ಮಾರ್ಚ್ 17, 2020 ಮಂಗಳವಾರ [ನೇರಳೆ]
ಸಂತ ಪ್ಯಾಟ್ರಿಕ್ (ಐಚ್ಛಿಕ ಸ್ಮರಣೆ)
ಮೊದಲ ವಾಚನ: ಅಜರ್ಯ 3.2, 11-20.
ಕೀರ್ತನೆ 25:4-5, 6-7, 8-9. ಶ್ಲೋಕ.6
ನೆನೆಸಿಕೋ ಪ್ರಭೂ, ನಿನ್ನ ನಿರಂತರ ಕರುಣೆಯನು
ಶುಭಸಂದೇಶ: ಮತ್ತಾಯ 18.21-35
--------------------------
ಮೊದಲನೆಯ ವಾಚನ: ಅಜರ್ಯ 3.2, 11-20.
-------------------
ಕೀರ್ತನೆ 25:4-5, 6-7, 8-9. ಶ್ಲೋಕ.6
ನೆನೆಸಿಕೋ ಪ್ರಭೂ, ನಿನ್ನ ನಿರಂತರ ಕರುಣೆಯನು
4 : ನಿನ್ನ ಮಾರ್ಗವನು ಪ್ರಭು ನನಗೆ ತೋರಿಸು / ನೀನೊಪ್ಪುವ ಪಥದಲಿ ನಾ ನಡೆಯ ಕಲಿಸು //
5 : ಸನ್ಮಾರ್ಗದಲಿ ಮುನ್ನಡೆಸೆನ್ನ ದೇವಾ, ಮುಕ್ತಿದಾತ / ಕಲಿಸೆನಗೆ, ನಿನಗಾಗಿ ಕಾದಿರುವೆ ಸತತ //
6 : ನೆನೆಸಿಕೋ ಪ್ರಭು, ನಿನ್ನ ನಿರಂತರ ಕರುಣೆಯನು / ಆದಿಯಿಂದ ನೀ ತೋರಿದಚಲ ಪ್ರೀತಿಯನು //
7 : ಯೌವನದೆನ್ನ ಪಾಪ ಪ್ರವೃತ್ತಿಗಳ ಮನದಲ್ಲಿಟ್ಟುಕೊಳ್ಳಬೇಡ / ನಿನ್ನೊಲುಮೆ ನಲ್ಮೆಗಳ ನಿಮಿತ್ತ ಪ್ರಭು, ನನ್ನ ನೆನೆಯದಿರಬೇಡ //
8 : ತ್ಯಸ್ವರೂಪನು, ದಯಾವಂತನು ಪ್ರಭು / ದಾರಿತಪ್ಪಿದವರಿಗೆ ಬೋಧಕನು ವಿಭು //
9 : ದೀನರನು ನಡೆಸುವನು ತನ್ನ ವಿಧಿಗನುಸಾರ / ದಲಿತರಿಗೆ ಕಲಿಸುವನು ತನ್ನ ಧರ್ಮಾಚಾರ //
--------------------------
ಶುಭಸಂದೇಶ: ಮತ್ತಾಯ 18.21-35
21 : ಅನಂತರ ಪೇತ್ರನು ಯೇಸುವಿನ ಬಳಿಗೆ ಬಂದು, “ಸ್ವಾವಿೂ, ನನಗೆ ವಿರುದ್ಧ ದ್ರೋಹ ಮಾಡುತ್ತಾ ಇರುವ ನನ್ನ ಸಹೋದರನನ್ನು ಎಷ್ಟು ಸಲ ಕ್ಷಮಿಸಬೇಕು? ಏಳುಸಲವೇ?” ಎಂದು ಕೇಳಿದನು.
22 : “ಏಳುಸಲವಲ್ಲ, ಏಳೆಪ್ಪತ್ತುಸಲ ಕ್ಷಮಿಸಬೇಕು ಎಂದು ನಾನು ನಿನಗೆ ಒತ್ತಿ ಹೇಳುತ್ತೇನೆ” ಎಂದು ಯೇಸು ಉತ್ತರವಿತ್ತರು.
