1೦ ಏಪ್ರಿಲ್ 2019

ಸಾರ್ವಜನಿಕ ಉದ್ದೇಶ: ತಮ್ಮ ಜೀವನದ ಹಂಗು ತೊರೆದು, ಇತರರ ಜೀವವನ್ನು ಉಳಿಸಲು ಯುದ್ದ ಪ್ರದೇಶಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರು ಹಾಗೂ ಅವರ ಸಹಯೋಗಿಗಳಿಗಾಗಿ
       
ನೇರಳೆ /ಬುಧ/ತಪಸ್ಸುಕಾಲದ ಐದನೇ ವಾರ                      
1ನೇ  ವಾಚನ  -  ದಾನಿ  314-2೦24-25,28                                 
ಕೀರ್ತನೆ  -  ಅಜ  129-34                  
ಶುಭಸಂದೇಶ - ಯೊವಾನ್ನ 8: 31-42    

1ನೇ  ವಾಚನ  -  ದಾನಿ  3:  14-2೦,  24-25,28  
14ಅದರಂತೆಯೇ ಅವರನ್ನು ಹಿಡಿದು ತರಲಾಯಿತು. ನೆಬೂಕದ್ನಚ್ಚರನು ಅವರಿಗೆ, “ಶದ್ರಕ್, ಮೇಶಕ್, ಹಾಗು ಅಬೇದ್ನೆಗೋ ಎಂಬವರೇ,ನೀವು ಬೇಕುಬೇಕೆಂದು, ನನ್ನ ದೇವರಿಗೆ ಸೇವೆಮಾಡದೆ, ನಾನು ಸ್ಥಾಪಿಸಿದ ಬಂಗಾರದ ಪ್ರತಿಮೆಯನ್ನು ಆರಾಧಿಸದೆ ಇರುವಿರೋ15ಈಗಲಾದರು ನೀವು ಸಿದ್ಧರಾಗಿದ್ದು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿ ಕೇಳಿದ ಕೂಡಲೆ ಅಡ್ಡಬಿದ್ದು ನಾನು ಸ್ಥಾಪಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಇಲ್ಲವಾದರೆ ಗಳಿಗೆಯಲ್ಲೆ ನಿಮ್ಮನ್ನು ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲಾಗುವುದು. ನಿಮ್ಮನ್ನು ನನ್ನ ಕೈಯಿಂದ ಬಿಡಿಸಬಲ್ಲ ದೇವರು ಯಾರಿದ್ದಾನೆ?” ಎಂದು ಹೇಳಿದನು16ಇದನ್ನು ಕೇಳಿದ ಶದ್ರಕ್, ಮೇಶಕ್ ಮತ್ತು ಆಬೇದ್ನೆಗೋ ಎಂಬುವರು ರಾಜನಿಗೆ: “ನೆಬೂಕದ್ನೆಚ್ಚರ ಅರಸರೇ, ವಿಷಯದಲ್ಲಿ ನಾವು ನಿಮಗೆ ಏನನ್ನೂ ಹೇಳಬೇಕಾಗಿಲ್ಲ17ನಾವು ಸೇವೆ ಮಾಡುವ ದೇವರಿಗೆ ಚಿತ್ತವಿದ್ದರೆ ಅವರೇ ಧಗಧಗನೆ ಉರಿಯುವ ಆವಿಗೆಯೊಳಗಿಂದಲೂ ನಮ್ಮನ್ನು ಕಾಪಾಡಬಲ್ಲರು. ಅವರೇ ನಮ್ಮನ್ನು ನಿಮ್ಮ ಕೈಯಿಂದಲೂ ಬಿಡಿಸಬಲ್ಲರು18ಒಂದು ವೇಳೆ ಬಿಡಿಸದಿದ್ದರೂ ರಾಜರೇ, ಇದು ನಿಮಗೆ ತಿಳಿದಿರಲಿ: ನಾವು ನಿಮ್ಮ ದೇವರುಗಳಿಗೆ ಸೇವೆಮಾಡುವುದಿಲ್ಲ. ನೀವು ಸ್ಥಾಪಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವುದಿಲ್ಲ,” ಎಂದು ಉತ್ತರಕೊಟ್ಟರು19ಆಗ ನೆಬೂಕದ್ನೆಚ್ಚರನು ಕೋಪೋದ್ರೇಕಗೊಂಡನು. ಶದ್ರಕ್, ಮೇಶಕ್ ಮತ್ತು ಅಬೇದ್ನೆಗೋ ಅವರ ಬಗ್ಗೆ ಅವನ ಮುಖಚರ್ಯೆ ಬದಲಾಯಿತು. ಆವಿಗೆಯನ್ನು ವಾಡಿಕೆಗಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕೆಂದು ಆಜ್ಞಾಪಿಸಿದನು20ಇದಲ್ಲದೆ ತನ್ನ ಸೈನ್ಯದ ಕೆಲವು ಮಂದಿ ಶೂರರಿಗೆ ಶದ್ರಕ್, ಮೇಶಕ್, ಅಬೇದ್ನೆಗೋ ಅವರನ್ನು ಕಟ್ಟಿ ಧಗಧಗನೆ ಉರಿಯುವ ಆವಿಗೆಯೊಳಗೆ ಎತ್ತಿಹಾಕಬೇಕೆಂದು ಅಪ್ಪಣೆಕೊಟ್ಟನು.

