ಕೆಂಪು/ ಶುಭಶುಕ್ರ/ ಪ್ರಭುವಿನ ಯಾತನೆಯ ಶುಕ್ರವಾರ
ಯೆಶಾಯ 52:13-53
ಕೀರ್ತನೆ: 31:1,5,11-12, 14-16.,
2ವಾಚನ ಹಿಬ್ರೀ4:14-16:5;7
ಶುಭಸಂದೇಶ ಯೋವಾನ್ನ 18:1-19:42
ಯೆಶಾಯ 52:13-53
13ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ.
14ಆತನ ಮುಖ ನರಮಾನವರ ಮುಖಕ್ಕಿಂತ ಆತನ ರೂಪ ನರಪುತ್ರರ ರೂಪಕ್ಕಿಂತ ವಿಕಾರಗೊಂಡಿದೆ ನಿಜ; ಆದರೆ ಹಲವರು ನೋಡಿ ಆದರು ಚಕಿತ.
15ಅಂತೆಯೆ ಹಲರಾಷ್ಟ್ರಗಳು ಚಕಿತವಾಗುವುವು ಅಚ್ಚರಿಗೊಂಡು ಬಾಯಿಮುಚ್ಚಿಕೊಳ್ಳುವರು ಅರಸರು ಆತನನು ಕಂಡು. ಏಕೆನೆ, ನೋಡುವರವರು ಅಪೂರ್ವ ಸಂಗತಿಯೊಂದನು ಗ್ರಹಿಸಿಕೊಳ್ಳುವರವರು ಎಂದೂ ಕೇಳದ ವಿಷಯವನು.
15ಅಂತೆಯೆ ಹಲರಾಷ್ಟ್ರಗಳು ಚಕಿತವಾಗುವುವು ಅಚ್ಚರಿಗೊಂಡು ಬಾಯಿಮುಚ್ಚಿಕೊಳ್ಳುವರು ಅರಸರು ಆತನನು ಕಂಡು. ಏಕೆನೆ, ನೋಡುವರವರು ಅಪೂರ್ವ ಸಂಗತಿಯೊಂದನು ಗ್ರಹಿಸಿಕೊಳ್ಳುವರವರು ಎಂದೂ ಕೇಳದ ವಿಷಯವನು.
1ನಂಬುವರಾರು ನಾವು ಕೇಳಿದ ಸಂಗತಿಯನು? ಗುರುತಿಸುವರಾರು ಸರ್ವೇಶ್ವರನ ಶಕ್ತಿಯನು?
2ಸರ್ವೇಶ್ವರನ ಮುಂದೆ ಬೆಳೆದನಾತ ಸಸಿಯಂತೆ ಒಣನೆಲದೊಳಗೆ ಇಳಿಯುವ ಬೇರಿನಂತೆ. ಆತನಲಿ ಅಂದಚೆಂದಗಳಾವುವೂ ಇರಲಿಲ್ಲ, ನೋಡಲು ಲಕ್ಷಣವಾದುವು ಏನೂ ಕಾಣಲಿಲ್ಲ.
3ಧಿಕ್ಕರಿಸಲ್ಪಟ್ಟವನು, ಮನುಜರಿಂದ ತಿರಸ್ಕøತನು, ದುಃಖಕ್ರಾಂತನು, ಕಷ್ಟಸಂಕಟ ಅನುಭವಿಸಿದವನು. ನೋಡಿದವರು ಮುಖ ತಿರುಗಿಸುವಷ್ಟು ನಿಂದಕನು ! ನಾವೋ ಲಕ್ಷ್ಯಕ್ಕೂ ತೆಗೆದುಕೊಳ್ಳಲಿಲ್ಲ ಆತನನು.
4ನಿಜವಾಗಿ ವಹಿಸಿಕೊಂಡನಾತ ನಮ್ಮ ಬಾಧೆಗಳನು ಹೊರೆಯಂತೆ ಹೊತ್ತನಾತ ನಮ್ಮ ಕಷ್ಟಸಂಕಟಗಳನು ನಾವು ಭಾವಿಸಿದ್ದಾದರು ಏನು? ಆತ ದೇವರಿಂದ ಬಾಧಿತನೆಂದು ದಂಡನೆಗೆ ಗುರಿಯಾದವನು, ತಿರಸ್ಕøತನಾದವನೆಂದು !
5ನಿನ್ನ ಸೃಷ್ಟಿಕರ್ತನೆ ನಿನಗೆ ಪತಿಯು ‘ಸೇನಾಧೀಶ್ವರನಾದ ಸರ್ವೇಶ್ವರ’ ಆತನ ಹೆಸರು. ಇಸ್ರಯೇಲಿನ ಪರಮಪಾವನನೆ ನಿನ್ನ ಉದ್ಧಾರಕನು. ‘ಸರ್ವಲೋಕದ ದೇವ’ ಆತನ ನಾಮಧೇಯ.
6ತೊಳಲುತ್ತಿದ್ದೆವು ನಾವೆಲ್ಲರು ದಾರಿತಪ್ಪಿದ ಕುರಿಗಳಂತೆ ಹಿಡಿಯುತ್ತಿದ್ದನು ಪ್ರತಿಯೊಬ್ಬನು ತನ್ನ ತನ್ನ ದಾರಿಯನ್ನೆ. ನಮ್ಮೆಲ್ಲರ ದೋಷವನು ಸರ್ವೇಶ್ವರ ಹಾಕಿದ್ದ ಆತನ ಮೇಲೆ.
7ಬಾಧೆಗಳಿಗೊಳಗಾದ, ಹಿಂಸೆ ಸಹಿಸಿದ ಆತ ಬಾಯ್ದೆರೆಯದೆ. ಹೌದು, ಬಾಯ್ದೆರೆಯದಿದ್ದ ಬಲಿಗೊಯ್ದ ಕುರಿಮರಿಯಂತೆ ತುಪ್ಪಟ ಕತ್ತರಿಸುವವನ ಮುಂದಿರುವ ಮೂಕ ಕುರಿಮರಿಯಂತೆ.
8ಎಳೆದೊಯ್ದರು ಬಂಧನದಿಂದ, ನ್ಯಾಯಸ್ಥಾನದಿಂದ ಹೌದು, ದೂರಮಾಡಿದರು ಆತನನು ಜೀವಲೋಕದಿಂದ. ವಧೆಯಾದನಾತ ನಮ್ಮ ಜನರ ಪಾಪದ ದೆಸೆಯಿಂದ. ಆದರೂ ಸಮಕಾಲೀನವರಾರು ಮರುಗಲಿಲ್ಲ ಕನಿಕರದಿಂದ.
9ಮಾಡಲಿಲ್ಲ ಆತ ಯಾವ ಪಾಪಕೃತ್ಯ ಅವನ ಬಾಯಲಿರಲಿಲ್ಲ ವಂಚನೆಯ ವಾಕ್ಯ ಹೂಣಿದರಾತನನು ಸತ್ತಮೇಲೆ ದುರುಳರ ಹಾಗೂ ದುಷ್ಕರ್ಮಿಗಳ ನಡುವೆ.
10ಸರ್ವೇಶ್ವರನ ಚಿತ್ತದಂತೆ ಜಜ್ಜರಿತನಾದ ಹಿಂಸೆಬಾಧೆಗಳಿಂದ ಪಾಪ ಪ್ರಾಯಶ್ಚಿತ್ತಕ್ಕಾಗಿ ತನ್ನ ಪ್ರಾಣವನೆ ಸಮರ್ಪಿಸಿದ. ಈ ಪರಿ ಕಾಣುವನು ತನ್ನ ಸಿರಿಸಂತಾನವನು ಪಡೆಯುವನು ಚಿರಜೀವವನು ತಾನೇ ನೆರವೇರಿಸುವೆನು ಸರ್ವೇಶ್ವರನ ಸಂಕಲ್ಪವನು.
11ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹು ಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.
12ಎಂತಲೆ ನೀಡುವೆ ಇವನಿಗೆ ಪಾಲನ್ನು ದೊಡ್ಡವರ ಸಂಗಡ ಹಂಚಿಕೊಳ್ಳುವನು ಸೂರೆಯನ್ನು ಬಲಿಷ್ಠರ ಸಂಗಡ ಏಕೆನೆ ಪ್ರಾಣವನ್ನೆ ಧಾರೆಯೆರೆದು ಮರಣಹೊಂದಿದ ದ್ರೋಹಿಗಳೊಂದಿಗೆ ತನ್ನನೆ ಒಂದಾಗಿ ಎಣಿಸಿಕೊಂಡ. ಅನೇಕರ ಪಾಪವನ್ನು ಹೊತ್ತು ಅವರಿಗಾಗಿ ಪ್ರಾರ್ಥಿಸಿದ.
