Wednesday, 1 July 2020

ಜುಲೈ 10, 2020 ಶುಕ್ರವಾರ

ಜುಲೈ 10, 2020 ಶುಕ್ರವಾರ [ಹಸಿರು]ಮೊದಲ ವಾಚನ: ಹೊಶೇ 14.1-9
ನಿನ್ನ ಸತ್ಯ ಸಂಧತೆಯನು ಸಾರುವೆ ಮುಕ್ತ ಕಂಠದಿಂದಕೀರ್ತನೆ 51:1-2, 6-7, 10-11, 12, 14. ಶ್ಲೋಕ.14
ಶುಭಸಂದೇಶ: ಮತ್ತಾಯ 10.16-23 
====================
ಮೊದಲ ವಾಚನ: ಹೊಶೇ 14.1-9
1 : ಇಸ್ರಯೇಲ್, ನಿನ್ನ ಸರ್ವೇಶ್ವರನಾದ ದೇವರ ಬಳಿಗೆ ಹಿಂದಿರುಗು. ನಿನ್ನ ಪಾಪದ್ರೋಹಗಳೇ ನಿನ್ನ ಪತನಕ್ಕೆ ಕಾರಣ.
2 : ಆದುದರಿಂದ ಪಶ್ಚಾತ್ತಾಪದ ಮಾತುಗಳೊಂದಿಗೆ ದೇವರಿಗೆ ಅಭಿಮುಖವಾಗಿ, “ಪ್ರಭುವೇ, ನಮ್ಮ ಅಪರಾಧವನ್ನು ತೊಡೆದುಹಾಕು. ನಮ್ಮಲ್ಲಿ ಒಳಿತಾದುದನ್ನೇ ಅಂಗೀಕರಿಸು. ನಿನಗೆ ಸ್ತುತಿಬಲಿಯನ್ನು ಸಮರ್ಪಿಸುವೆವು.
3 : ಅಸ್ಸೀರಿಯದಿಂದ ನಮಗೆ ರಕ್ಷಣೆ ದೊರಕದು. ನಾವು ಕಾಳಗದ ಕುದುರೆಗಳ ಮೇಲೆ ಇನ್ನೆಂದೂ ಸವಾರಿ ಮಾಡೆವು. ನಮ್ಮ ಕೈಗಳು ನಿರ್ಮಿಸಿರುವ ವಿಗ್ರಹಗಳನ್ನು ವೀಕ್ಷಿಸಿ, ‘ನೀವೇ ನಮ್ಮ ದೇವರು’ ಎಂದು ಜಪಿಸೆವು. ಓ ದೇವಾ, ದಿಕ್ಕಿಲ್ಲದವರಿಗೆ ಕರುಣೆತೋರಿಸುವವನು ನೀನೇ,” ಎಂದು ಹೇಳು.4 : ಸರ್ವೇಶ್ವರ ಇಂತೆನ್ನುತ್ತಾರೆ: ಪರಿಹರಿಸುವೆನು ಜನರ ಭ್ರಷ್ಟತನವನು ಪ್ರೀತಿಸುವೆನು ಮನಪೂರ್ವಕವಾಗಿ ಅವರನು ತ್ಯಜಿಸಿಬಿಡುವೆನು ಅವರ ಮೇಲಿದ್ದ ಕೋಪವನು.
7 : ಮರಳಿ ಆಶ್ರಯಿಸುವರು ನನ್ನ ನೆರಳನ್ನು ಆ ಜನತೆ ಅಭಿವೃದ್ಧಿಯಾಗುವರು ಉದ್ಯಾನವನದಂತೆ ಫಲಪ್ರದವಾಗುವರು ಆ ಜನರು ದ್ರಾಕ್ಷಾಲತೆಯಂತೆ ಸುಪ್ರಸಿದ್ಧ ಅವರ ಕೀರ್ತಿ ಲೆಬನೋನಿನ ದ್ರಾಕ್ಷಾರಸದಂತೆ.5 : ಇರುವೆನು ಇಸ್ರಯೇಲಿಗೆ ಇಬ್ಬನಿಯಂತೆ ಅರಳುವುದು ಆ ನಾಡು ತಾವರೆಯಂತೆ ಬೇರೂರುವುದು ಲೆಬನೋನಿನ ದೇವದಾರು ವೃಕ್ಷದಂತೆ. 6 : ಹರಡಿಕೊಳ್ಳುವುದದು ಮರದ ರೆಂಬೆಗಳಂತೆ ಕಂಗೊಳಿಸುವುದು ಚೆಲುವಾದ ಓಲಿವ ಮರದಂತೆ ಅದರ ಪರಿಮಳ ಮನೋಹರ ಲೆಬನೋನಿನ ಲತೆಗಳಂತೆ.
9 : ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿ ಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.
8 : ನುಡಿವುದು ಎಫ್ರಯಿಮ್, “ನನಗಿನ್ನು ಬೇಡ ವಿಗ್ರಹಗಳ ಗೊಡವೆ”. ಅದಕ್ಕೆ ಒಲಿದು ಕಟಾಕ್ಷಿಸುವವನು ನಾನೇ ಅದಕ್ಕೆ ಹಚ್ಚಹಸಿರಾದ ತುರಾಯಿಮರದಂತಿರುವೆ ಅದಕ್ಕೆ ಫಲವನ್ನು ನೀಡುವವನು ನಾನೇ.”
===============

