ಸುವಾರ್ತಾ ಪ್ರಸಾರದ ಉದ್ದೇಶ: ಯುವಜನರು, ವಿಶೇಷವಾಗಿ ಲ್ಯಾಟಿನ್ ಅಮೇರಿಕಾದ ಯುವಜನರು ಪೂಜ್ಯ ಕನ್ಯಾ ಮರಿಯಮ್ಮನವರ ಆದರ್ಶವನ್ನು ಅನುಸರಿಸುತ್ತಾ ಪ್ರಭು ಯೇಸುವಿನ ಕರೆಗೆ ಓಗೊಟ್ಟು ಸುವಾರ್ತೆಯ ಆನಂದವನ್ನು ಜಗತ್ತಿನಾದ್ಯಂತ ಪಸರಿಸುವ ಕ್ಷಮತೆಯನ್ನು ಹೊಂದುವುದು.
12 ಜನವರಿ 2019
ಶನಿವಾರ/ಬಿಳಿ/ ದೈವದರ್ಶನದ ನಂತರದ ಶನಿವಾರ
1ನೇ ವಾಚನ - 1 ಯೊವಾನ್ನ 5: 14-21
ಕೀರ್ತನೆ - 149: 1-6, 9
ಶುಭಸಂದೇಶ - ಯೊವಾನ್ನ 3: 22-3೦
14ದೇವರ ಚಿತ್ತಾನುಸಾರ ಏನನ್ನು ಬೇಡಿಕೊಂಡರೂ ಅವರು ನಮ್ಮ ವಿಜ್ಞಾಪನೆಗೆ ಕಿವಿಗೊಡುತ್ತಾರೆಂಬ ಭರವಸೆ ನಮಗಿದೆ. 15ನಾವು ಏನನ್ನು ಬೇಡಿಕೊಂಡರೂ ನಮ್ಮ ವಿಜ್ಞಾಪನೆಗೆ ದೇವರು ಕಿವಿಗೊಡುತ್ತಾರೆ ಎಂಬುದು ನಮಗೆ ತಿಳಿದಿದ್ದರೆ ನಾವು ಬೇಡಿದುದೆಲ್ಲವೂ ನಮಗೆ ಲಭಿಸಿದಂತೆಯೇ ಎಂಬುದೂ ನಮಗೆ ತಿಳಿದಿದೆ. 16ಮಾರಕವಲ್ಲದ ಪಾಪವೊಂದನ್ನು ಸಹೋದರನು ಮಾಡುವುದನ್ನು ಯಾರಾದರೂ ಕಂಡರೆ, ಆ ಸಹೋದರನಿಗಾಗಿ ದೇವರಲ್ಲಿ ಬೇಡಿಕೊಳ್ಳಿರಿ. ದೇವರು ಆ ಸಹೋದರನಿಗೆ ಸಜ್ಜೀವವನ್ನು ಅನುಗ್ರಹಿಸುವರು. ಮಾರಕವಲ್ಲದ ಪಾಪವನ್ನು ಕುರಿತೇ ಈ ಮಾತನ್ನು ಹೇಳುತ್ತಿದ್ದೇನೆ. ಮಾರಕವಾದ ಪಾಪವೂ ಉಂಟು. ಅದರ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುತ್ತಿಲ್ಲ. 17ಅಕ್ರಮವಾದುದೆಲ್ಲವೂ ಪಾಪವೇ. ಆದರೆ ಮಾರಕವಲ್ಲದಂಥ ಪಾಪವೂ ಇದೆ. 18ನಮಗೆ ತಿಳಿದಿರುವಂತೆ ದೇವರಿಂದ ಜನಿಸಿದವನು ಪಾಪಜೀವಿಯಾಗಿರುವುದಿಲ್ಲ. ಏಕೆಂದರೆ, ದೇವರ ಪುತ್ರನ ರಕ್ಷಣೆ ಅವನಿಗಿದೆ. ಕೇಡಿಗನ ಹಿಡಿತಕ್ಕೆ ಅವನು ಸಿಗನು. 19ಇಡೀ ಲೋಕವು ಕೇಡಿಗನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸೇರಿದವರೆಂಬುದು ನಮಗೆ ತಿಳಿದಿದೆ. 20ದೇವರ ಪುತ್ರ ಆಗಮಿಸಿ, ಸತ್ಯ ಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ. 21ಪ್ರಿಯ ಮಕ್ಕಳೇ, ಮಿಥ್ಯ ದೇವರುಗಳಿಂದ ನೀವು ದೂರವಿರಿ.