23 : ಯೇಸು ತಮ್ಮ ಮಾತನ್ನು ಮುಂದುವರಿಸುತ್ತಾ, “ಸ್ವರ್ಗಸಾಮ್ರಾಜ್ಯಕ್ಕೆ ಈ ಹೋಲಿಕೆ ಅನ್ವಯಿಸುತ್ತದೆ: ಒಬ್ಬ ರಾಜನಿದ್ದ. ಅವನು ತನ್ನ ಸೇವಕರಿಂದ ಲೆಕ್ಕ ಕೇಳಲು ನಿರ್ಧರಿಸಿದ.
24 : ಲೆಕ್ಕ ತೆಗೆದುಕೊಳ್ಳಲು ಆರಂಭಿಸಿದಾಗ ಹತ್ತು ಸಾವಿರ ‘ಚಿನ್ನದ ನಾಣ್ಯ’ಗಳನ್ನು ಸಾಲವಾಗಿ ತೆರಬೇಕಾಗಿದ್ದ ಒಬ್ಬನನ್ನು ಅವನ ಸಮ್ಮುಖಕ್ಕೆ ಕರೆತರಲಾಯಿತು.
25 : ಆದರೆ ಸಾಲ ತೀರಿಸಲು ಅವನ ಕೈಯಲ್ಲಿ ಹಣವಿರಲಿಲ್ಲ. ಆದುದರಿಂದ ಅವನಿಗಿದ್ದುದೆಲ್ಲವನ್ನು ಮಾತ್ರವಲ್ಲ, ಅವನನ್ನೂ ಅವನ ಮಡದಿ ಮಕ್ಕಳನ್ನೂ ಗುಲಾಮಗಿರಿಗೆ ಮಾರಿ, ಸಾಲ ತೀರಿಸುವಂತೆ ರಾಜ ಆಜ್ಞಾಪಿಸಿದ.
26 : ಆಗ ಆ ಸೇವಕ ರಾಜನ ಕಾಲಿಗೆ ಬಿದ್ದು ಬೇಡಿಕೊಂಡ: ‘ಸ್ವಲ್ಪ ಸೈರಿಸಿಕೊಳ್ಳಿ ಸ್ವಾವಿೂ, ನಿಮ್ಮ ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,’ ಎಂದು ಅಂಗಲಾಚಿದ.
27 : ರಾಜನಿಗೆ ಕನಿಕರ ಉಂಟಾಯಿತು. ಆ ಸೇವಕನನ್ನು ಬಿಡುಗಡೆಮಾಡಿ ಅವನ ಸಾಲವನ್ನು ಮನ್ನಿಸಿ ಬಿಟ್ಟ.
28 : “ಆದರೆ ಅದೇ ಸೇವಕ ಹೊರಗೆ ಬಂದದ್ದೇ ತನಗೆ ಕೇವಲ ನೂರು ‘ಬೆಳ್ಳಿಕಾಸು’ ಸಾಲ ತೆರಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಎದುರುಗೊಂಡ.
29 : ಅವನನ್ನು ಹಿಡಿದು, ‘ನನಗೆ ಕೊಡಬೇಕಾದ ಸಾಲವನ್ನು ಈಗಲೇ ಕೊಟ್ಟು ತೀರಿಸು,’ ಎಂದು ಕುತ್ತಿಗೆ ಹಿಸುಕಿದ. ಆಗ ಆ ಜೊತೆಗಾರ, ‘ಸ್ವಲ್ಪ ಸೈರಿಸಿಕೊ, ಕೊಟ್ಟುಬಿಡುತ್ತೇನೆ,’ ಎಂದು ಕಾಲಿಗೆ ಬಿದ್ದು ಕೇಳಿಕೊಂಡ.
30 : ಆದರೂ ಅವನು ಒಪ್ಪಲಿಲ್ಲ. ಅಷ್ಟುಮಾತ್ರವಲ್ಲ, ಸಾಲ ತೀರಿಸುವ ತನಕ ಆ ಜೊತೆಗಾರನನ್ನು ಸೆರೆಗೆ ಹಾಕಿಸಿದ.
31 : ಇದೆಲ್ಲವನ್ನು ಕಂಡ ಇತರ ಸೇವಕರು ಬಹಳವಾಗಿ ನೊಂದುಕೊಂಡರು. ರಾಜನ ಬಳಿಗೆ ಹೋಗಿ ನಡೆದುದೆಲ್ಲವನ್ನೂ ವರದಿಮಾಡಿದರು.
