದರ್ಶನವನು //
5 : ಆತನ ದಾಸ ಅಬ್ರಹಾಮನ ಸಂತತಿಯವರೇ / ಆತನಾರಿಸಿಕೊಂಡ ಯಕೋಬನ ವಂಶದವರೇ /
6 : ನೆನೆಯಿರಿ ಆತನದ್ಭುತಗಳನು, ಮಹತ್ಕಾರ್ಯಗಳನು / ಆತನ ವದನ ವಿಧಿಸಿದಾ ನ್ಯಾಯನಿರ್ಣಯಗಳನು //
7 : ಪ್ರಭು ನಮ್ಮ ದೇವನೆಂಬುದು ಶ್ರುತ / ಆತನಿತ್ತ ತೀರ್ಪು ಇದೋ ವಿಶ್ವವ್ಯಾಪ್ತ //
8 : ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನು / ಸಾವಿರಾರು ತಲೆಗಳವರೆಗೂ ತನ್ನೊಪ್ಪಂದವನು //
9 : ಅಬ್ರಹಾಮನೊಡನೆ ಮಾಡಿಕೊಂಡ ಒಡಂಬಡಿಕೆಯನು / ಇಸಾಕನಿಗೆ ಆಣೆಯಿಟ್ಟು ಆತ ಹೇಳಿದುದನು //
ಶುಭಸಂದೇಶ: ಯೊವಾನ್ನ 8.51-59
51 : ನನ್ನ ಮಾತಿಗೆ ಶರಣಾಗಿ ನಡೆಯುವವನು ನಿತ್ಯಮರಣಕ್ಕೆ ತುತ್ತಾಗನು, ಎಂದು ಸತ್ಯವಾಗಿ ನಿಮಗೆ ಹೇಳುತ್ತೇನೆ,” ಎಂದರು.
52 : “ನೀನು ದೆವ್ವಹಿಡಿದವನೆಂದು ಈಗ ನಮಗೆ ಸ್ಪಷ್ಟವಾಯಿತು. ಅಬ್ರಹಾಮನು ಸತ್ತುಹೋದನು; ಪ್ರವಾದಿಗಳೂ ಸತ್ತುಹೋದರು. ಆದರೂ ನೀನು, ‘ನನ್ನ ಮಾತಿಗೆ ಶರಣಾಗಿ ನಡೆಯುವವನು ಎಂದೆಂದಿಗೂ ಸಾವಿಗೆ ತುತ್ತಾಗನು,’ ಎಂದು ಹೇಳುತ್ತಿರುವೆ;
53 : ನಮ್ಮ ತಂದೆ ಅಬ್ರಹಾಮನಿಗಿಂತಲೂ ನೀನು ಶ್ರೇಷ್ಟನೋ? ಆತನೂ ಸಾವಿಗೀಡಾದನು, ಪ್ರವಾದಿಗಳೂ ಸಾವಿಗೆ ಈಡಾಗಿರುವರು; ನೀನು ಯಾರೆಂದು ನಿನ್ನ ಎಣಿಕೆ?” ಎಂದು ಆ ಯೆಹೂದ್ಯ ಅಧಿಕಾರಿಗಳು ಕೇಳಿದರು.
54 : ಯೇಸು ಪ್ರತ್ಯುತ್ತರವಾಗಿ, “ನನ್ನ ಘನತೆಗೌರವವನ್ನು ನಾನೇ ಸಾರಹೊರಟರೆ ಅದಕ್ಕೆ ಬೆಲೆಯಿರದು. ನನ್ನ ಘನತೆಗೌರವವನ್ನು ಸಾರುವವರಾದರೋ ನನ್ನ ಪಿತನು. ಆ ಪಿತನನ್ನು ಕುರಿತೇ ‘ಅವರು ನಮ್ಮ ದೇವರು’ ಎಂದು ನೀವು ಹೇಳಿಕೊಳ್ಳುತ್ತೀರಿ.
55 : ಆದರೆ ಅವರ ಅರಿವು ನಿಮಗಿಲ್ಲ; ನನಗಿದೆ. ಅವರ ಅರಿವು ನನಗಿಲ್ಲವೆಂದು ನಾನು ಹೇಳಿದೆಯಾದರೆ ನಿಮ್ಮಂತೆ ನಾನೂ ಸುಳ್ಳುಗಾರನಾಗುತ್ತೇನೆ. ಅವರ ಅರಿವು ನನಗಿದೆ. ಅವರ ಮಾತನ್ನು ನಾನು ಪಾಲಿಸುತ್ತೇನೆ.