ಕೀರ್ತನೆ
ಗುರುವಿಗಿಂತ ಶಿಷ್ಯನು ಶ್ರೇಷ್ಟನಲ್ಲ
1ನೇ ವಾಚನ - 1 ಯೊವಾನ್ನ 5: 14-21
ಕೀರ್ತನೆ - 149: 1-6, 9
ಶುಭಸಂದೇಶ - ಯೊವಾನ್ನ 3: 22-3೦
ವಾಚನಗಳು
ಮೊದಲನೇ ವಾಚನ
ಸಂತ ಯೊವಾನ್ನನು ಬರೆದ ಮೊದಲ ಪತ್ರದಿಂದ ವಾಚನ
ಕೀರ್ತನೆ
ಶ್ಲೋಕ: ಪ್ರೀತಿಸುತ್ತಾನೆ ಪ್ರಭು ತನ್ನ ಪ್ರಜೆಯನು
1 : ಅಲ್ಲೆಲೂಯ ! ಹಾಡಿರಿ ಪ್ರಭುವಿಗೆ ನೂತನ ಕೀರ್ತನೆಯನು|
ಭಕ್ತರ ಸಭೆಯಲಿ ಸ್ತುತಿಮಾಡಿರಿ ಆತನನು||
2 : ಆನಂದಿಸಲಿ ತಮ್ಮ ಸೃಷ್ಟಿಕರ್ತನಲಿ ಇಸ್ರಯೇಲರು|
ತಮ್ಮಾ ರಾಜನಿಗೆ ಜಯಕಾರ ಮಾಡಲಿ ಸಿಯೋನಿನವರು||
3 : ಆತನ ನಾಮವನು ಕೀರ್ತಿಸಲಿ ಕುಣಿತದಿಂದ|
ಆತನನು ಭಜಿಸಲಿ ತಮಟೆ, ಕಿನ್ನರಿಗಳಿಂದ||
4 : ಪ್ರೀತಿಸುತ್ತಾನೆ ಪ್ರಭು ತನ್ನ ಪ್ರಜೆಯನು|
ಜಯಶೀಲರನ್ನಾಗಿಸುತ್ತಾನೆ ದೀನದಲಿತರನು||
5 : ಹಿಗ್ಗಲಿ ಭಕ್ತಾದಿಗಳು ದೊರೆತ ವಿಜಯದಲಿ|
ಜಯಕಾರ ಮಾಡಲಿ ತಮ್ಮ ತಮ್ಮ ಶಿಬಿರಗಳಲಿ||
6 : ಇರಲಿ ಪ್ರಭುವಿನ ಸ್ತೋತ್ರ ಅವರ ಬಾಯಲಿ|
ಇರಲಿ ಇಬ್ಬಾಯಿ ಕತ್ತಿಯು ಅವರ ಕೈಯಲಿ||
9 : ವಿಧಿಸಲಿ ಅವರಿಗೆ ಲಿಖಿತಾಜ್ಞೆಯ ಶಿಕ್ಷೆಯನು|
ಇದು ತರಲಿ ಭಕ್ತರೆಲ್ಲರಿಗೆ ಗೌರವವನು| ಅಲ್ಲೆಲೂಯ||
1 : ಅಲ್ಲೆಲೂಯ ! ಹಾಡಿರಿ ಪ್ರಭುವಿಗೆ ನೂತನ ಕೀರ್ತನೆಯನು|
ಭಕ್ತರ ಸಭೆಯಲಿ ಸ್ತುತಿಮಾಡಿರಿ ಆತನನು||
2 : ಆನಂದಿಸಲಿ ತಮ್ಮ ಸೃಷ್ಟಿಕರ್ತನಲಿ ಇಸ್ರಯೇಲರು|