ಕೀರ್ತನೆ: 31:1,5,11-12, 14-16.,
ಪಿತನೇ ನನ್ನಾತ್ಮವನ್ನು ನಿಮ್ಮ ಕೈಗೊಪ್ಪಿಸುತ್ತೇನೆ
2ನನಗೆ ಕಿವಿಗೊಡು ಪ್ರಭು, ನನ್ನನು ಬಿಡಿಸು ಬೇಗನೆ | ನನ್ನಾಶ್ರಯಗಿರಿ, ದುರ್ಗಸ್ಥಾನವಾಗಿರು ನೀನೆ ||
6ಇಲ್ಲಸಲ್ಲದ ದೇವರನು ಅವಲಂಬಿಪರನು ನೀ ಒಲ್ಲೆ / ನಾನಾದರೋ ಪ್ರಭು, ಭರವಸೆಯಿಟ್ಟಿರುವುದು ನಿನ್ನಲ್ಲೆ //
12ನುಚ್ಚುನೂರಾದೆ, ಮಡಕೆಚಿಪ್ಪಿನಂತಾದೆ / ಸತ್ತವರಂತಾದೆ: ನೆನಪಿಗೆ ಬಾರದಾದೆ //
13ನನಗೆ ವಿರುದ್ಧ ಜನರಾಡುವ ಗುಸುಗುಸು ಮಾತು ಕೇಳಿ ಬರುತಿದೆ / ಭಯಭೀತಿ ಎನ್ನನಾವರಿಸಿದೆ, ಒಳಸಂಚು, ಪ್ರಾಣಹರಣ ನಡೆಯುತಿವೆ //
15ನಿನ್ನ ಕೈಯಲ್ಲಿದೆ ನನ್ನ ಇಡೀ ಜೀವಮಾನ / ಬೆನ್ನಟ್ಟಿಬರುವ ವೈರಿಯಿಂದ ರಕ್ಷಿಸೆನ್ನ //
16ಬೆಳಗಿಸಲಿ ದಾಸನನು ನಿನ್ನ ಮುಖತೇಜವು / ಕಾಪಾಡಲಿ ಎನ್ನನು ನಿನ್ನನಂತ ಪ್ರೇಮವು //
17ನಿನಗೆ ಮೊರೆಯಿಡುವೆ, ನನಗಾಗದಿರಲಿ ಹೇ ಪ್ರಭು, ಮಾನಭಂಗ / ದುರುಳರಿಗಾಗಲೀ ಆಶಾಭಂಗ, ಮೂಕರಾಗವರು ಸೇರಲಿ ನರಕ //
24ಪ್ರಭುವಿಗಾಗಿ ಕಾದಿಹ ಜನರೆ, ನಿಮಗಿರಲಿ ಅಭಯ / ಧೈರ್ಯದಿಂದಿರಲಿ ನಿರುತ ನಿಮ್ಮೆಲ್ಲರ ಹೃದಯ //
2ವಾಚನ ಹಿಬ್ರೀ4:14-16:5;7
2ವಾಚನ ಹಿಬ್ರೀ4:14-16:5;7
14ಸ್ವರ್ಗಲೋಕಕ್ಕೆ ಏರಿಹೋದ ದೇವರ ಪುತ್ರನಾದ ಯೇಸುವೇ ನಮಗೆ ಶ್ರೇಷ್ಠ ಹಾಗೂ ಪ್ರಧಾನಯಾಜಕ ಆಗಿರುವುದರಿಂದ ನಾವು ನಿವೇದಿಸುವ ವಿಶ್ವಾಸದಲ್ಲಿ ಸದೃಢರಾಗಿರೋಣ. 15ಈ ಪ್ರಧಾನ ಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ-ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ. 16ಆದಕಾರಣ, ನಾವು ಸಮಯೋಚಿತ ಸಹಾಯವನ್ನು ಅವರ ಅನುಗ್ರಹದಿಂದ ಪಡೆಯಲು ಮತ್ತು ಅವರ ಕರುಣೆಯನ್ನು ಸವಿಯಲು ಧೈರ್ಯದಿಂದ ಅವರ ಕೃಪಾಸನವನ್ನು ಸಮೀಪಿಸೋಣ. 7ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು. 8ಯೇಸು, ದೇವರ ಪುತ್ರರಾಗಿದ್ದರೂ ಹಿಂಸೆಬಾಧೆಗಳನ್ನು ತಪ್ಪಿಸಿಕೊಳ್ಳದೆ ವಿಧೇಯತೆಯನ್ನು ಅನುಭವದಿಂದ ಅರಿತುಕೊಂಡರು. 9ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.
ಶುಭಸಂದೇಶ ಯೋವಾನ್ನ 18:1-19:42
1ಯೇಸುಸ್ವಾಮಿ ಹೀಗೆ ಹೇಳಿದ ಬಳಿಕ ತಮ್ಮ ಶಿಷ್ಯರೊಡನೆ ಹೊರಟು, ಕೆದ್ರೋನ್ ಹಳ್ಳವನ್ನು ದಾಟಿ, ಅಲ್ಲೇ ಇದ್ದ ತೋಟವನ್ನು ಹೊಕ್ಕರು. 2ಅವರು ತಮ್ಮ ಶಿಷ್ಯರೊಡನೆ ಆಗಾಗ ಅಲ್ಲಿಗೆ ಬರುವುದು ವಾಡಿಕೆ. ಅವರನ್ನು ಹಿಡಿದುಕೊಡಲಿದ್ದ ಯೂದನಿಗೆ ಆ ಸ್ಥಳ ಚೆನ್ನಾಗಿ ಗೊತ್ತಿತ್ತು 3ಆದುದರಿಂದ ಯೂದನು ಸೈನಿಕರ ಒಂದು ತಂಡವನ್ನೂ ಮುಖ್ಯ ಯಾಜಕರು ಮತ್ತು ಫರಿಸಾಯರು ಕಳುಹಿಸಿದ ಕಾವಲಾಳುಗಳನ್ನೂ ಕರೆದುಕೊಂಡು ದೀವಟಿಗೆ, ಪಂಜು ಮತ್ತು ಆಯುಧಗಳ ಸಮೇತ ಅಲ್ಲಿಗೆ ಬಂದನು. 4ಯೇಸುಸ್ವಾಮಿಗೆ ತಮಗೆ ಸಂಭವಿಸಲಿರುವುದೆಲ್ಲವೂ
ತಿಳಿದಿತ್ತು ಎಂದೇ ಮುಂದೆ ಬಂದು, “ನೀವು ಯಾರನ್ನು ಹುಡುಕುತ್ತಿದ್ದೀರಿ?” ಎಂದು ಕೇಳಿದರು. 5ಅವರು, “ನಜರೇತಿನ ಯೇಸುವನ್ನು” ಎಂದರು. ಯೇಸು, “ನಾನೇ ಆತನು” ಎಂದು ಉತ್ತರಕೊಟ್ಟರು. ಅವರನ್ನು ಹಿಡಿದುಕೊಡಲಿದ್ದ ಗುರುದ್ರೋಹಿ ಯೂದನು ಅವರ ಸಂಗಡವೇ ನಿಂತುಕೊಂಡಿದ್ದನು. 6“ನಾನೇ ಆತನು,” ಎಂದು ಯೇಸು ನುಡಿಯುತ್ತಲೇ, ಅವರೆಲ್ಲರೂ ಹಿಂದೆ ಸರಿದು ನೆಲದ ಮೇಲೆ ಬಿದ್ದರು. 7ಯೇಸು ಮತ್ತೊಮ್ಮೆ, “ನೀವು ಯಾರನ್ನು ಹುಡುಕುತ್ತಿದ್ದೀರಿ?” ಎಂದು ಕೇಳಲು, “ನಜರೇತಿನ ಯೇಸುವನ್ನು” ಎಂದು ಉತ್ತರ ಬಂದಿತು. 8ಅದಕ್ಕೆ ಯೇಸು, “ನಾನೇ ಆತನೆಂದು ನಿಮಗೆ ಆಗಲೇ ಹೇಳಿದೆ. ನೀವು ಹುಡುಕುತ್ತಾ ಇರುವುದು ನನ್ನನ್ನಾದರೆ, ಮಿಕ್ಕ ಇವರನ್ನು ಹೋಗಬಿಡಿ,” ಎಂದು ನುಡಿದರು.
