ಸಾರ್ವಜನಿಕ ಉದ್ದೇಶ: ಮಾನವ ಸಾಗಾಣಿಕೆ, ವೇಶ್ಯಾವಾಟಿಕೆ ಹಾಗೂ ಹಿಂಸಾತ್ಮಕ ಕ್ರಿಯೆಗಳಿಂದಾಗಿ ನಿರಾಶ್ರಿತರಾದವರಿಗೆ ಆಶ್ರಯವನ್ನು ನೀಡಲು ಸರ್ವರೂ ಉದಾರತೆಯಿಂದ ಮುಂದೆ ಬರುವಂತೆ.
17 ಫೆಬ್ರವರಿ 2೦19
ಭಾನುವಾರ / ಹಸಿರು / ಸಾಧಾರಣ ಆರನೇ ಭಾನುವಾರ
1ನೇ ವಾಚನ - ಯೆರೆ 17: 5-8
ಕೀರ್ತನೆ - 1: 1-2, 3-4, 6.
2ನೇ ವಾಚನ - 1 ಕೊರಿಂಥ 15: 12, 16-20
ಶುಭಸಂದೇಶ - ಲೂಕ 6: 17, 20-26
ಸೇವಾಸಭೆಯ ಸಪ್ತ ಸ್ಥಾಪಕರ ಸ್ಮರಣೆ ಇರುವುದಿಲ್ಲ.

ವಾಚನಗಳು
ಮೊದಲನೇ ವಾಚನ
ಯೆರೆಮೀಯ ಪ್ರವಾದಿಯ ಗ್ರಂಥದಿಂದ ವಾಚನ
ಯೆರೆ 17: 5-8
5ಇವು ಸರ್ವೇಶ್ವರನ ಮಾತುಗಳು: “ಮಾನವ ಮಾತ್ರದವರಲ್ಲಿ ಭರವಸೆಯಿಟ್ಟು ನರಜನ್ಮದವರನ್ನೇ ತನ್ನ ಭುಜಬಲ ವೆಂದುಕೊಂಡು ಸರ್ವೇಶ್ವರನನ್ನೇ ತೊರೆಯುವಂಥ ಹೃದಯವುಳ್ಳವನು ಶಾಪಗ್ರಸ್ತನು! 6ಇಂಥವನು ಅಡವಿಯಲ್ಲಿನ ಜಾಲಿಗಿಡಕ್ಕೆ ಸಮಾನನು. ಶುಭಸಂಭವಿಸಿದರೂ ಅದು ಅವನ ಕಣ್ಣಿಗೆ ಕಾಣದು. ಜನರಾರೂ ವಾಸಿಸದ ಚೌಳು ನೆಲದೊಳು ಬೆಳೆಯಿಲ್ಲದ ಬೆಂಗಾಡಿನೊಳು ವಾಸಿಸುವವನ ಪರಿಸ್ಥಿತಿ ಅವನದು. 7ಸರ್ವೇಶ್ವರನಲ್ಲಿ ಭರವಸೆಯಿಟ್ಟವನಾದರೋ ಧನ್ಯ! ಅಂಥವನಿಗೆ ಸರ್ವೇಶ್ವರನಲ್ಲೇ ವಿಶ್ವಾಸ. 8ನೀರರುಗಿನಲೆ ನೆಡಲಾದ, ನದಿಯ ಬದಿಯಲೆ ಬೇರು ಹರಡಿದ ಬಿಸಿಲ ಧಗೆಗೆ ಹೆದರದ, ಬರಗಾಲದಲ್ಲೂ ನಿಶ್ಚಿಂತವಾದ ಹಸಿರೆಲೆಬಿಡುವ, ಫಲನೀಡುವ ಮರಕ್ಕೆ ಸಮಾನನು ಆತ.
