Saturday, 25 April 2020

ಪಾಸ್ಖಕಾಲದ ನಾಲ್ಕನೆಯ ಶುಕ್ರವಾರ

ಮೇ 8, 2020 ಶುಕ್ರವಾರ                                                     [ಬಿಳಿ]
(ಐಚ್ಛಿಕ ಸ್ಮರಣೆ) ಸಂತ ಶಾರ್ಬೆಲ್
ಮೊದಲ ವಾಚನ: ಪ್ರೇಷಿತರ ಕಾರ್ಯಕಲಾಪಗಳು 13: 26-33
ಕೀರ್ತನೆ 2:6-11 ಶ್ಲೋಕ.7
ದಿನ ನಾನಿನ್ನ ಹಡೆದಿಹೆನು; ನೀನೆನಗೆ ಮಗನು
[ಅಥವಾ] ಅಲ್ಲೆಲೂಯ, ಅಲ್ಲೆಲೂಯ, ಅಲ್ಲೆಲೂಯ
ಶುಭಸಂದೇಶ: ಯೊವಾನ್ನ 14.1-6

ಮೊದಲ ವಾಚನ: ಪ್ರೇಷಿತರ ಕಾರ್ಯಕಲಾಪಗಳು 13: 26-33
26 : “ನನ್ನ ಸಹೋದರರೇ, ಅಬ್ರಹಾಮನ ಸಂತತಿಯವರೇ ಮತ್ತು ದೇವರಲ್ಲಿ ಭಯಭಕ್ತಿಯುಳ್ಳ ಇನ್ನಿತರರೇ, ಜೀವೋದ್ಧಾರದ ಸಂದೇಶವನ್ನು ಕಳುಹಿಸಿರುವುದು ನಮಗಾಗಿಯೇ.
27 : ಜೆರುಸಲೇಮಿನ ನಿವಾಸಿಗಳು ಮತ್ತು ಅವರ ಅಧಿಕಾರಿಗಳು ಯೇಸು ಲೋಕೋದ್ಧಾರಕನೆಂದು ಅರಿತುಕೊಳ್ಳಲಿಲ್ಲ. ಪ್ರತಿ ಸಬ್ಬತ್ದಿನ ಓದಲಾದ ಪ್ರವಾದಿಗಳ ವಾಕ್ಯಗಳನ್ನು ಅವರು ಗ್ರಹಿಸಿಕೊಳ್ಳಲಿಲ್ಲ. ಯೇಸುವಿಗೆ ಮರಣದಂಡನೆಯನ್ನು ವಿಧಿಸಿ ಪ್ರವಾದನೆಗಳು ನಿಜವಾಗಲು ಕಾರಣರಾದರು.
28 : ಮರಣದಂಡನೆ ವಿಧಿಸಲು ಯಾವ ಕಾರಣವಿಲ್ಲದಿದ್ದರೂ ಅವರನ್ನು ಕೊಲ್ಲಿಸುವಂತೆ ಪಿಲಾತನನ್ನು ಕೇಳಿಕೊಂಡರು.
29 : ಯೇಸುವನ್ನು ಕುರಿತು ಪವಿತ್ರಗ್ರಂಥ ಹೇಳುವುದೆಲ್ಲವೂ ನೆರವೇರಿದ ಮೇಲೆ ಅವರನ್ನು ಶಿಲುಬೆಯಿಂದ ಕೆಳಗಿಳಿಸಿ ಸಮಾಧಿಮಾಡಿದರು.
30 : ಆದರೆ ದೇವರು ಅವರನ್ನು ಮರಣದಿಂದ ಪುನರುತ್ಥಾನಗೊಳಿಸಿದರು.
31 : ಹೀಗೆ ಪುನರುತ್ಥಾನ ಹೊಂದಿದ ಯೇಸು, ಗಲಿಲೇಯದಿಂದ ತಮ್ಮೊಡನೆ ಜೆರುಸಲೇಮಿಗೆ ಬಂದಿದ್ದವರಿಗೆ ಕಾಣಿಸಿಕೊಂಡರು. ವ್ಯಕ್ತಿಗಳೇ ಈಗ ನಮ್ಮ ಜನರ ಮಧ್ಯೆ ಇರುವ ಯೇಸುವಿನ ಪರವಾದ ಸಾಕ್ಷಿಗಳು.
32 : ನಾವೀಗ ನಿಮಗೆ ಸಾರುವ ಶುಭಸಂದೇಶ ಇದು: ದೇವರು ಯೇಸುಸ್ವಾಮಿಯನ್ನು ಪುನರುತ್ಥಾನಗೊಳಿಸಿದ್ದಾರೆ. ಮೂಲಕ ನಮ್ಮ ಪೂರ್ವಜರಿಗೆ ಮಾಡಿದ ವಾಗ್ದಾನವನ್ನು ಅವರ ಸಂತತಿಯಾದ ನಮಗಿಂದು ಈಡೇರಿಸಿದ್ದಾರೆ.
33 : ಎರಡನೆಯ ಕೀರ್ತನೆಯಲ್ಲಿ ಹೀಗೆಂದು ಬರೆದಿದೆ: ‘ನೀನೇ ನನ್ನ ಪುತ್ರ, ನಾನಿಂದು ನಿನ್ನ ಜನಕ.’