9‘ನೀವು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ಕಳೆದು ಕೊಳ್ಳಲಿಲ್ಲ’ ಎಂದು ತಾವೇ ನುಡಿದ ಮಾತು ನೆರವೇರುವಂತೆ ಯೇಸು ಹೀಗೆಂದರು. 10ಅಷ್ಟರೊಳಗೆ ಸಿಮೋನ ಪೇತ್ರನು ತನ್ನಲ್ಲಿದ್ದ ಖಡ್ಗವನ್ನು ಹಿರಿದು, ಪ್ರಧಾನ ಯಾಜಕನ ಸೇವಕನಾದ ಮಾಲ್ಕನ ಬಲಗಿವಿಯನ್ನು ಕತ್ತರಿಸಿಬಿಟ್ಟನು. 11ಆಗ ಯೇಸು ಪೇತ್ರನಿಗೆ, “ನಿನ್ನ ಖಡ್ಗವನ್ನು ಒರೆಯಲ್ಲಿ ಹಾಕು. ನನ್ನ ಪಿತನೇ ಕೊಟ್ಟಿರುವ ಕಷ್ಟದ ಕೊಡವಿದು; ಇದರಲ್ಲಿರುವುದನ್ನು ನಾನು ಕುಡಿಯದೆ ಹೋದರೆ ಹೇಗೆ?” ಎಂದು ನುಡಿದರು.
12ಅನಂತರ ಸೈನಿಕರು, ಸಹಸ್ರಾಧಿಪತಿ ಹಾಗು ಯೆಹೂದ್ಯರು ಕಳುಹಿಸಿದ್ದ ಕಾವಲಾಳುಗಳು ಯೇಸುವನ್ನು ಹಿಡಿದು ಕಟ್ಟಿ ಮೊದಲು ಅನ್ನನ ಬಳಿಗೆ ಕೊಂಡೊಯ್ದರು. 13ಅನ್ನನು, ಆ ವರ್ಷ ಪ್ರಧಾನ ಯಜಕನಾಗಿದ್ದ ಕಾಯಫನ ಮಾವ. 14ಸಮಸ್ತ ಜನತೆಗಾಗಿ ಒಬ್ಬನು ಸತ್ತರೆ ವಿಹಿತವೆಂದು ಸಲಹೆಕೊಟ್ಟವನು ಈ ಕಾಯಫನೇ. ಗುರುವನ್ನು ಅಲ್ಲಗಳೆದ ಪೇತ್ರ. 15ಸಿಮೋನ್ ಪೇತ್ರನು ಮತ್ತು ಪ್ರಧಾನ ಯಾಜಕನಿಗೆ ಪರಿಚಿತನಾಗಿದ್ದ ಇನ್ನೊಬ್ಬ ಶಿಷ್ಯನು ಯೇಸುಸ್ವಾಮಿಯನ್ನು ಹಿಂಬಾಲಿಸುತ್ತಾ ಹೋದರು. ಪರಿಚಿತನಾಗಿದ್ದ ಶಿಷ್ಯನು ಯೇಸುವಿನೊಡನೆ ಪ್ರಧಾನ ಯಾಜಕನ ಮನೆಯ ಅಂಗಳವನ್ನು ಹೊಕ್ಕನು. 16ಪೇತ್ರನು ಹೊರಗಡೆ ಬಾಗಿಲ ಬಳಿಯಲ್ಲೇ ನಿಂತನು. ಪರಿಚಿತನಾಗಿದ್ದವನು ಅನಂತರ ಹೊರಗೆ ಬಂದು ದ್ವಾರಪಾಲಕಿಗೆ ಹೇಳಿ ಪೇತ್ರನನ್ನು ಒಳಕ್ಕೆ ಕರೆದುಕೊಂಡು ಹೋದನು. 17ಆ ದ್ವಾರಪಾಲಕಿಯು ಪೇತ್ರನನ್ನು ನೋಡಿ, “ನೀನೂ ಯೇಸುವಿನ ಶಿಷ್ಯರಲ್ಲಿ ಒಬ್ಬನಲ್ಲವೆ?” ಎಂದು ಕೇಳಿದಳು. ಅದಕ್ಕೆ ಪೇತ್ರನು, “ಇಲ್ಲ, ನಾನಲ್ಲ,” ಎಂದುಬಿಟ್ಟನು.
12ಅನಂತರ ಸೈನಿಕರು, ಸಹಸ್ರಾಧಿಪತಿ ಹಾಗು ಯೆಹೂದ್ಯರು ಕಳುಹಿಸಿದ್ದ ಕಾವಲಾಳುಗಳು ಯೇಸುವನ್ನು ಹಿಡಿದು ಕಟ್ಟಿ ಮೊದಲು ಅನ್ನನ ಬಳಿಗೆ ಕೊಂಡೊಯ್ದರು. 13ಅನ್ನನು, ಆ ವರ್ಷ ಪ್ರಧಾನ ಯಜಕನಾಗಿದ್ದ ಕಾಯಫನ ಮಾವ. 14ಸಮಸ್ತ ಜನತೆಗಾಗಿ ಒಬ್ಬನು ಸತ್ತರೆ ವಿಹಿತವೆಂದು ಸಲಹೆಕೊಟ್ಟವನು ಈ ಕಾಯಫನೇ. ಗುರುವನ್ನು ಅಲ್ಲಗಳೆದ ಪೇತ್ರ. 15ಸಿಮೋನ್ ಪೇತ್ರನು ಮತ್ತು ಪ್ರಧಾನ ಯಾಜಕನಿಗೆ ಪರಿಚಿತನಾಗಿದ್ದ ಇನ್ನೊಬ್ಬ ಶಿಷ್ಯನು ಯೇಸುಸ್ವಾಮಿಯನ್ನು ಹಿಂಬಾಲಿಸುತ್ತಾ ಹೋದರು. ಪರಿಚಿತನಾಗಿದ್ದ ಶಿಷ್ಯನು ಯೇಸುವಿನೊಡನೆ ಪ್ರಧಾನ ಯಾಜಕನ ಮನೆಯ ಅಂಗಳವನ್ನು ಹೊಕ್ಕನು. 16ಪೇತ್ರನು ಹೊರಗಡೆ ಬಾಗಿಲ ಬಳಿಯಲ್ಲೇ ನಿಂತನು. ಪರಿಚಿತನಾಗಿದ್ದವನು ಅನಂತರ ಹೊರಗೆ ಬಂದು ದ್ವಾರಪಾಲಕಿಗೆ ಹೇಳಿ ಪೇತ್ರನನ್ನು ಒಳಕ್ಕೆ ಕರೆದುಕೊಂಡು ಹೋದನು. 17ಆ ದ್ವಾರಪಾಲಕಿಯು ಪೇತ್ರನನ್ನು ನೋಡಿ, “ನೀನೂ ಯೇಸುವಿನ ಶಿಷ್ಯರಲ್ಲಿ ಒಬ್ಬನಲ್ಲವೆ?” ಎಂದು ಕೇಳಿದಳು. ಅದಕ್ಕೆ ಪೇತ್ರನು, “ಇಲ್ಲ, ನಾನಲ್ಲ,” ಎಂದುಬಿಟ್ಟನು.
18ಆಗ ಚಳಿಯಿದ್ದುದರಿಂದ ಸೇವಕರೂ ಕಾವಲಾಳುಗಳೂ ಇದ್ದಲಿನ ಬೆಂಕಿ ಮಾಡಿ, ಸುತ್ತಲೂ ನಿಂತು ಚಳಿಕಾಯಿಸಿಕೊಳ್ಳುತ್ತಿದ್ದರು. ಪೇತ್ರನೂ ಅವರ ಸಂಗಡ ನಿಂತುಕೊಂಡು ಚಳಿಕಾಯಿಸಿಕೊಳ್ಳತೊಡಗಿದನು. 19ಅಷ್ಟರಲ್ಲಿ ಪ್ರಧಾನಯಾಜಕನು ಯೇಸುಸ್ವಾಮಿಯನ್ನು ಅವರ ಶಿಷ್ಯರ ವಿಷಯವಾಗಿ ಹಾಗು ಬೋಧನೆಯ ವಿಷಯವಾಗಿ ವಿಚಾರಿಸಿದನು. 20ಆಗ ಯೇಸುಸ್ವಾಮಿ, “ನಾನು ಬಹಿರಂಗವಾಗಿಯೇ ಜನರೆಲ್ಲರೂ ಕೇಳುವಂತೆ ಮಾತನಾಡಿದ್ದೇನೆ; ಯೆಹೂದ್ಯರೆಲ್ಲರು ಸಭೆಸೇರುವ ಪ್ರಾರ್ಥನಾಮಂದಿರಗಳಲ್ಲಿಯೂ ಮಹಾದೇವಾಲಯದಲ್ಲಿಯೂ ನಾನು ಯಾವಾಗಲೂ ಬೋಧನೆ ಮಾಡಿಕೊಂಡು ಬಂದಿದ್ದೇನೆ. ಮುಚ್ಚುಮರೆಯಾಗಿ ಏನನ್ನೂ ಹೇಳಿಲ್ಲ. 21ನನ್ನನ್ನು ವಿಚಾರಿಸುವುದೇಕೆ? ನಾನು ಹೇಳಿದ್ದನ್ನು ಯಾರು ಕೇಳಿದ್ದಾರೋ ಅವರನ್ನೇ ವಿಚಾರಿಸಿರಿ. ನಾನು ಬೋಧನೆ ಮಾಡಿದ್ದು ಏನೆಂದು ಅವರು ಬಲ್ಲರು,” ಎಂದು ಉತ್ತರಕೊಟ್ಟರು.
