ಸಾರ್ವಜನಿಕ ಉದ್ದೇಶ: ಮಾನವ ಸಾಗಾಣಿಕೆ, ವೇಶ್ಯಾವಾಟಿಕೆ ಹಾಗೂ ಹಿಂಸಾತ್ಮಕ ಕ್ರಿಯೆಗಳಿಂದಾಗಿ ನಿರಾಶ್ರಿತರಾದವರಿಗೆ ಆಶ್ರಯವನ್ನು ನೀಡಲು ಸರ್ವರೂ ಉದಾರತೆಯಿಂದ ಮುಂದೆ ಬರುವಂತೆ.
10 ಫೆಬ್ರವರಿ 2೦19
ಭಾನುವಾರ / ಹಸಿರು / ಸಾಧಾರಣ ಕಾಲದ ಐದನೇ ಭಾನುವಾರ
1ನೇ ವಾಚನ - ಯೆಶಾಯ 6: 1-8
ಕೀರ್ತನೆ - 138: 1-3, 4-5, 7-8
2ನೇ ವಾಚನ - 1ಕೊರಿಂಥ 15: 1-11 ಅಥವಾ 15: 3-8, 11
ಶುಭಸಂದೇಶ - ಲೂಕ 5: 1-11
ಸಂತ ಸ್ಕೊಲಾಸ್ತಿಕ ಸ್ಮರಣೆ ಇರುವುದಿಲ್ಲ1ನೇ ವಾಚನ - ಯೆಶಾಯ 6: 1-8
ಕೀರ್ತನೆ - 138: 1-3, 4-5, 7-8
2ನೇ ವಾಚನ - 1ಕೊರಿಂಥ 15: 1-11 ಅಥವಾ 15: 3-8, 11
ಶುಭಸಂದೇಶ - ಲೂಕ 5: 1-11
ವಾಚನಗಳು
ಮೊದಲನೇ ವಾಚನ
ಯೆಶಾಯ ಪ್ರವಾದಿಯ ಗ್ರಂಥದಿಂದ ವಾಚನ
ಯೆಶಾಯ 6: 1-8
1ಅರಸ ಉಜ್ಜೀಯನು ಕಾಲವಾದ ವರ್ಷದಲ್ಲಿ ನನಗೆ ಸರ್ವೇಶ್ವರಸ್ವಾಮಿಯಿಂದ ದರ್ಶನವಾಯಿತು: ಉನ್ನತೋನ್ನತ ಸಿಂಹಾಸನದಲ್ಲಿ ಅವರು ಆಸೀನರಾಗಿದ್ದರು. ಅವರ ಮೇಲು ವಸ್ತ್ರ ನೆರಿಗೆ ನೆರಿಗೆಯಾಗಿ ದೇವಾಲಯವನ್ನೆಲ್ಲ ಆವರಿಸಿತ್ತು. 2ಅವರ ಸುತ್ತಲು ಸೆರಾಫಿಯರೆಂಬ ತೇಜಸ್ವಿಗಳು ಇದ್ದರು. ಪ್ರತಿಯೊಬ್ಬರಿಗೂ ಆರಾರು ರೆಕ್ಕೆಗಳಿದ್ದವು. ಎರಡು ರೆಕ್ಕೆಗಳಿಂದ ಅವರ ಮುಖ ಮುಚ್ಚಿತ್ತು. ಇನ್ನೆರಡು ರೆಕ್ಕೆಗಳಿಂದ ಅವರ ಪಾದಗಳು ಮುಚ್ಚಿದ್ದವು. ಮತ್ತೆರಡು ರೆಕ್ಕೆಗಳನ್ನು ಬಡಿಯುತ್ತಾ ನೆಲಸೋಕದೆ ನಿಂತಿದ್ದರು. 3ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ: “ಪವಿತ್ರ, ಪವಿತ್ರ, ಪವಿತ್ರ ಸೇನಾಧೀಶ್ವರ ಸರ್ವೇಶ್ವರ ಜಗವೆಲ್ಲ ಆತನ ಪ್ರಭಾವಭರಿತ” ಎಂದು ಕೂಗಿ ಹೇಳಿದನು. 4ಆ ಶಬ್ದಕ್ಕೆ ದೇವಾಲಯದ ಅಸ್ತಿವಾರವೇ ಕಂಪಿಸಿತು. ಧೂಮವು ಆಲಯವನ್ನೆಲ್ಲ ತುಂಬಿತು.
