Tuesday, 30 June 2020

ಜುಲೈ 2, 2020 ಗುರುವಾರ

ಜುಲೈ 2, 2020 ಗುರುವಾರ [ಹಸಿರು]
ಮೊದಲ ವಾಚನ: ಆಮೋ 7.10-17 ಕೀರ್ತನೆ 19:7, 8, 9, 10. ಶ್ಲೋಕ.9
---------------------
ಪ್ರಭುವಿನ ತೀರ್ಪು ಯಥಾರ್ಥ, ನ್ಯಾಯಯುತ ಶುಭಸಂದೇಶ: ಮತ್ತಾಯ 9.1-8
ಆಮೋ 7.10-17
10 : ತರುವಾಯ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಯೇಲಿನ ಅರಸ ಯಾರೊಬ್ಬಾಮನಿಗೆ ಹೀಗೆಂದು ಹೇಳಿಕಳುಹಿಸಿದನು: “ಆಮೋಸನು ನಿನಗೆ ವಿರುದ್ಧವಾಗಿ ಇಸ್ರಯೇಲರಲ್ಲಿ ಒಳಸಂಚು ಹೂಡಿದ್ದಾನೆ. ಅವನ ಮಾತುಗಳನ್ನು ನಾಡು ಸಹಿಸಲಾರದು.
11 : ಏಕೆಂದರೆ, “ಯಾರೊಬ್ಬಾಮನು ಖಡ್ಗದಿಂದ ಹತನಾಗುವನು. ಇಸ್ರಯೇಲ್ ಸ್ವಂತ ನಾಡಿನಿಂದ ಪರದೇಶಕ್ಕೆ ಒಯ್ಯಲ್ಪಡುವುದು ಖಂಡಿತ ಎಂದು ಅವನು ನುಡಿದಿದ್ದಾನೆ.”
13 : ಬೇತೇಲಿನಲ್ಲಿ ಇನ್ನು ಪ್ರವಾದನೆ ಮಾಡಬೇಡ. ಇದು ರಾಜನ ಗರ್ಭಗುಡಿ, ರಾಜ್ಯದ ಪವಿತ್ರಾಲಯ,” ಎಂದನು.
12 : ಆ ಬಳಿಕ ಅಮಚ್ಯನು ಆಮೋಸನಿಗೆ, “ಕಣಿಹೇಳುವವನೇ, ತೊಲಗು, ಜುದೇಯ ನಾಡಿಗೆ ಓಡಿಹೋಗು; ಅಲ್ಲಿ ಪ್ರವಾದನೆಮಾಡಿ ಹೊಟ್ಟೆ ಹೊರೆದುಕೊ. 14 : ಅದಕ್ಕೆ ಆಮೋಸನು ಪ್ರತ್ಯುತ್ತರವಾಗಿ: “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ನಾನೊಬ್ಬ ಗೊಲ್ಲ, ಅತ್ತಿಹಣ್ಣನ್ನು ಕೀಳುವವನು.
16 : “ಆದ್ದರಿಂದ ಆ ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಗಮನಿಸು: ‘ಇಸ್ರಯೇಲಿಗೆ ವಿರುದ್ಧ ಪ್ರವಾದನೆ ಮಾಡಬೇಡ; ಇಸಾಕನ ಮನೆತನದ ವಿರುದ್ಧ ಮಾತೆತ್ತಬೇಡ; ಎಂದು ನೀನು ಹೇಳುತ್ತೀಯಲ್ಲವೆ?
15 : ಮಂದೆಕಾಯುವುದರಿಂದ ಸರ್ವೇಶ್ವರ ನನ್ನನ್ನು ಬಿಡಿಸಿದರು. ನೀನು ಹೋಗಿ ನನ್ನ ಜನರಾದ ಇಸ್ರಯೇಲರಿಗೆ ಪ್ರವಾದನೆಮಾಡು’ ಎಂದು ಹೇಳಿಕಳುಹಿಸಿದರು.
