ಫೆಬ್ರವರಿ ೧೨, ೨೦೧೯

ಸಾರ್ವಜನಿಕ ಉದ್ದೇಶ: ಮಾನವ ಸಾಗಾಣಿಕೆ, ವೇಶ್ಯಾವಾಟಿಕೆ ಹಾಗೂ ಹಿಂಸಾತ್ಮಕ ಕ್ರಿಯೆಗಳಿಂದಾಗಿ ನಿರಾಶ್ರಿತರಾದವರಿಗೆ ಆಶ್ರಯವನ್ನು ನೀಡಲು ಸರ್ವರೂ ಉದಾರತೆಯಿಂದ ಮುಂದೆ ಬರುವಂತೆ.

12 ಫೆಬ್ರವರಿ 2೦19


ಮಂಗಳವಾರ / ಹಸಿರು / ಸಾಧಾರಣ ಕಾಲದ ಐದನೇ ವಾರ 
1ನೇ ವಾಚನ - ಅದಿ 1: 20-2: 4 
ಕೀರ್ತನೆ - 8: 3-4, 5-6, 7-8 
ಶುಭಸಂದೇಶ - ಮಾರ್ಕ 7: 1-13

ವಾಚನಗಳು
ಮೊದಲನೇ  ವಾಚನ

ಆದಿಕಾಂಡದಿಂದ ವಾಚನ
ಆದಿ 1: 20-2: 4
20ಆಮೇಲೆ ದೇವರು, “ಹಲವಾರು ಜಲ ಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಭೂಮಿ ಆಕಾಶಗಳ ನಡುವೆ ಪಕ್ಷಿಗಳು ಹಾರಾಡಲಿ,” ಎಂದರು. 21ಈ ಪ್ರಕಾರ ದೇವರು ದೊಡ್ಡ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ನಾನಾ ವಿಧವಾದ ಜೀವಜಂತುಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಸೃಷ್ಟಿಮಾಡಿದರು. ದೇವರ ದೃಷ್ಟಿಗೆ ಅದೂ ಚೆನ್ನಾಗಿ ಕಂಡಿತು. 22ಅವುಗಳಿಗೆ ದೇವರು, “ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ,” ಎಂದು ಹೇಳಿ ಆಶೀರ್ವದಿಸಿದರು. 23ಹೀಗೆ ಬೈಗೂ ಬೆಳಗೂ ಆಗಿ ಐದನೆಯ ದಿನ ಆಯಿತು. 24ಆ ಬಳಿಕ ದೇವರು, “ಭೂಮಿಯಿಂದ ಎಲ್ಲ ತರದ ಜೀವಜಂತುಗಳು ಸೃಷ್ಟಿಯಾಗಲಿ, ದೊಡ್ಡ-ಚಿಕ್ಕ ಸಾಕುಪ್ರಾಣಿಗಳೂ ಕಾಡು ಮೃಗಗಳೂ ಹುಟ್ಟಲಿ,” ಎಂದರು. ಅಂತೆಯೇ ಆಯಿತು. 25ಎಲ್ಲ ತರದ ದೊಡ್ಡ-ಚಿಕ್ಕ ಕಾಡು ಮೃಗಗಳನ್ನೂ ಸಾಕುಪ್ರಾಣಿಗಳನ್ನೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೂ ದೇವರು ಸೃಷ್ಟಿಮಾಡಿದರು. ಅವರ ನೋಟಕ್ಕೆ ಅದು ಚೆನ್ನಾಗಿ ಕಂಡಿತು.

