14 ಏಪ್ರಿಲ್ 2019 ಪ್ರಭುವಿನ ಯಾತನೆಯ ಗರಿಗಳ ಭಾನುವಾರ

ಕೆಂಪು /ಭಾನು/       ಪ್ರಭುವಿನ ಯಾತನೆಯ ಗರಿಗಳ ಭಾನುವಾರ       
ಮೆರವಣಿಗೆ:            ಲೂಕ  1928-4೦               
ಬಲಿಪೂಜೆ              1ನೇ ವಾಚನ - ಯೆಶಾಯ 5೦: 4-7     
                            ಕೀರ್ತನೆ  -  227-816-1718-19,22-23                    
                            2ನೇ  ವಾಚನ  -  ಫಿಲಿಪ್ಪಿ  26-11        
                            ಶುಭಸಂದೇಶ - ಲೂಕ 22;14-23: 56 ಅಥವಾ  231-49 
  
1ನೇ ವಾಚನ - ಯೆಶಾಯ 5೦4-7     
4ದಣಿದವರನ್ನು ಹಿತನುಡಿಗಳಿಂದ ತಣಿಸುವಂತೆ ಅನುಗ್ರಹಿಸುತ್ತಾನೆನಗೆ ಸ್ವಾಮಿ ಸರ್ವೇಶ್ವರ ಶಿಕ್ಷಿತರ ನಾಲಗೆಯನು; ಶಿಷ್ಯನೋಪಾದಿ ನಾನು ಆತನನ್ನು ಆಲಿಸುವಂತೆ ಬೆಳಬೆಳಗೂ ನನ್ನನೆಚ್ಚರಿಸಿ ಚೇತನಗೊಳಿಸುತ್ತಾನೆ ನನ್ನ ಕಿವಿಯನು5ತೆರೆದಿಹನು ಸ್ವಾಮಿ ಸರ್ವೇಶ್ವರ ನನ್ನ ಕಿವಿಯನು ಎಂದೇ ವಿಮುಖನಾಗಲಿಲ್ಲ ನಾನು, ಪ್ರತಿಭಟಿಸಲಿಲ್ಲ ಆತನನು6ಬೆನ್ನುಕೊಟ್ಟೆನು ಹೊಡೆಯುವವರಿಗೆ ಗಡ್ಡ ಒಡ್ಡಿದೆನು ಅದನ್ನು ಕೀಳುವವರಿಗೆ ಮುಖ ಮರೆಮಾಡಲಿಲ್ಲ ಉಗುಳುಬುಗುಳಿಗೆ.  7ನೆರವಾಗಿಹನು ನನಗೆ ಸ್ವಾಮಿ ಸರ್ವೇಶ್ವರ ಎಂದೇ ತಲೆತಗ್ಗಿಸಲಿಲ್ಲ ನಾನು ನಾಚಿಕೆಯಿಂದ ಗಟ್ಟಿಮಾಡಿಕೊಂಡೆ ಮುಖವನು ಕಗ್ಗಲ್ಲಿನ ಹಾಗೆ ಆಶಾಭಂಗಪಡಲಾರೆನೆಂದು ಗೊತ್ತು ನನಗೆ.

ಕೀರ್ತನೆ  -  22:  7-8,  16-17,  18-19,22-23   
ದೇವಾ ಓ ಎನ್ನ ದೇವಾ ಏಕೆನ್ನ ಕೈ ಬಿಟ್ಟೆ?