22ಯೇಸು ಹೀಗೆ ಹೇಳಲು ಬಳಿಯಲ್ಲೇ ನಿಂತಿದ್ದ ಕಾವಲಾಳೊಬ್ಬನು, “ಪ್ರಧಾನ ಯಾಜಕರಿಗೆ ಉತ್ತರಕೊಡುವುದು ಹೀಗೆಯೇ?” ಎಂದು ಕೆನ್ನೆಗೆ ಹೊಡೆದನು. 23ಆಗ ಯೇಸು, “ನಾನು ಆಡಿದ್ದು ತಪ್ಪಾಗಿದ್ದರೆ, ತಪ್ಪನ್ನು ತೋರಿಸಿಕೊಡು; ಸತ್ಯವಾಗಿದ್ದರೆ ಏಕೆ ಹೊಡೆಯುತ್ತೀ?” ಎಂದರು.
24ಆಗ ಅನ್ನನು ಯೇಸುವನ್ನು ಬಂಧಿಸಿ ಕಾಯಫನ ಬಳಿಗೆ ಕಳುಹಿಸಿದನು. ಮತ್ತೊಮ್ಮೆ ಅಲ್ಲಗಳೆದ ಪೇತ್ರ. 25ಇತ್ತ ಪೇತ್ರನು ನಿಂತು ಚಳಿಕಾಯಿಸಿಕೊಳ್ಳುತ್ತಾ ಇದ್ದನು. ಅಲ್ಲಿದ್ದವರು, “ನೀನು ಯೇಸುವಿನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಕೇಳಿದರು. ಪೇತ್ರನು, “ಇಲ್ಲ, ನಾನು ಶಿಷ್ಯನಲ್ಲ,” ಎಂದು ನಿರಾಕರಿಸಿದನು. 26ಪ್ರಧಾನಯಾಜಕನ ಸೇವಕರಲ್ಲಿ ಒಬ್ಬನು, (ಇವನು ಪೇತ್ರನು ಕಿವಿಕತ್ತರಿಸಿದವನ ನೆಂಟ) “ನಿನ್ನನ್ನು ಆತನೊಡನೆ ತೋಟದಲ್ಲಿ ನಾನು ನೋಡಲಿಲ್ಲವೇ?” ಎಂದು ಕೇಳಿದನು. 27ಪೇತ್ರನು ಪುನಃ ಅಲ್ಲಗಳೆದನು. ಕೂಡಲೇ ಕೋಳಿ ಕೂಗಿತು.
28ಆಮೇಲೆ ಅವರು ಯೇಸುವನ್ನು ಕಾಯಫನ ಮನೆಯಿಂದ ರಾಜ್ಯಪಾಲನ ನಿವಾಸಕ್ಕೆ ಕೊಂಡೊಯ್ದರು. ಆಗ ಮುಂಜಾನೆ, ಅರಮನೆಯೊಳಗೆ ಹೋದರೆ ಮಡಿಗೆಟ್ಟು ಹಬ್ಬದೂಟಕ್ಕೆ ಅಡ್ಡಿಯಾದೀತೆಂದು ಅವರೆಲ್ಲರು ಹೊರಗೇ ನಿಂತರು. 29ಆದುದರಿಂದ ಪಿಲಾತನೇ ಅವರ ಬಳಿಗೆ ಬಂದು, “ಈತನ ಮೇಲೆ ನಿಮ್ಮ ದೂರು ಏನು?” ಎಂದು ಕೇಳಿದನು. 30ಅವರು, “ಇವನು ಅಪರಾಧಿಯಲ್ಲದಿದ್ದರೆ, ಇವನನ್ನು ನಿಮಗೆ ತಂದೊಪ್ಪಿಸುತ್ತಿರಲಿಲ್ಲ,” ಎಂದರು. 31ಅದಕ್ಕೆ ಪಿಲಾತನು, “ಹಾಗಾದರೆ ನೀವೇ ಕರೆದುಕೊಂಡು ಹೋಗಿ, ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಈತನಿಗೆ ತೀರ್ಪುಕೊಡಿ,” ಎಂದನು. ಯೆಹೂದ್ಯರು, “ಮರಣದಂಡನೆ ವಿಧಿಸುವ ಅಧಿಕಾರ ನಮಗಿಲ್ಲವಲ್ಲಾ,” ಎಂದು ಉತ್ತರಿಸಿದರು. 32ಯೇಸು ತಮಗೆ ಯಾವ ಬಗೆಯ ಮರಣ ಕಾದಿರುವುದೆಂದು ಸೂಚಿಸಿ ಹೇಳಿದ ಮಾತು ಹೀಗೆ ನೆರವೇರುವಂತಾಯಿತು. 33ಅಗ ಪಿಲಾತನು ಅರಮನೆಯೊಳಗೆ ಹೋಗಿ ಯೇಸುಸ್ವಾಮಿಯನ್ನು ಕರೆಯಿಸಿ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು.
34ಅದಕ್ಕೆ ಯೇಸು, “ನೀವಾಗಿಯೇ ಇದನ್ನು ಹೇಳುತ್ತಿರುವಿರೋ ಅಥವಾ ಬೇರೆ ಯಾರಾದರೂ ನನ್ನನ್ನು ಕುರಿತು ಹೀಗೆ ಹೇಳಿದರೋ?” ಎನ್ನಲು 35ಪಿಲಾತನು, “ನಾನೇನು ಯೆಹೂದ್ಯನೇ? ನಿನ್ನ ಸ್ವಂತ ಜನರು ಮತ್ತು ಮುಖ್ಯಯಾಜಕರು ನಿನ್ನನ್ನು ನನ್ನ ಕೈಗೆ ಒಪ್ಪಿಸಿದ್ದಾರೆ. ನೀನು ಏನು ಮಾಡಿದ್ದೀಯಾ?” ಎಂದು ಕೇಳಿದನು. 36ಅದಕ್ಕೆ ಯೇಸು, “ನನ್ನ ಸಾಮ್ರಾಜ್ಯ ಈ ಲೋಕದ್ದಲ್ಲ, ನನ್ನ ಸಾಮ್ರಾಜ್ಯ ಈ ಲೋಕದ್ದಾಗಿದ್ದರೆ, ಯೆಹೂದ್ಯರ ಕೈಗೆ ನಾನು ಬೀಳದಂತೆ ನನ್ನ ಅನುಯಾಯಿಗಳು ಕಾದಾಡುತ್ತಿದ್ದರು. ನಿಜವಾಗಿಯೂ ನನ್ನ ಸಾಮ್ರಾಜ್ಯ ಇಹಲೋಕದ್ದಲ್ಲ,” ಎಂದರು. 37ಪಿಲಾತನು, “ಹಾಗಾದರೆ ನೀನೊಬ್ಬ ಅರಸನೋ?” ಎಂದು ಕೇಳಲು ಯೇಸು, “ ‘ಅರಸ, ಎನ್ನುವುದು ನೀವು ಹೇಳುವ ಮಾತು. ಸತ್ಯವನ್ನು ಕುರಿತು ಸಾಕ್ಷಿ ಹೇಳುವುದು ನನ್ನ ಕೆಲಸ. ಅದಕ್ಕಾಗಿಯೇ ನಾನು ಹುಟ್ಟಿದುದು. ಅದಕ್ಕಾಗಿಯೇ ನಾನು ಜಗತ್ತಿಗೆ ಬಂದುದು. ಸತ್ಯಪರರೆಲ್ಲರೂ ನನ್ನ ಮಾತಿಗೆ ಕಿವಿಗೊಡುತ್ತಾರೆ,” ಎಂದು ಹೇಳಿದರು. 38ಆಗ ಪಿಲಾತನು, “ಸತ್ಯ, ಸತ್ಯ ಎಂದರೆ ಏನು?” ಎಂದು ಪ್ರಶ್ನಿಸಿ ಅಲ್ಲಿ ನಿಲ್ಲದೆ ಹೊರಗೆಬಂದನು. 39ಹೀಗೆ ಪಿಲಾತನು ಹೊರಗೆ ಯೆಹೂದ್ಯರ ಬಳಿಗೆ ಬಂದು, “ನನಗೆ ಈತನಲ್ಲಿ ಯಾವ ಅಪರಾಧವೂ ಕಾಣುವುದಿಲ್ಲ. ಪಾಸ್ಕಹಬ್ಬದ ಸಂದರ್ಭದಲ್ಲಿ ಒಬ್ಬ ಸೆರೆಯಾಳನ್ನು ಬಿಡುಗಡೆ ಮಾಡುವ ಪದ್ಧತಿಯಿದೆಯಷ್ಟೆ? ಆದ್ದರಿಂದ ನೀವು ಬಯಸಿದರೆ ಯೆಹೂದ್ಯರ ಅರಸನನ್ನು ನಾನು ಬಿಡುಗಡೆ ಮಾಡುತ್ತೇನೆ,” ಎಂದು ಹೇಳಿದನು. 40ಅದಕ್ಕೆ ಅವರು, “ಬೇಡ, ಇವನು ಬೇಡ. ನಮಗೆ ಬರಬ್ಬನನ್ನು ಬಿಟ್ಟುಕೊಡಿ,” ಎಂದು ಬೊಬ್ಬೆ ಹಾಕಿದರು. ಬರಬ್ಬನೋ ಒಬ್ಬ ದರೋಡೆಕೋರನಾಗಿದ್ದನು.
