[ಹಸಿರು]
ಸಂತ
ನಾರ್ಬರ್ಟ್
[ಧರ್ಮಾಧ್ಯಕ್ಷ]
(ಐಚ್ಛಿಕ
ಸ್ಮರಣೆ)
ಮೊದಲ
ವಾಚನ:
2 ತಿಮೊಥಿ
4.1-8
ಕೀರ್ತನೆ
71:8-9, 15-16, 17, 22 ಶ್ಲೋಕ.15
ವರ್ಣಿಸುವೆನು
ದಿನವೆಲ್ಲ
ನಿನ್ನ
ನ್ಯಾಯ
ನೀತಿಯನು
ಶುಭಸಂದೇಶ:
ಮಾರ್ಕ
12.38-44
ಮೊದಲ
ವಾಚನ:
2 ತಿಮೊಥಿ
4.1-8
1 : ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನು ಅವರ ಪ್ರತ್ಯಕ್ಷತೆಯನ್ನೂ ಸಾಮ್ರಾಜ್ಯವನ್ನೂ ಮುಂದಿಟ್ಟು ನಿನಗೆ ಆಜ್ಞಾಪಿಸುವುದೇನೆಂದರೆ:
2 : ನೀನು ದೇವರ ವಾಕ್ಯವನ್ನು ಆಸಕ್ತಿಯಿಂದ ಕಾಲ ಅಕಾಲಗಳನ್ನು ಲೆಕ್ಕಿಸದೆ ಬೋಧಿಸು. ಸತ್ಯವನ್ನು ಮನಗಾಣಿಸು; ತಪ್ಪನ್ನು ತಿದ್ದು; ಒಳ್ಳೆಯದನ್ನು ಪ್ರೋತ್ಸಾಹಿಸು; ತಾಳ್ಮೆಯನ್ನು ಕಳೆದುಕೊಳ್ಳದೆ ಉಪದೇಶಮಾಡು.
3 : ಜನರು ಸದ್ಬೋಧನೆಯನ್ನು ಸಹಿಸದೆ, ಸ್ವೇಚ್ಛಾಚಾರಿಗಳಾಗುವ ಕಾಲವು ಬರುತ್ತದೆ. ತಮ್ಮ ದುರಿಚ್ಛೆಗಳಿಗೆ ಅನುಗುಣವಾಗಿ ಬೋಧಿಸುವವರಿಗೆ ಕಾತರದಿಂದ ಕಿವಿಗೊಡಲು ಕೂಡಿಕೊಳ್ಳುತ್ತಾರೆ.
4 : ಸತ್ಯಕ್ಕೆ ಕಿವಿಗೊಡದೆ ಕಟ್ಟುಕತೆಗಳನ್ನು ಕೇಳಲು ಅಲೆದಾಡುತ್ತಾರೆ.
5 : ಆದರೆ, ನೀನು ಎಲ್ಲ ಸನ್ನಿವೇಶಗಳಲ್ಲೂ ಸ್ಥಿರಚಿತ್ತದಿಂದಿರು. ಕಷ್ಟವನ್ನು ಸಹಿಸಿಕೋ. ಶುಭಸಂದೇಶವನ್ನು ನಿಷ್ಠೆಯಿಂದ ಸಾರು; ನಿನ್ನ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸು.
6 : ನಾನು ಯಜ್ಞಪಶುವಾಗಿ ಅರ್ಪಿತನಾಗುವ ಸಮಯವು ಬಂದಿದೆ. ಈ ಲೋಕದಿಂದ ತೆರಳಬೇಕಾದ ಕಾಲವೂ ಕೂಡಿಬಂದಿದೆ
7 : ಬಾಳಿನ ಸ್ಪರ್ಧೆಯಲ್ಲಿ ಭಾಗವಹಿಸಿದ್ದೇನೆ. ನನ್ನ ಓಟವನ್ನು ಮುಗಿಸಿದ್ದೇನೆ. ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ.
8 : ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು.