8ಇತ್ತನಿವನು ಭರವಸೆ, ಪ್ರಭುವೆ ತನ್ನುದ್ಧಾರಕ ನೆಂದು / ಆತನಿಗಿವನು ಮೆಚ್ಚುಗೆಯಾದರೆ ರಕ್ಷಿಸಲಿ- ಇಂತೆಂದು //
9ನಿನಗೆ ಒಬ್ಬ ಮಗ ಹುಟ್ಟುವನು; ಅವನು ಸಮಾಧಾನ ಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲ ವಿರೋಧಿಗಳನ್ನು ಅಡಗಿಸಿ ಅವನಿಗೆ ಶಾಂತಿ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನ ಎಂಬ ಹೆಸರಿರುವುದು. ಅವನ ಕಾಲದಲ್ಲಿ ಇಸ್ರಯೇಲರಿಗೆ ಶಾಂತಿ ಸಮಾಧಾನವನ್ನೂ ಸೌಭಾಗ್ಯವನ್ನೂ ದಯಪಾಲಿಸುವೆನು.
17ಎಣಿಸಬಹುದಿದೆ ನನ್ನೆಲುಬುಗಳೆಲ್ಲವನು / ಹಿಗ್ಗುತಿಹರು ದುರುಗುಟ್ಟಿ ನೋಡೆನ್ನನು //
18ನನ್ನ ಉಡುಗೆಗಳನ್ನು ಹಂಚಿಕೊಂಡರು / ನನ್ನ ಅಂಗಿಗೋಸ್ಕರ ಚೀಟು ಹಾಕಿದರು //
19ನನ್ನಿಂದ ದೂರ ಸರಿಯಲು ಬೇಡ, ಪ್ರಭು / ನೀನೆನ್ನ ಶಕ್ತಿ, ನೆರವಾಗಲು ತ್ವರೆ ಮಾಡು //
20ಕತ್ತಿಗೆ ತುತ್ತಾಗದಂತೆ ತಪ್ಪಿಸು / ಕುಕ್ಕುರಗಳಿಂದ ಪ್ರಾಣವನುಳಿಸು //
23ಮಣಿಯಿರಿ, ಪ್ರಭುವಿನಲಿ ಭಯಭಕುತಿಯುಳ್ಳವರೇ / ಭಜಿಸಿರಿ ಇಸ್ರಯೇಲರೇ, ಯಾಕೋಬ ಕುಲಜರೇ //
24ತೃಣೀಕರಿಸನು, ತಿರಸ್ಕರಿಸನು ದಲಿತನನು / ವಿಮುಖನಾಗನು, ಪ್ರಾರ್ಥನೆಗೆ ಕಿವಿಗೊಡುವನು //

2ನೇ  ವಾಚನ  -  ಫಿಲಿಪ್ಪಿ  2:  6-11     
6ದೇವಸ್ವರೂಪಿ ತಾನಾಗಿದ್ದರೂ ನಿರುತ ದೇವರಿಗೆ ಸಮನಾದ ಸಿರಿ ಪದವಿಯನಾತ ಹಿಡಿದಿಟ್ಟುಕೊಳ್ಳಲಿಲ್ಲ ಬಿಡಲೊಲ್ಲೆನೆನುತ7ತನ್ನನೇ ಬರಿದು ಮಾಡಿಕೊಂಡು ದಾಸನ ರೂಪವನು ಧರಿಸಿಕೊಂಡು ಮನುಜನಾಕಾರದಲಿ ಕಾಣಿಸಿಕೊಂಡು ನರಮಾನವರಿಗೆ ಸರಿಸಮನಾದ8ತನ್ನನೇ ಆತ ತಗ್ಗಿಸಿಕೊಂಡು ವಿಧೇಯನಾಗಿ ನಡೆದುಕೊಂಡು ಮರಣಪರಿಯಂತ, ಹೌದೌದು, ಶಿಲುಬೆಯ ಮರಣಪರಿಯಂತ ವಿಧೇಯನಾದ9ಎಂತಲೇ ಪರಮೋನ್ನತ ಸ್ಥಾನಕ್ಕೇರಿಸಿದನಾತನನು ಇತ್ತನು ಹೆಸರುಗಳೊಳುತ್ತಮ ಹೆಸರನು ದೇವಪರಮನು.
10ಯೇಸುವಿನ ಹೆಸರಿಗೆಂದೇ ಮೊಣಕಾಲೂರಿ ಮಣಿವರು ಸ್ವರ್ಗವಾಸಿಗಳು, ಭೂನಿವಾಸಿಗಳು, ಪಾತಾಳ ಜೀವರಾಶಿಗಳು11'ಕ್ರಿಸ್ತ ಯೇಸುವೇ ಪ್ರಭು ಎಂದೆಲ್ಲರಿಗೆ ಅರಿಕೆ ಮಾಡುವರು ಪಿತದೇವನ ಮಹಿಮೆಯನು ಪರಿ ಹೊಗಳಿ ಸಾರುವರವರು.