32 : ರಾಜನು ಅವನನ್ನು ಕರೆಯಿಸಿ, ‘ಎಲೋ ನೀಚ, ನೀನು ಬೇಡಿಕೊಂಡಿದ್ದರಿಂದ ಪೂರ್ತಿ ಸಾಲವನ್ನು ನಾನು ಮನ್ನಾಮಾಡಿದೆ.
33 : ನಾನು ನಿನಗೆ ದಯೆ ತೋರಿಸಿದಂತೆ ನೀನೂ ನಿನ್ನ ಜೊತೆಗಾರನಿಗೆ ದಯೆ ತೋರಿಸಬೇಕಿತ್ತು ಅಲ್ಲವೇ?’ ಎಂದು ಸಿಟ್ಟುಗೊಂಡ.
34 : ಬಳಿಕ ತನಗೆ ಬರಬೇಕಾಗಿದ್ದ ಸಾಲವನ್ನು ತೀರಿಸುವವರೆಗೂ ಅವನನ್ನು ಕಠಿಣ ಶಿಕ್ಷೆಗೆ ಗುರಿಪಡಿಸಿದ.
35 : “ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸೋದರನನ್ನು ಮನಃಪೂರ್ವಕವಾಗಿ ಕ್ಷಮಿಸಬೇಕು. ಇಲ್ಲದಿದ್ದರೆ ಸ್ವರ್ಗದಲ್ಲಿರುವ ನನ್ನ ತಂದೆ ನಿಮಗೆ ಇದರಂತೆಯೇ ಮಾಡುವರು,” ಎಂದರು.
----------------------------------
--------------------------
ಮೊದಲನೆಯ ವಾಚನ: ಅಜರ್ಯ 3.2, 11-20.
ಅಜರ್ಯನು ಬೆಂಕಿಯ ನಡುವೆ ನಿಂತುಕೊಂಡು
ಗಟ್ಟಿಯಾಗಿ ಕೂಗಿ ಹೀಗೆಂದು ಪ್ರಾರ್ಥನೆ ಮಾಡಿದ; ಪ್ರಭೂದೇವಾ, ನಿಮ್ಮ ನಾಮದ ಪ್ರಯುಕ್ತ ನಮ್ಮನ್ನು
ಎಂದೆಂದಿಗೂ ತ್ಯಜಿಸಬೇಡಿ, ನಿಮ್ಮ ಒಡಂಬಡಿಕೆಯನ್ನು ರದ್ದುಗೊಳಿಸಬೇಡಿ. ನಿಮ್ಮ ಮಿತ್ರ ಅಬ್ರಹಾಮನ ನಿಮಿತ್ತ
ನಿಮ್ಮ ದಾಸ ಇಸಾಕನ, ನಿಮ್ಮ ಭಕ್ತ ಯಕೋಬನ ಪ್ರಯುಕ್ತ ನಿಮ್ಮ ಕೃಪೆ ನಮ್ಮನ್ನು ಬಿಟ್ಟಗಲದಿರಲಿ. ಇವರಿಗೆ,
“ನಿಮ್ಮ ಸಂತಾನವನ್ನು ಆಕಾಶದ ನಕ್ಷತ್ರಗಳಂತೆ ಸಮುದ್ರ ತೀರದ ಮರಳಿನಂತೆ ಸಂಖ್ಯವಾಗಿಸುವೆ” ಎಂದು ನೀವು
ವಾಗ್ದಾನ ಮಾಡಿದಿರಲ್ಲವೇ? ಒಡೆಯಾ, ಉಳಿದ ರಾಷ್ಟ್ರಗಳಿಗಿಂತ ನಾವು ಕನಿಷ್ಟರಾಗಿಬಿಟ್ಟೆವು, ನಮ್ಮ ಪಾಪಗಳ
ಕಾರಣ ಜಗದಲ್ಲಿನ ಹೀನಸ್ಥಿತಿಗೆ ಇಳಿದುಬಿಟ್ಟೆವು. ನಮಗೀಗ ರಾಜರಿಲ್ಲ, ಪ್ರವಾದಿಗಳಿಲ್ಲ, ನಾಯಕರಿಲ್ಲ;
ಹೋಮವಿಲ್ಲ, ಬಲಿದಾನವಿಲ್ಲ, ನೈವೇದ್ಯವಿಲ್ಲ, ಧೂಪವಿಲ್ಲ, ಕಾಣಿಕೆಯನ್ನರ್ಪಿಸಿ ನಿಮ್ಮ ಕೃಪೆ ಪಡೆಯಲು
ಸ್ಥಳವೂ ಇಲ್ಲ; ಆದರೂ ಪಶ್ಚಾತ್ತಾಪದ ಹೃದಯ, ದೀನ ಮನ ನಿಮಗೆ ಅಂಗೀಕೃತವಾಗಲಿ. ಹೋತಹೋರಿಗಳ, ಸಾವಿರಾರು
ಕೊಬ್ಬಿದ ಕುರಿಮರಿಗಳ ದಹನಬಲಿದಾನದಂತೆ ನಮ್ಮ ಅಂತರಂಗದ ಬಲಿ ನಿಮಗಿಂದು ಅಂಗೀಕೃತವಾಗಲಿ, ಪೂರ್ಣ ಹೃದಯದಿಂದ
ನಾವು ನಿಮ್ಮನ್ನು ಹಿಂಬಾಲಿಸುವಂತೆ ಅನುಗ್ರಹಿಸಿರಿ. ಏಕೆಂದರೆ ನಿಮ್ಮಲ್ಲಿ ನಂಬಿಕೆಯಿಡುವವರಿಗೆ ಆಶಾಭಂಗವಾಗುವುದಿಲ್ಲ.
