ಸಾರ್ವಜನಿಕ ಉದ್ದೇಶ: ಮಾನವ ಸಾಗಾಣಿಕೆ, ವೇಶ್ಯಾವಾಟಿಕೆ ಹಾಗೂ ಹಿಂಸಾತ್ಮಕ ಕ್ರಿಯೆಗಳಿಂದಾಗಿ ನಿರಾಶ್ರಿತರಾದವರಿಗೆ ಆಶ್ರಯವನ್ನು ನೀಡಲು ಸರ್ವರೂ ಉದಾರತೆಯಿಂದ ಮುಂದೆ ಬರುವಂತೆ.
24 ಫೆಬ್ರವರಿ 2೦19
ಭಾನುವಾರ/ ಹಸಿರು / ಸಾಧಾರಣ ಕಾಲದ ಏಳನೇ ಭಾನುವಾರ
1ನೇ ವಾಚನ - 1 ಸಮು 26:2, 7-9, 12-13, 22-23
ಕೀರ್ತನೆ - 103, 1-4, 8, 10, 12-13
2ನೇ ವಾಚನ - 1 ಕೊರಿಂಥ 15: 45-49
ಶುಭಸಂದೇಶ - ಲೂಕ 6: 27-38
1ನೇ ವಾಚನ - 1 ಸಮು 26:2, 7-9, 12-13, 22-23
ಕೀರ್ತನೆ - 103, 1-4, 8, 10, 12-13
2ನೇ ವಾಚನ - 1 ಕೊರಿಂಥ 15: 45-49
ಶುಭಸಂದೇಶ - ಲೂಕ 6: 27-38
ವಾಚನಗಳು
ಮೊದಲನೇ ವಾಚನ
ಆದಿಕಾಂಡದಿಂದ ವಾಚನ
1 ಸಮು 26:2, 7-9, 12-13, 22-23
2ಆಗ ಸೌಲನು ಇಸ್ರಯೇಲರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ದಾವೀದನನ್ನು ಹುಡುಕುವುದಕ್ಕಾಗಿ ಜೀಫ್ ಮರುಭೂಮಿಗೆ ಹೋದನು.
7ದಾವೀದನು ಮತ್ತು ಅಬೀಷೈಯು, ರಾತ್ರಿಯಲ್ಲಿ ಆ ಪಾಳೆಯಕ್ಕೆ ಹೋದಾಗ ಸೌಲನು ಬಂಡಿಗಳ ಗುಂಪಿನ ಮಧ್ಯೆ ಮಲಗಿಕೊಂಡು ನಿದ್ರೆಮಾಡುತ್ತಿದ್ದನು. ಅವನ ಭರ್ಜಿಯನ್ನು ಅವನ ತಲೆಯ ಹತ್ತಿರ ನೆಲಕ್ಕೆ ತಿವಿದು ನಿಲ್ಲಿಸಲಾಗಿತ್ತು. ಅಬ್ನೇರನೂ ಸೈನಿಕರೂ ಅವನ ಸುತ್ತಲೂ ಮಲಗಿದ್ದರು. 8ಅಬೀಷೈಯು ದಾವೀದನಿಗೆ, “ದೇವರು ಈ ದಿನ ನಿನ್ನ ವೈರಿಯನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದಾರೆ; ಅಪ್ಪಣೆಯಾಗಲಿ, ನಾನು ಭರ್ಜಿಯಿಂದ ಒಂದೇ ಪೆಟ್ಟಿನಲ್ಲಿ ಅವನನ್ನು ನೆಲಕ್ಕೆ ಕಚ್ಚಿಕೊಳ್ಳುವಂತೆ ತಿವಿಯುತ್ತೇನೆ. ಎರಡನೆಯ ಸಾರಿ ಹೊಡೆಯುವ ಅವಶ್ಯಕತೆ ಇರುವುದಿಲ್ಲ,” ಎಂದು ಹೇಳಿದನು. 9ಆದರೆ ದಾವೀದನು, “ಅವನನ್ನು ಕೊಲ್ಲಬೇಡ; ಸರ್ವೇಶ್ವರನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನೂ ನಿರಪರಾಧಿ ಎಂದು ಎಣಿಸಲ್ಪಡನು,” ಎಂದನು.
12ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಭರ್ಜಿ ಹಾಗು ತಂಬಿಗೆಗಳನ್ನು ತೆಗೆದುಕೊಂಡು ಹೋದರು. ಯಾರೂ ಕಾಣಲಿಲ್ಲ; ಯಾರಿಗೂ ಗೊತ್ತಾಗಲಿಲ್ಲ, ಯಾರಿಗೂ ಎಚ್ಚರವಾಗಲಿಲ್ಲ. ಏಕೆಂದರೆ ಸರ್ವೇಶ್ವರ ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದರು; ಒಬ್ಬರಿಗೂ ಎಚ್ಚರವಿಲ್ಲದೆ ಎಲ್ಲರು ಮೈಮರೆತು ನಿದ್ರೆಯಲ್ಲಿ ಮಗ್ನರಾಗಿದ್ದರು. 13ದಾವೀದನು ತನಗೂ ಪಾಳೆಯಕ್ಕೂ ತಕ್ಕಷ್ಟು ಅಂತರವಿರುವ ಹಾಗೆ ಸುರಕ್ಷಿತವಾದ ದೂರ ಸ್ಥಳಕ್ಕೆ ಹೋಗಿ ಗುಡ್ಡವನ್ನೇರಿ ತುದಿಯಲ್ಲಿ ನಿಂತನು. 22ದಾವೀದನು, “ಅರಸರೇ, ಇಗೋ, ನಿಮ್ಮ ಭರ್ಜಿ ಇಲ್ಲಿದೆ; ಸೇವಕರಲ್ಲೊಬ್ಬನು ಬಂದು ತೆಗೆದುಕೊಂಡು ಹೋಗಲಿ. 23ಸರ್ವೇಶ್ವರ ಪ್ರತಿಯೊಬ್ಬನಿಗೂ ಅವನವನ ನೀತಿ ಸತ್ಯತೆಗಳಿಗೆ ಅನುಸಾರ ಫಲವನ್ನು ಕೊಡುವರು. ಅವರು ಈ ದಿನ ನಿಮ್ಮನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ ನೀವು ಸರ್ವೇಶ್ವರನ ಅಭಿಷಿಕ್ತರೆಂದು ನಾನು ನಿಮ್ಮ ಮೇಲೆ ಕೈಹಾಕಲಿಲ್ಲ.

ಕೀರ್ತನೆ
ಕೀರ್ತನೆ 103, 1-4, 8, 10, 12-13
ಭಜಿಸು ನನ್ನ ಮನವೇ, ಭಜಿಸು ಪ್ರಭುವನು
ನನ್ನ ಅಂತರಂಗವೇ, ಭಜಿಸು ಆತನನು
ನೆನೆ ಆತನ ಪರಮಪಾವನ ನಾಮವನು
ಭಜಿಸು ನನ್ನ ಮನವೇ, ಭಜಿಸು ಪ್ರಭುವನು
ಮರೆಯದಿರು ಆತನ ಉಪಕಾರಗಳೊಂದನು
ಮನ್ನಿಸುವನಾತ ನನ್ನ ದೋಷಗಳನು
ವಾಸಿಮಾಡುವನು ನನ್ನ ರೋಗಗಳನು
ಉಳಿಸುವನು ಪಾತಾಳದ ಕೂಪದಿಂದ ನನ್ನನು
ಮುಡಿಸುವನೆನಗೆ ದಯದಾಕ್ಷಿಣ್ಯದ ಮುಕುಟವನು
ಪ್ರಭು ದಯಾಳು, ಕೃಪಾಪೂರ್ಣನು
ಸಹನಶೀಲನು, ಪ್ರೀತಿಮಯನು