ಶುಭಸಂದೇಶ - ಲೂಕ 22;14-2356 ಅಥವಾ  23:  1-49
1ಬಳಿಕ ಸಭೆಸೇರಿದ್ದವರೆಲ್ಲರೂ ಎದ್ದು ಯೇಸುಸ್ವಾಮಿಯನ್ನು ಪಿಲಾತನ ಬಳಿಗೆ ಕರೆದುತಂದರು2ಅಲ್ಲಿ ಆತನ ಮುಂದೆ, “ಇವನು ರೋಮ್ ಚಕ್ರವರ್ತಿಗೆ ತೆರಿಗೆ ಕೊಡುವುದನ್ನು ನಿಷೇಧಿಸುತ್ತಾನೆ. ತಾನೇಕ್ರಿಸ್ತ, ಒಬ್ಬ ಅರಸ,’ ಎಂದು ಹೇಳಿಕೊಳ್ಳುತ್ತಾನೆ. ಹೀಗೆ ನಮ್ಮ ಜನತೆ ದಂಗೆಯೇಳುವಂತೆ ಪ್ರಚೋದಿಸುತ್ತಾನೆ. ಇದನ್ನೆಲ್ಲಾ ನಾವು ಕಂಡುಹಿಡಿದಿದ್ದೇವೆ,” ಎಂದು ದೂರತೊಡಗಿದರು3ಆಗ ಪಿಲಾತನು, “ನೀನು ಯೆಹೂದ್ಯರ ಅರಸನೋ?” ಎಂದು ಯೇಸುವನ್ನು ಪ್ರಶ್ನಿಸಿದನು. “ಅದು ನಿಮ್ಮ ಬಾಯಿಂದಲೇ ಬಂದಿದೆ,” ಎಂದು ಯೇಸು ಮರುನುಡಿದರು4ಪಿಲಾತನು ಮುಖ್ಯ ಯಾಜಕರನ್ನೂ ಜನರ ಗುಂಪನ್ನೂ ನೋಡಿ, “ ಮನುಷ್ಯನಲ್ಲಿ ಶಿಕ್ಷಾರ್ಹ ದೋಷ ಯಾವುದೂ ನನಗೆ ಕಾಣಿಸುವುದಿಲ್ಲ,” ಎಂದನು5ಆದರೆ ಅವರು, “ಇವನು ಜುದೇಯ ನಾಡಿನಲ್ಲೆಲ್ಲಾ ಬೋಧನೆ ಮಾಡುತ್ತಾ ಕ್ರಾಂತಿಗೆ ಕರೆಗೊಡುತ್ತಾನೆ; ಗಲಿಲೇಯದಲ್ಲಿ ಪ್ರಾರಂಭಿಸಿ ಇಲ್ಲಿಯವರೆಗೂ ಬಂದಿದ್ದಾನೆ,” ಎಂದು ಒತ್ತಾಯ ಪೂರ್ವಕವಾಗಿ ಆರೋಪಿಸಿದರು. ಹೆರೋದರಸನ ಮುಂದೆ ಯೇಸು 6ಇದನ್ನು ಕೇಳಿದಾಕ್ಷಣವೇ ಪಿಲಾತನು, “ಇವನು ಗಲಿಲೇಯದವನೋ?” ಎಂದು ವಿಚಾರಿಸಿದನು7ಯೇಸುಸ್ವಾಮಿ ಹೆರೋದನ ಆಧಿಪತ್ಯಕ್ಕೆ ಒಳಪಟ್ಟವರೆಂದು ತಿಳಿದುಕೊಂಡು ಅವರನ್ನು ಆತನ ಬಳಿಗೆ ಕಳುಹಿಸಿದನು. ಹೆರೋದನು ಅದೇ ಸಮಯಕ್ಕೆ ಜೆರುಸಲೇಮಿಗೆ ಬಂದಿದ್ದನು8ಯೇಸುಸ್ವಾಮಿಯನ್ನು ಕಂಡೊಡನೆ ಹೆರೋದನಿಗೆ ತುಂಬ ಸಂತೋಷವಾಯಿತು. ಆತನು ಅವರನ್ನು ಕಾಣಲು ಬಹಳ ದಿನಗಳಿಂದ ಕಾತರನಾಗಿದ್ದನು. ಏಕೆಂದರೆ ಅವರ ವಿಷಯವಾಗಿ ಈಗಾಗಲೇ ಎಷ್ಟೋ ಕೇಳಿದ್ದನು. ಅವರು ಯಾವುದಾದರೊಂದು ಪವಾಡಕಾರ್ಯ ಮಾಡುವುದನ್ನು ನೋಡಬೇಕೆಂಬ ಅಪೇಕ್ಷೆ ಆತನಿಗಿತ್ತು9ಆದುದರಿಂದ ಆತನು ಯೇಸುವನ್ನು ಅನೇಕ ವಿಧವಾಗಿ ಪ್ರಶ್ನಿಸಿದನು. ಆದರೆ ಅವರು ಒಂದಕ್ಕೂ ಉತ್ತರ ಕೊಡಲಿಲ್ಲ10ಇತ್ತ ಮುಖ್ಯ ಯಾಜಕರೂ ಧರ್ಮಶಾಸ್ತ್ರಿಗಳೂ ಮುಂದೆಬಂದು ಅವರ ಮೇಲೆ ಪ್ರಬಲವಾಗಿ ದೋಷಾರೋಪಣೆ ಮಾಡತೊಡಗಿದರು11ಕಡೆಗೆ ಹೆರೋದನು ತನ್ನ ಸೈನಿಕರೊಡನೆ ಸೇರಿ ಯೇಸುವನ್ನು ಅಣಕಿಸಿ ಅವಮಾನ ಪಡಿಸಿದನು. ರಾಜವಸ್ತ್ರವನ್ನು ವೇಷಭೂಷಣವಾಗಿ ಅವರಿಗೆ ತೊಡಿಸಿ ಪಿಲಾತನ ಬಳಿಗೆ ಮರಳಿ ಕಳುಹಿಸಿಕೊಟ್ಟನು12ಅದುವರೆಗೂ ಪರಸ್ಪರ ವೈರಿಗಳಾಗಿದ್ದ ಹೆರೋದನು ಮತ್ತು ಪಿಲಾತನು ಅಂದೇ ಮಿತ್ರರಾದರು.

