ಸೆಪ್ಟೆಂಬರ್ 16, 2020 ಬುಧವಾರ [ಕೆಂಪು]
ಸಂತ ಕೊರ್ನೆಲಿಯಸ್, ವಿಶ್ವಗುರು ಮತ್ತು ಸಂತ ಸಿಪ್ರಿಯನ್, ಧರ್ಮಾಧ್ಯಕ್ಷ, ರಕ್ತ ಪಾಕ್ಷಿಗಳು (ಸ್ಮರಣೆ)
ಮೊದಲ ವಾಚನ: 1 ಕೊರಿಂಥಿಯರಿಗೆ 12.31 - 13.13
ಕೀರ್ತನೆ 33: 2-5, 12, 22. ಶ್ಲೋಕ.12
ಸಜ್ಜನರಾಗಿ ಪ್ರಭು ಆಯ್ದುಕೊಂಡ ಜನತೆ ಧನ್ಯ
ಶುಭಸಂದೇಶ: ಲೂಕ 7.31-35
==================
1 ಕೊರಿಂಥಿಯರಿಗೆ 12.31 - 13.13
31 : ಶ್ರೇಷ್ಠವಾದ ವರಗಳನ್ನು ನೀವು ಶ್ರದ್ಧಾಪೂರ್ವಕವಾಗಿ ಅಪೇಕ್ಷಿಸಿರಿ. ನಾನು ನಿಮಗೆ ಇನ್ನೂ ಸರ್ವೋತ್ತಮವಾದ ಮಾರ್ಗವನ್ನು ತೋರಿಸುತ್ತೇನೆ:
1 : ಸುರನರರ ನುಡಿಗಳ ನಾನಾಡಬಲ್ಲೆ ನಾದರೂ ಪರಮ ಪ್ರೀತಿಯೊಂದೆನಗಿಲ್ಲದಿರಲು ನಾ ಕೇವಲ ಗಣಗಣಿಸುವ ಘಂಟೆ, ಝಣಝಣಿಸುವ ಜಾಗಟೆ.
2 : ಪ್ರವಾದನೆಯ ವರವೆನಗಿರಬಹುದು ಇರಬಹುದು ನಿಗೂಢ ರಹಸ್ಯಗಳರಿವು ಎಲ್ಲದರ ಪರಿಜ್ಞಾನ, ಪರ್ವತವನೇ ಕದಲಿಪ ವಿಶ್ವಾಸ ಪ್ರೀತಿಯೊಂದಿಲ್ಲದಿರೆ ನಾ ಶೂನ್ಯಸಮಾನ.
3 : ನನಗಿರುವುದೆಲ್ಲವನು ನಾ ದಾನಮಾಡೆ ದೇಹವನೆ ಸಜೀವ ದಹಿಸಲು ನೀಡೆ ನಾನಾಗಿರೆ ಪರಮ ಪ್ರೀತಿ ವಿಹೀನ ಏನದು ಜೀವನ, ನನಗೇನದು ಪ್ರಯೋಜನ?
4-6 : ಸಹನೆ ಸೈರಣೆ, ದಯೆದಾಕ್ಷಿಣ್ಯ ಪ್ರೀತಿಯಲ್ಲಿವೆ. ಎಡೆಯಿಲ್ಲ ಅದರಲಿ ಗರ್ವಕೆ, ಮರ್ಮಕೆ, ಮೆರೆತಕೆ, ಮತ್ಸರಕೆ, ಸಿಡುಕಿಗೆ, ಸೊಕ್ಕಿಗೆ, ಸ್ವಾರ್ಥಕೆ, ಸೇಡುಗಳೆಣಿಕೆಗೆ. ನಲಿಯದು ಪ್ರೀತಿ ಅನೀತಿಯಲಿ ನಲಿಯದಿರದದು ಸತ್ಯದ ಜಯದಲಿ.
7 : ನಂಬುವುದೆಲ್ಲವನು, ನಿರೀಕ್ಷಿಸುವುದೆಲ್ಲವನು, ಸಹಿಸಿಕೊಳ್ಳುವುದು ಸಮಸ್ತವನು ಪ್ರೀತಿಯದೆಂದೂ ಅರಿಯದು ಸೋಲನು.
8-9 : ಅಳಿದುಹೋಗುವುವು ಭವಿಷ್ಯವಾಣಿ ಗತಿಸಿಹೋಗುವುದು ಬಹುಭಾಷಾ ಶಕ್ತಿ ಹೋಗುವುವು ನಶಿಸಿ ಜ್ಞಾನ, ಬುದ್ಧಿ. ಆದರೆ ಅಮರವಾದುದು ಪರಮ ಪ್ರೀತಿ.