ಆತನು ಸದಾ ತಪ್ಪು ಹುಡುಕುವವನಲ್ಲ
ನಿತ್ಯಕು ಕೋಪ ಇಟ್ಟುಕೊಳ್ಳುವವನಲ್ಲ
ನಮ್ಮ ಪಾಪಗಳಿಗೆ ತಕ್ಕಂತೆ ಆತ ವರ್ತಿಸಲಿಲ್ಲ
ನಮ್ಮ ಅಪರಾಧಗಳಿಗೆ ತಕ್ಕಹಾಗೆ ದಂಡಿಸಲಿಲ್ಲ
ಪಡುವಣದಿಂದ ಮೂಡಣವೆಷ್ಟೋ ದೂರ
ದೂಡಿದನಾತ ನಮ್ಮ ಪಾಪಗಳನು ಅಷ್ಟು ದೂರ
ತಂದೆ ಕರುಣೆ ತೋರಿಸುವಂತೆ ಮಕ್ಕಳಿಗೆ
ತಂದೆ ಕರುಣೆ ತೋರಿಸುವಂತೆ ಮಕ್ಕಳಿಗೆ
ಕನಿಕರಿಸುವನಾತ ತನಗೆ ಅಂಜುವವರಿಗೆ
ನನ್ನ ಅಂತರಂಗವೇ, ಭಜಿಸು ಆತನನು
ನೆನೆ ಆತನ ಪರಮಪಾವನ ನಾಮವನು
ಭಜಿಸು ನನ್ನ ಮನವೇ, ಭಜಿಸು ಪ್ರಭುವನು
ಮರೆಯದಿರು ಆತನ ಉಪಕಾರಗಳೊಂದನು
ಮನ್ನಿಸುವನಾತ ನನ್ನ ದೋಷಗಳನು
ವಾಸಿಮಾಡುವನು ನನ್ನ ರೋಗಗಳನು
ಉಳಿಸುವನು ಪಾತಾಳದ ಕೂಪದಿಂದ ನನ್ನನು
ಮುಡಿಸುವನೆನಗೆ ದಯದಾಕ್ಷಿಣ್ಯದ ಮುಕುಟವನು
ಪ್ರಭು ದಯಾಳು, ಕೃಪಾಪೂರ್ಣನು
ಸಹನಶೀಲನು, ಪ್ರೀತಿಮಯನು
ಆತನು ಸದಾ ತಪ್ಪು ಹುಡುಕುವವನಲ್ಲ
ನಿತ್ಯಕು ಕೋಪ ಇಟ್ಟುಕೊಳ್ಳುವವನಲ್ಲ
ನಮ್ಮ ಪಾಪಗಳಿಗೆ ತಕ್ಕಂತೆ ಆತ ವರ್ತಿಸಲಿಲ್ಲ
ನಮ್ಮ ಅಪರಾಧಗಳಿಗೆ ತಕ್ಕಹಾಗೆ ದಂಡಿಸಲಿಲ್ಲ
ಪಡುವಣದಿಂದ ಮೂಡಣವೆಷ್ಟೋ ದೂರ
ದೂಡಿದನಾತ ನಮ್ಮ ಪಾಪಗಳನು ಅಷ್ಟು ದೂರ
ತಂದೆ ಕರುಣೆ ತೋರಿಸುವಂತೆ ಮಕ್ಕಳಿಗೆ
ತಂದೆ ಕರುಣೆ ತೋರಿಸುವಂತೆ ಮಕ್ಕಳಿಗೆ
ಕನಿಕರಿಸುವನಾತ ತನಗೆ ಅಂಜುವವರಿಗೆ
ಎರಡನೇ ವಾಚನ
ಸಂತ ಪೌಲನು ಕೊರಿಂಥದವರಿಗೆ ಬರೆದ ಮೊದಲನೆಯ ಪತ್ರದಿಂದ ವಾಚನ
1 ಕೊರಿಂಥ 15: 45-49