24ಇತ್ತ ರಾಜ ನೆಬೂಕದ್ನೆಚ್ಚರನು ಬೆಚ್ಚಿಬಿದ್ದು, ತಟ್ಟನೆ ಎದ್ದು ತನ್ನ ಮಂತ್ರಿಗಳನ್ನು ಕರೆಸಿ, “ನಾವು ಮೂವರನ್ನು ಕಟ್ಟಿ ಬೆಂಕಿಯಲ್ಲಿ ಹಾಕಿಸಿದೆವಲ್ಲವೆ?” ಎಂದು ಕೇಳಿದನು. ಅವರು ರಾಜನಿಗೆ, “ಹೌದು ಪ್ರಭೂ, ಅದು ಸತ್ಯ,” ಎಂದು ಉತ್ತರ ಕೊಟ್ಟರು25ಅದಕ್ಕೆ ಅವನು, “ಆದರೆ, ಇಗೋ ಕಟ್ಟಿಲ್ಲದ ನಾಲ್ವರನ್ನು ನಾನು ನೋಡುತ್ತಿದ್ದೇನೆ. ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ; ಅವರಿಗೆ ಯಾವ ಹಾನಿಯೂ ಆಗುತ್ತಿಲ್ಲ28ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್ ಹಾಗು ಅಬೇದ್ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ! ಆತ ತನ್ನ ದೂತರನ್ನು ಕಳಿಸಿ ತನ್ನಲ್ಲಿ ವಿಶ್ವಾಸವಿಟ್ಟ ಇವರನ್ನು ರಕ್ಷಿಸಿದ್ದಾನೆ. ಇವರೋ ರಾಜಾಜ್ಞೆಯನ್ನೂ ಮೀರಿ ತಮ್ಮ ದೇವರನ್ನೇ ಹೊರತು ಇನ್ನಾವ ದೇವರನ್ನೂ ಪೂಜಿಸಿ ಆರಾಧಿಸಬಾರದೆಂದು ಸ್ವಂತ ದೇಹಗಳನ್ನೇ ಸಾವಿಗೊಪ್ಪಿಸಿದಂಥ ಭಕ್ತರು!

ಕೀರ್ತನೆ  -  ಅಜ  1:  29-34 
ನೀವು ಸ್ತುತ್ಯರು, ಎಂದೆಂದಿಗೂ ಮಹಿಮಾನ್ವಿರರು.   

29ನಮ್ಮ  ಪೂರ್ವಜರ ದೇವರಾದ ಸರ್ವೇಶ್ವರಾ, ನೀವು ಪರಮಪೂಜ್ಯರು, ಎಂದೆಂದಿಗೂ ಮಹೋನ್ನತರು.
30ಮಹಿಮಾಯುತವಾದ ನಿಮ್ಮ ನಾಮ ಸ್ತುತ್ಯಾರ್ಹವಾದುದು, ಪರಮಪೂಜ್ಯವಾದುದು, ಎಂದೆಂದಿಗೂ ಮಹಾ ಘನತರವಾದುದು.
31ಪರಮ ವೈಭವದಿಂದ ಕೂಡಿದ  ಮಂದಿರದಲ್ಲಿ ನೀವು ಸ್ತುತಿಸ್ತೋತ್ರಕ್ಕೆ ಪಾತ್ರರು:
ನೀವು ಪರಮಪೂಜ್ಯರು, ಎಂದೆಂದಿಗೂ ಮಹೋನ್ನತರು.
32ಸಾಗರಾಧಿಗಳನ್ನು ಸಮೀಕ್ಷಿಸುವ ನಿಮಗೆ ಸ್ತೋತ್ರ! ಕೆರೂಬಿಗಳ ಮೇಲೆ ಅಸೀನರಾಗಿರುವ ನಿಮಗೆ ಸ್ತೋತ್ರ.
ನೀವು ಪರಮ ಪೂಜ್ಯರು ಎಂದೆಂದಿಗೂ ಮಹೋನ್ನತರು.
33ನಿಮ್ಮ ಸಾಮ್ರಾಜ್ಯದ ಸಿಂಹಾಸನದ ಮೇಲೆ ಮಂಡಿಸಿರುವ ನಿಮಗೆ ಸ್ತೋತ್ರ
ನೀವು ಪರಮ ಪೂಜ್ಯರು ಎಂದೆಂದಿಗೂ ಮಹೋನ್ನತರು.
34ಗಗನ ಮಂಡಲದಲ್ಲಿ ಸ್ತೋತ್ರಪಾತ್ರರು: ನೀವು ಸ್ತುತ್ಯರು, ಎಂದೆಂದಿಗೂ ಮಹಿಮಾನ್ವಿರರು.