1ಆಮೇಲೆ ಪಿಲಾತನು ಯೇಸುಸ್ವಾಮಿಯನ್ನು ಅಲ್ಲಿಂದ ಕರೆದೊಯ್ದು ಕೊರಡೆಯಿಂದ ಹೊಡೆಸಿದನು. 2ಸೈನಿಕರೋ ಮುಳ್ಳಿನ ಕಿರೀಟವನ್ನು ಹೆಣೆದು ಅವರ ತಲೆಗೆ ಮುಡಿಸಿ, ಕೆನ್ನೇರಳೆ ಬಣ್ಣದ ಅಂಗಿಯನ್ನು ಅವರಿಗೆ ಉಡಿಸಿ, ಹತ್ತಿರ ಬಂದು, 3“ಯೆಹೂದ್ಯರ ಅರಸನೇ, ನಿನಗೆ ಶುಭವಾಗಲಿ,” ಎಂದು ಜರೆಯುತ್ತಾ ಅವರ ಕೆನ್ನೆಗೆ ಹೊಡೆಯತೊಡಗಿದರು. 4ಪಿಲಾತನು ಮತ್ತೆ ಹೊರಗೆ ಬಂದು ಯೆಹೂದ್ಯರಿಗೆ, “ನೋಡಿ, ನಾನು ಇವನನ್ನು ನಿಮ್ಮ ಮುಂದೆ ತರುತ್ತಿದ್ದೇನೆ. ನನಗೆ ಇವನಲ್ಲಿ ಯಾವ ಅಪರಾಧವೂ ಕಾಣಿಸುತ್ತಿಲ್ಲ ಎಂಬುದು ನಿಮಗೆ ತಿಳಿದಿರಲಿ,” ಎಂದು ಹೇಳಿದನು. 5ಆಗ ಯೇಸು ಮುಳ್ಳಿನ ಕಿರೀಟವನ್ನೂ ಕೆನ್ನೇರಳೆ ಬಣ್ಣದ ಅಂಗಿಯನ್ನೂ ಧರಿಸಿದವರಾಗಿ ಹೊರಕ್ಕೆ ಬಂದರು. ಪಿಲಾತನು, “ಇಗೋ, ಈ ಮನುಷ್ಯ!” ಎಂದನು. 6ಮುಖ್ಯಯಾಜಕರೂ ಕಾವಲಾಳುಗಳೂ ಯೇಸುವನ್ನು ಕಂಡೊಡನೆ, “ಇವನನ್ನು ಶಿಲುಬೆಗೇರಿಸಿ, ಶಿಲುಬೆಗೇರಿಸಿ,” ಎಂದು ಬೊಬ್ಬೆಹಾಕಿದರು. ಆಗ ಪಿಲಾತನು, “ಬೇಕಾದರೆ ನೀವೇ ಇವನನ್ನು ಕರೆದುಕೊಂಡು ಹೋಗಿ ಶಿಲುಬೆಗೇರಿಸಿ. ನನಗಾದರೋ ಇವನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲ,” ಎಂದನು. 7ಅದಕ್ಕೆ ಯೆಹೂದ್ಯರು, “ನಮಗೊಂದು ಕಾನೂನು ಉಂಟು. ಅದರ ಮೇರೆಗೆ ಇವನು ಸಾಯಲೇಬೇಕು. ಏಕೆಂದರೆ, ತಾನು ದೇವರ ಪುತ್ರನೆಂದು ಹೇಳಿಕೊಂಡಿದ್ದಾನೆ,” ಎಂದು ಉತ್ತರಕೊಟ್ಟರು. 8ಇದನ್ನು ಕೇಳಿದ್ದೇ, ಪಿಲಾತನಿಗೆ ಮತ್ತಷ್ಟು ಭಯವಾಯಿತು. 9ಅವನು ಮತ್ತೆ ಅರಮನೆಯ ಒಳಕ್ಕೆ ಬಂದು, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು. ಆದರೆ ಯೇಸು ಉತ್ತರಕೊಡಲಿಲ್ಲ. 10ಆಗ ಪಿಲಾತನು, “ನನ್ನೊಡನೆ ನೀನು ಮಾತನಾಡುವುದಿಲ್ಲವೇ? ನಿನ್ನನ್ನು ಬಿಡುಗಡೆ ಮಾಡುವುದಕ್ಕೂ ನಿನ್ನನ್ನು ಶಿಲುಬೆಗೇರಿಸುವುದಕ್ಕೂ ನನಗೆ ಅಧಿಕಾರವಿದೆ ಎಂಬುದು ನಿನಗೆ ತಿಳಿಯದೋ?” ಎಂದನು.
11ಅದಕ್ಕೆ ಯೇಸು, “ನಿಮಗೆ ಮೇಲಿನಿಂದ ಕೊಟ್ಟ ಹೊರತು ನನ್ನ ಮೇಲೆ ನಿಮಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದ್ದರಿಂದ ನನ್ನನ್ನು ನಿಮ್ಮ ಕೈಗೆ ಒಪ್ಪಿಸಿದವನಿಗೇ ಪಾಪ ಹೆಚ್ಚು,” ಎಂದು ನುಡಿದರು. 12ಇದನ್ನು ಕೇಳಿದ ಮೇಲೆ ಪಿಲಾತನು ಯೇಸುವನ್ನು ಬಿಡುಗಡೆ ಮಾಡಲು ಪ್ರಯತ್ನಿಸಿದನು. ಯೆಹೂದ್ಯರಾದರೋ, “ಇವನನ್ನು ಬಿಡುಗಡೆಮಾಡಿದರೆ, ನೀವು ರೋಮ್ ಚಕ್ರವರ್ತಿಯ ಮಿತ್ರರಲ್ಲ; ತಾನೇ ಅರಸನೆಂದು ಹೇಳಿಕೊಳ್ಳುವ ಇವನು ರೋಮ್ ಚಕ್ರವರ್ತಿಗೆ ಶತ್ರು,” ಎಂದು ಕೂಗಿಕೊಂಡರು. 13ಅವರ ಆ ಕೂಗನ್ನು ಕೇಳಿ ಪಿಲಾತನು ಯೇಸುವನ್ನು ಹೊರಗೆ ಕರೆಯಿಸಿದನು. ‘ಹಾಸುಗಲ್ಲು’ ಎಂಬ ಕಟ್ಟೆಯ ಮೇಲಿದ್ದ ನ್ಯಾಯಪೀಠದ ಮೇಲೆ ಕುಳಿತುಕೊಂಡನು. ಯೆಹೂದ್ಯರ ಭಾಷೆಯಲ್ಲಿ ಆ ಸ್ಥಳಕ್ಕೆ ‘ಗಬ್ಬಥ’ ಎಂದು ಹೆಸರು. 14ಅಂದು ಹಬ್ಬದ ಹಿಂದಿನ ದಿನ, ಮಧ್ಯಾಹ್ನ ಹನ್ನೆರಡು ಗಂಟೆ ಇರಬಹುದು. ಪಿಲಾತನು ಯೆಹೂದ್ಯರನ್ನು ನೋಡಿ, “ಇಗೋ, ನಿಮ್ಮ ಅರಸನು,” ಎಂದು ಹೇಳಿದನು. 15ಅವರಾದರೋ “ಕೊಲ್ಲಿರಿ, ಕೊಲ್ಲಿರಿ; ಶಿಲುಬೆಗೇರಿಸಿರಿ,” ಎಂದು ಕಿರುಚಿದರು. ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೇರಿಸಲೇ?” ಎಂದನು. ಅದಕ್ಕೆ ಮುಖ್ಯಯಾಜಕರು, “ರೋಮ್ ಚಕ್ರವರ್ತಿಯ ಹೊರತು ನಮಗೆ ಬೇರೆ ಅರಸನಿಲ್ಲ,” ಎಂದು ಉತ್ತರಕೊಟ್ಟರು.