5ಆಗ ನಾನು “ಅಯ್ಯೋ, ನನ್ನ ಗತಿಯೇನು? ನನ್ನ ಕಥೆ ಮುಗಿಯಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ!” ಎಂದು ಕೂಗಿ ಕೊಂಡೆನು. 6ಆಗ ಸೆರಾಫಿಯರಲ್ಲಿ - ತೇಜಸ್ವಿಯೊಬ್ಬನು ಬಲಿಪೀಠದಿಂದ, ಉರಿಯುವ ಕೆಂಡವೊಂದನ್ನು ಇಕ್ಕಳದಿಂದ ಹಿಡಿದುಕೊಂಡು ನನ್ನತ್ತ ಹಾರಿ ಬಂದನು. 7ಆ ಉರಿಕೆಂಡವನ್ನು ನನ್ನ ಬಾಯಿಗೆ ಮುಟ್ಟಿಸಿ: “ಇದು ನಿನ್ನ ತುಟಿಗಳನ್ನು ತಾಕಿದೆ. ಈಗ ದೋಷ ನೀಗಿತು. ನಿನ್ನ ಪಾಪ ಪರಿಹಾರ ಆಯಿತು”, ಎಂದನು. 8ಆಗ, “ಯಾರನ್ನು ಕಳುಹಿಸಲಿ? ನಮ್ಮ ಪರವಾಗಿ ಹೋಗುವವನು ಯಾರು?” ಎಂಬ ನುಡಿ ಕೇಳಿಸಿತು. ಅದಕ್ಕೆ ನಾನು, “ಇಗೋ, ನಾನು ಸಿದ್ಧ, ನನ್ನನ್ನು ಕಳುಹಿಸಿ” ಎಂದೆನು.
ಕೊರಿಂಥದವರಿಗೆ ಬರೆದ ಮೊದಲ ಪತ್ರದಿಂದ ವಾಚನ
1ಕೊರಿಂಥ 15: 1-11 ಅಥವಾ 15: 3-8, 11
1ಪ್ರಿಯ ಸಹೋದರರೇ, ನಾನು ನಿಮಗೆ ಬೋಧಿಸಿದ ಶುಭಸಂದೇಶವನ್ನು ನೆನಪಿಗೆ ತಂದುಕೊಳ್ಳಿರಿ. ನೀವು ಅದನ್ನು ಸ್ವೀಕರಿಸಿದ್ದೀರಿ. ಅದರಲ್ಲಿ ನೆಲೆಯಾಗಿ ನಿಂತಿದ್ದೀರಿ. 2ನಾನು ನಿಮಗೆ ಶುಭಸಂದೇಶವೆಂದು ತಿಳಿಸಿದ ಸಂಗತಿಯನ್ನು ದೃಢವಾಗಿ ವಿಶ್ವಾಸಿಸಿದರೆ ನೀವು ಜೀವೋದ್ಧಾರವನ್ನು ಪಡೆಯುವಿರಿ. ಇಲ್ಲವಾದರೆ ನಿಮ್ಮ ವಿಶ್ವಾಸ ನಿರರ್ಥಕವಾದೀತು. 3ನಾನು ಪಡೆದುಕೊಂಡದ್ದನ್ನು ಮುಖ್ಯವಾದುದು ಎಂದೆಣಿಸಿ ನಿಮಗೆ ಒಪ್ಪಿಸಿದ್ದೇನೆ. ಅದು ಯಾವುದೆಂದರೆ, ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ ಕ್ರಿಸ್ತಯೇಸು ನಮ್ಮ ಪಾಪಗಳ ಪರಿಹಾರಕ್ಕಾಗಿ ಪ್ರಾಣತ್ಯಾಗ ಮಾಡಿದರು. 4ಅವರನ್ನು ಭೂಸ್ಥಾಪನೆ ಮಾಡಲಾಯಿತು. ಅದೇ ಗ್ರಂಥದ ಪ್ರಕಾರ ಮೂರನೆಯ ದಿನ ಅವರು ಪುನರುತ್ಥಾನ ಹೊಂದಿದರು. 5ಅನಂತರ ಕೇಫನಿಗೂ ಹನ್ನೆರಡು ಮಂದಿಗೂ ಕಾಣಿಸಿಕೊಂಡರು.
