ಸುವಾರ್ತಾ ಪ್ರಸಾರದ ಉದ್ದೇಶ: ಯುವಜನರು, ವಿಶೇಷವಾಗಿ ಲ್ಯಾಟಿನ್ ಅಮೇರಿಕಾದ ಯುವಜನರು ಪೂಜ್ಯ ಕನ್ಯಾ ಮರಿಯಮ್ಮನವರ ಆದರ್ಶವನ್ನು ಅನುಸರಿಸುತ್ತಾ ಪ್ರಭು ಯೇಸುವಿನ ಕರೆಗೆ ಓಗೊಟ್ಟು ಸುವಾರ್ತೆಯ ಆನಂದವನ್ನು ಜಗತ್ತಿನಾದ್ಯಂತ ಪಸರಿಸುವ ಕ್ಷಮತೆಯನ್ನು ಹೊಂದುವುದು.
30 ಜನವರಿ 2019
ಬುಧವಾರ/ಹಸಿರು/ ಸಾಧಾರಣ ಕಾಲದ ಮೂರ ನೇ ವಾರ
1ನೇ ವಾಚನ - ಹಿಬ್ರಿ 1೦: 11-18
ಕೀರ್ತನೆ - 11೦: 1, 2, 3, 4.
ಶುಭಸಂದೇಶ - ಮಾರ್ಕ 4: 1-2೦
1ನೇ ವಾಚನ - ಹಿಬ್ರಿ 1೦: 11-18
ಕೀರ್ತನೆ - 11೦: 1, 2, 3, 4.
ಶುಭಸಂದೇಶ - ಮಾರ್ಕ 4: 1-2೦
ವಾಚನಗಳು
ಮೊದಲನೇ ವಾಚನ
ಹಿಬ್ರಿಯರಿಗೆ ಬರೆದ ಪತ್ರದಿಂದ ವಾಚನ
ಹಿಬ್ರಿ 1೦: 11-18
ಹಿಬ್ರಿ 1೦: 11-18
11ಪ್ರತಿಯೊಬ್ಬ ಯಾಜಕನು ಅನುದಿನವೂ ತನ್ನ ಸೇವೆಯನ್ನು ನಿರ್ವಹಿಸುತ್ತಾನೆ. ಆದರೆ ಇವುಗಳಿಂದ ಎಂದಿಗೂ ಪಾಪನಿವಾರಣೆ ಆಗದು. 12ಕ್ರಿಸ್ತಯೇಸು ಪಾಪನಿವಾರಣೆಗೆಂದು ಎಲ್ಲಾ ಕಾಲಕ್ಕೂ ಏಕೈಕ ಬಲಿಯನ್ನು ಅರ್ಪಿಸಿ ದೇವರ ಬಲಪಾಶ್ರ್ವದಲ್ಲಿ ಆಸೀನರಾಗಿದ್ದಾರೆ. 13ಅವರ ಶತ್ರುಗಳು ತಮ್ಮ ಕಾಲಡಿಗೆ ಬರುವತನಕ ಅಲ್ಲೇ ಕಾದಿರುತ್ತಾರೆ. 14ತಾವು ಪುನೀತಗೊಳಿಸಿದವರನ್ನು ಒಂದೇ ಒಂದು ಬಲಿಯರ್ಪಣೆಯಿಂದ ಯೇಸು ನಿರಂತರ ಸಿದ್ಧಿಗೆ ತಂದಿದ್ದಾರೆ. 15ಇದನ್ನು ಕುರಿತು ಪವಿತ್ರಾತ್ಮರು ಕೂಡ ನಮಗೆ ಸಾಕ್ಷಿಕೊಡುತ್ತಾರೆ:
16“ಆ ದಿನಗಳು ಬಂದಮೇಲೆ ನಾನು ಅವರೊಡನೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು: ನನ್ನ ಆಜ್ಞೆಗಳನ್ನು ಅವರ ಹೃದಯದಲ್ಲಿ ನಾಟಿಸುವೆನು; ಅವರ ಮನದಲ್ಲಿ ಬರೆಯುವೆನು,” ಎಂದು ಹೇಳಿದ ನಂತರವೇ, 17“ಅವರ ಪಾಪಗಳನ್ನೂ ತಪ್ಪುನೆಪ್ಪುಗಳನ್ನೂ ನೆನಪಿಗೆ ತಂದುಕೊಳ್ಳೆನು,” ಎಂದಿದ್ದಾರೆ. 18ಪಾಪಗಳ ಕ್ಷಮಾಪಣೆಯಾದ ಬಳಿಕ ಪಾಪಪರಿಹಾರಕ ಬಲಿಯ ಅವಶ್ಯಕತೆ ಇಲ್ಲ.

