ಜುಲೈ 31, 2020 ಶುಕ್ರವಾರ [ಬಿಳಿ]
ಲೊಯೊಲದ ಸಂತ ಇಗ್ನೇಷಿಯಸ್ [ಯಾಜಕ] (ಸ್ಮರಣೆ)
ಮೊದಲ ವಾಚನ: ಯೆರೆಮೀಯ 26.1-9
ಕೀರ್ತನೆ 69: 4, 7-9, 13, ಶ್ಲೋಕ.13
ಪ್ರೀತಿಮಯ ದೇವಾ, ಸದುತ್ತರ ನೀಡೆನಗೆ
ಶುಭಸಂದೇಶ: ಮತ್ತಾಯ 13.54-58
ಯೆರೆಮೀಯ 26.1-9
1 : ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆರೆಮೀಯನಿಗೆ ಸರ್ವೇಶ್ವರಸ್ವಾಮಿಯಿಂದ ಈ ಅಪ್ಪಣೆ ಆಯಿತು:
2 : “ನೀನು ನನ್ನ ದೇವಾಲಯದ ಪ್ರಾಕಾರದಲ್ಲಿ ನಿಂತು, ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಜುದೇಯದ ಎಲ್ಲ ಊರಿನವರಿಗೆ ನಾನು ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದನ್ನೂ ಬಿಡಬೇಡ.
3 : ಬಹುಶಃ ಅವರು ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು. ಹಾಗೆ ಮಾಡಿದ್ದೇ ಆದರೆ, ಅವರ ದುಷ್ಕøತ್ಯಗಳಿಗೆ ದಂಡನೆಯನ್ನು ವಿಧಿಸಬೇಕೆಂದಿದ್ದ ನನ್ನ ಮನಸ್ಸನ್ನು ಬದಲಾಯಿಸಿಕೊಳ್ಳುವೆನು.
4 : “ಅವರಿಗೆ ನೀನು ಹೇಳಬೇಕಾದುದು ಇದು: ‘ಸರ್ವೇಶ್ವರ ಹೀಗೆನ್ನುತ್ತಾರೆ - ನೀವು ನನಗೆ ಕಿವಿಗೊಡದೆ ಹೋದರೆ, ನಾನು ನಿಮ್ಮ ಮುಂದಿಟ್ಟಿರುವ ಧರ್ಮಶಾಸ್ತ್ರದ ಪ್ರಕಾರ ನಡೆಯದೆ ಹೋದರೆ,
5 : ಹಾಗು ನೀವು ಕೇಳದಿದ್ದರೂ ನಿಮ್ಮ ಬಳಿಗೆ ನಾನು ಪದೇಪದೇ ಕಳಿಸುತ್ತಾ ಬಂದಿರುವ ನನ್ನ ದಾಸರಾದ ಪ್ರವಾದಿಗಳ ಮಾತುಗಳನ್ನೂ ಆಲಿಸದೆ ಹೋದರೆ,
6 : ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.”
7 : ಯೆರೆಮೀಯನು ಸರ್ವೇಶ್ವರನ ಆಲಯದಲ್ಲಿ ಹೀಗೆ ಸಾರುವುದನ್ನು ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಕೇಳಿದರು.
8 : ಜನರಿಗೆ ತಿಳಿಸಬೇಕೆಂದು ಸರ್ವೇಶ್ವರ ಆಜ್ಞಾಪಿಸಿದ್ದನ್ನೆಲ್ಲ ಯೆರೆಮೀಯನು ನುಡಿದು ಮುಗಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಸುತ್ತುಗಟ್ಟಿದರು.
9 : “ನಿನಗೆ ಖಂಡಿತವಾಗಿ ಮರಣ ದಂಡನೆಯಾಗಬೇಕು. ನೀನು ‘ಈ ದೇವಾಲಯಕ್ಕೆ ಶಿಲೋವಿನ ಗತಿ ಬರುವುದು, ಈ ನಗರ ಪಾಳುಬಿದ್ದು ನಿರ್ಜನ ಪ್ರದೇಶವಾಗುವುದು,’ ಎಂದು ಸರ್ವೇಶ್ವರನ ಹೆಸರೆತ್ತಿ ಪ್ರವಾದನೆ ಮಾಡಿದ್ದೇಕೆ?” ಎಂದು ಕೂಗಾಡಿದರು. ಆಲಯದಲ್ಲಿದ್ದ ಯೆರೆಮೀಯನನ್ನು ಜನರ ಗುಂಪು ಮುತ್ತಿಕೊಂಡಿತು.