13ಪಿಲಾತನು ಮುಖ್ಯಯಾಜಕರನ್ನೂ ಮುಖಂಡರನ್ನೂ ಜನರನ್ನೂ ಒಟ್ಟಾಗಿ ಕರೆಯಿಸಿ14ಜನರು ದಂಗೆಯೇಳುವಂತೆ ಮನುಷ್ಯ ಪ್ರೇರೇಪಿಸುತ್ತಾನೆಂದು ಇವನನ್ನು ನನ್ನ ಬಳಿಗೆ ಕರೆತಂದಿರಲ್ಲವೇ? ಇಗೋ, ನಿಮ್ಮ ಎದುರಿಗೇ ವಿಚಾರಣೆ ಮಾಡಿದ್ದೇನೆ; ಇವನಲ್ಲಿ ನೀವು ಆರೋಪಿಸುವಂಥ ದೋಷಗಳೊಂದೂ ನಮಗೆ ಕಾಣಲಿಲ್ಲ15ಹೆರೋದ ಅರಸನಿಗೂ ಕಾಣಲಿಲ್ಲ; ಎಂದೇ ಇವನನ್ನು ಮರಳಿ ನನ್ನ ಬಳಿಗೆ ಕಳುಹಿಸಿ ಬಿಟ್ಟಿದ್ದಾರೆ. ಮರಣದಂಡನೆಗೆ ಗುರಿಯಾಗಿಸುವ ಯಾವುದನ್ನೂ ಇವನು ಮಾಡಿಲ್ಲ ಎಂಬುದು ಸ್ಪಷ್ಟವಾಗಿದೆ16ಆದ್ದರಿಂದ ಇವನನ್ನು ದಂಡಿಸಿ ಬಿಟ್ಟುಬಿಡುತ್ತೇನೆ ಎಂದನು17(ಪಾಸ್ಕಹಬ್ಬದ ಸಂದರ್ಭದಲ್ಲಿ ಜನರು ಕೇಳಿಕೊಂಡ ಒಬ್ಬ ಸೆರೆಯಾಳನ್ನು ಪಿಲಾತನು ಬಿಡುಗಡೆ ಮಾಡಬೇಕಾಗಿತ್ತು). 18ಆದರೆ ಅವರೆಲ್ಲರೂ, “ಇವನನ್ನು ಮುಗಿಸಿಬಿಡಿ, ಬರಬ್ಬನನ್ನು ನಮಗೆ ಬಿಡುಗಡೆಮಾಡಿ,” ಎಂದು ಒಕ್ಕೊರಲಿನಿಂದ ಬೊಬ್ಬೆಹಾಕಿದರು.

