ನವೆಂಬರ್ 25, 2020 ಬುಧವಾರ [ಹಸಿರು]
ಅಲೆಕ್ಸಾಂಡ್ರಿಯ ಸಂತ ಕಥರೀನ, ಕನ್ಯೆ ಮತ್ತು ರಕ್ತಸಾಕ್ಷಿ (ಐಚ್ಛಿಕ ಸ್ಮರಣೆ)
ಮೊದಲ ವಾಚನ: ಯೊವಾನ್ನನ ಪ್ರಕಟನೆ 15.1-4
ಕೀರ್ತನೆ 98:1-3, 7-9, ಶ್ಲೋಕ.ಯೊವಾನ್ನನ ಪ್ರಕಟನೆ 15:3
ಹೇ ದೇವಾ, ಹೇ ಪ್ರಭು, ನೀ ಸರ್ವಶಕ್ತ
ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ
ಶುಭಸಂದೇಶ: ಲೂಕ 21.12-19
==================
ಮೊದಲನೇ ವಾಚನ
ಯೊವಾನ್ನನ ಪ್ರಕಟನೆ 15.1-4
1 : ಸ್ವರ್ಗದಲ್ಲಿ ಮತ್ತೊಂದು ಚಿಹ್ನೆಯನ್ನು ಕಂಡೆ. ಅದು ಅತ್ಯಾಶ್ಚರ್ಯಕರವಾಗಿ ಇತ್ತು. ಏಳು ದೇವದೂತರ ಕೈಯಲ್ಲಿ ಏಳು ವಿಪತ್ತುಗಳು ಇದ್ದವು. ಇವು ಅಂತಿಮವಾಗಿ ಬಂದೆರಗುವ ವಿಪತ್ತುಗಳು. ಏಕೆಂದರೆ, ಅವುಗಳೊಡನೆ ದೇವರ ಕೋಪಾಗ್ನಿ ಪೂರ್ತಿಯಾಗಿ ಬಂದೆರಗುವುದು.
2 : ಇದಲ್ಲದೆ, ಗಾಜಿನ ಸಮುದ್ರದಂತಿದ್ದ ಒಂದು ವಸ್ತು ಕಾಣಿಸಿತು; ಅದು ಬೆಂಕಿಯಿಂದ ಕೂಡಿತ್ತು. ಮೃಗದ ವಿರುದ್ಧ, ಅದರ ವಿಗ್ರಹದ ವಿರುದ್ಧ ಹಾಗೂ ಅದರ ಹೆಸರನ್ನು ಸೂಚಿಸುವ ಸಂಖ್ಯೆಯ ವಿರುದ್ಧ ಜಯಗಳಿಸಿದವರನ್ನು ಸಹ ಕಂಡೆ. ಅವರು ಗಾಜಿನ ಸಮುದ್ರದ ಬಳಿ ನಿಂತಿದ್ದರು; ಕೈಗಳಲ್ಲಿ ದೇವರಿತ್ತ ಕಿನ್ನರಿಗಳಿದ್ದವು.
3 : ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ: “ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ
4 : ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ನಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”
===================
ಕೀರ್ತನೆ

ಶ್ಲೋಕ:ಹೇ ದೇವಾ, ಹೇ ಪ್ರಭು, ನೀ ಸರ್ವಶಕ್ತ
ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ||
1 : ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು /
ಎಸಗಿಹನಾತನು ಪವಾಡಕಾರ್ಯಗಳನು /
ಗಳಿಸಿತಾತನ ಕೈ ಪೂತಭುಜ ಗೆಲುವನು //
2 : ಪ್ರಕಟಿಸಿಹನಾ ಪ್ರಭು ತನ್ನ ಮುಕ್ತಿವಿಧಾನವನು /
ರಾಷ್ಟ್ರಗಳಿಗೆ ತೋರಿಸಿಹನು ಜೀವೋದ್ಧಾರಕಾ ಶಕ್ತಿಯನು //
3 : ಕಂಡು ಬಂದಿತು ಜಗದ ಎಲ್ಲೆಎಲ್ಲೆಗೆ /
ನಮ್ಮ ದೇವ ಸಾಧಿಸಿದ ಜಯಗಳಿಕೆ //
ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು /
ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು //
7 : ಗರ್ಜಿಸಲಿ ಸಮುದ್ರವು ಅದರಲ್ಲಿರುವುದೆಲ್ಲವು /
ಕೀರ್ತಿಸಲಿ ಜಗವು, ಅದರೊಳು ವಾಸಿಸುವ ಜನರೆಲ್ಲರು //
8 : ಚಪ್ಪಾಳೆ ಹೊಡೆಯಲಿ ನದಿಗಳು /
ತಟ್ಟಾಡಲಿ ಬೆಟ್ಟಗುಡ್ಡಗಳು //
9 : ಏಕೆನೆ ಬರುವನಾತ ಇಹಲೋಕಕೆ ನ್ಯಾಯತೀರಿಸಲು /
ಜಗಕು, ಜನತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು //
===================
ಶುಭಸಂದೇಶ
ಲೂಕ 21.12-19
12 : ಇದೆಲ್ಲಾ ಸಂಭವಿಸುವುದಕ್ಕೆ ಮುಂಚೆ ನಿಮ್ಮನ್ನು ಬಂಧಿಸಿ ಹಿಂಸೆಗೊಳಪಡಿಸುವರು. ಪ್ರಾರ್ಥನಾ ಮಂದಿರಗಳಿಗೂ ಕಾರಾಗೃಹಗಳಿಗೂ ಎಳೆದೊಪ್ಪಿಸುವರು; ನನ್ನ ನಾಮದ ನಿಮಿತ್ತ ನಿಮ್ಮನ್ನು ಅರಸರ ಹಾಗೂ ಅಧಿಪತಿಗಳ ಮುಂದಕ್ಕೆ ಎಳೆಯುವರು.