ಕೀರ್ತನೆ 69: 5, 8-10, 14, ಶ್ಲೋಕ.13
ಪ್ರೀತಿಮಯ ದೇವಾ, ಸದುತ್ತರ ನೀಡೆನಗೆ
5 : ನನ್ನ ಮೂರ್ಖತನವನು ದೇವಾ, ನೀ ಬಲ್ಲೆಯಯ್ಯಾ / ನನ್ನಪರಾಧಗಳು ನಿನಗೆ ಮರೆಯಾಗಿಲ್ಲವಯ್ಯಾ //
8 : ನನ್ನವರಿಗೇ ನಾನನ್ಯನಾದೆನಯ್ಯಾ / ಒಡ ಹುಟ್ಟಿದವರಿಗೇ ಹೊರಗಿನವನಾದೆನಯ್ಯಾ //
9 : ಅಗ್ನಿಯಂತೆನ್ನ ದಹಿಸುತ್ತಿದೆ ನಿನ್ನಾಲಯದಭಿಮಾನ / ಎನ್ನ ಮೇಲೆರಗಿದೆ ನಿನ್ನ ಕಡುದ್ರೋಹಿಗಳ ದೂಷಣ //
10 : ಅತ್ತತ್ತು ನಾ ಒಪ್ಪೊತ್ತಿದ್ದುದೆಲ್ಲಾ / ಚುಚ್ಚುಮಾತಿಗೆ ಕಾರಣವಾಯಿತಲ್ಲಾ //
14 : ಕಳ್ಳುಸುಬಿನಲಿ ನಾನಿಳಿದು ಹೋಗದಂತೆ ಸೆಳೆದುಕೊ / ಪೊಳ್ಳು ದುರುಳರ ಮಡುವಿನಲಿ ನಾ ಮುಳುಗದಂತೆ ಎಳೆದುಕೊ //
ಮತ್ತಾಯ 13.54-58
54 : ತಮ್ಮ ಸ್ವಂತ ಊರಿಗೆ ಮರಳಿ ಬಂದು ಅಲ್ಲಿಯ ಪ್ರಾರ್ಥನಾಮಂದಿರದಲ್ಲಿ ಬೋಧನೆ ಮಾಡಿದರು. ಅದನ್ನು ಕೇಳುತ್ತಿದ್ದ ಜನರು ಆಶ್ಚರ್ಯಚಕಿತರಾಗಿ, "ಈ ಪರಿಜ್ಞಾನ ಇವನಿಗೆಲ್ಲಿಂದ ಬಂತು? ಈ ಮಹತ್ಕಾರ್ಯಗಳನ್ನು ಇವನು ಮಾಡುವುದಾದರೂ ಹೇಗೆ?
55 : ಇವನು ಆ ಬಡಗಿಯ ಮಗನಲ್ಲವೇ? ಮರಿಯಳು ಇವನ ತಾಯಲ್ಲವೇ? ಯಕೋಬ, ಜೋಸೆಫ್, ಸಿಮೋನ, ಯೂದ ಇವರು ಇವನ ಸೋದರರಲ್ಲವೇ?
56 : ಇವನ ಸೋದರಿಯರೆಲ್ಲಾ ಇಲ್ಲೇ ವಾಸಮಾಡುತ್ತಿಲ್ಲವೇ? ಹಾಗಾದರೆ ಇವನಿಗೆ ಇದೆಲ್ಲಾ ಎಲ್ಲಿಂದ ಬಂತು?" ಎಂದು ಮಾತಾಡಿಕೊಂಡು ಯೇಸುವನ್ನು ತಿರಸ್ಕರಿಸಿದರು.
57 : ಅವರಿಗೆ ಯೇಸು, "ಪ್ರವಾದಿಗೆ ಬೇರೆ ಎಲ್ಲಿಯಾದರೂ ಗೌರವ ದೊರಕೀತು; ಆದರೆ ಸ್ವಗ್ರಾಮದಲ್ಲಿ ಹಾಗೂ ಸ್ವಗೃಹದಲ್ಲಿ ಮಾತ್ರ ಗೌರವ ದೊರಕದು," ಎಂದು ಹೇಳಿದರು.
58 : ಅವರ ಅವಿಶ್ವಾಸದ ಕಾರಣ ಯೇಸು ಅದ್ಭುತ ಕಾರ್ಯಗಳನ್ನು ಅಲ್ಲಿ ಹೆಚ್ಚಾಗಿ ಮಾಡಲಿಲ್ಲ.
‘ಹಿತ್ತಲ ಗಿಡ ಮದ್ದಲ್ಲ’ ಎಂಬ ಗಾದೆಯಂತೆ ಯೇಸುವನ್ನು ತಮ್ಮ ಸ್ವಂತ ನಾಡಿನಲ್ಲಿ ಸ್ವಂತ ಜನರೆ ತಿರಸ್ಕರಿಸುತ್ತಾರೆ. ವ್ಯಕ್ತಿಯ ಸಂದೇಶ ಮತ್ತು ಸಾಧನೆಗಿಂತ ವ್ಯಕ್ತಿಯ ಮತ್ತು ಆತನ ಕುಟುಂಬದ ಹಿನ್ನಲೆ ನೋಡುವವರೆ ಹೆಚ್ಚು. ಯೇಸುವಿನ ಜನನದ, ತಂದೆ ತಾಯಿಯ, ಅವರ ಬಡತನದ, ಸರಳತೆಯ ಬಗ್ಗೆ ಅರಿತಿದ್ದ ಜನ ಯೇಸುವನ್ನು ಸ್ವೀಕರಿಸಲು ಹಿಂದೇಟಾಕುತ್ತಾರೆ.
ಇಂದಿನ ಶುಭಸಂದೇಶದಲ್ಲಿ ಯೇಸುವಿನ ಸಹೋದರ, ಸಹೋದರಿಯರ ಪ್ರಸ್ತಾಪವಿದೆ. ಯೇಸುವಿಗೆ ಇತರ ಸಹೋದರ ಸಹೋದರಿಯರು ಇದ್ದರೇ ಎಂಬ ಪ್ರಶ್ನೆ ಮೊಡಬಹುದು. ಇಲ್ಲಿ ಬಳಸಲಾಗಿರುವ ಗ್ರೀಕ್ ಪದ ಅದೆಲ್ಪೋಸ್ (ಂಜeಟಠಿhos) ಎಂದರೆ ದೊಡ್ಡಪ್ಪನ ಅಥವ ಚಿಕ್ಕಪ್ಪನ ಮಕ್ಕಳು ಎಂದರ್ಥ. ಅವರು ಒಡ ಹುಟ್ಟಿದವರಲ್ಲ. ಮರಿಯಳಿಗೆ ಯೇಸು ಬಟ್ಟರೆ ಬೇರೆ ಮಕ್ಕಳಿರಲಿಲ್ಲ.
No comments:
Post a Comment