19ನಗರದಲ್ಲಿ ದಂಗೆ ಎಬ್ಬಿಸಿದ ಹಾಗೂ ಕೊಲೆಮಾಡಿದ ಕಾರಣ ಸೆರೆಯಲ್ಲಿ ಹಾಕಲಾಗಿದ್ದ ಬರಬ್ಬನೇ ಅವನು20ಪಿಲಾತನು ಯೇಸುಸ್ವಾಮಿಯನ್ನು ಬಿಡುಗಡೆ ಮಾಡಬಯಸಿ ಮತ್ತೊಮ್ಮೆ ಜನರೊಡನೆ ಮಾತನಾಡಿ ನೋಡಿದನು21ಅವರಾದರೋ, “ಇವನನ್ನು ಶಿಲುಬೆಗೇರಿಸಿ, ಇವನನ್ನು ಶಿಲುಬೆಗೇರಿಸಿ,” ಎಂದು ಆರ್ಭಟಿಸತೊಡಗಿದರು22ಮೂರನೆಯ ಸಾರಿ ಪಿಲಾತನು, “ಏಕೆ? ಇವನೇನು ಕೇಡುಮಾಡಿದ್ದಾನೆ? ಇವನನ್ನು ಮರಣ ದಂಡನೆಗೆ ಗುರಿಪಡಿಸುವಂಥ ಅಪರಾಧ ಯಾವುದೂ ನನಗೆ ಕಂಡುಬರುವುದಿಲ್ಲ. ಆದ್ದರಿಂದ ಇವನನ್ನು ದಂಡಿಸಿ ಬಿಟ್ಟುಬಿಡುತ್ತೇನೆ,” ಎಂದನು23ಆದರೂ ಅವರು ಅಧಿಕಾಧಿಕವಾಗಿ ಆರ್ಭಟಿಸುತ್ತಾ ಯೇಸುವನ್ನು ಶಿಲುಬೆಗೆ ಏರಿಸಲೇಬೇಕೆಂದು ಕೂಗಾಡಿದರು. ಕಟ್ಟಕಡೆಗೆ ಕೂಗಾಟಕ್ಕೇ ಗೆಲುವಾಯಿತು!

24 ಜನರ ಕೋರಿಕೆಯಂತೆಯೇ ಆಗಲೆಂದು ಪಿಲಾತನು ತೀರ್ಮಾನಿಸಿದನು25ಅವರು ಕೇಳಿಕೊಂಡ ಪ್ರಕಾರ ಕೊಲೆಕಲಹಗಳ ನಿಮಿತ್ತ ಸೆರೆಯಲ್ಲಿದ್ದ ಬರಬ್ಬನನ್ನು ಬಿಡುಗಡೆ ಮಾಡಿದನು. ಯೇಸುವನ್ನಾದರೋ ಅವರ ಇಚ್ಛಾನುಸಾರಕ್ಕೆ ಬಿಟ್ಟುಬಿಟ್ಟನು26ಸೈನಿಕರು ಯೇಸುಸ್ವಾಮಿಯನ್ನು ಕರೆದೊಯ್ಯುವಾಗ ಸಿರೇನ್ ಪಟ್ಟಣದ ಸಿಮೋನ ಎಂಬಾತ ಹಳ್ಳಿಯ ಕಡೆಯಿಂದ ಮಾರ್ಗವಾಗಿ ಬರುತ್ತಿದ್ದನು. ಅವನನ್ನು ಹಿಡಿದು ಶಿಲುಬೆಯನ್ನು ಹೊತ್ತು ಯೇಸುವಿನ ಹಿಂದೆ ಬರುವಂತೆ ಮಾಡಿದರು27ಜನರ ದೊಡ್ಡ ಗುಂಪು ಯೇಸುವಿನ ಹಿಂದೆ ಹೊರಟಿತು. ಕೆಲವು ಮಹಿಳೆಯರು ಯೇಸುವಿಗಾಗಿ ದುಃಖಪಟ್ಟು, ಎದೆಬಡಿದುಕೊಂಡು ಗೋಳಾಡುತ್ತಾ, ಹಿಂಬಾಲಿಸುತ್ತಿದ್ದರು28ಯೇಸು ಅವರಕಡೆ ತಿರುಗಿ, “ಜೆರುಸಲೇಮಿನ ಕುವರಿಯರೇ, ನನಗಾಗಿ ಅಳಬೇಡಿ; ನಿಮಗಾಗಿ, ನಿಮ್ಮ ಮಕ್ಕಳಿಗಾಗಿ ದುಃಖಿಸಿರಿ29ಕಾಲವೊಂದು ಬರುವುದು; ಆಗ ಜನರು, ‘ಬಂಜೆಯರೇ ಭಾಗ್ಯವಂತರು! ಹೆರದವಳೇ, ಹಾಲೂಡಿಸದವಳೇ ಧನ್ಯಳು!’ ಎನ್ನುವರು30ಅದೇ ಸಮಯದಲ್ಲಿಪರ್ವತಗಳೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ, ನಮ್ಮನ್ನು ನುಂಗಿಬಿಡಿ,’ ಎಂದು ಕೂಗಿಕೊಳ್ಳುವರು31ಹಸಿಮರಕ್ಕೇ ಇಷ್ಟೆಲ್ಲಾ ಮಾಡಿದರೆ ಒಣಮರಕ್ಕಾಗುವ ಗತಿಯಾದರೂ ಏನು!” ಎಂದರು