26ಅದಾದನಂತರ ದೇವರು, “ನಮ್ಮಂತೆಯೇ ಇರುವ ಹಾಗು ನಮ್ಮನ್ನು ಹೋಲುವ, ಮನುಷ್ಯರನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ವಿೂನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ದೊಡ್ಡ - ಚಿಕ್ಕ ಸಾಕುಪ್ರಾಣಿ ಹಾಗು ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ಮೇಲೆಯೂ ದೊರೆತನ ಮಾಡಲಿ,” ಎಂದರು. ಹೀಗೆ ದೇವರು: 27ಸೃಷ್ಟಿಸಿದರು ನರರನ್ನು ತಮ್ಮ ಹೋಲಿಕೆಯಲ್ಲಿ ಸೃಷ್ಟಿಸಿದರವರನ್ನು ದೇವಾನುರೂಪದಲ್ಲಿ ಸೃಷ್ಟಿಸಿದರವರನ್ನು ಸ್ತ್ರೀಪುರುಷರನ್ನಾಗಿ.  28ಅವರನ್ನು ದೇವರು ಆಶೀರ್ವದಿಸಿ, “ನೀವು ಅಭಿವೃದ್ಧಿಯಾಗಿ, ಅನೇಕ ಮಕ್ಕಳನ್ನು ಪಡೆಯಿರಿ; ಭೂಮಿಯಲ್ಲಿ ಹರಡಿಕೊಂಡು ಅದನ್ನು ವಶಪಡಿಸಿ ಕೊಳ್ಳಿರಿ; ಸಮುದ್ರದ ವಿೂನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲ ಪ್ರಾಣಿಗಳ ಮೇಲೆಯೂ ದೊರೆತನ ಮಾಡಿರಿ. 29ಇನ್ನೂ, ಭೂಮಿಯಲ್ಲಿರುವ ಎಲ್ಲ ತರದ ದವಸ ಧಾನ್ಯಗಳನ್ನೂ ಹಣ್ಣು ಹಂಪಲುಗಳನ್ನೂ ನಿಮಗೆ ಆಹಾರವಾಗಿ ಕೊಟ್ಟಿದ್ದೇನೆ. 30ಇದಲ್ಲದೆ, ಭೂಮಿಯ ಮೇಲೆ ತಿರುಗಾಡುವ ದೊಡ್ಡ - ಚಿಕ್ಕ ಮೃಗಗಳಿಗೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೂ ನೆಲದಲ್ಲಿ ಹರಿದಾಡುವ ಕ್ರಿಮಿ ಕೀಟಗಳಿಗೂ ಹುಲ್ಲು ಸೊಪ್ಪುಗಳನ್ನು ಆಹಾರವಾಗಿ ಕೊಟ್ಟಿದ್ದೇನೆ,” ಎಂದು ಹೇಳಿದರು. ಹಾಗೆಯೇ ಆಯಿತು.

31ತಾವು ಸೃಷ್ಟಿಸಿದ ಎಲ್ಲವನ್ನು ದೇವರು ನೋಡಿದರು. ಅವೆಲ್ಲವೂ ಬಹಳ ಚೆನ್ನಾಗಿತ್ತು. ಹೀಗೆ ಬೈಗೂ ಬೆಳಗೂ ಆಗಿ ಆರನೆಯ ದಿನ ಆಯಿತು. 20ಆಮೇಲೆ ದೇವರು, ಹಲವಾರು ಜಲ ಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಭೂಮಿ ಆಕಾಶಗಳ ನಡುವೆ ಪಕ್ಷಿಗಳು ಹಾರಾಡಲಿ, ಎಂದರು. 21ಈ ಪ್ರಕಾರ ದೇವರು ದೊಡ್ಡ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ನಾನಾ ವಿಧವಾದ ಜೀವಜಂತುಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಸೃಷ್ಟಿಮಾಡಿದರು. ದೇವರ ದೃಷ್ಟಿಗೆ ಅದೂ ಚೆನ್ನಾಗಿ ಕಂಡಿತು. 22ಅವುಗಳಿಗೆ ದೇವರು, ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ, ಎಂದು ಹೇಳಿ ಆಶೀರ್ವದಿಸಿದರು. 
23ಹೀಗೆ ಬೈಗೂ ಬೆಳಗೂ ಆಗಿ ಐದನೆಯ ದಿನ ಆಯಿತು. 24ಆ ಬಳಿಕ ದೇವರು, ಭೂಮಿಯಿಂದ ಎಲ್ಲ ತರದ ಜೀವಜಂತುಗಳು ಸೃಷ್ಟಿಯಾಗಲಿ, ದೊಡ್ಡ - ಚಿಕ್ಕ ಸಾಕುಪ್ರಾಣಿಗಳೂ ಕಾಡು ಮೃಗಗಳೂ ಹುಟ್ಟಲಿ, ಎಂದರು. ಅಂತೆಯೇ ಆಯಿತು. 25ಎಲ್ಲ ತರದ ದೊಡ್ಡ - ಚಿಕ್ಕ ಕಾಡು ಮೃಗಗಳನ್ನೂ ಸಾಕುಪ್ರಾಣಿಗಳನ್ನೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೂ ದೇವರು ಸೃಷ್ಟಿಮಾಡಿದರು. ಅವರ ನೋಟಕ್ಕೆ ಅದು ಚೆನ್ನಾಗಿ ಕಂಡಿತು. 