ಪೂರ್ಣ ಹೃದಯದಿಂದ ನಿಮ್ಮನ್ನೀಗ ಹಿಂಬಾಲಿಸುತ್ತೇವೆ ನಿಮ್ಮಲ್ಲಿ ಭಯಭಕ್ತಿಯಿಡುತ್ತೇವೆ, ನಿಮ್ಮ ಸನ್ನಿಧಿಯನ್ನು
ಮತ್ತೆ ಅರಸುತ್ತೇವೆ. ನಮ್ಮನ್ನು ನಿರಾಶೆಗೊಳಿಸಬೇಡಿ ನಿಮ್ಮ ಸೈರಣೆಗೆ ತಕ್ಕಂತೆ , ನಿಮ್ಮ ಕೃಪಾತಿಶಯದ
ಪ್ರಕಾರ ನಮ್ಮ ಸಂಗಡ ವರ್ತಿಸಿ, ಸರ್ವೇಶ್ವರಾ, ನಿಮ್ಮ ಮಹತ್ಕಾರ್ಯಗಳ ಮೂಲಕ ನಮ್ಮನ್ನು ಬಿಡುಗಡೆಮಾಡಿ
ನಿಮ್ಮ ಹೆಸರಿಗೆ ಹೊಸ ಕೀರ್ತಿ ಬರುವಂತೆ ಮಾಡಿ.
ಕೀರ್ತನೆ 25:4-5, 6-7, 8-9. ಶ್ಲೋಕ.6
ನೆನೆಸಿಕೋ ಪ್ರಭೂ, ನಿನ್ನ ನಿರಂತರ ಕರುಣೆಯನು
4 : ನಿನ್ನ ಮಾರ್ಗವನು ಪ್ರಭು ನನಗೆ ತೋರಿಸು / ನೀನೊಪ್ಪುವ ಪಥದಲಿ ನಾ ನಡೆಯ ಕಲಿಸು //
5 : ಸನ್ಮಾರ್ಗದಲಿ ಮುನ್ನಡೆಸೆನ್ನ ದೇವಾ, ಮುಕ್ತಿದಾತ / ಕಲಿಸೆನಗೆ, ನಿನಗಾಗಿ ಕಾದಿರುವೆ ಸತತ //
6 : ನೆನೆಸಿಕೋ ಪ್ರಭು, ನಿನ್ನ ನಿರಂತರ ಕರುಣೆಯನು / ಆದಿಯಿಂದ ನೀ ತೋರಿದಚಲ ಪ್ರೀತಿಯನು //
7 : ಯೌವನದೆನ್ನ ಪಾಪ ಪ್ರವೃತ್ತಿಗಳ ಮನದಲ್ಲಿಟ್ಟುಕೊಳ್ಳಬೇಡ / ನಿನ್ನೊಲುಮೆ ನಲ್ಮೆಗಳ ನಿಮಿತ್ತ ಪ್ರಭು, ನನ್ನ ನೆನೆಯದಿರಬೇಡ //
8 : ತ್ಯಸ್ವರೂಪನು, ದಯಾವಂತನು ಪ್ರಭು / ದಾರಿತಪ್ಪಿದವರಿಗೆ ಬೋಧಕನು ವಿಭು //
9 : ದೀನರನು ನಡೆಸುವನು ತನ್ನ ವಿಧಿಗನುಸಾರ / ದಲಿತರಿಗೆ ಕಲಿಸುವನು ತನ್ನ ಧರ್ಮಾಚಾರ //
--------------------------
ಶುಭಸಂದೇಶ: ಮತ್ತಾಯ 18.21-35
21 : ಅನಂತರ ಪೇತ್ರನು ಯೇಸುವಿನ ಬಳಿಗೆ ಬಂದು, “ಸ್ವಾವಿೂ, ನನಗೆ ವಿರುದ್ಧ ದ್ರೋಹ ಮಾಡುತ್ತಾ ಇರುವ ನನ್ನ ಸಹೋದರನನ್ನು ಎಷ್ಟು ಸಲ ಕ್ಷಮಿಸಬೇಕು? ಏಳುಸಲವೇ?” ಎಂದು ಕೇಳಿದನು.