ಸಂತ ಪೌಲನು ಕೊರಿಂಥದವರಿಗೆ ಬರೆದ ಮೊದಲನೆಯ ಪತ್ರದಿಂದ ವಾಚನ
1 ಕೊರಿಂಥ 15: 12, 16-20
12ಸಹೋದರರೇ ಕ್ರಿಸ್ತಯೇಸು ಮರಣದಿಂದ ಪುನರುತ್ಥಾನ ಹೊಂದಿದರು ಎಂದು ನಾವು ಸಾರುತ್ತಿರುವಲ್ಲಿ, ಸತ್ತವರು ಪುನರುತ್ಥಾನರಾಗುವುದಿಲ್ಲ ಎಂದು ನಿಮ್ಮಲ್ಲಿ ಕೆಲವರು ವಾದಿಸುವುದು ಹೇಗೆ?
16ಸತ್ತವರು ಪುನರುತ್ಥಾನ ಹೊಂದುವುದಿಲ್ಲ ಎಂದರೆ ಕ್ರಿಸ್ತಯೇಸುವು ಪುನರುತ್ಥಾನ ಹೊಂದಲಿಲ್ಲ ಎಂದಂತಾಯಿತು. 17ಕ್ರಿಸ್ತಯೇಸುವೇ ಪುನರುತ್ಥಾನ ಹೊಂದಿಲ್ಲ ಎಂದಮೇಲೆ ನಿಮ್ಮ ವಿಶ್ವಾಸವೇ ನಿರರ್ಥಕ; ಮತ್ತು ನೀವಿನ್ನೂ ನಿಮ್ಮ ಪಾಪಗಳಲ್ಲಿಯೇ ಮುಳುಗಿದ್ದೀರಿ; 18ಅಷ್ಟೇ ಅಲ್ಲದೆ, ಕ್ರಿಸ್ತಯೇಸುವಿನಲ್ಲಿ ಮೃತರಾದವರೆಲ್ಲರೂ ವಿನಾಶವಾದರು. 19ಕ್ರಿಸ್ತಯೇಸುವಿನಲ್ಲಿ ನಮಗಿರುವ ನಂಬಿಕೆ ಕೇವಲ ಬದುಕಿಗೆ ಸೀಮಿತವಾಗಿದ್ದರೆ ಜಗತ್ತಿನಲ್ಲಿ ನಮಗಿಂತ ನಿರ್ಭಾಗ್ಯರು ಬೇರೆ ಯಾರೂ ಇಲ್ಲ. 20ಕ್ರಿಸ್ತಯೇಸು ಪುನರುತ್ಥಾನಹೊಂದಿದ್ದೇನೋ ಸತ್ಯಸ್ಯ ಸತ್ಯ. ಅವರ ಪುನರುತ್ಥಾನವು, ಸತ್ತವರು ಪುನರುತ್ಥಾನ ಹೊಂದುತ್ತಾರೆ ಎನ್ನುವುದಕ್ಕೆ ಪ್ರಮಾಣ.

ಕೀರ್ತನೆ
ಕೀರ್ತನೆ 1: 1-2, 3, 4, 6
ಪ್ರಭುವಿನಲ್ಲೆ ಭರವಸೆ ಇಟ್ಟು ನಡೆವಾತನು ಧನ್ಯನು
ದುರ್ಜನರ ಆಲೋಚನೆಯಂತೆ ನಡೆಯದೆ
ಪಾಪಾತ್ಮರ
ಪಥದಲಿ ಕಾಲೂರದೆ
ಧರ್ಮನಿಂದಕರ
ಕೂಟದಲಿ ಕೂರದೆ
ಪ್ರಭುವಿನ ಧರ್ಮಶಾಸ್ತ್ರದಲಿ ಹರ್ಷಗೊಳ್ಳುವವನಾರೋ - ಅವನೇ ಧನ್ಯನು
ಹಗಲಿರುಳೆನ್ನದೆ ಅದನೆ ಧ್ಯಾನಿಸು ತಿರುವವನಾರೋ - ಅವನೇ ಧನ್ಯನು.
ನದಿಯ ಬದಿಯಲೇ ಬೆಳೆದಿಹ ಮರದಂತೆ
ಸಕಾಲಕೆ ಫಲವೀವ ವೃಕ್ಷದಂತೆ
ಎಲೆಬಾಡದೆ
ಪಸಿರಿರುವ
ತರುವಂತೆ
ಸಿಗುವುದು
ಅವನ ಕಾರ್ಯಗಳಿಗೆ ಸಫಲತೆ.