16ಕಡೆಗೆ ಪಿಲಾತನು ಯೇಸುವನ್ನು ಶಿಲುಬೆಗೇರಿಸುವುದಕ್ಕಾಗಿ ಅವರಿಗೆ ಒಪ್ಪಿಸಿಬಿಟ್ಟನು. ಅವರು ಯೇಸುವನ್ನು ತಮ್ಮ ವಶಕ್ಕೆ ತೆಗೆದುಕೊಂಡರು. 17ಯೇಸುಸ್ವಾಮಿ ತಮ್ಮ ಶಿಲುಬೆಯನ್ನು ತಾವೇ ಹೊತ್ತುಕೊಂಡು ‘ಕಪಾಲ’ ಎಂಬ ಸ್ಥಳಕ್ಕೆ ಹೋದರು. ಇದಕ್ಕೆ ಯೆಹೂದ್ಯರ ಭಾಷೆಯಲ್ಲಿ ‘ಗೊಲ್ಗೊಥಾ’ ಎಂದು ಹೆಸರು. 18ಅಲ್ಲಿ ಯೇಸುವನ್ನು ಶಿಲುಬೆಗೇರಿಸಿದರು. ಅವರ ಅಕ್ಕಪಕ್ಕದಲ್ಲಿ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು. 19ಪಿಲಾತನು ಒಂದು ಫಲಕದ ಮೇಲೆ, ‘ನಜರೇತಿನ ಯೇಸು, ಯೆಹೂದ್ಯರ ಅರಸ’ ಎಂದು ಬರೆಸಿ ಶಿಲುಬೆಯ ಮೇಲ್ಗಡೆ ಇರಿಸಿದರು. 20ಯೇಸುವನ್ನು ಶಿಲುಬೆಗೇರಿಸಿದ ಸ್ಥಳ ನಗರಕ್ಕೆ ಸಮೀಪದಲ್ಲೇ ಇದ್ದುದರಿಂದ, ಹಲವು ಮಂದಿ ಯೆಹೂದ್ಯರು ಆ ಫಲಕವನ್ನು ಓದಿದರು. ಅದನ್ನು ಹಿಬ್ರಿಯ, ಲತೀನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆಯಲಾಗಿತ್ತು.
21ಆದುದರಿಂದ ಯೆಹೂದ್ಯರ ಮುಖ್ಯ ಯಾಜಕರು ಪಿಲಾತನಿಗೆ: “ಯೆಹೂದ್ಯರ ಅರಸ ಎಂದು ಬರೆಯುವುದು ಬೇಡ, ತಾನು ‘ಯೆಹೂದ್ಯರ ಅರಸನೆಂದು ಹೇಳಿಕೊಂಡವನು’ ಎಂದು ಬರೆಯಿರಿ,” ಎಂದರು. 22ಅದಕ್ಕೆ ಪಿಲಾತನು, “ನಾನು ಬರೆದುದು ಬರೆದಾಯಿತು,” ಎಂದನು. 23ಯೇಸುವನ್ನು ಶಿಲುಬೆಗೇರಿಸಿದ ಬಳಿಕ ಸೈನಿಕರು ಯೇಸುವಿನ ಬಟ್ಟೆಗಳನ್ನು ತೆಗೆದುಕೊಂಡು ಒಬ್ಬೊಬ್ಬರಿಗೆ ಒಂದೊಂದು ಪಾಲಿನಂತೆ ನಾಲ್ಕು ಪಾಲುಮಾಡಿ ಹಂಚಿಕೊಂಡರು. ಅವರ ಒಳ ಅಂಗಿಯಾದರೋ ಹೊಲಿಗೆಯಿಲ್ಲದೆ ಮೇಲಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು. 24ಅದನ್ನು ತೆಗೆದುಕೊಂಡು ಅವರು ತಮ್ಮತಮ್ಮೊಳಗೆ, “ಇದನ್ನು ಹರಿಯುವುದು ಬೇಡ, ಚೀಟಿ ಹಾಕಿ ಯಾರ ಪಾಲಿಗೆ ಬರುವುದೋ ನೋಡೋಣ,” ಎಂದು ಮಾತಾಡಿಕೊಂಡು ಹಾಗೆಯೆ ಮಾಡಿದರು. “ನನ್ನ ಬಟ್ಟೆಗಳನ್ನು ತಮ್ಮಲ್ಲಿ ಹಂಚಿ ಕೊಂಡರು; ನನ್ನ ಅಂಗಿಗಾಗಿ ಚೀಟು ಹಾಕಿದರು,” ಎಂಬ ಪವಿತ್ರ ಗ್ರಂಥದ ವಾಕ್ಯ ಹೀಗೆ ನೆರವೇರಿತು. 25ಯೇಸುವಿನ ತಾಯಿ, ತಾಯಿಯ ಸಹೋದರಿ, ಕ್ಲೋಪನ ಹೆಂಡತಿ ಮರಿಯ ಮತ್ತು ಮಗ್ದಲದ ಮರಿಯ - ಇವರು ಶಿಲುಬೆಯ ಬಳಿಯಲ್ಲಿ ನಿಂತಿದ್ದರು.
26ಯೇಸು ತಮ್ಮ ತಾಯನ್ನೂ ಆಕೆಯ ಪಕ್ಕದಲ್ಲಿ ನಿಂತಿದ್ದ ತಮ್ಮ ಆಪ್ತ ಶಿಷ್ಯನನ್ನೂ ನೋಡಿ, “ಅಮ್ಮಾ, ಇಗೋ, ನಿನ್ನ ಮಗ,” ಎಂದರು. 27ಅನಂತರ ತಮ್ಮ ಶಿಷ್ಯನನ್ನು ಕುರಿತು, “ಇಗೋ, ನಿನ್ನ ತಾಯಿ,” ಎಂದರು. ಅಂದಿನಿಂದ ಆ ಶಿಷ್ಯನು ಆಕೆಯನ್ನು ತನ್ನ ಮನೆಯಲ್ಲೇ ಇರಿಸಿಕೊಂಡನು. 27ಅನಂತರ ತಮ್ಮ ಶಿಷ್ಯನನ್ನು ಕುರಿತು, “ಇಗೋ, ನಿನ್ನ ತಾಯಿ,” ಎಂದರು. ಅಂದಿನಿಂದ ಆ ಶಿಷ್ಯನು ಆಕೆಯನ್ನು ತನ್ನ ಮನೆಯಲ್ಲೇ ಇರಿಸಿಕೊಂಡನು. 28ಇದಾದ ಮೇಲೆ ಯೇಸುಸ್ವಾಮಿ ನೆರವೇರಬೇಕಾದುದೆಲ್ಲವೂ ನೆರವೇರಿದೆ ಎಂದು ತಿಳಿದು ಪವಿತ್ರಗ್ರಂಥದಲ್ಲಿ ಬರೆದುದು ಈಡೇರುವಂತೆ, “ನನಗೆ ದಾಹವಾಗಿದೆ,” ಎಂದು ನುಡಿದರು. 29ಬಳಿಯಲ್ಲೇ ಹುಳಿರಸ ತುಂಬಿದ ಪಾತ್ರೆಯೊಂದಿತ್ತು. ಅವರು ಸ್ಪಂಜನ್ನು ಆ ಹುಳಿರಸದಲ್ಲಿ ತೋಯಿಸಿ ಹಿಸೋಪ್ಗಿಡದ ಕೋಲಿಗೆ ಸಿಕ್ಕಿಸಿ, ಯೇಸುವಿನ ಬಾಯಿಗೆ ಮುಟ್ಟಿಸಿದರು. 30ಯೇಸು ಆ ಹುಳಿರಸವನ್ನು ಸೇವಿಸುತ್ತಲೇ, “ಎಲ್ಲಾ ನೆರವೇರಿತು,” ಎಂದು ನುಡಿದು ತಲೆಬಾಗಿ ತಮ್ಮ ಆತ್ಮವನ್ನು ಒಪ್ಪಿಸಿದರು.