26ಅದಾದನಂತರ ದೇವರು, ನಮ್ಮಂತೆಯೇ ಇರುವ ಹಾಗು ನಮ್ಮನ್ನು ಹೋಲುವ, ಮನುಷ್ಯರನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ವಿನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ದೊಡ್ಡ - ಚಿಕ್ಕ ಸಾಕುಪ್ರಾಣಿ ಹಾಗು ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ಮೇಲೆಯೂ ದೊರೆತನ ಮಾಡಲಿ, ಎಂದರು. ಹೀಗೆ ದೇವರು: 27ಸೃಷ್ಟಿಸಿದರು ನರರನ್ನು ತಮ್ಮ ಹೋಲಿಕೆಯಲ್ಲಿ ಸೃಷ್ಟಿಸಿದರವರನ್ನು ದೇವಾನುರೂಪದಲ್ಲಿ ಸೃಷ್ಟಿಸಿದರವರನ್ನು ಸ್ತ್ರೀಪುರುಷರನ್ನಾಗಿ. 28ಅವರನ್ನು ದೇವರು ಆಶೀರ್ವದಿಸಿ, ನೀವು ಅಭಿವೃದ್ಧಿಯಾಗಿ, ಅನೇಕ ಮಕ್ಕಳನ್ನು ಪಡೆಯಿರಿ; ಭೂಮಿಯಲ್ಲಿ ಹರಡಿಕೊಂಡು ಅದನ್ನು ವಶಪಡಿಸಿ ಕೊಳ್ಳಿರಿ; ಸಮುದ್ರದ ವಿನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲ ಪ್ರಾಣಿಗಳ ಮೇಲೆಯೂ ದೊರೆತನ ಮಾಡಿರಿ. 29ಇನ್ನೂ, ಭೂಮಿಯಲ್ಲಿರುವ ಎಲ್ಲ ತರದ ದವಸ ಧಾನ್ಯಗಳನ್ನೂ ಹಣ್ಣು ಹಂಪಲುಗಳನ್ನೂ ನಿಮಗೆ ಆಹಾರವಾಗಿ ಕೊಟ್ಟಿದ್ದೇನೆ. 30ಇದಲ್ಲದೆ, ಭೂಮಿಯ ಮೇಲೆ ತಿರುಗಾಡುವ ದೊಡ್ಡ - ಚಿಕ್ಕ ಮೃಗಗಳಿಗೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೂ ನೆಲದಲ್ಲಿ ಹರಿದಾಡುವ ಕ್ರಿಮಿ ಕೀಟಗಳಿಗೂ ಹುಲ್ಲು ಸೊಪ್ಪುಗಳನ್ನು ಆಹಾರವಾಗಿ ಕೊಟ್ಟಿದ್ದೇನೆ, ಎಂದು ಹೇಳಿದರು. ಹಾಗೆಯೇ ಆಯಿತು. 31ತಾವು ಸೃಷ್ಟಿಸಿದ ಎಲ್ಲವನ್ನು ದೇವರು ನೋಡಿದರು. ಅವೆಲ್ಲವೂ ಬಹಳ ಚೆನ್ನಾಗಿತ್ತು. 

