[ಹಸಿರು]
ನೋಲಾದ ಸಂತ ಪೌಲಿನುಸ್ [ಧರ್ಮಾಧ್ಯಕ್ಷ] (ಐಚ್ಛಿಕ ಸ್ಮರಣೆ)
ಸಂತ ಜಾನ್ ಫಿಶರ್ ಮತ್ತು ಸಂತ ತೋಮಾಸ್ ಮೋರ್ (ಐಚ್ಛಿಕ ಸ್ಮರಣೆ)
ಮೊದಲ ವಾಚನ: 2 ಅರಸರು 17.5-8, 13-15, 18
ಕೀರ್ತನೆ 60:1, 2-3, 10-11, ಶ್ಲೋಕ.5
ಪ್ರಭೂ, ನಿನಗೆ ಪ್ರಿಯರಾದ ನಮ್ಮ ಮೊರೆಯನ್ನಾಲಿಸು
ಶುಭಸಂದೇಶ: ಮತ್ತಾಯ 7.1-5
ನೋಲಾದ ಸಂತ ಪೌಲಿನುಸ್ [ಧರ್ಮಾಧ್ಯಕ್ಷ] (ಐಚ್ಛಿಕ ಸ್ಮರಣೆ)
ಸಂತ ಜಾನ್ ಫಿಶರ್ ಮತ್ತು ಸಂತ ತೋಮಾಸ್ ಮೋರ್ (ಐಚ್ಛಿಕ ಸ್ಮರಣೆ)
ಮೊದಲ ವಾಚನ: 2 ಅರಸರು 17.5-8, 13-15, 18
ಕೀರ್ತನೆ 60:1, 2-3, 10-11, ಶ್ಲೋಕ.5
ಪ್ರಭೂ, ನಿನಗೆ ಪ್ರಿಯರಾದ ನಮ್ಮ ಮೊರೆಯನ್ನಾಲಿಸು
ಶುಭಸಂದೇಶ: ಮತ್ತಾಯ 7.1-5
ಮೊದಲ ವಾಚನ: 2 ಅರಸರು 17.5-8, 13-15, 18
5 : ಇದಲ್ಲದೆ, ಈ ಅಸ್ಸೀರಿಯದ ಅರಸನು ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಸಮಾರಿಯಕ್ಕೆ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆಹಾಕಿದನು.
6 : ಅದು ಹೋಶೇಯನ ಆಳ್ವಿಕೆಯ ಒಂಬತ್ತನೆಯ ವರ್ಷದಲ್ಲಿ ಅವನ ಸ್ವಾಧೀನವಾಯಿತು. ಅವನು ಎಲ್ಲಾ ಇಸ್ರಯೇಲರನ್ನು ಅಸ್ಸೀರಿಯ ದೇಶಕ್ಕೆ ಒಯ್ದು ಹಲಹು ಎಂಬ ಪ್ರಾಂತ್ಯದಲ್ಲಿ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯದಲ್ಲಿ ಹಾಗು ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು.
7 : ಇಸ್ರಯೇಲರ ಈ ದುರ್ಗತಿಗೆ ಅವರ ದುರ್ನಡತೆಯೇ ಕಾರಣ: ಹೇಗೆಂದರೆ, ಅವರು ತಮ್ಮನ್ನು ಈಜಿಪ್ಟಿನ ಅರಸನಾದ ಫರೋಹನ ಕೈಯಿಂದ ಬಿಡಿಸಿ ಅವನ ರಾಜ್ಯದಿಂದ ಹೊರತಂದ ದೇವರಾದ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿ ಅನ್ಯದೇವತೆಗಳನ್ನು ಪೂಜಿಸಿದರು.
8 : ತಮ್ಮ ನಾಡಿನಿಂದ ಸರ್ವೇಶ್ವರ ಹೊರಡಿಸಿ ಬಿಟ್ಟಿದ್ದ ಜನಾಂಗಗಳ ಮತ್ತು ಇಸ್ರಯೇಲ್ ರಾಜರ ದುರಾಚಾರಗಳನ್ನು ಅವರು ಅನುಸರಿಸಿದರು.