ಶುಭಸಂದೇಶ - ಯೊವಾನ್ನ 831-42    
31ಯೇಸುಸ್ವಾಮಿ ತಮ್ಮಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ ಹೀಗೆಂದರು: “ನನ್ನ ಮಾತಿಗೆ ನೀವು ಶರಣಾದರೆ ನಿಜವಾಗಿಯೂ ನೀವು ನನ್ನ ಶಿಷ್ಯರು32ನೀವು ಸತ್ಯವನ್ನು ಅರಿತುಕೊಳ್ಳುವಿರಿ. ಸತ್ಯವು ನಿಮಗೆ ಸ್ವಾತಂತ್ರ್ಯ ನೀಡುವುದು.” 33ಅದಕ್ಕೆ ಯೆಹೂದ್ಯರು, “ನಾವು ಅಬ್ರಹಾಮನ ವಂಶಜರು; ಯಾರಿಗೂ ಎಂದೂ ನಾವು ದಾಸರಾಗಿಲ್ಲ. ಅಂದಮೇಲೆ ನಾವು ಸ್ವತಂತ್ರರಾಗುತ್ತೇವೆ, ಎಂದು ನೀನು ಹೇಳುವುದಾದರೂ ಹೇಗೆ?” ಎಂದು ಪ್ರಶ್ನಿಸಿದರು34ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ ಕೇಳಿ: ಪಾಪವನ್ನು ಮಾಡುವವನು ಪಾಪಕ್ಕೆ ದಾಸನೇ35ದಾಸನಾದವನು ಶಾಶ್ವತವಾಗಿ ಮನೆಯಲ್ಲಿ ಇರುವಂತಿಲ್ಲ. ಶಾಶ್ವತವಾಗಿ ಇರುವವನು ಪುತ್ರನೇ36ಪುತ್ರನು ನಿಮಗೆ ಸ್ವಾತಂತ್ರ್ಯ ನೀಡಿದರೆ, ನೀವು ನಿಜವಾಗಿಯೂ ಸ್ವತಂತ್ರರು37ನೀವು ಅಬ್ರಹಾಮನ ವಂಶಜರೆಂದು ನಾನು ಬಲ್ಲೆ. ಆದರೆ ನನ್ನ ಮಾತು ಹಿಡಿಸದ ಕಾರಣ ನನ್ನನ್ನು ಕೊಲ್ಲಲು ಹವಣಿಸುತ್ತೀರಿ38ನಾನಾಡುವ ಮಾತುಗಳು ಪಿತನ ಸನ್ನಿಧಿಯಲ್ಲಿ ನಾನು ಕಂಡದ್ದನ್ನೇ ನಿರೂಪಿಸುತ್ತವೆ. ನೀವು ಮಾಡುವ ಕಾರ್ಯಗಳೋ ನಿಮ್ಮ ತಂದೆಯಿಂದ ನೀವು ಕಲಿತದ್ದನ್ನೇ ವ್ಯಕ್ತಪಡಿಸುತ್ತವೆ,” ಎಂದರು.