ಕೀರ್ತನೆ
71:8-9, 15-16, 17, 22 ಶ್ಲೋಕ.15
ವರ್ಣಿಸುವೆನು
ದಿನವೆಲ್ಲ
ನಿನ್ನ
ನ್ಯಾಯ
ನೀತಿಯನು
8 : ನಿನ್ನ ಗುಣಗಾನ ನನ್ನ ಬಾಯ್ತುಂಬ / ನಿನ್ನ ಘೋಷಣೆ ನನಗೆ ದಿನವಾದ್ಯಂತ //
9 : ವೃದ್ಧಾಪ್ಯದಲಿ ನನ್ನ ತಳ್ಳಿ ಬಿಡಬೇಡಯ್ಯಾ / ಶಕ್ತಿ ಕುಂದುತ್ತಿರುವಾಗ ಕೈ ಬಿಡಬೇಡಯ್ಯಾ //
14 : ನಾನಂತು ನಂಬಿರುವೆ ನಿನ್ನ ನಿರಂತರವಾಗಿ / ನಿನ್ನನು ಕೀರ್ತಿಸುತ್ತಿರುವೆ ಅಧಿಕಾಧಿಕವಾಗಿ //
15 : ವರ್ಣಿಸುವೆನು ದಿನವೆಲ್ಲ ನಿನ್ನ ನ್ಯಾಯ ನೀತಿಯನು / ವಿವರಿಸಲು ಅಸದಳವಾದ ನಿನ್ನಗಣಿತ ರಕ್ಷಣೆಯನು //
16 : ಸ್ವಾಮಿ ದೇವಾ, ಸ್ಮರಿಸುವೆನು ನಿನ್ನ ಮಹತ್ಕಾರ್ಯಗಳನೆ / ಪ್ರಕಟಪಡಿಸುವೆನು ನಿನ್ನೊಬ್ಬನ ನ್ಯಾಯನೀತಿಯನೆ //
17 : ದೇವಾ, ಬಾಲ್ಯಾರಭ್ಯ ನನಗೆ ಬೋಧಿಸಿರುವೆಯಲ್ಲವೆ?/ ನಿನ್ನ ಅದ್ಭುತ ಕಾರ್ಯಗಳನೆಂದಿಗು ನಾ ಘೋಷಿಸುತ್ತಿರುವೆ //
22 : ನಿನ್ನ ಸತ್ಯತೆಗಾಗಿ ಓ ಎನ್ನ ದೇವಾ / ಕಿನ್ನರಿಯನು ನುಡಿಸುತಾ ಭಜಿಸುವೆನಯ್ಯಾ // ಇಸ್ರಯೇಲಿನ ಆ ಪರಮಪಾವನ ಸ್ವಾಮಿಯ / ವೀಣೆವಾದ್ಯದೊಂದಿಗೆ ಕೀರ್ತಿಸುವೆನಯ್ಯಾ //
ಶುಭಸಂದೇಶ:
ಮಾರ್ಕ
12.38-44
38 : ಜನಸಮೂಹವು ಸಂತಸಚಿತ್ತದಿಂದ ಯೇಸುಸ್ವಾಮಿಯ ಮಾತುಗಳನ್ನು ಆಲಿಸುತ್ತಿತ್ತು. ಯೇಸು ತಮ್ಮ ಉಪದೇಶವನ್ನು ಮುಂದುವರಿಸುತ್ತಾ,
39 : “ಧರ್ಮಶಾಸ್ತ್ರಿಗಳ ಬಗ್ಗೆ ಎಚ್ಚರಿಕೆ! ಅವರು ನಿಲುವಂಗಿಗಳನ್ನು ಧರಿಸಿಕೊಂಡು ತಿರುಗಾಡುತ್ತಾರೆ; ಪೇಟೆ ಬೀದಿಗಳಲ್ಲಿ ವಂದನೋಪಚಾರಗಳನ್ನೂ ಪ್ರಾರ್ಥನಾ ಮಂದಿರಗಳಲ್ಲಿ ಉನ್ನತ ಆಸನಗಳನ್ನೂ ಔತಣ ಸಮಾರಂಭಗಳಲ್ಲಿ ಶ್ರೇಷ್ಠಸ್ಥಾನಗಳನ್ನೂ ಅಪೇಕ್ಷಿಸುತ್ತಾರೆ.
40 : ವಿಧವೆಯರ ಮನೆಮಾರುಗಳನ್ನು ದೋಚಿಕೊಳ್ಳುವ ಈ ಜನ ನಟನೆಗಾಗಿ ದೀರ್ಘವಾಗಿ ಜಪತಪಗಳನ್ನು ಮಾಡುತ್ತಾರೆ. ಇವರನ್ನು ದೇವರು ಬಹಳ ಕಠಿಣವಾದ ದಂಡನೆಗೆ ಗುರಿಪಡಿಸುವರು,” ಎಂದರು.