6ತರುವಾಯ ಒಂದೇ ಸಮಯದಲ್ಲಿ ಐನೂರಕ್ಕೂ ಹೆಚ್ಚಿನ ಮಂದಿ ಸಹೋದರರಿಗೆ ಪ್ರತ್ಯಕ್ಷರಾದರು. ಅವರಲ್ಲಿ ಕೆಲವರು ಸತ್ತುಹೋಗಿದ್ದರೂ ಬಹು ಮಂದಿ ಇಂದಿಗೂ ಬದುಕಿದ್ದಾರೆ. 7ಅದಾದ ಮೇಲೆ ಯಕೋಬನಿಗೂ ಅನಂತರ ಪ್ರೇಷಿತರೆಲ್ಲರಿಗೂ ಕಾಣಿಸಿಕೊಂಡರು. 8ಕಟ್ಟಕಡೆಗೆ ದಿನ ತುಂಬುವ ಮೊದಲೇ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡರು. 9ನಾನಾದರೋ ಪ್ರೇಷಿತರಲ್ಲಿ ಕನಿಷ್ಠನು, ಪ್ರೇಷಿತನೆಂಬ ಹೆಸರಿಗೂ ಅಪಾತ್ರನು. ಏಕೆಂದರೆ, ನಾನು ದೇವರ ಸಭೆಯನ್ನು ಹಿಂಸಿಸಿದೆನು. 10ನಾನು ಈಗ ಈ ಸ್ಥಿತಿಯಲ್ಲಿ ಇರುವುದು ದೇವರ ಅನುಗ್ರಹದಿಂದಲೇ. ಅವರ ಅನುಗ್ರಹ ನನ್ನಲ್ಲಿ ವ್ಯರ್ಥವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚು ಶ್ರಮಪಟ್ಟು ಸೇವೆಮಾಡಿದ್ದೇನೆ. ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿರುವ ದೇವರ ಅನುಗ್ರಹವೇ. 11ನಾನಾದರೇನು, ಅವರಾದರೇನು? ನಾವು ಸಾರುವ ಸಂದೇಶ ಒಂದೇ. ಅದನ್ನು ನೀವು ನಂಬಿದ್ದೀರಿ.

ಕೀರ್ತನೆ
ಕೀರ್ತನೆ 138: 1-2, 2-3, 4-5, 7-8
ದೇವರುಗಳೆದುರಿಗೆ ನನ್ನ ಕೀರ್ತನೆ ನಿನಗೆ ಪೊಗಳುವೆ ನಿನ್ನ ನಾಮವನು
ಹೃದಯಪೂರ್ವಕ ವಂದನೆ ಪ್ರಭು ನಿನಗೆ
ದೇವರುಗಳೆದುರಿಗೆ ನನ್ನ ಕೀರ್ತನೆ ನಿನಗೆ
ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ.
ನಿನ್ನ ಪ್ರೀತಿಸತ್ಯತೆಗಳ, ನಾಮ ನುಡಿಗಳ ಮಹತ್ವದ ಪ್ರಯುಕ್ತ
ಮೊರೆಯಿಟ್ಟಾಗ ದಯಪಾಲಿಸಿದೆ ಸದುತ್ತರವನು
ಅಧಿಕಮಾಡಿದೆ ನೀನು ನನ್ನಾತ್ಮ ಶಕ್ತಿಯನು.
