ಬುಧವಾರ, ತಪಸ್ಸುಕಾಲದ ಮೂರನೇ ವಾರ
ಮೊದಲವಾಚನ: ಧರ್ಮೋಪದೇಶಕಾಂಡ 4:1,5-9
1 ಮೋಶೆ ಜನರಿಗೆ ಹೀಗೆಂದನು: “ಇಸ್ರಯೇಲರೇ, ಕೇಳಿ: ನೀವು ಜೀವದಿಂದುಳಿದು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳಬೇಕಾದರೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನದಿಂದ ಅನುಸರಿಸಬೇಕು. 5 “ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಸರ್ವೇಶ್ವರ ನನಗೆ ಆಜ್ಞಾಪಿಸಿದಂತೆಯೇ ನಿಮಗೆ
ಬೋಧಿಸಿದ್ದೇನ6 ಇವುಗಳನ್ನು ಕೈಗೊಂಡು ಅನುಸರಿಸಿರಿ. ಅನುಸರಿಸಿದ್ದೇ ಆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು; ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, ‘ಈ
ದೊಡ್ಡ ಜನಾಂಗ ಎಂಥಾ ಜ್ಞಾನವಿವೇಕವುಳ್ಳ ಜನಾಂಗ’, ಎಂದು ಮಾತಾಡಿಕೊಳ್ಳುವರ7 ನಾವು ಮೊರೆಯಿಡುವಾಗಲೆಲ್ಲಾ ನಮ್ಮ
ದೇವರಾದ ಸರ್ವೇಶ್ವರ ನಮಗೆ ಸಮೀಪವಾಗಿರುವಂತೆ ಬೇರೆ ಯಾವ ಜನಾಂಗಕ್ಕೆ, ಅದೆಷ್ಟೇ ದೊಡ್ಡದಾಗಿರಲಿ, ಯಾವ ದೇವರು ಹೀಗೆ ಸಮೀಪವಾಗಿರುತ್ತಾರ8 ನಾನು ಈ ದಿನ ನಿಮ್ಮ ಮುಂದಿಡುವ ಇಂಥ ನ್ಯಾಯಯುತವಾದ ಆಜ್ಞಾವಿಧಿಗಳನ್ನು ಒಳಗೊಂಡ
ಈ ಧರ್ಮಶಾಸ್ತ್ರಕ್ಕೆ ಸಮಾನವಾದುದು ಬೇರೆಯಾವ ಜನಾಂಗಕ್ಕೆ ಉಂಟು?
9 “ಹೀಗಿರುವಲ್ಲಿ, ನೀವು ಬಹಳ ಜಾಗರೂಕತೆಯಿಂದಿರಿ; ನಿಮ್ಮ ಕಣ್ಣುಗಳಿಂದಲೇ ನೋಡಿದ ಘಟನೆಗಳನ್ನು ಎಷ್ಟು ಮಾತ್ರಕ್ಕೂ ಮರೆಯದಿರಿ; ಜೀವಮಾನಪರ್ಯಂತ ಇವುಗಳನ್ನು ನೆನಪಿನಲ್ಲಿ ಇಡಿ;
ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಿ.”
ಕೀರ್ತನೆ
147:12-13, 15-16, 19-20
ಜೆರುಸಲೇಮೇ, ಕೀರ್ತಿಸು ಪ್ರಭುವನು
12:
ಜೆರುಸಲೇಮೇ, ಕೀರ್ತಿಸು ಪ್ರಭುವನು ಸಿಯೋನೇ, ಸ್ತುತಿಸು ನಿನ್ನ ದೇವರನು
13:
ಬಲಪಡಿಸಿಹನಾತ ನಿನ್ನ ಹೆಬ್ಬಾಗಿಲ ಅಗುಳಿಗಳನು ಆಶೀರ್ವದಿಸಿಹನು ನಿನ್ನಲ್ಲಿರುವ ಮಕ್ಕಳನು
15:
ಕಳಿಸುವನು ಧರೆಗೆ ತನ್ನ ಆಣತಿ ಸಿದ್ಧಿಯಾಗುವುದದು ಬಲು
ಶೀಘ್ರದಿ
16:
ಸುರಿಸುವನು ಹಿಮವನು ಉಣ್ಣೆಯಂತೆ ಹರಡುವನು ಇಬ್ಬನಿಯನು ಬೂದಿಯಂತೆ
19:
ತಿಳಿಸಿಹನು ತನ್ನ ವಾಕ್ಯವನು ಯಕೋಬ್ಯರಿಗೆ ತನ್ನ ವಿಧಿನಿಯಮಗಳನು ಇಸ್ರಯೇಲರಿಗೆ
20:
ಬೇರಾವ ಜನಾಂಗಕ್ಕೂ ಆತ ಹೀಗೆ ಮಾಡಿಲ್ಲ ಆತನ ವಿಧಿನಿಯಮಗಳನು ಅವರಿಗೆ ತಿಳಿಸಿಲ್ಲ ಅಲ್ಲೆಲೂಯ!