41 : ಯೇಸುಸ್ವಾಮಿ ದೇವಾಲಯದಲ್ಲಿ ಕಾಣಿಕೆ ಪೆಟ್ಟಿಗೆಗಳಿಗೆ ಎದುರಾಗಿ ಕುಳಿತಿದ್ದರು. ಜನರು ಅದರಲ್ಲಿ ಹಣಹಾಕುವ ರೀತಿ ಅವರ ಕಣ್ಣಿಗೆ ಬಿತ್ತು. ಧನವಂತರನೇಕರು ಹೆಚ್ಚು ಹೆಚ್ಚು ಹಣವನ್ನು ಹಾಕುತ್ತಿದ್ದರು.
42 : ಅಷ್ಟರಲ್ಲಿ ಬಡ ವಿಧವೆ ಒಬ್ಬಳು ಅಲ್ಲಿಗೆ ಬಂದಳು. ತಾಮ್ರದ ಚಿಕ್ಕ ನಾಣ್ಯಗಳೆರಡನ್ನು ಕಾಣಿಕೆಯಾಗಿ ಹಾಕಿದಳು.
43 : ಆಗ ಯೇಸು ತಮ್ಮ ಶಿಷ್ಯರನ್ನು ಕರೆದು, “ಕಾಣಿಕೆ ಪೆಟ್ಟಿಗೆಯಲ್ಲಿ ಹಣ ಹಾಕಿದ ಎಲ್ಲರಿಗಿಂತಲೂ ಈ ವಿಧವೆ ಹೆಚ್ಚಾಗಿ ಅರ್ಪಿಸಿದಳು ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ;
44 : ಇವರೆಲ್ಲರೂ ತಮ್ಮ ಅಪರಿಮಿತ ಐಶ್ವರ್ಯದಿಂದ ಕಾಣಿಕೆಯಿತ್ತರು. ಈಕೆಯಾದರೋ ತನ್ನ ಕಡುಬಡತನದಲ್ಲೂ ತನ್ನಲ್ಲಿ ಇದ್ದುದೆಲ್ಲವನ್ನು ಅರ್ಪಿಸಿದಳು; ತನ್ನ ಜೀವನಾಧಾರವನ್ನೇ ಕೊಟ್ಟುಬಿಟ್ಟಳು,” ಎಂದರು.
----------------------
ಇಂದಿನ ಶುಭಸಂದೇಶದಲ್ಲಿ ನಾವು ಕೇಳುತ್ತೇವೆ: “ ಬಡ ವಿಧವೆಯೊಬ್ಬಳು, ತಾಮ್ರದ ಚಿಕ್ಕ ನಾಣ್ಯಗಳೆರಡನ್ನು ಕಾಣಿಕೆಯಾಗಿ ಅರ್ಪಿಸಿದ್ದು.” ಈ ಬಡ ವಿಧವೆ ಎರಡೇ ಎರಡು ಚಿಕ್ಕ ನಾಣ್ಯಗಳನ್ನು ಹಾಕಿದಳು, ಆಕೆ ಅವಳ ಕಡುಬಡತನದಲಲ್ಲೂ ತನ್ನಲ್ಲಿ ಇದ್ದುದೆಲ್ಲವನ್ನು ಅರ್ಪಿಸುತ್ತಾಳೆ; ತನ್ನ ಜೀವನಾಧಾರವನ್ನೇ ದೇವರಿಗೆ ಸಮರ್ಪಿಸುತ್ತಾಳೆ. ಆ ಬಡವಿಧವೆಯ ರೀತಿ ನಾವು ಸಹ ನಮ್ಮ ಜೀವನಾಧಾರವನ್ನೇ ದೇವರಿಗೆ ಸಮರ್ಪಿಸಲು ಪ್ರಯತ್ನಿಸೋಣ. ಅಷ್ಟು ಮಾತ್ರವಲ್ಲದೇ ಪ್ರಭು ಯೇಸುವಿನೊಂದಿಗೆ ನಾವು ಸಹ ನಮ್ಮನ್ನೇ ಕಾಣಿಕೆಯಾಗಿ ಆ ತಂದೆ ದೇವರಿಗೆ ಈ ಬಲಿಪೂಜೆಯಲ್ಲಿ ಅರ್ಪಿಸಿಕೊಳ್ಳೋಣ.
-----------------
No comments:
Post a Comment