ದುರುಳರಾದರೊ
ತೂರಿ ಹೋಗುವರು
ಬಿರುಗಾಳಿಗೆ
ತರಗೆಲೆಯಾಗುವರು
ಸಜ್ಜನರ ಮಾರ್ಗಕ್ಕಿದೆ ಪ್ರಭುವಿನ ಪಾಲನ
ದುರ್ಜನರ ಮಾರ್ಗಕ್ಕಿದೆ ಸಂಪೂರ್ಣ ವಿನಾಶನ.
ಎರಡನೇ ವಾಚನ
1 ಕೊರಿಂಥ 15: 12, 16-20
12ಸಹೋದರರೇ ಕ್ರಿಸ್ತಯೇಸು ಮರಣದಿಂದ ಪುನರುತ್ಥಾನ ಹೊಂದಿದರು ಎಂದು ನಾವು ಸಾರುತ್ತಿರುವಲ್ಲಿ, ಸತ್ತವರು ಪುನರುತ್ಥಾನರಾಗುವುದಿಲ್ಲ ಎಂದು ನಿಮ್ಮಲ್ಲಿ ಕೆಲವರು ವಾದಿಸುವುದು ಹೇಗೆ?
16ಸತ್ತವರು ಪುನರುತ್ಥಾನ ಹೊಂದುವುದಿಲ್ಲ ಎಂದರೆ ಕ್ರಿಸ್ತಯೇಸುವು ಪುನರುತ್ಥಾನ ಹೊಂದಲಿಲ್ಲ ಎಂದಂತಾಯಿತು. 17ಕ್ರಿಸ್ತಯೇಸುವೇ ಪುನರುತ್ಥಾನ ಹೊಂದಿಲ್ಲ ಎಂದಮೇಲೆ ನಿಮ್ಮ ವಿಶ್ವಾಸವೇ ನಿರರ್ಥಕ; ಮತ್ತು ನೀವಿನ್ನೂ ನಿಮ್ಮ ಪಾಪಗಳಲ್ಲಿಯೇ ಮುಳುಗಿದ್ದೀರಿ; 18ಅಷ್ಟೇ ಅಲ್ಲದೆ, ಕ್ರಿಸ್ತಯೇಸುವಿನಲ್ಲಿ ಮೃತರಾದವರೆಲ್ಲರೂ ವಿನಾಶವಾದರು. 19ಕ್ರಿಸ್ತಯೇಸುವಿನಲ್ಲಿ ನಮಗಿರುವ ನಂಬಿಕೆ ಕೇವಲ ಬದುಕಿಗೆ ಸೀಮಿತವಾಗಿದ್ದರೆ ಜಗತ್ತಿನಲ್ಲಿ ನಮಗಿಂತ ನಿರ್ಭಾಗ್ಯರು ಬೇರೆ ಯಾರೂ ಇಲ್ಲ. 20ಕ್ರಿಸ್ತಯೇಸು ಪುನರುತ್ಥಾನಹೊಂದಿದ್ದೇನೋ ಸತ್ಯಸ್ಯ ಸತ್ಯ. ಅವರ ಪುನರುತ್ಥಾನವು, ಸತ್ತವರು ಪುನರುತ್ಥಾನ ಹೊಂದುತ್ತಾರೆ ಎನ್ನುವುದಕ್ಕೆ ಪ್ರಮಾಣ.
ಶುಭಸಂದೇಶ
ಸಂತ ಲೂಕನು ಬರೆದ ಶುಭಸಂದೇಶದಿಂದ ವಾಚನ
ಲೂಕ 6: 17, 20-26
17ಅನಂತರ ಯೇಸುಸ್ವಾಮಿ ಅವರೊಂದಿಗೆ ಬೆಟ್ಟದಿಂದ ಇಳಿದು, ಸಮತಟ್ಟಾದ ಸ್ಥಳಕ್ಕೆ ಬಂದರು. ಶಿಷ್ಯರ ದೊಡ್ಡ ಗುಂಪು ಅಲ್ಲಿ ನೆರೆದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮ್ ಪಟ್ಟಣದಿಂದಲೂ ಸಮುದ್ರ ತೀರದ ಟೈರ್ ಹಾಗೂ ಸಿದೋನ್ ಪಟ್ಟಣಗಳಿಂದಲೂ ಜನಸಮೂಹ ಅಲ್ಲಿಗೆ ಬಂದಿತ್ತು.