ನಿನ್ನ ಗುಣಗಾನ ಮಾಳ್ಪರು ಪ್ರಭು, ಭೂರಾಜರೆಲ್ಲರು
ಏಕೆನೆ, ನೀ ಉಸುರಿದ ನುಡಿಗಳನು ಕೇಳ್ವರವರೆಲ್ಲರು
ಪ್ರಭುವಿನ ಮಹಿಮೆಯು ಮಹೋನ್ನತ ಎನ್ನುವರು
ಆತನ ಮಾರ್ಗಗಳನು ಹಾಡಿ ಹರಸುವರು.
ಇಕ್ಕಟ್ಟಿನಲಿ ನಡೆವಾಗಲೂ ನೀ ರಕ್ಷಿಸುವೆ ಪ್ರಭು,
ಪ್ರಾಣವನು ಶತ್ರುಕೋಪಕೆ ವಿರುದ್ಧವಾಗಿ ತೋರುವೆ ನೀ ಮುಷ್ಟಿಯನು
ಸಿದ್ಧಿಗೆ ತರುವೆ ನೀ ಪ್ರಭು, ನನ್ನ ಕಾರ್ಯವನು
ಶಾಶ್ವತವಾಗಿಸು ನಿನ್ನ ಅಚಲ ಪ್ರೀತಿಯನು
ಮರೆತುಬಿಡಬೇಡ ನಿನ್ನಯ ಕೈ ಕೃತಿಯನು.
ಎರಡನೇ ವಾಚನ
1ಕೊರಿಂಥ 15: 1-11 ಅಥವಾ 15: 3-8, 11
1ಪ್ರಿಯ ಸಹೋದರರೇ, ನಾನು ನಿಮಗೆ ಬೋಧಿಸಿದ ಶುಭಸಂದೇಶವನ್ನು ನೆನಪಿಗೆ ತಂದುಕೊಳ್ಳಿರಿ. ನೀವು ಅದನ್ನು ಸ್ವೀಕರಿಸಿದ್ದೀರಿ. ಅದರಲ್ಲಿ ನೆಲೆಯಾಗಿ ನಿಂತಿದ್ದೀರಿ. 2ನಾನು ನಿಮಗೆ ಶುಭಸಂದೇಶವೆಂದು ತಿಳಿಸಿದ ಸಂಗತಿಯನ್ನು ದೃಢವಾಗಿ ವಿಶ್ವಾಸಿಸಿದರೆ ನೀವು ಜೀವೋದ್ಧಾರವನ್ನು ಪಡೆಯುವಿರಿ. ಇಲ್ಲವಾದರೆ ನಿಮ್ಮ ವಿಶ್ವಾಸ ನಿರರ್ಥಕವಾದೀತು. 3ನಾನು ಪಡೆದುಕೊಂಡದ್ದನ್ನು ಮುಖ್ಯವಾದುದು ಎಂದೆಣಿಸಿ ನಿಮಗೆ ಒಪ್ಪಿಸಿದ್ದೇನೆ. ಅದು ಯಾವುದೆಂದರೆ, ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ ಕ್ರಿಸ್ತಯೇಸು ನಮ್ಮ ಪಾಪಗಳ ಪರಿಹಾರಕ್ಕಾಗಿ ಪ್ರಾಣತ್ಯಾಗ ಮಾಡಿದರು. 4ಅವರನ್ನು ಭೂಸ್ಥಾಪನೆ ಮಾಡಲಾಯಿತು. ಅದೇ ಗ್ರಂಥದ ಪ್ರಕಾರ ಮೂರನೆಯ ದಿನ ಅವರು ಪುನರುತ್ಥಾನ ಹೊಂದಿದರು. 5ಅನಂತರ ಕೇಫನಿಗೂ ಹನ್ನೆರಡು ಮಂದಿಗೂ ಕಾಣಿಸಿಕೊಂಡರು.