32ಯೇಸುವಿನ ಸಂಗಡ ಕೊಲ್ಲುವುದಕ್ಕಾಗಿ ಇಬ್ಬರು ಅಪರಾಧಿಗಳನ್ನೂ ಕೊಂಡೊಯ್ಯುತ್ತಿದ್ದರು. ‘ಕ್ಷಮಿಸಿವರನೆಲೆ ತಂದೆ !’ 33ಕಪಾಲ ಎಂಬ ಸ್ಥಳಕ್ಕೆ ಬಂದು ಸೇರಿದ ಮೇಲೆ ಯೇಸುಸ್ವಾಮಿಯನ್ನು ಶಿಲುಬೆಗೆ ಏರಿಸಿದರು. ಇಬ್ಬರು ಅಪರಾಧಿಗಳಲ್ಲಿ ಒಬ್ಬನನ್ನು ಅವರ ಬಲಗಡೆಯಲ್ಲೂ ಮತ್ತೊಬ್ಬನನ್ನು ಎಡಗಡೆಯಲ್ಲೂ ಶಿಲುಬೆಗೇರಿಸಿದರು34ಆಗ ಯೇಸು, “ಪಿತನೇ, ಇವರನ್ನು ಕ್ಷಮಿಸಿ; ತಾವೇನು ಮಾಡುತ್ತಿರುವರೆಂದು ಇವರು ಅರಿಯರು,” ಎಂದರು. ಸೈನಿಕರಾದರೋ ಯೇಸುವಿನ ಬಟ್ಟೆಗಳನ್ನು ಚೀಟುಹಾಕಿ ಹಂಚಿಕೊಂಡರು35ಜನರು ನೋಡುತ್ತಾ ನಿಂತಿದ್ದರು. ಅಲ್ಲಿದ್ದ ಮುಖಂಡರು ಯೇಸುವನ್ನು ಮೂದಲಿಸುತ್ತಾ, “ಇವನು ಇತರರನ್ನು ರಕ್ಷಿಸಿದ; ಇವನು ದೇವರಿಂದಲೇ ಅಭಿಷಿಕ್ತನಾದ ಲೋಕೋದ್ಧಾರಕನು ಮತ್ತು ಅವರಿಂದಲೇ ಆಯ್ಕೆಯಾದವನು ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ,” ಎಂದರು36ನಿಕರು ಮುಂದೆ ಬಂದು ಹುಳಿರಸವನ್ನು ಅವರತ್ತ ಒಡ್ಡಿ37ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನೇ ರಕ್ಷಿಸಿಕೊ,” ಎಂದು ಅಣಕಿಸುತ್ತಿದ್ದರು.

38ಯೇಸುವಿನ ಶಿಲುಬೆಯ ಮೇಲ್ಗಡೆ, “ಇವನು ಯೆಹೂದ್ಯರ ಅರಸ ಎಂಬ ಲಿಖಿತವಿತ್ತು39ತೂಗುಹಾಕಿದ್ದ ಅಪರಾಧಿಗಳಲ್ಲಿ ಒಬ್ಬನು, “ನೀನು ಕ್ರಿಸ್ತ, ಅಲ್ಲವೆ? ಹಾಗಾದರೆ ನಿನ್ನನ್ನು ನೀನೇ ರಕ್ಷಿಸಿಕೋ, ನಮ್ಮನ್ನೂ ರಕ್ಷಿಸು,” ಎಂದು ಹಂಗಿಸಿದನು40ಆದರೆ ಮತ್ತೊಬ್ಬ ಅಪರಾಧಿ ಅವನನ್ನು ಖಂಡಿಸುತ್ತಾ, “ನಿನಗೆ ದೇವರ ಭಯಬೇಡವೇ? ನೀನು ಸಹ ಇದೇ ಶಿಕ್ಷೆಗೆ ಗುರಿಯಾಗಿರುವೆ41ನಮಗೇನೋ ಶಿಕ್ಷೆ ನ್ಯಾಯವಾಗಿದೆ, ನಮ್ಮ ಕೃತ್ಯಕ್ಕೆ ತಕ್ಕ ಫಲ ಸಿಕ್ಕಿದೆ; ಇವರಾದರೋ, ನಿರಪರಾಧಿ!” ಎಂದನು42ಬಳಿಕ ಅವನು, “ಸ್ವಾಮಿ ಯೇಸುವೇ, ನೀವು ರಾಜ್ಯಾಧಿಕಾರದೊಡನೆ ಬರುವಾಗ ನನ್ನನ್ನು ಜ್ಞಾಪಿಸಿಕೊಳ್ಳಿ,” ಎಂದು ಬೇಡಿಕೊಂಡನು43ಅವನಿಗೆ ಯೇಸು, “ಇಂದೇ ನೀನು ನನ್ನೊಡನೆ ಪರಂಧಾಮದಲ್ಲಿರುವೆ ಎಂದು ನಿಶ್ಚಯವಾಗಿ ಹೇಳುತ್ತೇನೆ,” ಎಂದರು.