13 :
ದರ್ಶಿನಿಗಳೆನಿಸಿಕೊಂಡ ತಮ್ಮ ಪ್ರವಾದಿಗಳ ಮುಖಾಂತರ ಸರ್ವೇಶ್ವರ ಇಸ್ರಯೇಲ ಯೆಹೂದ್ಯರಿಗೆ, “ನೀವು ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಜರಿಗೂ ನನ್ನ ದಾಸರಾದ ಪ್ರವಾದಿಗಳ ಮುಖಾಂತರ ನಿಮಗೂ ಕೊಟ್ಟಂಥ ನನ್ನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯಿರಿ,” ಎಂದು ಖಂಡಿತವಾಗಿ ಹೇಳಿದರು.
14 :
ಆದರೆ ಅವರು, ದೇವರಾದ ಸರ್ವೇಶ್ವರನನ್ನು ನಂಬದೆ, ಅವರ ಆಜ್ಞೆಗಳಿಗೆ ಮಣಿಯದೆಯಿದ್ದ ತಮ್ಮ ಹಿರಿಯರಂತೆ, ಕಿವಿಗೊಡದೆ ಹೋದರು.
15 :
ಸರ್ವೇಶ್ವರ ತಮ್ಮ ಪೂರ್ವಜರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ ತಮಗೆ ಹೇಳಿಸಿದ ಬುದ್ಧಿವಾಕ್ಯಗಳನ್ನೂ ತಿರಸ್ಕರಿಸಿ, ಮಿಥ್ಯಾ ದೇವತೆಗಳನ್ನು ಪೂಜಿಸಿ ನಿಸ್ಸಾರ್ಥಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಸರ್ವೇಶ್ವರ ಆಜ್ಞಾಪಿಸಿದ್ದರೂ ಕೇಳದೆ ಜನಾಂಗಗಳನ್ನೇ ಅನುಸರಿಸಿದರು.
18 :
ಈ ಪ್ರಕಾರ ನಡೆದುದರಿಂದ ಸರ್ವೇಶ್ವರ ಅವರ ಮೇಲೆ ಕಡುಕೋಪಗೊಂಡು ಯೆಹೂದಕುಲದವರ ಹೊರತು, ಉಳಿದ ಎಲ್ಲಾ ಕುಲಗಳವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು.
ಕೀರ್ತನೆ 60:1, 2-3, 10-11, ಶ್ಲೋಕ.5
ಪ್ರಭೂ, ನಿನಗೆ ಪ್ರಿಯರಾದ ನಮ್ಮ ಮೊರೆಯನ್ನಾಲಿಸು
ಪ್ರಭೂ, ನಿನಗೆ ಪ್ರಿಯರಾದ ನಮ್ಮ ಮೊರೆಯನ್ನಾಲಿಸು
3 : ನಿನ್ನ ಜನರನು ಗುರಿಪಡಿಸಿದೆ ಸಂಕಟಕೆ / ಭ್ರಮಣಗೊಳಿಪ ಮದ್ಯವ ಕುಡಿಸಿದೆ ನಮಗೆ //
4 : ಪರಾಜಯ ಪತಾಕೆಯ ಹಾರಿಸಿದೆ ನಿನಗಂಜಿ ನಡೆದವರಿಗೆ / ಅವರು ಹೆದರಿ ಓಡುವಂತೆ ಮಾಡಿದೆ ಬಿಲ್ಲು ಬಾಣಗಳಿಗೆ //
5 : ಪರಾಜಯ ಪತಾಕೆಯ ಹಾರಿಸಿದೆ ನಿನಗಂಜಿ ನಡೆದವರಿಗೆ / ಅವರು ಹೆದರಿ ಓಡುವಂತೆ ಮಾಡಿದೆ ಬಿಲ್ಲು ಬಾಣಗಳಿಗೆ //
12 :
ನಮ್ಮ ಪರ ದೇವನಿರಲು ಹೆಣಗುವೆವು ಶೂರರಾಗಿ / ವೈರಿಗಳನು ತುಳಿದುಬಿಡುವನಾತ ಖರೆಯಾಗಿ //
ಶುಭಸಂದೇಶ: ಮತ್ತಾಯ 7.1-5
1 :
"ನೀವು ಇತರರ ಬಗ್ಗೆ ತೀರ್ಪುಕೊಡಬೇಡಿ; ಆಗ ದೇವರು ನಿಮ್ಮ ಬಗ್ಗೆ ತೀರ್ಪುಕೊಡುವುದಿಲ್ಲ.