10 : ಅಪೂರ್ವವಾದುದು ನಮ್ಮಾ ಅರಿವೆಲ್ಲ ಪೂರ್ಣವಾದುದಲ್ಲ ಪ್ರವಾದನವದೆಲ್ಲ; ಪರಿಪೂರ್ಣತೆ ಪ್ರಾಪ್ತವಾಗಲು ಇಲ್ಲವಾಗುವುದು ಅಪೂರ್ಣತೆಯೆಲ್ಲ.
11 : ಬಾಲಕ ನಾನಾಗಿರೆ ಆಡಿದೆ, ಮಾತಾಡಿದೆ, ಚಿಂತಿಸಿದೆ, ಸುಖದುಃಖಗಳ ಸವಿದೆ ಬಾಲಕನಂತೆ. ಬಲಿತು ಬೆಳೆದು ಮನುಜನಾದುದೆ ಬಾಲಿಶವಾದುದೆಲ್ಲವನು ಬದಿಗೊತ್ತಿದೆ.
12 : ನಾವೀಗ ಕಾಂಬುದು ದರ್ಪಣದ ಬಿಂಬವನು ಮುಸುಕಾಗಿ ತರುವಾಯ ಕಾಂಬೆವು ದೇವರನು ಮುಖಾಮುಖಿಯಾಗಿ. ಈಗಿರುವುದೆನ್ನ ಅರಿವು ತುಂಡುತುಂಡಾಗಿ ನಂತರ ದೇವನೆನ್ನ ಅರಿತಂತೆ ಈ ಮೂರಲಿ ನಾನರಿವೆನು ಅಖಂಡವಾಗಿ
13 : ನಿಲ್ಲುವುವು ನಂಬಿಕೆ, ನಿರೀಕ್ಷೆ, ಪ್ರೀತಿ ನೆಲೆಯಾಗಿ; ಈ ಮೂರರಲಿ ಪ್ರೀತಿಯೇ ಪರಮೋನ್ನತ ವೆಂಬುದ ನೀನರಿ.
===================
ಕೀರ್ತನೆ 33: 2-5, 12, 22. ಶ್ಲೋಕ.12
ಸಜ್ಜನರಾಗಿ ಪ್ರಭು ಆಯ್ದುಕೊಂಡ ಜನತೆ ಧನ್ಯ
2 : ಪ್ರಭುವನು ಕೊಂಡಾಡಿ ಕಿನ್ನರಿಯನು ನುಡಿಸುತ /
ಕೀರ್ತಿಸಿ ದಶತಂತಿ ವೀಣೆಯನು ಬಾರಿಸುತ //
3 : ನೂತನ ಕೀರ್ತನೆಯನು ಆತನಿಗೆ ಹಾಡಿರಿ /
ಇಂಪಾಗಿ ಬಾರಿಸಿ, ಸೊಂಪಾಗಿ ಭಜಿಸಿರಿ //
4 : ಸತ್ಯವಾದುದು ಆತನ ಪವಿತ್ರ ವಾಕ್ಯ /
ಸ್ತುತ್ಯವಾದುದು ಆತನ ಪುನೀತ ಕಾರ್ಯ //
5 : ಸತ್ಯಸಂಧನು, ನ್ಯಾಯಪ್ರಿಯನು ಆತನು /
ಅಚಲ ಪ್ರೀತಿಯಿಂದ ಜಗವನು ತುಂಬಿಹನು //
12 : ಪ್ರಭುವನು ದೇವರಾಗಿ ಪಡೆದ ಜನಾಂಗ ಧನ್ಯ /
ಸ್ವಜನರಾಗಿ ಆತನಾಯ್ದುಕೊಂಡ ಜನತೆ ಧನ್ಯ //
22 : ನಮ್ಮ ಮೇಲಿರಲಿ ಪ್ರಭು, ನಿನ್ನಚಲ ಪ್ರೀತಿ /
ಕಾದಿಹೆವು ಇದೋ ನಿನ್ನ ನಂಬಿ ಭರವಸದಿ //
==========
ಶುಭಸಂದೇಶ
ಲೂಕ 7.31-35
31 : ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಂದುವರಿಸುತ್ತಾ, “ಈ ಕಾಲದ ಜನರನ್ನು ಯಾರಿಗೆ ಹೋಲಿಸಲಿ? ಇವರು ಯಾರನ್ನು ಹೋಲುತ್ತಾರೆ?