ಹೀಗೆ ಬೈಗೂ ಬೆಳಗೂ ಆಗಿ ಆರನೆಯ ದಿನ ಆಯಿತು. 1ಪರಲೋಕ-ಭೂಲೋಕಗಳೂ ಅವುಗಳಲ್ಲಿ ಇರುವ ಸಮಸ್ತವೂ ಹೀಗೆ ನಿರ್ಮಿತವಾದವು. 2ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು. 3ಆ ಏಳನೆಯ ದಿನವು ಪರಿಶುದ್ಧವಾಗಿರಲಿ ಎಂದು ಆಶೀರ್ವದಿಸಿದರು. ತಮ್ಮ ಸೃಷ್ಟಿಕಾರ್ಯವನ್ನೆಲ್ಲ ಮುಗಿಸಿ ಆ ದಿನದಂದು ವಿಶ್ರಮಿಸಿಕೊಂಡ ಕಾರಣ ಹಾಗೆ ಮಾಡಿದರು. 4ಇತಿ, ಪರಲೋಕ - ಭೂಲೋಕಗಳ ನಿರ್ಮಾಣ ಚರಿತ್ರೆ.



ಕೀರ್ತನೆ 

ಕೀರ್ತನೆ 8: 4-5, 6-7, 8-9
ಪ್ರಭು, ಎಮ್ಮ ಪ್ರಭು, ನಿನ್ನ ನಾಮಾಮೃತ
ಬೆಳಗಿದೆ ತನ್ನ ಮಹಿಮೆಯನು ಭುವನ ಪರ್ಯಂತ

ಇಂತಿರಲು, ಮನುಜನು ಎಷ್ಟರವನು ನೀನವನನು ಲಕ್ಷಿಸಲು?
ಏತರದವನು ನರಮಾನವನು ನೀನವನನು ಪರಾಮರಿಸಲು?
ಆದರೆ ದೇವದೂತರಿಗಿಂತ ಕಿಂಚಿತ್ತೆ ಕೀಳಾಗಿಸಿದೆ ಮನುಜನನು
ಮುಡಿಸಿದೆ ಮುಕುಟವಾಗವನಿಗೆ ಘನ ಮಾನವನು, ಸಿರಿಹಿರಿಮೆಯನು.

ಒಡೆಯನಾಗಿಸಿದೆ ನಿನ್ನಯ ಕರಕೃತಿಗಳಿಗೆ
ಒಳಪಡಿಸಿದೆ ಸಕಲವನು ಅವನ ಪಾದದಡಿಗೆ
ಕುರಿಗಳನು, ಕರುಗಳನು, ಕಾಡು ಮೃಗಗಳನು
ಗರಿಗಳನು, ವಿೂನುಗಳನು, ಜಲಚರಗಳನು.

ಕರಗತ ಮಾಡಿದೆ ನೀ ಅವನಿಗೆಲ್ಲವನು
ಪ್ರಭು, ಎಮ್ಮ ಪ್ರಭು, ನಿನ್ನ ನಾಮಾಮೃತ
ಬೆಳಗಿದೆ ತನ್ನ ಮಹಿಮೆಯನು ಭುವನ ಪರ್ಯಂತ.