ಕೀರ್ತನೆ
ಶ್ಲೋಕ: ಮೆಲ್ಕಿಸೆದೆಕ್ ಪರಂಪರೆಯ ಯಾಜಕ ನೀ ನಿರುತ
1 : ನುಡಿದಿಹನು ಇಂತೆಂದು ಪ್ರಭು ನನ್ನೊಡೆಯನಿಗೆ / “
ಆಸೀನನಾಗಿರು ನೀನು ನನ್ನ ಬಲಗಡೆಗೆ /
ಹಗೆಗಳನು ನಿನಗೆ ಕಾಲ್ಮಣೆಯಾಗಿಸುವವರೆಗೆ” //
2 : ಸಿಯೋನಿನ ಹೊರಗು ವಿಸ್ತರಿಸುವನು ಪ್ರಭು ನಿನ್ನ ರಾಜ್ಯದಾಳಿಕೆಯನು /
ನಿನ್ನ ವೈರಿ ವಿರೋಧಿಗಳ ನಟ್ಟನಡುವೆಯೆ ದೊರೆತನ ಮಾಡುವೆ ನೀನು //
3 : ಸೇನೆಯನು ನೀ ಅಣಿಗೊಳಿಸುವ ದಿನದೊಳು /
ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು / ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು /
ಉದಯಕಾಲದಿಬ್ಬನಿಯಂತೆ ಇಳಿದು ಬರುವರು //
4 : “ಮೆಲ್ಕಿಸೆದೆಕ್ ಪರಂಪರೆಯ ಯಾಜಕ ನೀ ನಿರುತ” /
ಬದಲಿಸನು ಪ್ರಭು ತಾನಿತ್ತ ಪ್ರಮಾಣದೀ ಮಾತ //
ಶುಭಸಂದೇಶ
ಸಂತ ಮಾರ್ಕನು ಬರೆದ ಶುಭಸಂದೇಶದಿಂದ ವಾಚನ
1ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ಮತ್ತೆ ಬೋಧಿಸಲಾರಂಭಿಸಿದರು. ಜನರು ಕಿಕ್ಕಿರಿದು ಸುತ್ತಲೂ ನೆರೆದುಬಂದಿದ್ದರು. ಆದುದರಿಂದ ಅವರು ಸರೋವರದಲ್ಲಿದ್ದ ದೋಣಿಯೊಂದನ್ನು ಹತ್ತಿ ಕುಳಿತರು. 2ಜನರು ದಡದಲ್ಲೇ ಉಳಿದರು. ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಸಾಮತಿಗಳ ಮೂಲಕ ಬೋಧಿಸುತ್ತಾ ಹೀಗೆಂದರು:
3ಕೇಳಿ, ಒಬ್ಬ ರೈತ ಬಿತ್ತುವುದಕ್ಕೆ ಹೊರಟ. 4ಬಿತ್ತನೆಮಾಡುತ್ತಾ ಇದ್ದಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದವು. ಬಿದ್ದುದೇ ಹಕ್ಕಿಗಳು ಬಂದು ಅವುಗಳನ್ನು ತಿಂದುಬಿಟ್ಟವು. 5ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಕಲ್ಲುನೆಲದ ಮೇಲೆ ಬಿದ್ದವು. ಅಲ್ಲಿ ಮಣ್ಣು ಬಹಳ ತೆಳ್ಳಗಿದ್ದುದರಿಂದ ಅವು ಬೇಗನೆ ಮೊಳೆತವು; 6ಬಿಸಿಲೇರಿದಾಗ ಬಾಡಿದವು; ಆಳವಾಗಿ ಬೇರೂರಲು ಆಗದ ಕಾರಣ ಅವು ಒಣಗಿಹೋದವು. 7ಇನ್ನು ಕೆಲವು ಬೀಜಗಳು ಮುಳ್ಳುಪೊದೆಗಳ ನಡುವೆ ಬಿದ್ದವು. ಮುಳ್ಳು ಪೊದೆಗಳು ಸಸ್ಯಗಳ ಸಮೇತ ಅವುಗಳನ್ನು ಅದುಮಿಬಿಟ್ಟವು. ಆದುದರಿಂದ ಅವು ಫಲ ಕೊಡಲಿಲ್ಲ. 8ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಮೊಳೆತು, ಬೆಳೆದು ತೆನೆಬಿಟ್ಟವು. ಅವುಗಳಲ್ಲಿ ಕೆಲವು ಮೂವತ್ತರಷ್ಟು, ಕೆಲವು ಅರವತ್ತರಷ್ಟು ಮತ್ತೆ ಕೆಲವು ನೂರರಷ್ಟು ಫಸಲನ್ನು ಕೊಟ್ಟವು.