ತಮ್ಮಾ ರಾಜನಿಗೆ ಜಯಕಾರ ಮಾಡಲಿ ಸಿಯೋನಿನವರು||
3 : ಆತನ ನಾಮವನು ಕೀರ್ತಿಸಲಿ ಕುಣಿತದಿಂದ|
ಆತನನು ಭಜಿಸಲಿ ತಮಟೆ, ಕಿನ್ನರಿಗಳಿಂದ||
4 : ಪ್ರೀತಿಸುತ್ತಾನೆ ಪ್ರಭು ತನ್ನ ಪ್ರಜೆಯನು|
ಜಯಶೀಲರನ್ನಾಗಿಸುತ್ತಾನೆ ದೀನದಲಿತರನು||
5 : ಹಿಗ್ಗಲಿ ಭಕ್ತಾದಿಗಳು ದೊರೆತ ವಿಜಯದಲಿ|
ಜಯಕಾರ ಮಾಡಲಿ ತಮ್ಮ ತಮ್ಮ ಶಿಬಿರಗಳಲಿ||
6 : ಇರಲಿ ಪ್ರಭುವಿನ ಸ್ತೋತ್ರ ಅವರ ಬಾಯಲಿ|
ಇರಲಿ ಇಬ್ಬಾಯಿ ಕತ್ತಿಯು ಅವರ ಕೈಯಲಿ||
9 : ವಿಧಿಸಲಿ ಅವರಿಗೆ ಲಿಖಿತಾಜ್ಞೆಯ ಶಿಕ್ಷೆಯನು|
ಇದು ತರಲಿ ಭಕ್ತರೆಲ್ಲರಿಗೆ ಗೌರವವನು| ಅಲ್ಲೆಲೂಯ||
ಶುಭಸಂದೇಶ
ಸಂತ ಯೊವಾನ್ನನು ಬರೆದ ಶುಭಸಂದೇಶದಿಂದ ವಾಚನ
22ಇದಾದ ಬಳಿಕ ಯೇಸುಸ್ವಾಮಿ ತಮ್ಮ ಶಿಷ್ಯರೊಡನೆ ಜುದೇಯ ಪ್ರಾಂತ್ಯಕ್ಕೆ ಬಂದು ಅವರೊಡನೆ ಕೆಲವು ಕಾಲ ಅಲ್ಲೇ ಉಳಿದುಕೊಂಡು ದೀಕ್ಷಾಸ್ನಾನ ಮಾಡಿಸತೊಡಗಿದರು. 23ಅತ್ತ ಯೊವಾನ್ನನು ಕೂಡ ಸಾಲಿಮ್ ಎಂಬ ಊರಿಗೆ ಹತ್ತಿರವಾಗಿದ್ದ ಐನೋನ್ ಎಂಬ ಸ್ಥಳದಲ್ಲಿ ನೀರು ಹೆಚ್ಚಾಗಿದ್ದುದರಿಂದ ಸ್ನಾನದೀಕ್ಷೆಯನ್ನು ಮಾಡಿಸುತ್ತಿದ್ದನು. ಜನರು ಬಂದು ಸ್ನಾನದೀಕ್ಷೆಯನ್ನು ಪಡೆಯುತ್ತಿದ್ದರು. 24ಯೊವಾನ್ನನು ಆಗ ಇನ್ನೂ ಬಂಧಿತನಾಗಿರಲಿಲ್ಲ. 25ಶುದ್ಧಾಚಾರವನ್ನು ಕುರಿತು ಯೊವಾನ್ನನ ಶಿಷ್ಯರಿಗೂ ಯೆಹೂದ್ಯನೊಬ್ಬನಿಗೂ ವಿವಾದ ಎದ್ದಿತು.