ಕೀರ್ತನೆ 51:1-2, 6-7, 10-11, 12, 14. 
ಶ್ಲೋಕ.14ನಿನ್ನ ಸತ್ಯ ಸಂಧತೆಯನು ಸಾರುವೆ ಮುಕ್ತ ಕಂಠದಿಂದ 

3 : ಒಪ್ಪಿಕೊಂಡೆನಿದೋ, ನಾನೇ ಅಪರಾಧಿ / ಕಟ್ಟಿದಂತಿದೆ ಕಣ್ಗೆ ಪಾಪ ದಿನವಿಡಿ //
4 : ಹೌದು ದೇವಾ, ನಿನಗೆ ದ್ರೋಹವೆಸಗಿದೆ / ನಿನ್ನ ಕಣ್ಗೆ ಕೆಟ್ಟದುದನೆ ಮಾಡಿದೆ // ನಿನ್ನ ನಿರ್ಣಯವು ನ್ಯಾಯಯುತ / ನೀ ನೀಡುವ ತೀರ್ಪು ನಿರ್ಲಿಪ್ತ //8 : ಹರ್ಷಾನಂದವನು ಮೊಳಗಿಸೆನ್ನೊಳು / ಪುಳಕಗೊಳ್ಳುವುವು ನೀ ಮುರಿದೆಲುಬುಗಳು //
12 : ಜೀವೋದ್ಧಾರವನು ಮರಳಿ ಸವಿಯುವಂತೆ ಮಾಡು / ವಿಧೇಯನಾಗಿ ನಡೆವ ಸಿದ್ಧ ಮನಸ್ಸನು ನೀಡು //9 : ನನ್ನ ಪಾಪದೋಷಕೆ ವಿಮುಖನಾಗು / ಸರ್ವ ದ್ರೋಹಗಳನು ಅಳಿಸಿಹಾಕು //
14 : ತಪ್ಪಿಸೆನ್ನನು ಸ್ವಾಮಿ ದೇವಾ, ರಕ್ತಾಪರಾಧದಿಂದ / ನಿನ್ನ ಸತ್ಯಸಂಧತೆಯನು ಸಾರುವೆ ಮುಕ್ತ ಕಂಠದಿಂದ //13 : ಬೋಧಿಸುವೆನಾಗ ನಿನ್ನ ಮಾರ್ಗವನು ದುರುಳರಿಗೆ / ತಿರುಗಿಕೊಳ್ವರಾಗ ದ್ರೋಹಿಗಳು ನಿನ್ನ ಕಡೆಗೆ //
17 : ಮುರಿದ ಮನವೇ ದೇವನೊಲಿವ ಯಜ್ಞವು / ನೊಂದು ಬೆಂದ ಮನವನಾತ ಒಲ್ಲೆಯೆನನು //
===================
ಮತ್ತಾಯ 10.16-23
16 : "ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮ ಬುದ್ದಿಯುಳ್ಳವರೂ ಪಾರಿವಾಳಗಳಂತೆ ಸರಳ ಜೀವಿಗಳೂ ಆಗಿರಿ.17 : ಜನರ ಬಗ್ಗೆ ಜಾಗರೂಕರಾಗಿರಿ! ಅವರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಹಿಡಿದೊಪ್ಪಿಸುವರು. ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವರು.