9ಈ ಸಾಮತಿಯನ್ನು ಹೇಳಿದ ಬಳಿಕ ಯೇಸು, ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ, ಎಂದರು. 10ಈ ಉಪದೇಶವನ್ನು ಕೇಳಿದವರಲ್ಲಿ ಕೆಲವರು, ಯೇಸುಸ್ವಾಮಿ ಒಬ್ಬರೇ ಇದ್ದಾಗ, ಹನ್ನೆರಡು ಮಂದಿ ಶಿಷ್ಯರೊಡನೆ ಬಂದು, ಅವರು ಹೇಳಿದ ಸಾಮತಿಗಳನ್ನು ವಿವರಿಸಬೇಕೆಂದು ಕೇಳಿಕೊಂಡರು. 11ಅದಕ್ಕೆ ಯೇಸು, ದೇವರ ಸಾಮ್ರಾಜ್ಯದ ರಹಸ್ಯವನ್ನು ನಿಮಗೆ ತಿಳಿಸಲಾಗಿದೆ. ಮಿಕ್ಕವರಿಗಾದರೋ ಅದೆಲ್ಲವೂ ಸಾಮತಿಗಳ ರೂಪದಲ್ಲಿ ಮರೆಯಾಗಿದೆ. ಏಕೆಂದರೆ.
13ಅನಂತರ ಯೇಸುಸ್ವಾಮಿ ಅವರಿಗೆ, ಈ ಸಾಮತಿಯನ್ನು ನೀವು ಅರ್ಥಮಾಡಿಕೊಳ್ಳಲಿಲ್ಲವೇ? ಹಾಗಾದರೆ ಬೇರೆಲ್ಲಾ ಸಾಮತಿಗಳನ್ನು ಹೇಗೆ ಅರ್ಥಮಾಡಿಕೊಳ್ಳುವಿರಿ? 14ಈ ಸಾಮತಿಯಲ್ಲಿ, ಬಿತ್ತುವವನು 'ದೇವರ ಸಂದೇಶ' ಎಂಬ ಬೀಜವನ್ನು ಬಿತ್ತುತ್ತಾನೆ. 15ಕೆಲವರು ದೇವರ ಸಂದೇಶವನ್ನು ಕೇಳುತ್ತಾರೆ; ಸೈತಾನನು ತಕ್ಷಣವೇ ಬಂದು ಆ ಸಂದೇಶವನ್ನು ತೆಗೆದು ಬಿಡುತ್ತಾನೆ. ಕಾಲ್ದಾರಿಯಲ್ಲಿ ಬಿದ್ದ ಬೀಜಕ್ಕೆ ಹೋಲಿಕೆಯಾಗಿರುವವರು ಇವರೇ. 16ಇನ್ನೂ ಕೆಲವರು ದೇವರ ಸಂದೇಶವನ್ನು ಕೇಳಿದ ಕೂಡಲೇ ಅದನ್ನು ಸಂತಸದಿಂದ ಸ್ವೀಕರಿಸುತ್ತಾರೆ. ಆದರೆ ಅವರಲ್ಲಿ ಅದು ಆಳವಾಗಿ ಬೇರೂರದ ಕಾರಣ ಕೊಂಚಕಾಲ ಮಾತ್ರ ಉಳಿಯುತ್ತದೆ. 17ದೇವರ ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿ ಬೀಳುತ್ತಾರೆ. ಇವರೇ ಕಲ್ಲುನೆಲದ ಮೇಲೆ ಬಿದ್ದ ಬೀಜಕ್ಕೆ ಸಮಾನರಾದವರು. 18-19ಇನ್ನೂ ಕೆಲವರು ದೇವರ ಸಂದೇಶವನ್ನು ಕೇಳುತ್ತಾರೆ. ಆದರೆ ಅವರೊಳಗೆ ಇರುವ ಪ್ರಾಪಂಚಿಕ ಚಿಂತನೆಗಳೂ ಐಶ್ವರ್ಯದ ವ್ಯಾಮೋಹಗಳೂ ಇನ್ನಿತರ ಅಭಿಲಾಷೆಗಳೂ ದೇವರ ಸಂದೇಶವನ್ನು ಅದುಮಿ, ಅದು ಫಲಬಿಡದಂತೆ ಮಾಡುತ್ತವೆ. ಇವರೇ ಮುಳ್ಳುಪೊದೆಗಳ ನಡುವೆ ಬಿದ್ದ ಬೀಜಕ್ಕೆ ಅನುರೂಪ ಆದವರು. 20ಮತ್ತೆ ಕೆಲವರಾದರೋ ದೇವರ ಸಂದೇಶವನ್ನು ಕೇಳಿ ಅದನ್ನು ಸ್ವಾಗತಿಸುತ್ತಾರೆ. ಅಂಥವರಲ್ಲಿ ಕೆಲವರು ಮೂವತ್ತರಷ್ಟು, ಕೆಲವರು ಅರವತ್ತರಷ್ಟು, ಇನ್ನು ಕೆಲವರು ನೂರರಷ್ಟು ಫಲಕೊಡುತ್ತಾರೆ. ಇವರೇ ಹದವಾದ ಭೂಮಿಯಲ್ಲಿ ಬಿದ್ದ ಬೀಜಕ್ಕೆ ಸಮಾನರು, ಎಂದರು.