44ಆಗ ಸುಮಾರು ನಡುಮಧ್ಯಾಹ್ನ. ಆಗಿನಿಂದ ಮೂರು ಗಂಟೆಯವರೆಗೂ ಸೂರ್ಯನು ಕಾಂತಿಹೀನನಾದನು; ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು45ಮಹಾದೇವಾಲಯದ ತೆರೆಯು ಇಬ್ಭಾಗವಾಗಿ ಸೀಳಿಹೋಯಿತು46ಯೇಸುಸ್ವಾಮಿ, “ಪಿತನೇ, ನನ್ನಾತ್ಮವನ್ನು ನಿಮ್ಮ ಕೈಗೊಪ್ಪಿಸುತ್ತೇನೆ,” ಎಂದು ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು47ನಡೆದುದನ್ನು ಕಂಡ ಶತಾಧಿಪತಿ ದೇವರನ್ನು ಹೊಗಳುತ್ತಾ, “ ಮನುಷ್ಯ ಖಂಡಿತವಾಗಿ ಸತ್ಪುರುಷನೇ ಸರಿ,” ಎಂದನು48 ದೃಶ್ಯವನ್ನು ನೋಡಲು ಕೂಡಿದ್ದ ಜನರೆಲ್ಲರು ಅಲ್ಲಿ ನಡೆದುದನ್ನು ನೋಡಿ ದುಃಖದಿಂದ ಎದೆಬಡಿದುಕೊಳ್ಳುತ್ತಾ ಹಿಂದಿರುಗಿದರು49ಯೇಸುವಿನ ಪರಿಚಿತರೆಲ್ಲರು ಹಾಗೂ ಗಲಿಲೇಯದಿಂದ ಹಿಂಬಾಲಿಸಿ ಬಂದಿದ್ದ ಮಹಿಳೆಯರು ದೂರದಲ್ಲಿ ನಿಂತುಕೊಂಡು ಇದೆಲ್ಲವನ್ನು ನೋಡುತ್ತಿದ್ದರು.   