ಕೀರ್ತನೆ 2:6-11 ಶ್ಲೋಕ.7
6 : ನಿರ್ದೋಷಿ ನಾನೆಂದು ನೀರಿನಲ್ಲಿ ಕೈತೊಳೆವೆನಯ್ಯಾ / ಪ್ರಭು, ನಿನ್ನ ಬಲಿಪೀಠದ ಪ್ರದಕ್ಷಿಣೆ ಮಾಡುವೆನಯ್ಯಾ //
7 : ದನಿಯೆತ್ತಿ ನಿನಗೆ ಧನ್ಯಗೀತೆ ಹಾಡುವೆನಯ್ಯಾ / ನಿನ್ನದ್ಭುತ ಕಾರ್ಯಗಳೆಲ್ಲವನು ಘೋಷಿಸುವೆನಯ್ಯಾ //
8 : ಪ್ರಿಯವಾದುದೆನಗೆ ನಿನ್ನ ನಿವಾಸದ ಮಂದಿರ / ಸುಪ್ರೀತವಾದುದು ನಿನ್ನ ಮಹಿಮೆಯ ಆಗರ //
9 : ಪಾಪಿಗಳ ಸಮೇತ ಎನ್ನ ಪ್ರಾಣವನಳಿಸಬೇಡಯ್ಯಾ / ಕೊಲೆಪಾತಕರ ಸಮೇತ ಎನ್ನ ಜೀವ ತೆಗೆಯಬೇಡಯ್ಯಾ /
10 : ಇದೆ ಜನರ ಕೈಗಳಲಿ ಕೆಡುಕುತನ / ಬಲಗೈ ತುಂಬ ಲಂಚಕೋರತನ //
11 : ನೀತಿಯ ಪಥದೊಳು ನಾ ನಡೆವೆನಯ್ಯಾ / ಕರುಣೆ ತೋರುತ ಪ್ರಭು, ರಕ್ಷಿಸಯ್ಯಾ //

