ಸೆಪ್ಟೆಂಬರ್ 25, 2020 ಶುಕ್ರವಾರ [ಹಸಿರು]
ಸಂತ ಕಾಸ್ಮಾಸ್ ಮತ್ತು ಸಂತ ಡೇಮಿಯನ್ (ಐಚ್ಛಿಕ ಸ್ಮರಣೆ)
ಮೊದಲ ವಾಚನ: ಉಪದೇಶಕ 3.1-11
ಕೀರ್ತನೆ 144: 1-4. ಶ್ಲೋಕ.1
ಸ್ತುತಿಸ್ತೋತ್ರ ಪ್ರಭುವಿಗೆ, ನನ್ನ ಆಶ್ರಯ ದುರ್ಗಕ್ಕೆ
ಶುಭಸಂದೇಶ: ಲೂಕ 9.18-22
==================
ಮೊದಲನೇ ವಾಚನ
"ಉಪದೇಶಕ 3.1-11
1 : ಪ್ರತಿಯೊಂದು ಕಾರ್ಯಕ್ಕೂ ನಿಗದಿಯಾದ ಕಾಲವಿದೆ. ಜಗತ್ತಿನಲ್ಲಿ ನಡೆಯುವ ಒಂದೊಂದು ಕೆಲಸಕ್ಕೂ ಸೂಕ್ತ ಸಮಯವಿದೆ:
2 : ಹುಟ್ಟುವ ಸಮಯ, ಸಾಯುವ ಸಮಯ ನೆಡುವ ಸಮಯ, ನೆಟ್ಟದ್ದನ್ನು ಕೀಳುವ
3 : ಕೊಲ್ಲುವ ಸಮಯ, ಗುಣಪಡಿಸುವ ಸಮಯ ಕೆಡವಿಬಿಡುವ ಸಮಯ, ಕಟ್ಟಿ ಎಬ್ಬಿಸುವ ಸಮಯ.
4 : ಅಳುವ ಸಮಯ, ನಗುವ ಸಮಯ ಗೋಳಾಡುವ ಸಮಯ, ಕುಣಿದಾಡುವ ಸಮಯ.
5 : ಕಲ್ಲುಗಳನ್ನು ಬಿಸಾಡುವ ಸಮಯ ಕಲ್ಲುಗಳನ್ನು ಕೂಡಿಸಿಡುವ ಸಮಯ ಆಲಿಂಗನ ಮಾಡುವ ಸಮಯ, ಆಲಿಂಗನ ಮಾಡದ ಸಮಯ.
6 : ಗಳಿಸುವ ಸಮಯ, ಕಳೆದುಕೊಳ್ಳುವ ಸಮಯ ಕಾಪಾಡುವ ಸಮಯ, ಬಿಸಾಡುವ ಸಮಯ.
7 : ಹರಿಯುವ ಸಮಯ, ಹೊಲಿಯುವ ಸಮಯ ಸುಮ್ಮನಿರುವ ಸಮಯ, ಮಾತಾಡುವ ಸಮಯ.
8 : ಪ್ರೀತಿಸುವ ಸಮಯ, ದ್ವೇಷಿಸುವ ಸಮಯ ಯುದ್ಧಮಾಡುವ ಸಮಯ, ಸಮಾಧಾನ ಮಾಡುವ ಸಮಯ.
9 : ಕಷ್ಟಪಟ್ಟು ಮಾಡುವ ದುಡಿಮೆಯಿಂದ ಒಬ್ಬನಿಗೆ ಸಿಗುವ ಲಾಭವಾದರೂ ಏನು?
10 : ನರಮಾನವರ ಕರ್ತವ್ಯವೆಂದು ದೇವರು ವಿಧಿಸಿರುವ ದುಡಿಮೆಯನ್ನು ನಾನು ಗಮನಿಸಿದ್ದೇನೆ.
11 : ಒಂದೊಂದು ವಸ್ತುವನ್ನೂ ಸಮಯಕ್ಕೆ ತಕ್ಕಂತೆ ಸುಂದರವಾಗಿ ನಿರ್ಮಿಸಿದ್ದಾರೆ ದೇವರು. ಇದಲ್ಲದೆ, ಮನುಷ್ಯನ ಹೃದಯದಲ್ಲಿ ಅಮರತ್ವದ ಪ್ರತಿಯನ್ನು ಮೂಡಿಸಿದ್ದಾರೆ.
===================
ಕೀರ್ತನೆ
ಕೀರ್ತನೆ 144: 1-4. ಶ್ಲೋಕ.1
ಸ್ತುತಿಸ್ತೋತ್ರ ಪ್ರಭುವಿಗೆ, ನನ್ನ ಆಶ್ರಯ ದುರ್ಗಕ್ಕೆ
1 : ಸ್ತುತಿಸ್ತೋತ್ರ ಪ್ರಭುವಿಗೆ, ನನ್ನ ಆಶ್ರಯದುರ್ಗಕ್ಕೆ /
ಕಲಿಸಿಹನು ಕದನ ಕೈಗೆ, ಕಾಳಗ ನನ್ನ ಬೆರಳಿಗೆ //
2 : ಆತನೇ ನನಗೆ ಬಂಡೆ, ಕೋಟೆ, ದುರ್ಗ, ಉದ್ಧಾರಕ /
ನನಗೆ ರಕ್ಷಾಕವಚ, ಆಶ್ರಯ, ಶತ್ರು ವಿಧ್ವಂಸಕ //
3 : ಹೇ ಪ್ರಭೂ, ಮನುಜನು ಎಷ್ಟರವನು, ನೀನವನನು ಲಕ್ಷಿಸಲು /
ನರಮಾನವನು ಏತರವನು, ನೀನವನನು ಪರಾಮರಿಸಲು //
4 : ಮಾನವನು ಕೇವಲ ಉಸಿರಿಗೆ ಸಮಾನ /
ಮರೆಯಾಗುವ ನೆರಳು ಅವನ ಜೀವನ //
===================
ಶುಭಸಂದೇಶ
ಲೂಕ 9.18-22
18 : ಒಮ್ಮೆ ಯೇಸುಸ್ವಾಮಿ ಏಕಾಂಗಿಯಾಗಿ ಪ್ರಾರ್ಥನೆಮಾಡುತ್ತಿದ್ದಾಗ ಶಿಷ್ಯರು ಸಮೀಪದಲ್ಲೇ ಇದ್ದರು. “ಜನಸಾಮಾನ್ಯರು ನನ್ನನ್ನು ಯಾರೆನ್ನುತ್ತಾರೆ?” ಎಂದು ಯೇಸು ಅವರನ್ನು ಪ್ರಶ್ನಿಸಿದರು.