6ತರುವಾಯ ಒಂದೇ ಸಮಯದಲ್ಲಿ ಐನೂರಕ್ಕೂ ಹೆಚ್ಚಿನ ಮಂದಿ ಸಹೋದರರಿಗೆ ಪ್ರತ್ಯಕ್ಷರಾದರು. ಅವರಲ್ಲಿ ಕೆಲವರು ಸತ್ತುಹೋಗಿದ್ದರೂ ಬಹು ಮಂದಿ ಇಂದಿಗೂ ಬದುಕಿದ್ದಾರೆ. 7ಅದಾದ ಮೇಲೆ ಯಕೋಬನಿಗೂ ಅನಂತರ ಪ್ರೇಷಿತರೆಲ್ಲರಿಗೂ ಕಾಣಿಸಿಕೊಂಡರು. 8ಕಟ್ಟಕಡೆಗೆ ದಿನ ತುಂಬುವ ಮೊದಲೇ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡರು. 9ನಾನಾದರೋ ಪ್ರೇಷಿತರಲ್ಲಿ ಕನಿಷ್ಠನು, ಪ್ರೇಷಿತನೆಂಬ ಹೆಸರಿಗೂ ಅಪಾತ್ರನು. ಏಕೆಂದರೆ, ನಾನು ದೇವರ ಸಭೆಯನ್ನು ಹಿಂಸಿಸಿದೆನು. 10ನಾನು ಈಗ ಈ ಸ್ಥಿತಿಯಲ್ಲಿ ಇರುವುದು ದೇವರ ಅನುಗ್ರಹದಿಂದಲೇ. ಅವರ ಅನುಗ್ರಹ ನನ್ನಲ್ಲಿ ವ್ಯರ್ಥವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚು ಶ್ರಮಪಟ್ಟು ಸೇವೆಮಾಡಿದ್ದೇನೆ. ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿರುವ ದೇವರ ಅನುಗ್ರಹವೇ. 11ನಾನಾದರೇನು, ಅವರಾದರೇನು? ನಾವು ಸಾರುವ ಸಂದೇಶ ಒಂದೇ. ಅದನ್ನು ನೀವು ನಂಬಿದ್ದೀರಿ.
ಶುಭಸಂದೇಶ
ಸಂತ ಲೂಕನು ಬರೆದ ಶುಭಸಂದೇಶದಿಂದ ವಾಚನ
ಲೂಕ 5: 1-11
1ಒಮ್ಮೆ ಯೇಸುಸ್ವಾಮಿ ಗೆನೆಸರೇತ್ ಎಂಬ ಸರೋವರದ ತೀರದಲ್ಲಿ ನಿಂತಿದ್ದಾಗ, ಜನಸಮೂಹವು ದೇವರ ವಾಕ್ಯವನ್ನು ಕೇಳಲು ನೂಕುನುಗ್ಗಲಾಗಿ ಬಂದು ಅವರನ್ನು ಒತ್ತರಿಸುತ್ತಿತ್ತು. 2ಆಗ ದಡದ ಮೇಲಿದ್ದ ಎರಡು ದೋಣಿಗಳು ಯೇಸುವಿನ ಕಣ್ಣಿಗೆ ಬಿದ್ದವು. ಬೆಸ್ತರು ದೋಣಿಗಳನ್ನು ಅಲ್ಲಿಯೇ ಬಿಟ್ಟು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು. 