39ಆಗ ಯೆಹೂದ್ಯರು, “ಅಬ್ರಹಾಮನೇ ನಮ್ಮ ತಂದೆ,” ಎಂದು ಮರುನುಡಿದರು. ಯೇಸು, “ಅಬ್ರಹಾಮನ ಮಕ್ಕಳು ನೀವಾಗಿದ್ದರೆ ಅಬ್ರಹಾಮನು ಮಾಡಿದಂತೆ ನೀವು ಮಾಡುತ್ತಿದ್ದಿರಿ40ಅದಕ್ಕೆ ಬದಲಾಗಿ ದೇವರಿಂದಲೇ ತಿಳಿದ ಸತ್ಯವನ್ನು ನಿಮಗೆ ಹೇಳುತ್ತಿರುವ ನನ್ನನ್ನು ಕೊಲ್ಲಲು ಹವಣಿಸುತ್ತಿದ್ದೀರಿ. ಅಬ್ರಹಾಮನು ಹಾಗೇನೂ ಮಾಡಲಿಲ್ಲ41ನೀವಾದರೋ ನಿಮಗೆ ತಂದೆಯಾದವನು ಮಾಡಿದಂತೆ ಮಾಡುತ್ತೀರಿ,” ಎಂದರು. ಅದಕ್ಕೆ ಅವರು, “ನಾವೇನು ಹಾದರಕ್ಕೆ ಹುಟ್ಟಿದವರಲ್ಲ, ದೇವರೇ ನಮ್ಮ ತಂದೆ,” ಎಂದು ಪ್ರತಿಭಟಿಸಿದರು42ಯೇಸು, ಅವರಿಗೆ, “ದೇವರೇ ನಿಮ್ಮ ತಂದೆಯಾಗಿದ್ದರೆ, ನನ್ನ ಮೇಲೆ ನಿಮಗೆ ಪ್ರೀತಿಯಿರುತ್ತಿತ್ತು. ಕಾರಣ, ನಾನು ದೇವರಿಂದಲೇ ಹೊರಟು ಇಲ್ಲಿಗೆ ಬಂದವನು. ನನ್ನಷ್ಟಕ್ಕೆ ನಾನೇ ಬರಲಿಲ್ಲ. ನನ್ನನ್ನು ಕಳುಹಿಸಿದ್ದು ದೇವರೇ.

ಚಿಂತನೆ 
ಸಂತ ಅಗಸ್ಟಿನರು ಹೀಗೆನ್ನುತ್ತಾರೆ, ಸತ್ಯವನ್ನು ನಾವು ಹುಡುಕಲು ಸಾಧ್ಯವಿಲ್ಲ, ಸತ್ಯ ನಮ್ಮನ್ನು ಹುಡುಕಲು ಅವಕಾಶ ಮಾಡಿಕೊಡಬೇಕು. ನಾನೇ ಸತ್ಯ ಎಂದು ಸಾರಿದ ಕ್ರಿಸ್ತ ಎಂದು ತಮ್ಮನ್ನು ಹೊರತುಪಡಿಸಿಕೊಂಡು ಅಥವ ತಮ್ಮ ಹೊರಪ್ರಪಂಚದಲ್ಲಿ ಸತ್ಯವನ್ನು ಹುಡುಕುವ ಪ್ರಯತ್ನ ಮಾಡಲಿಲ್ಲ. ಬದಲಾಗಿ ತಮ್ಮೊಳಗೆ ಇರುವ ದೈವವನ್ನು ಕಂಡರು ಮತ್ತು ಆ ಶಕ್ತಿಗೆ ತಲೆ ಬಾಗಿದರು. ಕ್ರಿಸ್ತನಿಗೆ ಸತ್ಯವೇನೆಂದು ತಿಳಿದಿತ್ತಾದ್ದರಿಂದ ಅವರು ತಮ್ಮ ಹೊರಗಿನ ಆಗು ಹೋಗುಗಳಿಗೆ ಮಾರುಹೋಗದೆ, ವಿರೋಧಿಗಳ ಒತ್ತಡಕ್ಕೆ ವಿಚಲಿತರಾಗದೆ, ಶಾಂತಸ್ವರೂಪರಾಗಿ ಎಲ್ಲವನ್ನು ಎದುರಿಸಿದರು. ಬಾಹ್ಯಶಕ್ತಿಗಳಿಗೆ ಅವರನ್ನು ಮೆಟ್ಟಿನಿಲ್ಲಲು ಸಾಧ್ಯವಾಗಲೇ ಇಲ್ಲ, ಕಾರಣ ಅವರ ಆಂತರ್ಯದ ಶಕ್ತಿ ದೊಡ್ಡದಿತ್ತು. ಕ್ರಿಸ್ತನಂತೆ ನಾವು ನಮ್ಮೊಳಗೆ ಸತ್ಯವನ್ನು ಕಾಣುವ ಕೆಲಸವನ್ನು ನಿರಂತರವಾಗಿ ಮಾಡಬೇಕು. ಈ ಲೋಕದ ಮಾಯೆಯೊಳಗೆ ಕಳೆದು ಹೋಗದೆ, ಹುಸಿ ಬದುಕಿನ ದಾಸರಾಗದೆ ಅಂತರ್ಮುಖಿಗಳಾಗಿ ನಮ್ಮೊಳಗಿರುವ ದೈವದೊಂದಿಗೆ ಸಂಪರ್ಕ ಸಾಧಿಸುವ ಪ್ರಯತ್ನವನ್ನು ಮಾಡುತ್ತಿರಬೇಕು.
- ಫಾದರ್ ಪೀಟರ್ ಚಿನ್ನಪ್ಪ

No comments:

Post a Comment