13 : ಶುಭಸಂದೇಶಕ್ಕೆ ಸಾಕ್ಷಿಕೊಡಲು ಇದು ನಿಮಗೆ ಸದವಕಾಶವಾಗಿರುತ್ತದೆ.
14 : ಆಗ ವಾದಿಸುವುದು ಹೇಗೆಂದು ನೀವು ಮುಂಚಿತವಾಗಿ ಚಿಂತಿಸಬೇಕಾಗಿಲ್ಲ; ಇದು ನಿಮಗೆ ಮನದಟ್ಟಾಗಿರಲಿ.
15 : ಏಕೆಂದರೆ ನಿಮ್ಮ ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂಥ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ ನಿಮಗೆ ಕೊಡುವೆನು.
16 : ನಿಮ್ಮ ತಂದೆತಾಯಿಗಳೇ, ಒಡಹುಟ್ಟಿದವರೇ, ಬಂಧು ಮಿತ್ರರೇ, ನಿಮ್ಮನ್ನು ಪರಾಧೀನ ಮಾಡುವರು; ಮಾತ್ರವಲ್ಲ, ನಿಮ್ಮಲ್ಲಿ ಕೆಲವರನ್ನು ಕೊಂದು ಹಾಕಿಸುವರು.
17 : ನೀವು ನನ್ನವರು ಆದುದರಿಂದಲೇ ಎಲ್ಲರೂ ನಿಮ್ಮನ್ನು ದ್ವೇಷಿಸುವರು.
18 : ಆದರೂ ನಿಮ್ಮ ತಲೆ ಕೂದಲೊಂದೂ ನಾಶವಾಗುವುದಿಲ್ಲ.
19 : ಸೈರಣೆಯಿಂದಿರಿ, ಸಂರಕ್ಷಣೆಯನ್ನು ಪಡೆಯುವಿರಿ.
===================
ಚಿಂತನೆ
ಯೇಸು ತಮ್ಮ ಶಿಷ್ಯರಿಗೆ, ಹಿಂಬಾಲಕರಿಗೆ ಎದುರಾಗುವ ಹಿಂಸೆ, ವೇದನೆಯ ಮುನ್ಸೂಚನೆಯನ್ನು ನೀಡುತ್ತಿದ್ದಾರೆ. ಕ್ರೈಸ್ತ ಸಮದಾಯದ ಮಧ್ಯೆ ಉದ್ಭವಿಸುವ ಒಳ ಜಗಳಗಳು, ದ್ರೋಹಗಳು, ವಿಶ್ವಾಸ ಘಾತುಕ ಕೃತ್ಯಗಳ ಬಗ್ಗೆಯೂ ಮೂನ್ಸೂಚನೆ ನೀಡುತ್ತಾರೆ. ತನ್ನನ್ನು ಹಿಂಬಾಲಿಸುವವನು ಅನೇಕ ಕಷ್ಟ ಸಂಕಟಗಳನ್ನು, ಬಾಧೆ ನಿಂದನೆಗಳನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ ಜಾಗರೂಕರಾಗಿ ಕಾರ್ಯ ನಿರ್ವಹಿಸಲು ಎಚ್ಚರಿಕೆ ನೀಡುತ್ತಾ ರೆ. ಮುಂದೆ ಬರಲಿರುವ ಕಷ್ಟಗಳು ನಾನಾ ರೀತಿಯವು, ಅನೇಕರು ವಿಶ್ವಾಸ ತೊರೆಯುವರು, ಕೆಲವರು ದ್ರೋಹಮಾಡುವರು. ಆದರೆ ಶಿಷ್ಯರು ಎಲ್ಲವನ್ನು ಎದುರಿಸಿ ಅಚಲ ವಿಶ್ವಾಸವನ್ನು ಪ್ರಕಟಿಸಬೇಕೆಂದು ಯೇಸು ವಿವರಿಸುತ್ತಾರೆ . ಬರಲಿರುವ ಕಷ್ಟವನ್ನು ತಾಳ್ಮೆಯಿಂದ ಸಹಿಸಕೊಂಡರೆ ಜೀವೋದ್ಧಾರ ಪಡೆಯುವಿರೆಂದೂ ಧೈರ್ಯ ತುಂಬುತ್ತಾರೆ.

No comments:
Post a Comment