3ಆ ದೋಣಿಗಳಲ್ಲಿ ಒಂದು ಸಿಮೋನನದು. ಯೇಸು ಅದನ್ನು ಹತ್ತಿ, ದಡದಿಂದ ಸ್ವಲ್ಪ ದೂರ ತಳ್ಳಲು ಹೇಳಿ, ಅದರಲ್ಲೇ ಕುಳಿತುಕೊಂಡು ತಮ್ಮ ಬೋಧನೆಯನ್ನು ಮುಂದುವರಿಸಿದರು. 4ಬೋಧನೆ ಮುಗಿದದ್ದೇ ಸಿಮೋನನಿಗೆ, ನೀರು ಆಳವಾಗಿರುವ ಸ್ಥಳಕ್ಕೆ ದೋಣಿಯನ್ನು ಹಾಯಿಸಿ, ಮೀನುಬೇಟೆಗೆ ನಿಮ್ಮ ಬಲೆಗಳನ್ನು ಹಾಕಿರಿ, ಎಂದರು, 5ಅದಕ್ಕೆ ಸಿಮೋನನು ಗುರುವೇ, ನಾವು ರಾತ್ರಿಯೆಲ್ಲಾ ದುಡಿದಿದ್ದೇವೆ; ಏನೂ ಸಿಗಲಿಲ್ಲ. ಆದರೂ ನಿಮ್ಮ ಮಾತಿಗೆ ಬೆಲೆ ಕೊಟ್ಟು ಬಲೆಗಳನ್ನು ಹಾಕುತ್ತೇವೆ, ಎಂದನು. 6ಬಲೆಗಳನ್ನು ಹಾಕಿದ್ದೇ ಮೀನುಗಳು ರಾಶಿ ರಾಶಿಯಾಗಿ ಸಿಕ್ಕಿಕೊಂಡವು; ಬಲೆಗಳು ಹರಿದುಹೋಗುವುದರಲ್ಲಿದ್ದವು. 7ಆದುದರಿಂದ ಬೇರೆ ದೋಣಿಯಲ್ಲಿದ್ದ ತಮ್ಮ ಸಂಗಡಿಗರಿಗೆ ಸನ್ನೆ ಮಾಡಿ ಸಹಾಯಕ್ಕಾಗಿ ಕರೆದುಕೊಂಡರು. ಅವರೆಲ್ಲರೂ ಸೇರಿ ಮೀನುಗಳನ್ನು ತುಂಬಿಕೊಳ್ಳಲು, ದೋಣಿಗಳೆರಡೂ ಮುಳುಗಲು ಆರಂಭಿಸಿದವು. 8ಇದನ್ನು ಕಂಡ ಸಿಮೋನ್ ಪೇತ್ರನು ಯೇಸುವಿನ ಕಾಲಿಗೆ ಬಿದ್ದು, ಸ್ವಾಮಿ, ನಾನು ಪಾಪಾತ್ಮ; ನನ್ನಿಂದ ದೂರವಿರಿ! ಎಂದನು. 9ಹಿಡಿದ ಮೀನಿನ ರಾಶಿಯನ್ನು ಕಂಡು ಅವನ ಸಂಗಡಿಗರೆಲ್ಲರೂ ನಿಬ್ಬೆರಗಾಗಿ ಹೋಗಿದ್ದರು. 10ಸಿಮೋನನ ಪಾಲುಗಾರರಾದ ಜೆಬೆದಾಯನ ಮಕ್ಕಳು - ಯಕೋಬ ಮತ್ತು ಯೊವಾನ್ನರು - ಹಾಗೆಯೇ ಬೆರಗಾಗಿದ್ದರು. ಆಗ ಯೇಸು ಸಿಮೋನನಿಗೆ, ಹೆದರಬೇಡ, ಇಂದಿನಿಂದ ನೀನು ಮೀನು ಹಿಡಿಯುವ ಬದಲು ಮನುಷ್ಯರನ್ನೇ ಹಿಡಿಯುವವನು ಆಗುವೆ, ಎಂದರು. 11ಆ ಬೆಸ್ತರು ದೋಣಿಗಳನ್ನು ದಡಕ್ಕೆ ಸಾಗಿಸಿದ್ದೇ ಎಲ್ಲವನ್ನೂ ತ್ಯಜಿಸಿಬಿಟ್ಟು ಯೇಸುವನ್ನು ಹಿಂಬಾಲಿಸಿದರು.