45ಪವಿತ್ರ ಗ್ರಂಥದಲ್ಲಿ ಲಿಖಿತವಾಗಿರುವಂತೆ ಮೊದಲ ಮಾನವನಾದ ಆದಾಮನು ಜೀವ ಪಡೆದ ವ್ಯಕ್ತಿ; ಕಡೆಯ ಆದಾಮನಾದರೋ ಜೀವ ಕೊಡುವ ಆತ್ಮ. 46ಮೊದಲು ಆದುದು ಆಧ್ಯಾತ್ಮಿಕವಾದುದಲ್ಲ, ಪ್ರಾಕೃತವಾದುದು. ಅನಂತರ ಆದುದು ಆಧ್ಯಾತ್ಮಿಕವಾದುದು. 47ಮೊದಲನೆಯ ಮಾನವನು ಮಣ್ಣಿನಿಂದಾದವನು; ಮಣ್ಣಿಗೆ ಸಂಬಂಧಪಟ್ಟವನು. ಎರಡನೆಯ ಮಾನವನಾದರೋ ಸ್ವರ್ಗದಿಂದ ಬಂದವನು. 48ಮಣ್ಣಿಗೆ ಸಂಬಂಧಪಟ್ಟವರು ಮಣ್ಣಿನಿಂದ ಆದವನಂತೆಯೇ ಇರುತ್ತಾರೆ. ಸ್ವರ್ಗಕ್ಕೆ ಸಂಬಂಧಪಟ್ಟವರು ಸ್ವರ್ಗದಿಂದ ಬಂದವನಂತೆಯೇ ಇರುತ್ತಾರೆ. 49ಮಣ್ಣಿನಿಂದ ಆದವನ ರೂಪವನ್ನು ನಾವು ಧರಿಸಿರುವಂತೆಯೇ ಸ್ವರ್ಗದಿಂದ ಬಂದಾತನ ರೂಪವನ್ನು ಧರಿಸುತ್ತೇವೆ.
ಶುಭಸಂದೇಶ
ಸಂತ ಮಾರ್ಕನು ಬರೆದ ಶುಭಸಂದೇಶದಿಂದ ವಾಚನ
ಲೂಕ 6: 27-38
ಯೇಸು ತಮ್ಮ ಶಿಷ್ಯರಿಗೆ ಇಂತೆಂದರು
27ನನ್ನನ್ನು ಆಲಿಸುತ್ತಿರುವವರೇ,
ನನ್ನ ಮಾತನ್ನು ಕೇಳಿರಿ:
'ನಿಮ್ಮ ಶತ್ರುಗಳನ್ನು ಪ್ರೀತಿಸಿರಿ,
ನಿಮ್ಮನ್ನು ದ್ವೇಷಿಸುವವರನ್ನು ಸತ್ಕರಿಸಿರಿ.
28ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ,
ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ.
29ನಿನ್ನ ಒಂದು ಕೆನ್ನೆಗೆ ಹೊಡೆಯುವವನಿಗೆ
ಇನ್ನೊಂದು ಕೆನ್ನೆಯನ್ನೂ ಒಡ್ಡು,
ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ
ಒಳ ಅಂಗಿಯನ್ನೂ ತೆಗೆದುಕೊಳ್ಳಲು ಬಿಡು.
30ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ಕೊಡು,
ನಿನ್ನ ಸೊತ್ತನ್ನು ಕಸಿದುಕೊಳ್ಳುವವನಿಂದ
ತಿರುಗಿ ಕೇಳದಿರು.
31ಅಲ್ಲದೆ, ಇತರರು ನಿಮಗೆ ಏನೇನು
ಮಾಡಬೇಕೆಂದು ನೀವು
ಅಪೇಕ್ಷಿಸುತ್ತೀರೋ
ಅದನ್ನೇ ನೀವು ಅವರಿಗೆ ಮಾಡಿರಿ.