26ಅವರು ಯೊವಾನ್ನನ ಬಳಿಗೆ ಬಂದು, ಗುರುವೇ, ಜೋರ್ಡನಿನ ಆಚೆಕಡೆಯಲ್ಲಿ ನಿಮ್ಮೊಡನೆ ಒಬ್ಬನು ಇದ್ದನಲ್ಲವೆ? ಆತನನ್ನು ಕುರಿತು ನೀವೇ ಸಾಕ್ಷಿ ಹೇಳಲಿಲ್ಲವೆ? ಈಗ ನೋಡಿ, ಆತನೇ ದೀಕ್ಷಾಸ್ನಾನ ಮಾಡಿಸುತ್ತಿದ್ದಾನೆ. ಎಲ್ಲರೂ ಆತನ ಬಳಿಗೆ ಹೋಗುತ್ತಿದ್ದಾರೆ, ಎಂದು ದೂರಿತ್ತರು. 27ಅದಕ್ಕೆ ಯೊವಾನ್ನನು, ದೇವರು ದಯಪಾಲಿಸದೆ ಹೋದರೆ ಮಾನವನಿಗೇನೂ ದಕ್ಕದು. 28‘ನಾನು ಲೋಕೋದ್ಧಾರಕನಲ್ಲ; ಆತನ ಮುಂದೂತ ಮಾತ್ರ' ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ. 29ಮದುಮಗಳು ಮದುಮಗನಿಗೆ ಸೇರಿದವಳು. ಮದುಮಗನ ಗೆಳೆಯನಾದರೋ ಪಕ್ಕದಲ್ಲಿದ್ದು ಮದುಮಗನ ಕರೆಗೆ ಕಿವಿಗೊಡುತ್ತಾನೆ; ಆತನ ಸ್ವರ ಕೇಳಿ ಹರ್ಷಿಸುತ್ತಾನೆ. ಇಂಥ ಆನಂದದಿಂದ ನಾನೀಗ ಭರಿತನಾಗಿದ್ದೇನೆ. 30ಆತ ಬೆಳೆಯುತ್ತಿರಬೇಕು, ನಾನು ಅಳಿಯುತ್ತಿರಬೇಕು.
ಚಿಂತನೆ26ಅವರು ಯೊವಾನ್ನನ ಬಳಿಗೆ ಬಂದು, ಗುರುವೇ, ಜೋರ್ಡನಿನ ಆಚೆಕಡೆಯಲ್ಲಿ ನಿಮ್ಮೊಡನೆ ಒಬ್ಬನು ಇದ್ದನಲ್ಲವೆ? ಆತನನ್ನು ಕುರಿತು ನೀವೇ ಸಾಕ್ಷಿ ಹೇಳಲಿಲ್ಲವೆ? ಈಗ ನೋಡಿ, ಆತನೇ ದೀಕ್ಷಾಸ್ನಾನ ಮಾಡಿಸುತ್ತಿದ್ದಾನೆ. ಎಲ್ಲರೂ ಆತನ ಬಳಿಗೆ ಹೋಗುತ್ತಿದ್ದಾರೆ, ಎಂದು ದೂರಿತ್ತರು. 27ಅದಕ್ಕೆ ಯೊವಾನ್ನನು, ದೇವರು ದಯಪಾಲಿಸದೆ ಹೋದರೆ ಮಾನವನಿಗೇನೂ ದಕ್ಕದು. 28‘ನಾನು ಲೋಕೋದ್ಧಾರಕನಲ್ಲ; ಆತನ ಮುಂದೂತ ಮಾತ್ರ' ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ. 29ಮದುಮಗಳು ಮದುಮಗನಿಗೆ ಸೇರಿದವಳು. ಮದುಮಗನ ಗೆಳೆಯನಾದರೋ ಪಕ್ಕದಲ್ಲಿದ್ದು ಮದುಮಗನ ಕರೆಗೆ ಕಿವಿಗೊಡುತ್ತಾನೆ; ಆತನ ಸ್ವರ ಕೇಳಿ ಹರ್ಷಿಸುತ್ತಾನೆ. ಇಂಥ ಆನಂದದಿಂದ ನಾನೀಗ ಭರಿತನಾಗಿದ್ದೇನೆ. 30ಆತ ಬೆಳೆಯುತ್ತಿರಬೇಕು, ನಾನು ಅಳಿಯುತ್ತಿರಬೇಕು.
