Tuesday, 19 May 2020

ಜೂನ್ 23, 2020 - ಸಾಧಾರಣ ಕಾಲದ ಹನ್ನೆರಡನೆಯ ವಾರ - ಮಂಗಳವಾರ

[ಹಸಿರು] 
ಮೊದಲ ವಾಚನ: 2 ಅರಸರು 19.9-11, 14-21, 31-36 
ಕೀರ್ತನೆ 48:1-3, 9-10. ಶ್ಲೋಕ.9 
ನಿನ್ನ ಅಚಲ ಪ್ರೀತಿಯನು ದೇವಾ, ಸ್ಮರಿಸುವೆವು 
ಶುಭಸಂದೇಶ: ಮತ್ತಾಯ 7.6, 12-14

ಮೊದಲ ವಾಚನ: 2 ಅರಸರು 19.9-11, 14-21, 31-36 
9 : ಅಷ್ಟರಲ್ಲಿ ಸುಡಾನಿನ ರಾಜ ತಿರ್ಹಾಕನು ತನಗೆ ವಿರುದ್ಧವಾಗಿ ಹೊರಟಿದ್ದಾನೆ ಎಂಬ ಸುದ್ದಿ ಅಸ್ಸೀರಿಯದ ಅರಸನಿಗೆ ಮುಟ್ಟಿತು. ಆಗ ಅವನು ಜುದೇಯದ ಅರಸನಾದ ಹಿಜ್ಕೀಯನಿಗೆ
10 : “ಜೆರುಸಲೇಮ್ ನನ್ನ ವಶವಾಗುವುದಿಲ್ಲವೆಂದು ನೀನು ನಂಬುವ ದೇವರು ನಿನಗೆ ಹೇಳಿ ನಿನ್ನನ್ನು ಮೋಸಗೊಳಿಸಬಹುದು.
11 : ಅಸ್ಸೀರಿಯದ ಅರಸನು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಪಡಿಸಿದ್ದಾನೆಂಬ ಸಮಾಚಾರ ನಿನಗೆ ಮುಟ್ಟಿರಬೇಕು, ಹೀಗಿರುವಲ್ಲಿ ನೀನು ಮಾತ್ರ ತಪ್ಪಿಸಿಕೊಳ್ಳುವಿಯೋ?
14 : ಹಿಜ್ಕೀಯನು, ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ, ದೇವಾಲಯಕ್ಕೆ ಹೋಗಿ ಅದನ್ನು ಸರ್ವೇಶ್ವರಸ್ವಾಮಿಯ ಮುಂದೆ ತೆರೆದಿಟ್ಟು, ಹೀಗೆಂದು ಪ್ರಾರ್ಥನೆ ಮಾಡಿದನು:
15 : “ಇಸ್ರಯೇಲಿನ ದೇವರೇ, ಸರ್ವೇಶ್ವರಾ, ಕೆರೂಬಿಗಳ ಮೇಲೆ ಆಸೀನಾ ರೂಢರಾಗಿರುವವರೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀವೊಬ್ಬರೇ; ಪರಲೋಕ ಭೂಲೋಕಗಳನ್ನುಂಟುಮಾಡಿದವರು ನೀವೇ.
16 : ಸರ್ವೇಶ್ವರಾ, ಕಿವಿಗೊಟ್ಟು ಕೇಳಿ; ಸರ್ವೇಶ್ವರಾ, ಕಣ್ಣಿಟ್ಟು ನೋಡಿ: ಸನ್ಹೇರೀಬನು ಜೀವಸ್ವರೂಪ ದೇವರಾದ ನಿಮ್ಮನ್ನು ನಿಂದಿಸುವುದಕ್ಕಾಗಿ ಹೇಳಿಕಳುಹಿಸಿದ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೊಳ್ಳಿ.
17 : ಸರ್ವೇಶ್ವರಾ, ಅಸ್ಸೀರಿಯದ ರಾಜರು ಸಕಲ ರಾಷ್ಟ್ರಗಳನ್ನೂ ಹಾಗೂ ಅವರ ನಾಡುಗಳನ್ನೂ ಹಾಳುಮಾಡಿದ್ದಾರೆ.
18 : ಅವರ ದೇವರುಗಳನ್ನೂ ಬೆಂಕಿಗೆ ಹಾಕಿದ್ದು ನಿಜ. ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳ ಬೊಂಬೆಗಳಷ್ಟೆ. ಆದುದರಿಂದಲೇ ಅವು ಅವರಿಂದ ಹಾಳಾದವು.
19 : ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ದೇವರು ಎಂಬುದನ್ನು ಭೂಮಿಯ ರಾಷ್ಟ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಅಸ್ಸೀರಿಯನ ಕೈಯಿಂದ ಬಿಡಿಸಿರಿ.”