ಶುಭಸಂದೇಶ

ಸಂತ ಮಾರ್ಕನು ಬರೆದ ಶುಭಸಂದೇಶದಿಂದ ವಾಚನ
ಮಾರ್ಕ 7: 1-13
1ಒಮ್ಮೆ ಫರಿಸಾಯರು ಮತ್ತು ಜೆರುಸಲೇಮಿನಿಂದ ಕೆಲವು ಮಂದಿ ಧರ್ಮಶಾಸ್ತ್ರಿಗಳು ಯೇಸುಸ್ವಾಮಿಯ ಬಳಿಗೆ ಬಂದು ಸೇರಿದರು. 2ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ, ಎಂದರೆ ಶುದ್ಧಾಚಾರಕ್ಕೆ ಅನುಗುಣವಾಗಿ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಅವರು ನೋಡಿದರು. 3ಫರಿಸಾಯರು ಇತರ ಯೆಹೂದ್ಯರಂತೆ ಕೈಗಳನ್ನು ವಿಧಿಬದ್ಧವಾಗಿ ತೊಳೆಯದೆ ಊಟ ಮಾಡುವುದಿಲ್ಲ. ಇದು ಅವರ ಪೂರ್ವಜರಿಂದ ಬಂದ ಸಂಪ್ರದಾಯ. 4ಪೇಟೆ ಬೀದಿಗಳಿಗೆ ಹೋಗಿ ಬಂದರೆ ಸ್ನಾನಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ಸೂತ್ರಬದ್ಧವಾಗಿ ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದುವು. 5ಆದುದರಿಂದ ಫರಿಸಾಯರೂ ಧರ್ಮಶಾಸ್ತ್ರಿಗಳೂ, ನಿನ್ನ ಶಿಷ್ಯರು ಪೂರ್ವಜರಿಂದ ಬಂದ ಆಚಾರಗಳನ್ನೇಕೆ ಅನುಸರಿಸುವುದಿಲ್ಲ? ಅಶುದ್ಧವಾದ ಕೈಗಳಿಂದಲೇ ಅವರು ಊಟ ಮಾಡುತ್ತಿದ್ದಾರಲ್ಲಾ? ಎಂದು ಯೇಸುವನ್ನು ಕೇಳಿದರು. 6-7ಅದಕ್ಕೆ ಯೇಸು, ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ಎಷ್ಟೊಂದು ಚೆನ್ನಾಗಿ ಪ್ರವಾದಿಸಿದ್ದಾನೆ 

 'ಬರಿಯ ಮಾತಿನ ಮನ್ನಣೆಯನೀಯುತ,
 ಹೃದಯವನು ದೂರವಿರಿಸುತ,
 ನರಕಲ್ಪಿತ ಕಟ್ಟಳೆಗಳನೆ
 ದೇವವಾಕ್ಯವೆಂದು ಉಪದೇಶಿಸುತ,
 ಈ ಜನರೆನಗೆ ಮಾಡುವ ಆರಾಧನೆ ವ್ಯರ್ಥ! 

ಎಂದರು ದೇವರು.' 8ನೀವು ದೇವರ ಆಜ್ಞೆಯನ್ನು ತೊರೆದು ಮಾನವನಿರ್ಮಿತ ಸಂಪ್ರದಾಯಗಳನ್ನು ನಿಷ್ಠೆಯಿಂದ ಪರಿಪಾಲಿಸುತ್ತಿದ್ದೀರಿ. 9ಸಂಪ್ರದಾಯದ ನೆವದಲ್ಲಿ ದೇವರ ಆಜ್ಞೆಗಳನ್ನು ನೀವು ಜಾಣ್ಮೆಯಿಂದ ಬದಿಗೊತ್ತಿರುವುದು ಬಲು ಚೆನ್ನಾಗಿದೆ!  10ನಿಮ್ಮ ತಂದೆತಾಯಿಗಳನ್ನು ಗೌರವಿಸಬೇಕು; ತಂದೆಯನ್ನಾಗಲೀ ತಾಯಿಯನ್ನಾಗಲೀ ದೂಷಿಸುವವನಿಗೆ ಮರಣದಂಡನೆ ಆಗಲೇಬೇಕು,' ಎಂಬುದು ಮೋಶೆ ವಿಧಿಸಿದ ಆಜ್ಞೆ. 11ನೀವಾದರೋ, ಒಬ್ಬನು ತನ್ನ ತಂದೆಗೆ ಅಥವಾ ತಾಯಿಗೆ 'ನನ್ನಿಂದ ನಿಮಗೆ ಸಲ್ಲತಕ್ಕದ್ದು ಕೊರ್ಬಾನ್ (ಎಂದರೆ ದೇವರಿಗೆ ಮುಡಿಪು) ಎಂದು ಹೇಳಿಬಿಟ್ಟರೆ ಸಾಕು, 12ಮುಂದೆ ಅವನು ತನ್ನ ತಂದೆತಾಯಿಗಳಿಗೆ ಯಾವ ಸಹಾಯವನ್ನೂ ಮಾಡುವುದಕ್ಕೆ ನೀವು ಬಿಡುವುದಿಲ್ಲ. 13ಹೀಗೆ ನೀವು ಬೋಧಿಸುವ ಸಂಪ್ರದಾಯಗಳಿಂದಾಗಿ ದೇವರ ವಾಕ್ಯವನ್ನೇ ನಿರರ್ಥಕಗೊಳಿಸುತ್ತೀರಿ. ಇಂಥಾ ಕೃತ್ಯಗಳು ಇನ್ನೆಷ್ಟೋ! ಎಂದರು.  