20ಯೇಸುಸ್ವಾಮಿ ತಮ್ಮ ಶಿಷ್ಯರ ಕಡೆಗೆ ದೃಷ್ಟಿಸಿ ನೋಡಿ ಹೀಗೆಂದು ಬೋಧಿಸಿದರು: “ದೀನದಲಿತರೇ, ನೀವು ಭಾಗ್ಯವಂತರು! ದೇವರ ಸಾಮ್ರಾಜ್ಯ ನಿಮ್ಮದು. 21ಈಗ ಹಸಿದಿರುವವರೇ, ನೀವು ಭಾಗ್ಯವಂತರು! ನಿಮಗೆ ಸಂತೃಪ್ತಿಯಾಗುವುದು. ಈಗ ಅತ್ತು ಗೋಳಾಡುವವರೇ, ನೀವು ಭಾಗ್ಯವಂತರು! ನೀವು ನಕ್ಕುನಲಿದಾಡುವಿರಿ! 22ನರಪುತ್ರನ ಶಿಷ್ಯರು ನೀವಾದುದರಿಂದ ನಿಮ್ಮನ್ನು ದ್ವೇಷಿಸಿ, ಬಹಿಷ್ಕರಿಸಿ, ಧಿಕ್ಕರಿಸಿ, ನಿಮ್ಮ ಹೆಸರೆತ್ತುವುದು ಕೂಡ ಕೇಡೆಂದು ತಿರಸ್ಕರಿಸುವಾಗ ನೀವು ಭಾಗ್ಯವಂತರು! 23ಈ ಜನರ ಪೂರ್ವಜರು ಪ್ರವಾದಿಗಳನ್ನು ಹೀಗೆಯೇ ತೆಗಳಿದ್ದರು. ಇದೆಲ್ಲಾ ಸಂಭವಿಸುವಾಗ ಹಿಗ್ಗಿ ನಲಿದಾಡಿರಿ. ಏಕೆಂದರೆ, ಸ್ವರ್ಗದಲ್ಲಿ ನಿಮಗೆ ಲಭಿಸುವ ಪ್ರತಿಫಲವು ಮಹತ್ತರವಾದುದು. 24ಆದರೆ ಧನಿಕರೇ, ನಿಮಗೆ ಧಿಕ್ಕಾರ! ನೀವು ಸುಖಜೀವನವನ್ನು ಅನುಭವಿಸಿ ಆಗಿದೆ. 25ಈಗ ತಿಂದು ತೃಪ್ತಿಯಾಗಿರುವವರೇ, ನಿಮಗೆ ಧಿಕ್ಕಾರ! ನೀವು ಹಸಿದು ಬಳಲುವಿರಿ. ಈಗ ನಕ್ಕುನಲಿದಾಡುವವರೇ, ನಿಮಗೆ ಧಿಕ್ಕಾರ! ನೀವು ದುಃಖಿಸಿ ಗೋಳಾಡುವಿರಿ. 26ಜನರೆಲ್ಲರಿಂದ ಹೊಗಳಿಸಿಕೊಳ್ಳುವಾಗ ನಿಮಗೆ ಧಿಕ್ಕಾರ ! ಕಪಟ ಪ್ರವಾದಿಗಳೂ ಈ ಜನರ ಪೂರ್ವಜರಿಂದ ಹೀಗೆಯೇ ಹೊಗಳಿಸಿಕೊಂಡಿದ್ದರು.

