Sunday, 26 April 2020

ಪಾಸ್ಕಕಾಲದ ಅರನೆಯ ಸೋಮವಾರ

ಮೇ 18, 2020 ಸೋಮವಾರ                                                            [ಬಿಳಿ]
ಸಂತ ಜಾನ್ – 1 (ಐಚ್ಛಿಕ ಸ್ಮರಣೆ)
ಮೊದಲ ವಾಚನ: ಪ್ರೇಷಿತರ ಕಾರ್ಯಕಲಾಪಗಳು 16.11-15
ಕೀರ್ತನೆ 149:1-2, 3-4, 5-6, 9 ಶ್ಲೋಕ.4
ಪ್ರೀತಿಸುತ್ತಾನೆ ಪ್ರಭು ತನ್ನ ಪ್ರಜೆಯನು
[ಅಥವಾ] ಅಲ್ಲೆಲೂಯ, ಅಲ್ಲೆಲೂಯ, ಅಲ್ಲೆಲೂಯ
ಶುಭಸಂದೇಶ: ಯೊವಾನ್ನ 15.26- 16:4
ಮೊದಲ ವಾಚನ: ಪ್ರೇಷಿತರ ಕಾರ್ಯಕಲಾಪಗಳು 16.11-15
11 : ನಾವು ತ್ರೋವದಲ್ಲಿ ಹಡಗುಹತ್ತಿ ಸಮೋಥ್ರಕ್ಕೆ ನೇರವಾಗಿ ಪ್ರಯಾಣಮಾಡಿದೆವು. ಮಾರನೆಯ ದಿನ ನೆಯಫೋಲನ್ನು ತಲುಪಿ,
12 : ಅಲ್ಲಿಂದ ಮಕೆದೋನಿಯದ ಪ್ರಮುಖ ಪಟ್ಟಣವಾದ ಫಿಲಿಪ್ಪಿಗೆ ಬಂದೆವು. ಇದು ರೋಮಿನ ವಸಾಹತು; ಇಲ್ಲಿ ಕೆಲವು ದಿನಗಳನ್ನು ಕಳೆದೆವು.
13 : ಪಟ್ಟಣದ ಹೊರಗಿರುವ ನದಿತೀರದ ಬಳಿ ಯೆಹೂದ್ಯರ ಪ್ರಾರ್ಥನಾ ಸ್ಥಳವಿರಬಹುದೆಂದು ಭಾವಿಸಿ ಸಬ್ಬತ್ದಿನ ಅಲ್ಲಿಗೆ ಹೋದೆವು. ನಾವು ಕುಳಿತುಕೊಂಡು ಅಲ್ಲಿ ಸೇರಿದ್ದ ಮಹಿಳೆಯರೊಡನೆ ಸಂಭಾಷಿಸಿದೆವು.
14 : ನಮ್ಮ ಬೋಧನೆಯನ್ನು ಕೇಳಿದ ಮಹಿಳೆಯರಲ್ಲಿ ಲಿಡಿಯ ಎಂಬವಳು ಒಬ್ಬಳು. ಈಕೆ ಥುವತ್ಯೆರ ಎಂಬ ಊರಿನವಳು; ಪಟ್ಟೆ ಪೀತಾಂಬರಗಳ ವ್ಯಾಪಾರಿ ಹಾಗೂ ದೇವಭಕ್ತೆ. ಪೌಲನ ಬೋಧನೆಗೆ ಕಿವಿಗೊಟ್ಟು ಗ್ರಹಿಸುವಂತೆ ಪ್ರಭು ಆಕೆಯ ಹೃದಯವನ್ನು ತೆರೆದರು.
15 : ಅಂತೆಯೇ ತನ್ನ ಮನೆಯವರ ಸಮೇತ ದೀಕ್ಷಾಸ್ನಾನವನ್ನು ಪಡೆದಳು. ಅನಂತರ, “ನಾನು ಪ್ರಭುವಿನ ನಿಜವಾದ ವಿಶ್ವಾಸಿಯೆಂದು ನೀವು ಒಪ್ಪಿಕೊಳ್ಳುವುದಾದರೆ ನನ್ನ ಮನೆಗೆ ಬಂದು ತಂಗಿರಿ,” ಎಂದು ನಮ್ಮನ್ನು ಒತ್ತಾಯ ಪೂರ್ವಕವಾಗಿ ಆಹ್ವಾನಿಸಿದಳು.
ಕೀರ್ತನೆ 149:1-2, 3-4, 5-6, 9 ಶ್ಲೋಕ.4
ಪ್ರೀತಿಸುತ್ತಾನೆ ಪ್ರಭು ತನ್ನ ಪ್ರಜೆಯನು
1 : ಅಲ್ಲೆಲೂಯ ! ಹಾಡಿರಿ ಪ್ರಭುವಿಗೆ ನೂತನ ಕೀರ್ತನೆಯನು / ಭಕ್ತರ ಸಭೆಯಲಿ ಸ್ತುತಿಮಾಡಿರಿ ಆತನನು
2 : ಆನಂದಿಸಲಿ ತಮ್ಮ ಸೃಷ್ಟಿಕರ್ತನಲಿ ಇಸ್ರಯೇಲರು / ತಮ್ಮಾ ರಾಜನಿಗೆ ಜಯಕಾರ ಮಾಡಲಿ ಸಿಯೋನಿನವರು
3 : ಆತನ ನಾಮವನು ಕೀರ್ತಿಸಲಿ ಕುಣಿತದಿಂದ / ಆತನನು ಭಜಿಸಲಿ ತಮಟೆ, ಕಿನ್ನರಿಗಳಿಂದ
4 : ಪ್ರೀತಿಸುತ್ತಾನೆ ಪ್ರಭು ತನ್ನ ಪ್ರಜೆಯನು / ಜಯಶೀಲರನ್ನಾಗಿಸುತ್ತಾನೆ ದೀನದಲಿತರನು
5 : ಹಿಗ್ಗಲಿ ಭಕ್ತಾದಿಗಳು ದೊರೆತ ವಿಜಯದಲಿ / ಜಯಕಾರ ಮಾಡಲಿ ತಮ್ಮ ತಮ್ಮ ಶಿಬಿರಗಳಲಿ
6 : ಇರಲಿ ಪ್ರಭುವಿನ ಸ್ತೋತ್ರ ಅವರ ಬಾಯಲಿ / ಇರಲಿ ಇಬ್ಬಾಯಿ ಕತ್ತಿಯು ಅವರ ಕೈಯಲಿ
9 : ವಿಧಿಸಲಿ ಅವರಿಗೆ ಲಿಖಿತಾಜ್ಞೆಯ ಶಿಕ್ಷೆಯನು / ಇದು ತರಲಿ ಭಕ್ತರೆಲ್ಲರಿಗೆ ಗೌರವವನು / ಅಲ್ಲೆಲೂಯ!