ಚಿಂತನೆ
ಉನ್ನತ ಉದ್ದೇಶ
ಇಂದಿನ
ವಾಚನಗಳು ದೇವರ ಕರೆಯ ಬಗ್ಗೆ ತಿಳಿಸುತ್ತವೆ. ದೇವರ ಕರೆ ಸಕ್ರಿಯವಾಗಿ ಉತ್ತರಿಸಿದಾಗ ಮಾತ್ರ ನಾವು
ಆತನ ಶಿಷ್ಯರಾಗಲು ಸಾಧ್ಯ. ಮೊದಲನೆಯ ವಾಚನದಲ್ಲಿ ದೇವರು ಯೆಶಾಯ ಪ್ರವಾದಿಯನ್ನು ಹಾಗೂ ಶುಭಸಂದೇಶದಲ್ಲಿ ಯೇಸು ಪೇತ್ರನನ್ನು ಕರೆಯುತ್ತಾರೆ.
ಯೆಶಾಯ ಮತ್ತು ಪೇತ್ರನಲ್ಲಿ ಕಂಡು ಬರುವ ಸಮಾನ ಅಂಶಗಳು ಹೀಗಿವೆ. ದೇವರು ಒಂದು ಉನ್ನತ ಉದ್ದೇಶಕ್ಕಾಗಿ
ಅವರನ್ನು ಕರೆಯುತ್ತಾರೆ. ದೇವರ ಕರೆ ಆಲಿಸಿದ ಇಬ್ಬರಲ್ಲೂ ಅಧೈರ್ಯ ಮತ್ತು ಪಾಪಪ್ರಜ್ಞೆ
ಕಾಡುತ್ತದೆ. ಹಾಗಾಗಿ ದೇವರು ಅವರಿಬ್ಬರಿಗೂ ಭರವಸೆಯನ್ನು ನೀಡಿದ ನಂತರವೇ ಅವರು ದೇವರ ಕರೆಯನ್ನು ಸ್ವೀಕರಿಸುತ್ತಾರೆ.
ದೇವರ ಕರೆಯನ್ನು ಸ್ವೀಕರಿಸಿದ ನಂತರ ಇವರಿಬ್ಬರ ಬದುಕಿನ ದಿಕ್ಕು ಸಂಪೂರ್ಣ ಬದಲಾಗುತ್ತದೆ. ತಮ್ಮ ಬದುಕಿನ
ಸ್ಪಷ್ಟ ಉದ್ದೇಶವೇನೆಂದು ತಿಳಿದುಕೊಳ್ಳುತ್ತಾರೆ. ಸಾಮಾನ್ಯ ಬೆಸ್ತನಾಗಿದ್ದ ಪೇತ್ರ ಮನುಷ್ಯರನ್ನು
ಹಿಡಿಯುವ ಪ್ರೇಷಿತನಾಗುತ್ತಾನೆ.
ದೇವರು
ಒಬ್ಬ ವ್ಯಕ್ತಿಯನ್ನು ಸ್ಪರ್ಶಿಸಿದಾಗ ಯಾವುದೋ ಒಂದು ಉದ್ದೇಶಕ್ಕಾಗಿ ಅವನನ್ನು ಸ್ಪರ್ಶಿಸುತ್ತಾರೆ.
ದೇವರ ಸ್ಪರ್ಶದ ನಂತರ ಆ ವ್ಯಕ್ತಿ ಏನಾಗುತ್ತಾನೆಂಬುದು ಬಹಳ ಮುಖ್ಯ. ತಾನು ಅಶುದ್ಧ ಎಂದ ಯೆಶಾಯ ದೇವರ
ಸಂದೇಶ ಸಾರುವ ಪ್ರವಾದಿಯಾದ. ಕುರುಬನಾಗಿದ್ದ ದಾವೀದ ಇಸ್ರಯೇಲರ ಅರಸನಾದ, ಕ್ರೈಸ್ತರನ್ನು ಹಿಂಸಿಸುತ್ತಿದ್ದ
ಪೌಲ ಕ್ರಿಸ್ತನ ಪ್ರೇಷಿತನಾದ. ಸಾಮಾನ್ಯ ಬೆಸ್ತರು ಧರ್ಮಸಭೆಯ ಆಧಾರಸ್ತಂಭಗಳಾದರು. ಬಲಿಪೂಜೆಯಲ್ಲಿ
ಕ್ರಿಸ್ತರ ಪೂಜ್ಯ ಶರೀರವನ್ನು ಭುಜಿಸುವ ನಾವು ಹೊಸ ಮನುಷ್ಯರಾಗಿ ಮಾರ್ಪಾಡಾಗಬೇಕಿದೆ.