20 : ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ; “ಇಸ್ರಯೇಲಿನ ದೇವರಾದ ಸರ್ವೇಶ್ವರಸ್ವಾಮಿಯ ಮಾತುಗಳನ್ನು ಕೇಳು: ನೀನು ಅಸ್ಸೀರಿಯದ ರಾಜನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳು ಸರ್ವೇಶ್ವರಸ್ವಾಮಿಗೆ ಮುಟ್ಟಿವೆ. ಅವರು ಅವನನ್ನು ಕುರಿತು ಹೀಗೆಂದಿದ್ದಾರೆ:
21 : ‘ನಿನ್ನನ್ನು ಪರಿಹಾಸ್ಯಮಾಡಿ ತಿರಸ್ಕರಿಸುತಿಹಳು ಕನ್ಯೆಯಾದ ಸಿಯೋನಿನ ಕುವರಿಯು; ನಿನ್ನ ಹಿಂದೆ ತಲೆಯಾಡಿಸಿ ಮೂದಲಿಸುತಿಹಳು ಜೆರುಸಲೇಮಿನ ಕುವರಿಯು.
31 : ಅಳಿದುಳಿದವರು ಜೆರುಸಲೇಮಿನಲ್ಲೇ ಹರಡಿಕೊಳ್ಳುವರು; ಸಿಯೋನ್ ಪರ್ವತದಲ್ಲಿ ಅಭಿವೃದ್ಧಿಯಾಗುವರು. ಸರ್ವೇಶ್ವರಸ್ವಾಮಿಯ ಆಗ್ರಹವೇ ಇದನ್ನು ಸಾಧಿಸುವುದು.
32 : “ಅಸ್ಸೀರಿಯದ ಅರಸನನ್ನು ಕುರಿತು ಸರ್ವೇಶ್ವರ ಹೇಳಿರುವ ಮಾತಿದು: ‘ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ, ಅದರತ್ತ ಬಾಣವನ್ನೆಸೆಯುವುದಿಲ್ಲ, ಕವಚಧಾರಿಗಳನ್ನು ಕಳುಹಿಸುವುದಿಲ್ಲ. ಅದರ ಆಕ್ರಮಣಕ್ಕಾಗಿ ಮಣ್ಣು ದಿಬ್ಬಗಳನ್ನು ಎಬ್ಬಿಸುವುದಿಲ್ಲ.
33 : ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು; ಪಟ್ಟಣಕ್ಕೆ ಕಾಲಿಡನು.
34 : ನನಗಾಗಿಯೂ ನನ್ನ ದಾಸ ದಾವೀದನಿಗಾಗಿಯೂ ಪಟ್ಟಣವನ್ನು ಉಳಿಸಿ ಕಾಪಾಡುವೆನು,’ ಎಂದಿದ್ದಾರೆ”.
35 : ಅದೇ ರಾತ್ರಿಯಲ್ಲಿ ಸರ್ವೇಶ್ವರಸ್ವಾಮಿಯ ದೂತನು ಹೊರಟು ಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡು ಮಾಡಿದನು; ಅಸ್ಸೀರಿಯರು ಬೆಳಿಗ್ಗೆ ಎದ್ದು ನೋಡುವಾಗ ಪಾಳೆಯ ತುಂಬ ಹೆಣಗಳು ಇದ್ದುವು.
36 : ಆದ್ದರಿಂದ ಅಸ್ಸೀರಿಯರ ಅರಸನಾದ ಸನ್ಹೇರೀಬನು ಹಿಂದಿರುಗಿದನು. ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲೆ ವಾಸಿಸಿದನು.
ಕೀರ್ತನೆ 48:1-3, 9-10. ಶ್ಲೋಕ.9 
ನಿನ್ನ ಅಚಲ ಪ್ರೀತಿಯನು ದೇವಾ, ಸ್ಮರಿಸುವೆವು 
2 : ಪರಾತ್ಪರನಾದ ಪ್ರಭುವು ಘನಗಂಭೀರನು | ಪ್ರಪಂಚಕ್ಕೆಲ್ಲ ರಾಜಾಧಿರಾಜನು ||
3 : ಜನಾಂಗಗಳನಾತ ನಮಗಧೀನಪಡಿಸಿಹನು | ರಾಷ್ಟ್ರಗಳನು ನಮಗೆ ಪಾದಪೀಠವಾಗಿಸಿಹನು ||