19 : ನಿಮ್ಮನ್ನು ಹಿಡಿದೊಪ್ಪಿಸುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ. ಏಕೆಂದರೆ ನೀವು ಹೇಳಬೇಕಾದುದ್ದನ್ನು ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡಲಾಗುವುದು.18 : ನನ್ನ ನಿಮಿತ್ತ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರುಗಳ ಮುಮದೆ ಎಳೆದೊಯ್ಯುವರು. ಅವರ ಹಾಗೂ ಪರಕೀಯರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ. 20 : ಆಗ ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮವೇ ನಿಮ್ಮ ಮುಖಾಂತರ ಮಾತನಾಡುವುದು.
23 : ಒಂದು ಊರಿನಲ್ಲಿ ನಿಮ್ಮನ್ನು ಹಿಂಸೆ ಪಡಿಸಿದರೆ, ಮತ್ತೊಂದು ಊರಿನಲ್ಲಿ ಆಶ್ರಯ ಪಡೆಯಿರಿ. ನರಪುತ್ರನು ಬರುವಷ್ಟರಲ್ಲಿ ನೀವು ಇಸ್ರಯೇಲ್ ಜನರ ಊರುಗಳನ್ನೆಲ್ಲಾ ಸುತ್ತಿ ಮುಗಿಸಿರಲಾರಿರಿ; ಇದು ನಿಶ್ಚಯ.21 : ಸಹೋದರನು ಸಹೋದರನನ್ನೇ ತಂದೆಯು ಮಗನನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ಹೆತ್ತವರ ಮೇಲೆ ತಿರುಗಿ ಬಿದ್ದು ಅವರನ್ನು ಕೊಲ್ಲಿಸುವರು.
22 : ನೀವು ನನ್ನವರು; ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು.
==================
ಚಿಂತನೆ
ಯೇಸು ತಮ್ಮ ಶಿಷ್ಯರನ್ನು ಕಳುಹಿಸುವಾಗ ಎಚ್ಚರಿಕೆ ನೀಡಿ ಕಳುಹಿಸುತ್ತಾರೆ. ಕಷ್ಟ, ಹಿಂಸೆ, ಅವಮಾನ, ತಿರಸ್ಕಾರಗಳನ್ನು ಎದುರು ನೋಡಿರಿ, ನಿಮ್ಮ ಜೀವನ ಹೂವಿನ ಹಾಸಿಗೆಯಲ್ಲ ಎಂದು ಮುನ್ನೇಚ್ಚರಿಸುತ್ತಾರೆ. ಆದರೂ ಕಳುಹಿಸುವ ಮುನ್ನ ಮುಂಜಾಗರೂಕತೆಯಾಗಿರುವಂತೆ ತಿಳಿಸುತ್ತಾರೆ.- ಜನರ ಬಗ್ಗೆ ಜಾಗರೂಕರಾಗಿರಿ (v.17) - ಜಾಣರೂ, ವಿವೇಕಿಗಳೂ ಆಗಿರಿ (v.16) - ಜನರ ಮುಂದೆ ಚಿಂತಾಕ್ರಾಂತರಾಗಬೇಡಿ (v.19) - ಕುಟುಂಬಗಳು ಒಡೆದು ಹೋಗಿರುತ್ತವೆ (v.20)
- ಕೊನೆಯವರೆಗೂ ಸೈರಣೆಯಿಂದಿರಿ (v.22)
===============
@ ದನಿ ಮಾಧ್ಯಮ ಮನೆ

No comments:

Post a Comment