ಚಿಂತನೆ
ಶುದ್ಧಾಚಾರದ ಕಾರ್ಯ


ಬಲಿಯರ್ಪಣೆಗೆ ಮುನ್ನ ಯಾಜಕರು ತಮ್ಮ ಕೈಗಳನ್ನು ತೊಳೆಯುತ್ತಿದ್ದರು (ವಿಮೋಚನ ಕಾಂಡ 30:17) ಈ ವಾಕ್ಯವನ್ನು ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು ಇತರ ಶುದ್ಧಾಚಾರದ ಕಾರ್ಯಗಳಿಗೂ ಅನ್ವಯಿಸುತ್ತಿದ್ದರು. ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು ಬಾಹ್ಯ ಶುದ್ಧತೆಗೆ ಹೆಚ್ಚಿನ ಮಹತ್ವವನ್ನು ನೀಡಿದರು ಹೊರತು ಆಂತರಿಕ ಶುದ್ಧತೆಗಲ್ಲ. ಹಾಗಾಗಿ ಕ್ರಿಸ್ತ ಅವರನ್ನು ಸುಣ್ಣ ಬಳಿದ ಸಮಾಧಿಗಳು, ಕಪಟಿಗಳು ಎಂದು ಖಂಡಿಸಿದರು. ಧರ್ಮ ಬಯಸುವುದು ಬಾಹ್ಯ ಶುದ್ಧತೆಯನ್ನಲ್ಲ ಬದಲಾಗಿ ಅಂತರಂಗದ ಶುದ್ಧತೆಯನ್ನು ಎಂದು ಕ್ರಿಸ್ತ ಸ್ಪಷ್ಟಪಡಿಸುತ್ತಿದ್ದಾರೆ. ಬಾಹ್ಯ ಆಚರಣೆಗಳು, ಮಾನವ ನಿರ್ಮಿತ ಸಂಪ್ರದಾಯಗಳು, ನಿಜ ಧರ್ಮವಲ್ಲ ಎಂದು ಕ್ರಿಸ್ತ ಮನದಟ್ಟು ಮಾಡುತ್ತಾರೆ.ನಾವು ಹೊಸ ಮನುಷ್ಯರಾಗಿ ಮಾರ್ಪಾಡಾಗಬೇಕಿದೆ.

ಚಿತ್ರಗೂಗಲ್‌ ಕೃಪೆ
© 'ದನಿಮಾಧ್ಯಮ ಮನೆ




ದನಿ ಮಾಧ್ಯಮ ಮನೆಯ 'ದನಿ' ಇ-ಮಾಸಿಕಕ್ಕೆ ಬೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ

No comments:

Post a Comment