32ನಿಮ್ಮನ್ನು ಪ್ರೀತಿಸುವವರನ್ನೇ ನೀವು
ಪ್ರೀತಿಸಿದರೆ ಅದೇನು ಪುಣ್ಯ?
ಪಾಪಿಷ್ಠರು ಸಹ ತಮ್ಮನ್ನು
ಪ್ರೀತಿಸುವವರನ್ನು ಪ್ರೀತಿಸುತ್ತಾರಲ್ಲವೆ?
33ಉಪಕಾರ ಮಾಡಿದವರಿಗೇ ಉಪಕಾರ
ಮಾಡಿದರೆ ಅದೇನು ಪುಣ್ಯ?
ಪಾಪಿಷ್ಠರು ಸಹ ಹಾಗೆಯೇ
ಮಾಡುತ್ತಾರಲ್ಲವೆ?
34ಸಾಲತೀರಿಸುವಂಥ ನಂಬಿಗಸ್ಥರಿಗೇ
ಸಾಲಕೊಟ್ಟರೆ ಅದೇನು ಪುಣ್ಯ?
ಕೊಟ್ಟಷ್ಟೂ ಬರುತ್ತದೆಂದು ಪಾಪಿಷ್ಠರು
ಸಹ ಸಾಲ ಕೊಡುತ್ತಾರಲ್ಲವೆ?'
35ಆದುದರಿಂದ ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ಅವರಿಗೆ ಒಳಿತನ್ನೇ ಮಾಡಿರಿ. ಪ್ರತಿಯಾಗಿ ಪಡೆಯುವ ಆಶೆಯಿಡದೆ ಸಾಲ ಕೊಡಿ. ಆಗ ನಿಮಗೆ ಮಹತ್ತಾದ ಸಂಭಾವನೆ ದೊರಕುವುದು. ನೀವು ಮಹೋನ್ನತ ದೇವರ ಮಕ್ಕಳಾಗುವಿರಿ. ದೇವರು ದುರ್ಜನರಿಗೂ ಒಳ್ಳೆಯವರು, ಕೃತಘ್ನರಿಗೂ ಒಳ್ಳೆಯವರು. 36ನಿಮ್ಮ ತಂದೆಯಾದ ದೇವರಂತೆ ನೀವೂ ದಯಾವಂತರಾಗಿರಿ. 37ನೀವು ಇತರರ ಬಗ್ಗೆ ತೀರ್ಪುಕೊಡಬೇಡಿ, ಆಗ ದೇವರು ನಿಮ್ಮ ಬಗ್ಗೆ ತೀರ್ಪು ಕೊಡುವುದಿಲ್ಲ; ಪರರನ್ನು ದಂಡನೆಗೆ ಗುರಿಮಾಡಬೇಡಿ, ದೇವರು ನಿಮ್ಮನ್ನೂ ದಂಡನೆಗೆ ಗುರಿಮಾಡುವುದಿಲ್ಲ. 38ಪರರನ್ನು ಕ್ಷಮಿಸಿರಿ, ದೇವರು ನಿಮ್ಮನ್ನೂ ಕ್ಷಮಿಸುವರು; ಪರರಿಗೆ ಕೊಡಿ, ದೇವರು ನಿಮಗೂ ಕೊಡುವರು; ಅಳತೆಯಲ್ಲಿ ತುಂಬಿ, ಕುಲುಕಿ, ಅದುಮಿ ತುಳುಕುವಂತೆ ಅಳೆದು ನಿಮ್ಮ ಮಡಿಲಿಗೆ ಹಾಕುವರು. ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದು ಕೊಡುವರು, ಎಂದರು.