ಶುಭಸಂದೇಶ: ಮತ್ತಾಯ 5: 17-19
17 ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ಮೋಶೆಯ
ಧರ್ಮಶಾಸ್ತ್ರವನ್ನಾಗಲಿ, ಪ್ರವಾದಿಗಳ
ಪ್ರವಚನಗಳನ್ನಾಗಲಿ ರದ್ದು ಮಾಡಲು ನಾನು ಬಂದೆನೆಂದು ತಿಳಿಯಬೇಡಿ. ರದ್ದು ಮಾಡಲು ಅಲ್ಲ, ಅವುಗಳನ್ನು ಸಿದ್ಧಿಗೆ ತರಲು ಬಂದಿದ್ದೇನೆ. 18 ಭೂಮ್ಯಾಕಾಶಗಳು ಉಳಿದಿರುವ ತನಕ ಧರ್ಮಶಾಸ್ತ್ರವೆಲ್ಲ ನೆರವೇರುವುದೇ
ಹೊರತು ಅದರಲ್ಲಿ ಒಂದು ಚಿಕ್ಕ ಅಕ್ಷರವಾಗಲಿ, ಚುಕ್ಕೆಯಾಗಲಿ ನಿರರ್ಥಕವಾಗದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 19 ಹೀಗಿರುವಲ್ಲಿ, ಅದರ ಆಜ್ಞೆಗಳಲ್ಲಿ ಅತಿ ಚಿಕ್ಕದೊಂದನ್ನು ವಿರುವವನು, ವಿರುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಅತ್ಯಲ್ಪನೆಂದು ಪರಿಗಣಿತನಾಗುವನು; ಧರ್ಮಶಾಸ್ತ್ರವನ್ನು ಪಾಲಿಸುವವನು, ಪಾಲಿಸುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಮಹಾತ್ಮನೆಂದು ಪರಿಗಣಿತನಾಗುವನು.”
ಚಿಂತನೆ: ದೈವಾಜ್ಞೆಗಳು
ಮಾನವರನ್ನು ಸನ್ಮಾರ್ಗದಲ್ಲಿ ನಡೆಸುವ ದಿಕ್ಸೂಚಿಗಳು. ಅವುಗಳನ್ನು ಅನುಸರಿಸುವವರು
ಸ್ವರ್ಗಸಾಮ್ರಾಜ್ಯಕ್ಕೆ ಭಾಜನರಾಗುತ್ತಾರೆ. ದೈವಾಜ್ಞೆಗಳು ದೇವರ ಪ್ರೀತಿಯನ್ನು ಸವಿಯಲೂ ಮಾನವರ
ಮಧ್ಯ ಸಾಮರಸ್ಯದ ಜೀವನವನ್ನು ಸಾಗಿಸಲೂ ಸಹಕಾರಿಗಳಾಗಿವೆ. ಅವು ನಮಗೆ ಹೊರೆಯಲ್ಲ ಬದಲಿಗೆ ನಮ್ಮ
ದುರ್ಗುಣಗಳನ್ನೂ,
ಸ್ವಾರ್ಥದ ಗೋಡೆಗಳನ್ನು ಧಮನಮಾಡುತ್ತವೆ ಹಾಗೂ ನಮ್ಮ ಪಾಪದ ಹೊರೆಯನ್ನು
ಸಂಪೂರ್ಣವಾಗಿ ಅಳಿಸಿ ನಮ್ಮ ಮುರಿದ ಸಂಬಂಧಗಳನ್ನು ಪುನಃ ಸ್ಥಾಪಿಸಿ ಪ್ರೀತಿಯ ಕಾರಂಜಿಯನ್ನು
ಮೊಳಗಿಸುತ್ತವೆ. ದೈವಾಜ್ಞೆಗಳ ಪಾಲನೆಯಿಂದ ಪರಪ್ರೀತಿ ಉದಯವಾಗಿ ಮಾನವ ಜೀವನವನ್ನು
ಸಾರ್ಥಕಗೊಳಿಸುತ್ತದೆ.
No comments:
Post a Comment