22 : “ಏಳುಸಲವಲ್ಲ, ಏಳೆಪ್ಪತ್ತುಸಲ ಕ್ಷಮಿಸಬೇಕು ಎಂದು ನಾನು ನಿನಗೆ ಒತ್ತಿ ಹೇಳುತ್ತೇನೆ” ಎಂದು ಯೇಸು ಉತ್ತರವಿತ್ತರು.
23 : ಯೇಸು ತಮ್ಮ ಮಾತನ್ನು ಮುಂದುವರಿಸುತ್ತಾ, “ಸ್ವರ್ಗಸಾಮ್ರಾಜ್ಯಕ್ಕೆ ಈ ಹೋಲಿಕೆ ಅನ್ವಯಿಸುತ್ತದೆ: ಒಬ್ಬ ರಾಜನಿದ್ದ. ಅವನು ತನ್ನ ಸೇವಕರಿಂದ ಲೆಕ್ಕ ಕೇಳಲು ನಿರ್ಧರಿಸಿದ.
24 : ಲೆಕ್ಕ ತೆಗೆದುಕೊಳ್ಳಲು ಆರಂಭಿಸಿದಾಗ ಹತ್ತು ಸಾವಿರ ‘ಚಿನ್ನದ ನಾಣ್ಯ’ಗಳನ್ನು ಸಾಲವಾಗಿ ತೆರಬೇಕಾಗಿದ್ದ ಒಬ್ಬನನ್ನು ಅವನ ಸಮ್ಮುಖಕ್ಕೆ ಕರೆತರಲಾಯಿತು.
25 : ಆದರೆ ಸಾಲ ತೀರಿಸಲು ಅವನ ಕೈಯಲ್ಲಿ ಹಣವಿರಲಿಲ್ಲ. ಆದುದರಿಂದ ಅವನಿಗಿದ್ದುದೆಲ್ಲವನ್ನು ಮಾತ್ರವಲ್ಲ, ಅವನನ್ನೂ ಅವನ ಮಡದಿ ಮಕ್ಕಳನ್ನೂ ಗುಲಾಮಗಿರಿಗೆ ಮಾರಿ, ಸಾಲ ತೀರಿಸುವಂತೆ ರಾಜ ಆಜ್ಞಾಪಿಸಿದ.
26 : ಆಗ ಆ ಸೇವಕ ರಾಜನ ಕಾಲಿಗೆ ಬಿದ್ದು ಬೇಡಿಕೊಂಡ: ‘ಸ್ವಲ್ಪ ಸೈರಿಸಿಕೊಳ್ಳಿ ಸ್ವಾವಿೂ, ನಿಮ್ಮ ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,’ ಎಂದು ಅಂಗಲಾಚಿದ.
27 : ರಾಜನಿಗೆ ಕನಿಕರ ಉಂಟಾಯಿತು. ಆ ಸೇವಕನನ್ನು ಬಿಡುಗಡೆಮಾಡಿ ಅವನ ಸಾಲವನ್ನು ಮನ್ನಿಸಿ ಬಿಟ್ಟ.
28 : “ಆದರೆ ಅದೇ ಸೇವಕ ಹೊರಗೆ ಬಂದದ್ದೇ ತನಗೆ ಕೇವಲ ನೂರು ‘ಬೆಳ್ಳಿಕಾಸು’ ಸಾಲ ತೆರಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಎದುರುಗೊಂಡ.
29 : ಅವನನ್ನು ಹಿಡಿದು, ‘ನನಗೆ ಕೊಡಬೇಕಾದ ಸಾಲವನ್ನು ಈಗಲೇ ಕೊಟ್ಟು ತೀರಿಸು,’ ಎಂದು ಕುತ್ತಿಗೆ ಹಿಸುಕಿದ. ಆಗ ಆ ಜೊತೆಗಾರ, ‘ಸ್ವಲ್ಪ ಸೈರಿಸಿಕೊ, ಕೊಟ್ಟುಬಿಡುತ್ತೇನೆ,’ ಎಂದು ಕಾಲಿಗೆ ಬಿದ್ದು ಕೇಳಿಕೊಂಡ.
30 : ಆದರೂ ಅವನು ಒಪ್ಪಲಿಲ್ಲ. ಅಷ್ಟುಮಾತ್ರವಲ್ಲ, ಸಾಲ ತೀರಿಸುವ ತನಕ ಆ ಜೊತೆಗಾರನನ್ನು ಸೆರೆಗೆ ಹಾಕಿಸಿದ.
31 : ಇದೆಲ್ಲವನ್ನು ಕಂಡ ಇತರ ಸೇವಕರು ಬಹಳವಾಗಿ ನೊಂದುಕೊಂಡರು. ರಾಜನ ಬಳಿಗೆ ಹೋಗಿ ನಡೆದುದೆಲ್ಲವನ್ನೂ ವರದಿಮಾಡಿದರು.
32 : ರಾಜನು ಅವನನ್ನು ಕರೆಯಿಸಿ, ‘ಎಲೋ ನೀಚ, ನೀನು ಬೇಡಿಕೊಂಡಿದ್ದರಿಂದ ಪೂರ್ತಿ ಸಾಲವನ್ನು ನಾನು ಮನ್ನಾಮಾಡಿದೆ.
33 : ನಾನು ನಿನಗೆ ದಯೆ ತೋರಿಸಿದಂತೆ ನೀನೂ ನಿನ್ನ ಜೊತೆಗಾರನಿಗೆ ದಯೆ ತೋರಿಸಬೇಕಿತ್ತು ಅಲ್ಲವೇ?’ ಎಂದು ಸಿಟ್ಟುಗೊಂಡ.
34 : ಬಳಿಕ ತನಗೆ ಬರಬೇಕಾಗಿದ್ದ ಸಾಲವನ್ನು ತೀರಿಸುವವರೆಗೂ ಅವನನ್ನು ಕಠಿಣ ಶಿಕ್ಷೆಗೆ ಗುರಿಪಡಿಸಿದ.
35 : “ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸೋದರನನ್ನು ಮನಃಪೂರ್ವಕವಾಗಿ ಕ್ಷಮಿಸಬೇಕು. ಇಲ್ಲದಿದ್ದರೆ ಸ್ವರ್ಗದಲ್ಲಿರುವ ನನ್ನ ತಂದೆ ನಿಮಗೆ ಇದರಂತೆಯೇ ಮಾಡುವರು,” ಎಂದರು.
----------------------------------
ಚಿಂತನೆ
ಇಂದಿನ ವಾಚನದಲ್ಲಿ ಅಜರ್ಯ ಬೆoಕಿಯೊಳಗೆ ನಿoತು ದೇವರಿಗೆ ಮೊರೆಯಿಡುತ್ತಾನೆ. ಇತ್ತ ಶುಭಸಂದೇಶದಲ್ಲಿ ಪೇತ್ರ ಪ್ರಭುವಿಗೆ ' ನಾನೆಷ್ಟು ಬಾರಿ ನನ್ನ ಸಹೋದರನನ್ನು ಕ್ಷಮಿಸಲಿ; ಏಳು ಸಲವೇ ?' ಎಂದಾಗ ಕ್ರಿಸ್ತ ಸೂಚ್ಯವಾಗಿ ಏಳೆಪ್ಪತ್ತು ಸಲ ಎಂದು ನುಡಿಯುತ್ತಾರೆ. ಇದರ ಒಳ ಅರ್ಥ ಕ್ಷಮಿಸುವುದಕ್ಕೆ ನಿರ್ದಿಷ್ಟವಾದ ಲೆಕ್ಕವಿಲ್ಲ. ದಯಾಮಯ ದೇವರು ನಮ್ಮ ಲೆಕ್ಕವಿಲ್ಲದಸ್ಟು ಪಾಪಗಳನ್ನೂ ಕ್ಷಮಿಸುವಾಗ ನಾವು ನಮ್ಮ ಸಹೋದರನನ್ನು ಯಾವುದೇ ಷರತ್ತು,ಕಟ್ಟು-ಪಾಡುಗಳಿಲ್ಲದೆ ಕ್ಷಮಿಸಬೇಕು.