ಚಿಂತನೆ
ಶ್ರೀಮಂತಿಕೆಯ ದರ್ಪ ಮತ್ತು ಅಹಂಕಾರದ ಖಂಡನೆ
ಇಂದಿನ ಶುಭಸಂದೇಶದಲ್ಲಿ ಯೇಸುವು ಸ್ವರ್ಗ ಸಾಮ್ರಾಜ್ಯದ ಸಂತೋಷವನ್ನು ಅನುಭವಿಸಲಿರುವ ಜನರ ಗುಣ ಲಕ್ಷಣಗಳನ್ನು ತಿಳಿಸುತ್ತಿದ್ದಾರೆ. ಸಮಾಜದ ಲೌಕಿಕ ರೂಪರೇಷೆಗಳನ್ನು ಬುಡಮೇಲು ಮಾಡಿ ನೂತನ ದೈವೀ ಮೌಲ್ಯಗಳಿಂದ ದೇವರ ಸಾಮ್ರಾಜ್ಯವನ್ನು ಸ್ಥಾಪಿಸುವ ಪ್ರಯತ್ನವಾಗಿದೆ. ಬಡವರಿಗೆ, ಮುಖ್ಯವಾಗಿ ಆರ್ಥಿಕವಾಗಿ ಹಿಂದುಳಿದವರಿಗೆ, ಬಲಹೀನರಿಗೆ, ದುರ್ಬಲರಿಗೆ, ನಿರಾಶ್ರಿತರಿಗೆ, ರೋಗಿಗಳಿಗೆ, ಕೈಲಾಗದವರಿಗೆ ದೇವರನ್ನು ಆಶ್ರಯಿಸುವವರಿಗೆ ದೇವರ ಆಶ್ರಯ ಖಂಡಿತ ಎಂಬ ಸಂದೇಶವನ್ನು ತೀಕ್ಷ್ಣ ರೀತಿಯಲ್ಲಿ ರವಾನಿಸುತ್ತಿದ್ದಾರೆ. ಸ್ವರ್ಗಸಾಮ್ರಾಜ್ಯವು ದೇವರು ನೀಡುವ ಉಚಿತ ಬಳುವಳಿ, ನಮ್ಮ ಸಾಧನೆಯಿಂದ ಪಡೆಯುವ ವಸ್ತುವಲ್ಲ ಎಂಬ ಸಂದೇಶವನ್ನೂ ಕೂಡ ಬೋಧಿಸುತ್ತಿದ್ದಾರೆ.
ಯೇಸು ಶ್ರೀಮಂತಿಕೆಯನ್ನು ಅಥವಾ ಶ್ರೀಮಂತರನ್ನು ದ್ವೇಷಿಸುತ್ತಿಲ್ಲ. ಪವಿತ್ರಗ್ರಂಥದಲ್ಲಿ ಶ್ರೀಮಂತಿಕೆ ದೇವರ ಅನುಗ್ರಹ, ವರಪ್ರಸಾದ ಎಂಬ ನಂಬಿಕೆಯಿದೆ. ಯೇಸು ಅನೇಕ ಬಾರಿ ಶ್ರೀಮಂತರ ಮನೆಗಳಿಗೆ, ಔತಣ ಕೂಟಗಳಿಗೆ ಹೋಗಿದ್ದರು. ಇಲ್ಲಿ ಯೇಸು ಖಂಡಿಸುತ್ತಿರುವುದು ಶ್ರೀಮಂತಿಕೆಯ ದರ್ಪವನ್ನು ಮತ್ತು ಅಹಂಕಾರವನ್ನು. ಶ್ರೀಮಂತರ ದುರಾಸೆ ಮತ್ತು ಸ್ವಾರ್ಥವನ್ನು. ಶ್ರೀಮಂತಿಕೆಯ ಅಮಲಿನಲ್ಲಿ ಬಡತನ ಮೇಲಿನ ದರ್ಪವನ್ನು, ದಬ್ಬಾಳಿಕೆಯನ್ನು ಖಂಡಿಸುತ್ತಿದ್ದಾರೆ. ಹಣವೇ ದೈವ ಎಂಬಂತೆ ವರ್ತಿಸುವುದು, ತನ್ನ ಬಗ್ಗೆಯಷ್ಟೇ ಯೋಚಿಸುವುದು ಇತರರನ್ನು ಕಡೆಗಣಿಸುವುದನ್ನು ಯೇಸು ಖಂಡಿಸುತ್ತಾರೆ.
ಚಿತ್ರ: ಗೂಗಲ್ ಕೃಪೆ

No comments:
Post a Comment