----------------------------
17 : ನೀನು ಹೀಗೆ ಹೇಳಿದ್ದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: ‘ನಿನ್ನ ಹೆಂಡತಿ ಈ ಪಟ್ಟಣದಲ್ಲಿ ವೇಶ್ಯೆಯಾಗುವಳು. ನಿನ್ನ ಪುತ್ರ ಪುತ್ರಿಯರು ಕತ್ತಿಗೆ ತುತ್ತಾಗುವರು. ನಿನ್ನ ನಾಡನ್ನು ಶತ್ರುಗಳು ವಶಪಡಿಸಿಕೊಂಡು ಹಂಚಿಕೊಳ್ಳುವರು. ನೀನು ಸಹ ಅಪವಿತ್ರವಾದ ನಾಡಿನಲ್ಲಿ ಸಾಯುವೆ. ಇಸ್ರಯೇಲರು ಖಂಡಿತವಾಗಿ ಸ್ವಂತ ನಾಡಿನಿಂದ ಪರದೇಶಕ್ಕೆ ಸೆರೆಯಾಗಿ ಹೋಗುವರು’,” ಎಂದು ಹೇಳಿದನು.
ಕೀರ್ತನೆ 19:7, 8, 9, 10. ಶ್ಲೋಕ.9
ಪ್ರಭುವಿನ ತೀರ್ಪು ಯಥಾರ್ಥ, ನ್ಯಾಯಯುತ
8 : ಪ್ರಭುವಿನ ನಿಯಮ ನೀತಿಬದ್ಧ; ಮನಸ್ಸಿಗದು ಒಸಗೆ / ಪ್ರಭುವಿನ ಕಟ್ಟಳೆ ಪರಿಶುದ್ಧ; ಕಣ್ಣಿಗದು ದೀವಿಗೆ //
9 : ಪ್ರಭುವಿನ ಭೀತಿ ಪವಿತ್ರ; ಅದೆಂದಿಗೂ ಶಾಶ್ವತ / ಪ್ರಭುವಿನ ತೀರ್ಪು ಯಥಾರ್ಥ; ಪರಿಪೂರ್ಣ ನ್ಯಾಯಯುತ //
11 : ಜಾಗೃತಗೊಳ್ಳುವನು ನಿನ್ನ ದಾಸನು ಅವುಗಳಿಂದ / ಸಂಭಾವಿತನಾಗುವನು ಅವುಗಳ ಪಾಲನೆಯಿಂದ //
10 : ಅಪೇಕ್ಷಣೀಯವಾದುವವು ಚಿನ್ನ ಅಪರಂಜಿಗಿಂತ / ಅತಿಮಧುರವಾದುವು ಅಪ್ಪಟ ಜೇನುತುಪ್ಪಕ್ಕಿಂತ //
--------------------
ಮತ್ತಾಯ 9.1-8
1 : ಯೇಸುಸ್ವಾಮಿ ದೋಣಿ ಹತ್ತಿ ಮರಳಿ ಸರೋವರವನ್ನು ದಾಟಿ ತಮ್ಮ ಸ್ವಂತ ಊರಿಗೆ ಬಂದರು.
2 : ಆಗ ಜನರು ಒಬ್ಬ ಪಾಶ್ರ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅವರ ಬಳಿಗೆ ತಂದರು. ಯೇಸು ಅವರ ವಿಶ್ವಾಸವನ್ನು ಮೆಚ್ಚಿ, ಆ ಪಾಶ್ರ್ವವಾಯು ರೋಗಿಗೆ, "ಮಗು ಧೈರ್ಯದಿಂದಿರು. ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ," ಎಂದರು
3 : ಆಗ ಅಲ್ಲಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, "ಇವನು ದೇವದೂಷಣೆ ಮಾಡುತ್ತಿದ್ದಾನೆ," ಎಂದುಕೊಂಡರು. 4 : ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು, "ನೀವು ಮನಸ್ಸಿನಲ್ಲೇಕೆ ದುರಾಲೋಚನೆ ಮಾಡುತ್ತಿದ್ದೀರಿ?