32 : ಪೇಟೆಬೀದಿಯಲ್ಲಿ ಕುಳಿತು, ‘ನಾವು ಕೊಳಲನೂದಲು ನೀವು ಕುಣಿದಾಡಲಿಲ್ಲ; ನಾವು ಶೋಕಗೀತೆಗಳ ಹಾಡಲು ನೀವು ಕಣ್ಣೀರಿಡಲಿಲ್ಲ’ ಎಂದು ಒಬ್ಬರಿಗೊಬ್ಬರು ಕೂಗಾಡುವ ಮಕ್ಕಳನ್ನು ಹೋಲುತ್ತಾರೆ.
33 : ಸ್ನಾನಿಕ ಯೊವಾನ್ನನು ಬಂದಾಗ ಅನ್ನ ಆಹಾರವನ್ನು ಸೇವಿಸಲಿಲ್ಲ, ದ್ರಾಕ್ಷಾರಸವನ್ನು ಮುಟ್ಟಲಿಲ್ಲ; ನೀವು, ‘ಅವನಿಗೆ ದೆವ್ವ ಹಿಡಿದಿದೆ,’ ಎಂದು ಹೇಳಿದಿರಿ;
34 : ನರಪುತ್ರನು ಬಂದಾಗ ಅನ್ನ ಪಾನೀಯಗಳನ್ನು ಸೇವಿಸಿದನು; ನೀವು, ‘ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ, ಎನ್ನುತ್ತೀರಿ.
35 : ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದನ್ನು ಅಂಗೀಕರಿಸುವ ಎಲ್ಲರೂ ಸಮರ್ಥಿಸುತ್ತಾರೆ,” ಎಂದರು. ಪತಿತ ಪಾವನ ಯೇಸು
===================
ಚಿಂತನೆ
"ಮನುಷ್ಯರನ್ನು ಅರ್ಥಮಾಡಿಕೊಳ್ಳುವುದೇ ಒಂದು ಕಷ್ಟದ, ಕೆಲಸ ಮನುಷ್ಯನಿಗೆ ಮಾನವೀಯತೆ ಬಹಳ ಮುಖ್ಯ. ಆತ ಸಂದರ್ಭಕ್ಕೆ ತಕ್ಕಂತೆ ತನ್ನ ಭಾವನೆಗಳನ್ನು ವ್ಯಕ್ತಪಡಿಸಬೇಕು. ಯಾವಾಗ ಮಾನವನ ಭಾವನೆ ಸಾಯುತ್ತದೆಯೋ ಅಥವಾ ಸಂದರ್ಭಕ್ಕೆ ತಕ್ಕಂತೆ ಪ್ರತಿಕ್ರಿಯಿಸುವುದಿಲ್ಲವೋ ಆಗ ಅವನಿಗೆ ಮತಿಭ್ರಮಣೆಯಾಗುತ್ತದೆ. ಆತ ತನಗಿಷ್ಟಬಂದಂತೆ ವರ್ತಿಸುತ್ತಾನೆ
ಸ್ನಾಪಕ ಯೊವಾನ್ನ ಹಾಗೂ ಯೇಸುವಿನ ಬೋದನೆಗೆ ಅಷ್ಟೊಂದು ಸಕರಾತ್ಮಕ ಪ್ರತಿಕ್ರಿಯೆ ದೊರಕದಿರಲು ಕಾರಣವೇನು? ಏಕೆಂದರೆ ಸ್ನಾಪಕಯೊವಾನ್ನ ಹಾಗೂ ಯೇಸು ತಂದಿದ್ದ ಶುಭಸಂದೇಶಕ್ಕೆ ಜನರ ಕಿವಿಗಳು ಮುಚಿದ್ದವು. ಕಿವಿಯಿದ್ದೂ ಅವರು ಕಿವುಡರಾಗಿದ್ದರು. ತಮ್ಮ ಸ್ವಾರ್ಥ ಹಾಗೂ ಆಧ್ಯಾತ್ಮಿಕ ಕುರುಡುತನದಿಂದಾಗಿ ಸ್ನಾಪಕ ಯೊವಾನ್ನನು ಅನುಸರಿಸುತ್ತಿದ್ದ ತಪ್ಪಶ್ವರ್ಯವನ್ನು ದೆವ್ವ ಪ್ರೇರಿತ ಎಂದು ಆತನಿಗೆ ದೆವ್ವ ಹಿಡಿದಿದೆ ಎಂದು ಜರೆದರು. ಯೇಸುವನ್ನು ಕುಡುಕ ಎಂದರು ಆದ್ದರಿಂದ ಯೇಸು ಈ ಜನರನ್ನು ತಿಳಿವಳಿಕೆ ಇಲ್ಲದ ಮಕ್ಕಳಿಗೆ ಹೋಲಿಸುತ್ತಾರೆ.

No comments:
Post a Comment