3ಕೇಳಿ, ಒಬ್ಬ ರೈತ ಬಿತ್ತುವುದಕ್ಕೆ ಹೊರಟ. 4ಬಿತ್ತನೆಮಾಡುತ್ತಾ ಇದ್ದಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದವು. ಬಿದ್ದುದೇ ಹಕ್ಕಿಗಳು ಬಂದು ಅವುಗಳನ್ನು ತಿಂದುಬಿಟ್ಟವು. 5ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಕಲ್ಲುನೆಲದ ಮೇಲೆ ಬಿದ್ದವು. ಅಲ್ಲಿ ಮಣ್ಣು ಬಹಳ ತೆಳ್ಳಗಿದ್ದುದರಿಂದ ಅವು ಬೇಗನೆ ಮೊಳೆತವು; 6ಬಿಸಿಲೇರಿದಾಗ ಬಾಡಿದವು; ಆಳವಾಗಿ ಬೇರೂರಲು ಆಗದ ಕಾರಣ ಅವು ಒಣಗಿಹೋದವು. 7ಇನ್ನು ಕೆಲವು ಬೀಜಗಳು ಮುಳ್ಳುಪೊದೆಗಳ ನಡುವೆ ಬಿದ್ದವು. ಮುಳ್ಳು ಪೊದೆಗಳು ಸಸ್ಯಗಳ ಸಮೇತ ಅವುಗಳನ್ನು ಅದುಮಿಬಿಟ್ಟವು. ಆದುದರಿಂದ ಅವು ಫಲ ಕೊಡಲಿಲ್ಲ. 8ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಮೊಳೆತು, ಬೆಳೆದು ತೆನೆಬಿಟ್ಟವು. ಅವುಗಳಲ್ಲಿ ಕೆಲವು ಮೂವತ್ತರಷ್ಟು, ಕೆಲವು ಅರವತ್ತರಷ್ಟು ಮತ್ತೆ ಕೆಲವು ನೂರರಷ್ಟು ಫಸಲನ್ನು ಕೊಟ್ಟವು.
9ಈ ಸಾಮತಿಯನ್ನು ಹೇಳಿದ ಬಳಿಕ ಯೇಸು, ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ, ಎಂದರು. 10ಈ ಉಪದೇಶವನ್ನು ಕೇಳಿದವರಲ್ಲಿ ಕೆಲವರು, ಯೇಸುಸ್ವಾಮಿ ಒಬ್ಬರೇ ಇದ್ದಾಗ, ಹನ್ನೆರಡು ಮಂದಿ ಶಿಷ್ಯರೊಡನೆ ಬಂದು, ಅವರು ಹೇಳಿದ ಸಾಮತಿಗಳನ್ನು ವಿವರಿಸಬೇಕೆಂದು ಕೇಳಿಕೊಂಡರು. 11ಅದಕ್ಕೆ ಯೇಸು, ದೇವರ ಸಾಮ್ರಾಜ್ಯದ ರಹಸ್ಯವನ್ನು ನಿಮಗೆ ತಿಳಿಸಲಾಗಿದೆ. ಮಿಕ್ಕವರಿಗಾದರೋ ಅದೆಲ್ಲವೂ ಸಾಮತಿಗಳ ರೂಪದಲ್ಲಿ ಮರೆಯಾಗಿದೆ. ಏಕೆಂದರೆ.
12‘ಕಣ್ಣಾರೆ ನೋಡಿಯೂ ಅವರು ಕಾಣರು;
ಕಿವಿಯಾರೆ ಕೇಳಿಯೂ ಅವರು ಗ್ರಹಿಸರು.