6 : ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರ ಉಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು," ಎಂದು ಹೇಳಿ, ಆ ಪಾಶ್ರ್ವವಾಯು ರೋಗಿಯನ್ನು ನೋಡಿ, "ಎದ್ದೇಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು" ಎಂದರು.
5 : "ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ" ಎನ್ನುವುದು ಸುಲಭವೋ ಅಥವಾ ‘ಎದ್ದು ನಡೆ’ ಎನ್ನುವುದು ಸುಲಭವೋ? 7 : ಅದರಂತೆಯೇ, ಆ ರೋಗಿ ಎದ್ದು ಮನೆಗೆ ಹೊರಟುಹೋದನು. 8 : ಇದನ್ನು ಕಂಡ ಜನರು ತಲ್ಲಣಗೊಂಡರು. ಮಾನವನಿಗೆ ಇಂಥ ಅಧಿಕಾರ ಕೊಟ್ಟ ದೇವರನ್ನು ಕೊಂಡಾಡಿದರು.
--------------------------
ಇಂದಿನ ವಾಚನದಲ್ಲಿ ಆಮಚ್ಯನು ದೇವರು ಆರಿಸಲ್ಪಟ್ಟ ಆಮೋಸನ ವಿರುದ್ಧ ಕಿಡಿಕಾರಿ, ದೂಷಿಸುತ್ತಾರೆ. ದೈವ ಪಾಕ್ಯವನ್ನು ಮತ್ತು ದೈವ ಪ್ರಜೆಯನ್ನು ನಿಂದಿಸಿದ ಪರಿಣಾಮ, ಸಾವು-ನೋವು ಕಟ್ಟಿಟ್ಟ ಬುತ್ತಿಯಾಗಿರುತ್ತದೆ. ಅರಸ ಮತ್ತು ಯಾಜಕ ಆಮಾತ್ಯನು ದೇವರ ಸತ್ಸಂಬಂಧದಿಂದ ದೂರವಿದ್ದು ದೈವ ಪ್ರೀತಿಗೆ ಅಪಾತ್ರರಾಗುತ್ತಾರೆ.
ಶುಭಸಂದೇಶದಲ್ಲಿ ಯೇಸು ಜನರ ವಿಶ್ವಾಸವನ್ನು ಮೆಚ್ಚಿ ಒರ್ವ ಪಾಶ್ರ್ವವಾಯು ರೋಗಿಯನ್ನು ಗುಣಪಡಿಸುತ್ತಾರೆ. ಧರ್ಮಶಾಸ್ತ್ರಿಗಳು ಯೇಸುವಿನ ಅಧಿಕಾರವಾಣಿ ಮತ್ತು ಗುಣಪಡಿಸುವ ಶಕ್ತಿ ಪಿತನಿಂದ ಬಂದದ್ದು ಎಂಬುದನ್ನು ಅರಿತುಕೊಳ್ಳಲು ವಿಫಲರಾಗುತ್ತಾರೆ. ಯೇಸು ಪಾಪ ನಿವಾರಕನು ಹೌದು ನಮ್ಮ ಎಲ್ಲಾ ಮಾನಸಿಕ ಆಧ್ಯಾತ್ಮಿಕ ಮತ್ತು ದೈಹಿಕ ನ್ಯೂನತೆಗಳನ್ನು ಗುಣಪಡಿಸುವ ಸೌಖ್ಯದಾಯಕನು ಹೌದಾಗಿದೆ. ಆದ್ದರಿಂದ ನಾವೆಲ್ಲರೂ ನಮ್ಮೆಲ್ಲರ ಮಾನಸಿಕ, ಆಧ್ಯಾತ್ಮಿಕ ಮತ್ತು ದೈಹಿಕ ರೋಗಗಳನ್ನು ಗುಣಪಡಿಸಿ ನಮ್ಮ ವಿಶ್ವಾಸವನ್ನು ಅಧಿಕಗೊಳಿಸಲೆಂದು ಪ್ರಾರ್ಥಿಸೋಣ.
--------------
ದನಿ ಮಾಧ್ಯಮ ಮನೆ

No comments:

Post a Comment