ಜೂನ್ 19, 2020 ಶುಕ್ರವಾರ [ಬಿಳಿ]
ಯೇಸುವಿನ ಪವಿತ್ರ ಹೃದಯದ ಹಬ್ಬ
ಸಂತ ರೊಮುವಾಲ್ಡ್ [ಮಠಾಧಿಪತಿ] (ಐಚ್ಛಿಕ ಸ್ಮರಣೆ)
ಮೊದಲ ವಾಚನ: ಧರ್ಮೋ 7.6-11
ಕೀರ್ತನೆ 103:1-4, 6-8, 10. ಶ್ಲೋಕ.17
ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕು
ಎರಡನೇ ವಾಚನ: 1 ಯೊವಾನ್ನ 4.7-16
ಶುಭಸಂದೇಶ: ಮತ್ತಾಯ 11.25-30
ಯೇಸುವಿನ ಪವಿತ್ರ ಹೃದಯದ ಹಬ್ಬ
ಸಂತ ರೊಮುವಾಲ್ಡ್ [ಮಠಾಧಿಪತಿ] (ಐಚ್ಛಿಕ ಸ್ಮರಣೆ)
ಮೊದಲ ವಾಚನ: ಧರ್ಮೋ 7.6-11
ಕೀರ್ತನೆ 103:1-4, 6-8, 10. ಶ್ಲೋಕ.17
ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕು
ಎರಡನೇ ವಾಚನ: 1 ಯೊವಾನ್ನ 4.7-16
ಶುಭಸಂದೇಶ: ಮತ್ತಾಯ 11.25-30
ಮೊದಲ ವಾಚನ: ಧರ್ಮೋ 7.6-11
6 : ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ವಿೂಸಲಾದ ಜನರು; ಜಗದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯ ಜನರಾಗಲು ಅವರು ಆಯ್ದುಕೊಂಡಿದ್ದಾರೆ.
7 : ನೀವು ಸಂಖ್ಯೆಯಲ್ಲಿ ಜನಾಂಗಗಳಿಗೆಲ್ಲಾ ಹೆಚ್ಚುಮಂದಿ ಎಂದು ಪ್ರೀತಿಸಿ, ಆಯ್ದುಕೊಳ್ಳಲಿಲ್ಲ; ನಿಜವಾಗಿಯೂ ನೀವು ಎಲ್ಲಾ ಜನಾಂಗಗಳಿಗಿಂತ ಅಲ್ಪಸಂಖ್ಯಾತರು.
8 : ಆದರೂ ಸರ್ವೇಶ್ವರ ನಿಮ್ಮನ್ನು ಪ್ರೀತಿಸಿ, ತಾವು ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸ ಬೇಕೆಂದು, ಈಜಿಪ್ಟಿನ ರಾಜ ಫರೋಹನ ಕೈಕೆಳಗೆ ಗುಲಾಮರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತಮ್ಮ ಭುಜಬಲ ಪ್ರಯೋಗಿಸಿ, ಆ ದೇಶದಿಂದ ಬರಮಾಡಿದ್ದಾರೆ.
9 : ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೊಬ್ಬರೇ ದೇವರೆಂದು ತಿಳಿದುಕೊಳ್ಳಬೇಕು. ಅವರೇ ನಂಬಿಕಸ್ತರಾದ ದೇವರು; ತಮ್ಮನ್ನು ಪ್ರೀತಿಸಿ ತಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ತಾವು ಮಾಡಿದ ವಾಗ್ದಾನವನ್ನು ನೆರವೇರಿಸಿ, ತಮ್ಮ ಅಚಲಪ್ರೀತಿಯನ್ನು ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ತೋರಿಸುವರು.
10 :
ತಮ್ಮನ್ನು ತಿರಸ್ಕರಿಸಿದವರಿಗೆ ಪ್ರತಿಯಾಗಿ ನಾಶವನ್ನು ಉಂಟುಮಾಡುವರು. ಇದನ್ನು ನೀವು ತಿಳಿದುಕೊಳ್ಳಬೇಕು. ಹಗೆಯವರ ವಿಷಯದಲ್ಲಿ ಅವರು ತಡಮಾಡದೆ ಆಗಲೇ ಮುಯ್ಯಿತೀರಿಸುವರು.
11 :
ಆದಕಾರಣ ನಾನು ಈ ದಿನ ನಿಮಗೆ ಬೋಧಿಸುವ ಧರ್ಮೋಪದೇಶವನ್ನೂ ಆಜ್ಞಾವಿಧಿಗಳನ್ನೂ ನೀವು ಅನುಸರಿಸಿ ನಡೆಯಬೇಕು.