4 : ಆಯ್ದನಾಡನು ಸೊತ್ತಾಗಿ ನೀಡಿದನೆಮಗೆ | ಪ್ರತಿಷ್ಠಿತರು ನಾವು, ಆತನೊಲಿದ ಯಕೋಬಿಗೆ ||
10 : ನಿನ್ನ ನಾಮದಂತೆ ನಿನ್ನಾ ಹೊಗಳಿಕೆ / ಮುಟ್ಟುತ್ತದೆ ಜಗದ ಎಲ್ಲೆ ಎಲ್ಲೆಗೆ / ದೇವಾ, ನೀತಿಭರಿತ ನಿನ್ನ ಆಳ್ವಿಕೆ //
11 : ಸಿಯೋನ್ ಪಟ್ಟಣಿಗರು ಹರ್ಷಗೊಳ್ಳಲಿ / ಯೆಹೂದ್ಯ ನಗರಗಳು ಆನಂದಪಡಲಿ / ನಿನ್ನ ನ್ಯಾಯವನು ನೆನಪಿಸಿಕೊಳ್ಳಲಿ //
ಶುಭಸಂದೇಶ: ಮತ್ತಾಯ 7.6, 12-14
6 : "ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿಬಿಟ್ಟಾವು; ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿ - ಅವು ಮುತ್ತುಗಳನ್ನು ಕಾಲಿನಿಂದ ತುಳಿದು ಹಾಕಿಯಾವು."
12 : "ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅದನ್ನೇ ನೀವು ಅವರಿಗೆ ಮಾಡಿ. ಧರ್ಮಶಾಸ್ತ್ರದ ಹಾಗೂ ಪ್ರವಾದನೆಗಳ ಸಾರ ಇದೇ." ವಿನಾಶಕ್ಕೆ ಒಯ್ಯುವ ವೀದಿ ವಿಶಾಲ (ಲೂಕ 13:24)
13 : "ಕಿರಿದಾದ ಬಾಗಿಲಿನಿಂದಲೇ ಒಳಕ್ಕೆ ಹೋಗಿರಿ. ಏಕೆಂದರೆ ವಿನಾಶಕ್ಕೆ ಒಯ್ಯುವ ಬಾಗಿಲು ಹಿರಿದು; ಅದರ ಮಾರ್ಗ ಸರಾಗ; ಅದನ್ನು ಹಿಡಿಯುವವರು ಅನೇಕರು.
14 : ಅಮರ ಜೀವಕ್ಕೆ ಕೊಂಡೊಯ್ಯುವ ಮಾರ್ಗ ದುರ್ಭರ; ಅದರ ಬಾಗಿಲು ಕಿರಿದು; ಅದನ್ನು ಗುರುತಿಸುವವರೋ ಕೆಲವರು." ಸುಳ್ಳು ಪ್ರವಾದಿಗಳಿದ್ದಾರೆ
------------------
ಆಧುನಿಕ ಯುಗದಲ್ಲಿ ಮನುಷ್ಯನ ಇತರ ಗುಣಗಳಿಗಿಂತ ಅವನ ಸ್ವಾರ್ಥ ಅವನನ್ನು ಮೆರೆಸುತ್ತದೆ. ಎಲ್ಲವೂ ತನಗೆ ಬೇಕು, ಸರ್ವಕ್ಕೂ ಅವನೇ ಒಡೆಯನಾಗಬೇಕು ಎಂಬ ದುರಾಸೆ ಅವನನ್ನು ಪಾಪದ ಕೂಪಕ್ಕೆ ತಳ್ಳಿಬಿಡುತ್ತದೆ. ಮೋಸ ವಂಚನೆಯಿಂದ ನಾಶ ವಿಮೋಚನೆಗಳಿಗೆ ತುತ್ತಾಗುವರು ಜನ. ಇಂದಿನ ಮೊದಲನೆಯ ವಾಚನದಲ್ಲಿ ಇಂತಹ ಒಂದು ಸನ್ನಿವೇಶವನ್ನು ನಾವು ಕಾಣುತ್ತೇವೆ. ರಾಜ್ಯಗಳನ್ನು ತಾತ್ಕಾಲಿಕವಾಗಿ ಆಳುವ ರಾಜರುಗಳ ಸ್ವಾರ್ಥ-ದುರಾಶೆಯನ್ನು ಕಾಣುತ್ತೇವೆ. ಹೌದುಹಲವಾರು ಬಾರಿ ನಾವು ಸ್ವರ್ಗವನ್ನೂ ಭುವಿಯನ್ನೂ ಸೃಷ್ಟಿಸಿದ ತಂದೆ ದೇವರೇ ಸರ್ವಕ್ಕೂ ಒಡೆಯ ಎಂಬುದನ್ನು ಮರೆತು ನಾವು ಜೀವನದಲ್ಲಿ ಸಾಗುತ್ತೇವೆ. ಕುರಿತಾಗಿ ಕ್ರೈಸ್ತರ ಮನದಲ್ಲಿನ ಅರಿವು ಮೂಡಿ ಬರಬೇಕಿದೆ. ಸ್ವಾರ್ಥ ತೊರೆದು ಪ್ರೀತಿ-ಸ್ನೇಹ-ಸೇವೆಯ ಮಾರ್ಗದಲ್ಲಿ ನಡೆಯಬೇಕಿದೆ.

No comments:

Post a Comment