ಶುಭಸಂದೇಶ: ಯೊವಾನ್ನ 15.26- 16:4
26 : ಪಿತನಿಂದ ಹೊರಡುವ ಸತ್ಯಸ್ವರೂಪಿಯಾದ ಪವಿತ್ರಾತ್ಮರನ್ನು ನಿಮ್ಮ ಪೋಷಕರನ್ನಾಗಿ ನಾನು ಪಿತನಿಂದಲೇ ಕಳುಹಿಸುವೆನು. ಅವರು ಬಂದು ನನ್ನ ಪರವಾಗಿ ಸಾಕ್ಷಿ ನೀಡುವರು.
27 : ಮೊತ್ತ ಮೊದಲಿನಿಂದಲೂ ನನ್ನ ಸಂಗಡ ಇದ್ದ ನೀವು ಕೂಡ ನನ್ನನ್ನು ಕುರಿತು ಸಾಕ್ಷಿ ನೀಡುವವರಾಗಿದ್ದೀರಿ.  ನಿಮ್ಮ ವಿಶ್ವಾಸ ಕುಸಿಯದಂತೆ ನಿವು ಎಚ್ಚರಿಕೆ ವಹಿಸಬೇಕೆಂದು ನಾನು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಜನರು, ನಿಮ್ಮನ್ನು ಪ್ರಾರ್ಥನಾಮಂದಿರದಿಂದ ಬಹಿಷ್ಕರಿಸುವರು. ಅಷ್ಟೇ ಅಲ್ಲ, ಜನರು, ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವೂ ಬರಲಿದೆ. ನನ್ನನ್ನಾಗಲಿ, ಪಿತನನ್ನಾಗಲಿ ಅವರು ಅರಿತಿಲ್ಲದ ಕಾರಣ ನಿಮಗೆ ಹೀಗೆ ಮಾಡುವರು. ಅಂಥ ಕಾಲ ಬಂದಾಗ ಇದನ್ನೆಲ್ಲಾ ಕುರಿತು ನಾನು ನಿಮ್ಮನ್ನು ಮೊದಲೇ ಎಚ್ಚರಿಸಿದ್ದೇನೆಂದು ನೀವು ನೆನಸಿಕೊಳ್ಳುವಂತೆ ಇದನ್ನು ಹೇಳುತ್ತಿದ್ದೇನೆ”.
-------------------------

ನಮ್ಮ ವಿಶ್ವಾಸ ಕುಸಿಯಬಾರದೆಂದು ಪ್ರಭು ತಮ್ಮನ್ನೇ ಸಾಕ್ಷಾತ್ಕರಿಸಿದ್ದಾರೆ. ಸಧೃಡವಾದ ವಿಶ್ವಾಸವೊಂದಿದ್ದರೆ ಸಾಕು. ಅಚಲವಾದ ವಿಶ್ವಾಸ ದಿಢೀರನೆ ನಮಗೆ ಬರಲಾರದು. ಇದು ನಿರಂತರ ಪ್ರಕ್ರಿಯೆಯಾಗಿದೆ. ವಿಶ್ವಾಸಿಯಾಗಿರುವುದೆಂದರೆ ಪ್ರತಿನಿತ್ಯ ಬೆಳಸುವುದು, ಜೀವಿಸುವುದಾಗಿದೆ. ನಮ್ಮ ವಿಶ್ವಾಸ ಧೃಡವಾಗದೆ ಹೋದಾಗ, ಅನೇಕ ದುರಂತಗಳಿಗೆ, ಸಂದೇಹಗಳಿಗೆ ಒಳಗಾಗುತ್ತೇವೆ.
--------------
© 'ದನಿಮಾಧ್ಯಮ ಮನೆ





ದನಿ ಮಾಧ್ಯಮ ಮನೆಯ 'ದನಿ' ಇ-ಮಾಸಿಕಕ್ಕೆ ಬೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ

No comments:

Post a Comment