ಕೀರ್ತನೆ 103:1-4, 6-8, 10. ಶ್ಲೋಕ.17
ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕು
ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕು
1 : ಭಜಿಸು ನನ್ನ ಮನವೇ, ಭಜಿಸು ಪ್ರಭುವನು / ನನ್ನ ಅಂತರಂಗವೇ, ಭಜಿಸು ಆತನನು / ನೆನೆ ಆತನ ಪರಮಪಾವನ ನಾಮವನು //
2 : ಭಜಿಸು ನನ್ನ ಮನವೇ, ಭಜಿಸು ಪ್ರಭುವನು / ಮರೆಯದಿರು ಆತನ ಉಪಕಾರಗಳೊಂದನು //
3 : ಮನ್ನಿಸುವನಾತ ನನ್ನ ದೋಷಗಳನು / ವಾಸಿಮಾಡುವನು ನನ್ನ ರೋಗಗಳನು //
4 : ಉಳಿಸುವನು ಪಾತಾಳದ ಕೂಪದಿಂದ ನನ್ನನು / ಮುಡಿಸುವನೆನಗೆ ದಯದಾಕ್ಷಿಣ್ಯದ ಮುಕುಟವನು //
5 : ಒಳ್ಳೆಯವುಗಳಿಂದ ತುಂಬಿಸುವನು ನನ್ನ ಜೀವಮಾನವನು / ಪುನರುಜ್ಜೀವನಗೊಳಿಸುವನು ಗರುಡನಂತೆ ನನ್ನ ಯೌವನವನು //
6 : ಸಾಧಿಸುವನು ಪ್ರಭು ನ್ಯಾಯನೀತಿಯನು / ದೊರಕಿಸುವನು ಶೋಷಿತರಿಗೆ ನ್ಯಾಯವನು //
7 : ತೋರಿಸಿದಾತ ತನ್ನ ಮಾರ್ಗವನು ಮೋಶೆಗೆ / ತನ್ನ ಮಹತ್ಕಾರ್ಯಗಳನು ಇಸ್ರಯೇಲರಿಗೆ //
8 : ಪ್ರಭು ದಯಾಳು, ಕೃಪಾಪೂರ್ಣನು / ಸಹನಶೀಲನು, ಪ್ರೀತಿಮಯನು //
10 :
ನಮ್ಮ ಪಾಪಗಳಿಗೆ ತಕ್ಕಂತೆ ಆತ ವರ್ತಿಸಲಿಲ್ಲ / ನಮ್ಮ ಅಪರಾಧಗಳಿಗೆ ತಕ್ಕಹಾಗೆ ದಂಡಿಸಲಿಲ್ಲ //
ಎರಡನೇ ವಾಚನ: 1 ಯೊವಾನ್ನ 4.7-16
7 : ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಪ್ರೀತಿ ದೇವರಿಂದ ಉಗಮವಾದುದು. ಪ್ರೀತಿಸುವವನು ದೇವರ ಮಗನು. ಅವನು ದೇವರನ್ನು ಬಲ್ಲವನು.
8 : ಪ್ರೀತಿಸದವನು ದೇವರನ್ನು ಬಲ್ಲವನಲ್ಲ. ಏಕೆಂದರೆ, ದೇವರು ಪ್ರೀತಿಸ್ವರೂಪಿ.
9 : ತಮ್ಮ ಏಕೈಕ ಪುತ್ರನ ಮುಖಾಂತರ ನಾವು ಸಜ್ಜೀವವನ್ನು ಪಡೆಯುವಂತೆ ದೇವರು ಅವರನ್ನು ಲೋಕಕ್ಕೆ ಕಳುಹಿಸಿದರು. ನಮ್ಮ ಮೇಲೆ ದೇವರಿಗಿರುವ ಪ್ರೀತಿ ಹೀಗೆ ವ್ಯಕ್ತವಾಯಿತು.
10 :
ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ಅವರು ನಮ್ಮನ್ನು ಪ್ರೀತಿಸಿ ನಮ್ಮ ಪಾಪನಿವಾರಣಾರ್ಥವಾಗಿ ತಮ್ಮ ಪುತ್ರನನ್ನು ಕಳುಹಿಸಿದ್ದರಲ್ಲಿಯೇ ಪ್ರೀತಿಯ ನಿಜ ಗುಣ ತೋರಿಬರುತ್ತದೆ.
11 :
ಪ್ರಿಯರೇ, ದೇವರೇ ನಮ್ಮನ್ನು ಇಷ್ಟಾಗಿ ಪ್ರೀತಿಸಿರುವಲ್ಲಿ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸಲೇಬೇಕು.
12 :
ದೇವರನ್ನು ಯಾರೂ ಎಂದೂ ನೋಡಿಲ್ಲ. ಆದರೂ ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಸಿರುತ್ತಾರೆ. ಅವರ ಪ್ರೀತಿ ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.
13 :
ದೇವರು ನಮಗೆ ತಮ್ಮ ಆತ್ಮವನ್ನು ನೀಡಿರುವುದರಿಂದಲೇ ನಾವು ಅವರಲ್ಲಿಯೂ ಅವರು ನಮ್ಮಲ್ಲಿಯೂ ನೆಲೆಸಿರುವುದನ್ನು ತಿಳಿದುಕೊಳ್ಳುತ್ತೇವೆ.