ಶುಭಸಂದೇಶದಲ್ಲಿ ಕ್ರಿಸ್ತ ಹೇಳಿದ ಸಾಮತಿಯ ನಿಜವಾದ ಅರ್ಥ : ದೇವರು ನಮ್ಮ ನೂರುಪಟ್ಟು ಪಾಪಗಳನ್ನು ಕ್ಷಮಿಸುವಾಗ ; ಕನಿಷ್ಟ ತಪ್ಪುಗಳನ್ನು ಮಾಡುವ ನಮ್ಮ ನೆರೆಹೊರೆಯವರನ್ನು ಕ್ಷಮಿಸಲೇ ಬೇಕು. ಆಗ ಮಾತ್ರ ಸ್ವರ್ಗದಲ್ಲಿರುವ ನಮ್ಮ ತಂದೆ ನಮ್ಮನ್ನು ಕ್ಷಮಿಸುವರು..
--------------
ಯೆಹೂದ್ಯರ ಸಂಪ್ರದಾಯದ ಪ್ರಕಾರ ಮೂರು ಬಾರಿ ಒಬ್ಬ ವ್ಯಕ್ತಿ ಕ್ಷಮೆಗೆ ಅರ್ಹನಾಗಿದ್ದ. ಆದರೆ ನಾಲ್ಕನೇ ಬಾರಿ ಆತನನ್ನು ದಂಡಿಸಬಹುದಿತ್ತು. ಇದನ್ನು ಅರಿತಿದ್ದ ಪೇತ್ರ ಯೇಸುವನ್ನು `ನನ್ನ ಸಹೋದರರನ್ನು ಎಷ್ಟು ಸಾರಿ ಕ್ಷಮಿಸಬೇಕು’ ಎಂದು ಕೇಳಿರಬಹುದು. ಪೇತ್ರ 7ಸಲ ಕ್ಷಮಿಸಬೇಕೆ ಎಂದು ಕೇಳುವುದರ ಮೂಲಕ ಯೇಸುವಿನ ಪ್ರಶಂಸೆ ಪಡೆಯಲು ಪ್ರಯತ್ನಿಸಿರಬೇಕು. ಆದರೆ ಯೇಸು ಏಳು ಸಲವಲ್ಲ ಏಳೆಪ್ಪತ್ತು ಸಲ ಕ್ಷಮಿಸಬೇಕು ಎಂದು ನುಡಿಯುವುದರ ಮೂಲಕ ಕ್ಷಮೆಗೆ ಮಿತಿ ಇಲ್ಲ ಎಂಬುದನ್ನು ತಿಳಿಸುತ್ತಾರೆ. ನಮ್ಮನ್ನು ದೇವರು ಅನೇಕ ಬಾರಿ ಕ್ಷಮಿಸಿದ್ದಾರೆ ನಮ್ಮ ಪಾಪಗಳನ್ನು ಲೆಕ್ಕವಿಡುವುದಿಲ್ಲ. ಇದನ್ನು ನೆನಪಿನಲ್ಲಿಟ್ಟರೆ ಪರರನ್ನು ಕ್ಷಮಿಸುವುದು ನಮಗೆ ಸುಲಭವಾಗಬಹುದು `ಪರಲೋಕದ ಪ್ರಾರ್ಥನೆ’ಯಲ್ಲಿ ಒಂದು ಷರತ್ತು ಇದೆ. `ನಾವು ಪರರನ್ನು ಕ್ಷಮಿಸುವಂತೆ ನಮ್ಮ ಪಾಪಗಳನ್ನು ಕ್ಷಮಿಸಿರಿ’.
----------------------------------
© 'ದನಿ' ಮಾಧ್ಯಮ ಮನೆ

No comments:
Post a Comment