56 : ನಿಮ್ಮ ತಂದೆ ಅಬ್ರಹಾಮನು ನನ್ನ ದಿನವನ್ನು ತಾನು ಕಾಣುವನೆಂದು ಹಿಗ್ಗಿದನು. ಆತನು ಅದನ್ನು ಕಂಡೂ ಆಯಿತು; ಹಿಗ್ಗಿಯೂ ಆಯಿತು,” ಎಂದು ಉತ್ತರಕೊಟ್ಟರು.
57 : ಯೆಹೂದ್ಯರು, “ನಿನಗಿನ್ನೂ ಐವತ್ತು ವರ್ಷವಾಗಿಲ್ಲ; ನೀನು ಅಬ್ರಹಾಮನನ್ನು ನೋಡಿದ್ದೀಯಾ?” ಎಂದರು.
58 : ಯೇಸು ಅವರಿಗೆ, “ಅಬ್ರಹಾಮನು ಹುಟ್ಟುವುದಕ್ಕೆ ಮೊದಲಿನಿಂದಲೂ ನಾನಿದ್ದೇನೆ,” ಎಂದು ಮರುನುಡಿದರು.
59 : ಇದನ್ನು ಕೇಳಿದ್ದೇ ಆ ಯೆಹೂದ್ಯರು ಯೇಸುವಿನತ್ತ ಬೀರಲು ಕಲ್ಲುಗಳನ್ನು ಎತ್ತಿಕೊಂಡರು. ಯೇಸುವಾದರೋ ಮರೆಯಾಗಿ ಮಹಾದೇವಾಲಯದಿಂದ ಹೊರಟು ಹೋದರು.
---------------
---------------
ಚಿಂತನೆ
ವ್ಯಕ್ತಿಯ ಒಳ್ಳೆಯತನ ಯಾವತ್ತೂ ಮತ್ತೊಬ್ಬ ವ್ಯಕ್ತಿಯ ಉತ್ಕೃಷ್ಟತೆಯನ್ನು ಕಡೆಗಾಣಿಸುವುದಿಲ್ಲ. ಏಕೆಂದರೆ ಬೆಳಕನ್ನು ಬಚ್ಚಿಡಲಾಗುವುದಿಲ್ಲ. ಉನ್ನತವಾದದ್ದು ಎಲ್ಲಿದ್ದರೂ ಉಪಾಧೇಯವೇ. ಆದರೆ ಇಂದಿನ ಶುಭಸಂದೇಶದಲ್ಲಿ ಫರಿಸಾಯರು ಅಬ್ರಹಾಮನಿಗಿಂತ ಮೊದಲಿನಿಂದಲೂ ಉರಿಯುತ್ತಿರುವ ಕ್ರಿಸ್ತ ಎಂಬ ಬೆಳಕನ್ನು ಕಡೆಗಣಿಸುತ್ತಿದ್ದಾರೆ.
ಕೆಲವೊಮ್ಮೆ ನಮ್ಮ ವೈಯಕ್ತಿಕ ಜೀವನದಲ್ಲೂ ವೃತ್ತಿ ಬದುಕಲ್ಲೂ ಇಂತಹ ಘಟನೆಗಳು ನಡೆಯುವುದಿದೆ. ಚಿಕ್ಕವರೆಂದ ಮಾತ್ರಕ್ಕೋ ಅಥವಾ ನಮಗೆ ಅಹಿತವೆನಿಸುವವರು ಎನ್ನುವುದಕ್ಕೋ ಹೇಳಿದ್ದು ಸರಿಯೆಂದು ಗೊತ್ತಿದ್ದರೂ ನಿರಾಕರಿಸುವ ಜಾಯಮಾನಕ್ಕೆ ಒಗ್ಗಿಕೊಂಡು ಬಿಟ್ಟಿರುತ್ತೇವೆ. ಸತ್ಯವನ್ನು ನಿರಾಕರಿಸಿದರೆ ದೇವರನ್ನು ನಿರಾಕರಿಸಿದಂತೆ. ಪರರ ಮಾತಿನ ಸತ್ಯತೆಯಲ್ಲೂ ದೇವರನ್ನು ಹುಡುಕುವಉದಾರಿಗಳಾಗೋಣ. ಒಳಿತು ಸತ್ಯ ಯಾರಿಂದ ಬಂದರೇನಂತೆ? ಅದು ಪ್ರಶಂಸೆಗೆ ಅರ್ಹ, ಅನುಕರಣೆಗೆ ಯೋಗ್ಯ.
--------
----------------------
© 'ದನಿ' ಮಾಧ್ಯಮ ಮನೆ

No comments:
Post a Comment