ಶುಭಸಂದೇಶ: ಯೊವಾನ್ನ 14.1-6
1 : ಯೇಸುಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ ಶಿಷ್ಯರಿಗೆ, “ನೀವು ಹೃದಯದಲ್ಲಿ ಕಳವಳಗೊಳ್ಳದಿರಿ; ದೇವರಲ್ಲಿ ವಿಶ್ವಾಸವಿಡಿ; ನನ್ನಲ್ಲಿಯೂ ವಿಶ್ವಾಸವಿಡಿ.
2 : ನನ್ನ ಪಿತನ ಆಸ್ಥಾನದಲ್ಲಿ ಅನೇಕ ನಿವಾಸಗಳು ಇವೆ. ಹಾಗಿಲ್ಲದ ಪಕ್ಷದಲ್ಲಿ ನಿಮಗೆ ತಿಳಿಸುತ್ತಿದ್ದೆ. ನಾನು ಹೋಗಿ ನಿಮಗೆ ಸ್ಥಳವನ್ನು ಅಣಿಗೊಳಿಸುತ್ತೇನೆ.
3 : ಅಣಿಗೊಳಿಸಿದ ಬಳಿಕ ಹಿಂದಿರುಗಿ ಬಂದು ನಿಮ್ಮನ್ನು ಕರೆದೊಯ್ಯುತ್ತೇನೆ. ನಾನಿರುವೆಡೆಯಲ್ಲಿಯೇ ನೀವೂ ಇರಬೇಕು.
4 : ನಾನು ಹೋಗುವ ಎಡೆಗೆ ಮಾರ್ಗವು ನಿಮಗೆ ತಿಳಿದೇ ಇದೆ,” ಎಂದು ಹೇಳಿದರು.
5 : ಆಗ ತೋಮನು, “ಪ್ರಭುವೇ, ನೀವು ಎಲ್ಲಿಗೆ ಹೋಗುತ್ತೀರೆಂದು ನಮಗೆ ತಿಳಿಯದು; ಅಂದಮೇಲೆ ಅಲ್ಲಿಗೆ ಹೋಗುವ ಮಾರ್ಗವು ಹೇಗೆ ತಿಳಿದೀತು?” ಎಂದು ಕೇಳಿದನು.
6 : ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.
---------------

 ಯೇಸು ತಾವು ಹೋಗಲಿರುವ ಕಡೆಯ ಬಗ್ಗೆ ಚರ್ಚೆ ನಡೆದಿತ್ತು. ಶಿಷ್ಯರಿಗೆ ಜೀರ್ಣಿಸಿಕೊಳ್ಳಲು ಕಷ್ಟಸಾಧ್ಯವಾದಾಗ, ಕ್ರಿಸ್ತ ಮತ್ತೊಮ್ಮೆ ದೀರ್ಘವಾಗಿ ಬಗ್ಗೆ ವಿವರಿಸಲಾರಂಭಿಸಿದರು. ``ನಾನು ಹೋಗುವ ಕಡೆಗೆ ಮಾರ್ಗವು ನಿಮಗೆ ತಿಳಿದೇ ಇದೆ’’ ಎನ್ನುತ್ತಾ ಯೇಸು, ತಾವು ಹೊಂದಲಿರುವ ಮರಣ, ಪುನರುತ್ಥಾನ ಹಾಗೂ ಸ್ವರ್ಗಾರೋಹಣದ ಬಗ್ಗೆ ಮತ್ತೊಮ್ಮೆ ಮನವರಿಕೆ ಮಾಡುತ್ತಿದ್ದಾರೆ. ತಂದೆಯ ಬಳಿಗೆ ನಾವೆಲ್ಲರೂ ಒಂದು ದಿನ ಹೋಗಲಿದ್ದೇವೆ. ಲೋಕ ನಮಗೆ ಶಾಶ್ವತವಲ್ಲ. ತಂದೆಯ ಬಳಿಗೆ ಹೋಗುವ ಹಾದಿಯಲ್ಲಿ, ಕ್ರಿಸ್ತರ ಸತ್ಯ, ಜೀವವನ್ನಾಧರಿಸಿದ ಮಾರ್ಗ ನಮ್ಮದಾಗಬೇಕು. ಹಾಗಾದಾಗ ನಮಗಾಗಿ ಸಿದ್ದ ಮಾಡಲ್ಪಟ್ಟಿರುವ ನಿವಾಸದಲ್ಲಿ ಆನಂದಿತರಾಗುವೆವು. ಕ್ರಿಸ್ತರೇ ಮಾರ್ಗ ``ಆತನ ಮುಖಾಂತರ ಬಾರದ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.’’
----------------
© 'ದನಿಮಾಧ್ಯಮ ಮನೆ





ದನಿ ಮಾಧ್ಯಮ ಮನೆಯ 'ದನಿ' ಇ-ಮಾಸಿಕಕ್ಕೆ ಬೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ

No comments:

Post a Comment