ಚಿಂತನೆ
ಪ್ರಭುವಿನ ಯಾತನೆಯ ಭಾನುವಾರ (ಗರಿಗಳ ಭಾನುವಾರ)
ಯೇಸುವಿನ ಜೀವನ ಒಂದು ಪ್ರಯಾಣ. ಶುಭಸಂದೇಶಗಳನ್ನು ಓದುವಾಗ ಯೇಸು ಗಲಿಲೇಯದಿಂದ ಜೆರುಸಲೇಮಿನ ಕಡೆಗೆ ಪ್ರಯಾಣಿಸುತ್ತಿದ್ದಾರೆ ಎಂಬುದು ಗೋಚರವಾಗುತ್ತದೆ. ಇದೊಂದು ಮಹಾ ಯಾತ್ರೆ. ತಾವು ಸ್ವರ್ಗಾರೋಹಣವಾಗುವ ದಿನಗಳು ಸಮೀಪಿಸಲು ಯೇಸುಸ್ವಾಮಿ ಜೆರುಸಲೇಮಿಗೆ ಅಭಿಮುಖರಾಗಿ ಹೊರಟರು (ಲೂಕ 9:51) ಯೇಸು ಹನ್ನೆರಡು ಮಂದಿ ಶಿಷ್ಯರನ್ನು ತಮ್ಮ ಬಳಿಗೆ ಕರೆದು, ನೋಡಿ ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ, ಅಲ್ಲಿ ನರಪುತ್ರನನ್ನು ಮುಖ್ಯ ಯಾಜಕರ ಮತ್ತು ಧರ್ಮಶಾಸ್ತ್ರಿಗಳ ವಶಕ್ಕೆ ಒಪ್ಪಿಸುವರು. ಆತನು ಮರಣ ದಂಡನೆಗೆ ಅರ್ಹನೆಂದು ಅವರು ತೀರ್ಮಾನಿಸಿ ಪರಕೀಯರ ಕೈಗೊಪ್ಪಿಸುವರು. ಇವರು ಆತನನ್ನು ಪರಿಹಾಸ್ಯ ಮಾಡುವರು, ಆತನ ಮೇಲೆ ಉಗುಳುವರು, ಕೊರಡೆಯಿಂದ ಹೊಡೆಯುವರು, ಅನಂತರ ಕೊಂದುಹಾಕುವರು. ಆತನಾದರೋ ಮೂರು ದಿನದ ಮೇಲೆ ಪುನರುತ್ಥಾನ ಹೊಂದುವನು (ಮಾರ್ಕ 10:33-34) ಈ ವಾಕ್ಯಗಳನ್ನು ಓದುವಾಗ ಜೆರುಸಲೇಮಿನ ಪ್ರವೇಶವೆಂದರೆ ಯೇಸುವಿನ ಪಾಲಿಗೆ ಮರಣದ ಮನೆಯ ಪ್ರವೇಶದಂತೆ, ಬಲಿಯರ್ಪಣೆಯ ಕುರಿಮರಿ ಕಟುಕನ ಮನೆ ಪ್ರವೇಶಿಸಿದಂತೆ (ಯೆಶಾ 53:7) ಈ ಮಹಾಯಾತ್ರೆಯ ಅಂತಿಮ ಹಂತವನ್ನು ಯೇಸು ಮುಟ್ಟಿದ್ದಾರೆ, ಜೆರುಸಲೇಮ್ ಮಹಾನಗರದ ದ್ವಾರದಲ್ಲಿ ನಿಂತಿದ್ದಾರೆ. ಅಲ್ಲಿ ನೆರೆದಿದ್ದ ಜನಜಂಗುಳಿ ’ತಮ್ಮ ನಾಯಕ ಬಂದನೋ’ ಎಂಬ ಭಾವನೆಯಿಂದ ಸಂಭ್ರವನ್ನಾಚರಿಸಲು ಸಿದ್ಧರಿದ್ದಾರೆ. ತಮ್ಮ ನಾಯಕನನ್ನು ಹೇಸರಗತ್ತೆಯ ಮೇಲೆ ಕುಳ್ಳಿರಿಸಿ, ಹೋಸಾನ್ನ ಜೈಕಾರಗಳೊಂದಿಗೆ ಜೆರುಸಲೇಮ್ ನಗರದೊಳಕ್ಕೆ ಮೆರವಣಿಗೆಯಲ್ಲಿ ಕರೆದೊಯ್ಯುತ್ತಾರೆ, ಎಲ್ಲವೂ ರೋಮಾಂಚಕ. ಆದರೆ ಈ ಸಂಭ್ರಮ ಸಡಗರಗಳೆಲ್ಲ ಕೆಲಕ್ಷಣಗಳಲ್ಲೇ ಬದಲಾಗಿ ಹೋಗಲಿದೆ. 

ಹೋಸಾನ್ನ ಜೈಕಾರಗಳು ಕ್ಷೀಣಿಸಿ, ಕೊಲ್ಲಿರಿ! ಶಿಲುಬೆಗೇರಿಸಿ! ಎಂಬ ಘೋಷಣೆಗಳು ಗಟ್ಟಿಯಾಗಲಿವೆ. ಯೇಸು ತಮ್ಮ ಜೀವನದ ಪರಮೋಚ್ಚ ಗುರಿಯಾದ ಕಲ್ವಾರಿ ಗಿರಿಯನ್ನು ತಲುಪಲು ಇನ್ನು ಕೆಲವೇ ಹೆಜ್ಜೆಗಳು ಬಾಕಿಯಿವೆ. ಅವರು ಜನರ ಜೈಕಾರಗಳಿಗೆ ಹಿಗ್ಗಿಹೋಗದೆ, ಧಿಕ್ಕಾರಗಳಿಂದ ಕುಗ್ಗಿಹೋಗದೆ ಸಂಯಮದಿಂದ, ಸಮಚಿತ್ತತೆಯಿಂದ ತಮ್ಮ ಕಾರ್ಯವನ್ನು ನೆರವೇರಿಸಲು ಅಣಿಯಾದರು. ಇನ್ನು ಕೆಲದಿನಗಳಲ್ಲಿಯೇ ಜೆರುಸಲೇಮ್ ಎಂಬ ಮರಣದ ಮನೆ, ಮಹಿಮೆಯ ಮನೆಯಾಗಲಿದೆ.
- ಫಾದರ್ ಪೀಟರ್ ಚಿನ್ನಪ್ಪ

No comments:

Post a Comment