ಚಿಂತನೆ
ಶತ್ರುಗಳನ್ನು ಪ್ರೀತಿಸಿರಿ
ಇಂದಿನ ಶುಭಸಂದೇಶದಲ್ಲಿ ಯೇಸು ಶತ್ರುಪ್ರೇಮವನ್ನು ಕುರಿತು ಬೋಧಿಸುತ್ತಿದ್ದಾರೆ. ಜಗತ್ತಿನ ಎಲ್ಲಾ ಧರ್ಮಗಳು ಪ್ರಾರ್ಥಿಸಲು ಕರೆ ನೀಡುತ್ತವೆ, ಆದರೆ ಕ್ರೈಸ್ತ ಧರ್ಮ ಶತ್ರುಗಳಿಗಾಗಿಯೂ ಪ್ರಾರ್ಥಿಸಲು ಬೋಧಿಸುತ್ತದೆ. ಯೇಸುವಿನ ಕಾಲದಲ್ಲಿ ನಿನ್ನ `ಶತ್ರುಗಳನ್ನು ದ್ವೇಷಿಸು' ಎಂಬ ಘೋಷಣೆ ಯೆಹೂದ್ಯರಲ್ಲಿ ಸಾಮಾನ್ಯವಾಗಿತ್ತು. ಒಬ್ಬ ಯೆಹೂದ್ಯನಿಗೆ ಮತ್ತೊಬ್ಬ ಯೆಹೂದ್ಯನೇ ಆತನ ಸ್ನೇಹಿತ ಹಾಗು ನೆಂಟ. ಹಾಗಾಗಿ ಯೇಹೂದ್ಯರಲ್ಲದ ಅನ್ಯ ಧರ್ಮದವರನ್ನು ಅವರು ದ್ವೇಷಿಸುತ್ತಿದ್ದರು. ಇದನ್ನು ಗಮನಿಸಿದ ಯೇಸು ಅವರಿಗೆ ಪ್ರೀತಿಯ ಹಾಗೂ ದೇವರ ಸಾಮ್ರಾಜ್ಯದ ಮೌಲ್ಯಗಳ ಬಗ್ಗೆ ಬೋಧಿಸುತ್ತಿದ್ದಾರೆ. ನಿಮ್ಮ ಶತ್ರುಗಳನ್ನು ಪ್ರೀತಿಸಿರಿ, ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥನೆ ಮಾಡಿರಿ'' ಎಂಬ ಮಾತನ್ನು ತಮ್ಮ ಜೀವನದಲ್ಲಿ ನಿರೂಪಿಸಿದರು. ಯೇಸು ತಮ್ಮ ಶತ್ರುಗಳ ರೋಗ ಗುಣಪಡಿಸಿದರು (ಲೂಕ 22:51) ಅವರಿಗಾಗಿ ಪ್ರಾರ್ಥಿಸಿದರು (ಲೂಕ 23:34) ಮತ್ತು ಅವರಿಗಾಗಿಯೇ ಪ್ರಾಣ ನೀಡಿದರು (ರೋಮ 5:10).
ಪ್ರೀತಿಗೆ ಮಿತಿ ಇರಬಾರದೆಂದು ಯೇಸುವಿನ ಹೆಬ್ಬಯಕೆ. ನಮ್ಮನ್ನು ದ್ವೇಷಿಸುವವರಿಗೆ, ಶಪಿಸುವವರಿಗೆ ನಮ್ಮ ಜೀವನ ದಿಗ್ಬ್ರಮೆ ಮೂಡಿಸಬೇಕು. ಯೇಸುವಿನ ಹಿಂಬಾಲಕರಿಗೆ ಯಾರೂ ಶತ್ರುಗಳಲ್ಲ, ಎಲ್ಲರು ಮಿತ್ರರಾಗಿರಬೇಕೆಂದು ಬಯಸುತ್ತಾರೆ. ಅನ್ಯರ ನಡುವೆ ಜೀವಿಸುವಾಗ ನಮ್ಮ ಜೀವನ ಇತರರಿಗೆ ಆದರ್ಶವಾಗಿರಬೇಕು.
ಚಿತ್ರ: ಗೂಗಲ್ ಕೃಪೆ

No comments:
Post a Comment