ಸಂತ ಸ್ಕೊಲಾಸ್ಟಿಕ
ಇಟಲಿಯಲ್ಲಿ ಶ್ರೀಮಂತ ತಂದೆ ತಾಯಿಗಳ ಮಗಳಾಗಿ ಜನಿಸಿದ ಈ ಸಂತರು ’ತಮ್ಮ ಚಿಕ್ಕ ವಯಸ್ಸಿನಲ್ಲೇ ತಮ್ಮನ್ನು ದೇವರಿಗೆ ಸಮರ್ಪಿಸಿಕೊಂಡರು’ ಎಂದು ಸಂತ ಗ್ರೆಗೋರಿ ದ ಗ್ರೇಟ್ ನುಡಿಯುತ್ತಾರೆ. ಮೌಂಟ್ ಕಸಿನೋ ಎಂಬ ಸ್ಥಳದಲ್ಲಿ ಇನ್ನೂ ಕೆಲವು ದೈವಕರೆ ಪಡೆದ ಮಹಿಳೆಯರೊಂದಿಗೆ ತಮ್ಮ ಸನ್ಯಾಸಿ ಜೀವನವನ್ನು ಆರಂಭಿಸುತ್ತಾರೆ. ನಾಲ್ಕು ಗೋಡೆಗಳ ಮಧ್ಯೆ ಬದುಕುತ್ತಾ, ಪ್ರಾರ್ಥನೆಯಲ್ಲಿ ನಿರತರಾಗುತ್ತಾ, ದೈವವಾಕ್ಯವನ್ನು ಧ್ಯಾನಿಸುತ್ತ, ಪ್ರಭುಯೇಸುವನ್ನು ಹೆಚ್ಚೆಚ್ಚು ಪ್ರೀತಿಸಲು ಪ್ರಯತ್ನಿಸುತ್ತಾರೆ. ನಿಸ್ವಾರ್ಥ ಬದುಕಿನ ಮೂಲಕ ಪ್ರಭುಯೇಸುವಿನ ತ್ಯಾಗವನ್ನು ಅನುಕರಿಸುವುದರಲ್ಲಿ ನಿರತರಾಗುತ್ತಾರೆ. ದೈವಾನುಗ್ರಹಭರಿತರಾದ ಅವರ ಪ್ರಾರ್ಥನೆಗಳ ಮುಖಾಂತರ ಹಲವು ವ್ಯಕ್ತಿಗಳು ತಮ್ಮ ರೋಗರುಜಿನಗಳಿಂದ ಸೌಖ್ಯ ಪಡೆದ ದಾಖಲೆಗಳಿವೆ. ಕೆಲವು ಧಾರ್ಮಿಕ ಸಂಸ್ಥೆಗಳ ಪಾಲಕಿಯಾಗಿರುವ ಈ ಸಂತರ ಮಧ್ಯಸ್ಥಿಕೆಯನ್ನು ಬಿರುಗಾಳಿ ಹಾಗೂ ಮತ್ತಿತರ ಪ್ರಾಕೃತಿಕ ವಿಕೋಪಗಳ ಸಂಧರ್ಭಗಳಲ್ಲಿ ಕೋರುವ ಪ್ರತೀತಿ ಕಥೋಲಿಕ ಧರ್ಮಸಭೆಯಲ್ಲಿದೆ.
ಇಂದಿನ ಸಂತರು

ಚಿತ್ರ: ಗೂಗಲ್ ಕೃಪೆ

No comments:
Post a Comment