ಗುರುವಿಗಿಂತ ಶಿಷ್ಯನು ಶ್ರೇಷ್ಟನಲ್ಲ
ಇಂದಿನ ಶುಭಸಂದೇಶದಲ್ಲಿ ದೀಕ್ಷಾಸ್ನಾನ ಯಾರು ಕೊಡಬೇಕು, ಕೊಡಬಾರದು ಎಂಬ ಚರ್ಚೆ ಬರುತ್ತದೆ. ಸ್ನಾನಿಕ ಯೊವಾನ್ನನಾಗಲಿ ಯೇಸುವಾಗಲೀ ದೀಕ್ಷಾಸ್ನಾನವನ್ನು ಸ್ಥಾಪಿಸಲಿಲ್ಲ, ಅದು ಯೆಹೂದ್ಯರ ಒಂದು ಆಚರಣೆಯಾಗಿತ್ತು. ಅನ್ಯಧರ್ಮದವರು ಯೆಹೂದ್ಯ ಧರ್ಮ ಸ್ವೀಕರಿಸಬೇಕಾದಲ್ಲಿ ಅವರು ಈ ಆಚರಣೆಯಲ್ಲಿ ಪಾಲ್ಗೊಳ್ಳಬೇಕಿತ್ತು. ಸ್ನಾನಿಕ ಯೊವಾನ್ನನ ದೀಕ್ಷಾಸ್ನಾನ ಮನಪರಿವರ್ತನೆಯ ಉದ್ದೇಶದಿಂದ ಕೂಡಿತ್ತು. ಕ್ರಿಸ್ತನಿಂದ ಈ ಆಚರಣೆಯು ಸಂಸ್ಕಾರವಾಗಿ ಮಾರ್ಪಡುತ್ತದೆ.
ಇಂದು ಯೊವಾನ್ನ ತನ್ನ ಶಿಷ್ಯರಿಗೆ ಕಲಿಸುವ ಪಾಠ, 'ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ' ಎಂಬುದಾಗಿದೆ. ಯೊವಾನ್ನ, ತಾನು ಯಾರು, ತನ್ನ ಗುರಿ ಏನೆಂಬುದನ್ನು ಸ್ಪಷ್ಟವಾಗಿ ಅರಿತಿದ್ದ, ಹಾಗಾಗಿ 'ಆತ ಬೆಳೆಯುತ್ತಿರಬೇಕು ನಾನು ಅಳಿಯುತ್ತಿರಬೇಕು' ಎನ್ನುತ್ತಾನೆ. ಇಂದಿನ ಧರ್ಮಗುರುಗಳಿಗೆ, ಭಗಿನಿಯರಿಗೆ ಒಂದು ಮಾದರಿ ಬೇಕೆಂದರೆ ಅದು ಸ್ನಾನಿಕ ಯೊವಾನ್ನನೇ ಸರಿ.
ಇಂದು ಯೊವಾನ್ನ ತನ್ನ ಶಿಷ್ಯರಿಗೆ ಕಲಿಸುವ ಪಾಠ, 'ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ' ಎಂಬುದಾಗಿದೆ. ಯೊವಾನ್ನ, ತಾನು ಯಾರು, ತನ್ನ ಗುರಿ ಏನೆಂಬುದನ್ನು ಸ್ಪಷ್ಟವಾಗಿ ಅರಿತಿದ್ದ, ಹಾಗಾಗಿ 'ಆತ ಬೆಳೆಯುತ್ತಿರಬೇಕು ನಾನು ಅಳಿಯುತ್ತಿರಬೇಕು' ಎನ್ನುತ್ತಾನೆ. ಇಂದಿನ ಧರ್ಮಗುರುಗಳಿಗೆ, ಭಗಿನಿಯರಿಗೆ ಒಂದು ಮಾದರಿ ಬೇಕೆಂದರೆ ಅದು ಸ್ನಾನಿಕ ಯೊವಾನ್ನನೇ ಸರಿ.
No comments:
Post a Comment