31ಅಂದು ಪಾಸ್ಕ ಹಬ್ಬದ ಹಿಂದಿನ ದಿನ. ಮಾರನೆಯ ದಿನ ಸಬ್ಬತ್ ದಿನವೂ ದೊಡ್ಡ ಹಬ್ಬವೂ ಆಗಿತ್ತು. ಸಬ್ಬತ್ ದಿನದಂದು ಶವಗಳು ಶಿಲುಬೆಯ ಮೇಲೆ ತೂಗಾಡುವುದು ಸರಿಯಲ್ಲ ಎಂದುಕೊಂಡು ಶಿಲುಬೆಗೇರಿಸಲಾಗಿದ್ದವರ
ಕಾಲುಗಳನ್ನು ಮುರಿದು ಅವರ ಶವವನ್ನು ಅಂದೇ ತೆಗೆಯಿಸಿಬಿಡಲು ಯೆಹೂದ್ಯರು ಪಿಲಾತನಿಂದ ಅಪ್ಪಣೆ ಕೇಳಿಕೊಂಡರು. 32ಅಂತೆಯೇ ಸೈನಿಕರು ಬಂದು ಯೇಸುವಿನೊಡನೆ ಶಿಲುಬೆಗೇರಿಸಲಾಗಿದ್ದ ಮೊದಲನೆಯವನ ಮತ್ತು ಎರಡನೆಯವನ ಕಾಲುಗಳನ್ನು ಮುರಿದರು. 33ತರುವಾಯ ಯೇಸುವಿನ ಬಳಿಗೆ ಬಂದರು. ಯೇಸು ಆಗಲೇ ಸತ್ತುಹೋಗಿರುವುದನ್ನು ಕಂಡು, ಅವರ ಕಾಲುಗಳನ್ನು ಮುರಿಯಲಿಲ್ಲ. 34ಆದರೂ ಸೈನಿಕರಲ್ಲಿ ಒಬ್ಬನು ಈಟಿಯಿಂದ ಅವರ ಪಕ್ಕೆಯನ್ನು ತಿವಿದನು. ಕೂಡಲೇ ರಕ್ತವೂ ನೀರೂ ಅಲ್ಲಿಂದ ಹೊರಗೆ ಹರಿದು ಬಂದವು. 35ಇದು ಕಣ್ಣಾರೆ ಕಂಡವನ ಹೇಳಿಕೆ. ಈ ಹೇಳಿಕೆ ಸತ್ಯವಾದುದು; ತಾನು ಸತ್ಯವನ್ನೇ ನುಡಿಯುತ್ತಿದ್ದೇನೆಂಬ ಅರಿವು ಅವನಿಗೆ ಇದೆ. ನೀವು ವಿಶ್ವಾಸಿಸಬೇಕೆಂದೇ ಆತನು ಇದನ್ನು ಹೇಳಿದ್ದಾನೆ. 36‘ಆತನ ಎಲುಬೊಂದನ್ನು ಮುರಿಯಕೂಡದು’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಆ ವಾಕ್ಯ ನೆರವೇರುವಂತೆ ಹೀಗೆ ನಡೆಯಿತು. 37‘ತಾವು ಇರಿದವನನ್ನೇ ಅವರು ನಿರೀಕ್ಷಿಸುವರು’ ಎನ್ನುತ್ತದೆ ಇನ್ನೊಂದು ವಾಕ್ಯ.
38ಅರಿಮತಾಯ ಊರಿನ ಜೋಸೆಫ್ ಎಂಬುವನೂ ಕೂಡ ಯೇಸುವಿನ ಶಿಷ್ಯರಲ್ಲಿ ಒಬ್ಬನು. ಈತನು ಯೆಹೂದ್ಯರಿಗೆ ಹೆದರಿ ತಾನು ಶಿಷ್ಯನೆಂದು ತೋರಿಸಿಕೊಳ್ಳುತ್ತಿರಲಿಲ್ಲ. ಮೇಲೆ ಹೇಳಿದ್ದೆಲ್ಲ ನಡೆದಾದ ಮೇಲೆ ಈತನು ಯೇಸುವಿನ ಪಾರ್ಥಿವ ಶರೀರವನ್ನು ಕೊಂಡೊಯ್ಯಲು ಪಿಲಾತನಿಂದ ಅಪ್ಪಣೆ ಕೇಳಿದನು. ಪಿಲಾತನು ಒಪ್ಪಿಗೆ ಕೊಡಲು ಈತನು ಬಂದು ಪಾರ್ಥಿವ ಶರೀರವನ್ನು ಕೊಂಡೊಯ್ದನು. 39ಈತನು ಮಾತ್ರವಲ್ಲ, ಹಿಂದೊಮ್ಮೆ ಯೇಸುವನ್ನು ರಾತ್ರಿಯಲ್ಲಿ ನೋಡಲು ಬಂದಿದ್ದ ನಿಕೋದೇಮನು ಕೂಡ ಅಲ್ಲಿಗೆ ಬಂದನು. ಇವನು ರಕ್ತಬೋಳ ಹಾಗೂ ಅಗರು ಕಲಸಿದ ಮೂವತ್ತು ಕಿಲೋಗ್ರಾಮಿನಷ್ಟು ಚೂರ್ಣವನ್ನು ತಂದಿದ್ದನು. 40ಇವರು ಯೇಸುವಿನ ಪಾರ್ಥಿವ ಶರೀರವನ್ನು ತೆಗೆದು ಯೆಹೂದ್ಯರ ಶವಸಂಸ್ಕಾರದ ಪದ್ದತಿಯಂತೆ ಸುಗಂಧ ದ್ರವ್ಯಗಳನ್ನು ಹಾಕಿ ನಾರುಮಡಿಯಲ್ಲಿ ಸುತ್ತಿದರು. 41ಯೇಸುವನ್ನು ಶಿಲುಬೆಗೇರಿಸಿದ ಸ್ಥಳದಲ್ಲಿ ಒಂದು ತೋಟವಿತ್ತು. ಆ ತೋಟದಲ್ಲಿ ಅದುವರೆಗೆ ಯಾರ ಶವವನ್ನೂ ಇಡದ ಹೊಸ ಸಮಾಧಿ ಇತ್ತು. 42ಸಮಾಧಿಯು ಹತ್ತಿರದಲ್ಲೇ ಇದ್ದುದರಿಂದ ಹಾಗೂ ಮರುದಿನ ಪಾಸ್ಕಹಬ್ಬವಾದುದರಿಂದ ಯೇಸುವಿನ ಪಾರ್ಥಿವ ಶರೀರವನ್ನು ಅಲ್ಲೇ ಸಮಾಧಿಮಾಡಿದರು.
ಚಿಂತನೆ
ಎಲ್ಲರ ಜೀವನ ಚರಿತ್ರೆ ಪ್ರಾರಂಭಗೊಳ್ಳುವುದು ಅವರ ಜನನದಿಂದ. ಆದರೆ ಕ್ರಿಸ್ತಯೇಸುವಿನ ಜೀವನ ಚರಿತ್ರೆ ಪ್ರಾರಂಭಗೊಳ್ಳುವುದು ಅವರ ಮರಣದ ಗಳಿಗೆಯಿಂದ ಎಂದರೆ ಆಶ್ಚರ್ಯವಾಗಬಹುದು. ನಾಲ್ಕು ಮಂದಿ ಶುಭಸಂದೇಶಕರು, ಸಂತ ಪೌಲ ಮತ್ತು ಇತರ ಪತ್ರಕರ್ತರು ತಮ್ಮ ಕೃತಿಗಳನ್ನು ಹೆಣೆದದ್ದು ಕ್ರಿಸ್ತನ ಶಿಲುಬೆಯ ಮರಣದ ಸುತ್ತ ಎಂಬುದಿಲ್ಲಿ ಗಮನಾರ್ಹ. ಪ್ರಪ್ರಥಮವಾಗಿ ಬರೆದವೆನ್ನಲಾಗುವ ಸಂತ ಪೌಲರ ಪತ್ರಗಳಲ್ಲಾಗಲಿ, ಪ್ರಪ್ರಥಮವಾಗಿ ಬರೆಯಲಾದ ಸಂತ ಮಾರ್ಕನ ಶುಭಸಂದೇಶದಲ್ಲಿ ಯೇಸುವಿನ ಜನನದ ಪ್ರಕರಣದ ಉಲ್ಲೇಖವೇ ಇಲ್ಲ. ಯೇಸು ಮೃತರಾಗಿ ಪುನರುತ್ಥಾನರಾದ ಸುಮಾರು ೬೦ ವರ್ಷಗಳಾದ ನಂತರ ಗ್ರೀಕ್ ಜನರಿಗಾಗಿ ಬರೆಯಲಾದ ಲೂಕರ ಶುಭಸಂದೇಶದಲ್ಲಿ ಹೊರನಾಡಿನ ಜನರಿಗೆ ಯೇಸುವಿನ ಸಂಪೂರ್ಣ ಜೀವನ ಚರಿತ್ರೆಯನ್ನು ತೆರೆದಿಡುವ ಸಲುವಾಗಿ ಜನನದ ಪ್ರಕರಣವನ್ನು ಸವಿಸ್ತಾರವಾಗಿ ಬರೆಯಲಾಗಿದೆ. ಇನ್ನು ಯೆಹೂದ್ಯರ ಬಳಕೆಗಾಗಿ ಬರೆಯಲಾದ ಸಂತ ಮತ್ತಾಯನ ಶುಭಸಂದೇಶದಲ್ಲಿ ಯೇಸು ಅಬ್ರಹಾಮನ ಸಂತತಿಗೆ ಸೇರಿದವರು, ದಾವೀದರಸನ ವಂಶಜ ಎಂದು ಸಾಬೀತುಪಡಿಸಲು ಯೇಸುವಿನ ಜನನದ ಹಿನ್ನೆಲೆ ಮೂಲವನ್ನು ವಿವರಿಸುತ್ತಾನೆ.