14 :
ಪಿತನು ತಮ್ಮ ಪುತ್ರನನ್ನು ಲೋಕೋದ್ಧಾರಕನನ್ನಾಗಿ ಕಳುಹಿಸಿಕೊಟ್ಟದ್ದನ್ನು ನಾವು ಕಣ್ಣಾರೆ ಕಂಡಿದ್ದೇವೆ. ಇದರ ವಿಷಯವಾಗಿ ಸಾಕ್ಷಿ ಹೇಳುತ್ತೇವೆ.
15 :
ಯೇಸುವೇ ದೇವರ ಪುತ್ರನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಸಿದ್ದಾರೆ; ಅವನೂ ದೇವರಲ್ಲಿ ನೆಲೆಸಿದ್ದಾನೆ.
16 :
ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿ ನಮಗೆ ಗೊತ್ತಿದೆ. ಅದರಲ್ಲಿ ನಮಗೆ ವಿಶ್ವಾಸವಿದೆ. ದೇವರು ಪ್ರೀತಿಸ್ವರೂಪಿ. ಪ್ರೀತಿಯಲ್ಲಿ ನೆಲೆಸಿರುವವನು ದೇವರಲ್ಲಿ ನೆಲೆಸಿದ್ದಾನೆ. ದೇವರೂ ಅವನಲ್ಲಿ ನೆಲೆಸಿರುತ್ತಾರೆ.
Gospel
ಶುಭಸಂದೇಶ: ಮತ್ತಾಯ 11.25-30
25 :
ಆ ಸಮಯದಲ್ಲಿ ಯೇಸುಸ್ವಾಮಿ, "ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.
26 :
ಹೌದು, ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.
27 :
"ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು. ಶ್ರಮಜೀವಿಗಳಿಗೆ ವಿಶ್ರಾಂತಿದಾತ
28 :
"ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುತ್ತೇನೆ.
29 :
ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು.
30 ನನ್ನ ನೊಗ ಹಗುರ, ನನ್ನ ಹೊರೆ ಸುಗಮ," ಎಂದರು.
-----------------
ಸಂತ ಮಾರ್ಗರೆಟ್ ಮರಿಯ ಎಂಬ ಕನ್ಯಾಸ್ತ್ರೀಗೆ 1673 ರಿಂದ 1675ರ ನಡುವೆ ಹಲವಾರು ಬಾರಿ ಕ್ರಿಸ್ತರ ದರ್ಶನವಾಯಿತು. ಈ ಸಮಯದಲ್ಲಿ ಆಕೆಗೆ ಕ್ರಿಸ್ತ ಅನೇಕ ವಿಷಯಗಳ ಬಗ್ಗೆ ನಿರೀಕ್ಷೆ ಹಾಗೂ ನಂಬಿಕೆಯಿಡುವಂತೆ ಹೇಳಿದರು. ಪವಿತ್ರ ಹೃದಯದ ಬಗ್ಗೆ ನಿರೀಕ್ಷೆ ಹಾಗೂ ನಂಬಿಕೆಯಿಡುವಂತೆ ಹೇಳಿದರು. ಪವಿತ್ರ ಹೃದಯದ ಕ್ರಿಸ್ತ ಹೇಳಿದ್ದೇನೆಂದರೆ; ಯಾರೆಲ್ಲಾ ನನ್ನ ಪವಿತ್ರ ಹೃದಯದ ಆರಾಧನೆ ಮಾಡುತ್ತಾರೋ
-ನಾನು ಅವರಿಗೆ ವರದಾನಗಳ ಆಶೀರ್ವಚನ ನೀಡುವೆ.
- ಅವರ ಕುಟುಂಬಕ್ಕೆ ಶಾಂತಿ ನೀಡುವೆ.
- ಅವರ ಕಷ್ಟಗಳಲ್ಲಿ ಸಾಂತ್ವನ ನೀಡುವೆ
- ಮರಣದ ವೇಳೆಯಲ್ಲಿ ಅವರನ್ನು ಸ್ವಾಗತಿಸುವೆ
- ಪಾಪಿಗಳು ಮನವರ್ತನೆ ಹೊಂದುವಲ್ಲಿ ಅವರಿಗೆ ಮರುಕ ತೋರುವೆ.
- ನನ್ನ ಪವಿತ್ರ ಹೃದಯದ ಚಿತ್ರ ಎಲ್ಲೆಲ್ಲಿ ಸ್ಥಾಪಿತವಾಗಿದೆಯೋ ಆ ಎಲ್ಲಾ ಸ್ಥಳಗಳನ್ನು ಆಶೀರ್ವದಿಸುವೆ.
-------------
No comments:
Post a Comment