19 : ಅದಕ್ಕೆ ಅವರು, “ಹಲವರು ತಮ್ಮನ್ನು ‘ಸ್ನಾನಿಕ ಯೊವಾನ್ನ’ ಎನ್ನುತ್ತಾರೆ; ಕೆಲವರು ‘ಎಲೀಯನು’ ಎನ್ನುತ್ತಾರೆ; ಮತ್ತೆ ಕೆಲವರು ‘ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬನು ಮರಳಿ ಜೀವಂತನಾಗಿದ್ದಾನೆ’ ಎನ್ನುತ್ತಾರೆ,” ಎಂದು ಉತ್ತರವಿತ್ತರು.
20 : ಆಗ ಯೇಸು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಪುನಃ ಪ್ರಶ್ನಿಸಿದರು. ಅದಕ್ಕೆ ಪೇತ್ರನು, “ದೇವರಿಂದ ಅಭಿಷಿಕ್ತರಾದ ಲೋಕೋದ್ಧಾರಕ ತಾವೇ” ಎಂದು ಉತ್ತರಕೊಟ್ಟನು.
21 : ಈ ವಿಷಯವನ್ನು ಯಾರಿಗೂ ತಿಳಿಸಬಾರದೆಂದು ಯೇಸು ಶಿಷ್ಯರನ್ನು ಆಜ್ಞಾಪೂರ್ವಕವಾಗಿ ಎಚ್ಚರಿಸಿದರು.
22 : ಇದಲ್ಲದೆ, “ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾ ಪ್ರಮುಖರಿಂದಲೂ ಮುಖ್ಯಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕøತನಾಗಿ ಕೊಲ್ಲಲ್ಪಡುವನು. ಆದರೆ ಮೂರನೇ ದಿನ ಆತನು ಪುನರುತ್ಥಾನ ಹೊಂದುವನು,” ಎಂದು ಅವರಿಗೆ ತಿಳಿಸಿದರು. ‘ನಾನು ಹೋದರೆ ಹೋಗಬಹುದು’
===================
ಚಿಂತನೆ
ಯೇಸುಕ್ರಿಸ್ತರು ಅದ್ಭುತ ಕಾರ್ಯಗಳನ್ನು ಮಾಡುವುದನ್ನು ನೋಡಿದ್ದ ಜನರು ಅನೇಕ ಅಭಿಪ್ರಾಯಗಳನ್ನು ಹೊಂದಿದ್ದರು.ಇದನ್ನು ಅರಿತ ಕ್ರಿಸ್ತರು ಶಿಷ್ಯರನ್ನು ನೋಡಿ ಜನರು ನನ್ನನ್ನು ಯಾರೆನ್ನುತ್ತಾರೆ? ಎಂದು ಪ್ರಶ್ನಿಸುತ್ತಾರೆ. ಆಗ ಶಿಷ್ಯರು ``ಕೆಲವರು ನಿಮ್ಮನ್ನು ಎಲಿಯನೆಂದರೆ ಇನ್ನೂ ಕೆಲವರು ಯೆರೆಮಿಯಾ, ಮತ್ತೆ ಕೆಲವರು ಸ್ನಾಪಕ ಯೊವಾನ್ನ ಮತ್ತೆ ಕೆಲವರು ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬರು ಮರಳಿ ಜೀವಂತನಾಗಿದ್ದಾನೆ ಎಂದು ಹೇಳುತ್ತಾರೆ,’’ ಎಂದು ಉತ್ತರ ಕೊಟ್ಟರು. ಆಗ ಯೇಸು ಪುನಃ ಎರಡನೆಯ ಪ್ರಶ್ನೆಯನ್ನು ಕೇಳುತ್ತಾರೆ. 'ನೀವು ನನ್ನನ್ನು ಯಾರೆನ್ನುತ್ತೀರಿ?"" ಇದು ವೈಯಕ್ತಿಕವಾದ ಪ್ರಶ್ನೆ ಆಗ ಪೇತ್ರ ಅವರೆಲ್ಲರ ಪರವಾಗಿಯೇ ಎಂಬಂತೆ ದೇವರಿಂದ ಬಂದ ಅಭಿಷಕ್ತರಾದ ಲೋಕೊದ್ದಾರಕರೇ ತಾವು ಎಂದು ಹೇಳುತ್ತಾರೆ.
ಕ್ರಿಸ್ತರು ನಮಗೆ ಯಾರು? ದೇವರೆ? ಗುರುವೇ? ತಾಯಿಯೆ? ಸಹೋದರನೇ? ಸಹೋದರಿ? ಗೆಳೆಯ? ಕ್ರಿಸ್ತರ ಮತ್ತು ನಮ್ಮ ನಡುವೆ ಯಾವ ರೀತಿಯ ಸಂಬಂಧವಿದೆ?
===================
No comments:
Post a Comment