2 : ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದು ಕೊಡುವರು.
3 : ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ನೋಡದೆ ನಿನ್ನ ಸೋದರನ ಕಣ್ಣಿನಲ್ಲಿರುವ ಅಣುವನ್ನು ನೀನು ಗಮನಿಸುವುದೇಕೆ?
4 : ನಿನ್ನ ಕಣ್ಣಿನಲ್ಲಿ ಒಂದು ದಿಮ್ಮಿಯೇ ಇರುವಾಗ, "ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದು ಬಿಡುತ್ತೇನೆ," ಎಂದು ನಿನ್ನ ಸೋದರನಿಗೆ ಹೇಗೆ ಹೇಳಬಲ್ಲೆ?
5 : ಎಲೈ ಕಟಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು. ಅನಂತರ ನಿನ್ನ ಸೋದರನ ಕಣ್ಣಿನಿಂದ ಅಣುವನ್ನು ತೆಗೆಯಲು ನಿನ್ನ ಕಣ್ಣು ನಿಚ್ಚಳವಾಗಿ ಕಾಣಿಸುವುದು."
--------------
ಸರ್ವೇಶ್ವರರಾದ ಏಕ ದೇವರಲ್ಲಿ ವಿಶ್ವಾಸವಿಟ್ಟು, ಅವರು ತೋರಿದ ಹಾದಿಯಲ್ಲಿ ನಡೆಯುವವನಿಗೆ ಜೀವನದಲ್ಲಿ ಯಾವುದೇ ರೀತಿಯ ಕೆಡುಕು ಇರುವುದಿಲ್ಲ. ಇಂದಿನ ಮೊದಲನೆಯ ವಾಚನವನ್ನು ನಾವು ನೋಡಿದಾಗ ಇಸ್ರಾಯೇಲರು ದೇವರ ಮೇಲಿನ ನಂಬಿಕೆಯನ್ನು ಮುರಿದು, ಅನ್ಯದೇವರುಗಳತ್ತ ಮುಖ ಮಾಡಿ ಪಾಪದ ಹಾದಿ ಹಿಡಿಯುವುದನ್ನು ನಾವು ಕಾಣುತ್ತೇವೆ. ಇದರಿಂದಾಗಿ ಅವರಿಗೆ ಆಜ್ಞಾವಿಧಿಗಳನ್ನು ಅನುಸರಿಸಿ ಬಾಳಲು ಎಚ್ಚರವಹಿಸುವಂತೆ ಕರೆನೀಡುತ್ತದೆ. ದೇವರಲ್ಲಿ ಭಯ-ಭಕ್ತಿ ಇಟ್ಟು ಅವರು ತೋರುವ ದಾರಿಯಲ್ಲಿ ನಡೆಯುವುದರಿಂದ ನಾವು ದೇವರ ಮಕ್ಕಳೆನಿಸಿಕೊಳ್ಳುತ್ತೇವೆ ಹಾಗೂ ಸ್ವರ್ಗದಲ್ಲಿ ತಂದೆ ದೇವರೊಂದಿಗೆ ಚಿರಂಜೀವಿಗಳಾಗಿರುತ್ತೇವೆ.
No comments:
Post a Comment