ಎಲ್ಲರ ಜೀವನ ಚರಿತ್ರೆ ಪ್ರಾರಂಭಗೊಳ್ಳುವುದು ಅವರ ಜನನದಿಂದ. ಆದರೆ ಕ್ರಿಸ್ತಯೇಸುವಿನ ಜೀವನ ಚರಿತ್ರೆ ಪ್ರಾರಂಭಗೊಳ್ಳುವುದು ಅವರ ಮರಣದ ಗಳಿಗೆಯಿಂದ ಎಂದರೆ ಆಶ್ಚರ್ಯವಾಗಬಹುದು. ನಾಲ್ಕು ಮಂದಿ ಶುಭಸಂದೇಶಕರು, ಸಂತ ಪೌಲ ಮತ್ತು ಇತರ ಪತ್ರಕರ್ತರು ತಮ್ಮ ಕೃತಿಗಳನ್ನು ಹೆಣೆದದ್ದು ಕ್ರಿಸ್ತನ ಶಿಲುಬೆಯ ಮರಣದ ಸುತ್ತ ಎಂಬುದಿಲ್ಲಿ ಗಮನಾರ್ಹ. ಪ್ರಪ್ರಥಮವಾಗಿ ಬರೆದವೆನ್ನಲಾಗುವ ಸಂತ ಪೌಲರ ಪತ್ರಗಳಲ್ಲಾಗಲಿ, ಪ್ರಪ್ರಥಮವಾಗಿ ಬರೆಯಲಾದ ಸಂತ ಮಾರ್ಕನ ಶುಭಸಂದೇಶದಲ್ಲಿ ಯೇಸುವಿನ ಜನನದ ಪ್ರಕರಣದ ಉಲ್ಲೇಖವೇ ಇಲ್ಲ. ಯೇಸು ಮೃತರಾಗಿ ಪುನರುತ್ಥಾನರಾದ ಸುಮಾರು ೬೦ ವರ್ಷಗಳಾದ ನಂತರ ಗ್ರೀಕ್ ಜನರಿಗಾಗಿ ಬರೆಯಲಾದ ಲೂಕರ ಶುಭಸಂದೇಶದಲ್ಲಿ ಹೊರನಾಡಿನ ಜನರಿಗೆ ಯೇಸುವಿನ ಸಂಪೂರ್ಣ ಜೀವನ ಚರಿತ್ರೆಯನ್ನು ತೆರೆದಿಡುವ ಸಲುವಾಗಿ ಜನನದ ಪ್ರಕರಣವನ್ನು ಸವಿಸ್ತಾರವಾಗಿ ಬರೆಯಲಾಗಿದೆ. ಇನ್ನು ಯೆಹೂದ್ಯರ ಬಳಕೆಗಾಗಿ ಬರೆಯಲಾದ ಸಂತ ಮತ್ತಾಯನ ಶುಭಸಂದೇಶದಲ್ಲಿ ಯೇಸು ಅಬ್ರಹಾಮನ ಸಂತತಿಗೆ ಸೇರಿದವರು, ದಾವೀದರಸನ ವಂಶಜ ಎಂದು ಸಾಬೀತುಪಡಿಸಲು ಯೇಸುವಿನ ಜನನದ ಹಿನ್ನೆಲೆ ಮೂಲವನ್ನು ವಿವರಿಸುತ್ತಾನೆ.
ಆದರೆ
ಯಾರೂ ಕ್ರಿಸ್ತನ ಮರಣವಿಲ್ಲದೆ ತಮ್ಮ ಕೃತಿಯನ್ನು ಪ್ರಾರಂಭಿಸುವುದೇ ಇಲ್ಲ. ಶಿಲುಬೆಯ ಮರಣದ ಉಲ್ಲೇಖವಿಲ್ಲದೆ
ಯಾವುವೂ ಪೂರ್ಣಗೊಳ್ಳುವುದೇ ಇಲ್ಲ. ಎಲ್ಲವೂ ಬರೆಯಲ್ಪಡುವುದು. ವರ್ಣಿಸಲ್ಪಡುವುದು, ಕ್ರೈಸ್ತ ವಿಶ್ವಾಸ
ಸಿದ್ಧಾಂತಗಳು ಆಧರಿಸಲ್ಪಡುವುದು ಕ್ರಿಸ್ತನ ಶಿಲುಬೆಯ ಮರಣ ಅಡಿಪಾಯದ ಮೇಲೆಯೇ. ನಾನು ಯೇಸುಕ್ರಿಸ್ತರನ್ನು
ಅದೂ ಶಿಲುಬೆಗೇರಿಸಲಾದ ಯೇಸುವನ್ನು ಹೊರತು ಬೇರೆ ಯಾವುದನ್ನೂ ಅರಿಯಲು ಆಶಿಸಲಿಲ್ಲ (೧ಕೊರಿ ೨:೨) ನಾವು
ಜೀವಿಸಬೇಕೆಂದೇ ನಮಗಾಗಿ ಅವರು ಸಾವನ್ನಪ್ಪಿದರು (೧ಥೆಸ ೫:೧೦) ಎನ್ನುತ್ತಾರೆ ಸಂತ ಪೌಲರು.
ಕ್ರಿಸ್ತಯೇಸು ಶಿಲುಬೆಯ ಮೇಲೆ ಮರಣ ಹೊಂದಿದ ಈ ದಿನ ನಮ್ಮೆಲ್ಲರ
ಜನನ ದಿನ, ಹೀಗಾಗಿ ನಮಗಿದು ಶುಭದಿನ. ಶಿಲುಬೆ ಅವಮಾನ ಸಂಕೇತವಲ್ಲ ಅಭಿಮಾನದ ಸಂಕೇತ, ಶಿಲುಬೆ ಸೋಲಿನ
ಚಿಹ್ನೆಯಲ್ಲ, ವಿಜಯದ ಚಿಹ್ನೆ. ಶಿಲುಬೆ ಹತಾಶೆಯ ಕುರಹಲ್ಲ ಚೈತನ್ಯದ ಸಾಧನ. ಈ ಶುಭಶುಕ್ರವಾರವನ್ನು
ಸಂಭ್ರಮಿಸೋಣ ಮತ್ತು ಶಿಲುಬೆಯ ಪ್ರಭಾವಕ್ಕೊಳಗಾಗಲು ಪ್ರಯತ್ನಿಸೋಣ. ಎರಡು ಸಾವಿರ ವರ್ಷಗಳ ಹಿಂದೆ ಶಿಲುಬೆಯನ್ನೇರಿದ
ಕ್ರಿಸ್ತ ಇಂದೂ ನಮಗೆ ಪ್ರಸ್ತುತವೆನಿಸುತ್ತಾರೆ. ಇಂದೂ ಕೂಡ ಶಿಲುಬೆಯಿಂದ ಅವರು ಇಡೀ ವಿಶ್ವವನ್ನು
ಉದ್ದೇಶಿಸಿ ಬೋಧನೆ ಮಾಡುತ್ತಿದ್ದಾರೆ. ನಾನು ನಿಮ್ಮನ್ನು ಪ್ರೀತಿಸಿದಂತೆ, ಕ್ಷಮಿಸಿದಂತೆ ನೀವೂ ಇತರರನ್ನು
ಪ್ರೀತಿಸುವುದು, ಕ್ಷಮಿಸುವುದು ಸಾಧ್ಯವೇ? ಎಂದು ಸವಾಲು ಹಾಕುತ್ತಿದ್ದಾರೆ. ಇದಕ್ಕೆ ನಮ್ಮ ಉತ್ತರವೇನು?
ಫಾದರ್ ಪೀಟರ್ ಚಿನ್ನಪ್ಪ
No comments:
Post a Comment