ಕಂಡು ಗ್ರಹಿಸಿದರೆ ಅವರು ದೇವರತ್ತ
ತಿರುಗಿಯಾರು;
ಪಾಪಕ್ಷಮೆ ಹೊಂದಿಯಾರು',
ಎಂದರು. 13ಅನಂತರ ಯೇಸುಸ್ವಾಮಿ ಅವರಿಗೆ, ಈ ಸಾಮತಿಯನ್ನು ನೀವು ಅರ್ಥಮಾಡಿಕೊಳ್ಳಲಿಲ್ಲವೇ? ಹಾಗಾದರೆ ಬೇರೆಲ್ಲಾ ಸಾಮತಿಗಳನ್ನು ಹೇಗೆ ಅರ್ಥಮಾಡಿಕೊಳ್ಳುವಿರಿ? 14ಈ ಸಾಮತಿಯಲ್ಲಿ, ಬಿತ್ತುವವನು 'ದೇವರ ಸಂದೇಶ' ಎಂಬ ಬೀಜವನ್ನು ಬಿತ್ತುತ್ತಾನೆ. 15ಕೆಲವರು ದೇವರ ಸಂದೇಶವನ್ನು ಕೇಳುತ್ತಾರೆ; ಸೈತಾನನು ತಕ್ಷಣವೇ ಬಂದು ಆ ಸಂದೇಶವನ್ನು ತೆಗೆದು ಬಿಡುತ್ತಾನೆ. ಕಾಲ್ದಾರಿಯಲ್ಲಿ ಬಿದ್ದ ಬೀಜಕ್ಕೆ ಹೋಲಿಕೆಯಾಗಿರುವವರು ಇವರೇ. 16ಇನ್ನೂ ಕೆಲವರು ದೇವರ ಸಂದೇಶವನ್ನು ಕೇಳಿದ ಕೂಡಲೇ ಅದನ್ನು ಸಂತಸದಿಂದ ಸ್ವೀಕರಿಸುತ್ತಾರೆ. ಆದರೆ ಅವರಲ್ಲಿ ಅದು ಆಳವಾಗಿ ಬೇರೂರದ ಕಾರಣ ಕೊಂಚಕಾಲ ಮಾತ್ರ ಉಳಿಯುತ್ತದೆ. 17ದೇವರ ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿ ಬೀಳುತ್ತಾರೆ. ಇವರೇ ಕಲ್ಲುನೆಲದ ಮೇಲೆ ಬಿದ್ದ ಬೀಜಕ್ಕೆ ಸಮಾನರಾದವರು. 18-19ಇನ್ನೂ ಕೆಲವರು ದೇವರ ಸಂದೇಶವನ್ನು ಕೇಳುತ್ತಾರೆ. ಆದರೆ ಅವರೊಳಗೆ ಇರುವ ಪ್ರಾಪಂಚಿಕ ಚಿಂತನೆಗಳೂ ಐಶ್ವರ್ಯದ ವ್ಯಾಮೋಹಗಳೂ ಇನ್ನಿತರ ಅಭಿಲಾಷೆಗಳೂ ದೇವರ ಸಂದೇಶವನ್ನು ಅದುಮಿ, ಅದು ಫಲಬಿಡದಂತೆ ಮಾಡುತ್ತವೆ. ಇವರೇ ಮುಳ್ಳುಪೊದೆಗಳ ನಡುವೆ ಬಿದ್ದ ಬೀಜಕ್ಕೆ ಅನುರೂಪ ಆದವರು. 20ಮತ್ತೆ ಕೆಲವರಾದರೋ ದೇವರ ಸಂದೇಶವನ್ನು ಕೇಳಿ ಅದನ್ನು ಸ್ವಾಗತಿಸುತ್ತಾರೆ. ಅಂಥವರಲ್ಲಿ ಕೆಲವರು ಮೂವತ್ತರಷ್ಟು, ಕೆಲವರು ಅರವತ್ತರಷ್ಟು, ಇನ್ನು ಕೆಲವರು ನೂರರಷ್ಟು ಫಲಕೊಡುತ್ತಾರೆ. ಇವರೇ ಹದವಾದ ಭೂಮಿಯಲ್ಲಿ ಬಿದ್ದ ಬೀಜಕ್ಕೆ ಸಮಾನರು, ಎಂದರು.
ಚಿಂತನೆ
ಬಿತ್ತನೆಯ ಬೀಜ
ಚಿತ್ರ: ಗೂಗಲ್ ಕೃಪೆ
No comments:
Post a Comment